Author: UllalaVani

Kannada News From Coastal Karnataka

ಚೆನ್ನೈ, ಮೇ. 13 : ಟಿವಿಕೆ, ಕಾಂಗ್ರೆಸ್, ಸಿಪಿಎಂ, ಸಿಪಿಐ, ಮುಸ್ಲಿಮ್ ಲೀಗ್, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ಟಿವಿಕೆ ಮುಖ್ಯಸ್ಥ ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಈ ಮೂಲಕ ಸರ್ಕಾರಕ್ಕೆ 144 ಮಂದಿ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುಮತ ಸಾಬೀತು ಪಡಿಸುವ ವೇಳೆ ಡಿಎಂಕೆ ಮತ್ತು ಪಿಎಂಕೆ ಶಾಸಕರು ಸಭಾತ್ಯಾಗ ಮಾಡಿದರು. ಒಬ್ಬ ಬಿಜೆಪಿ ಶಾಸಕರು ಮತದಾನದಿಂದ ದೂರ ಉಳಿದರು. ಆದರೆ ಸದನದಲ್ಲಿದ್ದ 22 ಎಐಎಡಿಎಂಕೆ ಶಾಸಕರು ವಿಶ್ವಾಸಮತದ ವಿರುದ್ಧ ಮತ ಚಲಾಯಿಸಿದರು.234 ಶಾಸಕರನ್ನು ಹೊಂದಿರುವ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ 118 ಶಾಸಕರ ಅಗತ್ಯವಿದೆ. ವಿಜಯ್ ತಿರುಚಿ ಪಶ್ಚಿಮ ಮತ್ತು ಪೆರಂಬೂರು ಕ್ಷೇತ್ರದಿಂದ ಸ್ಪರ್ಧಿಸಿದ ಹಿನ್ನೆಲೆ ಅದನ್ನು ಒಂದು ಎಂದು ಪರಿಗಣಿಸಲಾಗುತ್ತದೆ. ಇದರೊಂದಿಗೆ ತಿರುಪತ್ತೂರು ಟಿವಿಕೆ ಶಾಸಕ ಶ್ರೀನಿವಾಸ್ ಸೇತುಪತಿ ಅವರಿಗೆ ಬಹುಮತ ಸಾಬೀತು ಪ್ರಕ್ರಿಯೆಯಲ್ಲಿ ಭಾಗಿಯಾಗದಂತೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆ ವಿಧಾನಸಭೆಯ ಬಲ 232ಕ್ಕೆ ಇಳಿದಿದ್ದು, ಬಹುಮತಕ್ಕೆ 116 ಶಾಸಕರ ಬೆಂಬಲ ಅಗತ್ಯವಿತ್ತು.

Read More

ಮುಂಬೈ, ಮೇ. 13  ;ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕ ಕೆಂದ್ರ ಸರ್ಕಾರ ದಿಢೀರನೇ ಏರಿಕೆ ಮಾಡಿದ ಬೆನ್ನಲ್ಲೇ ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಫ್ಯೂಚರ್ ಚಿನ್ನ, ಬೆಳ್ಳಿ ಬೆಲೆಯಲ್ಲಿ ಶೇ. 6ರಷ್ಟು ಹೆಚ್ಚಳವಾಗಿದ್ದು, ಆಭರಣ ಪ್ರಿಯರಿಗೆ ಶಾಕ್ ಉಂಟಾಗಿದೆ. ಬೆಳಗ್ಗೆ 9:45ರ ವೇಳೆಗೆ 10 ಗ್ರಾಂ ಚಿನ್ನದ ಬೆಲೆ 8,838 ರೂ.(5.66%) ಏರಿಕೆಯಾಗಿ 1,61,887 ರೂ.ನಲ್ಲಿ ವ್ಯವಹಾರ ನಡೆಸುತ್ತಿದ್ದರೆ 1 ಕೆಜಿ ಬೆಳ್ಳಿ ದರ 1,80,920 ರೂ. (6.36%) ಏರಿಕೆಯಾಗಿ 2,98,400 ರೂ. ನಲ್ಲಿ ವ್ಯವಹಾರ ನಡೆಸುತ್ತಿದೆ. ಮಧ್ಯಾಹ್ನ 3:30ರ ವೇಳೆಗೆ ಈ ದರ ಮತ್ತಷ್ಟು ಏರಿಳಿತ ಕಾಣುವ ಸಾಧ್ಯತೆಯಿದೆ.ಎಂಸಿಎಕ್ಸ್ ಚಿನ್ನದ ವ್ಯವಹಾರವು ಭೌತಿಕ ಚಿನ್ನದ ಬದಲಿಗೆ, ಎಲೆಕ್ಟ್ರಾನಿಕ್ ರೂಪದಲ್ಲಿ ಚಿನ್ನದ ಬೆಲೆ ಏರಿಳಿತಗಳ ಮೇಲೆ ಫ್ಯೂಚರ್ಸ್ ಒಪ್ಪಂದಗಳ ಮೂಲಕ ವ್ಯಾಪಾರ ಮಾಡುವ ವೇದಿಕೆಯಾಗಿದೆ. ಇದು ಹೂಡಿಕೆದಾರರಿಗೆ ಚಿನ್ನದ ಬೆಲೆ ಏರಿಳಿತದಿಂದ ಲಾಭ ಪಡೆಯಲು ಅಥವಾ ಹೆಡ್ಜಿಂಗ್ ಮಾಡಲು ಅನುವು ಮಾಡಿಕೊಡುತ್ತದೆ.ಇಲ್ಲಿ ಚಿನ್ನವನ್ನು ಭೌತಿಕವಾಗಿ ಖರೀದಿಸದೇ ಭವಿಷ್ಯದ ದಿನಾಂಕದಂದು ನಿಗದಿತ ಬೆಲೆಯಲ್ಲಿ…

Read More

ಸುಧೀರ್ ರೆಡ್ಡಿ IPS ಅವರು ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳೂರು ನಗರದಲ್ಲಿ ಕೋಳಿ ಅಂಕ, ಜುಗಾರಿ ಅಡ್ಡೆಗಳು ಹಾಗೂ ಇತರ ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡ ಪರಿಣಾಮ ಸಮಾಜದಲ್ಲಿ ಹಲವಾರು ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತಿವೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಹಿಂದೆ ರಾತ್ರಿ ಸಮಯದಲ್ಲಿ ಜುಗಾರಿ ಅಡ್ಡೆ, ಕೋಳಿ ಅಂಕ ಮತ್ತು ಇತರ ಅಕ್ರಮ ಚಟುವಟಿಕೆಗಳಲ್ಲಿ ಸಮಯ ಕಳೆಯುತ್ತಿದ್ದ ಕೆಲವರು ಈಗ ಆ ಚಟುವಟಿಕೆಗಳಿಂದ ದೂರವಾಗಿ ತಮ್ಮ ಕುಟುಂಬದ ಕಡೆ ಗಮನ ಹರಿಸುತ್ತಿದ್ದಾರೆ. ಹಿಂದೆ ಮಧ್ಯರಾತ್ರಿ ಮನೆಗೆ ಬರುತ್ತಿದ್ದ ಗಂಡಸರು ಈಗ ಸಂಜೆ 7 ಗಂಟೆ ಅಥವಾ ಅದಕ್ಕೂ ಮೊದಲು ಮನೆ ತಲುಪುತ್ತಿರುವುದರಿಂದ ಕುಟುಂಬಗಳಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಇದರ ದೊಡ್ಡ ಪರಿಣಾಮ ಮಹಿಳೆಯರ ಜೀವನದಲ್ಲಿ ಕಂಡುಬರುತ್ತಿದೆ. ಮನೆಯ ಗಂಡಸರು ಸಮಯಕ್ಕೆ ಮನೆಗೆ ಬರುವುದು, ಕುಟುಂಬದ ಖರ್ಚು ಹಾಗೂ ಮಕ್ಕಳ ಶಿಕ್ಷಣದ ಕಡೆ ಗಮನ ಕೊಡುವುದು, ಹೆಂಡತಿಯ ಜೊತೆ ಆತ್ಮೀಯವಾಗಿ…

Read More

ಕುತ್ತಾರು ; ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆಗೆ ಸಂಬoಧಿಸಿದ0ತೆ, ಸ್ಪೀಕರ್ ಅವರ ಅಂಗರಕ್ಷಕ ನೀಡಿದ ದೂರಿನಂತೆ 11ಜನರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲವು ದಿನಗಳ ಹಿಂದೆ ಕುತ್ತಾರು ಜಂಕ್ಷನ್‌ನಲ್ಲಿ ವೃತ್ತ ನಿರ್ಮಾಣ ವಿಚಾರ ಹಾಗು ಸ್ಥಳೀಯ ಸಮಸ್ಯೆಗಳ ಕುರಿತು ಅಸಮಾಧಾನಗೊಂಡಿದ್ದ ಗುಂಪೊoದು ಉಳ್ಳಾಲ ತಾಲೂಕಿಗೆ ಆಗಮಿಸಿದ್ದ ಸ್ಪೀಕರ್ ಯು.ಟಿ. ಖಾದರ್ ಅವರ ಮುಂದೆ ಏರುಧ್ವನಿಯಲ್ಲಿ ಆಕ್ರೋಶಿತರಾಗಿ ವರ್ತಿಸಿದ್ದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸ್ಪೀಕರ್ ಯುಟಿ ಖಾದರ್ ಅವರ ಅಂಗರಕ್ಷಕ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಓರ್ವನನ್ನು ಆರೋಪಿಯನ್ನಾಗಿ ಮಾಡಲಾಗಿದ್ದು, ಆತನ ಜೊತೆಗಿದ್ದರೆನ್ನಲಾದ ಇತರ 10 ಜನರ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಜನಪ್ರತಿನಿಧಿಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ನಿಯಮ ಉಲ್ಲಂಘಿಸಿ ಗುಂಪು ಸೇರಿದ ಆರೋಪಗಳ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು :- ಒಂದು ಕಾಲದಲ್ಲಿ “ಶೈಕ್ಷಣಿಕ ನಗರಿ” ಎಂದು ದೇಶಾದ್ಯಂತ ಹೆಸರು ಪಡೆದ Mangaluru ಇಂದು ಮತ್ತೊಂದು ಕಳವಳಕಾರಿ ವಿಚಾರಕ್ಕೆ ಸುದ್ದಿಯಾಗುತ್ತಿರುವುದು ದುಃಖಕರ ಸಂಗತಿ. ಶಿಕ್ಷಣ ಎನ್ನುವುದು ಯುವಕರ ಭವಿಷ್ಯ ರೂಪಿಸುವ ಪವಿತ್ರ ವ್ಯವಸ್ಥೆ. ಆದರೆ ಇಂದಿನ ಪರಿಸ್ಥಿತಿಯಲ್ಲಿ ಕೆಲವು ಕಾಲೇಜು ವಲಯಗಳಲ್ಲಿ ಮಾದಕ ದ್ರವ್ಯಗಳ ಜಾಲ ಬೆಳೆಯುತ್ತಿರುವುದು ಸಮಾಜದ ಮುಂದೆ ದೊಡ್ಡ ಪ್ರಶ್ನೆ ಎಬ್ಬಿಸಿದೆ. ಕೇವಲ ಪೊಲೀಸರ ಕಾರ್ಯಾಚರಣೆಯಿಂದ ಮಾತ್ರ ಈ ಸಮಸ್ಯೆಯನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಿಲ್ಲ. ಪೋಷಕರು, ಶಿಕ್ಷಣ ಸಂಸ್ಥೆಗಳು, ಸಮಾಜ ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯೂ ಅತ್ಯಂತ ಮಹತ್ವದ್ದಾಗಿದೆ. ಕಾಲೇಜುಗಳು ಕೇವಲ ಶಿಕ್ಷಣ ವ್ಯಾಪಾರದ ಕೇಂದ್ರಗಳಾಗಬಾರದು. ವಿದ್ಯಾರ್ಥಿಗಳ ನಡವಳಿಕೆ, ಸ್ನೇಹ ವಲಯ, ಮಾನಸಿಕ ಆರೋಗ್ಯ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೇಲೂ ಗಮನ ಹರಿಸಬೇಕು. ಇತ್ತೀಚೆಗೆ ಮುಲ್ಕಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಂತಿಮ ವರ್ಷದ ಬಿ.ಸಿ.ಎ ವಿದ್ಯಾರ್ಥಿನಿಯೊಬ್ಬಳು ಭಾರಿ ಪ್ರಮಾಣದ ಹೈಡ್ರೋವಿಡ್ ಗಾಂಜಾ ಸಾಗಾಟ ಪ್ರಕರಣದಲ್ಲಿ ಬಂಧಿತಳಾಗಿರುವುದು ಆತಂಕ ಹೆಚ್ಚಿಸಿದೆ. ಸುಮಾರು ₹35 ಲಕ್ಷ ಮೌಲ್ಯದ 1 ಕೆಜಿ 42…

Read More

ಕುಂಪಲ ಶ್ರೀ ದುರ್ಗಾ ಪರಮೇಶ್ವರ ಕ್ಷೇತ್ರದಲ್ಲಿ ಪರಿವಾರ ಶಕ್ತಿಯಾಗಿ ಶ್ರೀ ಅನಂತ ಪದ್ಮನಾಭ ದೇವರ ಶಿಲಾ ವಿಗ್ರಹದ ಪ್ರತಿಷ್ಟಾಪನಾ ವೈಧಿಕ ಪ್ರಕ್ರೀಯೆಗಳು, ಜೂನ್ 16 ರಿಂದ 19 ರವರೆಗೆ ನಡೆಯಲಿದ್ದು, ಇದರ ಶಿಲಾ ಬಿಂಬದ ಶೋಭಯಾತ್ರೆ ಕುಂಪಲ ಶ್ರೀ ಬಾಲಕೃಷ್ಣ ಮಂದಿರದಿಂದ ನಡೆಯಿತು. ಶ್ರೀ ಬಾಲಕೃಷ್ಣ ದೇವರಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಈ ಸಂದರ್ಬದಲ್ಲಿ ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಅಧ್ಯಕ್ಷರಾದ ಸತೀಶ್ ಕುಂಪಲ, ಶ್ರೀ ದುರ್ಗಾ ಪರಮೇಶ್ವರ ಕ್ಷೇತ್ರದ ಪ್ರಧಾನ ಅರ್ಚಕ ಭವಾನಿಶಂಕರ ಶಾಂತಿ, ಮಂದಿರದ ಅರ್ಚಕ ಮಹಾಬಲ ಬಂಗೇರ, ಮಂದಿರದ ಕ್ಷೇತ್ರಾಡಳಿತ ಮಂಡಳಿಯ ಸದಸ್ಯರುಗಳಾದ ಪ್ರವೀಣ್ ಎಸ್ ಕುಂಪಲ, ಗಣೇಶ್ ಅಂಚನ್, ಪ್ರಹ್ಲಾದ್ ಕುಮಾರ್ ಇಂದಾಜೆ, ದೀಕ್ಷಿತ್ ನಿಸರ್ಗ, ಜಗದೀಶ್ ಆಚಾರ್ಯ, ಕಿಶೋರ್ ಡಿ.ಕೆ, ಗಣೇಶ್ ಶೆಟ್ಟಿ ಹನುಮಾನ್ ನಗರ, ದುರ್ಗಾ ಪರಮೇಶ್ವರ ಕ್ಷೇತ್ರದ ಸೇವಾ ಸಮಿತಿಯ ಭಾಸ್ಕರ ಕುಜುಮಗದ್ದೆ, ಹರಿಶ್ಚಂದ್ರ ಕುಜುಮಗದ್ದೆ, ಗಂಗಾದರ ಪೂಜಾರಿ, ನಿತೇಶ್ ಕುಂಪಲ, ದೇವದಾಸ್ ಬಾರ್ದೆ, ಯಶವಂತ ಹನುಮಾನ್ ನಗರ, ವಸಂತ್…

Read More

ದಳಪತಿ ವಿಜಯ್ ಅವರು ಮುಖ್ಯಮಂತ್ರಿ ಆಗಿರುವುದು ಚಿತ್ರರಂಗದ ಹಲವರಿಗೆ ಸಂತಸ ತಂದಿದೆ. ಸೂರ್ಯ ಮತ್ತು ತ್ರಿಶಾ ಕೃಷ್ಣನ್ ನಟನೆಯ ‘ಕರುಪ್ಪು’ ಸಿನಿಮಾಗೆ ವಿಜಯ್ ಅವರು ವಿಶೇಷ ಅನುಮತಿ ನೀಡಿದ್ದಾರೆ. ಅದಕ್ಕಾಗಿ ವಿಜಯ್ ಅವರಿಗೆ ಈ ಚಿತ್ರತಂಡದವರು ಧನ್ಯವಾದ ತಿಳಿಸಿದ್ದಾರೆ.  ಕಾಲಿವುಡ್‌ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಕರುಪ್ಪು’ ಸಿನಿಮಾ ಮೇ 14ರಂದು ತೆರೆಗೆ ಬರಲು ಸಜ್ಜಾಗಿದೆ. ಈ ಸಿನಿಮಾದಲ್ಲಿ ಸೂರ್ಯ ಮತ್ತು ತ್ರಿಶಾ ಕೃಷ್ಣನ್ ಅವರು ಜೋಡಿಯಾಗಿ ಅಭಿನಯಿಸಿದ್ದಾರೆ. ಚಿತ್ರದ ಬಿಡುಗಡೆ ಸಮಯದಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್  ಅವರು ಚಿತ್ರತಂಡಕ್ಕೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಮೊದಲ ಪ್ರದರ್ಶನ ಮಾಡಲು ವಿಜಯ್ ಅವರು ಅನುಮತಿ ನೀಡಿದ್ದಾರೆ. ವಿಜಯ್ ಜೊತೆ ತ್ರಿಶಾ  ಅವರು ಆಪ್ತತೆ ಹೊಂದಿದ್ದಾರೆ ಎಂಬುದು ಗುಟ್ಟಾಗಿ ಉಳಿದಿಲ್ಲ. ಸಾಮಾನ್ಯವಾಗಿ ತಮಿಳುನಾಡಿನಲ್ಲಿ ಮುಂಜಾನೆಯ ಪ್ರದರ್ಶನಗಳಿಗೆ ಕಟ್ಟುನಿಟ್ಟಿನ ನಿಯಮಗಳಿವೆ. ಆದರೆ, ಆರ್.ಜೆ. ಬಾಲಾಜಿ ನಿರ್ದೇಶನದ ‘ಕರುಪ್ಪು’ ಚಿತ್ರದ ಕ್ರೇಜ್ ಪರಿಗಣಿಸಿ, ಮುಖ್ಯಮಂತ್ರಿ ವಿಜಯ್ ಅವರು ಮೇ 14ರಿಂದ ಬೆಳಿಗ್ಗೆ 9 ಗಂಟೆಗೆ…

Read More

ಬೆಂಗಳೂರು, ಮೇ 13: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ   ಇಲಾಖೆ ತಿಳಿಸಿದೆ. ಇಷ್ಟು ದಿನ ತಂಪಾಗಿದ್ದ ಕರಾವಳಿಯಲ್ಲಿ ಈಗ ಮತ್ತೊಮ್ಮೆ ಹೀಟ್​ವೇವ್ ಆತಂಕ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಕರಾವಳಿಯಲ್ಲಿ ಇಂದು ಹೀಟ್ ವೇವ್ ಅಲರ್ಟ್​ ನೀಡಲಾಗಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ…

Read More

ಮಂಗಳೂರು-ಮಂಗಳೂರು ಉಪಸಾರಿಗೆ ಆಯುಕ್ತರು ಹಾಗೂ ಹರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ (ಕೆಎ-೧೯) ನೋಂದಣಿಗೊಂಡಿರುವ ಎಲ್ಲ ಇಲೆಕ್ಟ್ರಿಕ್ ಆಟೋ ರಿಕ್ಷಾಗಳ ಸಂಖ್ಯೆ 3551 ಆಗಿದ್ದು, ಈ ಪೈಕಿ 2161ಇ -ಆಟೋ ರಿಕ್ಷಾ ಪರವಾನಿಗಾಗಿ ಅರ್ಜಿಗಳು ಬಂದಿವೆ.೧೩೮೯ ಇಲೆಕ್ಟ್ರಿಕ್ ಆಟೋ ರಿಕ್ಷಾ ಮಾಲಕರು ಪರವಾನಿಗೆ ಪಡೆಯಲು ಇನ್ನೂ ಅರ್ಜಿ ಸಲ್ಲಿಸಿಲ್ಲ. ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಲು ಬಾಕಿ ಉಳಿದವರು ತಕ್ಷಣ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಇನ್ನೂ ವಿಳಂಬ ಮಾಡಿದರೆ ಮೋಟಾರು ವಾಹನ ನಿಯಮಾವಳಿಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ( ಪ್ರಭಾರ) ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಕಾಸರಗೋಡು, ಮೇ. 13 : ದಿಢೀರ್ ಬೀಸಿದ ಬೇಸಿಗೆಯ ಅಕಾಲಿಕ ಗಾಳಿ ಮಳೆಗೆ ಮರವೊಂದು ಮುರಿದು ವಿದ್ಯುತ್ ಕಂಬ ಸಹಿತ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ಕಾರು ಚಲಾಯಿಸುತ್ತಿದ್ದ ಪೆರ್ಲದ ವೈದ್ಯರೋರ್ವರು ಅದೃಷ್ಠವಶಾತ್ ಭಾರೀ ಅಪಾಯದಿಂದ ಪಾರಾದ ಘಟನೆ ಮಂಗಳವಾರ ಸಂಜೆ ಬಾಡೂರು-ಪೆರ್ಲ ರಸ್ತೆಯ ಮಣಿಯಂಪಾರೆ ಮಸೀದಿ ಬಳಿ ಸಂಭವಿಸಿದೆ. ಸಂತ್ರಸ್ತ ವೈದ್ಯರು ಸೀತಾಂಗೋಳಿ ಹಾಗೂ ಬಾಡೂರುಪದವಿನಲ್ಲಿ ಕ್ಲಿನಿಕ್ ನಡೆಸುತ್ತಿದ್ದಾರೆ.ಮಂಗಳವಾರ ಸಂಜೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವರು ತಮ್ಮ ಕ್ಲಿನಿಕ್ ಅನ್ನು ಬೇಗನೇ ಮುಚ್ಚಿ ಮನೆಗೆ ಮರಳುತ್ತಿದ್ದರು. ಅವರು ಬಾಡೂರು-ಪೆರ್ಲ ರಸ್ತೆಯಲ್ಲಿ ಚಲಿಸುತ್ತಿದ್ದಾಗ, ಭೀಕರ ಗಾಳಿಗೆ ಬೃಹತ್ ಮರವೊಂದು ಬೇರು ಸಮೇತ ಅವರ ಕಾರಿನ ಮೇಲೆ ಉರುಳಿ ಬಿದ್ದಿದೆ. ಮರದ ಜೊತೆಗೆ ಪಕ್ಕದಲ್ಲಿದ್ದ ವಿದ್ಯುತ್ ಕಂಬವೂ ಕಾರಿನ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ವೈದ್ಯರು ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.ಮರ ಮತ್ತು ಕಂಬ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯುದ್ದಕ್ಕೂ ಹರಡಿಕೊಂಡಿದ್ದವು. ಇದರಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡು…

Read More