ಹಿರಿಯ ಪತ್ರಕರ್ತ ಹಾಗೂ ರೈತಪರ ಹೋರಾಟಗಾರ ಲಕ್ಷ್ಮಣ್ ಹೂಗಾರ್ ಅವರು ಬಿಡದಿ ಟೌನ್‌ಶಿಪ್ ವಿರುದ್ಧ ನಡೆಯುತ್ತಿರುವ ರೈತರ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ವಿರುದ್ಧದ ಹೋರಾಟವು ಎಲ್ಲೋ ಒಂದೆಡೆ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ರಾಜಕೀಯದ ಮದಗಜಗಳೆಂದೇ ಗುರುತಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರ ನಡುವಿನ ರಾಜಕೀಯ ಕೆಸರೆರಚಾಟ ಮತ್ತು ಪ್ರತಿಷ್ಠೆಯ ಹೋರಾಟದ ನಡುವೆ, ಸುಮಾರು 400ಕ್ಕೂ ಹೆಚ್ಚು ದಿನಗಳಿಂದ ತಮ್ಮ ಹಕ್ಕು ಮತ್ತು ಹಿತಾಸಕ್ತಿಗಾಗಿ ಹೋರಾಟ ನಡೆಸುತ್ತಿರುವ ರೈತರ ನೈಜ ಸಮಸ್ಯೆಗಳು ಮರೆಯಾಗುತ್ತಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರೈತರ ಹೋರಾಟದ ಮೂಲ ಉದ್ದೇಶವನ್ನು ರಾಜಕೀಯ ಲಾಭ-ನಷ್ಟಗಳ ಲೆಕ್ಕಾಚಾರಕ್ಕೆ ಬಲಿಯಾಗಲು ಬಿಡಬಾರದು. ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ತಮ್ಮ ವೈಯಕ್ತಿಕ ಮತ್ತು ಪಕ್ಷೀಯ ಪ್ರತಿಷ್ಠೆಯನ್ನು ಬದಿಗಿಟ್ಟು, ಸಮಸ್ಯೆಯಿಂದ ನೇರವಾಗಿ ತೊಂದರೆ ಅನುಭವಿಸುತ್ತಿರುವ ರೈತರೊಂದಿಗೆ ಮುಕ್ತ ಹಾಗೂ ಪ್ರಾಮಾಣಿಕ ಮಾತುಕತೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅಗತ್ಯವಿದ್ದಲ್ಲಿ…
Author: UllalaVani
ಲೇಔಟ್ ನಿರ್ಮಾಣಕ್ಕೆ ಸಂಬಂಧಿಸಿದ ಎರಡು ಎಕರೆ ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ ₹1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ರಾಯಚೂರು ಜಿಲ್ಲೆಯ ಬಿಜನಗೇರಾ ಗ್ರಾಮದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮ ಪಂಚಾಯಿತಿಗಳು ಗ್ರಾಮೀಣ ಜನರ ಅಭಿವೃದ್ಧಿ ಮತ್ತು ಮೂಲಭೂತ ಆಡಳಿತ ಸೇವೆಗಳ ಕೇಂದ್ರಬಿಂದುವಾಗಿವೆ. ಆದರೆ ಜನರ ಸೇವೆಗೆ ನೇಮಕಗೊಂಡ ಕೆಲ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಲಂಚ ವಸೂಲಿ ಮಾಡುವ ಪ್ರವೃತ್ತಿ ಹೆಚ್ಚುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಗ್ರಾಮಗಳಲ್ಲಿ ವಾಸಿಸುವ ಬಹುತೇಕ ಜನರು ರೈತರು, ಕೂಲಿ ಕಾರ್ಮಿಕರು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದವರಾಗಿದ್ದಾರೆ. ಇಂತಹ ಬಡ ಜನರು ತಮ್ಮ ಜಮೀನು, ಮನೆ ಅಥವಾ ದಾಖಲೆಗಳಿಗೆ ಸಂಬಂಧಿಸಿದ ಕಾನೂನುಬದ್ಧ ಸೇವೆ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಹಕ್ಕಿನ ಸೇವೆಗಾಗಿ ಲಕ್ಷಾಂತರ ರೂಪಾಯಿ ಲಂಚ ನೀಡುವಂತೆ ಒತ್ತಾಯಿಸುವುದು ಕೇವಲ ಭ್ರಷ್ಟಾಚಾರವಲ್ಲ, ಬಡವರ…
ತೊಕ್ಕೊಟ್ಟು: ಕಲಾ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಬಹುಮುಖ ಪ್ರತಿಭೆಯ ಕಲಾವಿದ, ದೇಹದಾರ್ಡ್ಯ ಪಟು, ಮಿಮಿಕ್ರಿ ಕಲಾವಿದ, ಗಾಯಕ, ಏಕಪಾತ್ರಾಭಿನಯ ಕಲಾವಿದ ಹಾಗೂ ರಂಗಭೂಮಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ ಲಭಿಸಿರುವುದು ತೊಕ್ಕೊಟ್ಟು ಹಾಗೂ ಕರಾವಳಿ ಭಾಗದ ಕಲಾಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ. ಹಲವಾರು ವರ್ಷಗಳಿಂದ ಕಲಾಸೇವೆಯನ್ನು ಜೀವನದ ಧ್ಯೇಯವನ್ನಾಗಿಸಿಕೊಂಡಿರುವ ಸುರೇಶ್ ಕೆ. ರಾವ್ ಅವರು ತಮ್ಮ ಅಪೂರ್ವ ಪ್ರತಿಭೆ, ಕಲೆಯ ಮೇಲಿನ ಅಪಾರ ಪ್ರೀತಿ, ಶಿಸ್ತುಬದ್ಧ ಸಾಧನೆ ಹಾಗೂ ಸಮಾಜಮುಖಿ ಚಟುವಟಿಕೆಗಳ ಮೂಲಕ ಜನಮಾನಸದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದಾರೆ. ಮಿಮಿಕ್ರಿ ಕಲೆಯ ಮೂಲಕ ಅನೇಕ ಗಣ್ಯರ ಧ್ವನಿಗಳನ್ನು ಜೀವಂತವಾಗಿ ಮೂಡಿಸುವುದರ ಜೊತೆಗೆ, ಗಾಯನ, ಏಕಪಾತ್ರಾಭಿನಯ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ತಮ್ಮ ಅದ್ಭುತ ನಿರೂಪಣಾ ಶೈಲಿಯಿಂದ ಪ್ರೇಕ್ಷಕರ ಮನಗೆದ್ದಿದ್ದಾರೆ. ದೇಹದಾರ್ಡ್ಯ ಕ್ಷೇತ್ರದಲ್ಲಿಯೂ ಗಮನಾರ್ಹ ಸಾಧನೆ ಮಾಡಿ ಯುವಜನತೆಗೆ ಪ್ರೇರಣೆಯಾಗಿ ಗುರುತಿಸಿಕೊಂಡಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ…
ಮಂಗಳೂರು : ಕಳೆದ ವರ್ಷ ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಇಬ್ಬರು ಮಕ್ಕಳು, ಅತ್ತೆ ಹಾಗೂ ಎರಡೂ ಕಾಲುಗಳನ್ನು ಕಳೆದುಕೊಂಡು ಜೀವನದ ಕಠಿಣ ಹಾದಿಯಲ್ಲಿ ಸಾಗುತ್ತಿರುವ ಅಶ್ವಿನಿ ಅವರ ಮನೆಗೆ ಉಡುಪಿ–ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿ ಧೈರ್ಯ ತುಂಬಿದರು. ದುರಂತದ ಬಳಿಕ ಅಶ್ವಿನಿ ಅವರ ಕುಟುಂಬ ಎದುರಿಸುತ್ತಿರುವ ನೋವು, ಸಂಕಷ್ಟ ಮತ್ತು ಜೀವನ ಹೋರಾಟವನ್ನು ಆಲಿಸಿದ ಅವರು, ಸರ್ಕಾರದಿಂದ ದೊರಕಬೇಕಾದ ಎಲ್ಲಾ ನೆರವು, ಪರಿಹಾರ ಮತ್ತು ಪುನರ್ವಸತಿ ಸೌಲಭ್ಯಗಳನ್ನು ಒದಗಿಸಲು ತಮ್ಮಿಂದಾಗುವ ಎಲ್ಲಾ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.“ನೀವು ಒಂಟಿಯಲ್ಲ. ನಿಮ್ಮ ನ್ಯಾಯದ ಹೋರಾಟದಲ್ಲಿ ನಾನು ಸದಾ ನಿಮ್ಮೊಂದಿಗಿದ್ದೇನೆ. ಬದುಕನ್ನು ಮರುಕಟ್ಟಿಕೊಳ್ಳಲು ಅಗತ್ಯವಿರುವ ಪ್ರತಿಯೊಂದು ನೆರವಿಗೂ ನಾನು ಬೆಂಬಲವಾಗಿ ನಿಲ್ಲುತ್ತೇನೆ,” ಎಂದು ಅಶ್ವಿನಿ ಅವರಿಗೆ ಸಾಂತ್ವನ ಹೇಳಿದರು. ಈ ವೇಳೆ ಅಶ್ವಿನಿ ಅವರ ಆರೋಗ್ಯ, ಚಿಕಿತ್ಸೆ ಹಾಗೂ ಜೀವನೋಪಾಯದ ಕುರಿತು ಮಾಹಿತಿ ಪಡೆದ ಕಿಶೋರ್ ಕುಮಾರ್ ಪುತ್ತೂರು, ಸಂಬಂಧಪಟ್ಟ…
ಉಳ್ಳಾಲ: ರಸ್ತೆ ಕಾಂಕ್ರಿಟೀಕರಣ, ಹೆದ್ದಾರಿ, ಚರಂಡಿ ನಿರ್ಮಾಣದಿಂದ ಮಾತ್ರ ಅಭಿವೃದ್ಧಿ ಸಾಧ್ಯವಿಲ್ಲ. ದೇಶದ ಪ್ರತಿಯೊಂದು ಗಲ್ಲಿಗಳೂ ಅಭಿವೃದ್ಧಿಗೊಂಡು, ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಅಂತ್ಯೋದಯ ಪರಿಕಲ್ಪನೆಯಂತೆ ಸಮಾಜದ ಪ್ರತಿಯೊಬ್ಬ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕುವಂತಾಗುವುದೇ ಭಾರತೀಯ ಜನತಾ ಪಾರ್ಟಿಯ ಧ್ಯೇಯ,ಉದ್ದೇಶವಾಗಿದೆಯೆಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಉಳ್ಳಾಲ ಬೈಲು ವೈದ್ಯನಾಥ ನಗರ ಒಂದನೇ ಅಡ್ಡ ರಸ್ತೆಯಲ್ಲಿ ವಿಧಾನ ಪರಿಷತ್ ನ ಶಾಸಕ ನಿಧಿಯ ಎಂಟು ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಮಳೆ ನೀರಿನ ಚರಂಡಿಯನ್ನು ಮಂಗಳವಾರದಂದು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಭಾರಿ ವರುಣನ ಆರ್ಭಟದಿಂದ ಉಳ್ಳಾಲ ಬೈಲ್ ಪ್ರದೇಶದ ಅನೇಕ ಮನೆಗಳು ಜಲಾವೃತಗೊಂಡು ಅಪಾರ ನಷ್ಟ ಸಂಭವಿಸಿ ಜನ ಸಾಮಾನ್ಯರು ಕಂಗಾಲಾಗಿದ್ದರು. ಈ ಪ್ರದೇಶದ ಜನರ ಸಮಸ್ಯೆಯನ್ನ ಗಂಭೀರವಾಗಿ ಪರಿಗಣಿಸಿ ಚರಂಡಿ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆಯೆಂದರು. ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಸಬ್ ಕೆ ಸಾಥ್, ಸಬ್ ಕಾ ವಿಕಾಸ್…
ಮಂಗಳೂರು,ಜೂ. 24 : ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ದತ್ತಿನಿಧಿ ಹಸ್ತಾಂತರ ಕಾರ್ಯಕ್ರಮ ಜೂ.26ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಟ್ರಸ್ಟ್ ನ ಅಧ್ಯಕ್ಷ ಮೋಹನ್ ದಾಸ್ ಮರಕಡ, ಕಳೆದ ವರ್ಷ ಮಂಗಳೂರಿನ ತ್ರಿಷಾ ಕಾಲೇಜಿನ ಧೃತಿ ಕುಂಜತ್ತಬೈಲ್ ಹಾಗೂ ಕೆನರಾ ಕಾಲೇಜಿನ ಮೇಘಾ ಸಜಿಪ ಅವರಿಗೆ ದತ್ತಿನಿಧಿ ನೀಡಲಾಗಿದೆ. ಈ ಬಾರಿ ಈ ಇಬ್ಬರಿಗೆ ಮುಂದುವರಿಸುವ ಜೊತೆಗೆ ಸಂತ ಅಲೋಷಿಯಸ್ ಕಾಲೇಜಿನ ಬಿಸಿಎ ವಿದ್ಯಾರ್ಥಿನಿ ತ್ರಿಷಾ ಪಚ್ಚನಾಡಿ, ಕೆನರಾ ಕಾಲೇಜಿನ ಶ್ರೀಜಾ ಶೆಟ್ಟಿ, ಬಿ.ಸಿ.ರೋಡಿನ ಶೋಭಿತಾ, ದಡ್ಡಲಕಾಡು ಶಾಲೆಯ ಪ್ರಾಪ್ತಿ, ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ ಶ್ರೇಯಾ ಮತ್ತು ವಾಮದಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ ರಶ್ಮಿತ್ ಅವರಿಗೆ ನೀಡಲಾಗುವುದು. ಒಟ್ಟು 1.50 ಲಕ್ಷ ರೂ. ಮೊತ್ತದ ದತ್ತಿನಿಧಿ ನೀಡಲಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ…
ಮಂಗಳೂರು, ಜೂ. 24: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ದಟ್ಟಣೆಗೆ ಅನುಗುಣವಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಇದರಿಂದಾಗಿ ಪಾರ್ಕಿಂಗ್ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಅನಧಿಕೃತವಾಗಿ ವಿವಿಧೆಡೆ ಪಾರ್ಕಿಂಗ್ ಮಾಡಿದ ಪ್ರಕರಣಗಳಿಗೆ ವಾಹನಗಳ ಮಾಲೀಕರಿಗೆ ಕಳೆದ ಐದು ತಿಂಗಳ ಅವಧಿಯಲ್ಲಿ 12.4 ಲಕ್ಷ ರೂ. ದಂಡ ವಿಧಿಸಲಾಗಿದೆ. ಸಂಚಾರ ಪೊಲೀಸರ ಅಂಕಿ ಅಂಶಗಳ ಪ್ರಕಾರ, 2025ರಲ್ಲಿ ನಗರದಲ್ಲಿ ಒಟ್ಟು 8,885 ಪಾರ್ಕಿಂಗ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು 47.2 ಲಕ್ಷ ರೂ. ದಂಡ ಸಂಗ್ರಹಿಸಲಾಗಿತ್ತು. 2026ರಲ್ಲಿ ಇದುವರೆಗೆ 2,294 ಪ್ರಕರಣಗಳು ದಾಖಲಾಗಿವೆ. ಇವುಗಳಿಂದ ಸಂಗ್ರಹವಾದ ದಂಡದ ಮೊತ್ತವೂ ಹೆಚ್ಚಾಗಿದೆ. ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆಗಳು ಅಗಲಗೊಂಡಿರುವ ಕೆಲವು ಕಡೆಗಳಲ್ಲಿ ರಸ್ತೆ ಬದಿಗಳಲ್ಲಿ ಪಾರ್ಕಿಂಗ್ ಅವಕಾಶ ಕೊಡಲಾಗಿದೆ. ಆದರೆ ಬಹುತೇಕ ಕಡೆಗಳಲ್ಲಿ ರಸ್ತೆಗಳು ಕಿರಿದಾಗಿದ್ದು ವಾಹನ ನಿಲ್ಲಿಸಿದರೆ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಸಮಸ್ಯೆಯಾಗುತ್ತಿದೆ.ಕೆಲವು ಸಭಾಂಗಣಗಳಲ್ಲಿ ಕಾರ್ಯಕ್ರಮಗಳು ಆಯೋಜನೆಗೊಂಡಾಗ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ವಾಹನ ದಟ್ಟಣೆಗೂ ಕಾರಣವಾಗುತ್ತಿದೆ.…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಒಂದು ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ಅವರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದಾಗಿ ದೂರು ನೀಡಿದ ಹಿನ್ನೆಲೆಯಲ್ಲಿ, ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶನಾಲಯ ಆದೇಶ ಹೊರಡಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಕಾರ್ಯಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಸಂಬಂಧಿಸಿದ ವಿಶಾಖಾ ಮಾರ್ಗಸೂಚಿಗಳ ಅನ್ವಯ ರಚಿಸಲಾದ ಆಂತರಿಕ ದೂರು ಸಮಿತಿಗೆ ತನಿಖೆ ವಹಿಸಲಾಗಿತ್ತು. ಇದೇ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡ ದಾಖಲಾಗಿತ್ತು. ಜಿಲ್ಲಾ ಆರೋಗ್ಯಾಧಿಕಾರಿಗಳು ಪ್ರಕರಣದ ಕುರಿತು ಸಮಗ್ರ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದರು. ಆಂತರಿಕ ಸಮಿತಿಯ ವರದಿ, ಲಭ್ಯ ಸಾಕ್ಷ್ಯಾಧಾರಗಳು ಹಾಗೂ ಪೊಲೀಸ್ ಎಫ್‌ಐಆರ್ ವಿವರಗಳನ್ನು ಪರಿಗಣಿಸಿದ ಆರೋಗ್ಯ ಇಲಾಖೆಯ ನಿರ್ದೇಶಕಿ ಡಾ. ರಜನಿ ಎಂ ಅವರು ಆರೋಪಿತ ಅಧಿಕಾರಿಯನ್ನು ಅಮಾನತುಗೊಳಿಸಿ ಸರ್ಕಾರಿ ಆದೇಶ ಹೊರಡಿಸಿದ್ದಾರೆ.…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಬಾಕ್ಸೈಟ್ ಸೇರಿದಂತೆ ಖನಿಜ ಸಂಪತ್ತಿನ ಅತಿಯಾದ ಶೋಷಣೆ ಹಾಗೂ ಹೊರ ರಾಜ್ಯಗಳಿಗೆ ಭಾರಿ ಪ್ರಮಾಣದಲ್ಲಿ ಸಾಗಾಟ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಗಂಭೀರ ಆತಂಕ ವ್ಯಕ್ತವಾಗುತ್ತಿದೆ. ಈಗಾಗಲೇ ಪರಿಸರ ಸೂಕ್ಷ್ಮ ಪ್ರದೇಶಗಳಾಗಿರುವ ಬೆಟ್ಟಗುಡ್ಡಗಳು, ಕೃಷಿಭೂಮಿಗಳು, ಜಲಮೂಲಗಳು ಮತ್ತು ಜೀವ ವೈವಿಧ್ಯತೆ ನಾಶದ ಅಂಚಿನಲ್ಲಿದ್ದು, ಜಿಲ್ಲೆಯ ಭೌಗೋಳಿಕ ಸಮತೋಲನಕ್ಕೆ ಧಕ್ಕೆಯಾಗುತ್ತಿರುವ ಬಗ್ಗೆ ಪರಿಸರ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಖಾಸಗಿ ಭೂಮಿ ಹೊಂದಿರುವುದೇ ಖನಿಜ ಸಂಪತ್ತನ್ನು ಹೊರತೆಗೆಯುವ ಹಕ್ಕು ನೀಡುವುದಿಲ್ಲ. ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಪರಿಸರ ಇಲಾಖೆ, ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ವಿವಿಧ ಇಲಾಖೆಗಳ ಪೂರ್ವಾನುಮತಿ ಕಡ್ಡಾಯವಾಗಿದೆ. ಖನಿಜ ಮತ್ತು ಗಣಿಗಳ ಅಭಿವೃದ್ಧಿ ಹಾಗೂ ನಿಯಂತ್ರಣ ಕಾಯ್ದೆ, ಪರಿಸರ ಸಂರಕ್ಷಣಾ ಕಾಯ್ದೆ, ಅರಣ್ಯ ಸಂರಕ್ಷಣಾ ಕಾಯ್ದೆ, ಹಾಗೂ ಇತರೆ ಕಾನೂನುಗಳು ಇಂತಹ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುತ್ತವೆ. ಆದರೆ ಜಿಲ್ಲಾಡಳಿತ ಜಿಲ್ಲಾಧಿಕಾರಿ ಗಳು ಮೌನಿಗಳಾಗಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಸಾರ್ವಜನಿಕ ಹುದ್ದೆಗೆ ಆಯ್ಕೆಯಾದ ಪ್ರತಿನಿಧಿಗಳು ಸಂವಿಧಾನ ಮತ್ತು ಕಾನೂನಿನ ಪ್ರಕಾರ ನಿಗದಿಪಡಿಸಲಾದ ವಿಧಾನದಲ್ಲಿಯೇ ಪ್ರಮಾಣವಚನ ಸ್ವೀಕರಿಸಬೇಕು ಎಂಬ ಮಹತ್ವದ ತೀರ್ಪನ್ನು ಕೇರಳ ಹೈಕೋರ್ಟ್ ನೀಡಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯ ಉಪ ಮೇಯರ್ ಸೇರಿದಂತೆ 20 ಬಿಜೆಪಿ ಕೌನ್ಸಿಲರ್‌ಗಳು ದೇವತೆಗಳು, “ಭಾರತ ಮಾತೆ”, “ಭಾರತಾಂಬೆ”, ಹುತಾತ್ಮರು ಮತ್ತು ಇತರ ವ್ಯಕ್ತಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದನ್ನು ನ್ಯಾಯಾಲಯ ಅಮಾನ್ಯ ಎಂದು ಘೋಷಿಸಿ, ನಾಲ್ಕು ವಾರಗಳೊಳಗೆ ಸಂವಿಧಾನಬದ್ಧವಾಗಿ ಮರು ಪ್ರಮಾಣವಚನ ಸ್ವೀಕರಿಸಲು ಆದೇಶಿಸಿದೆ. ನ್ಯಾಯಮೂರ್ತಿ ಪಿ.ವಿ. ಕುನ್ಹಿಕೃಷ್ಣನ್ ಅವರ ಏಕಸದಸ್ಯ ಪೀಠವು, ಕೇರಳ ಮುನ್ಸಿಪಾಲಿಟಿ ಕಾಯಿದೆ ಮತ್ತು ಕೇರಳ ಪಂಚಾಯತ್ ರಾಜ್ ಕಾಯಿದೆಯ ಪ್ರಕಾರ ಆಯ್ಕೆಯಾದ ಪ್ರತಿನಿಧಿಗಳು ಕೇವಲ ಎರಡು ವಿಧಾನಗಳಲ್ಲಿ ಮಾತ್ರ ಪ್ರಮಾಣವಚನ ಸ್ವೀಕರಿಸಬಹುದು ಎಂದು ಸ್ಪಷ್ಟಪಡಿಸಿದೆ. ಅವುಗಳೆಂದರೆ, “ದೇವರ ಹೆಸರಿನಲ್ಲಿ” ಪ್ರಮಾಣವಚನ ಮಾಡುವುದು ಅಥವಾ ಯಾವುದೇ ಧಾರ್ಮಿಕ ಅಥವಾ ಇತರ ಉಲ್ಲೇಖವಿಲ್ಲದೆ ವಿಧಿವತ್ತಾದ ದೃಢೀಕರಣ (Solemn Affirmation) ಮಾಡುವುದು. ಇದರ ಹೊರತಾಗಿ ಯಾವುದೇ ದೇವತೆ, ಧಾರ್ಮಿಕ ಸಂಕೇತ, ರಾಜಕೀಯ ಚಳವಳಿ, ಹುತಾತ್ಮರು ಅಥವಾ…

