Author: UllalaVani

Kannada News From Coastal Karnataka

ಬೆಂಗಳೂರು, ಜೂನ್ 19: ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದಡಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕನಿಷ್ಠ ವೇತನವನ್ನು ಖಚಿತಪಡಿಸುವ ಮಹತ್ವದ ಆದೇಶವನ್ನು ನಿರ್ದೇಶನಾಲಯ ಹೊರಡಿಸಿದೆ. ಈ ಆದೇಶವು 2026ರ ಏಪ್ರಿಲ್ 1ರಿಂದ 2027ರ ಮಾರ್ಚ್ 31ರವರೆಗೆ ಜಾರಿಯಲ್ಲಿರಲಿದೆ. ಕಾರ್ಮಿಕ ಇಲಾಖೆಯ ಅಧಿಸೂಚನೆ ಸಂಖ್ಯೆ KAE 106 LWA 2021, ದಿನಾಂಕ 28-07-2022 ರ ಅನ್ವಯ, ಹೊರಗುತ್ತಿಗೆ ಸಿಬ್ಬಂದಿಗಳಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ನೀಡುವುದು ಕಡ್ಡಾಯವಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದೇಶದ ಪ್ರಕಾರ, ಹೊರಗುತ್ತಿಗೆ ಪೂರೈಕೆದಾರ ಸಂಸ್ಥೆಗಳು ನೌಕರರಿಗೆ ನಿಗದಿತ ವೇತನವನ್ನು ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಪಾವತಿಸಬೇಕು. ವೇತನ ಪಾವತಿಯನ್ನು ನೇರವಾಗಿ ಸಿಬ್ಬಂದಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದ್ದು, ಇಎಸ್‌ಐ ಮತ್ತು ಪಿಎಫ್ ಸೇರಿದಂತೆ ಕಾನೂನುಬದ್ಧ ಸೌಲಭ್ಯಗಳನ್ನು ಒದಗಿಸುವ ಜವಾಬ್ದಾರಿಯೂ ಸಂಸ್ಥೆಗಳ ಮೇಲಿದೆ. ಈ ಕ್ರಮದಿಂದ ರಾಜ್ಯದ ವಿವಿಧ ಸೇವಾ ಕೇಂದ್ರಗಳು ಮತ್ತು ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಹೊರಗುತ್ತಿಗೆ ಸಿಬ್ಬಂದಿಗೆ…

Read More

ಮಂಗಳೂರು: ಭಾರತದ ಪ್ರವಾಸೋದ್ಯಮ ನಕ್ಷೆಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಗೋವಾ, ತನ್ನ ಸೂರ್ಯಕಿರಣಗಳಿಂದ ಕಂಗೊಳಿಸುವ ಕಡಲತೀರಗಳು, ಸಮೃದ್ಧ ಸಾಂಸ್ಕೃತಿಕ ಪರಂಪರೆ, ಆಹ್ಲಾದಕರ ಹವಾಮಾನ ಹಾಗೂ ಅಪರೂಪದ ನೈಸರ್ಗಿಕ ಸೌಂದರ್ಯದಿಂದ ದೇಶ-ವಿದೇಶಗಳ ಪ್ರವಾಸಿಗರನ್ನು ನಿರಂತರವಾಗಿ ಆಕರ್ಷಿಸುತ್ತಿದೆ. ಗೋವಾದ ರಾಜಧಾನಿಯಾದ ಪಣಜಿಯ ಹೃದಯಭಾಗದಲ್ಲಿ ನೆಲೆಗೊಂಡಿರುವ ‘ಗೋಲ್ಡ್ ಫಿಂಚ್ ಪಣಜಿ ಗೋವಾ’ ಅತ್ಯಾಧುನಿಕ ಆತಿಥ್ಯ ಸೇವೆಗಳನ್ನು ಗೋವಾದ ವಿಶಿಷ್ಟ ಸೊಬಗಿನೊಂದಿಗೆ ಸಂಯೋಜಿಸಿ ಪ್ರವಾಸಿಗರಿಗೆ ಹೊಸ ಅನುಭವವನ್ನು ನೀಡುತ್ತಿದೆ. ಸುಂದರ ಮಂಡೋವಿ ನದಿಯ ನೋಟವನ್ನು ಹೊಂದಿರುವ ಈ ಹೋಟೆಲ್, ಗೋಲ್ಡ್ ಫಿಂಚ್ ಹಾಸ್ಪಿಟಾಲಿಟಿಯ ದೇಶಾದ್ಯಂತ ಬೆಳೆಯುತ್ತಿರುವ ಹೋಟೆಲ್ ಜಾಲಕ್ಕೆ ಹೊಸ ಸೇರ್ಪಡೆಯಾಗಿದೆ. ವ್ಯಾಪಾರ ಮತ್ತು ಪ್ರವಾಸ ಉದ್ದೇಶದ ಅತಿಥಿಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾದ ಈ ಹೋಟೆಲ್, ಆರಾಮ, ಅನುಕೂಲತೆ ಮತ್ತು ಆಧುನಿಕ ಸೊಬಗನ್ನು ಒಂದೇ ವೇದಿಕೆಯಲ್ಲಿ ಒದಗಿಸುತ್ತದೆ.ಒಟ್ಟು 98 ಸುಸಜ್ಜಿತ ಕೊಠಡಿಗಳನ್ನು ಹೊಂದಿರುವ ಈ ಹೋಟೆಲ್‌ನಲ್ಲಿ ಏಳು ವಿಶಾಲ ಸೂಟ್‌ಗಳಿವೆ. ಆಧುನಿಕ ಸೌಲಭ್ಯಗಳು, ವಿಶಾಲ ಲಾಬಿ, ಹಸಿರು ಪರಿಸರ ಹಾಗೂ ಆಕರ್ಷಕ ಒಳಾಂಗಣ ವಿನ್ಯಾಸಗಳು ಗೋವಾದ ನಿರಾಳ…

Read More

ಮಣಿಪಾಲ, ಜೂ. 18 : ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದು, ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತನೊಬ್ಬ ಚಲಾಯಿಸಿಕೊಂಡು ಬರುತ್ತಿದ್ದ ಕಾರು, ಮನೆಯ ಹೊರಗಡೆ ರಸ್ತೆ ಬದಿ ನಿಲ್ಲಿಸಿದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಸ್ಕೂಟರ್ ಮನೆಯ ಕಂಪೌಂಡಿಗೆ ತಾಗಿ ಬಿದ್ದಿತ್ತು. ಇದರಿಂದ ಸ್ಕೂಟರ್ ರಸ್ತೆಗೆ ಬಿದ್ದು ಜಖಂಗೊಂಡಿದೆ. ಕಾರು ಚಾಲಕ ಹಾಗೂ ಅಪ್ರಾಪ್ತ ಬಾಲಕನಿಗೆ ಕಾರನ್ನು ಚಲಾಯಿಸಲು ನೀಡಿದ ಕಾರಿನ ಮಾಲಕ ಸಲೀಂ ಎಂಬವರ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು, ಜೂ. 18 : ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ‘ಭ್ರಾಮರೀ ಯಕ್ಷವೈಭವ–2026’ ಕಾರ್ಯಕ್ರಮವು ಆಗಸ್ಟ್ 1ರಂದು ಶನಿವಾರ ಸಂಜೆ 7 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಆರು ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿರುವ ಹಿರಿಯ ಕಲಾವಿದ ಕೆ.ಎಚ್. ದಾಸಪ್ಪ ರೈ ಅವರಿಗೆ ಪ್ರತಿಷ್ಠಿತ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಪ್ರಶಸ್ತಿಯು ರೂ.15 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಬೆಳ್ಳಿಯ ಪದಕವನ್ನು ಒಳಗೊಂಡಿದೆ. ತಮ್ಮ 15ನೇ ವಯಸ್ಸಿನಲ್ಲೇ ಯಕ್ಷಗಾನ ರಂಗ ಪ್ರವೇಶಿಸಿದ ಕೆ.ಎಚ್. ದಾಸಪ್ಪ ರೈ ಅವರು ಕಳೆದ ಆರು ದಶಕಗಳಿಗೂ ಹೆಚ್ಚು ಕಾಲ ಯಕ್ಷಗಾನ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಕರ್ನಾಟಕ ಮೇಳ, ಕದ್ರಿ ಮೇಳ, ಕುಂಬಳೆ-ಕಣಿಪುರ ಮೇಳ, ಮಂಗಳಾದೇವಿ ಮೇಳ ಸೇರಿದಂತೆ ಹಲವು ಪ್ರಸಿದ್ಧ ಮೇಳಗಳಲ್ಲಿ ಸೇವೆ ಸಲ್ಲಿಸಿರುವ ಅವರು ದೇಶ-ವಿದೇಶಗಳಲ್ಲಿ ಅನೇಕ ಯಶಸ್ವಿ ಪ್ರದರ್ಶನಗಳನ್ನು ನೀಡಿದ್ದಾರೆ.‘ಕೋಟಿ-ಚೆನ್ನಯ’ ಯಕ್ಷಗಾನದ ಕೋಟಿ ಹಾಗೂ ‘ಕಾಡಮಲ್ಲಿಗೆ’…

Read More

ಉಡುಪಿ, ಜೂ. 18 : ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66 ರ ಸಾಯಿ ಸರ್ವಿಸ್ ಸ್ಟೇಷನ್ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ವರದಿಗಳ ಪ್ರಕಾರ, ಕಾಪು ಸರ್ವಿಸ್ ರಸ್ತೆ ಮತ್ತು ಹೆದ್ದಾರಿಯ ಜಂಕ್ಷನ್‌ನಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಎಕ್ಸ್‌ಪ್ರೆಸ್ ಬಸ್, ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.ಗಾಯಗೊಂಡ ಸ್ಕೂಟಿ ಸವಾರನನ್ನು ಮಂಗಳೂರಿನ ಸಸಿಹಿತ್ಲು ಮೂಲದ ಗಣೇಶ್ ಪಾತ್ರಿ ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕಾಪುವಿನಲ್ಲಿ ವಾಸಿಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಸ್ಥಳೀಯ ನಿವಾಸಿಗಳು ಆಂಬ್ಯುಲೆನ್ಸ್ ಮೂಲಕ ಉಡುಪಿಯ ಆಸ್ಪತ್ರೆಗೆ ಸಾಗಿಸಿದರು.ಸ್ಕೂಟಿಗೆ ಡಿಕ್ಕಿ ಹೊಡೆದ ನಂತರ, ಬಸ್ ಡಿವೈಡರ್‌ ಮೇಲೆ ಹೋಗಿ ನಿಂತಿದ್ದು, ದೊಡ್ಡ ಅನಾಹುತವೊಂದನ್ನು ಸ್ವಲ್ಪದರಲ್ಲೇ ತಪ್ಪಿದಂತಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು: ಕುಟುಂಬ ಆಸ್ತಿ ವಿವಾದಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ತಾತನು ಸ್ವತಃ ಸಂಪಾದಿಸಿದ ಆಸ್ತಿಯು ನಂತರ ಕುಟುಂಬ ವಿಭಜನೆಯ ಮೂಲಕ ತಂದೆಯ ಪಾಲಿಗೆ ಬಂದರೆ, ಅದು ತಂದೆಯ ವೈಯಕ್ತಿಕ ಆಸ್ತಿಯಾಗುತ್ತದೆ ಹೊರತು ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇಂತಹ ಆಸ್ತಿಯಲ್ಲಿ ಮೊಮ್ಮಕ್ಕಳು ಅಥವಾ ಮೊಮ್ಮಗಳು ಸ್ವಯಂ ಕಾನೂನಾತ್ಮಕ ಪಾಲು ಕೇಳಲು ಅವಕಾಶವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಟಿ.ಎಂ. ನದಾಫ್ ಅವರಿದ್ದ ವಿಭಾಗೀಯ ಪೀಠವು ಅಮೆರಿಕದಲ್ಲಿ ನೆಲೆಸಿರುವ ಉಷಾ ಎನ್. ಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ದಾಖಲೆಗಳು ಮತ್ತು ವಾದ-ಪ್ರತಿವಾದಗಳನ್ನು ಪರಿಶೀಲಿಸಿದ ನ್ಯಾಯಪೀಠ, ವಿವಾದಿತ ಆಸ್ತಿಗಳು ಅರ್ಜಿದಾರರ ತಾತನ ಸ್ವಯಂ ಸಂಪಾದಿತ ಆಸ್ತಿಗಳಾಗಿದ್ದವು ಎಂದು ಗಮನಿಸಿದೆ. ತಾತ ಅವರು ಕುಟುಂಬ ಒಪ್ಪಂದದ ಮೂಲಕ ಮಕ್ಕಳ ನಡುವೆ ಆಸ್ತಿಯನ್ನು ಹಂಚಿಕೆ ಮಾಡಿದ್ದು, ಆ ಭಾಗವಾಗಿ ತಂದೆಗೆ ಬಂದ ಆಸ್ತಿ ಅವರ ವೈಯಕ್ತಿಕ ಆಸ್ತಿಯಾಗುತ್ತದೆ ಎಂದು…

Read More

ಮಂಗಳೂರು, ಜೂನ್ 18: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಕಾರ್ಯಕರ್ತರಿಗೆ ಅರಿವು ಮೂಡಿಸುವ ಉದ್ದೇಶದಿಂದ ಎಸ್.ಐ.ಆರ್ ಕಾರ್ಯಾಗಾರವನ್ನು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಯಿತು. ಕಾರ್ಯಾಗಾರದಲ್ಲಿ ಮಾತನಾಡಿದ ಪದ್ಮನಾಥ್ ಆರ್ ಪೂಜಾರಿ ರವರು ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾರರ ಪಟ್ಟಿಯ ನಿಖರತೆ ಅತ್ಯಂತ ಮುಖ್ಯವಾಗಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಮತದಾರರ ನೋಂದಣಿ, ತಿದ್ದುಪಡಿ, ಹೆಸರು ಸೇರ್ಪಡೆ ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತಂತೆ ಕಾರ್ಯಕರ್ತರಿಗೆ ಸಮಗ್ರ ಮಾಹಿತಿ ನೀಡಲಾಯಿತು. ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವಕರು ಚುನಾವಣಾ ಪ್ರಕ್ರಿಯೆ ಹಾಗೂ ಮತದಾರರ ಹಕ್ಕುಗಳ ಬಗ್ಗೆ ಹೆಚ್ಚಿನ ಅರಿವು ಹೊಂದಿರುವುದು ಅಗತ್ಯವಾಗಿದೆ. ಎಸ್.ಐ.ಆರ್ ಪ್ರಕ್ರಿಯೆಯ ಕುರಿತು ಮನೆಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಯುವ ಕಾಂಗ್ರೆಸ್…

Read More

ತೊಕ್ಕೊಟ್ಟು: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ಶಾರದಾ ಯೋಗ ಮತ್ತು ನ್ಯಾಚುರೋಪಥಿ ಮೆಡಿಕಲ್ ಕಾಲೇಜು, ಮಂಗಳೂರು ಇವರ ಸಹಯೋಗದಲ್ಲಿ ನಾಲ್ಕು ದಿನಗಳ ಯೋಗ ಶಿಬಿರವನ್ನು ಆಯೋಜಿಸಲಾಗಿದೆ. “ಸ್ವಲ್ಪ ಸಮಯ ನಮಗಾಗಿ” ಎಂಬ ಧ್ಯೇಯದೊಂದಿಗೆ ನಡೆಯಲಿರುವ ಈ ಯೋಗ ಶಿಬಿರವು ಜೂನ್ 18 ರಿಂದ ಜೂನ್ 21ರವರೆಗೆ ಪ್ರತಿದಿನ ಸಂಜೆ 6.00 ರಿಂದ 7.00 ಗಂಟೆಯವರೆಗೆ ನಡೆಯಲಿದೆ. ಕಾರ್ಯಕ್ರಮವು ತೊಕ್ಕೊಟ್ಟಿನ ಗಣಪತಿ ದೇವಸ್ಥಾನದ ಸಮೀಪದ ಓವರ್‌ಬ್ರಿಡ್ಜ್ ಹತ್ತಿರ ಇರುವ ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಯೋಗಾಭ್ಯಾಸದಲ್ಲಿ ಭಾಗವಹಿಸುವವರು ತಮ್ಮದೇ ಹಾಸುವ ವ್ಯವಸ್ಥೆಯನ್ನು ತರಬೇಕೆಂದು ಸಂಘಟಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಣಿಗಾಗಿ 9591889409 ಮತ್ತು 9964996008 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Read More

ಉಡುಪಿ, ಜೂ.18: ಜಾಗತಿಕ ಯುದ್ಧದ ಮೂಲಕ ಜನಾಂಗದ ಮೇಲೆ ನಡೆಯುತ್ತಿರುವ ಹಿಂಸೆ ಮತ್ತು ಪ್ರಕೃತಿಯ ಮೇಲೆ ಆಗುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಮಕ್ಕಳ ಹಕ್ಕುಗಳ ಹೋರಾಟಗಾರ, ರಂಗಕರ್ಮಿ, ಕನ್ನಡ ಉಪನ್ಯಾಸಕ ರಾಮಾಂಜಿ ನಮ್ಮ ಭೂಮಿ ಶನಿವಾರ ಮಣಿಪಾಲ ಟೈಗರ್ ಸರ್ಕಲ್ ಬಳಿ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸಿದರು. ಇದಕ್ಕೂ ಮುನ್ನ ಮಣಿಪಾಲದ ಬ್ರಹ್ಮ ಡಾ. ಟಿ.ಎಂ.ಎ.ಪೈ ಅವರ ಪುತ್ತಳಿಗೆ ಪುಷ್ಪ ನಮನ ಅರ್ಪಿಸಿ, ಈ ಯುದ್ಧ ನೀತಿಗಳಿಂದ ಮಡಿದವರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಾಂಜಿ, ಕಳೆದ ಐದು ತಿಂಗಳಿನಿಂದ ನಡೆಯುತ್ತಿರುವ ಜಾಗತಿಕ ಯುದ್ಧ ಸಂಬಂಧಿ ಘಟನೆಗಳನ್ನು ನೋಡಿ ಮನನೊಂದು ನೈತಿಕ ಪ್ರತಿಭಟನೆ ಮಾಡುತ್ತಿದ್ದೇನೆ. ಈ ಕುರಿತು ಈಗಾಗಲೇ ಉಡುಪಿ, ಕುಂದಾಪುರ, ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ಇದೀಗ ನಾಲ್ಕನೇ ಬಾರಿಗೆ ಪ್ರತಿಭಟನಾ ಚಳುವಳಿ ನಡೆಸುತ್ತಿದ್ದೇನೆ. ಜಾಗತಿಕ ಮಟ್ಟದ ಸಹಬಾಳ್ವೆ, ಶಾಂತಿ, ಸೌಹಾರ್ದತೆ, ಪರಸ್ಪರ ಹೊಂದಾಣಿಕೆ, ಮಾನವ ಪ್ರೀತಿ, ಪರಿಸರ ಕಾಳಜಿ, ನಮ್ಮ ಮಕ್ಕಳ ಭವಿಷ್ಯಕ್ಕೆ ಉತ್ತಮ ವಾತಾವರಣ ಸೃಷ್ಟಿಯಾಗಬೇಕು ಎಂದರು.ಸ್ಥಳಕ್ಕೆ…

Read More

ಬೆಳ್ತಂಗಡಿ, ಜೂ. 18 ; ಎರಡು ಕಾರುಗಳು ಮತ್ತು ಬೈಕ್‌ ನಡುವೆ ಅಪಘಾತವಾಗಿ ಬೈಕ್‌ ಸವಾರ ಗಾಯಗೊಂಡ ಘಟನೆ ಗುರುವಾಯನಕೆರೆ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ. ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಬಳಿ ಈ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಎದುರುಗಡೆ ಬರುತ್ತಿದ್ದ ಕಾರು ಮತ್ತು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಉರುಳಿ ಬಿದ್ದು ಗಾಯಗೊಂಡರು. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಡಿಕ್ಕಿಯ ಬಲಕ್ಕೆ ಒಂದು ಕಾರು ಪಲ್ಟಿಯಾಗಿದ್ದು, ಇನ್ನೊಂದು ಕಾರಿನ ಮುಂಭಾಗ ತೀವ್ರವಾಗಿ ಹಾನಿಯಾಗಿದೆ.ಕಾರುಗಳಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Read More