ನಮ್ಮ ಆಲೋಚನೆಗಳು ನಮ್ಮ ಸಂತೋಷ ಮತ್ತು ದುಃಖವನ್ನು ನಿರ್ಧರಿಸುತ್ತದೆ ನಮ್ಮ ಜೀವನದ ಅನುಭವಗಳು ಭಾವನೆಗಳು ಕಷ್ಟ ಮತ್ತು ದುಃಖಕ್ಕೆ ನಮ್ಮ ಮನಸ್ಥಿತಿಯೇ ಕಾರಣವಾಗುತ್ತದೆ ಮಾತ್ರವಲ್ಲದೆ ದೇಹ ಮತ್ತು ಮನಸ್ಸು ಪರಸ್ಪರ ನಿಕಟ ಪೂರ್ವ ಸಂಬಂಧಗಳನ್ನು ಹೊಂದಿರುತ್ತದೆ ಹಾಗಾಗಿ ಮನಸ್ಸು ಮತ್ತು ದೇಹವನ್ನು ಆರೋಗ್ಯವಾಗಿ ಇಟ್ಟುಕೊಂಡಾಗ ಸದೃಢ ಜೀವನ ಸಾಧ್ಯವೆಂದು ಮಂಗಳೂರಿನ ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಮ್ ಅವರು ಅಭಿಪ್ರಾಯಪಟ್ಟರು. ಇವರು ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಪೋಷಕರ ಸಭೆ ಮತ್ತು ಅಭಿನಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಕಡೆಂಜ ಶ್ರೀ ಸೋಮಶೇಖರ ಚೌಟ ವಹಿಸಿ ವಿದ್ಯಾ ಶ್ರೀ ಶೈಕ್ಷಣಿಕ ದತ್ತು ಯೋಜನೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳಾದ ದರ್ಶಿನಿ, ಫಾತಿಮ ರಫೀದ, ಮಹಮ್ಮದ್ ಮುಂಝಿರ್ ಇವರುಗಳನ್ನು ಸನ್ಮಾನಿಸಲಾಯಿತು.ಹಾಗು 2026-27 ನೇ…
Author: UllalaVani
ನವದೆಹಲಿ, ಜೂ. 17 : ಭಾರತದ ರಕ್ಷಣಾ ಉತ್ಪಾದನೆಯು 2025-26ರ ಹಣಕಾಸು ವರ್ಷದಲ್ಲಿ ದಾಖಲೆಯ 1.78 ಲಕ್ಷ ಕೋಟಿ ರೂ. ಮಟ್ಟ ತಲುಪಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 15.6 ಪ್ರತಿಶತ ಹೆಚ್ಚಳವಾಗಿದೆ. ಇದು ಆತ್ಮನಿರ್ಭರ ಭಾರತದ ದೊಡ್ಡ ಸಾಧನೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ರಕ್ಷಣಾ ಉತ್ಪಾದನಾ ಇಲಾಖೆ, ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳ ಪ್ರಯತ್ನಗಳನ್ನು ಪ್ರಶಂಸಿಸಿದರು. ಇದು ದೇಶದ ರಕ್ಷಣಾ ಕೈಗಾರಿಕಾ ಬುನಾದಿಯ ಬಲವರ್ಧನೆಯ ಸ್ಪಷ್ಟ ಸಂಕೇತ. ಸರ್ಕಾರದ ನೀತಿಗಳು, ಹೊಸ ಉಪಕ್ರಮಗಳು ಮತ್ತು ಖಾಸಗಿ ಕ್ಷೇತ್ರದ ಹೆಚ್ಚುತ್ತಿರುವ ಪಾಲ್ಗೊಳ್ಳುವಿಕೆಯಿಂದ ಮುಂದಿನ ವರ್ಷಗಳಲ್ಲಿ ಇನ್ನಷ್ಟು ವೇಗವಾಗಿ ಬೆಳೆಯುತ್ತದೆ” ಎಂದರು.ಹಿಂದಿನ ಹಣಕಾಸು ವರ್ಷ 2024-25ರಲ್ಲಿ ರಕ್ಷಣಾ ಉತ್ಪಾದನೆ 1.54 ಲಕ್ಷ ಕೋಟಿ ರೂ. ಇತ್ತು. 2020-21ರಲ್ಲಿ ಇದು 84,643 ಕೋಟಿ ರೂ. ಮಾತ್ರ ಇತ್ತು. ಈಗ 110 ಪ್ರತಿಶತ ಹೆಚ್ಚಳವಾಗಿದೆ. 2013-14ರಲ್ಲಿ 43,746 ಕೋಟಿ ರೂ. ಇದ್ದದ್ದು ಈಗ ನಾಲ್ಕು…
ಉಳ್ಳಾಲ: ಆಯೋರ್ಟಿಕ್ ವಾಲ್ಸ್ ಕಾಯಿಲೆಯಿಂದ ಬಳಲುತ್ತಿದ್ದ ಕ್ಯಾಮರೂನ್ ದೇಶದ 38 ವರ್ಷದ ಮಹಿಳಾ ರೋಗಿಯೊಬ್ಬರು ಚಿಕಿತ್ಸೆ ಪಡೆಯಲು ಭಾರತಕ್ಕೆ ಬಂದಿದ್ದು, ಆಕೆಗೆ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ವರ್ಗಾಯಿತ ರಕ್ತ ನೀಡದೆ ಆಯೋರ್ಟಿಕ್ ವಾಳ್ವೆ ಬದಲಾವಣೆ ಅಪರೂಪದ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿದೆ. ಮಹಿಳೆಯು ಯೆಹೋವನ ಸಾಕ್ಷಿಗಳು ಧರ್ಮಕ್ಕೆ ಸೇರಿದವರಾಗಿದ್ದು,ಅವರು ತಮ್ಮ ಧಾರ್ಮಿಕ ನಂಬಿಕೆಯ ಪ್ರಕಾರ ಯಾವುದೇ ಸಂದರ್ಭದಲ್ಲೂ ರಕ್ತ ವರ್ಗಾವಣೆಯನ್ನು ಸ್ವೀಕರಿಸುವುವಂತಿರಲಿಲ್ಲ. ಈ ಕಾರಣದಿಂದಾಗಿ ಅನೇಕ ಆಸ್ಪತ್ರೆಗಳು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲು ಮುಂದಾಗಿರಲಿಲ್ಲ. ಬಳಿಕ ಅವರು ಭಾರತದಲ್ಲಿನ ಯೆಹೋವನ ಸಾಕ್ಷಿಗಳು ಸಂಸ್ಥೆಯ ಸಂಯೋಜಕರನ್ನು ಸಂಪರ್ಕಿಸಿದ್ದು, ಅವರು ಈ ಮಹಿಳೆಯನ್ನು ರಕ್ತದಾನಿಗಳ ವರ್ಗಾಯಿತ ರಕ್ತವನ್ನು ಬಳಸದೆ ಅನೇಕ ಹೃದಯ ಶಸ್ತ್ರ ಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಿರುವ ಹೃದಯ ಶಸ್ತ್ರಚಿಕಿತ್ಸಕರಾದ ಡಾ.ಎ.ಜಿ.ಜಯಕೃಷ್ಣನ್ ಅವರ ಬಳಿಗೆ ಕಳುಹಿಸಿದ್ದಾರೆ. ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಹೃದಯ ಶಸ್ತ್ರಚಿಕಿತ್ಸಕರಾದ ಡಾ.ಎ.ಜಿ.ಜಯಕೃಷ್ಣನ್ ಅವರ ನೇತೃತ್ವದಲ್ಲಿ ಅರಿವಳಿಕೆ ವಿಭಾಗದ ತಜ್ಞರಾದ ಡಾ.ಮಂಜುನಾಥ ಕಾಮತ್ ಹಾಗೂ ಡಾ.ಚೇತನ್ ಕುಮಾರ್ ಅವರೊಂದಿಗೆ ಹೃದ್ರೋಗ ವಿಭಾಗದ ಹೃದಯ ಶಸ್ತ್ರಚಿಕಿತ್ಸಕರಾದ ಡಾ.ನರೇಶ್‌ಚಂದ ಹೆಗ್ಡೆ…
ಸುರತ್ಕಲ್, ಜೂ.17: ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಯಾವುದೇ ಪ್ರಸ್ತಾಪವನ್ನು ವಿರೋಧಿಸಿ ಹಾಗೂ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ (ಸಿಎಚ್‌ಸಿ) ಮೇಲ್ದರ್ಜೆಗೆ ಏರಿಸುವಂತೆ ಆಗ್ರಹಿಸಿ ಸುರತ್ಕಲ್ ಆರೋಗ್ಯ ಕೇಂದ್ರದ ಮುಂಭಾಗ ಬುಧವಾರ ಬೃಹತ್ ಮಾನವ ಸರಪಳಿ ಪ್ರತಿಭಟನೆ ನಡೆಯಿತು. ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ಸುರತ್ಕಲ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹತ್ತಕ್ಕೂ ಹೆಚ್ಚು ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ರಾಜಕೀಯ, ಸಾಮಾಜಿಕ, ಕಾರ್ಮಿಕ, ಯುವಜನ ಹಾಗೂ ನಾಗರಿಕ ಸಂಘಟನೆಗಳ ಸದಸ್ಯರು ಭಾಗವಹಿಸಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಸರ್ಕಾರಿ ಆಸ್ಪತ್ರೆಗಳು ಬಡವರು, ಮಧ್ಯಮ ವರ್ಗದವರು ಹಾಗೂ ದುರ್ಬಲ ವರ್ಗಗಳ ಜನರಿಗೆ ಜೀವನಾಡಿಯಾಗಿದ್ದು, ಅವುಗಳನ್ನು ಖಾಸಗಿ ಸಂಸ್ಥೆಗಳ ಅಧೀನಕ್ಕೆ ನೀಡುವುದರಿಂದ ಆರೋಗ್ಯ ಸೇವೆಗಳು ದುಬಾರಿಯಾಗುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣಗೊಂಡಿರುವ ಆರೋಗ್ಯ ಮೂಲಸೌಕರ್ಯಗಳು ಸಾರ್ವಜನಿಕ ಸೇವೆಗಾಗಿಯೇ ಉಳಿಯಬೇಕು ಎಂದು ಒತ್ತಾಯಿಸಿದರು. ಸುರತ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ…
ಮಂಗಳೂರು, ಜೂ. 17 :ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವಾಗ ನಾಲ್ಕು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ನಿಯಮದ ಕುರಿತು ಪೊಲೀಸರು ಮತ್ತೊಮ್ಮೆ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಶಾಲೆಗಳು ಮತ್ತೆ ತೆರೆದಿರುವುದರಿಂದ ಹೆಚ್ಚಿನ ಸಂಖ್ಯೆಯ ಪೋಷಕರು ತಮ್ಮ ಮಕ್ಕಳನ್ನು ದ್ವಿಚಕ್ರ ವಾಹನಗಳಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಪೊಲೀಸ್ ಸಿಬ್ಬಂದಿ ಬೆಳಿಗ್ಗೆ ಬೇಗನೆ ಶಾಲೆಗಳಿಗೆ ಭೇಟಿ ನೀಡಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ ಮತ್ತು ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ಬಗ್ಗೆ ನ್ಯಾಯಾಲಯದ ನಿರ್ದೇಶನದ ಬಗ್ಗೆ ನೆನಪಿಸುತ್ತಿದ್ದಾರೆ.ಅನೇಕ ಪೋಷಕರು ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುತ್ತಿದ್ದರೂ, ತಮ್ಮ ಮಕ್ಕಳ ಸುರಕ್ಷತೆಯನ್ನು ನಿರ್ಲಕ್ಷಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ದ್ವಿಚಕ್ರ ವಾಹನದಲ್ಲಿ ಮಗುವನ್ನು ಮುಂದೆ ಅಥವಾ ಹಿಂದೆ ಕುಳಿತಿದ್ದರೂ, ವಾಹನವು ಸಮತೋಲನ ಕಳೆದುಕೊಂಡರೆ ಅಥವಾ ಅಪಘಾತಕ್ಕೀಡಾದರೆ ತಲೆಗೆ ಗಾಯವಾಗುವ ಅಪಾಯ ಹೆಚ್ಚು ಎಂದು ಸಂಚಾರ ಪೊಲೀಸರು ಎಚ್ಚರಿಸಿದ್ದಾರೆ. ಶಾಲೆ ಹತ್ತಿರದಲ್ಲಿದೆ ಅಥವಾ ಪ್ರಯಾಣ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಹೆಲ್ಮೆಟ್ ಬಳಕೆಯನ್ನು ನಿರ್ಲಕ್ಷಿಸುವುದು ಅಪಾಯಕಾರಿ ಎಂದು ಅವರು…
ಮಂಗಳೂರು, ಜೂ. 17: ಕಳೆದ 2001ರಿಂದಲೇ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಸರ್ಕಾರ ಮುಂದಾಗಿದ್ದು, ಆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತೀವ್ರ ಪ್ರತಿಭಟನೆ ನಡೆಸಿ ಸರ್ಕಾರದ ಪ್ರಯತ್ನವನ್ನು ವಿಫಲಗೊಳಿಸಿತ್ತು ಎಂದು ಸಂಘದ ಮುಖಂಡರು ತಿಳಿಸಿದ್ದಾರೆ. ಅಂದು ರಾಜ್ಯದಾದ್ಯಂತ ರೈತರು ಕೃಷಿ ಪಂಪ್‌ಸೆಟ್‌ಗಳಿಗೆ ಅಳವಡಿಸಿದ್ದ ಮೀಟರ್‌ಗಳನ್ನು ಕಿತ್ತು ವಿದ್ಯುತ್ ಇಲಾಖೆ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿತ್ತು ಎಂದು ಅವರು ಸ್ಮರಿಸಿದ್ದಾರೆ. ಈಗ ರಾಜ್ಯ ಸರ್ಕಾರ ಟಾಟಾ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ವಿದ್ಯುತ್ ಸಂಸ್ಥೆಗಳನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸುವ ಹಾಗೂ ಕೃಷಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಿ ರೈತರಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡುವ ಯೋಜನೆ ರೂಪಿಸಿದೆ ಎಂದು ಆರೋಪಿಸಲಾಗಿದೆ. ಈ ಯೋಜನೆ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಗ್ರ ಹೋರಾಟ ನಡೆಯುತ್ತಿದೆ. ಆದರೆ ದಕ್ಷಿಣ ಕನ್ನಡ…
ಬೆಂಗಳೂರು,ಜೂ. 17: ಜೂನ್ 19ರಂದು ರಾಜ್ಯಾದ್ಯಂತ ಬಿಡುಗಡೆ ಆಗಬೇಕಿದ್ದ ಬಾಸ್ ಚಲನಚಿತ್ರಕ್ಕೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಅವರು ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ನಗರ ಸಿವಿಲ್ ನ್ಯಾಯಾಲಯವು ಈ ಹಿಂದೆ ಚಿತ್ರದ ಬಿಡುಗಡೆಗೆ ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಿ ಬಿಡುಗಡೆಗೆ ಅವಕಾಶ ನೀಡಿತ್ತು. ಅದರ ಬೆನ್ನಲ್ಲೇ ಚಿತ್ರತಂಡವು ಜೂನ್ 19ರಂದು ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು.ಸದ್ಯಕ್ಕೆ ಬಿಡುಗಡೆ ಆಗುವುದು ಬಹುತೇಕ ಅನುಮಾನ. ಸಿವಿಲ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿರುವ ಅರ್ಜಿದಾರರು, ಚಿತ್ರದ ಬಿಡುಗಡೆಗೆ ತಕ್ಷಣದ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ.ಚಿತ್ರದ ಕಥಾವಸ್ತು, ಪಾತ್ರಗಳ ನಿರೂಪಣೆ ಹಾಗೂ ಇತರ ವಿವಾದಿತ ಅಂಶಗಳಿಗೆ ಸಂಬಂಧಿಸಿದಂತೆ ಗಂಭೀರ ಆಕ್ಷೇಪಣೆಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.ಬಾಸ್ ಸಿನಿಮಾದ ಕಥೆಯು ರೇಣುಕಾಸ್ವಾಮಿ ಕೊಲೆಯ ಹಿನ್ನೆಲೆಯಾಗಿ ಬಂದಿರುವ ಸಿನಿಮಾ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಾಗಿಯೇ ದರ್ಶನ್…
ಉಳ್ಳಾಲ: ಅಪರಿಚಿತ ಗಂಡಸಿನ ಮೃತದೇಹವು ಉಳ್ಳಾಲ ಹೋಯಿಗೆ ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ (ಯುಡಿಆರ್) ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ವಾರಸುದಾರರು ಅಥವಾ ಸಂಬಂಧಿಕರ ಬಗ್ಗೆ ಮಾಹಿತಿ ಇರುವವರು ಉಳ್ಳಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಂಪರ್ಕ ಸಂಖ್ಯೆ: 9480802342, 9480802315.
ಬೆಂಗಳೂರು, ಜೂನ್ 15: ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಇನ್‌ಸ್ಟಾಗ್ರಾಂ, ವಾಟ್ಸಾಪ್ ಸೇರಿದಂತೆ ವಿವಿಧ ಡಿಜಿಟಲ್ ವೇದಿಕೆಗಳಲ್ಲಿ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಈ ಸುತ್ತೋಲೆ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ, ಕಾನೂನಿನ ದುರುಪಯೋಗ ತಡೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಭಾರತದ ಸಂವಿಧಾನದ ಪರಿಚ್ಛೇದ 19(1)(a) ಪ್ರತಿಯೊಬ್ಬ ನಾಗರಿಕನಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ನೀಡಿದೆ. ಸರ್ಕಾರ, ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕ ನೀತಿಗಳ ಕುರಿತು ಟೀಕೆ ಮಾಡುವುದು, ಪ್ರಶ್ನಿಸುವುದು ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ. ಸುಪ್ರೀಂ ಕೋರ್ಟ್ ಹಾಗೂ ವಿವಿಧ ಹೈಕೋರ್ಟ್‌ಗಳು ಹಲವು ತೀರ್ಪುಗಳಲ್ಲಿ ಈ ಹಕ್ಕಿನ ಮಹತ್ವವನ್ನು ಪುನರುಚ್ಚರಿಸಿವೆ. 2015ರ ಮಾರ್ಚ್ 24ರಂದು ಐತಿಹಾಸಿಕ ಶ್ರೇಯಾ ಸಿಂಘಾಲ್ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66A ಅನ್ನು ಅಸಂವಿಧಾನಿಕ…
ಬೆಂಗಳೂರು ; ಮಾದಕ ದ್ರವ್ಯ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಕೊಕೇನ್ ಜಪ್ತಿಯಾಗಿದೆ. ಈ ಸಂಬಂಧ ಉಗಾಂಡಾ ಮೂಲದ ಮಹಿಳಾ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ನಡೆದ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಡ್ರಗ್ಸ್ ಸಾಗಾಟ ಮತ್ತು ಮಾರಾಟ ಜಾಲವನ್ನು ಪತ್ತೆಹಚ್ಚಿರುವ ಅಧಿಕಾರಿಗಳು, ಅಂತರರಾಜ್ಯ ಹಾಗೂ ಅಂತರರಾಷ್ಟ್ರೀಯ ಸಂಪರ್ಕಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಹೈಡ್ರೋ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಮ್ರಾನ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 3 ಕೆಜಿ 180 ಗ್ರಾಂ ತೂಕದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು 2.20 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಈ ಮಾದಕ ವಸ್ತುವನ್ನು ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ತರಲಾಗುತ್ತಿತ್ತು ಎಂಬ ಮಾಹಿತಿ…

