ಉಳ್ಳಾಲ: ಕೃಷಿ ಕ್ಷೇತ್ರ ಆಧುನೀಕರಣಗೊಳ್ಳಬೇಕು, ಬದಲಾವಣೆಗಳಾಗಬೇಕು ಅನ್ನುವ ಉದ್ದೇಶದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಕೃಷಿಪಾಠ ಹೇಳುವ ಕಾರ್ಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕಾರಿ ಎಂದು ಮಾಜಿ ಶಾಸಕ ಜಯರಾಮ ಶೆಟ್ಟಿ ಕೆ. ಅಭಿಪ್ರಾಯಪಟ್ಟರು.ಅವರು ನಿಟ್ಟೆ ಶಂಕರ್ ಅಡ್ಯಂತಾಯ ಸ್ಮಾರಕ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಪಿಲಾರು ಇರ್ನೂರುಗುತ್ತು ಗದ್ದೆಯಲ್ಲಿ ಮಂಗಳವಾರ ಹಮ್ಮಿಕೊಂಡ ಭತ್ತದ ನಾಟಿ ಕಾರ್ಯದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ಕೃಷಿ ಮಾಡಿದವನಿಗೆ ಬಡತನವಿಲ್ಲ, ಜಪ ಮಾಡಿದವನಿಗ ಭಯವಿರುವುದಿಲ್ಲ ಅನ್ನುವ ಮಾತಿಗೆ ಒತ್ತು ಕೊಟ್ಟು ವಿದ್ಯಾರ್ಥಿಗಳಿಗೆ ಕೃಷಿಪಾಠ ಹೇಳುವ ಸಂಸ್ಥೆಯ ಕಾರ್ಯ ಶ್ಲಾಘನೀಯ ಈ ಮೂಲಕ ಅನ್ನದ ಬೆಲೆಯನ್ನು ವಿದ್ಯಾರ್ಥಿಗಳು ಅರಿಯಲು ಸಾಧ್ಯ ಎಂದರು.ನಿಟ್ಟೆ ಶಂಕರ್ ಅಡ್ಯಂತಾಯ ಸ್ಮಾರಕ ಪಿ.ಯು ಕಾಲೇಜಿನ ಪ್ರಾಂಶುಪಾಲ ಡಾ.ನವೀನ್ ಶೆಟ್ಟಿ ಮಾತನಾಡಿ, ಕಾಲೇಜಿನಲ್ಲಿ ದಾಂಡೇಲಿ, ಮೈಸೂರು ಸಹಿತ ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳಿದ್ದಾರೆ, ಭತ್ತದ ಮೂಲ ಗೊತ್ತಿರದ ಪರಿಸ್ಥಿತಿ ಇಂದಿನ ವಿದ್ಯಾರ್ಥಿಗಳದ್ದಾಗಿದೆ. ಅದಕ್ಕಾಗಿ ಜ್ಞಾನ ವೃದ್ಧಿಸುವ ಕಾರ್ಯ ಈ ಮೂಲಕ ಆಗಿದೆ . ಕೊರೊನಾ ಸಂದರ್ಭ ಹಳ್ಳಿಗಳಿಗೆ ಮರಳಿರುವ ಮಂದಿ…
Author: UllalaVani
ಉಳ್ಳಾಲ: ಕುಟುಂಬದಲ್ಲಿ ಎಲ್ಲರೂ ಇದ್ದಾರೆ, ಆದರೆ ಒಂದೊಂದು ರುಪಾಯಿಗೂ ಪರದಾಡುವ ಆ ತಾಯಿ ಮಗಳ ಪಾಲಿಗೆ ಅತ್ತೆ, ಒಂದಿಬ್ಬರನ್ನು ಬಿಟ್ಟರೆ ಮತ್ಯಾರೂ ಇಲ್ಲ, ಆದರೆ ಅವರ ಕೈ ಕೂಡಾ ಖಾಲಿಖಾಲಿ. ಒಪ್ಪೊತ್ತಿನ ಆಹಾರಕ್ಕೂ ತಾತ್ವಾರ ಇರುವಾಗ ಮಗಳ ಮದುವೆ ಮಾಡೋದು ಹೇಗೆ? ಉಳಿದಿದ್ದು ಜೀವನಕ್ಕೆ ವಿದಾಯವೊಂದೇ ಮಾರ್ಗ. ಈ ಸಂದರ್ಭದಲ್ಲೇ ಕುಟುಂಬಕ್ಕೆ ಯಾರೂ ಅಲ್ಲದ, ಕನಿಷ್ಟಪಕ್ಷ ಸ್ವಧರ್ಮೀಯರೂ ಅಲ್ಲದ ಕುಟುಂಬ! ತಾಯಿ-ಮಗಳ ಜೀವ ಉಳಿಸುವ ಜೊತೆ ಮುಂದಿನ ಜೀವನಕ್ಕೂ ದಾರಿ ತೋರಿದೆ ಉಳ್ಳಾಲದ ಮುಸ್ಲಿಂ ಕುಟುಂಬ!ಇಂಥದ್ದೊಂದು ಮಾನವೀಯ, ಹೃದಯಸ್ಪರ್ಶಿ, ಸೌಹಾರ್ದತೆಗೆ ಭದ್ರ ಬುನಾದಿಯಾಗುವಂತಹ ಪ್ರಸಂಗವೊಂದು ಉಳ್ಳಾಲದ ಅಲೇಕಳದಲ್ಲಿ ಭಾನುವಾರ ನಡೆದಿದೆ. ಮಂಗಳೂರಿನ ಶಕ್ತಿನಗರದಲ್ಲಿ ಸ್ವಂತ ಮನೆಯಲ್ಲಿ ವಾಸವಿದ್ದ ಕುಟುಂಬವದು. ಗೀತಾ ಅವರ ಪತಿ ಕೆಲವು ವರ್ಷಗಳ ಹಿಂದೆಯೇ ದುರಂತ ಸಾವು ಕಂಡಿದ್ದಾರೆ. ದಂಪತಿಗೆ ಇಬ್ಬರು ಹೆಣ್ಮಕ್ಕಳು. ವರ್ಷದ ಹಿಂದೆ ಹಿರಿಯ ಮಗಳಿಗೆ ಮದುವೆಯಾಗಿ ಸಾಲದಿಂದ ಹೊರಬರಲು ಎಲ್ಲವನ್ನೂ ಮಾರಿ, ಖಾಲಿ ಕೈಯೊಂದಿದೆ ನಾಲ್ಕು ತಿಂಗಳ ಹಿಂದೆ ಗೀತಾ ತಾಯಿ, ಮಗಳು ಕವನಾ,…
ಉಳ್ಳಾಲ,: ಚೆಂಬುಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ಇನ್‍ಫೆÇೀಸಿಸ್ ಪೌಂಡೇಷನ್‍ನಿಂದ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಈ ಯೋಜನೆಗೆ ಸ್ಥಳೀಯರಿಂದ ಯಾವುದೇ ವಿರೋಧ ಇಲ್ಲ ಆದರೆ ಈ ಯೋಜನೆಯನ್ನಯನ್ನು ಈ ಹಿಂದೆ ನಿಗದಿ ಪಡಿಸಿದ ರುದ್ರಭೂಮಿಗೆ ಸೇರಿದ ಖಾಲಿ ಜಾಗದಲ್ಲಿ ನಿರ್ಮಿಸಬೇಕು ಮತ್ತು ಆ ಜಾಗದ ಆರ್ಟಿಸಿ ರುದ್ರಭೂಮಿಯ ಹೆಸರಿಗೆ ಆಗಬೇಕು. ಸ್ಥಳೀಯರಿಗೆ ಯಾವುದೇ ಮಾಹಿತಿ ಪಡೆದುಕೊಳ್ಳದೆ ಇಕ್ಕಟ್ಟಾಗಿರುವ ಈಗಿರುವ ರುದ್ರಭೂಮಿಯಲ್ಲಿ ತುರಾತುರಿಯಲ್ಲಿ ಶಂಕುಸ್ಥಾಪನೆ ನೆರವೇರಿಸುವುದಕ್ಕೆ ಸ್ಥಳೀಯರ ವಿರೋದವಿದೆ ಎಂದು ರುದ್ರಭೂಮಿ ಪರಿಸರದ ಹೋರಾಟ ಸಮಿತಿಯ ಮುಂಖಡ ಸಂತೋಷ್ ಕುಮಾರ್ ತಿಳಿಸಿದು. ಚೆಂಬುಗುಡ್ಡೆ ರುದ್ರಭೂಮಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕನ ನೆಲೆಯಲ್ಲಿ ಯು.ಟಿ. ಖಾದರ್ ಅವರು ಜಿಲ್ಲಾಡಳಿತ ನೆರವಿನೊಂದಿಗೆ ಉತ್ತಮ ಯೋಜನೆಯನ್ನು ತಂದಿದ್ದಾರೆ ಆದರೆ ಯೋಜನೆ ರೂಪಿಸುವ ಮೊದಲೇ ವಿದ್ಯುತ್ ಚಿತಾಗಾರಕ್ಕೆ ರುದ್ರಭೂಮಿಗೆ ಸೇರಿದ ಖಾಲಿ ಜಾಗವನ್ನು ಬಳಸಿಕೊಳ್ಳಲು ನಿರ್ಣಯ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಶಾಸಕರು ಸ್ಥಳೀಯ ಅಭಿಪ್ರಾಯ ಸಂಗ್ರಹಿಸಿ ಯೋಜನೆ ರೂಪಿಸುವ ಭರವಸೆ ನೀಡಿದ್ದರು.…
ಉಳ್ಳಾಲ: ಇಲ್ಲಿನ ಕೋಟೆಪುರ ಸಮುದ್ರ ತೀರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ನಾಲ್ಕು ಲಾರಿ ಸಹಿತ ಮರಳು, ನಾಲ್ಕು ಎಸ್ಕಾರ್ಟ್ ದ್ವಿಚಕ್ರ ವಾಹನಗಳು ಸೇರಿದಂತೆ ಓರ್ವನ ಬಂಧನ ಹಾಗೂ 15 ಮಂದಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕೋಟೆಪುರ ನಿವಾಸಿ ಶಾರುಖ್ ಬಂಧಿತ. ಆರೋಪಿಗಳು ಕೋಟೆಪುರ ಸಮುದ್ರ ತೀರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಿ, ಕೇರಳ ಕಡೆಗೆ ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭ ಸ್ಥಳದಲ್ಲಿ ಸಿಕ್ಕ ಎರಡು ಲೋಡ್ ಮರಳು ಇದ್ದ ಲಾರಿಗಳು ಹಾಗೂ ಕೇರಳ ಸಾಗಿಸುವವರೆಗೆ ಇವರಿಗೆ ಪೊಲೀಸರಿರುವ ಕುರಿತು ಮಾಹಿತಿ ನೀಡಲು ಎಸ್ಕಾರ್ಟ್ ಇರುವ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉಳ್ಳಾಲ: ಎರಡು ಮನೆಗಳಿಗೆ ಬಾಗಿಲು ಮುರಿದು ನುಗ್ಗಿದ ಕಳ್ಳರ ತಂಡ, ಮನೆಯೊಳಗಿದ್ದ ಸೊತ್ತುಗಳನ್ನು ಹಾನಿಗೈದು ಒಂದು ಮನೆಯಿಂದ ವಾಚ್ ಕಳವುಗೈದು ಪರಾರಿಯಾಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಮೂಕಾಂಬಿಕಾ ದೇವಸ್ಥಾನ ಬಳಿ ನಿನ್ನೆ ತಡರಾತ್ರಿ ವೇಳೆ ನಡೆದಿದೆ.ವಿದೇಶದಲ್ಲಿ ನೆಲೆಸಿರುವ ಸುರೇಶ್ ಎಂಬವರಿಗೆ ಸೇರಿದ ಮನೆಯ ಬಾಗಿಲು ಒಡೆದು ಒಳನುಗ್ಗಿರುವ ಕಳ್ಳರು ಕಪಾಟು ಪುಡಿಗೈದು, ಮನೆಯೊಳಗಿನ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿಗೈದು ಹಣ ಹಾಗೂ ಒಡವೆಗಾಗಿ ಹುಡುಕಾಡಿ ಏನೂ ಸಿಗದೇ ವಾಪಸ್ಸಾಗಿದ್ದಾರೆ. ಇವರ ನೆರೆಮನೆಯ ರಾಜೇಶ್ ಎಂಬವರ ಮನೆಯೊಳಕ್ಕೆ ಬೀಗ ಒಡೆದು ಒಳನುಗ್ಗಿದ ಕಳ್ಳರು ಕಪಾಟನ್ನು ಜಾಲಾಡಿ ಮೂರು ವಾಚ್ ಗಳನ್ನು ಕಳವು ನಡೆಸಿದ್ದು, ಈ ವೇಳೆ ಕೋಣೆಯೊಳಗೆ ಮಲಗಿದ್ದ ರಾಜೇಶ್ ಅವರು ಎಚ್ಚೆತ್ತುಕೊಂಡು ಬೊಬ್ಬಿಡಲು ಆರಂಭಿಸಿದ್ದಾರೆ. ಬೊಬ್ಬೆ ಕೇಳಿ ಮೇಲಿನ ಬಾಡಿಗೆ ಮನೆಯಲ್ಲಿರುವ ಮಂದಿ ಕೆಳಗೆ ಓಡಿ ಬರುವಷ್ಟರಲ್ಲಿ ಕಳ್ಳರ ತಂಡ ಪರಾರಿಯಾಗಿದೆ.ಆರು ವರ್ಷಗಳ ಹಿಂದೆ 45 ಪವನ್ಚಿನ್ನಾಭರಣ ದೋಚಿದ್ದ ಮನೆಯಿಂದಲೇ ಕಳವಿಗೆ ಯತ್ನ!2015 ರಲ್ಲಿ ರಾಜೇಶ್ ಅವರ ಮನೆಗೆ ನುಗ್ಗಿದ್ದ ಕಳ್ಳರು…
ಉಳ್ಳಾಲ: ಚೆಂಬುಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ಇನ್‍ಫೋಸಿಸ್ ಪೌಂಡೇಷನ್‍ನಿಂದ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಈ ಯೋಜನೆಗೆ ಸ್ಥಳೀಯರಿಂದ ಯಾವುದೇ ವಿರೋಧ ಇಲ್ಲ ಆದರೆ ಈ ಯೋಜನೆಯನ್ನು ಈ ಹಿಂದೆ ನಿಗದಿ ಪಡಿಸಿದ ರುದ್ರಭೂಮಿಗೆ ಸೇರಿದ ಖಾಲಿ ಜಾಗದಲ್ಲಿ ನಿರ್ಮಿಸಬೇಕು ಮತ್ತು ಆ ಜಾಗದ ಆರ್ಟಿಸಿ ರುದ್ರಭೂಮಿಯ ಹೆಸರಿಗೆ ಆಗಬೇಕು. ಸ್ಥಳೀಯರಿಗೆ ಯಾವುದೇ ಮಾಹಿತಿ ಪಡೆದುಕೊಳ್ಳದೆ ಇಕ್ಕಟ್ಟಾಗಿರುವ ಈಗಿರುವ ರುದ್ರಭೂಮಿಯಲ್ಲಿ ತುರಾತುರಿಯಲ್ಲಿ ಶಂಕುಸ್ಥಾಪನೆ ನೆರವೇರಿಸುವುದಕ್ಕೆ ಸ್ಥಳೀಯರ ವಿರೋಧವಿದೆ ಎಂದು ರುದ್ರಭೂಮಿ ಪರಿಸರದ ಹೋರಾಟ ಸಮಿತಿಯ ಮುಖಂಡ ಸಂತೋಷ್ ಕುಮಾರ್ ತಿಳಿಸಿದರು.ಚೆಂಬುಗುಡ್ಡೆ ರುದ್ರಭೂಮಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕನ ನೆಲೆಯಲ್ಲಿ ಯು.ಟಿ. ಖಾದರ್ ಅವರು ಜಿಲ್ಲಾಡಳಿತ ನೆರವಿನೊಂದಿಗೆ ಉತ್ತಮ ಯೋಜನೆಯನ್ನು ತಂದಿದ್ದಾರೆ. ಆದರೆ ಯೋಜನೆ ರೂಪಿಸುವ ಮೊದಲೇ ವಿದ್ಯುತ್ ಚಿತಾಗಾರಕ್ಕೆ ರುದ್ರಭೂಮಿಗೆ ಸೇರಿದ ಖಾಲಿ ಜಾಗವನ್ನು ಬಳಸಿಕೊಳ್ಳಲು ನಿರ್ಣಯ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಶಾಸಕರು ಸ್ಥಳೀಯ ಅಭಿಪ್ರಾಯ ಸಂಗ್ರಹಿಸಿ ಯೋಜನೆ ರೂಪಿಸುವ ಭರವಸೆ ನೀಡಿದ್ದರು.…
ಕೊಣಾಜೆ : ಕರ್ನಾಟಕ ಸರ್ಕಾರದ ಶಿಕ್ಷಣ ಸುಧಾರಣೆಗಳ ಕಾರ್ಯಕ್ರಮದ ಅಡಿಯಲ್ಲಿ `ವಿದ್ಯಾರ್ಥಿಗಳು ಮತ್ತು ಪೆÇೀಷಕರಿಗೆ ಮಾನಸಿಕ ಸ್ಥೈರ್ಯ ಹಾಗೂ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾಪೂರ್ವ ಆನ್ಲೈನ್ ತರಬೇತಿ’ ಯನ್ನು ಆಯೋಜಿಸಲಾಯಿತು.ಕಾರ್ಯಕ್ರಮದ ಮುಖ್ಯ ಪೆÇೀಷಕರಾದ ಶಿಕ್ಷಣ ಸುಧಾರಣೆಗಳು ಕರ್ನಾಟಕ ಸರ್ಕಾರ ಹಾಗೂ ಪಿ. ಇ. ಎಸ್ . ವಿಶ್ವವಿದ್ಯಾನಿಯದ ಕುಲಾಧಿಪತಿ ಪೆÇ್ರ. ಎಂ. ಆರ್. ದೊರೆಸ್ವಾಮಿ ಭಾಗವಹಿಸಿದ್ದರುಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ವಹಿಸಿ ತಮ್ಮ ಭಾಷಣದಲ್ಲಿ “ಕೋವಿಡ್ -19 ಸಂದಿಗ್ಧತೆಯ ಈ ಸನ್ನಿವೇಶದಲ್ಲಿ ವಿದ್ಯಾರ್ಥಿಗಳು ಮುಖ್ಯವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಪೆÇೀಷಕರುಗಳಿಗೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಅವರಲ್ಲಿ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವುದು ನಮ್ಮ ಕರ್ತವ್ಯ. ಎಲ್ಲರೂ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರಿಸ್ಥಿತಿಯನ್ನು ಎದುರಿಸಬೇಕು. ಸುರಕ್ಷತೆ ಮತ್ತು ಜನರ ಹಿತದೃಷ್ಟಿಯಿಂದ ಸರ್ಕಾರವು ಕಾಲಕಾಲಕ್ಕೆ ತೆಗೆದುಕೊಳ್ಳುವ ಕ್ರಮಗಳನ್ನು ಅನುಸರಿಸಿ ಶೀಘ್ರದಲ್ಲಿ ಕೊರೊನಾಮುಕ್ತ ಸಮಾಜವನ್ನು ನಿರ್ಮಿಸಲು ನಾವೆಲ್ಲರೂ ಕೈಜೋಡಿಸಬೇಕು. ಸಂಪನ್ಮೂಲ ವ್ಯಕ್ತಿಗಳು ನೀಡುವ…
ಉಳ್ಳಾಲ: ಶಾಸಕ ಯು.ಟಿ. ಖಾದರ್ ಅವರು ತೊಕ್ಕೊಟ್ಟು ಚೆಂಬುಗುಡ್ಡೆಯ ಹಿಂದೂ ರುದ್ರಭೂಮಿಗೆ ವಿದ್ಯುತ್ ಚಿತಾಗಾರ ಅಳವಡಿಸಲು ಇನ್‍ಫೋಸಿಸ್‍ನಂತಹ ಒಂದೂವರೆ ಕೋಟಿ ರೂ. ಅನುದಾನ ತರುವುದರ ವಿರುದ್ಧ ಭೂಕಬಳಿಕೆ ಸ್ವರೂಪ ನೀಡುವುದು ಶೋಭೆ ತರುವುದಿಲ್ಲ ಕಾಂಗ್ರೆಸ್ ಹಿರಿಯ ಮುಖಂಡ ಈಶ್ವರ್ ಉಳ್ಳಾಲ್ ಹೇಳಿದರು.ತೊಕ್ಕೊಟ್ಟಿನಲ್ಲಿ ಖಾಸಗಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯು.ಟಿ.ಖಾದರ್ ಅವರು ತಾನೊಬ್ಬ ಮುಸ್ಲಿಮ್ ಧರ್ಮೀಯನಾದರೂ ಸಹ ಬಹಳ ಮುತುವರ್ಜಿ ವಹಿಸಿ ಚೆಂಬುಗುಡ್ಡೆ ಹಿಂದೂ ರುದ್ರಭೂಮಿಗೆ ವಿದ್ಯುತ್ ಚಿತಾಗಾರ ನಿರ್ಮಿಸಲು ಇನ್‍ಫೋಸಿಸ್‍ನಿಂದ ಒಂದೂವರೆ ಕೋಟಿ ರೂ. ಅನುದಾನ ತಂದಿದ್ದಾರೆ. ಆದರೆ ಕೆಲವರು ರಾಜಕೀಯ ಹಗೂ ವೈಯಕ್ತಿಕ ಪ್ರತಿಷ್ಠೆಗಾಗಿ ಭೂಕಬಳಿಕೆ ನಡೆಯುತ್ತಿದೆ ಎಂದು ಅಪಪ್ರಚಾರ ನಡೆಸಿ ಗೊಂದಲ ಸೃಷ್ಟಿಸಿದ್ದಾರೆ. ಇರುವ ಒಂದೂವರೆ ಕೋಟಿ ಅನುದಾನದಲ್ಲಿ ಈಗಿರುವ ಕಟ್ಟಿಗೆಯ ಚಿತಾಗಾರದ ಬಳಿಯಲ್ಲೇ ವಿದ್ಯುತ್ ಚಿತಾಗಾರ ನಿರ್ಮಿಸಲು ಸಾಧ್ಯ. ಹತ್ತಿರದ ಶವ ಹೂಳುವ 45ಸೆಂಟ್ಸ್ ಜಾಗದಲ್ಲಿ ನಿರ್ಮಿಸೋದಾದರೆ 50ಲಕ್ಷ ರೂ. ಗಳಿಗೂ ಹೆಚ್ಚಿನ ಮೊತ್ತ ಅಗತ್ಯತೆ ಇದೆ ಎಂದು ಕಂಪನಿ ಪ್ರಮುಖರು ಹೇಳಿದ್ದಾರೆ.…
ಉಳ್ಳಾಲ: ಉಳ್ಳಾಲ ನಗರಸಭಾ ವ್ಯಾಪ್ತಿಯ ಚೆಂಬುಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ಇನ್‍ಫೆÇೀಸಿಸ್ ಫೌಂಡೇಷನ್ ವತಿಯಿಂದ 1.7 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿದ್ಯುತ್ ಚಿತಾಗಾರಕ್ಕೆ ಸಂಬಂಧಿಸಿದಂತೆ ಶಿಲಾನ್ಯಾಸಕ್ಕೆ ದಿನ ನಿಗದಿಯಾಗುತ್ತಿದ್ದಂತೆ ವಿದ್ಯುತ್ ಚಿತಾಗಾರದ ನಿರ್ಮಾಣವನ್ನು ರುದ್ರಭೂಮಿಯ ಪಕ್ಕದಲ್ಲಿರುವ ಇನ್ನೊಂದು ಸ್ಥಳಕ್ಕೆ ವರ್ಗಾಯಿಸಬೇಕು ಎಂದು ಸಹಿ ಅಭಿಯಾನ ಆರಂಭಗೊಂಡಿದ್ದು, ಗೊಂದಲಗಳ ನಡುವೆ ಶಿಲಾನ್ಯಾಸ ಕಾರ್ಯಕ್ರಮವನ್ನು ಮುಂದೂಡಲಾಗಿದೆ.ಈಗಿರುವ ರುದ್ರಭೂಮಿಯ ಕಟ್ಟಿಗೆಯಿಂದ ಶವದಹನ ಮಾಡುವ ಸಿಲಿಕಾನ್ ಶವಾಗಾರದ ಬಳಿಯೇ ವಿದ್ಯುತ್ ಚಿತಾಗಾರ ನಿರ್ಮಾಣದಿಂದ ವಿದ್ಯುತ್ ಚಿತಾಗಾರಕ್ಕೆ ಹಾನಿಯಾಗುವ ಸಾಧ್ಯತೆ ಇದೆ. ಈಗಾಗಲೇ ಒಂದೂವರೆ ಎಕೆರೆ ಪ್ರದೇಶ ರುದ್ರಭೂಮಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಸೇರಿದಂತೆ ಇತರ ಟ್ಯಾಂಕ್‍ಗಳ ನಿರ್ಮಾಣದಿಂದ ಬಹುಪಾಲು ಜಾಗ ಕಳೆದುಕೊಂಡಿದ್ದು, ಇದೀಗ ವಿದ್ಯುತ್ ಚಿತಾಗಾರ ನಿರ್ಮಾಣದಿಂದ ಸ್ಥಳದ ಅಭಾವ ಕಾಡುವುದುರಿಂದ ಪಕ್ಕದಲ್ಲೇ ಇರುವ ಖಾಲಿ ಇರುವ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಬೇಕು ಎಂದು ಸಹಿ ಸಂಗ್ರಹಣೆ ನಡೆಸಲಾಯಿತು.ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿ ಅಧ್ಯಕ್ಷ ಚಂದ್ರಹಾಸ ಉಳ್ಳಾಲ್ ಪ್ರತಿಕ್ರಿಯಿಸಿ ಈಗಾಗಲೇ 1.57 ಎಕೆರೆ ರುದ್ರಭೂಮಿಯಲ್ಲಿ ನೀರಿನ ಟ್ಯಾಂಕ್…
ದೇರಳಕಟ್ಟೆ: ಸಸ್ಯ ಜೀವತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧವಾಗಿರುವ ಮೈಸೂರಿನಲ್ಲಿರುವ ಲ್ಯಾಬ್‍ಲ್ಯಾಂಡ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಹಾಗೂ ಮಂಗಳೂರಿನ ದೇರಳಕಟ್ಟೆಯಲ್ಲಿರುವ ನಿಟ್ಟೆ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ)ದ ನಡುವೆ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಜಂಟಿಯಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ಒಡಂಬಡಿಕೆ ಏರ್ಪಟ್ಟಿದೆ.ಔಷಧೀಯ ಗುಣವುಳ್ಳ ಸಸ್ಯಗಳು, ಅಂಗಾಂಶ ಅಭಿವೃದ್ಧಿ, ದ್ವಿತೀಯ ಚಯಾಪಚಯ ಕ್ರಿಯೆಗಳು, ಕ್ಲಿನಿಕಲ್ ಸಂಶೋಧನೆ, ಅಣುಬೀಜ ಜೀವವಿಜ್ಞಾನ, ಜೀವಮಾಹಿತಿ ವಿಜ್ಞಾನ, ಜೀವ ಅಂಕಿ-ಅಂಶ ವಿಜ್ಞಾನ, ತಂತ್ರಜ್ಞಾನ ಅಭಿವೃದ್ಧಿ ಹಾಗೂ ಬಯೋ ಇಂಧನ ಕ್ಷೇತ್ರಗಳಲ್ಲಿ ಜಂಟಿಯಾಗಿ ಸಹಮತದ ಸಂಶೋಧನೆ ನಡೆಸುವುದು ಈ ಒಡಂಬಡಿಕೆಯ ಮುಖ್ಯ ಉದ್ದೇಶವಾಗಿದೆ.ಒಡಂಬಡಿಕೆ ಏರ್ಪಟ್ಟ ವೇಳೆ ಲ್ಯಾಬ್‍ಲ್ಯಾಂಡ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಡಾ| ಸುಧೀರ್ ಶೆಟ್ಟಿ ಹಾಗೂ ನಿಟ್ಟೆ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ)ದ ಕುಲಪತಿ ಡಾ| ಸತೀಶ್ ಕುಮಾರ್ ಭಂಡಾರಿ, ಸಹ ಕುಲಪತಿ ಡಾ| ಎಂ.ಎಸ್.ಮೂಡಿತ್ತಾಯ, ಕುಲಸಚಿವೆ ಡಾ| ಅಲ್ಕಾ ಕುಲಕರ್ಣಿ, ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಡಾ| ಪ್ರವೀಣ್ ಕುಮಾರ್ ಶೆಟ್ಟಿ, ಜೀವರಸಾಯನ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ|…

