ಉಡುಪಿ, ಮೇ. 06: ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆಯ ಜೊತೆಗೆ, ಇದೀಗ ಅನಿಲ ಪೂರೈಕೆಯ ಕೊರತೆಯು ಹೋಟೆಲ್ ಉದ್ಯಮವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ವಾಣಿಜ್ಯ ಅನಿಲದ ಪೂರೈಕೆಯು ಬೇಡಿಕೆಗೆ ತಕ್ಕಂತೆ ಇಲ್ಲದಿರುವುದರಿಂದ, ಹೋಟೆಲ್ ಮಾಲೀಕರು ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಕೆಲವು ಹೋಟೆಲ್‌ಗಳು ಸಾಂಪ್ರದಾಯಿಕ ಕಟ್ಟಿಗೆ ಒಲೆಗಳ ಮೊರೆ ಹೋಗಿದ್ದರೆ, ಇನ್ನು ಕೆಲವರು ತಮ್ಮ ಮೆನುವಿನಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಕೆಲವು ಹೊಟೇಲ್‌ಗಳು ಪಾಳಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದು, ಬೆಳಿಗ್ಗೆ ಚಹಾ, ಕಾಫಿಯೊಂದಿಗೆ ಸೀಮಿತ ಉಪಹಾರಗಳನ್ನು ನೀಡುತ್ತಿವೆ. ಮಧ್ಯಾಹ್ನ ಸರಳ ಭೋಜನವನ್ನು ಒದಗಿಸುತ್ತಿವೆ ಮತ್ತು ಸಂಜೆ ಹಾಗೂ ರಾತ್ರಿಯ ಸಮಯದಲ್ಲಿ ಹೋಟೆಲ್‌ಗಳನ್ನು ಮುಚ್ಚುತ್ತಿವೆ.ಗ್ಯಾಸ್ ಸಿಲಿಂಡರ್‌ಗಳ ಲಭ್ಯತೆಯ ಆಧಾರದ ಮೇಲೆ ಹೋಟೆಲ್‌ಗಳು ತಮ್ಮ ದೈನಂದಿನ ವಹಿವಾಟನ್ನು ನಿರ್ವಹಿಸುತ್ತಿವೆ. ಕೆಲವು ಹೋಟೆಲ್‌ಗಳು ಸೀಮಿತ ಮೆನುವಿನೊಂದಿಗೆ ಮಧ್ಯಾಹ್ನ ಮತ್ತು ರಾತ್ರಿಯ ಭೋಜನವನ್ನು ನೀಡುತ್ತಿದ್ದರೆ, ಮತ್ತೆ ಕೆಲವು ಹೋಟೆಲ್‌ಗಳು ಕೇವಲ ಬೆಳಗಿನ ಉಪಹಾರ ಮತ್ತು ಸಂಜೆಯ ತಿಂಡಿಗಳಿಗೆ ಮಾತ್ರ ತಮ್ಮ ಸೇವೆಯನ್ನು ಸೀಮಿತಗೊಳಿಸಿವೆ.
Author: UllalaVani
ಬೆಳ್ತಂಗಡಿ, ಮೇ. 06: ಕ್ರೇನ್ ವಾಹನವೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿಯ ಬೆಳಾಲು ಪೇಟೆಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ (49) ಎಂದು ಗುರುತಿಸಲಾಗಿದೆ.ಇವರು ಬೆಳಾಲು ಗ್ರಾಮದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದರು.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಈ ಸಂಬಂಧ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ತನಂತಿಟ್ಟ, ಮೇ. 06: ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ಕೆ ನಾಯರ್ ಅವರು ಮಂಗಳವಾರ ಬೆಳಿಗ್ಗೆ ಕೇರಳದ ಪತ್ತನಂತಿಟ್ಟದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಂಗಳವಾರ ಮುಂಜಾನೆ ನಟ ಪ್ರಯಾಣಿಸುತ್ತಿದ್ದ ಕಾರು ಎದುರಿಗೆ ಬಂದ ವ್ಯಾನ್ ಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ನಟ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರ ಪತ್ನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.1982ರಲ್ಲಿ ಬಿಡುಗಡೆಯಾದ ‘ಇದ್ ಞಂಙಳುಡೆ ಕಥಾ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಸಂತೋಷ್ ಕೆ ನಾಯರ್ ಅವರು ಬಳಿಕ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಖಳನಾಯಕ ಹಾಗೂ ಹಾಸ್ಯಪಾತ್ರಗಳ ಮೂಲಕ ಅವರು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್ ಭಂಡಾರಿ ಅವರು ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಮಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಚಿತ್ರದಲ್ಲಿ ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಮೇಶ್ ಮಿಜಾರು, ಸಮತಾ ಅಮೀನ್, ಅನ್ವಿತಾ ಸಾಗರ್, ಸರ್ವೋತ್ತಮ ಶೆಟ್ಟಿ, ವಾಲ್ಟರ್ ನಂದಳಿಕೆ, ರೂಪಾ ವರ್ಕಾಡಿ,…
ಉಳ್ಳಾಲ: ಅವಿವಾಹಿತ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ಉಳ್ಳಾಲದ ಸುಂದರಿಬಾಗ್‌ನಲ್ಲಿ ನಡೆದಿದೆ. ಶಿಲ್ಪಾ ವುಡ್ ಇಂಡಸ್ಟ್ರೀಸ್ ಮಾಲಕರಾದ ಸುರೇಶ್ ಅವರ ಪುತ್ರ ಯಜ್ಞೇಶ್ ಉಳ್ಳಾಲ (30) ಆತ್ಮಹತ್ಯೆ ಮಾಡಿಕೊಂಡವರು. ಅವಿವಾಹಿತರಾಗಿದ್ದ ಯಜ್ಞೇಶ್ ಅವರು ನಿನ್ನೆ ಮನೆಯಲ್ಲಿ ತಮ್ಮ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಯಾಷನ್ ಹಾಗೂ ಸಿನಿಮಾ ಮೇಕಪ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅವರು ತುಳು ಚಲನಚಿತ್ರರಂಗದ ಕೆಲ ನಟರ ಆಪ್ತರಾಗಿದ್ದರು ಎನ್ನಲಾಗಿದೆ.ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಮಂಗಳೂರು/ಉಡುಪಿ, ಮೇ. 05: ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.ಸೋಮವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಸೆಕೆಯಿಂದ ಕೂಡಿದ ವಾತಾವರಣವಿತ್ತು. ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣವಿದ್ದರೂ, ಎಲ್ಲಿಯೂ ಮಳೆಯಾಗಿಲ್ಲ. ಮೈಸೂರು ಮತ್ತು ಚಾಮರಾಜನಗರದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗಿರುವುದು ವರದಿಯಾಗಿದೆ.ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.3 ಡಿ.ಸೆ. ಕಡಿಮೆಯಾಗಿದೆ. ಕನಿಷ್ಠ ತಾಪಮಾನ 26.1 ಡಿ.ಸೆ. ಇದ್ದು,…
ನರಿಂಗಾನ, ಮೇ. 05 : ನರಿಂಗಾನ ಗ್ರಾಮದ 19 ವರ್ಷದ ಯುವತಿಯೊಬ್ಬಳು ತನ್ನ ಮನೆಯಿಂದ ಮೇ 4 ರ ಸೋಮವಾರ ಬೆಳಗಿನ ಜಾವದಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಕಾಣೆಯಾದ ಹುಡುಗಿಯನ್ನು ಇಬ್ರಾಹಿಂ ಎಂ ಅವರ ಮಗಳು ರಾಭಿಯತುಲ್ ಅಧಭಿಯ ಎಂದು ಗುರುತಿಸಲಾಗಿದೆ. ಆಕೆಯ ತಂದೆ ನೀಡಿದ ದೂರಿನ ಪ್ರಕಾರ, ಮೇ 3 ರ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಕುಟುಂಬವು ಊಟದ ನಂತರ ಮಲಗಲು ಹೋಗಿದ್ದಾಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೋಮವಾರ ಬೆಳಗಿನ ಜಾವ 2:30 ಕ್ಕೆ ಇಬ್ರಾಹಿಂ ಮಂಗಳೂರು ಡಾಕ್‌ಗೆ ಕೆಲಸಕ್ಕೆ ಹೋಗಲು ಎದ್ದಾಗ, ತನ್ನ ಮಗಳು ತನ್ನ ಕೋಣೆಯಲ್ಲಿ ಇಲ್ಲದಿರುವುದು ಮತ್ತು ಅಡುಗೆಮನೆಯ ಹಿಂಬಾಗಿಲು ತೆರೆದಿರುವುದು ಕಂಡುಬಂದಿದೆ. ಸ್ಥಳೀಯ ಎಲ್ಲಾ ಪ್ರದೇಶಗಳನ್ನು ಹುಡುಕಿದರೂ ಮತ್ತು ಸಂಬಂಧಿಕರೊಂದಿಗೆ ವಿಚಾರಿಸಿದರೂ, ಆಕೆಯ ಸ್ಥಳ ಇನ್ನೂ ತಿಳಿದಿಲ್ಲ.ಕಾಣೆಯಾದ ಯುವತಿಯ ವಿವರಣೆ: ವಯಸ್ಸು: 19 ವರ್ಷಗಳುಎತ್ತರ: 4.6 ಅಡಿಗೋಧಿ…
ಮಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯ ಉಪಚುನಾವಣೆಯ ಗೆಲುವು ಕೇವಲ ಎರಡು ಕ್ಷೇತ್ರಗಳ ಜಯವಲ್ಲ, ಇದು 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ಸೂಚನೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಣ್ಣಿಸಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಜನರು ನೀಡಿರುವ ಆಶೀರ್ವಾದ. ಈ ಫಲಿತಾಂಶವು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಜನತೆ ನೀಡಿದ ತಕ್ಕ ಉತ್ತರ ಎಂದು ಅವರು ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ರಾಜ್ಯದ ಪ್ರತೀ ಹಳ್ಳಿಹಳ್ಳಿಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ, ರಾಜ್ಯದ ಅಭಿವೃದ್ಧಿಗಳನ್ನು ಮುಂದಿಟ್ಟು ಆಮೂಲಕ ಪಕ್ಷವನ್ನು ಬಲಪಡಿಸಲು ವಿಶೇಷ ಅಭಿಯಾನ ಕೈಗೊಳ್ಳಲಿದೆ. ಯುವಕರಲ್ಲಿ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಎಂದ ಅವರು, 2028ರ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ…
ಉಳ್ಳಾಲ, ಮೇ-04:ಸೋಮೇಶ್ವರ ಪುರಸಭಾ ವ್ಯಾಪ್ತಿಯ ಆಸ್ತಿ ಮಾಲೀಕರು ಹಾಗೂ ಅನುಭೋಗದಾರರಿಗೆ ಮಹತ್ವದ ಮಾಹಿತಿಯೊಂದನ್ನು ಪುರಸಭೆ ಪ್ರಕಟಿಸಿದೆ. ಸರಕಾರದ ಆದೇಶದಂತೆ 2026-27ನೇ ಸಾಲಿನ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಮೇ ತಿಂಗಳೊಳಗೆ ಪಾವತಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಈ ರಿಯಾಯಿತಿ 2026ರ ಮೇ 30ರವರೆಗೆ ಮಾತ್ರ ಅನ್ವಯವಾಗುತ್ತದೆ. ಜೂನ್ ತಿಂಗಳಲ್ಲಿ ತೆರಿಗೆ ಪಾವತಿಸಿದರೂ ಯಾವುದೇ ದಂಡ ವಿಧಿಸಲಾಗುವುದಿಲ್ಲ. ಆದರೆ ಜುಲೈ ತಿಂಗಳಿಂದ ಪ್ರತಿ ತಿಂಗಳಿಗೆ ಶೇ.2ರಷ್ಟು ದಂಡ ವಿಧಿಸಲಾಗುವುದು ಎಂದು ಪುರಸಭೆ ಎಚ್ಚರಿಕೆ ನೀಡಿದೆ. ಆಸ್ತಿ ತೆರಿಗೆ ಬಾಕಿ ಇರುವವರು ಕೂಡಲೇ ಪಾವತಿಸಬೇಕೆಂದು ಕೋರಲಾಗಿದ್ದು, 2026-27ನೇ ಸಾಲಿಗೆ ಉದ್ಯಮ ಪರವಾನಿಗೆಯನ್ನು ನವೀಕರಿಸುವುದು ಹಾಗೂ ನೀರಿನ ಶುಲ್ಕವನ್ನು ಪಾವತಿಸುವಂತೆ ಪುರಸಭೆ ಸೂಚಿಸಿದೆ. ಪುರಸಭೆಯ ಪ್ರಕಟಣೆಯಂತೆ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸುವಂತೆ ಮನವಿ ಮಾಡಲಾಗಿದೆ.
ಉಳ್ಳಾಲ: ಮಾತು ಬಾರದ ಪ್ರಾಣಿ ಪಕ್ಷಿಗಳಿಗೂ ಸಹ ಉಳಿಯಲು ಒಂದು ಸೂರು ಇರುತ್ತದೆ.ಅದೇ ರೀತಿ ಮಾನವರು ಕೂಡಾ ವ್ಯವಸ್ಥಿತ ಜೀವನ ಸಾಗಿಸಲು ಮನೆಯು ಅತ್ಯಾವಶ್ಯಕವಾಗಿದೆ.ಪತಿ ಮತ್ತು ಪುತ್ರನನ್ನ ಕಳಕೊಂಡು ಸಂಕಷ್ಟದಲ್ಲಿದ್ದ ವೃದ್ಧೆ ವೀರಮ್ಮ ಅವರಿಗೆ ಸುಸಜ್ಜಿತ ಮನೆ ನಿರ್ಮಿಸಿ ಕೊಟ್ಟು ಸಂಘ ಶತಾಬ್ಧಿಯನ್ನು ಅರ್ಥಪೂರ್ಣವಾಗಿ ಸಂಭ್ರಮಿಸಿದ ಕುಂಪಲದ ರಾಷ್ಟ್ರೀಯ ಸೇವಾ ಭಾರತಿ ಕೇಸರಿ ಶಾಖೆಯ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆಯೆಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ಧಿಯ ಪ್ರಯುಕ್ತ ಸಂಘ ಪ್ರೇರಿತ ಸಂಸ್ಥೆಯಾದ ಕುಂಪಲದ ರಾಷ್ಟ್ರೀಯ ಸೇವಾ ಭಾರತಿ ಕೇಸರಿ ಶಾಖೆಯ ಮುಂದಾಳುತ್ವದಲ್ಲಿ ಕುಂಪಲ ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ,ಕೇಸರಿ ಮಿತ್ರ ವೃಂದ ,ಕೇಸರಿ ಮಾತೃ ಮಂಡಳಿಯ ಸಹಯೋಗ ಹಾಗೂ ಸಮಾಜದ ದಾನಿಗಳ ಸಹಕಾರದಿಂದ ಪತಿ ಮತ್ತು ಮಗನನ್ನ ಕಳಕೊಂಡು ವಿಧವೆ ಸೊಸೆ ಹಾಗೂ ಮೂರು ಮೊಮ್ಮಕ್ಕಳೊಂದಿಗೆ ವಾಸವಿರುವ ಕುಂಪಲ ಬಗಂಬಿಲದ ಅಮೃತನಗರ ನಿವಾಸಿ ವೃದ್ಧೆ ವೀರಮ್ಮ ಅವರಿಗೆ ನಿರ್ಮಿಸಿ…

