Author: UllalaVani

Kannada News From Coastal Karnataka

ಉಳ್ಳಾಲ: ಮೈಸೂರಿನ ಸುತ್ತೂರು ಮಠದ ಮಾದರಿಯಲ್ಲಿ ಉಳ್ಳಾಲದ ಉಳಿಯದಲ್ಲಿ ಎಲ್ಲಾ ಧರ್ಮದವರನ್ನು ಒಗ್ಗೂಡಿಸಿಕೊಂಡು ಕೃಷಿ ಇಲಾಖೆಯ ಸಹಭಾಗಿತ್ವದಲ್ಲಿ ಕೃಷಿ ಜಾತ್ರೆಯನ್ನು ಹಮ್ಮಿಕೊಳ್ಳುವ ಕಾರ್ಯ ಆಗಬೇಕು ಇದಕ್ಕೆ ಬೇಕಾದ ಬೆಂಬಲವನ್ನು ಶಾಸಕನ ನೆಲೆಯಲ್ಲಿ ಕೊಡಲು ಸಿದ್ಧ ಎಂದು ಶಾಸಕ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.ಅವರು ಉಳ್ಳಾಲ ಉಳಿಯದ ಧರ್ಮರಸರ ಕ್ಷೇತ್ರಕ್ಕೆ ಒಳಪಟ್ಟ ಗದ್ದೆಯಲ್ಲಿ ನೇಜಿ ನಾಟಿಗೆ ಚಾಲನೆ ನೀಡಿ ಮಾತನಾಡಿ ನಮ್ಮ ದೇಶದ ಕೃಷಿ ಪರಂಪರೆಯನ್ನು ಉಳಿಸಿಕೊಂಡು ಯುವಜನರಿಗೆ ಕೃಷಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಧಾರ್ಮಿಕ ಕ್ಷೇತ್ರಗಳು ತೊಡಗಿಸಿಕೊಳ್ಳಬೇಕು.ಮೈಸೂರಿನಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ದೊಡ್ಡ ಮಟ್ಟದ ಕೃಷಿ ಜಾತ್ರೆ ನಡೆಯುತ್ತಿದ್ದು, ಶ್ರೀ ಕ್ಷೇತ್ರ ಉಳಿಯದಲ್ಲೂ ಈ ಕಾರ್ಯ ಆಗಬೇಕು ಕೃಷಿ ಹಿಂದೆ ಹೇಗಿತ್ತು, ಈಗ ಹೇಗಿದೆ ಮತ್ತು ಮುಂದಿನ ಚಿಂತನೆಯನ್ನು ಈ ಜಾತ್ರೆಯಲ್ಲಿ ಅಲವಡಿಸಿಕೊಂಡು ಕೃಷಿ ಇಲಾಖೆಯನ್ನು ಇದರಲ್ಲಿ ತೊಡಗಿಸಿಕೊಳ್ಳುವ ಕಾರ್ಯ ಮಾಡಬೇಕು ಎಂದರು.ರೈತರೇ ಬೆನ್ನೆಲುಬು : ದೇಶ ಸ್ವಾತಂತ್ರದ ಸಂದರ್ಭದಲ್ಲಿ 33 ಕೋಟಿ ಜನಸಂಖ್ಯೆ ಇರುವಾಗ ಭಾರತದಲ್ಲಿ ಒಂದು ಹೊತ್ತಿನ ಊಟಕ್ಕೂ ಹೊರದೇಶಕ್ಕೆ ಕೈಚಾಚಬೇಕಿತ್ತು. ಆದರೆ…

Read More

ಉಳ್ಳಾಲ: ರಕ್ತದೊತ್ತಡ ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವೈದ್ಯರು ಬಿಪಿ ಚೆಕ್ ಮಾಡುವಷ್ಟರಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.ಕುಂಪಲ ಆಶ್ರಯ ಕಾಲನಿ ನಿವಾಸಿ ರಾಜೇಶ್ ರಾವ್ (31) ಹೃದಯಾಘಾತಕ್ಕೆ ಬಲಿಯಾದ ಯುವಕ. ರಾಜೇಶ್ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಶುಕ್ರವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ವೈದ್ಯರು ಮತ್ತೆ ಸೋಮವಾರ ತಪಾಸಣೆಗೆ ಬರಲು ತಿಳಿಸಿದ್ದರಂತೆ. ಅದರಂತೆ ಇಂದು ಬೆಳಗ್ಗೆ ರಾಜೇಶ್ ಅವರ ಸ್ನೇಹಿತರಾದ ಪ್ರಕಾಶ್ ಕುಂಪಲ, ಶೈಲೇಶ್ ಮೊದಲಾದವರು ರಾಜೇಶನ್ನು ನಗರದ ಕೆಎಂಸಿ ಆಸ್ಪತ್ರೆಗೆ ಉನ್ನತ ತಪಾಸಣೆಗೆ ಕರೆದೊಯ್ದಿದ್ದಾರೆ. ತಪಾಸಣೆಗೆ ತೆರಳುವಾಗ ರಾಜೇಶ್ ಅವರೇ ಕಾರು ಚಲಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತದೊತ್ತಡ ತಪಾಸಣೆ ನಡೆಸುವ ವೇಳೆ ರಾಜೇಶ್ ಕುಸಿದು ಬಿದ್ದಿದ್ದು ಸ್ನೇಹಿತರ ಮುಂದೆಯೇ ಸಾವನ್ನಪ್ಪಿದ್ದಾರೆ.ರಾಜೇಶ್ ಅವರು ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ರಾಜೇಶ್ ಅವರು ರಿಕ್ಷಾ ಚಾಲಕರಾಗಿದ್ದು ಕುಂಪಲ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದು ಅಪಾರ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರೊಂದಿಗೆ…

Read More

ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಎನ್.ಎಸ್ ಕರೀಂ ಇವರು ಆಯ್ಕೆಯಾಗಿದ್ದಾರೆ.ಕರೀಂ ಅವರು ಈ ಹಿಂದೆ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದು, ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರೂ ಆಗಿದ್ದರು.ಇವರನ್ನು ಶಾಸಕ ಯು.ಟಿ ಖಾದರ್ ನೇತೃತ್ವದಲ್ಲಿ ಬುಧವಾರ ಮಂಜನಾಡಿಯಲ್ಲಿ ಸನ್ಮಾನಿಸಲಾಯಿತು.

Read More

ಮಂಜನಾಡಿ : ಕರ್ನಾಟಕ ಸರಕಾರ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಪಂಚಾಯತ್ ಮೂಲಕ ನಿರ್ಮಾಣವಾದಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಯು ಟಿ ಖಾದರ್ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಂಜನಾಡಿಯ ಮೊಂಟೆಪದವು ಪ್ರದೇಶದಲ್ಲಿ ತಲೆಯೆತ್ತಿರುವ ಈ ವಿದ್ಯಾರ್ಥಿನಿಲಯ ಮಂಗಳೂರು ಕ್ಷೇತ್ರದ ಪರಿಶಿಷ್ಟ ವರ್ಗದ ಮಕ್ಕಳಿಗಿಂತಲೂ ಇತರ ಕ್ಷೇತ್ರದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲು ಮಾಡಿರುವಂತದ್ದು ಎಂದರು.ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಇನ್ನಷ್ಟು ಮುಂದೆ ಬರಬೇಕು ಎಂಬ ದೂರದೃಷ್ಟಿಯಿಂದಈಗಾಗಲೇ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿ ನಿಲಯವನ್ನು ಆರಂಭಿಸಲಾಗಿದ್ದು, ಅದರಂತೆ ಶಾಶ್ವತವಾದ ಕಟ್ಟಡವನ್ನು ಕಟ್ಟಿ ಆ ವಿದ್ಯಾರ್ಥಿಗಳಿಗೆ ನೆರವಾಗಲೆಂದು ಸದುದ್ದೇಶದಿಂದ ಸರಕಾರ ಸ್ವಂತ ವಿದ್ಯಾರ್ಥಿ ನಿಲಯ ಸ್ಥಾಪಿಸಿದೆ ಎಂದರು.ಕೆಲವೊಂದು ಲೋಪದೋಷಗಳನ್ನು ಮನಗಂಡಿದ್ದು ಸ್ಥಳೀಯವಾಗಿ ಒಂದು ಮೇಲುಸ್ತುವಾರಿ ಸಮಿತಿ ರಚಿಸಿಅವರೊಂದಿಗೆ ಚರ್ಚಿಸಿ ಅವರಿಗೆ ಸಹಕಾರ ನೀಡಲಾಗುವುದು.ಕಟ್ಟಡ ನಿರ್ಮಾಣದ ಗುತ್ತಿಗೆದಾರರು ಕಟ್ಟಡ ನಿರ್ಮಿಸಿ ಉದ್ಘಾಟನೆಗೊಂಡ ಬಳಿಕ ತಮ್ಮ ಪಾಡಿಗೆ ತಾವು ಹೋಗದೆ ಕನಿಷ್ಠ ಕೆಲವು ವರ್ಷಗಳ ಕಾಲ ಈ ಕಟ್ಟಡದ ಬಗ್ಗೆನಿರ್ವಹಣೆಯ ಜವಾಬ್ದಾರಿಯನ್ನು ಹೊರಬೇಕಿದೆ. ಕಟ್ಟಡ…

Read More

ಕೊಣಾಜೆ : ವಿದ್ಯಾರ್ಥಿಗಳು ಬಲಿಷ್ಠರಾದರೆ ಮಾತ್ರ ಈ ದೇಶ ಬಲಿಷ್ಠವಾಗುತ್ತದೆ ಹೊರತು ಎಂಪಿ, ಎಂಎಲ್ ಎ, ಜನಪ್ರತಿನಿಧಿಗಳಿಂದ ಸಾಧ್ಯವಿಲ್ಲ. ಹಾಗಾಗಿ ಶಿಕ್ಷಣದಲ್ಲಿ ಸ್ಪರ್ಧೆಗೆ ಸರಕಾರ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಡುತ್ತಿದ್ದು ಶಿಕ್ಷಣಕ್ಕೆ ಆದ್ಯತೆ ನೀಡುವುದೇ ಮುಖ್ಯ ಗುರಿ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.ಅವರು ಕುರ್ನಾಡು ಮುಡಿಪಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿ.ಸಿ. ವಿತರಿಸಿ ಮಾತನಾಡಿದರು.ಯಾವುದೇ ಅಭಿವೃದ್ಧಿಯಲ್ಲಿ ಕನಿಷ್ಟ ಮುಂದಿನ ಮುವತ್ತು ವರ್ಷಗಳ ದೂರದೃಷ್ಟಿ ಇದೆ. ಇಲ್ಲಿ ಸುಂದರ ಪರಿಸರ, ಸುಂದರ ಕಟ್ಟಡ, ನುರಿತ ಉಪನ್ಯಾಸಕರು, ಸಿಬ್ಬಂದಿ ಎಲ್ಲ ಸೌಲಭ್ಯಗಳಿಂದ ಸುಸಜ್ಜಿತವಾಗಿದ್ದು ಈಗ ಕಲಿಯುತ್ತಿರುವ ವಿದ್ಯಾರ್ಥಿಗಳ ಸಾಧನೆ ಮುಂದೆ ಕಲಿಯಲು ಬರುವ ವಿದ್ಯಾರ್ಥಿಗಳಿಗೆ ಪೂರಕವಾಗಬೇಕು ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿ ವಿದ್ಯಾರ್ಥಿಗಳಿಗೆ ಬಹಳಷ್ಟು ಸೌಲಭ್ಯಗಳು ದೊರಕಿದ್ದು ವಿದ್ಯಾರ್ಥಿಗಳು ಸರ್ವಾಂಗೀಣ ಯಶಸ್ಸು ಕಾಣಬೇಕು ಎಂದು ನುಡಿದರು.ಕಾಲೇಜು‌ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ ಕಾಜವ ಕಾರ್ಯಕ್ರಮದ…

Read More

ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಸೋಮೇಶ್ವರ ಪುರಸಭೆ ಬಳಿ ನಿವಾಸಿ ಪವನ್ ಭಟ್ (29) ಆತ್ಮಹತ್ಯೆಗೈದಿದ್ದು, ಸಮುದ್ರದ ಅಲೆಯಲ್ಲಿ ಸಿಲುಕಿದ್ದ ಮೃದೇಹವನ್ನು ಸ್ಥಳೀಯ ಮೀನುಗಾರರು ಮತ್ತು ಜೀವರಕ್ಷಕ ಈಜುಗಾರರು ಸಮುದ್ರದಿಂದ ಮೇಲಕ್ಕೆತ್ತಿದ್ದಾರೆ.ಎಂಬಿಎ ಮತ್ತು ಇಂಜಿನಿಯರಿಂಗ್ ಪದವಿಧರನಾಗಿದ್ದ ಪವನ್ ಖಾಸಗಿ ಕಂಪೆನಿಯಲ್ಲಿ ಕೆಲಸದಲ್ಲಿದ್ದ ಎನ್ನಲಾಗಿದೆ. ಮೈಸೂರಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದ ಪವನ್ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ನಡೆಸಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. ವಿದ್ಯಾರ್ಥಿ ದೆಸೆಯಿಂದಲೇ ಪ್ರತಿಭಾನ್ವಿತನಾಗಿದ್ದ ಪವನ್ ಉತ್ತಮ ಹಾಡುಗಾರ ಹಾಗೂ ಗಿಟಾರ್ ನುಡಿಸುತ್ತಿದ್ದ ಎನ್ನಲಾಗಿದೆ. ಕೋವಿಡ್ ಹಿನ್ನಲೆಯಲ್ಲಿ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಈತ ಮಾನಸಿಕವಾಗಿ ಕುಗಿದ್ದು, ಪ್ರತೀ ದಿನ ಸೋಮೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ. ಬುಧವಾರವೂ ದೇವಸ್ಥಾನಕ್ಕೆ ತೆರಳಿ ಬಳಿಕ ರುದ್ರಪಾದೆಯ ಮೇಲೆಗ ಹೋಗಿದ್ದು ಅಲ್ಲಿಂದ ಆತ್ಮಹತ್ಯೆಗೈದಿದ್ದು, ಸ್ಥಳೀಯರು ನೋಡಿ ಜೀವರಕ್ಷಕ ಈಜುಗಾರರಿಗೆ ಮಾಹಿತಿ ನೀಡಿದ್ದು ಅವರು ಸ್ಥಳ್ಕೆ ಆಗಮಿಸಿದಾಗ ಪವನ್ ಮೃತದೇಹಸಮುದ್ರದ ಅಲೆಯಲ್ಲಿ ಸಿಲುಕಿದ್ದು ಪೆÇಲೀಸರಿಗೆ ಮಾಹಿತಿ ನೀಡಿದ್ದು, ಪೆÇಲೀಸರ ಮಾಹಿತಿಯಂತೆ ಗೃಹರಕ್ಷಕದಳದ ಸಿಬಂದಿ ಪ್ರಸಾದ್…

Read More

ಉಳ್ಳಾಲ: ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳ ನಂದಾವರ ನಿವಾಸಿ ಬದ್ರುದ್ದೀನ್ (27) ಬಂಧಿತ. ಮಾ. 19 ರಂದು ತೊಕ್ಕೊಟ್ಟು ಒಳಪೇಟೆಯ ಜಯರಾಜ್ ಎಂಬವರ ಮನೆ ಬಾಗಿಲು ಮುರಿದು ಒಳನುಗ್ಗಿದ್ದ ಕಳ್ಳ 120 ಗ್ರಾಂ ತೂಕದ ಚಿನ್ನಾಭರಣ ಮತ್ತು 3 ಮೊಬೈಲುಗಳನ್ನು ಕಳವು ನಡೆಸಿದ್ದನು.. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಆರೋಪಿಯನ್ನು ಬಂಧಿಸಿರುವ ಉಳ್ಳಾಲ ಪೊಲೀಸರು ಆತನ ಬಳಿಯಿದ್ದ 95 ಗ್ರಾಂ ಚಿನ್ನ, ಎರಡು ಮೊಬೈಲ್ , ಒಂದು ಬೈಕ್ ಮತ್ತು ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.ರಿಕ್ಷಾ ಚಾಲಕನಾಗಿರುವ ಕುಡಿತದ ದಾಸನಾಗಿದ್ದನು. ಕಳವು ನಡೆಸಿರುವ ಮೂರು ಮೊಬೈಲ್‍ಗಳ ಪೈಕಿ ಒಂದು ಮೊಬೈಲನ್ನು ತನ್ನ ಭಾವ ಇಸ್ಮಾಯಿಲ್ ಎಂಬಾತನಿಗೆ ನೀಡಿದ್ದನು. ಆತ ಅದಕ್ಕೆ ಸಿಮ್ ಹಾಕಿ ಬಳಕೆ ಮಾಡುತ್ತಿದ್ದನು. ಕಳವಾಗಿರುವ ಮೊಬೈಲ್‍ನ ಐಎಂಇಐ ಸಂಖ್ಯೆ ಟ್ರೇಸಿಂಗ್ ನಲ್ಲಿದ್ದುದರಿಂದ ಆರೋಪಿ ಸುಳಿವು ಲಭ್ಯವಾಗಿದೆ.

Read More

ಉಳ್ಳಾಲ: ಕೋವಿಡ್ ಕಾರಣದಿಂದಾಗಿ ಮೃತಪಟ್ಟ 12 ಮಂದಿಗೆ ಮೋಕ್ಷ ಸಿಗುವಂತೆ ಪ್ರಾರ್ಥಿಸಿ ಸಂಪ್ರದಾಯದಂತೆ ಸೋಮನಾಥನ ಸನ್ನಿಧಿಯಲ್ಲಿ ಅವರ ಚಿತಾಭಸ್ಮವನ್ನು ಸಮುದ್ರಕ್ಕೆ ಬಿಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.ಅವರು ಕೊರೊನಾ ಸೋಂಕಿಗೆ ಬಲಿಯಾದ 12 ಮಂದಿ ನಿರ್ಗತಿಕರಿಗೆ ಜಿಲ್ಲಾಡಳಿತದ ನೇತೃತ್ವದಲ್ಲಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಸಮುದ್ರ ತೀರದಲ್ಲಿ ನಡೆಸಿದ ತಿಲಹೋಮ ಮತ್ತು ಚಿತಾಭಸ್ಮವನ್ನು ಸಮುದ್ರಕ್ಕೆ ಬಿಟ್ಟು ಬಳಿಕ ಮಾತನಾಡಿದರು.ರಾಜ್ಯದ ಕಂದಾಯ ಸಚಿವರಾದ ಆರ್.ಅಶೋಕ್ ನೇತೃತ್ವದಲ್ಲಿ ಮೃತ ನಿರ್ಗತಿಕರ ಅಂತರಾತ್ಮಗಳಿಗೆ ಮೋಕ್ಷಪ್ರದ ಆಗಬೇಕು. ನಿರ್ಗತಿಕರು ಮಾತ್ರವಲ್ಲದೆ ಕುಟುಂಬಸ್ಥರು ಬಾರದ ಮಂದಿಯ ಆತ್ಮಕ್ಕೆ ಸದ್ಗತಿ ಸಿಗುವ ಉದ್ದೇಶದಿಂದ ಕಾರ್ಯವನ್ನು ನಡೆಸಿದ್ದರು. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ 12 ಮಂದಿ ಮೃತಪಟ್ಟಿದ್ದಾರೆ. ಅವರ ಆತ್ಮಕ್ಕೆ ಮೋಕ್ಷ ಸಿಗುವಂತೆ ಪ್ರಾರ್ಥಿಸಿ ಎಲ್ಲರ ಚಿತಾಭಸ್ಮವನ್ನು ಸೋಮೇಶ್ವರದ ಸಮುದ್ರಕ್ಕೆ ಸಮರ್ಪಣೆ ಮಾಡಲಾಗಿದೆ ಎಂದರು.ತಾ.ಪಂ ಸದಸ್ಯ ರವಿಶಂಕರ್ ಸೋಮೇಶ್ವರ ತಿಲ ಹೋಮದಲ್ಲಿ ಕುಳಿತರು.ಈ ಸಂದರ್ಭ ದಿ. ಮೈಸೂರ್ ಇಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ,…

Read More

ಉಳ್ಳಾಲ: ಮುಂದಿನ ವಿಧಾನಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಎಸ್ ಡಿಪಿಐ ಪಕ್ಷದ ಪ್ರಥಮ ಶಾಸಕರನ್ನು ಕಳುಹಿಸುವ ಎಲ್ಲಾ ಸಂದೇಶಗಳು ಸ್ಪಷ್ಟವಾಗಿದೆ ಎಂದು ಎಸ್ ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ ಹೇಳಿದರು.ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಹಮ್ಮಿಕೊಂಡಿರುವ 12 ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ದೇರಳಕಟ್ಟೆ ಜಂಕ್ಷನ್ನಿನಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಎಸ್‍ಡಿಪಿಐ ಪಕ್ಷ ದೇಶದಲ್ಲಿ ಕ್ಷಿಪ್ರ ಗತಿಯಲ್ಲಿ ಬೆಳೆಯುತ್ತಿರುವ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಪಕ್ಷದ ಸಿದ್ಧಾಂತವನ್ನು ದೇಶದ ಕೆಲವೊಂದು ಬಕೆಟ್ ಮಾಧ್ಯಮಗಳು ಚಿತ್ರೀಕರಿಸುವ ಯೋಚನೆಗಳಲ್ಲ ಪಕ್ಷದ್ದು. ಹಕ್ಕು ವಂಚಿತ , ಶೋಷಿತ ಸಮುದಾಂiÀiದ ಧ್ವನಿಯಾಗಿ ಜನಸಾಮಾನ್ಯರು ದೇಶದ ಮತ್ತು ರಾಜ್ಯದ ಗದ್ದುಗೆಯಲ್ಲಿ ಧ್ವನಿಯನ್ನು ಮೊಳಗಿಸುವ ಉದ್ದೇಶದಿಂದ ಹುಟ್ಟಿಕೊಂಡಂತಹ ಪಕ್ಷ. ಜಿಲ್ಲೆಯ ಜನ ಪಕ್ಷವನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಖುದ್ದಾಗಿ ಜನರೇ ಪಕ್ಷದ ಸದಸ್ಯತ್ವವನ್ನು ಪಡೆಯಲು ಕೇಳಿಕೊಂಡು ಬರುತ್ತಿದ್ದಾರೆ. ಇದನ್ನು ಗಮನಿಸುವಾಗ ರಾಜ್ಯದ ವಿಧಾನಸಭೆಯ ಒಳಗಡೆ ಪ್ರಥಮ ಶಾಸಕರನ್ನು ಎಸ್ ಡಿಪಿಐ ಪಕ್ಷ ದ.ಕ ಜಿಲ್ಲೆಯಿಂದಲೇ ನೀಡಲಿದೆ ಅನ್ನುವ ಸ್ಪಷ್ಟ…

Read More

ಮುಡಿಪು: ಸತ್ತುಬಿದ್ದ ಸ್ಥಿತಿಯಲ್ಲಿ ಸುಮಾರು 15 ವರ್ಷದ ಕಾಡೆಮ್ಮೆ (ಬಾಸ್ ಗೌರಸ್ ) ಬಂಟ್ವಾಳ ತಾಲೂಕಿನ ಕುರ್ನಾಡು ಗ್ರಾಮದ ಕಲ್ಲಮಂಚ ಎಂಬಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಪಶುವೈದ್ಯಾಧಿಕಾರಿ ಮೇಲ್ನೋಟಕ್ಕೆ ಸ್ವಾಭಾವಿಕವಾಗಿ ಸತ್ತಿರುವುದಾಗಿ ತಿಳಿಸಿದ್ದು ಮರಣೋತ್ತರ ವರದಿ ಬಂದ ಬಳಿಕವಷ್ಟೇ ಮರಣದ ನಿಖರ ಕಾರಣ ತಿಳಿಸಲಾಗುವುದು ಎಂದು ಮಂಗಳೂರು ವಲಯದ ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್ ತಿಳಿಸಿದ್ದಾರೆ.ಖಾಸಗಿ ತೋಟವೊಂದರಲ್ಲಿ ಕಾಡೆಮ್ಮೆ ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಾರ್ವಜನಿಕರು ನೀಡಿದ ಮಾಹಿತಿಯಂತೆ ಸರಕಾರಿ ಪಶು ವೈದ್ಯಾಧಿಕಾರಿ ಅಶೋಕ್ ಅವರು ಕಾಡೆಮ್ಮೆ ಮರಣೋತ್ತರ ಪರೀಕ್ಷೆಯನ್ನು ನಡೆಸಿ, ಇಲಾಖಾ ಕಾನೂನಿನಂತೆ ಶವವನ್ನು ವಿಲೇವಾರಿ ನಡೆಸಿದ್ದಾರೆ.ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಕರಿಕಾಲನ್ ಮಾರ್ಗದರ್ಶನದಲ್ಲಿ ಮಂಗಳೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Read More