UN networks ಕೊಣಾಜೆ: ಕೇಂದ್ರ ಸರಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸೋಮವಾರ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ, ಕೌಶಾಲಾಭಿವೃದ್ಧಿ , ಐಟಿ ಹಾಗೂ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ| ಸಿ.ಎನ್. ಅಶ್ವತ್ಥನಾರಾಯಣ ಆವರು ಉದ್ಘಾಟನೆ ನಡೆಸುತ್ತಿದ್ದಂತೆ ಕ್ಯಾಂಪಸ್ ಪ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಮಂಗಳ ಸಭಾಂಗಣದ ಎದುರು ಪ್ರತಿಭಟನೆ ನಡೆಸಿದ್ದು, ಪೆÇಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಉದ್ಘಾಟನಾ ಕಾರ್ಯಕ್ರಮಕ್ಕೆ ತಡೆಯೊಡ್ಡುವ ವಿಚಾರದಲ್ಲಿ ಮೊದಲೇ ಪೆÇಲೀಸರಿಗೆ ಮಾಹಿತಿ ಇದ್ದರಿಂದ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್‍ಗೆ ತೆರಳುವ ಎಲ್ಲಾ ದಾರಿಗಳಲ್ಲಿ ನಾಕಾಬಂ„ಯನ್ನು ಹಾಕಲಾಗಿತ್ತು. ಆದರೆ ಒಳದಾರಿಗಳ ಮೂಲಕ ನಡೆದುಕೊಂಡು ಬಂದ ಸಿಎಪ್‍ಐ ಕಾರ್ಯಕರ್ತರು ಸಚಿವರ ಕಾರ್ಯಕ್ರಮ ನಡೆಯುವ ಮಂಗಳಾ ಸಭಾಂಗಣದ ಹೊರಗೆ ಇರುವ ಮುಖ್ಯ ರಸ್ತೆ ಬಳಿ ಸುಮಾರು 40ಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆ ನಡೆಸಲು ಆರಂಬಿಸಿದರು. ಪೆÇಲೀಸರು…
Author: UllalaVani
ಉಳ್ಳಾಲ: ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ಇಂದು ಸಂಜೆ ನಡೆದಿದೆ. ವಿಚಾರ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿ ತೋಟದ ಮಾಲೀಕನೇ ಕೋಣವನ್ನು ಬೇರೆಯವರ ಮೂಲಕ ಹತ್ಯೆ ನಡೆಸಿರುವುದಾಗಿ ಆರೋಪಿಸಿದ್ದಾರೆ.ಬಲ್ಯ ಎಂಬಲ್ಲಿರುವ ಜಯರಾಮ ಶೆಟ್ಟಿ ಎಂಬವರ ತೋಟದ ಬಳಿ ಕೃತ್ಯ ನಡೆದಿದೆ. ಕೋಣದ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಕಡಿದ ಸ್ಥಿತಿಯಲ್ಲಿದ್ದು, ರಕ್ತಸ್ರಾವ ಆಗಿ ಕೋಣ ಸತ್ತು ಬಿದ್ದಿದೆ. ಈ ಬಗ್ಗೆ ಸ್ಥಳೀಯರು ಗಮನಿಸಿ ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಸ್ಥಳಕ್ಕೆ ಬಂದಾಗ ಕೃತ್ಯ ನಡೆದ ಸ್ಥಳದ ಬಳಿ ಆಕ್ಸೆಸ್ ಸ್ಕೂಟರ್ ಪತ್ತೆಯಾಗಿದೆ. ಕೃತ್ಯ ನಡೆಸಿ ಆರೋಪಿಗಳು ಸ್ಕೂಟರನ್ನು ಬಿಟ್ಟು ಪರಾರಿಯಾಗಿದ್ದಾರೆ. ಅಲ್ಲದೆ ತೋಟಕ್ಕೆ ನುಗ್ಗುತ್ತಿದ್ದ ಕೋಣವನ್ನು ಜಯರಾಮ ಶೆಟ್ಟಿ ಎಂಬವರು ಬೇರೆಯವರ ಮುಖೇನ ಹತ್ಯೆ ನಡೆಸಿದ್ದಾರೆ ಎಂದು ಹಿಂದೂ ಸಂಘಟನೆಯ ಅರ್ಜುನ್ ಮಾಡೂರು ಉಳ್ಳಾಲ ಠಾಣಾಧಿಕಾರಿ ಸಂದೀಪ್ ಎಸ್. ಅವರಲ್ಲಿ…
ಉಳ್ಳಾಲ: ಮೀನುಗಾರಿಕಾ ದೋಣಿಯಿಂದ ಎಸೆಯಲ್ಪಟ್ಟ ಮೀನುಗಾರನನ್ನು ಐವರ ತಂಡ ರಕ್ಷಿಸಿರುವ ಘಟನೆ ಉಳ್ಳಾಲ ಅಳಿವೆಬಾಗಿಲು ಸಮೀಪ ಇಂದು ನಡೆದಿದೆ.ಬೆಂಗ್ರೆ ನಿವಾಸಿ ನವಾಝ್ (೩೫) ರಕ್ಷಣೆಗೊಳಗಾದವರು. ಓಷಿಯನ್ ಬ್ರೀಝ್ ದೋಣಿಯಲ್ಲಿದ್ದ ಉಳಿಯ ನಿವಾಸಿ ಪ್ರೇಮ್ ಪ್ರಕಾಶ್ ಡಿಸೋಜ, ಅನಿಲ್ ಮೊಂತೇರೊ, ಸೂರ್ಯ ಪ್ರಕಾಶ್ ಡಿಸೋಜ ಹಾಗೂ ಬೆಂಗ್ರೆ ನಿವಾಸಿ ರಿತೇಶ್ ಮತ್ತು ಅಜಿತ್ ಎಂಬವರು ರಕ್ಷಿಸಿದವರಾಗಿದ್ದಾರೆ. ಘಟನೆ ವಿವರ: ಆ.೨೭ ರಂದು ಬೆಳಿಗ್ಗೆ ನಾಡದೋಣಿ ಮೀನುಗಾರಿಕೆಯವರು ಸಮುದ್ರದಲ್ಲಿ ಬಲೆ ಹಾಕಿ ವಾಪಸ್ಸಾಗಿದ್ದರು. ಏಡಿ ಸಿಗುವ ಸಮಯವಾಗಿದ್ದರಿಂದಾಗಿ ಬಲೆ ಹಾಕಲಾಗಿತ್ತು. ಇಂದು ಬೆಳಿಗ್ಗೆ ಬಹುತೇಕ ದೋಣಿಯವರು ಹಾಕಿರುವ ಬಲೆಯನ್ನು ತೆಗೆಯಲು ಸಮುದ್ರಕ್ಕೆ ತೆರಳಿದ್ದರು. ಆದರೆ ಭಾರೀ ಗಾಳಿ ಬೀಸುತ್ತಿದ್ದ ಹಿನ್ನೆಲೆಯಲ್ಲಿ ಹಲವು ದೋಣಿಗಳು ತೆರಳದೇ ಉಳಿದಿತ್ತು. ಆದರೆ ಹೋದಂತಹ ದೋಣಿಯೊಂದು ಬಲೆ ತೆಗೆದು ವಾಪಸ್ಸಾಗುವಾಗ ಅಳಿವೆಬಾಗಿಲು ಸಮೀಪ ಕಲ್ಲುಗಳ ಮಧ್ಯೆಯಿಂದ ಒಳಬರುವ ಸಂದರ್ಭ ಭಾರೀ ಗಾಳಿಯೊಂದು ಅಪ್ಪಳಿಸಿದಾಗ ಮೀನುಗಾರಿಕಾ ದೋಣಿಯಲ್ಲಿದ್ದ ನವಾಝ್ ಎಂಬವರು ಸಮುದ್ರಕ್ಕೆ ಬಿದ್ದಿದ್ದಾರೆ. ಆದರೆ ಅಲೆಗಳ ಅಪ್ಪಳಿಸುವಿಕೆಗೆ ದೋಣಿ ನಿಲ್ಲಿಸಲಾಗದೆ ಮೀನುಗಾರರು…
UN networks ಉಳ್ಳಾಲ: ಮಂಗಳೂರು ನಗರ ಪೊಲೀಸ್ ಅಧಿಕಾರಿಗಳಿಂದ ‘ತುರ್ತು ಸ್ಪಂದನ ಬೆಂಬಲ ವ್ಯವಸ್ಥೆ’ (ಇಆರ್‌ಎಸ್‌ಎಸ್)ನ 112 ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ದಿನವಿಡೀ ಆಯೋಜಿಸಲಾಗಿರುವ ‘ಮಹಿಳಾ ಸುರಕ್ಷತೆಗಾಗಿ ಒಂದು ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಒಂದು ಗಂಟೆಯೊಳಗೆ ಡಿಸಿಪಿ ಹರಿರಾಂ ಶಂಕರ್ ನೇತೃತ್ವದ ತಂಡ ಉಳ್ಳಾಲ ಠಾಣಾ ವ್ಯಾಪ್ತಿಯ ಉಳಿಯ ಹಿರಿಯ ನಾಗರಿಕರೋರ್ವರ ಕರೆಗೆ 12 ನಿಮಿಷಗಳಲ್ಲಿ ತಲುಪಿ, ಸ್ಪಂಧಿಸಿ ಸಮಸ್ಯೆ ಬಗೆಹರಿಸಿದ್ದಾರೆ. ಭಾರತೀಯ ಸೇನೆಯ ನಿವೃತ್ತ ಸೈನಿಕರು ಹಿರಿಯರಾಗಿರುವ ಉಳ್ಳಾಲ ಉಳಿಯ ನಿವಾಸಿ ಶೇಸಪ್ಪ ಎಂಬವರು ಇಆರ್ ಎಸ್ಎಸ್ ನ 112 ಸಹಾಯವಾಣಿಗೆ ಕರೆ ಮಾಡಿ ಸ್ಥಳೀಯರಿಂದ ತೊಂದರೆಯುಂಟಾಗುತ್ತಿರುವ ಕುರಿತು ದೂರು ನೀಡಿದ್ದರು. ಇದಕ್ಕೆ ತಕ್ಷಣ ಸ್ಪಂಧಿಸಿ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಹೊಯ್ಸಳ ದಳದ ವಾಹನ ಉಳಿಯ ಪ್ರದೇಶಕ್ಕೆ ತೆರಳಿದೆ. ಅಲ್ಲಿ ದೂರುದಾರರ ಮಾಹಿತಿ ಪಡೆದು, ತೊಂದರೆಯುಂಟು ಮಾಡುತ್ತಿರುವವರ ಕುರಿತು ವಿಚಾರಣೆ ನಡೆಸಿ ಅವರಿಗೆ ಎಚ್ಚರಿಕೆ ನೀಡಿ, ಸಮಸ್ಯೆಯನ್ನು ಬಗೆಹರಿಸಲಾಗಿದೆ.…
UN networks ಉಳ್ಳಾಲ: ಡಬ್ಬದಲ್ಲಿ ಹಣವನ್ನು ಕೂಡಿಟ್ಟು , ಸಮಾಜಕ್ಕೆ ಸೌಹಾರ್ದದ ಸಂದೇಶ ಹಾಗೂ ಸಾಯುವ ಮುನ್ನ ಅನಿಸಿದ್ದನ್ನು ಸಾಧಿಸು ಅನ್ನುವ ಉದ್ದೇಶವನ್ನು ಮುಂದಿಟ್ಟು ಕೇರಳದ ಹವ್ಯಾಸಿ ಬೈಕ್ ರೈಡರ್‌ಗಳ ಒಂಭತ್ತು ಮಂದಿಯ ತಂಡ ಕಲ್ಲಿಕೋಟೆಯಿಂದ – ನೇಪಾಳ ಪ್ರವಾಸವನ್ನು ಆರಂಭಿಸಿದೆ. ಆ.೨೭ ರಂದು ಪ್ರವಾಸವನ್ನು ಆರಂಭಿಸಿದ ತಂಡ ಇಂದು ದೇರಳಕಟ್ಟೆಯನ್ನು ತಲುಪಿದೆ. ಅಲ್ಲಿಂದ ಐದು ಬೈಕುಗಳಲ್ಲಿ ಪ್ರವಾಸ ಮುಂದುವರಿಸಿದ ತಂಡ ಇಂದು ಗೋಕರ್ಣ ತಲುಪಿ ಅಲ್ಲೇ ಉಳಿಯಲಿದೆ. ಕೋಝಿಕ್ಕೋಡ್, ಮಲಪ್ಪುರಂ, ತಿರುವನಂತಪುರಂ ನಿವಾಸಿಗಳಾದ ಸಂಶುದ್ದೀನ್, ಬಾಷಿತ್, ಪ್ರಷೀಬ್, ಸಾಹಿರ್ ಬಾಬು, ಮುನವ್ವಿರ್, ಶಫೀಖ್, ಸುಹೈಬ್ ಅಖ್ತರ್, ಜ್ಯಾಕ್ಸನ್ ಥಾಮಸ್ , ಫೈಝಲ್ ದೇರಳಕಟ್ಟೆ ಎಂಬವರ ತಂಡ ಪ್ರಯಾಣ ಆರಂಭಿಸಿದೆ.ಕಾಲೇಜು ಜೀವನದಲ್ಲಿ ಇತರರು ಬೈಕಿನಲ್ಲಿ ಪ್ರಯಾಣಿಸುವುದನ್ನು ಕಂಡು ಪ್ರೇರಣೆಗೊಂಡು ತಾವು ಕೂಡಾ ಬೈಕ್ ಮೂಲಕ ದೇಶ ಸುತ್ತಬೇಕೆಂಬ ಕನಸನ್ನು ಸಾಕಾರಗೊಳಿಸಲು ಪ್ರಯಾಣ ಆರಂಭಿಸಿದ್ದಾರೆ. ಕೋವಿಡ್ ನಿರ್ಭಂಧನೆಗಳು ಇರುವುದರಿಂದ ೭೩ ಗಂಟೆಗಳ ಆರ್ ಟಿಪಿಸಿಆರ್ ವರದಿ ಹಾಗೂ ಎರಡು ವ್ಯಾಕ್ಸಿನ್ ಪಡೆದುಕೊಂಡೇ ಯುವಕರ…
ಉಳ್ಳಾಲ: ಉಳ್ಳಾಲದ ಯುವಕರಿಬ್ಬರು ಒಮಾನ್ ದೇಶದಲ್ಲಿ ಸಮುದ್ರ ವಿಹಾರಕ್ಕೆಂದು ತೆರಳಿದ್ದ ಸಂದರ್ಭ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.ಉಳ್ಳಾಲದ ಅಲೇಕಳ ನಿವಾಸಿ ರಿಜ್ವಾನ್ (25), ಉಳ್ಳಾಲ ಕೋಡಿ ನಿವಾಸಿ ಜಹೀರ್ (25) ಮೃತಪಟ್ಟವರು. ಎರಡು ವರ್ಷದ ಹಿಂದೆ ಉಳ್ಳಾಲದಿಂದ ಒಮಾನ್ ದೇಶಕ್ಕೆ ಉದ್ಯೋಗಕ್ಕಾಗಿ ತೆರಳಿದ್ದ ಇಬ್ಬರು ಯುವಕರು ಅಲ್ಲಿನ ಫಿಶ್ ಮಿಲ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದರು. ಅಲ್ಲಿನ ದುಕ್ಕುಂ ಎಂಬ ಕಡಲ ತೀರಕ್ಕೆ ಶುಕ್ರವಾರ ಸಂಜೆ ವಿಹಾರಕ್ಕೆ ತೆರಳಿದ್ದ ಸಂದರ್ಭ ರಿಜ್ವಾನ್ ಕಡಲಿನ ಅಲೆಯಲ್ಲಿ ಸಿಲುಕಿದ್ದು ಮುಳುಗುತ್ತಿದ್ದಾಗ ಜಹೀರ್ ಆತನ ರಕ್ಷಣೆಗೆ ತೆರಳಿದ್ದಾನೆ. ಈ ವೇಳೆ, ಇಬ್ಬರೂ ಸಮುದ್ರ ನೀರಿನಲ್ಲಿ ಸಿಲುಕಿ ನೀರಾಪಾಲಾಗಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಉಳ್ಳಾಲ ಕೋಡಿ ಜಹೀರ್ ಮೃತದೇಹ ಪತ್ತೆಯಾಗಿದ್ದು, ರಿಜ್ವಾನ್‍ಗಾಗಿ ಶೋಧ ಮುಂದುವರಿದಿದೆ. ಜಹೀರ್‍ಗೆ ಈಗಾಗಲೇ ಮದುವೆ ನಿಶ್ವಯವಾಗಿತ್ತು. ಕೆಲವೇ ದಿನಗಳಲ್ಲಿ ಆತ ತಾಯ್ನಾಡಿಗೆ ಆಗಮಿಸುವ ತಯಾರಿಯಲ್ಲಿದ್ದ ಎಂದು ತಿಳಿದುಬಂದಿದೆ.
UN networks ಉಳ್ಳಾಲ: ಕನ್ನಡಿಗರಲ್ಲಿ ರಾಷ್ಟ್ರೀಯ ಪ್ರಜ್ಞೆ ಮೂಡಿಸುವ ಪ್ರಯತ್ನಗಳಲ್ಲಿ ಡಾ. ನಾರಾಯಣರಾವ್ ಸುಬ್ಬರಾವ್ ಹರ್ಡೀಕರ್‌ರವರನ್ನು ನಿರ್ಲಕ್ಷಿಸುವಂತಿಲ್ಲ. ವೈದ್ಯಕೀಯ ಕ್ಷೇತ್ರದಲ್ಲಿದ್ದರೂ ರಾಷ್ಟ್ರ ನಿರ್ಮಾಣದ ಆಸಕ್ತಿಯೇ ಅವರಲ್ಲಿ ಹೆಚ್ಚಾಗಿತ್ತು. ಆರ್ಯ ಬಾಲಸಭಾ ಎಂಬ ಕ್ಲಬ್ ಕಟ್ಟುವುದರ ಮೂಲಕ ಇಡೀ ರಾಷ್ಟ್ರಕ್ಕೆ ಪ್ರೇರಣೆಯಾದವರು ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ ಹೇಳಿದರು. ಅವರು ತೊಕ್ಕೊಟ್ಟು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ, ಕಾಂಗ್ರೆಸ್ ಸೇವಾದಳ ಹಾಗೂ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರ ಜರಗಿದ ದಿ| ಡಾ. ನಾರಾಯಣರಾವ್ ಸುಬ್ಬರಾವ್ ಹರ್ಡೀಕರ್ ಪುಣ್ಯತಿಥಿಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರುಗಳಾದಟಿ.ಕೆ ಸುಧೀರ್, ಸುರೇಖಾ ಚಂದ್ರಹಾಸ್, ಪುರುಷೋತ್ತಮ ಅಂಚನ್, ಕಿಶೋರ್ ಮುಂಡೋಳಿ, ಸೇವಾದಳದ ನಾಗೇಶ್ ಶೆಟ್ಟಿ ತೊಕ್ಕೊಟ್ಟು ಮೊದಲಾದವರು ಉಪಸ್ಥಿತರಿದ್ದರು.
UN networks ಉಳ್ಳಾಲ: ಉಳ್ಳಾಲದ ಮಾಸ್ತಿಕಟ್ಟೆ ಜಂಕ್ಷನ್ನಿನಲ್ಲಿರುವ ಶುದ್ಧ ನೀರಿನ ವಾಟರ್ ಕಿಯೋಸ್ಕ್ ಯಂತ್ರ ಕ್ಕೆ ಕಾಯಿನ್ ಹಾಕಿದರೂ ನೀರು ಬರುತ್ತಿಲ್ಲ. ಆದರೆ ಯಂತ್ರ ಮಾತ್ರ ಕಾಯಿನ್ ಅನ್ನು ನುಂಗುತ್ತಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಗರೋತ್ಥಾನ-3 ರ ಅನುದಾನದಡಿ ಖಾಸಗಿ ಸಂಸ್ಥೆ ಸಹಭಾಗಿತ್ವದಲ್ಲಿ ಕಳೆದ ವರ್ಷ ಸ್ಥಾಪಿಸಲಾಗಿತ್ತು. ಉತ್ತಮ ಗುಣಮಟ್ಟದ ಯಂತ್ರ ಇದಾಗಿದ್ದು, ವರ್ಷ ಪೂರ್ತಿ ಶುದ್ಧ ನೀರನ್ನು ಜನತೆ ಹಾಕುವ ಹಣಕ್ಕೆ ತಕ್ಕಂತೆ ಪೂರೈಸುತಿತ್ತು. ಆದರೆ ಇದೀಗ ಕೆಲ ದಿನಗಳಿಂದ ಯಂತ್ರ ಕಾಯಿನ್ ಮಾತ್ರ ನುಂಗುತ್ತಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜನರ ತೆರಿಗೆ ಹಣದಲ್ಲಿ ನಿರ್ಮಿಸಲಾದ ಯಂತ್ರ, ಇದೀಗ ಮತ್ತೆ ಜನರ ಹಣವನ್ನು ನುಂಗುತ್ತಿದೆ ಅನ್ನುವ ಸಂದೇಶ ವಾಟ್ಸ್ಯಾಪ್ ಮೂಲಕ ಹರಿದಾಡುತ್ತಿದೆ
UN networks ದೇರಳಕಟ್ಟೆ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿರುವ ಘಟನೆ ಕುತ್ತಾರು ನಿತ್ಯಾನಂದನಗರ ಬಳಿ ಇಂದು ನಡೆದಿದೆ.ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ಹಣ್ಣುಹಂಪಲುಗಳನ್ನು ಸಾಗಾಟ ನಡೆಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರಳಿದೆ. ಟೆಂಪೋದಲ್ಲಿ ಚಾಲಕ ಮಾತ್ರ ಇದ್ದು, ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ,ಅಡ್ಡಿಯುಂಟಾಗಿದ್ದರಸ್ತೆ ಸಂಚಾರವನ್ನು ತೆರವುಗೊಳಿಸಿದ್ದಾರೆ .
UN networks ತಲಪಾಡಿ: ಮಂಗಳೂರು ಪ್ರವೇಶಕ್ಕೆ ನಕಲಿ ನೆಗೆಟಿವ್ ರಿಪೋರ್ಟ್ ತಂದ ನಾಲ್ವರ ನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ಕೇರಳದ ಆದಿಲ್, ಹನಿನ್, ಇಸ್ಮಾಯಿಲ್ ಮತ್ತು ಅಬ್ದುಲ್ ತಮೀಮ್ ಬಂಧಿತರು. ನಾಲ್ವರುಮೊಬೈಲ್ ನಲ್ಲಿ ಎಡಿಟ್ ಮಾಡಿದ್ದ ನಕಲಿ ರಿಪೋರ್ಟ್ ತೋರಿಸಿ ಮಂಗಳೂರು ಪ್ರವೇಶಕ್ಕೆ ಯತ್ನಿಸುವಾಗ ,ಪೊಲೀಸರು ಪರಿಶೀಲನೆ ನಡೆಸಿ ಬಂಧಿಸಿದ್ದಾರೆ.ನಾಲ್ವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

