ಮಂಗಳೂರು, ಆ.4: ಇತ್ತೀಚಿನ ಕೆಲವು ಅಪಘಾತಗಳ ಹಿನ್ನೆಲೆಯಲ್ಲಿ ಅವಳಿ ಜಿಲ್ಲೆಗಳ ಖಾಸಗಿ ಬಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬ್ಯಾನ್ ಮಾಡಬೇಕು ಎಂಬ ಬೇಡಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹೊರತು ಇಡೀ ಖಾಸಗಿ ಬಸ್ ವ್ಯವಸ್ಥೆಯನ್ನು ಗುರಿಯಾಗಿಸಬಾರದು ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘದ ಅಧ್ಯಕ್ಷ ಉಸ್ಮಾನ್ ಅಲ್ತಾಫ್ ಮನವಿ ಮಾಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಖಾಸಗಿ ಬಸ್ ವ್ಯವಸ್ಥೆಗೆ ಸುಮಾರು 100 ವರ್ಷಗಳ ಇತಿಹಾಸವಿದ್ದು, ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು, ಕಾರ್ಮಿಕರು, ಉದ್ಯೋಗಿಗಳು, ವ್ಯಾಪಾರಿಗಳು ಹಾಗೂ ಗ್ರಾಮೀಣ ಪ್ರದೇಶದ ಜನರು ಈ ಸೇವೆಯನ್ನು ಅವಲಂಬಿಸಿದ್ದಾರೆ ಎಂದು ತಿಳಿಸಿದ್ದಾರೆ. ಇಂದಿನ ರಸ್ತೆ ದಟ್ಟಣೆ, ವಾಹನಗಳ ಸಂಖ್ಯೆಯ ಹೆಚ್ಚಳ, ಸ್ಮಾರ್ಟ್ ಸಿಟಿ ಕಾಮಗಾರಿಗಳು, ರಸ್ತೆ ಅಗೆತ ಹಾಗೂ ಟ್ರಾಫಿಕ್ ಸಮಸ್ಯೆಗಳ ನಡುವೆಯೂ ಚಾಲಕರು, ನಿರ್ವಾಹಕರು ಮತ್ತು ಇತರ ಸಿಬ್ಬಂದಿ ಸಮಯ ಪಾಲಿಸಿಕೊಂಡು ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು…
Author: UllalaVani
ಉಳ್ಳಾಲ: ಇಂದಿನ ಯುವ ಜನರು ತಂತ್ರಜ್ಞಾನದಲ್ಲಿ ಮುಂದಿದ್ದರೂ,ನಮ್ಮ ಸಂಸ್ಕೃತಿ,ಸಂಪ್ರದಾಯ ಹಾಗೂ ಜೀವನ ಮೌಲ್ಯಗಳ ಬಗ್ಗೆ ಅರಿವು ಬೆಳೆಸಿಕೊಳ್ಳುವುದು ಅನಿವಾರ್ಯವಾಗಿದೆ.ಯುವ ಪೀಳಿಗೆಯನ್ನು ದೇಶೀಯ ಸಂಸ್ಕೃತಿ,ಸಾಮಾಜಿಕ ಸೇವೆ ಹಾಗೂ ರಾಷ್ಟ್ರಭಕ್ತಿಯ ಚಟುವಟಿಕೆಗಳತ್ತ ಪ್ರೇರೇಪಿಸುವುದು ಪೋಷಕರ ಕರ್ತವ್ಯವಾಗಿದೆಯೆಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮಂಜುಳಾ ರಾವ್ ಅಭಿಪ್ರಾಯಪಟ್ಟರು. ಬಿಜೆಪಿ ಮಂಗಳೂರು ಮಂಡಲ ಮಹಿಳಾ ಮೋರ್ಚಾ ವತಿಯಿಂದ ಕೋಟೆಕಾರುವಿನ ಖಾಸಗಿ ಸಭಾಂಗಣದಲ್ಲಿ ಭಾನುವಾರ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರಗಳ ಅರಿವಿನ ಕೊರತೆ ಕಂಡುಬರುತ್ತಿದೆ.ನಮ್ಮ ಪರಂಪರೆ, ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.ಮಕ್ಕಳಲ್ಲಿ ಬಾಲ್ಯದಿಂದಲೇ ಸಂಸ್ಕೃತಿಯ ಬಗ್ಗೆ ಆಸಕ್ತಿ ಹಾಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಅವರನ್ನು ಸಕ್ರಿಯವಾಗಿ ಭಾಗಿಯಾಗುವಂತೆ ಪ್ರೋತ್ಸಾಹಿಸಬೇಕೆಂದರು.ರಾಜ್ಯ ಮಹಿಳಾ ಮೋರ್ಚಾದ ಕಾರ್ಯದರ್ಶಿ ಕುಮಾರಿ ಶ್ವೇತಾ ಪೂಜಾರಿಯವರು ಆಟಿ ತಿಂಗಳ ಬಗ್ಗೆ ಉಪನ್ಯಾಸ ನೀಡಿದರು.ಮಂಗಳೂರು ಮಂಡಲ ಬಿಎಲ್ಒ ಜಯಶ್ರೀ…
ಕೊಣಾಜೆ: ಸಮಾಜದಲ್ಲಿ ಅಸ್ಪ್ರಶ್ಯತೆ, ಜಾತಿಯತೆ, ಅಸಮಾನತೆ ತುಂಬಿದ್ದ ಬೇರೆ ಬೇರೆ ಕಾಲಘಟ್ಟದಲ್ಲಿ ಸಮಾನತೆಯ ಆಶಯದೊಂದಿಗೆ ಹೋರಾಡಿದವರು ಬಸವಣ್ಣ ಮತ್ತು ನಾರಾಯಣ ಗುರುಗಳು. ಅವರು ಆಧ್ಯಾತ್ಮ, ಸಾಮಾಜಿಕ ಸಾಧನೆಯ ಮೂಲಕ ಇಡೀ ಸಮಾಜವನ್ನು ಪರಿವರ್ತನೆ ಮಾಡಿದ ಯುಗ ಪ್ರವರ್ತಕರಾಗಿದ್ದಾರೆ ಎಂದು ಚಿಂತಕಿ, ಪ್ರಾಧ್ಯಾಪಕರಾದ ಡಾ. ಮೀನಾಕ್ಷಿ ರಾಮಚಂದ್ರ ಅವರು ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ), ಗ್ರಾಮ ಚಾವಡಿ ಇವರ ಸಹಯೋಗದಲ್ಲಿ ನಡೆದ “ವಿಚಾರ ಸಂಕಿರಣ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ನಾರಾಯಾಣ ಗುರು ಹಾಗೂ ಬಸವಣ್ಣ ಅವರಿಬ್ಬರ ಆಧ್ಯಾತ್ಮಿಕ, ಸಾಹಿತ್ಯಿಕ ಹಾಗೂ ಸಮಾಜಮುಖಿ ಚಿಂತನೆಗಳು ಇಂದಿನ ಕಾಲಕ್ಕೂ ಮಾದರಿಯಾಗಿದೆ ಎಂದರು. ಸಮಾರಂಭದಲ್ಲಿ ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಇದರ ಅಧ್ಯಕ್ಷರಾದ ವಿಜೇತ್ ಪಜೀರು ಮಾತನಾಡಿ, ಮಂಗಳೂರು ವಿವಿಯ ನಾರಾಯಣ ಗುರು ಅಧ್ಯಯನ ಕೇಂದ್ರ ಹಾಗೂ ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘವು ಗುರುಗಳ ಆಶಯದಂತೆ ಅನೇಕ…
ಉಳ್ಳಾಲ: ಉಳ್ಳಾಲ ನಗರಸಭೆಯ ಪೌರಾಯುಕ್ತರಾಗಿದ್ದ ಸಂತೋಷ್ ಅವರನ್ನು ಉಡುಪಿ ನಗರಸಭೆಯ ಪೌರಾಯುಕ್ತರಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ಸುಮಾರು ಆರು–ಏಳು ತಿಂಗಳಿನಿಂದ ಉಳ್ಳಾಲ ನಗರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಸಲ್ಲಿಸಿದ್ದ ಸಂತೋಷ್ ಅವರ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಪೂರ್ಣಾವಧಿಯ ಪೌರಾಯುಕ್ತರ ನೇಮಕಕ್ಕೆ ಸ್ಥಳೀಯ ನಾಗರಿಕರು ಆಗ್ರಹ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಶಾಸಕ ಯು.ಟಿ. ಖಾದರ್ ಅವರ ಶಿಫಾರಸಿನ ಮೇರೆಗೆ ಸಂತೋಷ್ ಅವರನ್ನು ಉಳ್ಳಾಲಕ್ಕೆ ನೇಮಕ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ನಗರಸಭೆಯ ಆಡಳಿತದಲ್ಲಿ ಕಡತಗಳನ್ನು ಸಮಗ್ರವಾಗಿ ಪರಿಶೀಲಿಸಿ ನಂತರವೇ ಅನುಮೋದನೆ ನೀಡುತ್ತಿದ್ದ ಅವರು, ಟ್ಯಾಂಕರ್ ನೀರು ಸರಬರಾಜು ಟೆಂಡರ್ ಪ್ರಕ್ರಿಯೆಯಲ್ಲಿ ಕೆಲ ಮಾನದಂಡಗಳನ್ನು ಅಳವಡಿಸಿದ ಪರಿಣಾಮ ನಗರಸಭೆಗೆ ಅಂದಾಜು ₹50 ಲಕ್ಷದಷ್ಟು ಉಳಿತಾಯವಾಗಿತ್ತು ಎಂದು ಮೂಲಗಳು ತಿಳಿಸಿವೆ. ಕಟ್ಟಡ ಹಾಗೂ ವಾಣಿಜ್ಯ ಪರವಾನಗಿ ಪ್ರಕ್ರಿಯೆಯಲ್ಲಿ ಕಂಡುಬಂದ ಕೆಲವು ನ್ಯೂನತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದ ಅವರು, ಕಾಮಗಾರಿಗಳ ಬಿಲ್‌ಗಳನ್ನು ಸ್ಥಳ ಪರಿಶೀಲನೆಯ ಬಳಿಕವೇ ಅನುಮೋದಿಸುವ ಪದ್ಧತಿಯನ್ನು ಅನುಸರಿಸುತ್ತಿದ್ದರು ಎನ್ನಲಾಗಿದೆ. ಅಲ್ಲದೆ,…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಯುವ ಕಾಂಗ್ರೆಸ್ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ ಯುವ ಕಾಂಗ್ರೆಸ್ ಗುರುಪುರ ಬ್ಲಾಕ್ ಸಮಿತಿ ವತಿಯಿಂದ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರ ಜನ್ಮದಿನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಇಬ್ರಾಹಿಂ ನವಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಮತ್ತು ಹಸಿರು ಭಾರತ ನಿರ್ಮಾಣದ ಸಂದೇಶವನ್ನು ಸಾರುವ ಉದ್ದೇಶದಿಂದ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ವೀಕ್ಷಕರು ಹಾಗೂ ಶಾಸಕರಾದ ಜಯಂತ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಯುವ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಗಿರೀಶ್ ಅಲ್ವಾ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಬ್ ಕೋಟ್ಯಾನ್, ಯುವ ಕಾಂಗ್ರೆಸ್ ಗುರುಪುರ ಬ್ಲಾಕ್ ಅಧ್ಯಕ್ಷ ಮುಫೀದ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತೌಫೀಕ್, ನಿಯಾಜ್ ಅಡ್ಡೂರು ಸೇರಿದಂತೆ ಪಕ್ಷದ ಮುಖಂಡರು,…
ಉಳ್ಳಾಲ;ಸರಕಾರದಿಂದ ಸಿಗುವ ಸವಲತ್ತುಗಳನ್ನ ಜನಸಾಮಾನ್ಯರಿಗೆ ತಲುಪಿಸುವುದೇ ಸ್ಥಳೀಯಾಡಳಿತಗಳ ಮೊದಲ ಆದ್ಯತೆಯಾಗಿರಬೇಕು.ಸವಲತ್ತುಗಳನ್ನ ಪಡೆದುಕೊಂಡಿರುವವರು ಸ್ವಾವಲಂಬನೆಯ ಬದುಕು ಕಟ್ಟಬೇಕಿದೆ.ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳಿಂದ ಜನರ ಎಲ್ಲಾ ಸಮಸ್ಯೆಗಳನ್ನ ಪರಿಹರಿಸಲು ಸಾಧ್ಯವಿಲ್ಲ.ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟರೆ ಮಾತ್ರ ನಿಮ್ಮ ಮನೆಯ ಎಲ್ಲಾ ಸಮಸ್ಯೆಗಳು ಶಮನವಾಗಲು ಸಾಧ್ಯವಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ.ಖಾದರ್ ಹೇಳಿದರು. ಜಿಲ್ಲಾ ನಗರಾಭಿವೃದ್ಧಿ ಕೋಶ,ಉಳ್ಳಾಲ ನಗರಸಭೆ,ಸೋಮೇಶ್ವರ ಪುರಸಭೆ,ಕೋಟೆಕಾರು ಪಟ್ಟಣ ಪಂಚಾಯತ್ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಂಯುಕ್ತ ಆಶ್ರಯದಲ್ಲಿ ಸೋಮೇಶ್ವರ ಉಚ್ಚಿಲದ ಖಾಸಗಿ ಸಭಾಂಗಣದಲ್ಲಿ ಗುರುವಾರ ನಡೆದ ಅಮೃತ್ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ಯೋಜನೆ ಹಾಗೂ ದೇವರಾಜ ಅರಸು ನಿಗಮದ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಸರಕಾರದಿಂದ ಸಿಗುವ ವಿವಿಧ ಸವಲತ್ತುಗಳಿಗೆ ಅರ್ಜಿ ಹಾಕಿದವರಿಗೆ ಮುಂದಿನ ದಿನಗಳಲ್ಲಿ ನಡೆಯಲಿರುವ ಹೋಬಳಿ ಮಟ್ಟದ ಜನಸಂಪರ್ಕ ಸಭೆಯಲ್ಲಿ ಸವಲತ್ತುಗಳನ್ನ ವಿತರಿಸಲಾಗುವುದೆಂದು ಹೇಳಿದರು. ಸೋಮೇಶ್ವರ ಪುರಸಭಾ ಅಧ್ಯಕ್ಷೆ ಕಮಲ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ,ಜಿಲ್ಲಾ…
ಮಂಜೇಶ್ವರ, ಆ.4: ವರ್ಕಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್‌ಟು ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಶಾಲೆಗಳಿಗೆ ಗೌರವಾಭಿನಂದನೆ ಕಾರ್ಯಕ್ರಮವು ಕೊಡ್ಲಮೊಗರುವಿನ ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಳೆದ ಎಸ್‌ಎಸ್‌ಎಲ್‌ಸಿ ಹಾಗೂ ಪ್ಲಸ್‌ಟು ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ ಅತ್ಯುತ್ತಮ ಸಾಧನೆ ಮಾಡಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ ಚಿನ್ನದ ಪದಕ ವಿತರಿಸಿ ಅಭಿನಂದಿಸಿದರು. ಕಾರ್ಯಕ್ರಮವನ್ನು ಕಾಸರಗೋಡು ಲೋಕಸಭಾ ಸದಸ್ಯ ರಾಜ್ ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿ, ವಿದ್ಯಾರ್ಥಿಗಳು ತಮ್ಮೊಳಗಿನ ಪ್ರತಿಭೆಯನ್ನು ಗುರುತಿಸಿ, ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಶ್ರಮಿಸಿದರೆ ಯಶಸ್ಸು ಖಚಿತ ಎಂದು ತಿಳಿಸಿದರು. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ (A+) ಪಡೆದ ಹೈಸ್ಕೂಲು ಹಾಗೂ ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರು. ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷ…
ಬೆಂಗಳೂರು, ಆಗಸ್ಟ್ 4: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಕಿಚ್ಚು ಹೊತ್ತಿಕೊಂಡಿದೆ. ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದು ಅದು ಹುಸಿಯಾದ ಬೆನ್ನಲ್ಲೇ ಹಲವು ಶಾಸಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಕೆಲವರು ಶಾಸಕ ಸ್ಥಾನ ಹಾಗೂ ನಿಗಮ-ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಮತ್ತೊಂದೆಡೆ, ಶಾಸಕರ ಬೆಂಬಲಿಗರು ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ವಿ. ಪಾಟೀಲ್, ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕರು ಹಾಗೂ ಪಕ್ಷದ ನಿಷ್ಠಾವಂತರಿಗೆ ಇದು ಕಾಲವಲ್ಲ ಎಂದು ಅಸಮಾಧಾನ ಹೊರಹಾಕಿರುವ ಅವರು, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬುದು ತಿಳಿದುಬಂದಿದೆ. ಇನ್ನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉದ್ದೇಶಪೂರ್ವಕವಾಗಿಯೇ ತಮಗೆ ಸಚಿವ ಸ್ಥಾನ ತಪ್ಪಿಸಲಾಗಿದೆ ಎಂದು ಆರೋಪಿಸಿರುವ ಅವರು, ಶಾಸಕ ಸ್ಥಾನ…
ಮಂಗಳೂರು/ಉಡುಪಿ, ಆ. 04 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಸೋಮವಾರ ವ್ಯಾಪಕ ಮಳೆಯಾಗಿದ್ದು, ಕೆಲವೆಡೆ ಜನರಿಗೆ ಬಿಸಿಲಿನ ತಾಪದಿಂದ ನಿರಾಳತೆ ನೀಡಿದರೆ, ಇನ್ನೂ ಹಲವೆಡೆ ರಸ್ತೆಗಳು, ಚರಂಡಿಗಳು ಹಾಗೂ ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಉಭಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುಂದಿನ ದಿನಗಳಲ್ಲಿಯೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಉಳ್ಳಾಲ, ತೊಕ್ಕೊಟ್ಟು, ತಲಪಾಡಿ, ಮುಡಿಪು, ಕಲ್ಲಡ್ಕ, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ಸೇರಿದಂತೆ ಹಲವೆಡೆ ಸೋಮವಾರ ಬೆಳಗ್ಗಿನ ವೇಳೆಯಲ್ಲಿ ಉತ್ತಮ ಮಳೆಯಾಗಿದೆ. ಮಧ್ಯಾಹ್ನದ ಬಳಿಕ ಮಳೆಯ ತೀವ್ರತೆ ಕಡಿಮೆಯಾಗಿ ಸಾಧಾರಣ ಮಳೆಯಾಯಿತು.ಹವಾಮಾನ ಇಲಾಖೆ ಆಗಸ್ಟ್ 9 ರವರೆಗೆ ಜಿಲ್ಲೆಯಲ್ಲಿ ಬಿರುಗಾಳಿಯೊಂದಿಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಮುಂದುವರಿಸಿದೆ.ಘಟ್ಟ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಕ್ಕಿ ಹರಿದ ನೇತ್ರಾವತಿ ನದಿಯ ನೀರಿನ ಮಟ್ಟ ಸೋಮವಾರ…
ಕೊಣಾಜೆ: ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೂಹಾಕುವಕಲ್ಲಿನಲ್ಲಿರುವ ನವಗ್ರಾಮ ಸೈಟ್ ನಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿದ್ದ ಗುಡಿಸಲುಗಳನ್ನು ಪೊಲೀಸ್ ಭದ್ರತೆಯೊಂದಿಗೆ ಪಂಚಾಯತ್ ಅಧಿಕಾರಿಗಳು ಸೋಮವಾರ ತೆರವುಗೊಳಿಸಿದರು. ಬಾಳೆಪುಣಿ ಪಂಚಾಯತ್ ನ ಹೂಹಾಕುವಕಲ್ಲು ಸಮೀಪದ ನವಗ್ರಾಮ ಸೈಟ್ ನಲ್ಲಿ ಹಲವಾರು ಮನೆಗಳಿದ್ದು , ಕೆಲವು ತಿಂಗಳ ಹಿಂದೆ ಕೆಲವರು ನವಗ್ರಾಮ ಸೈಟ್ ನ ಪಂಚಾಯತ್ ಜಮೀನಿನಲ್ಲಿ ಕೆಲವರು ಅನಧಿಕೃವಾಗಿ ಗುಡಿಸಲುಗಳನ್ನು ನಿರ್ಮಾಣ ಮಾಡುತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಮಾಹಿತಿ ಪಡೆದ ಪಂಚಾಯತ್ ಅಧಿಕಾರಿಗಳು ಸಂಬಂಧಪಟ್ಟವರಿಗೆ ಎಚ್ಚರಿಕೆ ನೀಡಿ ನಿರ್ಮಾಣ ಮಾಡದಂತೆ ತಿಳಿಸಿದ್ದರು ಕೂಡಾ ಐದಾರು ಗುಡಿಸಲುಗಳು ಈ ಸ್ಥಳದಲ್ಲಿ ನಿರ್ಮಾಣಗೊಂಡಿದ್ದವು ಎಂದು ತಿಳಿದು ಬಂದಿದೆ.ಬಾಳೆಪುಣಿ ಗ್ರಾಮ ಪಂಚಾಯತ್ ಅಧಿಕಾರಿಗಳು ಪಂಚಾಯತ್ ನ ಸಾಮಾನ್ಯ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಸೋಮವಾರದಂದು ಕೊಣಾಜೆ ಪೊಲೀಸರ ಭದ್ರತಾ ಸಹಕಾರದೊಂದಿಗೆ ಎಲ್ಲಾ ಗುಡಿಸಲುಗಳನ್ನು ತೆರವುಗೊಳಿಸಿದ್ದಾರೆ.ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಪಿ, ಕಾರ್ಯದರ್ಶಿ ಆಯಿಶಾಬಾನು, ಸಿಬ್ಬಂದಿಗಳಾದ ಸದಾನಂದ, ರಂಜಿತ್ ಮೊದಲಾದವರು ಉಪಸ್ಥಿತರಿದ್ದರು. ಪಂಚಾಯತ್ ನ…

