Author: UllalaVani

Kannada News From Coastal Karnataka

ಬಂಟ್ವಾಳ, ಜೂ. 11: ಕರ್ತವ್ಯದಲ್ಲಿದ್ದಾಗಲೇ ಮೆಸ್ಕಾಂ ಉದ್ಯೋಗಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಶಂಭೂರು ಎಂಬಲ್ಲಿ ನಡೆದಿದೆ. ಮೂಲತಃ ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ ( 55) ಮೃತಪಟ್ಟ ವ್ಯಕ್ತಿ. ಅವರು ಮೆಸ್ಕಾಂ ಪಾಣೆಮಂಗಳೂರು ಶಾಖೆಯಲ್ಲಿ ಸಹಾಯಕ ಮೆಕಾನಿಕ್ ಹುದ್ದೆಯನ್ನು ನಿರ್ವಹಿಸುತ್ತಿದ್ದರು. ಬುಧವಾರ ಮಧ್ಯಾಹ್ನ ವೇಳೆ ಶಂಭೂರು ಸಮೀಪದ ಕುಂದಾಯಗೋಳಿ ಎಂಬಲ್ಲಿ ವಿದ್ಯುತ್ ಕಂಬವೊಂದು ತುಂಡಾಗಿ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಕಂಬವನ್ನು ಅಳವಡಿಸಿ ವಿದ್ಯುತ್ ತಂತಿಗಳನ್ನು ಎಳೆದು ಸಂಪರ್ಕ ನೀಡಿದ್ದರು.ಅ ಬಳಿಕ ಅಲ್ಲಿಂದ ಇನ್ನೊಂದು ಕಡೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗೆ ಕರೆ ಬಂದ ಕಾರಣ ಇಲಾಖೆಯ ಸಿಬ್ಬಂದಿ ಜೊತೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕುಂದಾಯಗೋಳಿ ಎಂಬಲ್ಲಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ತರಲಾಯಿತು. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿದಾಗ ಅವರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read More

ಬೆಂಗಳೂರು: ‘ಸಾರ್ವಜನಿಕ ಸ್ಥಳಗಳಲ್ಲಿ ಪ್ಲಾಸ್ಟಿಕ್ ಶುಭಾಶಯ ಪತ್ರಗಳು, ಪ್ಲೆಕ್ಸ್ ಬ್ಯಾನರ್‌ಗಳು, ಜಾತ್ರೆ ಹಾಗೂ ರಾಜಕೀಯ ನಾಯಕರ ಬೂಟಾಟಿಕೆ ಅಭಿನಂದನಾ ಬ್ಯಾನರ್‌ಗಳನ್ನು ಹಾಕುವುದು ಕಾನೂನಾತ್ಮಕ ತಪ್ಪು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ಸಾರ್ವಜನಿಕವಾಗಿ ಘೋಷಿಸಿದ್ದರು. ಜೊತೆಗೆ, ಅಂತಹ ಬ್ಯಾನರ್‌ಗಳನ್ನು ಹಾಕಿದವರ ಮೇಲೆ ಒಂದು ಲಕ್ಷ ರೂಪಾಯಿ ದಂಡ ವಿಧಿಸುವುದಾಗಿ ಎಚ್ಚರಿಕೆಯೂ ನೀಡಿದ್ದರು. ಆದರೆ ಮುಖ್ಯಮಂತ್ರಿಗಳ ಈ ಧ್ವನಿಯು ಇನ್ನೂ ಕಾನೂನಿನ ರೂಪ ಪಡೆಯದಿರುವುದು ಪರಿಸರ ಪ್ರೇಮಿಗಳು ಮತ್ತು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಸಾರ್ವಜನಿಕವಾಗಿ ಮುಖ್ಯಮಂತ್ರಿಗಳು ನೀಡುವ ಹೇಳಿಕೆಯೇ ಸರ್ಕಾರದ ಅಧಿಕೃತ ನಿಲುವಾಗಿರುತ್ತದೆ. ಆದರೆ ಅದು ಕಾನೂನು ಅಥವಾ ಸರ್ಕಾರಿ ಆದೇಶವಾಗಬೇಕಾದರೆ ನಿಗದಿತ ಆಡಳಿತ ಪ್ರಕ್ರಿಯೆಯನ್ನು ಪೂರೈಸಬೇಕಾಗುತ್ತದೆ. ರಾಜ್ಯದಾದ್ಯಂತ ಪರಿಸರ ಕಾರ್ಯಕರ್ತರು ಮತ್ತು ನಾಗರಿಕರು ಈ ಹೇಳಿಕೆಗೆ ಕ್ರಿಯಾತ್ಮಕ ರೂಪ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಕಾನೂನು ರಚನೆಯ ಹಂತಗಳು ಈ ವಿಷಯದಲ್ಲಿ ಆಡಳಿತ ವ್ಯವಸ್ಥೆಯು ಕೆಳಕಂಡ ಹಂತಗಳನ್ನು ಅನುಸರಿಸಬೇಕಾಗಿದೆ: 1 ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯ ಪತ್ರ ಮೊದಲ ಹಂತದಲ್ಲಿ ಮುಖ್ಯಮಂತ್ರಿಗಳ ಆಪ್ತ…

Read More

ಮಂಗಳೂರು, ಜೂನ್ 11: ಉರ್ವಾದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಉರ್ವಾ ಇಮ್ಯಾಕ್ಯುಲೇಟ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಶಾಲೆಯ ಸಂಚಾಲಕರು ಹಾಗೂ ಉರ್ವಾ ಇಮ್ಯಾಕ್ಯುಲೇಟ್ ಚರ್ಚಿನ ಧರ್ಮಗುರುಗಳಾದ ವಂ. ಗುರು ಬೆಂಜಮಿನ್ ಪಿಂಟೋ ಅವರು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿ, “ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದಕ್ಷತೆಯಿಂದ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಶಾಲೆ ಹಾಗೂ ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಾಗಲಿ” ಎಂದು ಹಾರೈಸಿದರು. ಶಾಲೆಯ ಮುಖ್ಯ ಶಿಕ್ಷಕರಾದ ಅಲೋಶಿಯಸ್ ಡಿಸೋಜಾ ಅವರು ಮಾತನಾಡಿ, ಆಯ್ಕೆಯಾದ ನಾಯಕರು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ, ಶಿಸ್ತು ಮತ್ತು ಜವಾಬ್ದಾರಿಯುತವಾಗಿ ನಿರ್ವಹಿಸಬೇಕೆಂದು ತಿಳಿಸಿದರು. ಶಾಲಾ ನಾಯಕನಾಗಿ 10ನೇ ತರಗತಿ ‘ಬಿ’ ವಿಭಾಗದ ಹರ್ಷವರ್ಧನ್ ಪ್ರತಿಜ್ಞಾವಿಧಿ ಬೋಧಿಸಿದರು. ಶಾಲಾ ಉಪನಾಯಕಿಯಾಗಿ 9ನೇ ತರಗತಿ ‘ಎ’ ವಿಭಾಗದ ಜೈನ್ ಜೆರುಶಾ ಪಿಂಟೊ ಹಾಗೂ ವಿರೋಧ ಪಕ್ಷದ…

Read More

ಉಳ್ಳಾಲ: ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸಕಾರದ ಮುಖ್ಯಸ್ಥ ಬದಲಾದರೂ ಜಾಯಮಾನ ಬಾದಲಾಗಿಲ್ಲ. ಕಾಂಗ್ರೆಸ್‌ನ ಕೆಲವು ನಾಯಕರಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ದೂರುವುದು ರೂಢಿಯಾಗಿದೆ. ಆರ್‌ಎಸ್‌ಎಸ್‌ ಗಂಧಗಾಳಿ ಗೊತ್ತಿಲ್ಲದ ಗೃಹಸಚಿವ ಪ್ರಿಯಾಂಕ್‌ ಖರ್ಗೆ ಅದರ ನೋಂದಣಿ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಅವರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಬುದ್ದಿಹೇಳಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್‌ ಕುಂಪಲ ಒತ್ತಾಯಿಸಿದ್ದಾರೆ. ಆರ್‌ಎಸ್‌ಎಸ್‌ ಜಗತ್ತಿನ ವಿವಿಧ ದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ. ಜಗತ್ತಿನ ಯಾವುದೇ ದೇಶವೂ ಅದರ ಬಳಿ ನೊಂದಾವಣೆ ಕೇಳಿಲ್ಲ. ರಾಜ್ಯದ ಗೃಹ ಸಚಿವರು ಇದನ್ನು ತಿಳಿದುಕೊಳ್ಳಬೇಕು. ಗೃಹಸಚಿವ ಹುದ್ದೆ ಸಿಕ್ಕಿರುವ ಅಮಲಿನಲ್ಲಿ ಪ್ರಿಯಾಂಕ ಖರ್ಗೆ ಸಂಘದ ಬಗ್ಗೆ ಮಾತನಾಡುವುದು ಮುಸ್ಲಿಂ ತುಷ್ಠೀಕರಣವಲ್ಲದೇ ಮತ್ತೇನಲ್ಲ ಎಂದರು.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲ ಕಡೆಗಳಲ್ಲಿ ರಸ್ತೆ ವಿಭಜಕಗಳ ಮೇಲೆ ಆಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಸೂಚನೆ ನೀಡಿದ್ದಾರೆ. ಮಂಗಳೂರು ಮಹಾನಗರಪಾಲಿಕೆ, ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿ ವ್ಯಾಪ್ತಿಯ ರಸ್ತೆಗಳ ವಿಭಜಕಗಳ ಮೇಲೆ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ಆಳವಡಿಸಲಾಗಿದೆ. ಇದರಿಂದ ರಸ್ತೆ ದಾಡುವವರು, ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಕೆಲ ಕಡೆಗಳಲ್ಲಿ ಅಪಘಾತಕ್ಕೂ ಕಾರಣವಾಗುತ್ತಿದೆ. ಈ ಬಗ್ಗೆ ಈಗಾಗಲೇ ಸಾಕಷ್ಟು ದೂರು ಬಂದಿದ್ದು, ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲೂ ಚರ್ಚೆ ನಡೆದಿದೆ. ತಕ್ಷಣ ಎಲ್ಲ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೆಳ್ಳಲಾಗುವುದು ಎಂದು ತಿಳಿಸಿದ್ದಾರೆ.

Read More

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 4,399 ದಿನಗಳ ಯಶಸ್ವಿ ಆಡಳಿತ ಹಾಗೂ ದೇಶದ ದೀರ್ಘಾವಧಿಯ ಚುನಾಯಿತ ಪ್ರಧಾನಿ ಎಂಬ ಮೈಲಿಗಲ್ಲು ಸ್ಥಾಪನೆಯಾದ ಹಿನ್ನೆಲೆಯಲ್ಲಿ, ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಸಹಿತ ದೇಶವನ್ನು ಮುನ್ನಡೆಸಲು ಇನ್ನಷ್ಟು ಶಕ್ತಿ ನೀಡಲಿ ಎಂಬ ಪ್ರಾರ್ಥನೆಯೊಂದಿಗೆ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇತಿಹಾಸ ಪ್ರಸಿದ್ಧ ಕದ್ರಿ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ ನಡೆಯಿತು. ಈ ವೇಳೆ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವರ್, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಪ್ರಮುಖರಾದ ಸುಧೀರ್ ಶೆಟ್ಟಿ ಕಣ್ಣೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಹಾಗೂ ಆರೋಗ್ಯ ಸಿಬ್ಬಂದಿಯ ಕೊರತೆಯನ್ನು ನಿವಾರಿಸಲು ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. 1,280 ಎಂಬಿಬಿಎಸ್ ವೈದ್ಯರು, 924 ತಜ್ಞ ವೈದ್ಯರು, 892 ನರ್ಸ್‌ಗಳು ಸೇರಿದಂತೆ 3,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಚಾಲನೆ ನೀಡಿರುವುದು ಸಾರ್ವಜನಿಕ ಆರೋಗ್ಯ ಸೇವೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸ್ವಾಗತಾರ್ಹ ಬೆಳವಣಿಗೆಯಾಗಿದೆ. ರಾಜ್ಯದ ಯಾವುದೇ ಪ್ರಾಥಮಿಕ ಆರೋಗ್ಯ ಕೇಂದ್ರ (PHC), ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಉಂಟಾಗಬಾರದು ಎಂಬ ದೃಷ್ಟಿಯಿಂದ ಈ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶಗಳಿಂದ ಹಿಡಿದು ನಗರ ಪ್ರದೇಶಗಳವರೆಗೆ ಪ್ರತಿಯೊಬ್ಬ ನಾಗರಿಕನಿಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಬೇಕು ಎಂಬ ಉದ್ದೇಶ ಇದರ ಹಿಂದಿದೆ. ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಕೊರತೆಯಿಂದ ಅನೇಕ ಆಸ್ಪತ್ರೆಗಳು ವರ್ಷಗಳಿಂದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗುವುದು, ತಜ್ಞ ವೈದ್ಯರ ಲಭ್ಯತೆ ಹೆಚ್ಚುವುದು ಹಾಗೂ…

Read More

ಮಂಗಳೂರು ನಗರದಲ್ಲಿ ಇತ್ತೀಚೆಗೆ ನಡೆದ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಮತ್ತು ಮೂವರು ಡ್ರಗ್ ಪೆಡ್ಲರ್‌ಗಳ ಬಂಧನದ ಘಟನೆ ಸಮಾಜವನ್ನು ಮತ್ತೊಮ್ಮೆ ಆತಂಕಕ್ಕೀಡು ಮಾಡಿದೆ. ಪೊಲೀಸರು ಎಂಡಿಎಂಎ (MDMA) ಸೇರಿದಂತೆ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿರುವುದು ಶ್ಲಾಘನೀಯ ಕಾರ್ಯ. ಆದರೆ ಪ್ರತಿಯೊಂದು ಬಂಧನದ ನಂತರವೂ ಸಮಾಜದ ಮುಂದೆ ಒಂದು ಮೂಲಭೂತ ಪ್ರಶ್ನೆ ಉಳಿಯುತ್ತದೆ. ಯುವಕರು ಮತ್ತು ವಿದ್ಯಾರ್ಥಿಗಳು ಮಾದಕ ವಸ್ತುಗಳ ಬಲೆಗೆ ಬೀಳುತ್ತಿರುವುದನ್ನು ತಡೆಯಲು ಸರ್ಕಾರ, ಶಿಕ್ಷಣ ಇಲಾಖೆ ಮತ್ತು ಸಮಾಜ ಯಾವ ಮಟ್ಟದಲ್ಲಿ ಕೆಲಸ ಮಾಡುತ್ತಿದೆ? ಜಪಾನಿನ ಆಡಳಿತ ವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆಯ ಮೂಲ ಕಾರಣವನ್ನು ಪತ್ತೆಹಚ್ಚಲು “5 WHY” ಎಂಬ ಸೂತ್ರವನ್ನು ಬಳಸಲಾಗುತ್ತದೆ. ಅಂದರೆ ಒಂದು ಸಮಸ್ಯೆಗೆ ಕೇವಲ ಮೇಲ್ನೋಟದ ಉತ್ತರ ಹುಡುಕದೆ, ಐದು ಬಾರಿ “ಯಾಕೆ?” ಎಂಬ ಪ್ರಶ್ನೆಯನ್ನು ಕೇಳುವ ಮೂಲಕ ಅದರ ಬೇರುಗಳನ್ನು ಹುಡುಕಲಾಗುತ್ತದೆ. ಇದೇ ವಿಧಾನವನ್ನು ಮಾದಕ ವಸ್ತುಗಳ ಸಮಸ್ಯೆಗೂ ಅನ್ವಯಿಸಿದರೆ, ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗಲು ಕಾರಣವೇನು, ಅವರಿಗೆ…

Read More

ಬೆಂಗಳೂರು :- ಇತ್ತೀಚೆಗೆ ಕರ್ನಾಟಕ ಹೈಕೋರ್ಟ್, “ದಾವೆದಾರರ ಪರವಾಗಿ ಹಾಜರಾಗುವ ವಕೀಲರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಅವರು ನ್ಯಾಯಿಕ ವಿಚಾರಣೆಯಲ್ಲಿ ಪ್ರತಿನಿಧಿಸದಂತೆ ಒತ್ತಡ ಹೇರುವ ಅತೃಪ್ತ ಎದುರು ಪಕ್ಷಗಾರರ ಪ್ರವೃತ್ತಿ ಆತಂಕಕಾರಿ” ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನ್ಯಾಯಾಂಗ ಪ್ರಕ್ರಿಯೆಯಲ್ಲಿ ವಕೀಲರು ತಮ್ಮ ವೃತ್ತಿಪರ ಕರ್ತವ್ಯವನ್ನು ನಿರ್ಭೀತಿಯಿಂದ ನಿರ್ವಹಿಸಲು ಅವಕಾಶ ಇರಬೇಕು ಎಂಬ ಸಂದೇಶವನ್ನು ಈ ಅಭಿಪ್ರಾಯ ನೀಡುತ್ತದೆ. ಆದರೆ ಇದೇ ವೇಳೆ ಸಾರ್ವಜನಿಕ ವಲಯದಲ್ಲಿ ಮತ್ತೊಂದು ಪ್ರಮುಖ ಪ್ರಶ್ನೆಯೂ ಕೇಳಿಬರುತ್ತಿದೆ. ಸಾಮಾನ್ಯ ನಾಗರಿಕರು, ವಿಶೇಷವಾಗಿ ಬಡವರು ಮತ್ತು ನಿರಪರಾಧಿಗಳು, ತಮ್ಮ ಪ್ರಕರಣಗಳ ನ್ಯಾಯಕ್ಕಾಗಿ ವರ್ಷಗಟ್ಟಲೆ ನ್ಯಾಯಾಲಯಗಳ ಮೆಟ್ಟಿಲೇರಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂಬ ಅಸಮಾಧಾನ ವ್ಯಕ್ತವಾಗುತ್ತಿದೆ. ಕೆಳ ಹಂತದ ನ್ಯಾಯಾಲಯಗಳಲ್ಲಿ ಕಾನೂನಿನ ಸರಿಯಾದ ಅನ್ವಯವಾಗದ ಕಾರಣ ಅನೇಕ ಪ್ರಕರಣಗಳು ಮೇಲ್ಮನವಿಗಾಗಿ ಹೈಕೋರ್ಟ್‌ಗೆ ಹೋಗುತ್ತಿರುವುದಾಗಿ ಜನರು ಅಭಿಪ್ರಾಯಪಡುತ್ತಿದ್ದಾರೆ. ಇದರ ಜೊತೆಗೆ ಕಕ್ಷಿದಾರರ ಪರವಾಗಿ ವಕಾಲತ್ತು ವಹಿಸಿಕೊಂಡ ಕೆಲವು ವಕೀಲರು ಪ್ರಕರಣಗಳಿಗೆ ನಿರಂತರವಾಗಿ ಹಾಜರಾಗದೆ, ಮುಂದೂಡಿಕೆಗಳನ್ನು ಪಡೆಯುತ್ತಾ ಪ್ರಕರಣಗಳನ್ನು ಅನಗತ್ಯವಾಗಿ ವಿಳಂಬಗೊಳಿಸುತ್ತಾರೆ ಎಂಬ…

Read More

ಮಾಡೂರು ಕಟಿಲೇಶ್ವರಿ ಶಾಮಿಯಾನ ಮತ್ತು ಟ್ರಾನ್ಸ್ ಪೋರ್ಟ್ ಮಾಲಕರಾದ ವೇಣುಗೋಪಾಲ್ ಶೆಟ್ಟಿ (57 ) ಮಂಗಳವಾರ ತಡರಾತ್ರಿ ಹೃದಯಾಪಘಾತದಿಂದ ನಿಧನರಾದರು. ಕಳೆದ ಎರಡು ದಿವಸಗಳ ಹಿಂದೆ ಆಸ್ಪತ್ರೆ ಗೆ ದಾಖಲಾಗಿದ್ದ ಅವರು ಸೋಮವಾರ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರು. ಆದರೆ ಬುಧವಾರ ಮುಂಜಾನೆ ದೇವರ ಪಾದ ಸೇರಿದ್ದಾರೆ. ಮೃತರು ಪತ್ನಿ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ಇವರು ಉಳ್ಳಾಲ ಬರಿಕೆ ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷ ರಾಗಿದ್ದರು.

Read More