Author: UllalaVani

Kannada News From Coastal Karnataka

ಹರೇಕಳ : ವಿಷಯ ಜ್ಞಾನವಿದ್ದು ಒಳ್ಳೆಯ ಬೋಧನೆಯೊಂದಿಗೆ ಮಕ್ಕಳ ಮನಸ್ಸನ್ನು ಗೆಲ್ಲುವ ಶಿಕ್ಷಕರು ಅತ್ಯುತ್ತಮ ಶಿಕ್ಷಕರಾಗುತ್ತಾರೆ. ಶಿಕ್ಷಕರು ಸಚ್ಚಾರಿತ್ಯವಂತರು ಸಂಸ್ಕಾರವಂತರು ಮತ್ತು ಹೃದಯವಂತರು ಆಗಿದ್ದು, ಸಾಮಾಜಿಕ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳಬೇಕಾಗುತ್ತದೆ. ಅಂತಹ ವ್ಯಕ್ತಿತ್ವವುಳ್ಳ ಶಿಕ್ಷಕರನ್ನು ಸಮಾಜ ಯಾವಾಗ್ಲೂ ನೆನಪಿಡುತ್ತದೆ ಮತ್ತು ಗೌರವಿಸುತ್ತದೆ. ಇಂತವರ ಸಾಲಿಗೆ ನಮ್ಮ ರವಿಶಂಕರ್ ಅವರು ಸೇರುತ್ತಾರೆ ಎಂದು ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಶ್ರೀ ರವೀಂದ್ರ ರೈ ಕಳ್ಳಿಮಾರ್ ಅವರು ಅಭಿಪ್ರಾಯ ಪಟ್ಟರು.ಇವರು ಹರೇಕಳ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ನಿವೃತ್ತ ಶಿಕ್ಷಕರಾದ ರವಿಶಂಕರ್ ರಾವ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಅಭಿನಂದನ ಭಾಷಣ ಮಾಡಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಆರ್ ಈಶ್ವರ್ ಇವರು ಶಿಕ್ಷಕರು ವೃತ್ತಿಯಲ್ಲಿ ಮಾತ್ರ ನಿವೃತ್ತಿ ಹೊಂದುವುದು, ಪ್ರವೃತ್ತಿಯಲ್ಲಿ ಶಿಕ್ಷಕರಾಗಿಯೇ ಉಳಿಯುತ್ತಾರೆ ಮತ್ತು ಸಮಾಜದ ಮಾರ್ಗದರ್ಶಕರಾಗಿರುತ್ತಾರೆ ಎಂದು ತಿಳಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಶೆಟ್ಟಿ ಮಂಚವುದಡಿ…

Read More

ಮಂಗಳೂರು: ಪ್ರತಿಷ್ಠಿತ ಮಂಗಳೂರು ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷರಾಗಿ ಜಿಲ್ಲಾ ನೋಟರಿ ವಕೀಲರಾದ ಪ್ರವೀಣ್‌ ಕುಮಾರ್‌ ಅದ್ಯಪಾಡಿ  ಅತ್ಯಧಿಕ ಮತಗಳಿಂದ ಜಯ ಗಳಿಸಿ ಆಯ್ಕೆ ಯಾಗಿದ್ದಾರೆ.ಕೇಂದ್ರ ಸರಕಾರದ ಜಿಲ್ಲಾ ನೋಟರಿ  ವಕೀಲರಾಗಿರುವ ಪ್ರವೀಣ್‌ ಕುಮಾರ್‌ ಅದ್ಯಪಾಡಿ ಇವರು ಅದ್ಯಪಾಡಿ ಶ್ರೀ ಆದಿನಾಥೇಶ್ವರ ಭಜನಾ ಮಂಡಳಿಯ ಹಿರಿಯ ಸದಸ್ಯರೂ, ಅದ್ಯಪಾಡಿ ಸರಕಾರಿ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರು, ಬಜಪೆ ಜನ ಜಾಗೃತಿ ವೇದಿಕೆಯ ಅಧ್ಯಕ್ಷರಾಗಿದ್ದಾರೆ.  ಇದೀಗ ಪ್ರತಿಷ್ಠಿತ ಮಂಗಳೂರು ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದವರಿಗೆ ಹಿತೈಷಿಗಳು, ಸ್ನೇಹಿತರು, ವಕೀಲರು  ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಸೇವೆಗಳ ಕುರಿತು ನಡೆದ ಸಭೆಯಲ್ಲಿ ಆರೋಗ್ಯ ಸಚಿವರಾದ ಮಾನ್ಯ ಯು.ಟಿ. ಖಾದರ್ ಅವರು ನೀಡಿರುವ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಈ ಕುರಿತು ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇರುವುದರಿಂದ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರ ಪಡೆಯಲಾಗುತ್ತಿದೆ ಎಂದು ಹಿಂದೆ ಸಚಿವರು ಹೇಳಿದ್ದರು. ಇದೀಗ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಆಂಬುಲೆನ್ಸ್‌ಗಳ ಕೊರತೆಯ ಕುರಿತು ಅಧಿಕಾರಿಗಳು ಪ್ರಸ್ತಾಪಿಸಿದಾಗ, ಖಾಸಗಿ ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಮೆಡಿಕಲ್ ಕಾಲೇಜುಗಳ ನೆರವು ಪಡೆಯುವಂತೆ ಸೂಚಿಸಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಸಾವಿರಾರು ಕೋಟಿ ರೂಪಾಯಿ ಬಜೆಟ್ ಹೊಂದಿರುವ ಆರೋಗ್ಯ ಇಲಾಖೆ, ಲಕ್ಷಾಂತರ ರೂಪಾಯಿ ಸಂಬಳ ಪಡೆಯುವ ಆರೋಗ್ಯ ಅಧಿಕಾರಿಗಳು, ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸುವ ಆಡಳಿತ ವ್ಯವಸ್ಥೆ ಇರುವಾಗಲೂ ಮೂಲಭೂತ ಅಗತ್ಯಗಳಾದ ವೈದ್ಯರು ಮತ್ತು ಆಂಬುಲೆನ್ಸ್‌ಗಳಿಗಾಗಿ ಖಾಸಗಿ ಸಂಸ್ಥೆಗಳ ನೆರವನ್ನು ಅವಲಂಬಿಸಬೇಕಾದ ಪರಿಸ್ಥಿತಿ ಯಾಕೆ…

Read More

ಮಂಗಳೂರು : ಸಲಿಂಗಕಾಮದ ವಿಡಿಯೋ ಮುಂದಿಟ್ಟು ಮಂಗಳೂರಿನ ಹೆಸರಾಂತ ಉದ್ಯಮಿಗೆ ಬ್ಲಾಕ್ಮೇಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಝಾಮ್‌ನನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಾಗೂ ಯುವ ಕಾಂಗ್ರೆಸ್ ಪ್ರಾರ್ಥಮಿಕ ಸದಸ್ಯತ್ವದಿಂದ ಅಮಾನತು ಮಾಡಿ ಆದೇಶವನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್ ಹೊರಡಿಸಿದ್ದಾರೆ. ನಗರದ ಖ್ಯಾತ ಉದ್ಯಮಿಯೊಬ್ಬರಿಗೆ ಹನಿಟ್ರ್ಯಾಪ್ ನಡೆಸಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ ಆರೋಪದ ಮೇರೆಗೆ ಇಂಡಿಯನ್ ಯೂಥ್ ಕಾಂಗ್ರೆಸ್ ಗೆ ಸಂಬಂಧ ಹೊಂದಿರುವ ಸ್ಥಳೀಯ ಮುಖಂಡನೊಬ್ಬ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿತ್ತು. ಉದ್ಯಮಿ ನೀಡಿದ ದೂರಿನ ಪ್ರಕಾರ, 2024ರಲ್ಲಿ ಜಿತೇಶ್ ಎಂಬಾತ ಉದ್ಯಮಿಯ ಖಾಸಗಿ ಫೋಟೋ ಹಾಗೂ ವಿಡಿಯೊಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಆರಂಭಿಸಿದ್ದಾನೆ ಎನ್ನಲಾಗಿದೆ. ಪತ್ನಿಗೆ ವಿಡಿಯೊ ತೋರಿಸುವುದಾಗಿ ಬೆದರಿಕೆ ಹಾಕಿ ಮೊದಲು ₹35 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ನಂತರ ಈ ವಿಚಾರವನ್ನು ಯುವ ಕಾಂಗ್ರೆಸ್ ಮುಖಂಡ ನಿಝಾಮ್‌ಗೆ ತಿಳಿಸಿದರೂ, ಆತ ಕೂಡ ಜಿತೇಶ್…

Read More

ಮಂಗಳೂರು: ಮಂಜನಾಡಿಯಲ್ಲಿ ನಡೆದ ಭೀಕರ ಗುಡ್ಡ ಕುಸಿತ ದುರಂತ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಂತ್ರಸ್ತೆ ಆಶ್ವಿನಿ ಪೂಜಾರಿಯವರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರು, ಕೋಣಾಜೆ ಪೊಲೀಸ್ ಠಾಣೆಗೆ ಪ್ರಕರಣದ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜ್ಞಾಪನ ಪತ್ರದ ಮೂಲಕ ಆದೇಶ ನೀಡಿದ್ದಾರೆ. ಈ ಬೆಳವಣಿಗೆಯ ಬಳಿಕ ಸಾರ್ವಜನಿಕ ವಲಯದಲ್ಲಿ ಇದೀಗ ಒಂದು ಪ್ರಮುಖ ಪ್ರಶ್ನೆ ಕೇಳಿಬರುತ್ತಿದೆ – “ಕೋಣಾಜೆ ಪೊಲೀಸರು ಪೊಲೀಸ್ ಆಯುಕ್ತರ ಜ್ಞಾಪನ ಪತ್ರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಮಗ್ರ ತನಿಖೆ ನಡೆಸುತ್ತಾರೆಯೇ?” ಈ ಹಿಂದೆ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 105 ಮತ್ತು 106 ಅಡಿಯಲ್ಲಿ ದೂರು ನೀಡಲಾಗಿದ್ದರೂ, ಪ್ರಕರಣವನ್ನು ಕೇವಲ ಅಸಹಜ ಸಾವು (UDR) ಪ್ರಕರಣವಾಗಿ ದಾಖಲಿಸಲಾಗಿತ್ತು ಎಂಬ ಆರೋಪವಿದೆ. ಇದೇ ಕಾರಣಕ್ಕೆ ಸಂತ್ರಸ್ತೆ ಆಶ್ವಿನಿ ಪೂಜಾರಿಯವರು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ವಿವಿಧ ಅಧಿಕಾರಿಗಳಿಗೆ ಹಾಗೂ ನ್ಯಾಯಾಲಯಕ್ಕೂ ಮೊರೆ ಹೋಗಿದ್ದರು. ಇದೀಗ NITK ಸಿವಿಲ್ ಇಂಜಿನಿಯರಿಂಗ್ ವಿಭಾಗದ…

Read More

ಮಂಗಳೂರು, ಜೂ.9: ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡ ಯು.ಟಿ.ಖಾದರ್ ರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು. ಕೊಂಕಣಿ ಅಕಾಡಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಅಕಾಡಮಿಯ ಸದಸ್ಯರಾದ ನವೀನ್ ಲೋಬೊ, ಸಮರ್ಥ್ ಭಟ್ ಉಪಸ್ಥಿತರಿದ್ದರು.

Read More

ಸಜಿಪಮೂಡ ಗ್ರಾಮದ ಕೊಳಕೆ-ಪಂಜಾಜೆ ಎಂಬಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಠಾಣೆಯ ಪೊಲೀಸರು ಆರೋಪಿಯ ಮನೆ ಮತ್ತು ದನದ ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ. ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020ರ ಸೆಕ್ಷನ್ 4, 7 ಮತ್ತು 12ರ ಅಡಿಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಸಂಖ್ಯೆ 68/2026ರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.ಆರೋಪಿ ಮುಸ್ತಫಾ ಎಂಬುವವರ ಮನೆ ಮತ್ತು ದನದ ಕೊಟ್ಟಿಗೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದ್ದು, ಪೊಲೀಸರು ಸದರಿ ಸ್ಥಳವನ್ನು ಜಪ್ತಿ ಮಾಡಿದ್ದಾರೆ. ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020ರ ಸೆಕ್ಷನ್ 8(1)ರ ಅಡಿಯಲ್ಲಿ ಈ ಕಾನೂನು ಕ್ರಮ ಜರುಗಿಸಲಾಗಿದೆ.ಜಪ್ತಿ ಪ್ರಕ್ರಿಯೆಯ ನಂತರ, ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರು ಮಂಗಳೂರು ಉಪವಿಭಾಗೀಯ ದಂಡಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸಿದ್ದಾರೆ.

Read More

ಮಂಗಳೂರು, ಜೂ. 08 ;ಮಳೆಗಾಲದಲ್ಲಿ ನೀರು ತುಂಬಿದ ಗುಂಡಿಗಳಿಂದ ಸಂಭವಿಸುವ ಅಪಘಾತಗಳು ಜೀವಹಾನಿಗೆ ಕಾರಣವಾದರೆ ಸಂಬಂಧಪಟ್ಟ ಇಲಾಖೆಗಳ ಇಂಜಿನಿಯರ್‌ಗಳೇ ನೇರ ಹೊಣೆಗಾರರಾಗ ಬೇಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಎಚ್ಚರಿಸಿದ್ದಾರೆ. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಂಗಾರು ಪೂರ್ವಸಿದ್ಧತಾ ಕಾರ್ಯದ ಕುರಿತು ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಮಳೆಗಾಲದಲ್ಲಿ ಯಾವುದೇ ವಿಪತ್ತು ಸಂಬಂಧಿತ ಸಂದರ್ಭಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ನಿಕಟ ಸಮನ್ವಯದಿಂದ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆ ಜಂಟಿಯಾಗಿ ರಸ್ತೆಗಳಲ್ಲಿ ನೀರು ನಿಲ್ಲುವ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಖಾದರ್ ಒತ್ತಿ ಹೇಳಿದರು. ತುರ್ತು ಸಂದರ್ಭ ಸಾರ್ವಜನಿಕ ಹಿತಾಸಕ್ತಿಯಿಂದ ವ್ಯಾಪ್ತಿ ಮೀರಿ ಕ್ರಮ ಕೈಗೊಳ್ಳಬೇಕು. ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಸಮನ್ವಯದಿಂದ ನಿರ್ವಹಿಸಬೇಕು. ಪದೇ ಪದೇ ಹೊಂಡ ಮುಚ್ಚುವ ಕೆಲಸದ ಬದಲು ಶಾಶ್ವತ ಕಾಮಗಾರಿಗೆ ಒತ್ತು ನೀಡಬೇಕು ಎಂದು ಖಾದರ್ ಸೂಚಿಸಿದರು.ಮೆಸ್ಕಾಂ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ…

Read More

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಲವ ಸಮಾಜದ ಬಗ್ಗೆ ಅವಹೇಳನಕಾರಿ ವಿಡಿಯೋ ಮತ್ತು ಬರಹವನ್ನು ಪೋಸ್ಟ್ ಮಾಡಿದ ಅನಿತಾ ಕಾಸರಗೋಡು ಎಂಬಾಕೆಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಬಿರುವೆರ್ ಕುಡ್ಲ (ರಿ) ಮಂಗಳೂರು ಘಟಕದ ಅಧ್ಯಕ್ಷ ರಾಕೇಶ್ ಎಂಬವರು ಬರ್ಕೆ ಠಾಣೆಗೆ ದೂರು ನೀಡಿದ್ದಾರೆ. ಸೋಮವಾರ ಸಂಜೆ ತಾನು ಬಿಜೈ ಸರಕಾರಿ ಬಸ್ ನಿಲ್ದಾಣದಲ್ಲಿ ಫೇಸ್‌ಬುಕ್ ವೀಕ್ಷಿಸುತ್ತಿದ್ದಾಗ ಅನಿತಾ ಕಾಸರಗೋಡು ಎಂಬಾಕೆ ಹಾಕಲಾದ ಪೋಸ್ಟ್‌ನಲ್ಲಿ ಧರ್ಮ-ವರ್ಗಗಳ ಮಧ್ಯೆ ಕೋಮುಭಾವನೆ ಹುಟ್ಟು ಹಾಕಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರಚೋದನೆ ನೀಡಿರುವುದಾಗಿ ರಾಕೇಶ್ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು, ಜೂ. 09 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 10ರಿಂದ ಮುಂಗಾರು ಮಳೆ ಮತ್ತಷ್ಟು ತೀವ್ರಗೊಳ್ಳಲಿದ್ದು, ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಬೆಳಿಗ್ಗೆಯಿಂದಲೇ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಸಂಜೆಯ ವೇಳೆಗೆ ಬೆಳ್ತಂಗಡಿ, ಸುಳ್ಯ ಮತ್ತು ಪುತ್ತೂರಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದರೆ, ಮಂಗಳೂರು, ಉಳ್ಳಾಲ, ಬಂಟ್ವಾಳ ಮತ್ತು ಮೂಲ್ಕಿ ತಾಲೂಕುಗಳಲ್ಲಿ ಸಾಧಾರಣ ಮಳೆ ಸುರಿದಿದೆ.ಭಾನುವಾರ ಬೆಳಿಗ್ಗೆಯಿಂದ ಸೋಮವಾರ ಬೆಳಿಗ್ಗೆಯವರೆಗೆ ಜಿಲ್ಲೆಯಲ್ಲಿ ಸರಾಸರಿ 10.5 ಮಿ.ಮೀ. ಮಳೆಯಾಗಿದೆ. ಕಡಬದಲ್ಲಿ 27.3 ಮಿ.ಮೀ., ಪುತ್ತೂರಿನಲ್ಲಿ 11.3 ಮಿ.ಮೀ., ಉಳ್ಳಾಲದಲ್ಲಿ 10.4 ಮಿ.ಮೀ., ಬೆಳ್ತಂಗಡಿಯಲ್ಲಿ 9.4 ಮಿ.ಮೀ., ಬಂಟ್ವಾಳದಲ್ಲಿ 7.8 ಮಿ.ಮೀ., ಸುಳ್ಯದಲ್ಲಿ 5.3 ಮಿ.ಮೀ., ಮಂಗಳೂರಿನಲ್ಲಿ 4.3 ಮಿ.ಮೀ., ಮೂಲ್ಕಿಯಲ್ಲಿ 4.1 ಮಿ.ಮೀ. ಹಾಗೂ ಮೂಡುಬಿದಿರೆಯಲ್ಲಿ 2.3 ಮಿ.ಮೀ. ಮಳೆ ದಾಖಲಾಗಿದೆ.ಮುಂಗಾರು ಮಳೆ ಮತ್ತಷ್ಟು ಚುರುಕುಗೊಳ್ಳುತ್ತಿದ್ದು, ಜೂನ್ 12ರವರೆಗೆ ಈ…

Read More