ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಹೆಸರಿನಲ್ಲಿ ನಡೆಯುತ್ತಿರುವ ಹೂಡಿಕೆ ಯೋಜನೆಗಳು, ಡೆಪಾಸಿಟ್ ಸ್ಕೀಂಗಳು, ಚಿಟ್ ಮಾದರಿಯ ಹಣಕಾಸು ವ್ಯವಹಾರಗಳು ಹಾಗೂ “ಹೆಚ್ಚು ಲಾಭ”ದ ಭರವಸೆ ನೀಡುವ ಖಾಸಗಿ ಹಣಕಾಸು ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಗಂಭೀರ ಆತಂಕ ವ್ಯಕ್ತವಾಗುತ್ತಿದೆ. “ತಿಂಗಳಿಗೆ ಖಚಿತ ಲಾಭ”, “ಕೆಲವೇ ತಿಂಗಳಲ್ಲಿ ಡಬಲ್ ಹಣ”, “ಸೇಫ್ ಇನ್ವೆಸ್ಟ್‌ಮೆಂಟ್”, “ಗ್ಯಾರಂಟಿ ರಿಟರ್ನ್” ಎಂಬ ಜಾಹೀರಾತುಗಳು ಮತ್ತು ಸಾಮಾಜಿಕ ಜಾಲತಾಣಗಳ ಪ್ರಚಾರಗಳ ಮೂಲಕ ಸಾಮಾನ್ಯ ಜನರನ್ನು ಸೆಳೆಯುವ ಪ್ರಯತ್ನಗಳು ನಡೆಯುತ್ತಿರುವ ಬಗ್ಗೆ ಹಲವು ಆರೋಪಗಳು ಕೇಳಿಬರುತ್ತಿವೆ. ಗ್ರಾಮೀಣ ಭಾಗಗಳಿಂದ ಹಿಡಿದು ನಗರ ಪ್ರದೇಶಗಳವರೆಗೆ ಜನರನ್ನು ಸಂಪರ್ಕಿಸಿ ಹಣ ಸಂಗ್ರಹಿಸುವ ಕೆಲವು ಗುಂಪುಗಳು ಹಾಗೂ ಸಂಸ್ಥೆಗಳ ಚಟುವಟಿಕೆಗಳ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತಿವೆ. ಅನೇಕ ಜನರು ಬ್ಯಾಂಕ್ ಬಡ್ಡಿದರಕ್ಕಿಂತ ಹೆಚ್ಚಿನ ಲಾಭ ಸಿಗುತ್ತದೆ ಎಂಬ ನಂಬಿಕೆಯಲ್ಲಿ ತಮ್ಮ ದುಡಿದ ಹಣವನ್ನು ಇಂತಹ ಯೋಜನೆಗಳಿಗೆ ನೀಡುತ್ತಿರುವುದು ಕಂಡುಬರುತ್ತಿದೆ. ಕೆಲವರು ಸಾಲ ಮಾಡಿ, ಕೆಲವರು ನಿವೃತ್ತಿ ಹಣ ಹೂಡಿಕೆ ಮಾಡಿ, ಇನ್ನೂ ಕೆಲವರು ಕುಟುಂಬದ ಭವಿಷ್ಯಕ್ಕಾಗಿ…
Author: UllalaVani
ಬೆಂಗಳೂರು,ಮೇ. 28 : ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ತೀವ್ರ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ರಾಜೀನಾಮೆ ಸಲ್ಲಿಕೆಗೂ ಮುನ್ನ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಕೊನೆಯ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ನಡೆಯಿತು.ಉಪಹಾರ ಸಭೆಯಲ್ಲಿ ಭಾಗಿಯಾಗಿದ್ದ ಪ್ರಮುಖ ಮಂತ್ರಿಗಳು ಮತ್ತು ಆಪ್ತ ನಾಯಕರು ಸಿದ್ದರಾಮಯ್ಯ ಅವರ ಸುದೀರ್ಘ ಹೋರಾಟದ ಪಯಣವನ್ನು ನೆನೆದು ಭಾವುಕರಾದರು. ಹಲವು ಸಚಿವರ ಕಣ್ಣೀರು ಹಾಕಿದರು. ಸಹೋದ್ಯೋಗಿ ಮಂತ್ರಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಮಧ್ಯಾಹ್ನ ಭೋಜನ ಬಳಿಕ ರಾಜೀನಾಮೆ ಪತ್ರ ಹಿಡಿದು ಕಾರಿನಲ್ಲಿ ರಾಜಭವನ ತೆರಳಿದರು.ರಾಜ್ಯಪಾಲರು ಪ್ರಸ್ತುತ ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ಸದ್ಯ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ…
ಬೆಂಗಳೂರು, ಮೇ. 28 : ಕರ್ನಾಟಕ ರಾಜಕೀಯದಲ್ಲಿ ಮಹತ್ವದ ತಿರುವು ಪಡೆದ ನಾಯಕತ್ವ ಬದಲಾವಣೆ ಬೆಳವಣಿಗೆಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರೊಂದಿಗೆ ನಡೆಸಿದ ವಿದಾಯ ಉಪಹಾರ ಸಭೆ ಭಾವುಕ ಕ್ಷಣಗಳಿಗೆ ಸಾಕ್ಷಿಯಾಗಿದೆ. “ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಎಲ್ಲರ ಗಮನ ಸೆಳೆದರು. ‘ಕಾವೇರಿ’ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ ಸಚಿವರನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಹೈಕಮಾಂಡ್ ಹೇಳುವುದನ್ನು ಪಾಲಿಸುವುದು ನನ್ನ ಕರ್ತವ್ಯ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ” ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಈ ಹಿಂದೆ ನಡೆದಿದ್ದ ಅಧಿಕಾರ ಹಂಚಿಕೆ ಒಪ್ಪಂದದ ಸುಳಿವು ನೀಡುತ್ತಾ, ತಮ್ಮ ರಾಜೀನಾಮೆ ನಿರ್ಧಾರವನ್ನು ಸಚಿವ ಸಂಪುಟ ಸಹೋದ್ಯೋಗಿಗಳ ಮುಂದೆ ಅಧಿಕೃತವಾಗಿ ಪ್ರಕಟಿಸಿದರು.ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸದ ಸಿದ್ದರಾಮಯ್ಯ, “ಮುಂದಿನ ಸಿಎಂ ಯಾರಾಗುತ್ತಾರೆ ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಎಲ್ಲಾ ಮುಂದಿನ ಪ್ರಕ್ರಿಯೆಯನ್ನು ಪಕ್ಷದ ನಾಯಕತ್ವವೇ ನಡೆಸಲಿದೆ,” ಎಂದು ಹೇಳಿದರು. ಸಿದ್ದರಾಮಯ್ಯ ಅವರ ಈ ಮಾತುಗಳು ಸಭೆಯಲ್ಲಿ ಭಾವುಕ…
ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ಮುಹ್ಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು. ಮಸೀದಿಯಲ್ಲಿ ನಡೆದ ಈದ್ ನಮಾಝ್‌ಗೆ ಇಸ್ಮಾಯಿಲ್ ಮುಸ್ಲಿಯಾರ್ ನೇತೃತ್ವ ವಹಿಸಿದರು. ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು, ಸಹೋದರತ್ವ ಹಾಗೂ ಶಾಂತಿಯ ಸಂದೇಶ ಸಾರಿದರು. ಮಸೀದಿ ಆಡಳಿತ ಸಮಿತಿ ಹಾಗೂ ಸ್ಥಳೀಯರು ಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದರು
ಉಳ್ಳಾಲ ತಾಲ್ಲೂಕಿನ ಇರಾ ಗ್ರಾಮದ ಬಾಳೆಪುಣಿ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಮಸೀದಿಯ ಇಮಾಂ ಹಾರಿಸ್ ಹನೀಫಿ ಕುತುಬಾ ನಿರ್ವಹಿಸಿ ಈದ್ ನಮಾಜಿಗೆ ನೇತೃತ್ವ ನೀಡಿದರು. ಬಳಿಕ ಮಸೀದಿಯ ಧಾರ್ಮಿಕ ಗುರುಗಳಾದ ಅಲಿ ಪೈಝಿ ಉಸ್ತಾದ್ ಅವರು ಈದ್ ಸಂದೇಶ ನೀಡಿ, ಸಹೋದರತ್ವ, ಶಾಂತಿ ಮತ್ತು ಸೌಹಾರ್ದತೆಯ ಮಹತ್ವವನ್ನು ತಿಳಿಸಿದರು. ನಮಾಜಿನ ಬಳಿಕ ಹಿರಿಯರು, ಕಿರಿಯರು ಹಾಗೂ ಗೆಳೆಯರು ಪರಸ್ಪರ ಹಸ್ತಲಾಘವದೊಂದಿಗೆ ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಇದೇ ವೇಳೆ ಊರಿನಲ್ಲಿ ಮರಣ ಹೊಂದಿದವರ ಆತ್ಮಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಉಳ್ಳಾಲ: ಅಲ್ ಹಿದಾಯ ಜುಮಾ ಮಸೀದಿ ಹಿದಾಯತ್ ನಗರದಲ್ಲಿ ಸಂಭ್ರಮದ ಬಕ್ರೀದ್ ಆಚರಿಸಲಾಯಿತು. ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ಈದ್ ನಮಾಝ್ ಗೆ ನೇತೃತ್ವ ನೀಡಿ ಈದ್ ಸಂದೇಶ ನೀಡಿದ್ದಾರೆ. ಗೆಳೆಯರು ಬಂದು ಬಾಂಧವರು ಪರಸ್ಪರ ಹಸ್ತಲಾಘವದೊಂದಿಗೆ ಶುಭಾಶಯ ಕೋರಿದ್ದಾರೆ.
ಉಚ್ಚಿಲ–ತಲಪಾಡಿ ವ್ಯಾಪ್ತಿಯ ವಿವಿಧ ಮಸೀದಿಗಳಲ್ಲಿ ಈದ್ ನಮಾಝ್ ಸಮಯವನ್ನು ಪ್ರಕಟಿಸಲಾಗಿದೆ. ಭಕ್ತಾದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಮಸೀದಿ ಸಮಿತಿಗಳು ಮನವಿ ಮಾಡಿಕೊಂಡಿವೆ. ಬೆಳಿಗ್ಗೆ 8 ಗಂಟೆಗೆ ನಡೆಯುವ ಮಸೀದಿಗಳು: ಬೆಳಿಗ್ಗೆ 7.30 ಗಂಟೆಗೆ ನಡೆಯುವ ಮಸೀದಿಗಳು: ಈದ್ ನಮಾಝ್ ಬಳಿಕ ಪರಸ್ಪರ ಶುಭಾಶಯ ವಿನಿಮಯ ಹಾಗೂ ವಿಶೇಷ ಪ್ರಾರ್ಥನೆಗಳು ನಡೆಯಲಿವೆ.
ಉಳ್ಳಾಲ: ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕಳೆದ ಹಲವು ತಿಂಗಳಿಂದ ಕೊಳಚೆ ನೀರು ಶೇಖರಣೆಯಾಗಿರುವ ಪರಿಣಾಮ ಪರಿಸರದಲ್ಲಿ ತೀವ್ರ ದುರ್ವಾಸನೆ ಹರಡುತ್ತಿದ್ದು, ಸಾರ್ವಜನಿಕರು ಹಾಗೂ ವಾಹನ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಉಳ್ಳಾಲ ವಲಯ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಈ ಕುರಿತು ಉಳ್ಳಾಲ ತಾಲೂಕು ತಹಶೀಲ್ದಾರ್, ಕೋಟೆಕಾರ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು, ಬೆಳ್ಮ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳಿಗೆ ಸಿಪಿಐ(ಎಂ) ನಿಯೋಗವು ಮನವಿ ಅರ್ಪಿಸಿತು. ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮುಂಭಾಗದ ರಸ್ತೆ ಬೆಳ್ಮ ಗ್ರಾಮ ಪಂಚಾಯತ್ ಹಾಗೂ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಧ್ಯದಲ್ಲಿ ಹಾದು ಹೋಗುತ್ತದೆ. ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಲಾಡ್ಜ್‌ಗಳು ಹಾಗೂ ವಾಣಿಜ್ಯ ಸಂಕೀರ್ಣಗಳಿಂದ ಹೊರಬರುವ ಡ್ರೈನೇಜ್ ನೀರು ಪ್ರಮುಖ ರಸ್ತೆಯ ಅಡಿಭಾಗದಲ್ಲಿ ಹರಿದು ಆಸ್ಪತ್ರೆ ಸಮೀಪದ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಗೆ…
ಮುನ್ನೂರು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಟದ ಮೈದಾನ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಡಿವೈಎಫ್‌ಐ (DYFI) ಕುತ್ತಾರ್–ಬಟ್ಟೆದಡಿ ಘಟಕದ ನಿಯೋಗವು ಮುನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಗ್ರಾಮದ ಜನತೆಗೆ ಸಮರ್ಪಕ ಆರೋಗ್ಯ ಸೇವೆ ದೊರಕಬೇಕಾದ ಅಗತ್ಯವಿದ್ದು, ಯುವಕರ ಕ್ರೀಡಾ ಚಟುವಟಿಕೆಗಳಿಗೆ ಸೂಕ್ತ ಆಟದ ಮೈದಾನ ನಿರ್ಮಾಣ ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ನಿಯೋಗದಲ್ಲಿ ಕುತ್ತಾರ್ ಘಟಕದ ಕಾರ್ಯದರ್ಶಿ ವಿಕಾಸ್ ಕುತ್ತಾರ್ ಸೇರಿದಂತೆ ಮುಖಂಡರಾದ ಸುನೀಲ್ ತೇವುಲ, ನಿತಿನ್ ಕುತ್ತಾರ್, ಸಂಕೇತ್ ಕಂಪ, ಧನಂಜಯ ಕಾರ್ದಿಕಂಡ, ನಿತೇಶ್ ತಲೆನೀರು, ಧೀರಜ್ ಬಟ್ಟೆದಡಿ, ಕಿಶನ್ ತಲೆನೀರು, ಸುಪ್ರೀತ್ ಬಾಕಿಮಾರ್, ಗುರುರಾಜ್ ತೇವುಲ, ವರ್ಶಿತ್ ಆಯೆರೆಬೆಟ್ಟು, ಭುವನ್ ಕಂಪ ಹಾಗೂ ರಕ್ಷನ್ ಬೊಳಕ ಉಪಸ್ಥಿತರಿದ್ದರು.
ಬೆಂಗಳೂರು, ಮೇ 27: ಕರ್ನಾಟಕ ಕಾಂಗ್ರೆಸ್ ನಾಯಕತ್ವ ಬದಲಾವಣೆ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಲು ಸಿಎಂ ಕಚೇರಿಯಿಂದ ಸಮಯ ಕೋರಲಾಗಿದೆ. ಇದಕ್ಕೂ ಮುನ್ನ ದೆಹಲಿಯಲ್ಲಿ ಹೈಕಮಾಂಡ್ ನಡೆಸಿದ ಸುದೀರ್ಘ 7 ಗಂಟೆಗಳ ಮ್ಯಾರಥಾನ್ ಸಭೆಯಲ್ಲಿ, ರಾಹುಲ್ ಗಾಂಧಿ ಅವರೊಂದಿಗಿನ ಒನ್-ಟು-ಒನ್ ಮಾತುಕತೆ ಬಳಿಕ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ಸೂತ್ರದಂತೆ ಹುದ್ದೆ ತ್ಯಾಗ ಮಾಡಲು ಒಪ್ಪಿಕೊಂಡಿದ್ದರು. ದೆಹಲಿಯಿಂದ ವಾಪಸ್ ಬಂದ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನಾಳೆ ಬೆಳಗ್ಗೆ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಎಲ್ಲಾ ಸಚಿವರಿಗೆ ಉಪಾಹಾರ ಕೂಟ ಆಯೋಜಿಸಿದ್ದು, ವೈಯಕ್ತಿಕವಾಗಿ ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ದೆಹಲಿಯಿಂದ ಗುರುವಾರ ಮುಂಜಾನೆ ಬೆಂಗಳೂರಿಗೆ ಮರಳಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಸಹ ಬ್ರೇಕ್‌ಫಾಸ್ಟ್ ಮೀಟ್ನಲ್ಲಿ ಭಾಗಿಯಾಗಲಿದ್ದಾರೆ. ಮತ್ತೊಂದೆಡೆ, ಸಿಎಂ ರಾಜೀನಾಮೆ ಸುದ್ದಿ ಹೊರಬೀಳುತ್ತಿದ್ದಂತೆ ಸಿದ್ದರಾಮಯ್ಯ ಅವರ…

