ಕೊಣಾಜೆ ಗ್ರಾಮದ ಕುಂಟಾಲಗುರಿ ನಿವಾಸಿ83 ವರ್ಷದ ಕೆಪಿಎ ಅಬ್ದುಲ್ ಖಾದರ್ ಹಾಜಿ ಆಲಿಯಾಸ್ ಚೆರೋನು ಹಾಜಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ. ಕುಂಟಾಲಗುಳಿ ಪ್ರದೇಶದಲ್ಲಿ ಕಳೆದ 60 ವರ್ಷಕ್ಕಿಂತಲೂ ಮಿಕ್ಕಿ ಅಂಗಡಿ ನಡೆಸುತ್ತಿದ್ದ ಇವರು ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ನಡುಪದವು ಮಸೀದಿಯ ಮಾಜಿ ಅಧ್ಯಕ್ಷರಾಗಿ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಸಚಿವ ಯು.ಟಿ.ಖಾದರ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತವ್ಯಕ್ತಿಒಂದು ಗಂಡು ಮೂರು ಹೆಣ್ಣು ಮಕ್ಕಳನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Author: UllalaVani
ಬೆಂಗಳೂರು, ಆ. 3: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ಶಾಸಕರ ವಲಯದಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ತಮಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಬೇಸರಗೊಂಡಿರುವ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಹಾಗೂ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಕೂಡಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಟಿವಿ9ಗೆ ಕೊಟ್ಟಿದ್ದಾರೆ. ಇದರ ಜತೆಗೆ ಇನ್ನು ಹಲವು ಶಾಸಕರು ಅಸಮಾಧನ ಹೊರಹಾಕಿದ್ದಾರೆ. ಇದೀಗ ಹಲವು ಕಡೆ ಶಾಸಕರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರತಿಭಟನೆ ಕೂಡ ಶುರುವಾಗಿದೆ. ಈ ಇಬ್ಬರೂ ಹಿರಿಯ ನಾಯಕರ ಬಂಡಾಯವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ತಮಗೆ ಉದ್ದೇಶಪೂರ್ವಕವಾಗಿ ಸಚಿವ ಸ್ಥಾನ ತಪ್ಪಿಸಲಾಗಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. “ನಾಳೆ (ಆಗಸ್ಟ್ 4) ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನನಗೆ…
ಮಂಗಳೂರು, ಆ. 3: ಮಂಗಳೂರಿನಲ್ಲಿ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಂದರ್ ನಿವಾಸಿ, ಪ್ರಸ್ತುತ ಮಂಜನಾಡಿಯಲ್ಲಿ ವಾಸವಾಗಿರುವ ಅಹ್ಮದ್ ಕಬೀರ್ ಅವರು ನಿನ್ನೆ ರಾತ್ರಿ ಬಳಿಕ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಕುಟುಂಬಸ್ಥರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕುಟುಂಬದವರ ಮಾಹಿತಿ ಪ್ರಕಾರ, ಅಹ್ಮದ್ ಕಬೀರ್ ಅವರು ನಿನ್ನೆ ರಾತ್ರಿ ಮನೆಯಿಂದ ತೆರಳಿದ ಬಳಿಕ ಇದುವರೆಗೆ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಅವರು ಚಲಾಯಿಸುತ್ತಿದ್ದ ರಿಕ್ಷಾ ಕುದ್ರೋಳಿಯಲ್ಲಿರುವ ಸಂಬಂಧಿಕರ ಮನೆಯ ಸಮೀಪ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅಹ್ಮದ್ ಕಬೀರ್ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಅಥವಾ ಅವರನ್ನು ಎಲ್ಲಿಯಾದರೂ ಕಂಡಲ್ಲಿ ತಕ್ಷಣ 77957 64098 ಅಥವಾ 98440 90985 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಬೆಂಗಳೂರು, ಆಗಸ್ಟ್ 03: ಬಹುನಿರೀಕ್ಷಿತ ಸಿಎಂ ಅವರ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನೂತನ ಸಚಿವರು ಇಂದು (ಆಗಸ್ಟ್ 03) ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ವಿಧಾನ ಸಭೆಯ ನೂತನ ಸ್ಪೀಕರ್, ಡೆಪ್ಯೂಟಿ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಪತಿ ಮತ್ತು ಉಪ ಸಭಾಪತಿಗಳ ಹೆಸರನ್ನೂ ಎಐಸಿಸಿ ಅಂತಿಮಗೊಳಿಸಿದೆ. ವಿಧಾನಸಭೆ ಸ್ಪೀಕರ್ ಆಗಿ ಗದಗ ಜಿಲ್ಲೆ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್ ನೇಮಕವಾಗಿದ್ದರೆ, ಡೆಪ್ಯೂಟಿ ಸ್ಪೀಕರ್ ಆಗಿ ಕೊಡಗು ಜಿಲ್ಲೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರ ಸ್ವೀಕರಿಸಲಿದ್ದಾರೆ. ಉಳಿದಂತೆ ವಿಧಾನಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಮತ್ತು ಉಪ ಸಭಾಪತಿಯಾಗಿ ಉಮಾಶ್ರೀ ಅವರನ್ನು ನೇಮಿಸಲಾಗಿದೆ. ಹಿಂದಿನ ಸ್ಪೀಕರ್, ಡೆಪ್ಯೂಟಿ ಸ್ಪೀಕರ್ ಇಬ್ಬರೂ ಈಗ ಸಚಿವರು! ಹಿಂದಿನ ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸ್ಪೀಕರ್ ಆಗಿದ್ದ ಯು.ಟಿ. ಖಾದರ್ ಅದಾಗಲೇ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಡೆಪ್ಯೂಟಿ ಸ್ಪೀಕರ್ ಆಗಿದ್ದ…
ಉಳ್ಳಾಲ, ಆ. 3: ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಗೂ ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ 30ಕ್ಕೂ ಹೆಚ್ಚು ವಾರಂಟ್‌ಗಳು ಜಾರಿಯಾಗಿದ್ದ ವಾರಂಟ್ ಆರೋಪಿ ಉಮ್ಮರ್ ನವಾಫ್ (33) ಅವರನ್ನು ಮಂಗಳೂರು ದಕ್ಷಿಣ ಉಪವಿಭಾಗದ ವಿಶೇಷ ಕರ್ತವ್ಯ ತಂಡ ಬಂಧಿಸಿದೆ. ಬಂಧಿತನು ಉಮ್ಮರ್ ನವಾಫ್, ಅಬ್ದುಲ್ ಖಾದರ್ ಅವರ ಪುತ್ರ. ಮೂಲತಃ ಉಳ್ಳಾಲ ತಾಲೂಕಿನ ಮಾರ್ಗತಲೆ ನಿವಾಸಿಯಾಗಿದ್ದು, ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪಾವೂರು ಅಂಚೆ ವ್ಯಾಪ್ತಿಯ ಕುಂಡಪ್ಪು, ಗೇರುಕಟ್ಟೆಯ ನಾಜಿಯಾ ಮಂಜಿಲ್‌ನಲ್ಲಿ ವಾಸಿಸುತ್ತಿದ್ದನು. ಪೊಲೀಸರ ಮಾಹಿತಿ ಪ್ರಕಾರ, ಉಮ್ಮರ್ ನವಾಫ್ ವಿರುದ್ಧ 13ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ವಿವಿಧ ಪ್ರಕರಣಗಳ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ, ನ್ಯಾಯಾಲಯವು ಆತನ ವಿರುದ್ಧ 30ಕ್ಕೂ ಹೆಚ್ಚು ಬಂಧನ ವಾರಂಟ್‌ಗಳನ್ನು ಹೊರಡಿಸಿತ್ತು. ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ವಿಶೇಷ ಕರ್ತವ್ಯ ತಂಡವು ಆರೋಪಿ ಉಮ್ಮರ್ ನವಾಫ್‌ನನ್ನು ಆಗಸ್ಟ್…
ಬಂಟ್ವಾಳ, ಆ. 3: ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಹಳ್ಳವನ್ನು ದಾಟಲು ಯತ್ನಿಸಿದ ವ್ಯಕ್ತಿಯೊಬ್ಬರು ನೀರಿನ ಪ್ರವಾಹಕ್ಕೆ ಕೊಚ್ಚಿಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಯಿ–ವರಂಗಲ ಸಮೀಪ ಸೋಮವಾರ ನಡೆದಿದೆ. ಕೊಚ್ಚಿಹೋದ ವ್ಯಕ್ತಿಯನ್ನು ಜೀವನ್ ಪಿಂಟೋ (42) ಎಂದು ಅನುಮಾನಿಸಲಾಗಿದೆ. ಹಳ್ಳದಲ್ಲಿ ನೀರಿನ ಹರಿವು ತೀವ್ರವಾಗಿದ್ದರೂ ದಾಟಲು ಮುಂದಾದ ವೇಳೆ ಕಾಲು ಜಾರಿ ಪ್ರವಾಹದಲ್ಲಿ ಸಿಲುಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಯ ಮಾಹಿತಿ ಸಿಗುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಶೋಧ ಕಾರ್ಯ ಆರಂಭಿಸಿದರು. ಡೆಪ್ಯುಟಿ ಕಮಾಂಡೆಂಟ್ ಅಖಿಲೇಶ್ ಕುಮಾರ್ ಚೌಬೆ ಹಾಗೂ ಇನ್ಸ್‌ಪೆಕ್ಟರ್ ಶಾಂತಿಲಾಲ್ ಜಾಟಿ ಅವರ ನೇತೃತ್ವದ 22 ಸದಸ್ಯರ ಎನ್‌ಡಿಆರ್‌ಎಫ್ ತಂಡ ನಾಪತ್ತೆಯಾದ ವ್ಯಕ್ತಿಗಾಗಿ ನಿರಂತರ ಶೋಧ ಕಾರ್ಯ ನಡೆಸುತ್ತಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಹಳ್ಳ-ತೊರೆಗಳ ನೀರಿನ ಮಟ್ಟ ಅಪಾಯಕಾರಿಯಾಗಿ ಏರಿಕೆಯಾಗಿರುವುದರಿಂದ ಸಾರ್ವಜನಿಕರು ಅನಗತ್ಯವಾಗಿ ನೀರಿನ ಪ್ರದೇಶಗಳಿಗೆ ಇಳಿಯದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, ಆ. 01 : ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಕುಟುಂಬ ಸಮೇತರಾಗಿ ಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಸಿಎಂ ಜೊತೆಗೆ ಏನು ಚರ್ಚೆ ಮಾಡಿಲ್ಲ. ಮುಂದೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.ಶುಕ್ರವಾರ ರಾತ್ರಿ ಜೈಲಿನಿಂದ ಹೊರಬಂದ ವಿನಯ್ ಕುಲಕರ್ಣಿ ಮಾಧ್ಯಮಗಳೊಂದಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ನೇರವಾಗಿ ವಾಹನದಲ್ಲಿ ತೆರಳಿದರು. ಈ ವೇಳೆ ಜೈಲು ಹೊರಗೆ ಸೇರಿದ್ದ ಅಭಿಮಾನಿಗಳು ಅವರಿಗೆ ಹೂವಿನ ಹಾರ ಹಾಕಿ ಸ್ವಾಗತ ಕೋರಿದರು. ಕೆಲ ಅಭಿಮಾನಿಗಳೊಂದಿಗೆ ಶೇಕ್‌ಹ್ಯಾಂಡ್ ಮಾಡಿ ಅವರು ಅಲ್ಲಿಂದ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದತ್ತ ತೆರಳಿದ್ದರು.ಯೋಗೇಶ್‌ಗೌಡ ಕೊಲೆ…
ಉಳ್ಳಾಲ: ಪ್ರಧಾನಿ ನರೇಂದ್ರ ಮೋದಿಜಿಯವರು ಅನೇಕ ಜನಪರ ಯೋಜನೆಗಳನ್ನ ನೀಡಿದ್ದಲ್ಲದೆ,ದೇಶದ ಭದ್ರತೆಗೆ ವಿಶೇಷ ಆದ್ಯತೆ ನೀಡಿದ್ದು,ನಾವೆಲ್ಲರೂ ಸಾಂಸ್ಕೃತಿಕವಾಗಿ ಬದುಕಲು ದಾರಿದೀಪವಾಗಿದ್ದಾರೆ. ಉತ್ತಮ ಆರೋಗ್ಯ,ಆಯುಷ್ಯದೊಂದಿಗೆ ಅವರ ಸುದೀರ್ಘ ಆಡಳಿತದ ಫಲವು ದೇಶಕ್ಕೆ ಲಭಿಸಲಿಯೆಂದು ತುಳುನಾಡಿನಲ್ಲಿ ಶ್ರೀ ಲಕ್ಷ್ಮಿನರಸಿಂಹ ಹೋಮ ನಡೆಸುವುದರ ಮೂಲಕ ಸಾಮೂಹಿಕವಾಗಿ ಪ್ರಾರ್ಥಿಸಲಾಗಿದೆಯೆಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹೇಳಿದರು. ಪ್ರಧಾನಿ ನರೇಂದ್ರ ಮೋದಿಜಿಯವರಿಗೆ ಆಯುಷ್ಯ,ಆರೋಗ್ಯ,ಶಕ್ತಿ ವೃದ್ಧಿ,ದೇವತಾ ಅನುಗ್ರಹ ಪ್ರಾಪ್ತಿ ಹಾಗೂ ದೇಶದ ಸುಭೀಕ್ಷೆಗಾಗಿ ಪ್ರಾರ್ಥಿಸಿ ಉಳ್ಳಾಲ ತಾಲೂಕಿನ ಸೋಮೇಶ್ವರ ಶ್ರೀ ಸೋಮನಾಥ ಕ್ಷೇತ್ರದ ಬಳಿಯ ಸದಾಶಿವ ಐತಾಲ್ ರವರ ಮನೆಯಲ್ಲಿ ನಮೋ ರಾಷ್ಟ್ರ ಭಕ್ತರಿಂದ ಶನಿವಾರದಂದು ನಡೆದ ಸಾಮೂಹಿಕ ಶ್ರೀ ಲಕ್ಷ್ಮಿನರಸಿಂಹ ಹೋಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು,ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷರಾದ ಜಗದೀಶ ಆಳ್ವ ಕುವೆತ್ತಬೈಲು,ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ,ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು,ಕಾರ್ಯದರ್ಶಿಗಳಾದ ಭರತ್ ಗಟ್ಟಿ ಕೊಣಾಜೆ,ರಮೇಶ್ ಬೆದ್ರೋಳಿಕೆ,ಮಹಿಳಾ ಮೋರ್ಚದ ಅಧ್ಯಕ್ಷರಾದ ಮಾಧವಿ ಉಳ್ಳಾಲ್,ಹಿರಿಯರಾದ ಸೀತಾರಾಮ ಬಂಗೇರ,ಬಿಜೆಪಿ ಮಂಗಳೂರು ಮಂಡಲದ ನಿಕಟ…
ಉಡುಪಿ, ಆ. 01 : ಉಡುಪಿಯ ಕೋರ್ಟ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಬಸ್ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸಾವನ್ನಪ್ಪಿದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೃತರನ್ನು ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮಿ ಮಂಜು ಕೊಳ ಎಂದು ಗುರುತಿಸಲಾಗಿದ್ದು, ಅವರು ಹಿಂದೂ ಯುವ ಸೇನಾ ನಾಯಕ ಮಂಜು ಕೊಳ ಅವರ ಪತ್ನಿ. ಮಹಿಳೆ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ಉಡುಪಿ ಸಂಚಾರ ಪೊಲೀಸರ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಪಡುಬಿದ್ರೆ : ಉಚ್ಚಿಲ ಫಣಿಯೂರು ನಿವಾಸಿ ದಿ. ಪುತ್ತಿಗೆ ಗುತ್ತು ಶಂಕರ್ ಶೆಟ್ಟಿ ರವರ ಪತ್ನಿ ಶತಾಯುಷಿ ಐಕಳಭಾವ ಶಾಂಭವಿ ಶಂಕರ್ ಶೆಟ್ಟಿ(102) ಶುಕ್ರವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು . ಅವರು ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಸಹಿತ 5ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಹಿರಿಯ ಕೃಷಿಕೆಯಾಗಿ , ಆದರ್ಶದ ಗೃಹಿಣಿಯಾಗಿ ಜನಾನುರಾಗಿಯಾಗಿದ್ದರು. ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ,ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ,ಉಮಾನಾಥ ಕೋಟ್ಯಾನ್, ಮಾಜಿ ಶಾಸಕರಾದ ವಿನಯಕುಮಾರ್ ಸೊರಕೆ, ಲಾಲಾಜಿ ಮೆಂಡನ್ , ಅಭಯಚಂದ್ರ ಜೈನ್ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್. ಎಂ.ರೈ, ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾಡ್, ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎಸ್ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್,ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ್ ಸನಿಲ್,…

