Author: UllalaVani

Kannada News From Coastal Karnataka

ಕೊಣಾಜೆ: ಜೀವನದಲ್ಲಿ ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸಬೇಕಾದರೆ ನಿರಂತರ ಪ್ರಯತ್ನ, ಪರಿಶ್ರಮ ಅಗತ್ಯ ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಪ್ರಶಾಂತ ಕಾಜವ ಹೇಳಿದರು. ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾಲೇಜು ವಾರ್ಷಿಕೋತ್ಸವ ಹಾಗೂ ಕಾಲೇಜು ಸಂಚಿಕೆ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರಿಗೂ ಒಂದು ಸ್ಪಷ್ಟ ಗುರಿ ಇರಬೇಕು.ಆ ಗುರಿ ತಲುಪಲು ಪ್ರಾಮಾಣಿಕ ಪ್ರಯತ್ನವಿದ್ದಾಗ ಮಾತ್ರ ಗೆಲವು ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ.ನಾಗಪ್ಪ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಹೊರಹೊಮ್ಮಬೇಕು. ತಾವು ಕಲಿತ ಕಾಲೇಜಿಗೆ ಗೌರವ ತರುವ ಕಾರ್ಯವನ್ನು ಮಾಡಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಚಾರ್ಯರಾದ ಡಾ.ಸತೀಶ್ ಗಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿಎಚ್ ಡಿ ಪದವಿ ಪಡೆದ ಅಕ್ಷತಾ ಸುವರ್ಣ ಸನ್ಮಾನಿಸಲಾಯಿತು. ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ಕವಿತಾ ಎಂ.ಎಲ್.ವಾರ್ಷಿಕ ವರದಿ ಮಂಡಿಸಿದರು. ಪ್ರಾಧ್ಯಾಪಕರಾದ ಡಾ.ಪವನ್ ಬಿ.ಪಿ.ಕಾಲೇಜು ಸಂಚಿಕೆ…

Read More

ಉಳ್ಳಾಲ: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ ಟ್ಯಾಬ್ಲೆಟ್ ಆರೀಫ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಮೇ 25 ರಂದು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್ ಇಬ್ರಾಹಿಂ ಸಿನಾನ್ ಯಾನೆ ಚಿನ್ನು(21) ಬಂಧಿತ ಆರೋಪಿ. ಆರೋಪಿಯು ಮೃತ ರೌಡಿಶೀಟರ್ ಟೊಪ್ಪಿ ನೌಫಾಲ್ ಎಂಬಾತನ ಸಹೋದರನಾಗಿದ್ದಾನೆ. ಮಾರ್ಚ್ 27 ರಂದು ಬೆಳಗಿನ ಜಾವ, ತೊಕ್ಕೊಟ್ಟು ಪ್ಲೈಓವರ್ ಮೇಲಿಂದ ಬೈಕ್ನಲ್ಲಿ ಸಂಚರಿಸುತ್ತಿದ್ದ ಆರೀಫ್ ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕೆಡವಿ, ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಬಳಿಕ ಕೃತ್ಯಕ್ಕೆ ಬಳಸಿದ ಕಾರನ್ನು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆಯನ್ನು ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿತ್ತು. ಆರೋಪಿಯ ವಿರುದ್ಧ 2025ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ ಹಾಗೂ 2024ರಲ್ಲಿ…

Read More

ದಕ್ಷಿಣ ಕನ್ನಡ ಜಿಲ್ಲೆಯ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಮನೋವೈದ್ಯರು (Psychiatrists) ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ (Clinical Psychologists) ತೀವ್ರ ಕೊರತೆ ಉಂಟಾಗಿರುವುದರಿಂದ ಬಡ ಹಾಗೂ ಗ್ರಾಮೀಣ ಭಾಗದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಜಿಲ್ಲೆಯ ದೂರದ ಊರುಗಳಿಂದ ಬರುವ ಜನರು, ವಿಶೇಷವಾಗಿ ಡಿಸೆಬಲ್ ಮಕ್ಕಳ ಪೋಷಕರು, ಶಾಲೆಗಳಿಗೆ ಅಗತ್ಯವಿರುವ ವೈದ್ಯಕೀಯ ಪ್ರಮಾಣಪತ್ರ ಪಡೆಯಲು ದಿನಗಟ್ಟಲೆ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ವಾರಕ್ಕೆ ಕೇವಲ ಎರಡು ದಿನ ಮಾತ್ರ ಸಂಬಂಧಿತ ವೈದ್ಯರ ಲಭ್ಯತೆ ಇರುವುದರಿಂದ ಅನೇಕ ಮಕ್ಕಳು ಹಾಗೂ ಪೋಷಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೋವೈದ್ಯಕೀಯ ಹಾಗೂ ಮಾನಸಿಕ ಆರೋಗ್ಯ ಸೇವೆಗಳು ಇಂದಿನ ಪರಿಸ್ಥಿತಿಯಲ್ಲಿ ಅತ್ಯಂತ ಅಗತ್ಯವಾಗಿದ್ದರೂ, ಜಿಲ್ಲೆಯಲ್ಲಿ ಪ್ರಮುಖ ಸರ್ಕಾರಿ ಆಸ್ಪತ್ರೆಯಲ್ಲೇ ವೈದ್ಯರ ಕೊರತೆ ಇರುವುದು ಆರೋಗ್ಯ ಇಲಾಖೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಗಂಭೀರ ಸಮಸ್ಯೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರು…

Read More

ಮಂಗಳೂರು : ಕುದ್ರೋಳಿಯ ನಿವಾಸಿಯಾದ 70 ವರ್ಷದ ಹಿರಿಯ ನಾಗರಿಕಳಾದ ದೇವಕಿ ಕೊಟ್ಯಾನ್ ಅವರು ತಾಂತ್ರಿಕ ಕಾರಣ ಒಡ್ಡಿ ಗ್ಯಾಸ್ ಸಿಲಿಂಡರ್ ವಿತರಣೆ ನಿರಾಕರಿಸಲಾಗುತ್ತಿದೆ ಎಂದು ಆರೋಪಿಸಿ ಆಹಾರ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಕಳೆದ ಸುಮಾರು 30 ವರ್ಷಗಳಿಂದ ಮಿಥಿಲಾ ಭಾರತ್ ಗ್ಯಾಸ್ ಡಿಸ್ಟ್ರಿಬ್ಯೂಟರ್ ಮೂಲಕ ಗ್ಯಾಸ್ ಸಪ್ಲೈ ಪಡೆಯುತ್ತಿದ್ದ ಅವರು, ಇತ್ತೀಚೆಗೆ “ಕಣ್ಣಿನ ಮ್ಯಾಪಿಂಗ್” ಸಂಬಂಧಿತ ತಾಂತ್ರಿಕ ಸಮಸ್ಯೆ ಎಂಬ ಕಾರಣ ನೀಡಿ ಗ್ಯಾಸ್ ನೀಡಲು ನಿರಾಕರಿಸಲಾಗಿದೆ ಎಂದು ದೂರಿದ್ದಾರೆ. ತಾವು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ಸಹಾಯ ಮಾಡಲು ಯಾರೂ ಇಲ್ಲದ ಪರಿಸ್ಥಿತಿಯಲ್ಲಿ ಗ್ಯಾಸ್ ಸಪ್ಲೈ ಸ್ಥಗಿತಗೊಂಡಿರುವುದರಿಂದ ದಿನನಿತ್ಯದ ಊಟ ತಯಾರಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದೇನೆ ಎಂದು ದೇವಕಿ ಕೊಟ್ಯಾನ್ ತಿಳಿಸಿದ್ದಾರೆ. ಈ ಕುರಿತು ಅವರು ದಕ್ಷಿಣ ಕನ್ನಡ ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದು, 70 ವರ್ಷದ ಹಿರಿಯ ನಾಗರಿಕಳಾದ ತಮ್ಮ ಪರಿಸ್ಥಿತಿಯನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ ತಕ್ಷಣ ಸಮಸ್ಯೆ ಪರಿಹರಿಸಿ ಗ್ಯಾಸ್ ವಿತರಣೆ ಪುನರಾರಂಭಿಸಲು ಸಂಬಂಧಪಟ್ಟ…

Read More

ಕೊಣಾಜೆ: ತಾಲೂಕಿನ ಕುರ್ನಾಡು ಶ್ರೀ ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿಗಳ ಮಹಾಸಂಗಮ ಕಾರ್ಯಕ್ರಮ ನಡೆಯಿತು. ಸಾಂಪ್ರದಾಯಿಕವಾಗಿ ದೀಪ ಪ್ರಜಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಿವೃತ್ತ ಮುಖ್ಯೋಪಾದ್ಯಾಯ ಪಿ. ಶಿವರಾಮ ಶೆಟ್ಟಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ವಿಶೇಷ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವಿವಿಧ ಮನರಂಜನಾ ಕಾರ್ಯಕ್ರಮಗಳು ನಡೆದವು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದೇವದಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.ಶಾಲಾ ಸಂಚಾಲಕ ಗಣೇಶ್ ನಾಯ್ಕ್, ಶಾಲಾ ಮುಖ್ಯೋಪಾದ್ಯಾಯಿನಿ ವಸಂತಿ, ಶ್ರೀ ದತ್ತಾತ್ರೇಯ ಯಕ್ಷಗಾನ ಮತ್ತು ಭಜನಾ ಮಂಡಳಿ ಅಧ್ಯಕ್ಷ ನಾಗರಾಜ ಭಟ್, ಹಾಪ್ ಕಾಮ್ಸ್ ಅಧ್ಯಕ್ಷ ಪ್ರಶಾಂತ ಗಟ್ಟಿ, ಹಿರಿಯ ವಿದ್ಯಾರ್ಥಿ ಮೊಯಿದಿನ್ ಹಾಜಿ, ಮದ್ಯನಡ್ಕತ್ವಾಹಾ ಜುಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು. ದೀಕ್ಷಾ ತೃಷಾ ಪ್ರಾರ್ಥಿಸಿದರು. ಭಾರತಿ ಶೆಟ್ಟಿ ಸ್ವಾಗತಿಸಿದರು. ಆಲ್ವಿನ್ ಪಿಂಟೋ ವಂದಿಸಿದರು. ರೇಖಾ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.

Read More

ಗಡಿ ಪ್ರದೇಶದ ಪುಟ್ಟ ಊರಾದ ವರ್ಕಾಡಿ–ಪಾವಳದಲ್ಲಿ ಜನಿಸಿ ಬೆಳೆದ ಹಮೀದ್ ಪಾವಳ ಅವರು ಕಳೆದ 16 ವರ್ಷಗಳಿಂದ ಪೊಲೀಸ್ ಹಾಗೂ ಹೋಂ ಗಾರ್ಡ್ ಇಲಾಖೆಯಲ್ಲಿ ನಿಷ್ಠೆ, ಶಿಸ್ತು ಮತ್ತು ಸೇವಾಭಾವದಿಂದ ಕರ್ತವ್ಯ ನಿರ್ವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ. ಟ್ರಾಫಿಕ್ ನಿಯಂತ್ರಣ, ಬಂದೋಬಸ್ತು ಕರ್ತವ್ಯ, ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ರಕ್ಷಣಾ ಕಾರ್ಯ, ಚುನಾವಣಾ ಕರ್ತವ್ಯಗಳು ಸೇರಿದಂತೆ ಜನಸೇವೆಯ ಪ್ರತಿಯೊಂದು ಹಂತದಲ್ಲೂ ಸದಾ ಮುಂಚೂಣಿಯಲ್ಲಿ ನಿಂತು ಸೇವೆ ಸಲ್ಲಿಸಿರುವ ಹಮೀದ್ ಪಾವಳ ಅವರು, ಸಾರ್ವಜನಿಕ ವಲಯದಲ್ಲಿ ಮಾದರಿ ವ್ಯಕ್ತಿತ್ವವಾಗಿ ಹೊರಹೊಮ್ಮಿದ್ದಾರೆ.ಅವರ ಸೇವಾ ನಿಷ್ಠೆಗೆ ಸಾಕ್ಷಿಯಾಗಿ ಈಗಾಗಲೇ 116ಕ್ಕೂ ಅಧಿಕ ಸನ್ಮಾನಗಳು ದೊರೆತಿವೆ. ಪೊಲೀಸ್ ಕಮಿಷನರ್ ಸಂಧೀಪ್ ಪಟೇಲ್, ಡಿಸಿಪಿ, ಎಸಿಪಿ ಹಾಗೂ ಹೋಂ ಗಾರ್ಡ್ ಇಲಾಖೆಯಿಂದ ಅನೇಕ ಪ್ರಶಂಸಾಪತ್ರಗಳು ಮತ್ತು ಗೌರವಗಳು ಅವರಿಗೆ ಲಭಿಸಿರುವುದು ಅವರ ಸೇವೆಯ ಮಹತ್ವವನ್ನು ಸಾರುತ್ತದೆ. ಸಾಮಾನ್ಯ ಕುಟುಂಬದಿoದ ಬಂದರೂ ಸಮಾಜ ಸೇವೆಯನ್ನೇ ಧ್ಯೇಯವನ್ನಾಗಿ ಮಾಡಿಕೊಂಡು ದುಡಿಯುತ್ತಿರುವ ಹಮೀದ್ ಪಾವಳ ಅವರಂತಹ ಸೇವಕರನ್ನು ಗುರುತಿಸಿ ಪ್ರೋತ್ಸಾಹಿಸುವುದು ಸರ್ಕಾರ ಮತ್ತು ಜಿಲ್ಲಾಡಳಿತದ ಹೊಣೆಗಾರಿಕೆಯಾಗಿದೆ.…

Read More

ಉಡುಪಿ, ಮೇ. 25: ಮೂಡನಿಡಂಬೂರು ಗ್ರಾಮದ ಕರಾವಳಿ ಬೈಪಾಸ್ ಬಳಿ ಬೇಕರಿ ಮಾಲೀಕರೊಬ್ಬರ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿದಿಯೂರು ಗ್ರಾಮದ ಮುರಳಿಧರ್ (35) ಎಂಬುವರು ನೀಡಿದ ದೂರಿನ ಪ್ರಕಾರ, ಅವರು ಕಳೆದ 20 ವರ್ಷಗಳಿಂದ ಕರಾವಳಿ ಬೈಪಾಸ್ ಬಳಿಯ ಸಾಗರ್ ಗಂಗಾ ಕಟ್ಟಡದ ನೆಲಮಹಡಿಯಲ್ಲಿ ‘ಪೂಜಾ ಬೇಕರಿ’ ನಡೆಸುತ್ತಿದ್ದಾರೆ. ಇವರ ಅಂಗಡಿಯ ಪಕ್ಕದಲ್ಲೇ ಅಶೋಕ್ ಎಂಬಾತ ಕಳೆದ ಒಂದು ವರ್ಷದಿಂದ ‘ಕೃಷ್ಣ ಬೇಕರಿ’ ನಡೆಸುತ್ತಿದ್ದಾನೆ ಎಂದು ತಿಳಿದುಬಂದಿದೆ.ಘಟನೆಯ ವಿವರಮೇ 23ರಂದು ಮಧ್ಯಾಹ್ನ ಸುಮಾರು 12:30ರ ವೇಳೆಗೆ ಮುರಳಿಧರ್ ಅವರು ತಮ್ಮ ಬೇಕರಿಯಲ್ಲಿ ಗ್ರಾಹಕರಿಗೆ ವ್ಯಾಪಾರ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಆರೋಪಿ ಅಶೋಕ್ ಇದ್ದಕ್ಕಿದ್ದಂತೆ ಅಂಗಡಿಯ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅಕ್ರಮವಾಗಿ ಒಳಗೆ ನುಗ್ಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಮುರಳಿಧರ್ ಅವರ ಕಾಲರ್ ಪಟ್ಟಿ ಹಿಡಿದು, ಕೆನ್ನೆಗೆ ಹಾಗೂ ಕುತ್ತಿಗೆಗೆ ಹೊಡೆದು, ಕಾಲಿನಿಂದ ಒದ್ದು ನೆಲಕ್ಕೆ ತಳ್ಳಿದ್ದಾನೆ…

Read More

ಪೆರ್ಮನ್ನೂರು ಸಮೀಪದ ಕಲ್ಲಾಪು ಬುರ್ದುಗೋಳಿ ಸಾನಿಧ್ಯಕ್ಕೆ ಟೋನಿ ಗೈ ಸಂಸ್ಥೆಯ ಮಾಲಕರಾದ ಶರತ್ ಕೆ.ಜೆ. ಅವರು ತಮ್ಮ ಜನ್ಮದಿನದ ಪ್ರಯುಕ್ತ ನೂತನ ಕುಡಿಯುವ ನೀರಿನ ಶುದ್ಧೀಕರಣ ಯಂತ್ರವನ್ನು ದೇಣಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕದ್ರಿ ಇವೆಂಟ್ಸ್ ಸಂಸ್ಥೆಯ ಮಾಲಕರಾದ ಜಗದೀಶ್ ಕದ್ರಿ, ಕಾರಣಿಕ ಕ್ಷೇತ್ರವಾದ ಗುಳಿಗ–ಕೊರಗಜ್ಜ ದೈವಗಳ ಉದ್ಭವ ಶಿಲೆಯ ಪ್ರಧಾನ ಆದಿಸ್ಥಳ ಸೇವಾ ಟ್ರಸ್ಟ್ ಬುರ್ದುಗೋಳಿ ಕಲ್ಲಾಪು ಪೆರ್ಮನ್ನೂರಿನಲ್ಲಿ ಭಕ್ತಿಯಿಂದ ಬೇಡಿಕೊಂಡ ಅನೇಕ ಕಾರ್ಯಗಳು ನೆರವೇರಿವೆ ಎಂದು ಹೇಳಿದರು. ಕ್ಷೇತ್ರಕ್ಕೆ ಹಲವಾರು ಗಣ್ಯರು ಹಾಗೂ ಸೆಲೆಬ್ರಿಟಿಗಳು ಆಗಮಿಸಿ ದೈವದ ದರ್ಶನ ಪಡೆಯುತ್ತಿರುವುದು ವಿಶೇಷವಾಗಿದೆ ಎಂದರು. ಇದೇ ವೇಳೆ ಶರತ್ ಕೆ.ಜೆ. ಅವರು ತಮ್ಮ ಹುಟ್ಟುಹಬ್ಬದ ಅಂಗವಾಗಿ ಸಮಾಜಮುಖಿ ಕಾರ್ಯ ಮಾಡಬೇಕೆಂಬ ಆಶಯ ವ್ಯಕ್ತಪಡಿಸಿದಾಗ, ಕ್ಷೇತ್ರದಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಯಂತ್ರದ ಅಗತ್ಯವಿರುವುದನ್ನು ತಿಳಿಸಲಾಯಿತು. ಕೇವಲ ಹತ್ತು ದಿನಗಳೊಳಗೆ ಅವರು ಈ ವ್ಯವಸ್ಥೆಯನ್ನು ಕಲ್ಪಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಷೇತ್ರದ ದೈವವು ಅವರಿಗೆ ಇನ್ನಷ್ಟು ಸಾಮಾಜಿಕ ಸೇವೆಗಳನ್ನು…

Read More

ಮಂಗಳೂರು: ನಿಟ್ಟೆ ವಿದ್ಯಾಸಂಸ್ಥೆಯ ಅಧೀನದಲ್ಲಿ ಕಾರ್ಯಚರಿಸುತ್ತಿರುವ ನಂತೂರಿನ ಡಾ. ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ 2026ರ ಸಾಲಿನ ಓರಿಯೆಂಟೆಸನ್ ಕಾರ್ಯಕ್ರಮ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ನಡೆಯಿತು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಸಚಿವ ಡಾ. ಹರ್ಷ ಹಾಲಹಳ್ಳಿ ಓರಿಯೆಂಟೆಸನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌.ಬಳಿಕ ಮಾತನಾಡಿದ ಅವರು ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಅತ್ಯಂತ ನಿರ್ಣಾಯಕವಾದ ಘಟ್ಟವಾಗಿದೆ. ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಗೆ ಸೀಮಿತವಾಗದೆ, ಉತ್ತಮ ಸಂಸ್ಕಾರ ಮತ್ತು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ನಿಟ್ಟೆ ಸಂಸ್ಥೆಯು ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸದಾ ಪೂರಕ ವಾತಾವರಣವನ್ನು ಕಲ್ಪಿಸುತ್ತಾ ಬಂದಿದೆ. ಹೊಸ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಸಿಗುವ ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉನ್ನತ ಗುರಿ ತಲುಪಬೇಕು ಎಂದು ಹೇಳಿದರು. ​ ದೇರಳಕಟ್ಟೆ ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಡೀನ್ ಡಾ. ಸಂದೀಪ್ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಶಿಕ್ಷಣ ರಂಗದಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರ…

Read More

ಮಂಗಳೂರು ಬಂದರು ಪ್ರದೇಶದಲ್ಲಿ ವರ್ಷಗಳಿಂದ ನಡೆಯುತ್ತಿರುವ ಪರಿಸರ ಮಾಲಿನ್ಯ, ಧೂಳು ಹಾಗೂ CRZ ಉಲ್ಲಂಘನೆಗಳ ಕುರಿತು ಸಾರ್ವಜನಿಕರಿಂದ ಅನೇಕ ಬಾರಿ ಆಕ್ಷೇಪಗಳು ವ್ಯಕ್ತವಾಗಿದ್ದರೂ, ಸಂಬಂಧಿತ ಇಲಾಖೆಗಳು ಹಾಗೂ ಜನಪ್ರತಿನಿಧಿಗಳಿಂದ ಸಮರ್ಪಕ ಕ್ರಮಗಳು ಕಂಡುಬರಲಿಲ್ಲ ಎಂಬ ಟೀಕೆಗಳು ಮತ್ತೆ ಕೇಳಿಬರುತ್ತಿವೆ. ಇದೀಗ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ನಿರಂತರ ಹೋರಾಟ, ದೂರುಗಳು ಹಾಗೂ ದಾಖಲೆ ಸಮೇತ ಮನವಿಗಳ ಪರಿಣಾಮವಾಗಿ ಮಂಗಳೂರು ಬಂದರು ಇಲಾಖೆ ಎಚ್ಚೆತ್ತುಕೊಂಡಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ಸಾರ್ವಜನಿಕರ ದೂರುಗಳ ಆಧಾರದಲ್ಲಿ ಬಂದರು ಇಲಾಖೆ ಪತ್ರ ವ್ಯವಹಾರ ಆರಂಭಿಸಿರುವುದು ಪರಿಸರ ಹೋರಾಟಗಾರರ ಒತ್ತಡದ ಫಲವೆಂದು ಹೇಳಲಾಗುತ್ತಿದೆ. ಆಶ್ಚರ್ಯದ ವಿಷಯವೆಂದರೆ, ಮಂಗಳೂರು ಜಲಸಾರಿಗೆ ಮತ್ತು ಬಂದರು ಇಲಾಖೆಗೆ ಹಲವು ವರ್ಷಗಳಿಂದ ಅನೇಕ ಸಚಿವರು ಹೊಣೆ ಹೊತ್ತಿದ್ದರೂ, ತಮ್ಮದೇ ಇಲಾಖೆಯ ಜಾಗಗಳ ಸರ್ವೆ ಹಾಗೂ ಪರಿಸರ ಸ್ಥಿತಿಗತಿ ಕುರಿತು ಗಂಭೀರ ಗಮನ ಹರಿಸದಿರುವ ಆರೋಪ ಕೇಳಿಬರುತ್ತಿದೆ. ರಮಾನಾಥ ರೈ, ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಕೃಷ್ಣ ಪಾಲೇಮಾರ್, ವಿ. ಸೋಮಣ್ಣ ಸೇರಿದಂತೆ ಹಲವು ನಾಯಕರು…

Read More