ಈ ವಾರ್ಷಿಕ ಸಾಲಿನಲ್ಲಿ ಅತ್ಯುತ್ತಮ ಸೌಲಭ್ಯದೊಂದಿಗೆ ಪಿಯುಸಿ ಜೊತೆ ಆರಂಭವಾಗಲಿರುವ ಕಣಚೂರು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ 100 ವಿದ್ಯಾರ್ಥಿಗಳಿಗೆ ಉಚಿತ ದಾಖಲಾತಿ ಮತ್ತು ಕಣಚೂರು ಮೆಡಿಕಲ್ ಕಾಲೇಜಿನ ದಶಮಾನೋತ್ಸವ ಕೊಡುಗೆಯಾಗಿ ನೀಡುವ ಒಂದು ಕೋಟಿ ರುಪಾಯಿ ವಿದ್ಯಾರ್ಥಿ ವೇತನಕ್ಕೆ ಅರ್ಹತಾ ಪರೀಕ್ಷೆಯು ಕಣಚೂರು ಹೆಲ್ತ್ ಸಿಟಿ ಕ್ಯಾಂಪಸ್ ನಲ್ಲಿ ನಡೆಯಿತು. ಕಣಚೂರು ಸಂಸ್ಥೆಯು ಪಿಯುಸಿ ಇಂಟಿಗ್ರೇಟೆಡ್ NEET, JEE, NDA, CET, CA, ಮಾಡಲು ಬಯಸುವ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಪರೀಕ್ಷೆಯನ್ನು ನಡೆಸಿತ್ತು. ಭಾರತದ ಖ್ಯಾತ ಸ್ಪರ್ಧಾತ್ಮಕ ಪರೀಕ್ಷೆ ತರಬೇತುದಾರರು ಮತ್ತು ಶ್ರೇಷ್ಠ ಮೌಲ್ಯಮಾಪನ ಪದ್ಧತಿಯನ್ನು ಅಳವಡಿಸಿ ಆರಂಭಿಸಿರುವ ಈ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಈ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಇದು ಹುಡುಗರಿಗೆ ಮತ್ತು ಹುಡುಗಿಯರಿಗೆ ಅವರ ಸಾಧನೆಗೆ ಅವಕಾಶ ಕಲ್ಪಿಸುವ ಪ್ರಯತ್ನವಾಗಿದೆ. ಗ್ರಾಮೀಣ ಮತ್ತು ಪ್ರತಿಭಾವಂತ ಆರ್ಥಿಕ ಹಿಂದುಳಿದ ಸಂಸಾರದ ಮಕ್ಕಳಿಗೆ ಪಿಯುಸಿ ಇಂಟಿಗ್ರೇಟೆಡ್ ಕಲಿಯಲು ಲಕ್ಷಾಂತರ ರೂಪಾಯಿ…
Author: UllalaVani
ಉಳ್ಳಾಲ: ನೂರೆ ಅಜ್ಮೀರ್ ಇದರ ಐದನೇ ವಾರ್ಷಿಕದ ಐತಿಹಾಸಿಕ ಮಹಾ ಸಂಗಮ ಕಾರ್ಯಕ್ರಮ ಉಳ್ಳಾಲ ಹಝ್ರತ್ ಕಾಲೇಜು ಮೈದಾನದಲ್ಲಿ ನಡೆಯಿತು. ಸ್ಪೀಕರ್ ಯುಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿವಿಧ ಧಾರ್ಮಿಕ ಕೇಂದ್ರಗಳ ಜೊತೆ ಸೌಹಾರ್ದ ಸಾಮರಸ್ಯ ಇರುವ ಈ ಉಳ್ಳಾಲ ಅಭಿವೃದ್ಧಿ ಆಗಬೇಕು.ಇದು ನಮ್ಮ ಯೋಜನೆ ಆಗಬೇಕು. ಶೈಕ್ಷಣಿಕ ಬೆಳವಣಿಗೆಗೆ ಉತ್ತೇಜನ ನೀಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ನಾವು ಮಾಡಬೇಕು ಎಂದು ಕರೆ ನೀಡಿದರು.ಶೈಖುನಾ ಇರ್ಶಾದ್ ದಾರಿಮಿ ಮಿತ್ತ ಬೈಲ್ ದುಆ ನೆರವೇರಿಸಿದರು. ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಮಾತನಾಡಿ ಶುಭಹಾರೈಸಿದರು. ವಲಿಯುದ್ದೀನ್ ಫೈಝಿ ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಫಾರೂಕ್ ಉಳ್ಳಾಲ್, ಶರೀಫ್ ಹಾಜಿ ವೈಟ್ ಸ್ಟೋನ್, ಉಳ್ಳಾಲ ದರ್ಗಾ ಮಾಜೀ ಅಧ್ಯಕ್ಷ ಅಬ್ದುಲ್ ರಶೀದ್ , ಮುಸ್ತಫಾ ಅಬ್ದುಲ್ಲಾ, ಲತೀಫ್ ಗುರುಪುರ, ನಾಝಿಮ್ ಮುಕ್ಕಚೇರಿ,ಎಂ ಎಚ್ ಮೊಯ್ದಿನ್ ಹಾಜಿ, ಆಸಿಫ್ ಅಬ್ದುಲ್ಲಾ,ಅಬ್ದುಲ್ ರಹ್ಮಾನ್ ಫ್ಲವರ್, ಫಕೀರಬ್ಬ ಮಾಸ್ಟರ್, ಕೆ.ಎಸ್.ಮೊಯ್ದಿನ್, ಹಮೀದ್ ಕಣ್ಣೂರು, ಅಶ್ರಫ್…
ಉಡುಪಿ, , ಏ. 06 ; ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ವೃದ್ದರೊಬ್ಬರು ಪವಾಡಸದೃಶವಾಗಿ ಬದುಕುಳಿದ ಘಟನೆ ಆದಿ ಉಡುಪಿಯ ಕಂಬಳಕಟ್ಟೆಯಲ್ಲಿ ನಡೆದಿದೆ. ಬದುಕುಳಿದವರನ್ನು ಕಂಬಳಕಟ್ಟೆ ನಿವಾಸಿ ಶ್ರೀನಿವಾಸ ಆಚಾರ್ಯ (62 )ಎಂದು ಗುರುತಿಸಲಾಗಿದೆ. ಸುಮಾರು 20 ಅಡಿ ಆಳದ ನೀರಿನ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದಿದ್ದಾರೆ.ಒಂಟಿಯಾಗಿ ವಾಸಿಸುವ ಶ್ರೀನಿವಾಸ ಆಚಾರ್ಯ ಎರಡು ತಿಂಗಳ ಹಿಂದೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಆದರೆ ಚೇತರಿಸಿಕೊಂಡಿದ್ದರು. ಕಳೆದ ಶನಿವಾರ ಸಂಜೆ, ಅವರ ಮನೆಯ ಮುಂಭಾಗದಲ್ಲಿರುವ ಬಾವಿಯಲ್ಲಿ (10 ಅಡಿ ಅಗಲ ಮತ್ತು 20 ಅಡಿ ಆಳ) ಕಸ ಬಿದ್ದಿದ್ದರಿಂದ, ಪಂಪ್‌ಗೆ ಸಂಪರ್ಕಗೊಂಡಿರುವ ಫುಟ್‌ಬಾಲ್ ಪೈಪ್‌ಗೆ ಕಟ್ಟಿದ್ದ ಹಗ್ಗವನ್ನು ಎಳೆಯಲು ಪ್ರಯತ್ನಿಸಿದ್ದರು. ಈ ವೇಳೆ ಹಗ್ಗ ತುಂಡಾಗಿ ಅವರು ಸಮತೋಲನ ಕಳೆದುಕೊಂಡು ಬಾವಿಗೆ ಬಿದ್ದರು. ಅವರು ನೀರಿಗೆ ಬಿದ್ದಿದ್ದರೂ, ಫುಟ್‌ಬಾಲ್ ಪೈಪ್ ಮತ್ತು ಬಾವಿಯೊಳಗಿನ ಹಗ್ಗವನ್ನು ಹಿಡಿದುಕೊಂಡು ಸಹಾಯಕ್ಕಾಗಿ ಬೊಬ್ಬೆ…
ಕಾಸರಗೋಡು, ಏ. 06 ;ಹತ್ತು ವರ್ಷಗಳ ಎಲ್ ಡಿ ಎಫ್ ಆಡಳಿತ ಕೇರಳವನ್ನು ದಿವಾಳಿಯತ್ತ ಕೊಂಡೊಯ್ದಿದ್ದು ನಿರುದ್ಯೋಗ, ಬೆಲೆ ಏರಿಕೆ , ಹಣದುಬ್ಬರದಿಂದ ಕೇರಳ ತತ್ತರಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಮಂಜೇಶ್ವರ ಸಮೀಪದ ವರ್ಕಾಡಿ ಮಜೀರ್‌ಪಳ್ಳದಲ್ಲಿ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ ಅಶ್ರಫ್‌ರವರ ಪರ ಚುನಾವಣಾ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದರು. ಕೇರಳದಲ್ಲಿ ಈ ಹಿಂದಿನ ಕಾಂಗ್ರೆಸ್ ಸರಕಾರ ಹಾಗೂ ಈಗ ಆಡಳಿತ ನಡೆಸಿದ ಎಲ್ ಡಿ ಎಫ್ ಸರಕಾರ ತುಲನೆ ಮಾಡಿ ಕೇರಳದಲ್ಲಿ ನಿರುದ್ಯೋಗ ಹಾಗೂ ಹಣದುಬ್ಬರ, ಹಾಗೂ ಸಾಲದ ಸುಳಿಯಲ್ಲಿ ಸರ್ಕಾರ ಸಿಲುಕಿಕೊಂಡಿದೆ ಎಂದು ಅಂಕಿ ಅಂಶ ಮುಂದಿಟ್ಟು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.ಕೇರಳದಲ್ಲಿ ಬಿಜೆಪಿಗೆ ಸ್ಥಾನವಿಲ್ಲ. ಏಕೆಂದರೆ ಬಿಜೆಪಿಯವರು ರೈತರ, ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ, ಮಹಿಳೆಯರ ವಿರೋಧಿಗಳು. ಬಿಜೆಪಿಯವರಿಗೆ ಯಾವುದೇ ಸಿದ್ಧಾಂತವಿಲ್ಲ. ಶ್ರೀಮಂತರು, ಮೇಲ್ವರ್ಗದವರು, ಮತ್ತು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಬಿಜೆಪಿಯಿದೆ. ಕರ್ನಾಟಕದಲ್ಲಿ 2023 ರ ಚುನಾವಣೆಯ ಮೊದಲು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತು. ಆದರೆ ಗ್ಯಾರಂಟಿಗಳನ್ನು…
ಕುಂದಾಪುರ, ಏ. 06; ಗೂಡ್ಸ್ ವಾಹನವೊಂದರಲ್ಲಿ ಅಕ್ರಮವಾಗಿ ಎರಡು ಜಾನುವಾರು ಸಾಗಿಸುತ್ತಿರುವುದನ್ನು ಹೊಸಂಗಡಿ ಪೊಲೀಸ್ ಚೆಕ್‌ಪೋಸ್ಟ್‌ನಲ್ಲಿ ಅಮಾಸೆಬೈಲು ಪೊಲೀಸರು ಪತ್ತೆ ಹಚ್ಚಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರತರಾಗಿದ್ದ ಅಮಾಸೆಬೈಲು ಠಾಣೆಯ ಪೊಲೀಸ್ ಸಿಬ್ಬಂದಿ ಹುಲಿಕಲ್ ಘಾಟಿ ಕಡೆಯಿಂದ ಬರುತ್ತಿದ್ದ ಗೂಡ್ಸ್ ವಾಹನವನ್ನು ತಪಾಸಣೆಗಾಗಿ ತಡೆದರು. ಈ ವೇಳೆ ವಾಹನದಲ್ಲಿ ಎರಡು ಎತ್ತುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ.ಪೊಲೀಸರು ಜಾನುವಾರು ಸಾಗಿಸುತ್ತಿದ್ದ ವಾಹನ ಹಾಗೂ ಅದಕ್ಕೆ ಬೆಂಗಾವಲಾಗಿ ಬಂದಿದ್ದ ಕಾರನ್ನು ವಶಪಡಿಸಿಕೊಂಡಿದ್ದು, ಒಟ್ಟು ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆಯ ವೇಳೆ, ಈ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.ಮುಷ್ತಾಕ್ ಹುಸೇನ್ ಸಾಬ್ ನದಾಫ್ ಬೆಳಗಾಂ (29), ಸಲೀಂ ಹುಸೇನ್ ಸಾಬ್ ನದಾಫ್ ಬೆಳಗಾಂ (33), ಕಂಡ್ಲೂರು ಜುಮ್ಮಾ ಮಸೀದಿ ರಸ್ತೆಯ ನದೀಮ್ ಅಬ್ದುಲ್ ಖಾದರ್ (34) ಬಂಧಿಸಲಾಗಿದೆ. ಇದೇ ವೇಳೆ ಬೆಂಗಾವಲು ವಾಹನದಲ್ಲಿದ್ದ (ಕಾರು) ಮೊಹಮ್ಮದ್ ನೌಫಿಲ್ ಮತ್ತು ಮತ್ತೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾರೆ.ಈ ಕುರಿತು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…
ಕೊಡಗು, ಏ. 06 ; ಜಿಲ್ಲೆಯ ಅತಿ ಎತ್ತರದ ಬೆಟ್ಟವಾದ ತಡಿಯಾಂಡಮೋಳ್‌ನಲ್ಲಿ ಟ್ರೆಕ್ಕಿಂಗ್‌ಗೆ ತೆರಳಿ ಕಣ್ಮರೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಏಪ್ರಿಲ್ 2ರಿಂದ ಕಾಣೆಯಾಗಿದ್ದ ಅವರನ್ನು ಹುಡುಕಲು ನಡೆದ ಭಾರೀ ಶೋಧ ಕಾರ್ಯಾಚರಣೆ ಯಶಸ್ವಿಯಾಗಿದೆ. 36 ವರ್ಷದ ಶರಣ್ಯ ಒಬ್ಬಂಟಿಯಾಗಿ ಚಾರಣಕ್ಕೆ ತೆರಳಿದ್ದು, ದಾರಿ ತಪ್ಪಿದ ಬಗ್ಗೆ ಮಧ್ಯಾಹ್ನ ಕುಟುಂಬಕ್ಕೆ ಕರೆ ಮಾಡಿ ತಿಳಿಸಿದ್ದರು. ಬಳಿಕ ಸಂಪರ್ಕ ಕಡಿತವಾಗಿದ್ದು ಆತಂಕಕ್ಕೆ ಕಾರಣವಾಗಿತ್ತು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಹಾಗೂ ಅರಣ್ಯ ಇಲಾಖೆ ತಕ್ಷಣ ಕಾರ್ಯಪ್ರವೃತ್ತರಾಗಿದ್ದರು.ಶರಣ್ಯ ಪತ್ತೆಗೆ ಸುಮಾರು 40ಕ್ಕೂ ಹೆಚ್ಚು ಸಿಬ್ಬಂದಿ ಒಳಗೊಂಡ ಹೆಚ್ಚುವರಿ ತಂಡಗಳನ್ನು ನಿಯೋಜಿಸಲಾಗಿತ್ತು. ಡ್ರೋನ್‌ಗಳ ಸಹಾಯದಿಂದ ಮೂರು ದಿನಗಳ ಕಾಲ ಶೋಧ ನಡೆಸಲಾಗಿದ್ದು, ಒಟ್ಟು 9 ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು. ಪೊಲೀಸರು, ನಕ್ಸಲ್ ನಿಗ್ರಹ ದಳ, ಶ್ವಾನದಳ ಹಾಗೂ ಅರಣ್ಯ ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರು.ಕೊನೆಗೂ ಭಾನುವಾರ ಸಂಜೆ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಶರಣ್ಯ ಪತ್ತೆಯಾಗಿದ್ದು, ಮೂರು ದಿನಗಳ ಕಾಲ ಕಾಡಿನಲ್ಲಿ ಒಬ್ಬಂಟಿಯಾಗಿ…
ಕೊಣಾಜೆ; ಕೊಣಾಜೆ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ಬೈಕೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ನಡುಪದವು ಅಂಬೇಡ್ಕರ್ ಕಾಲನಿಯ ಬೇಬಿ ಎಂಬವರ ಪುತ್ರ ಸುಶಾಂತ್ (23 ) ಮೃತಪಟ್ಟ ಯುವಕನಾಗಿದ್ದಾನೆ. ಕಳೆದ ಗುರುವಾರದಂದು ಕಂಬಳಪದವು ಬಳಿ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ಸಂದರ್ಭದಲ್ಲಿ ತಲೆಗೆ ಗಂಭೀರವಾದ ಗಾಯವಾಗಿತ್ತು. ಕೂಡಲೇ ಆತನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾನೆ. ಹಿಟ್ ಆಂಡ್ ರನ್; ಲಾರಿ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದು, ಸಾರ್ವಜನಿಕರು ಪರಿಸರ ನಿವಾಸಿಗಳು ಆಕ್ರೋಶಗೊಂಡಿದ್ದರು. ಬಳಿಕ ಪೊಲೀಸರು ಲಾರಿಯನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದರು. ಮನೆಗೆ ಆಧಾರಸ್ತಂಭವಾಗಿದ್ದ ಸುಶಾಂತ್ ಕಳೆದ ಹಲವು ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದ. ಬಳಿಕ ಬಡ ಕುಟುಂಬಕ್ಕೆ ಈತನೇ ಆಧಾರಸ್ತಂಭವಾಗಿದ್ದ. ಒಂದೂವರೆ ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ ಸಣ್ಣ ಮಗು…
ಮಂಗಳೂರು: ಕೆಲಿಝಿಯಂ ಜಿಮ್ ಸೆಂಟರ್ ಜಿಮ್ನಾಸ್ಟಿಕ್ ಜತೆಗೆ ಜಿಮ್, ಆಟ ಎಲ್ಲವನ್ನೂ ಒಂದೇ ವೇದಿಕೆಯಲ್ಲಿ ಸ್ಥಾಪಿಸಿರುವಂತಹ ವಿಭಿನ್ನ ಪ್ರಯತ್ನ. ಈ ಮೂಲಕ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಸ್ವಸ್ಥ್ಯ ಸಮಾಜದ ನಿರ್ಮಾಣವಾಗಲಿ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯಪಟ್ಟರು. ಅವರು ಕುದ್ರೋಳಿ, ಅಳಕೆ, ಕೂಳೂರು ಫೆರಿ ರಸ್ತೆಯ ನ್ಯೂಚಿತ್ರ ಟಾಕೀಸ್ ಬಳಿಯ ಕೋಮಲ್ಸ್ ಪುಷ್ಪಾಂಜಲಿ ಕಟ್ಟಡದ ಮೊದಲ ಮತ್ತು ಎರಡನೇ ಮಹಡಿಯಲ್ಲಿ ಸ್ಥಾಪಿಸಿದ “ಗೇಮ್ ಗ್ರಿಡ್” ಮತ್ತು “ಕೆಲಿಝಿಯಮ್ ಫಿಟ್ನೆಸ್” ಸೆಂಟರ್ ಅನ್ನು ಉದ್ಘಾಟಿಸಿ ಮಾತನಾಡಿದರು.ಸಂದೀಪ್ ಮತ್ತು ರಾಹುಲ್ ಸೇರಿಕೊಂಡು ಇಬ್ಬರೂ ಮಂಗಳೂರಿನಲ್ಲೇ ಹೊಸ ಮಾದರಿಯ ನಾವೀನ್ಯತೆಯ ಕೆಲಿಝಿಯಂ ಜಿಮ್ ಸೆಂಟರ್ ಸ್ಥಾಪಿಸುವ ಮೂಲಕ ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದ್ದು, ಸರ್ವರ ಪ್ರೋತ್ಸಾಹ ಅಗತ್ಯ. ಆರೋಗ್ಯವನ್ನು ಕಾಪಾಡುವ ಮೂಲಕ ಸ್ವಸ್ಥ್ಯ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದಾರೆ. ರಾಹುಲ್ ಅವರು ತಮ್ಮ ಕೌಶಲ್ಯವನ್ನು ಸ್ಥಾಪಿಸುತ್ತಾ ಸಂದೀಪ್ ಅವರ ಅನುಭವಗಳನ್ನು ಕ್ರೂಢೀಕರಿಸಿಕೊಂಡು ಸರ್ವರೂ ಸಂತೋಷದಿಂದ ತರಬೇತಿಯನ್ನು ಪಡೆಯುವಂತಹ ವಾತಾವರಣ ಈ ಮೂಲಕ ನಿರ್ಮಾಣಗೊಳ್ಳಲಿ.…
ಮಂಜೇಶ್ವರದಲ್ಲಿ ಹೈವೋಲ್ಟೇಜ್ ಕದನ ಶುರುವಾಗಿದೆ. ಹೌದು, ಕಳೆದ ಎರಡು ಚುನಾವಣೆಗಳಲ್ಲಿ ತೀವ್ರ ಪೈಪೋಟಿಗೆ ಸಾಕ್ಷಿಯಾಗಿದ್ದ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಜಿದ್ದಾಜಿದ್ದಿನ ಹೋರಾಟದ ವೇದಿಕೆ ಸಿದ್ಧಗೊಂಡಿದೆ. ಕಾಸರಗೋಡು ಜಿಲ್ಲೆಯಲ್ಲೇ ಅತೀ ಹೆಚ್ಚು ಅಂದರೆ ಒಟ್ಟು 11 ಮಂದಿ ಆಭ್ಯರ್ಥಿಗಳು ಕಣದಲ್ಲಿದ್ದು, ಪ್ರಮುಖ ಪಕ್ಷಗಳ ನಡುವೆ ಭಾರಿ ಪೈಪೋಟಿ ನಿರೀಕ್ಷಿಸಲಾಗಿದೆ. ಅಷ್ಟೇ ಅಲ್ಲದೆ, ಜಿಲ್ಲೆಯಲ್ಲೇ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಕ್ಷೇತ್ರ ಎಂಬ ಹೆಗ್ಗಳಿಕೆಯೂ ಮಂಜೇಶ್ವರಕ್ಕಿದೆ. ಕಾಸರಗೋಡು ; ಈ ಹಿಂದಿನ ಎರಡು ವಿಧಾನಸಭೆ ಚುನಾವಣೆಯಲ್ಲಿ ನೆಕ್ ಟು ನೆಕ್ ಫೈಟ್ ಕೊಟ್ಟ ಮಂಜೇಶ್ವರದಲ್ಲಿ ಈ ಬಾರಿಯೂ ಜಿದ್ದಾ ಜಿದ್ದಿನ ಹೋರಾಟಕ್ಕೆ ವೇದಿಕೆ ಸಿದ್ದಗೊಂಡಿದೆ. ಕಾಸರಗೋಡು ಜಿಲ್ಲೆಯಲ್ಲಿ ಅತೀ ಹೆಚ್ಚು ಮತದಾರರನ್ನು ಹೊಂದಿರುವ ಮತ್ತು ಅತೀ ಹೆಚ್ಚು ಆಭ್ಯರ್ಥಿಗಳು ಸ್ಪರ್ಧಿಸುತ್ತಿರುವ ವಿಧಾನಸಭೆ ಕ್ಷೇತ್ರವಾಗಿದೆ ಮಂಜೇಶ್ವರ ವಿಧಾನಸಭಾ ಕ್ಷೇತ್ರ. ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ 11 ಮಂದಿ ಇದ್ದಾರೆ.…
ಮಂಗಳೂರು, ಎ.4: ಉದ್ಯಮಿ, ಕೊಡುಗೈದಾನಿ, ಸಮಾಜ ಸೇವಕ, ಶಿಕ್ಷಣ ಪ್ರೇಮಿ ಉಳ್ಳಾಲದ ಆಝಾದ್ ನಗರ ನಿವಾಸಿ ಯು.ಎನ್. ಅಬ್ದುಲ್ ರಝಾಕ್ ಹಾಜಿ (80) ಶನಿವಾರ ಅಪರಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ, ನಾಲ್ಕು ಮಂದಿ ಪುತ್ರರು ಮತ್ತು ನಾಲ್ಕು ಮಂದಿ ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.ಫಹಾದ್ ಫಿಶ್ ಮಿಲ್ ನಡೆಸುತ್ತಿದ್ದ ಅಬ್ದುಲ್ ರಝಾಕ್ ಹಾಜಿ ಸಲಫಿ ಚಳುವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.ಸೌತ್ ಕರ್ನಾಟಕ ಸಲಫಿ ಮೂವ್ಮೆಂಟ್ ಹಾಗೂ ಮಂಗಳೂರಿನ ಇಬ್ರಾಹೀಂ ಖಲೀಲ್ ಮಸ್ಜಿದ್ ಹಾಗೂ ಉಳ್ಳಾಲದ ಇಸ್ಲಾಹಿ ಸ್ಕೂಲ್ ಮತ್ತು ಕಲ್ಲಾಪಿನ ಪೀಸ್ ಸ್ಕೂಲ್‌ನ ಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕೊಡುಗೈ ದಾನಿಯಾಗಿದ್ದ ಅಬ್ದುಲ್ ರಝಾಕ್ ಹಾಜಿ ಸಮಾಜ ಸೇವೆಯಲ್ಲಿ ಸಕ್ರಿಯರಾಗಿದ್ದರು. ಶಿಕ್ಷಣದ ಬಗ್ಗೆ ಅಪಾರ ಒಲವು ಇತ್ತು. ಅದಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ನೆರವು ನೀಡುವುದರಲ್ಲಿ ಸದಾ ಮುಂಚೂಣಿಯಲ್ಲಿದ್ದರು.ಇಂದು ರಾತ್ರಿ 9:30ರ ಸುಮಾರಿಗೆ ಉಳ್ಳಾಲದ ಮುಕ್ಕಚೇರಿಯ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

