ಕೊಣಾಜೆ; ಕೊಣಾಜೆ ಠಾಣಾ ವ್ಯಾಪ್ತಿಯ ಕಂಬಳಪದವು ಬಳಿ ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ನಡುಪದವಿನ ಸುಶಾಂತ್ (23 ) ಎಂದು ಗುರುತಿಸಲಾಗಿದೆ.ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಈ ಸಂದರ್ಭದಲ್ಲಿ ತಲೆಗೆ ಗಂಭೀರವಾದ ಗಾಯವಾಗಿದ್ದು ಕೂಡಲೇ ಆತನನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಿಟ್ ಆಂಡ್ ರನ್; ಲಾರಿ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಪರಾರಿಯಾಗಿದ್ದು, ಸಾರ್ವಜನಿಕರು ಪರಿಸರ ನಿವಾಸಿಗಳು ಆಕ್ರೋಶಗೊಂಡಿದ್ದರು. ಬಳಿಕ ಪೊಲೀಸರು ಲಾರಿಯನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
Author: UllalaVani
ಉಳ್ಳಾಲ: ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಬೋಳಿಯಾರ್ ನಿವಾಸಿ ಮಹಮ್ಮದ್ ಆರೀಫ್ ಎಂಬಾತನನ್ನು ಬಂಧಿಸಲಾಗಿದೆ. ಕೊಣಾಜೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯನ್ವಯ ಆರೋಪಿಯನ್ನು ಬಂಧಿಸಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರುಗಡೆ ಮೈದಾನದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುವ ಮಾಹಿತಿ ಪಡೆದುಕೊಂಡ ಕೊಣಾಜೆ ಎಸ್. ಐ ನಾಗರಾಜ್ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ, ಏ. 02 ; ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿಯಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಮೂಲಕ ಹೊರಬಂದಿರುವ ಆರೋಪಿಗಳ ಜಾಮೀನು ರದ್ದುಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್ 29ರಂದು ಮಧ್ಯರಾತ್ರಿ ಸುಮಾರು 2:15 ಗಂಟೆಗೆ, ಆರೋಪಿಗಳು ಹಾಡಿಯಂಗಡಿಯ ಜಯಶ್ರೀ ಪೂಜಾರಿ ಎಂಬುವವರ ಮನೆಗೆ ನುಗ್ಗಿದ್ದರು. ಜಯಶ್ರೀ ಅವರಿಗೆ ಕತ್ತಿ ತೋರಿಸಿ ಬೆದರಿಕೆ ಹಾಕಿದ ಆರೋಪಿಗಳು, ಕೊಟ್ಟಿಗೆಯಲ್ಲಿದ್ದ ಮೂರು ಜಾನುವಾರುಗಳನ್ನು ಕಳ್ಳತನ ಮಾಡಿ ಬಳಿಕ ಅವುಗಳನ್ನು ಹತ್ಯೆಗೈದಿದ್ದರು ಎನ್ನಲಾಗಿದೆ.ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದು ಪೊಲೀಸರು ಮೊಹಮ್ಮದ್ ಯೂನಿಸ್ (31), ಮೊಹಮ್ಮದ್ ಇಕ್ಬಾಲ್ ಅಲಿಯಾಸ್ ಇಕ್ಕು (29) ಮತ್ತು ಮೊಹಮ್ಮದ್ ನಾಸಿರ್ (28) ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ, ನಂತರ ಈ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.ತನಿಖೆಯ ವೇಳೆ ಆರೋಪಿಗಳು ಈ ಕೃತ್ಯವನ್ನು ಸಂಘಟಿತ ರೀತಿಯಲ್ಲಿ ಎಸಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಪೊಲೀಸರು ಅವರ ವಿರುದ್ಧ ‘ಕೋಕಾ’ ಕಾಯ್ದೆಯಡಿ ಕ್ರಮಕೈಗೊಂಡಿದ್ದಾರೆ. ಜೊತೆಗೆ…
ಬೆಂಗಳೂರು, ಏ. 02 : ಬೆಂಗಳೂರಿನಲ್ಲಿನ ಕೆಲವೊಂದು ಪಬ್ ತುಂಬಾ ದುಬಾರಿಯಾಗಿರುತ್ತದೆ. ಅಂಗಡಿಯಲ್ಲಿ ಸಿಗುವ 5 ರೂ. ಬೋಟಿಗೆ ಪಬ್‌ವೊಂದರಲ್ಲಿ 150 ರೂ. ಪಾವತಿಸಿರುವ ಬಗ್ಗೆ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದನ್ನ ಹಂಚಿಕೊಂಡಿದ್ದಾರೆ. ಇದೀಗ ಈ ದುಬಾರಿ ಪಬ್ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅರುಣ್‌ರಾಜ್ ಪತ್ತಾರ್ ಅವರು, “ಇದನ್ನು ಚಿಲ್ಲಿ ಡಸ್ಟೆಡ್ ಗೋಲ್ಡ್ ಫಿಂಗರ್ಸ್ ಎಂದು ಕರೆಯಲಾಗುತ್ತಿತ್ತು. ನಾನು ಇದನ್ನು ಆರ್ಡರ್ ಮಾಡಿದಾಗ ಅವರು ನನಗೆ ತಂದಿದ್ದು ಇದನ್ನೇ. ಪ್ರಪಂಚದಲ್ಲಿ ಹಾಗೂ ನಮ್ಮ ರಕ್ತ ಸಂಬಂಧದಲ್ಲಿ ಇದಕ್ಕೆ 150 ಪಾವತಿಸಿ ಮೊದಲಿಗ” ಎಂದು ತಿಳಿಸಿದ್ದಾರೆ.ಸದ್ಯ ಇವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಈ ಬಗ್ಗೆ ನೆಟ್ಟಿಗರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ‘ಅಬ್ಬಾ ನಾನು ಒಬ್ಬನೇ ಇಂತಹ ವಂಚನೆಗೆ ಒಳಾಗಾಗಿಲ್ಲ’ ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದರೆ, ‘ಉತ್ತಮ ಮಾರ್ಕೆಟಿಂಗ್‌ನೊಂದಿಗೆ ಸರಳವಾದ ವಸ್ತುಗಳನ್ನು ಅತ್ಯಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಎಂದು ಹೇಳುತ್ತಾರೆ’ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.’ಕೊನೆಗೂ ನನ್ನಂತೆಯೇ…
ದೇರಳಕಟ್ಟೆ; ಶಿಶು ಮರಣ ಪ್ರಮಾಣ ಹಾಗೂ ತಾಯಿ ಮರಣ ಪ್ರಮಾಣ ಕಡಿಮೆ ಇರುವ ಸಮಾಜವೇ ನಿಜವಾದ ಆರೋಗ್ಯವಂತ ಸಮಾಜ. ಗರ್ಭಿಣಿಯರ ಸಮರ್ಪಕ ಆರೈಕೆ, ಸರಿಯಾದ ಪೌಷ್ಠಿಕ ಆಹಾರ, ರಕ್ತಹೀನತೆ ಹಾಗೂ ಸೋಂಕುಗಳನ್ನು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದರಿಂದ ಶಿಶು ಮರಣ ಪ್ರಮಾಣವನ್ನು ಬಹುಪಾಲು ತಡೆಗಟ್ಟಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯ ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಚಿಂತನಾ ಸಭಾಂಗಣದಲ್ಲಿ ಬುಧವಾರ ನಡೆದ “ಆಶಾ ಸಬಲೀಕರಣ : ಸುರಕ್ಷಿತ ತಾಯಂದಿರು, ಆರೋಗ್ಯವಾದ ಶಿಶುಗಳು” ಎಂಬ ಶೀರ್ಷಿಕೆಯ ಆಶಾ ಕಾರ್ಯಕರ್ತೆಯರ ಸಬಲೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗರ್ಭಧಾರಣೆಯ ಆರಂಭಿಕ ಹಂತದಲ್ಲೇ ನೋಂದಣಿ ಅತ್ಯಂತ ಅಗತ್ಯವಾಗಿದ್ದು, ಮೊದಲ 12 ವಾರಗಳೊಳಗೆ ನೋಂದಣಿ ಮಾಡಿಸಬೇಕು ಎಂಬ ನಿಯಮವಿತ್ತು ಆದರೆ ಈಗ 10 ವಾರಗಳೊಳಗೆ ನೋಂದಣಿ ಪ್ರಕ್ರಿಯೆ ಆಗಬೇಕು ಎಂಬ ನಿಯವಿದ್ದು ಇದರ ಬಗ್ಗೆ ಅರಿವು ಮೂಡಿಸುವ ಕೆಲಸ ನಡೆಯಬೇಕಿದೆ ಎಂದರು.ಗರ್ಭಿಣಿಯರಿಗೆ ಸರಿಯಾದ ಸಮಯದಲ್ಲಿ ಆರೋಗ್ಯ ತಪಾಸಣೆ, ಪೌಷ್ಠಿಕ ಆಹಾರ ಹಾಗೂ…
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್‌ನಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ. ಬುಧವಾರ ರಾತ್ರಿ ಸುಮಾರು 12:45 ಗಂಟೆಗೆ ಈ ಘಟನೆ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ.ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುತ್ತಿತ್ತು. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮಾರಿಪಳ್ಳ ಎಂಬಲ್ಲಿ ಡಿವೈಡರ್ ಮೇಲೆ ಹತ್ತಿ ಅಲ್ಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಂಬವು ಮುರಿದು ಬಿದ್ದಿದ್ದು, ಕಾರು ಪಲ್ಟಿಯಾಗಿದೆ.ಕಾರಿನಲ್ಲಿ ನಾಲ್ವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳಿದ್ದರು. ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಪಲ್ಟಿಯಾಗಿದ್ದ ಕಾರನ್ನು ಎತ್ತಿ ಗಾಯಗೊಂಡವರನ್ನು ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದ್ದಾರೆ.ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮುಡಿಪು ;ರಾಷ್ಟ್ರೀಯ ಸ್ವಚ್ಛತಾ ಅಭಿಯಾನ ಸ್ವಚ್ಛ ಪರಿಸರ -ಸ್ವಚ್ಛಮನೆ ಕಾರ್ಯಕ್ರಮದ ಅಂಗವಾಗಿ ಮುಡಿಪು ಅಪ್ನಾದೇಶ್ ಸ್ವಚ್ಛತಾ ಬಳಗ ಜನಶಿಕ್ಷಣ ಟ್ರಸ್ಟ್ ವತಿಯಿಂದ ಕಣಂತೂರು ಪುಷ್ಪ -ಕೇಶವರ ಮನೆಗೆ ಸ್ವಚ್ಛ ಮನೆ ಪ್ರಶಸ್ತಿ ಪ್ರದಾನ ಕಾರ್ಯ ಕ್ರಮ ಮುಡಿಪು ಜನಶಿಕ್ಷಣ ಟ್ರಸ್ಟ್ ನ ಸರ್ವೋದಯ ಸಭಾಂಗಣದಲ್ಲಿ ನಡೆಯಿತು. ಅಪ್ನಾ ದೇಶ್ ಸ್ವಚ್ಛತಾ ಬಳಗದ ಮುಖಂಡ ರಾದ ರಮೇಶ್ ಶೇಣವ ಪ್ರಶಸ್ತಿ ವಿತರಿಸಿದರು.ಬಳಿಕ ಮಾತನಾಡಿದ ಅವರು ಮನೆಯ ಸುತ್ತ ಹಸಿರು ಪರಿಸರ,ಪ್ರಾಣಿ ಪಕ್ಷಿಗಳ ಒಡನಾಟದ ಹವ್ಯಾಸ ನಮ್ಮ ದೈಹಿಕ ಮಾನಸಿಕ ಆರೋಗ್ಯವನ್ನು ಹೆಚ್ಚಿಸುತ್ತದೆ.ಈ ನಿಟ್ಟಿನಲ್ಲಿ ಸ್ವಚ್ಛ ಮನೆ ಪ್ರಶಸ್ತಿ ಇತರರಿಗೆ ಪ್ರೇರಣೆಯಾಗಲಿ ಎಂದರು.”ಸ್ವಚ್ಛ, ಪರಿಸರದ ಜೊತೆ ಗಿನ ಬದುಕು ನಮಗೆ ಮಾನಸಿಕ ನೆಮ್ಮದಿಯನ್ನು ನೀಡಿದೆ.ಮನೆಯ ಸುತ್ತ ಸಾಕಷ್ಟು ಹೂ,ಹಣ್ಣಿನ ಗಿಡಗಳು ಇರುವ ಕಾರಣವಿವಿಧ ಜಾತಿಯ ಪಕ್ಷಿಗಳು ನಿರಂತರ ಭೇಟಿ ನೀಡುತ್ತವೆ.ಗಿಡಗಳನ್ನು ಬೆಳೆಸುವುದು ಅದರ ಪಾಲನೆಯಲ್ಲಿ ನಾವಿಬ್ಬರು ತೊಡಗಿಕೊಳ್ಳುವ ಚಟುವಟಿಕೆಯಲ್ಲಿ ನಮಗೆ ಒಂದು ರೀತಿಯ ಮಾನಸಿಕ ತೃಪ್ತಿ ಇದೆ. ನಮಗೆ ಬೇಕಾದ ತರಕಾರಿ ಸೊಪ್ಪು ನಾವೆ…
ಕೊಣಾಜೆ: ಯಕ್ಷಗಾನ ಜನರ ನಡುವೆ ಸಂಭವಿಸುವ ಪುರಾಣಲೋಕ. ಗಾನ, ಕುಣಿತ, ಅಭಿನಯ, ವೇಷವೈಭವದೊಂದಿಗೆ ಬೌದ್ಧಿಕ ಜಿಜ್ಞಾಸೆಗೂ ಮಹತ್ವವಿದೆ. ಕತೆ ಹೇಳುವುದಲ್ಲ. ಬದಲಾಗಿ ಪ್ರಸಂಗವನ್ನು ವಿಶ್ಲೇಷಿಸುವ, ವ್ಯಾಖ್ಯಾನಿಸುವ ಮೂಲಕ ಹೊಸ ಅರ್ಥ ಸಾಧ್ಯತೆಗಳನ್ನು ವಾಚಿಕದಲ್ಲಿ ತರುವುದು ಮುಖ್ಯ. ಯಕ್ಷಗಾನದಲ್ಲಿ ಆಖ್ಯಾನಕ್ಕಿಂತ ವ್ಯಾಖ್ಯಾನ ಮುಖ್ಯ ಎಂದು ಯಕ್ಷಗಾನ ವಿದ್ವಾಂಸ, ಕಲಾವಿದ ಪ್ರೊ.ಎಂ.ಎಲ್ ಸಾಮಗ ಹೇಳಿದರು. ಇವರು ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಇದರ ವತಿಯಿಂದ ಕಲಾವಿದರ ಯಕ್ಷಪಯಣದ ಸ್ಬಗತ ‘ ಯಕ್ಷಾಯಣ-ದಾಖಲೀಕರಣ’ ಸರಣಿ -10ರ ಕಾರ್ಯಕ್ರಮದಲ್ಲಿ ತಮ್ಮ ಅನುಭವವನ್ನು ಹಂಚಿಕೊAಡರು. ಜಾಗತಿಕ ರಂಗಭೂಮಿಯಲ್ಕಿ ಯಕ್ಷಗಾನ ಗಟ್ಟಿಯಾಗಿ ನಿಲ್ಲಬೇಕಾದರೆ ಯಕ್ಷಗಾನಕ್ಕೆ ಶೈಕ್ಷಣಿಕ ನೆಲೆಗಟ್ಟು ಕೂಡಾ ಅಗತ್ಯವಾಗಿ ದೊರಕಬೇಕಿದೆ. ಯಕ್ಷಗಾನವನ್ನು ಮುಕ್ತ ಮನಸ್ಸಿನಿಂದ ನೋಡುವ ಮನೋಭಾವ ನಮ್ಮದಾಗಬೇಕು. ತನ್ನ ನೈಪುಣ್ಯತೆಯಿಂದ ಪ್ರೇಕ್ಷಕನ್ನು ಸೆಳೆಯುವುದೇ ಕಲಾವಿದನ ಮೊದಲ ಆಧ್ಯತೆಯಾಗಬೇಕು ಎಂದು ಹೇಳಿದರು.ತಂದೆ ದೊಡ್ಡ ಸಾಮಗರಿಂದಾಗಿ ಯಕ್ಷಗಾನದ ಆಸಕ್ತಿ ಬೆಳೆಯಿತು. ಜೊತೆಗೆ ಕಲಾವಿದರು ನನ್ನನ್ನು ಗೌರವದಿಂದ ಕಾಣ್ತಾ ಇದ್ದರು. ಕಡತೋಕ…
ಕೊಣಾಜೆ: ಕೊಣಾಜೆ ಪ್ರೌಢಶಾಲೆಯ ಎಸ್‌ಡಿಎಂಸಿ ಹಾಗೂ ಕೋಡಿಜಾಲ್ ಜುಮಾ ಮಸೀದಿಯ ಆಡಳಿತ ಸಮಿತಿ ಸದಸ್ಯರಾಗಿದ್ದ ಕೊಣಾಜೆ ಗ್ರಾಮದ ಕೋಡಿಜಾಲ್ ನಿವಾಸಿ ಸೂಫಿಕುಂಞ ಕೆ.ಎಂ. ಕೋಡಿಜಾಲ್(63) ಅನಾರೋಗ್ಯ ಸಮಸ್ಯೆಯಿಂದ ನಿಧನರಾಗಿದ್ದಾರೆ. ಇವರ ಪುತ್ರಿ ಫಾತಿಮಾ ಶಿಝಾ ಕೊಣಾಜೆ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು ಎಸ್ಸೆಸ್ಸೆಲ್ಸಿ ಪರೀಕ್ಷೆ ಇದ್ದ ಹಿನ್ನೆಲೆಯಲ್ಲಿ ಆಕೆ ಪರೀಕ್ಷೆಗೆ ತೆರಳಿದ ಬಳಿಕ ಮೃತದೇಹವನ್ನು ಮನೆಗೆ ತರಲಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕಿ ಮೀನಾ ಗಾಂವ್ಕರ್ ಅವರು ಶಿಝಾ ಪರೀಕ್ಷೆ ಬರೆದ ಕೂಡಲೇ ಮನೆಗೆ ಕಳುಹಿಸಿ, ಮಾನವೀಯತೆ ಮೆರೆದಿದ್ದಾರೆ. ತಂದೆ ಆಗಲಿಕೆ ಸುದ್ದಿ ತಿಳಿದು ಅಘಾತಗೊಂಡಿದ್ದಳು. ಕುಂಞ ಅವರು ಹೃದಯ ಸಂಬAಧಿ ಸಮಸ್ಯೆಯಿಂದ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಹಿಂದೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ಮಂಗಳವಾರ ನಸುಕಿನ ಜಾವ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಉಳ್ಳಾಲ; ಹಿಂದೂ ಯುವಸೇನೆ ಕೆರೆಬೈಲ್ ಕೊರಗಜ್ಜ ಶಾಖೆಯ 25ನೇ ವಾರ್ಷಿಕೋತ್ಸವದ ಬೆಳ್ಳಿಹಬ್ಬ ಹಾಗೂ ಬಿಸು ಪರ್ಬದ ಪ್ರಯುಕ್ತ ಕೆರೆಬೈಲಿನ ನಾಗರಕ್ತೇಶ್ವರಿ ಸಾನಿಧ್ಯದ ಬಳಿಯ ಮೈದಾನದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ಯಶಸ್ವಿಯಾಗಿ ನಡೆಯಿತು. ಆಟೋಟ ಸ್ಫರ್ದೆಕ್ಕೆ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯದ ಸಂಯೋಜಕರಾದ ಜಯರಾಮ್ ಚೆಂಬುಗುಡ್ಡೆ ಅವರು ಚಾಲನೆ ನೀಡಿದರು. ಹಿಂದೂ ಯುವಸೇನೆ ಕೇಂದ್ರೀಯ ಮಂಡಳಿಯ ಗೌರವಾಧ್ಯಕ್ಷರಾದ ಭಾಸ್ಕರಚಂದ್ರ ಶೆಟ್ಟಿ,ಅಧ್ಯಕ್ಷರಾದ ಯಶೋಧರ ಚೌಟ,ಸಂಘಟನಾ ಕಾರ್ಯದರ್ಶಿ ನವೀನ್ ಚಂದ್ರ ಎಕ್ಕೂರು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಅನುಸೂಯ,ಧರ್ಮ ಸಾಕ್ಷಿ ಒಕ್ಕೂಟದ ಅರುಣ್,ಕೆರೆಬೈಲ್ ಕೊರಗ ತನಿಯ ಸೇವಾ ಸಮಿತಿಯ ಕೋಶಾಧಿಕಾರಿ ರಾಜ ಮೆಸ್ಕಾಂ,ಹಿAದೂ ಯುವಸೇನೆ ಕೊರಗಜ್ಜ ಶಾಖೆಯ ಅಧ್ಯಕ್ಷರಾದ ನಾರಾಯಣ.ಬಿ ಹಾಗೂ ಗೌರವಾಧ್ಯಕ್ಷರಾದ ಲೋಕೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಮಕ್ಕಳು,ಮಹಿಳೆಯರು ಹಾಗೂ ಪುರುಷರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು. ಮಹಿಳೆಯರಿಗಾಗಿ ಆಯೋಜಿಸಲಾದ ಬೀಡಿ ಕಟ್ಟುವ ಸ್ಪರ್ಧೆಯು ವಿಶೇಷ ಆಕರ್ಷಣೆಯಾಗಿತ್ತು. ದಿನೇಶ್ ಶೆಟ್ಟಿ ಚೆಂಬುಗುಡ್ಡೆ ಕಾರ್ಯಕ್ರಮ ನಿರೂಪಿಸಿದರು. ಹಿಂದೂ ಯುವಸೇನೆ…

