Author: UllalaVani

Kannada News From Coastal Karnataka

UN NETWORKS ಉಳ್ಳಾಲ: ನನ್ನೊಳಗಿನ ಅಂತರಾತ್ಮದ ಕಥನವನ್ನು ಲೋಕಾರ್ಪಣೆಗೊಳ್ಳುವ ಮುನ್ನವೇ ಅಲ್ಲಾಹನ ಕರೆಗೆ ಓಗೊಟ್ಟು ಇಂದು ನಮ್ಮನ್ನಗಲಿದ ಕರ್ನಾಟಕ ರಾಜ್ಯ ಕಂಡ ಸರಳ, ಸಜ್ಜನ ಮತ್ತು ನೇರ ನಡೆ ನುಡಿಯ ಪ್ರಾಮಾಣಿಕ ಮುಸ್ಲಿಮ್ ಸಮುದಾಯದ ಹೆಮ್ಮೆಯ ರಾಜಕಾರಣಿ ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ ಮೊಯಿದಿನ್ ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಮ್ಮನ್ನಗಲಿದ್ದಾರೆ . ಇವರ ಮರಣವು ಸಮಾಜಕ್ಕೆ ತುಂಬಲಾರದ ನಷ್ಟ ಇವರು ಶಿಕ್ಷಣದಲ್ಲಿ ಯಾವ ರೀತಿ ಕ್ರಾಂತಿಯ ಅಲೆ ಎಬ್ಬಿಸಿದ್ದರೆಂದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರವಲ್ಲ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣದ ಅಲೆಯನ್ನೇ ಎಬ್ಬಿಸಿ , ಹಗಲಲ್ಲಿ ಖಾಲಿಯಾಗಿರುವ ಮದರಸಾಗಳಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಹೆಚ್ಚು ಒತ್ತು ನೀಡಿ , ಅಲ್ಪಸಂಖ್ಯಾತ ಸಮುದಾಯದಲ್ಲಿ ಶಿಕ್ಷಣದ ಕ್ರಾಂತಿ ಮೂಡಿಸಿದವರು. ಶಿಕ್ಷಣ ಸಚಿವರು ಆಗುವ ಮೊದಲು ಮತ್ತು ನಂತರವೂ ತನ್ನ ಜೀವನವನ್ನೇ ಈ ಸಮಾಜದ ಶಿಕ್ಷಣದ ಸಬಲೀಕರಣಕ್ಕಾಗಿ ಒತ್ತೆ ಇಟ್ಟ ಸರಳ , ಸಜ್ಜನ, ಪ್ರಾಮಾಣಿಕ ನಾಯಕ .…

Read More

UN NETWORKS ಇರಾ: ನಾವು ದಿನನಿತ್ಯ ಬಳಸುವ ವಿಷಪೂರಿತ ರಸಾಯನಿಕ ಬಳಸಿದ ತರಕಾರಿಯ ಬದಲು ಮನೆಯಲ್ಲೇ ನಮಗೆ ಬೇಕಾದಷ್ಟು ಸಾವಯವ ತರಕಾರಿ ಬೆಳಸುವ ನಿಟ್ಟಿನಲ್ಲಿ ಯುವ ಜನತೆ ಮುಂದಾಗಬೇಕು ಎಂದು ಪ್ರಗತಿಪರ ಕೃಷಿಕ ಅಬ್ದುಲ್ ಖಾದರ್ ಸಣ್ಣಬೈಲ್ ಅಭಿಪ್ರಾಯಪಟ್ಟರು. ಇರಾ ಗ್ರಾಮದ ಪರಪ್ಪಿನ ಎಸ್ಸಸ್ಸಫ್ ವತಿಯಿಂದ ತಿಂಗಳಿಗೊಮ್ಮೆ ಮಹಿಳಾ ಕ್ಲಾಸ್ ಇದರ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಾವಯವ ಕೃಷಿಯ ಕುರಿತು ಮಾಹಿತಿ ನೀಡಿ ಸಂವಾದ ನಡೆಸಿಕೊಟ್ಟರು. ಪರಪ್ಪು ಜುಮಾ ಮಸೀದಿ ಉಸ್ತಾದರಾದ ಅಬ್ದುಲ್ ರಝಾಕ್ ಸಖಾಫಿ,ಹಮೀದ್ ಸಖಾಫಿ (ಸದರ್ ಪರಪ್ಪು) ಉಮ್ಮರ್ ಮದನಿ ಮುರ್ಕಂಙ ಎಸ್ಸಸ್ಸಫ್ ಪರಪ್ಪು ಅಧ್ಯಕ್ಷ ಅಶ್ರಫ್ ಎಸ್ಟೇಟ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಹಿಳೆಯರಿಗೆ ವಿವಿಧ ತಳಿಯ ತರಕಾರಿ ಬೀಜಗಳನ್ನು ನೀಡಿ ಕೃಷಿಗೆ ಮತ್ತಷ್ಟು ಉತ್ತೇಜನ ನೀಡಿದರು.

Read More

UN NETWORKS ಉಳ್ಳಾಲ: ಎಸ್‍ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರದ ಆಂತರಿಕ ಚುನಾವಣೆ ದೇರಳಕಟ್ಟೆ ಬಿ.ಸಿ.ಸಿ.ಹಾಲ್‍ನಲ್ಲಿ ನಡೆದಿದ್ದು ನೂತನ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ಅಬ್ಬಾಸ್ ಕಿನ್ಯ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಗಳಾಗಿ ಭಾಗವಹಿಸಿದ್ದ ಎಸ್.ಡಿ.ಎ.ಯು. ರಾಜ್ಯಾಧ್ಯಕ್ಷ ಅಬ್ದುಲ್ ಜಲೀಲ್ ಕ್ರಷ್ಣಾಪುರ ಹಾಗೂ ಜಿಲ್ಲಾ ಸಮಿತಿ ಸದಸ್ಯ ಯೂಸುಫ್ ಆಲಡ್ಕ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟಿದ್ದು ಒಂಭತ್ತು ಜನರ ನೂತನ ಕಾರ್ಯಕಾರಿ ಸಮಿತಿ ನಡೆಸಲಾಯಿತು. ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕೋಡಿಜಾಲ್, ಉಪಾಧ್ಯಕ್ಷರಾಗಿ ಸುಲೈಮಾನ್ ಉಸ್ತಾದ್ ಪುದು, ಜೊತೆ ಕಾರ್ಯದರ್ಶಿಯಾಗಿ ಝಹೂರ್ ತುಂಬೆ, ಖಜಾಂಜಿಯಾಗಿ ಮುಹಮ್ಮದ್ ಝಾಹೀದ್ ಮಲಾರ್, ಸಮಿತಿ ಸದಸ್ಯರಾಗಿ ರವೂಫ್ ಉಳ್ಳಾಲ್, ಇರ್ಷಾದ್ ಅಜಿನಡ್ಕ, ಮುಹಮ್ಮದ್ ಯು.ಬಿ., ಹಾರೀಷ್ ಮಲಾರ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಸಜಿಪ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಸೀರ್ ಸಜಿಪ, ಎಸ್.ಡಿ.ಪಿ.ಐ. ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ನೌಷದ್ ಕಿನ್ಯ, ಹಾಗೂ ನೂತನವಾಗಿ ಆಯ್ಕೆಗೊಂಡ ಪಕ್ಷದ ಗ್ರಾಮ ಸಮಿತಿ, ವಲಯ ಸಮಿತಿ, ನಗರ ಸಭಾ ಸಮಿತಿ ಹಾಗೂ ಪಟ್ಟಣ ಪಂಚಾಯತ್ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

UN NETWORKS ಉಳ್ಳಾಲ: ಉಪ್ಪಳದಲ್ಲಿ ಸೋಮವಾರ ಮುಂಜಾನೆ ನಡೆದ ಭೀಕರ ಅಪಘಾತದ ಸುದ್ದಿ ತುಂಬಾ ನೋವು ತಂದಿದೆ. ಇಂತಹ ಹೃದಯ ವಿದ್ರಾವಕ ಘಟನೆ ನಡೆಯಬಾರದಿತ್ತು. ಆದರೆ ದೇವರ ವಿಧಿಯೇ ಬೇರೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಭೀಕರ ಅಪಘಾತದಲ್ಲಿ ಕೆಸಿರೋಡ್ ಸಾಮಣಿಗೆ ಪ್ರದೇಶದ ಐವರು ಮೃತಪಟ್ಟಿದ್ದು ತುಂಬಲಾರದ ದುಃಖ ತಂದಿದೆ. ಮೃತರ ಕುಟುಂಬಿಕರಿಗೆ, ಸ್ನೇಹಿತರಿಗೆ, ಮಂಗಳೂರು ಕ್ಷೇತ್ರದ ಜನತೆಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲೆಂದು ಯು.ಟಿ.ಖಾದರ್ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ. ಸಚಿವರು ಬೆಂಗಳೂರಿನಲ್ಲಿ ವಿಧಾನಸಭಾ ಅಧಿವೇಶನದಲ್ಲಿರುವುದರಿಂದ ಅಪಘಾತದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಅಗತ್ಯತೆಯ ಬಗ್ಗೆ ಸಂಬಂಧಿಸಿದ ವೈದ್ಯಾಧಿಕಾರಿ, ಆಸ್ಪತ್ರೆ ಹಾಗೂ ಪೊಲೀಸ್ ಇಲಾಖೆ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಇದಕ್ಕಾಗಿ ಸಚಿವರ ಸೂಚನೆಯ ಮೇರೆಗೆ ಸ್ಥಳೀಯ ಜನಪ್ರತಿನಿಧಿಗಳು ಸೂಕ್ತ ವ್ಯವಸ್ಥೆಯಲ್ಲಿ ತೊಡಗಿದ್ದಾರೆಂದು ಅವರು ಮಾಹಿತಿ ನೀಡಿದರು.

Read More

UN NETWORKS ಉಳ್ಳಾಲ: ಇನ್ನೇನು 30 ನಿಮಿಷಗಳಲ್ಲಿ ಮನೆ ತಲುಪುವವರಿದ್ದರು. ಆದರೆ ವಿಧಿಲೀಲೆಯೇ ಬೇರೆಯಾಗಿತ್ತು. ಮನೆ ತಲುಪಬೇಕಾದ ಐದು ಮಂದಿಯೂ ರಸ್ತೆಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಉಪ್ಪಳ ನಯಾಬಜಾರಿನಲ್ಲಿ ಬೆಳಿಗ್ಗೆ 6.30ರ ಸುಮಾರಿಗೆ ಲಾರಿ ಮತ್ತು ತೂಫಾನ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಕೆ.ಸಿ ರೋಡ್ ಅಜ್ಜಿನಡ್ಕ ನಿವಾಸಿ ಬಿಫಾತಿಮ (67), ಅವರ ಪುತ್ರಿ ಜೆಪ್ಪು ನಿವಾಸಿ ನಸೀಮಾ (38), ಇನ್ನೋರ್ವ ಪುತ್ರಿ ಸೌದಾ ಎಂಬವರ ಪತಿ ಉಳ್ಳಾಲ ಮುಕ್ಕಚ್ಚೇರಿ ನಿವಾಸಿ ಮುಸ್ತಾಕ್ (41), ಮೊಮ್ಮಗಳು ಉಳ್ಳಾಲ ಮುಕ್ಕಚ್ಚೇರಿಯವರೇ ಆಗಿರುವ ಆಸ್ಮಾ (30) ಹಾಗೂ ಅವರ ಪತಿ ಇಮ್ತಿಯಾಝ್ (35) ದಾರುಣವಾಗಿ ಮೃತಪಟ್ಟವರು. ಮೃತ ಬೀಫಾತಿಮ ಅವರ ಪುತ್ರಿ ಸೌದಾ, ಸೌದಾ ಪುತ್ರ ಫವಾಝ್ (13) ಹಾಗೂ ಮೃತ ನಸೀಮಾ ಅವರ ಮಗು ಫಾತಿಮಾ (1) ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರು ಮಕ್ಕಳಾದ ಫಾರಿಷ್, ಶಾಹೀದ್ ಗಂಭೀರ ಸ್ಥಿತಿಯಲ್ಲಿದ್ದಾರೆ. ಗೃಹಪ್ರವೇಶದಿಂದ ವಾಪಸ್ಸಾಗುತ್ತಿದ್ದರು ! ಒಂದೇ…

Read More

UN NETWORKS ಕೊಣಾಜೆ: ಕೊಣಾಜೆ ಗ್ರಾಮದ ಬೆಳ್ಮ ಪರಂಡೆಯ ಬಳಿ ರಸ್ತೆಯ ಬದಿಯಲ್ಲಿಯೇ ಇರುವ ವಿದ್ಯುತ್ ಟ್ರಾನ್ಸ್ ಪಾರ್ಮರ್ ಕಂಬವೊಂದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಕೊಣಾಜೆಯಿಂದ ಬೆಳ್ಮ ಪರಂಡೆಯವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸಿ ನೂತನ ರಸ್ತೆಯನ್ನು ನಿರ್ಮಾಣ ಮಾಡಲಾಗಿತ್ತು. ರಸ್ತೆ ನಿರ್ಮಾಣದ ಸಂದರ್ಭದಲ್ಲಿ ತಗ್ಗು ಪ್ರದೇಶಗಳನ್ನು ಎತ್ತರಗೊಳಿಸಲಾಗಿತ್ತು. ಅದರಂತೆ ಪರಂಡೆಯ ಬಳಿಯೂ ತಗ್ಗು ರಸ್ತೆಯನ್ನು ಮಣ್ಣುಹಾಕಿ ಎತ್ತರಗೊಳಿಸಿ ರಸ್ತೆ ನಿರ್ಮಾಣ ಮಾಡಲಾಗಿದೆ. ಆದರೆ ಅಲ್ಲೆ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್ ಪಾರ್ಮರ್ ಕಂಬವನ್ನು ಹಾಗೇಯೇ ಉಳಿಸಿಕೊಳ್ಳಲಾಗಿದೆ. ಇದರಿಂದಾಗಿ ರಸ್ತೆ ಎತ್ತರವಾಗಿ ನಿರ್ಮಾಣವಾದ ಕಾರಣ ಕಂಬದ ವಿದ್ಯುತ್ ಟ್ರಾನ್ಸ್ ಪಾರ್ಮರ್ ಸಂಪರ್ಕದ ವಿದ್ಯುತ್ ತಂತಿಯು ರಸ್ತೆ ಬದಿಯಲ್ಲಿ ಸಂಚರಿಸುವವರಿಗೆ ಕೈಗೆಟಕುವಂತಿದೆ. ಈ ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನ ನಿತ್ಯ ಸಂಚರಿಸುತ್ತಿದ್ದು ಅವಘಡ ಸಂಭವಿಸುವ ಮುನ್ನ ಮೆಸ್ಕಾಂ ಹಾಗೂ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಳ್ಳಬೇಕಾಗಿದೆ.

Read More

UN NETWORKS ಗಾಂಧಿನಗರ: ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳೊಂದಿಗೆ ಸೇವಾ ಮನೋಭಾವ ಹೆಚ್ಚಿಸಲು ಸಾಧ್ಯ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ| ನವೀನ್ ಎನ್. ಕೊಣಾಜೆ ಅಭಿಪ್ರಾಯಪಟ್ಟರು. ಗಾಂಧಿನಗರದ ಶ್ರೀ ಗೋಕರ್ಣನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯ ಚಟುವಟಿಕೆಗೆ ಚಾಲನೆ ನೀಡಿ ಮಾತನಾಡಿದರು.ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಎನ್‍ಎಸ್‍ಎಸ್‍ನಂತಹ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವದೊಂದಿಗೆ ಸಾಮರಸ್ಯದ ಬದುಕು ಸಾಧ್ಯವಾಗುತ್ತದೆ ಎಂದ ಅವರು ಗುಜರಾತ್‍ನಲ್ಲಿ ನಡೆದ ಭೂಕಂಪ, ಲಾಖಡಿಯೊದಲ್ಲಿ ಹಾಗೂ ಅಂಡಮಾನ್ ನಿಕೋಬಾರ್ ನಲ್ಲಿ ಸುನಾಮಿ ಬಂದಾಗ ಎನ್.ಎಸ್.ಎಸ್ ವಿದ್ಯಾರ್ಥಿಗಳು ನಡೆಸಿದ್ದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲೆ ಕ್ಷಮಾ ಎನ್.ರಾವ್ ಅಧ್ಯಕ್ಷತೆಯನ್ನು ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಇತಿಹಾಸ ವಿಭಾಗದ ಬಾಲಚಂದ್ರ ಸ್ವಾಗತಿಸಿದರು. ವಿದ್ಯಾರ್ಥಿನಿ ಪೂಜಾ ಕಾರ್ಯಕ್ರಮ ನಿರೂಪಿಸಿದರು. ಕಾವ್ಯ ವಂದಿಸಿದರು. ಎನ್.ಎಸ್.ಎಸ್ ನಾಯಕ್ ಜಯೇಶ್ ಉಪಸ್ಥಿತರಿದ್ದರು.

Read More

UN NETWORKS ಗಾಂಧಿನಗರ:ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘಗಳು ಪೂರಕವಾಗಿದ್ದು, ಸಂಘಟನಾತ್ಮಕವಾಗಿ ಕಾಲೇಜಿನ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳ ಬೇಕು ಎಂದು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಮೂಹ ಸಂಸ್ಥೆಯ ಸಂಚಾಲಕ ಜಯವಿಕ್ರಮ ಅಭಿಪ್ರಾಯಪಟ್ಟರು. ಮಂಗಳೂರು ಗಾಂಧಿನಗರದ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಮಂಗಳೂರು ಇಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಉದಯ ಕುಮಾರ್ ಬಿ. ಇವರು ವಿದ್ಯಾರ್ಥಿ ನಾಯಕ, ಉಪನಾಯಕ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳಿಗೂ ಪ್ರಮಾಣವಚನ ಬೋಧಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕ ರಾಕೇಶ್, ಉಪನಾಯಕ ಈರಪ್ಪ ಉಪಸ್ಥಿತರಿದ್ದರು. ಉಪನ್ಯಾಸಕಿ ಮಲ್ಲಿಕಾ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅರ್ಚನಾ ವಂದಿಸಿದರು.ಅಕ್ಷತಾ ಕಾರ್ಯಕ್ರಮ ನಿರ್ವಹಿಸಿದರು.

Read More

UN NETWORKS ಕೈರಂಗಳ: ಮಕ್ಕಳು ತಮ್ಮ ತಮ್ಮ ಮನೆಯಲ್ಲಿ ಗಿಡಗಳನ್ನು ನೆಟ್ಟು ಬೆಳೆಸಿ ನಿಜವಾದ ಅರ್ಥದಲ್ಲಿ ವನಮಹೋತ್ಸವ ಆಚರಿಸಬೇಕು. ಯಾವುದೇ ಫಲಾಪೇಕ್ಷೆಯಿಲ್ಲದೆ ಸಾಲು ಮರಗಳನ್ನು ನೆಟ್ಟು ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಪರಿಸರ ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಂಸ್ಥೆಯ ಸಂಚಾಲಕ ಟಿ.ಜಿ.ರಾಜರಾಮ ಭಟ್ ಅಭಿಪ್ರಾಯಪಟ್ಟರು. ಕೈರಂಗಳದ ಪುಣ್ಯಕೋಟಿನಗರ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ವನಮಹೊತ್ಸವವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಬಂಟ್ವಾಳ ವಲಯದ ಅರಣ್ಯ ಅ„ಕಾರಿ ರಾಜೇಶ್ ಬಳಿಗಾರ್ ಅವರು ಮಾತನಾಡಿ ವನಮಹೋತ್ಸವದ ಔಚಿತ್ಯವನ್ನು ವಿವರಿಸಿ ಕಾಡುಗಳನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ಧಾರಿ ನಮ್ಮ ಮೇಲಿದೆ ಎಂದು ಹೇಳಿದರು. ಸಮಾರಂಭದಲ್ಲಿ ಸಂಸ್ಥೆಯ ಮಾರ್ಗದರ್ಶಕ ಶಂಕರಭಟ್ ಶುಭ ಹಾರೈಸಿದರು. ಸಹಶಿಕ್ಷಕಿ ಕುಮಾರಿ ಸೌಮ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಡಳಿತ ಮಂಡಳಿಯ ಹಿರಿಯ ಸದಸ್ಯರಾದ ಬಾಲಕೃಷ್ಣ ರೈ ಮುಂಡಾಜೆ, ಪ್ರಾಂಶುಪಾಲೆ ದಿವ್ಯದೀಪ, ಉಪಪ್ರಾಂಶುಪಾಲ ಸೋಮಶೇಖರ್ ಎಂ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶಾರ್ವರಿ ಸ್ವಾಗತಿಸಿ, ಭೂಮಿಕಾ ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.

Read More

UN NETWORKS ಅತ್ತಾವರ: ಹೆಚ್ಚಿನ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ನಡೆಯದಿರುವುದು ಕ್ರೀಡಾ ಕ್ಷೇತ್ರಕ್ಕೆ ದೊಡ್ಡ ಹಿನ್ನಡೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಕ್ರೀಡಾ ಮನೋಭಾವ ಬೆಳೆಸದೇ ಇದ್ದಲ್ಲಿ ದೇಶ ಈ ಕ್ಷೇತ್ರದಲ್ಲಿ ಪೈಪೋಟಿ ಮಾಡಲು ಅಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಮೋಹನ್ ಆಳ್ವ ಅಭಿಪ್ರಾಯಪಟ್ಟರು.ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಮಂಗಳೂರು ದಕ್ಷಿಣ ವಲಯ ವತಿಯಿಂದ ಅತ್ತಾವರ ಮಧುಸೂದನ ಕುಶೆ ವಿದ್ಯಾಸಂಸ್ಥೆಯಲ್ಲಿ ನಡೆದ ಕಾರ್ಯಾಗಾರ ಮತ್ತು ಸನ್ಮಾನ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಣ ಜೊತೆ ಕ್ರೀಡೆ ಕಡ್ಡಾಯವಾಗಿರಬೇಕು ಎಂದು ಎಲ್ಲರೂ ವೇದಿಕೆಯಲ್ಲಿ ಹೇಳುತ್ತಾರೆಯೇ ಹೊರತು, ಕಾರ್ಯರೂಪಕ್ಕೆ ತರುವುದಿಲ್ಲ.ಎಂದ ಅವರು ವಲಯ ಮಟ್ಟದ ಕ್ರೀಡೋತ್ಸವದಿಂದ ರಾಷ್ಟ್ರಮಟ್ಟದ ಕ್ರೀಡೆ ತನಕ ಪೂರಕ ಬಜೆಟನ್ನು ಸರಕಾರ ಇಡಬೇಕು ಎಂದರು. ಅಧ್ಯಕ್ಷೀಯ ವಾರ್ತಾ ಪತ್ರಿಕೆ ಕ್ರೀಡಾ ಸಿಂಚನವನ್ನು ಬಿಡುಗಡೆಗೊಳಿಸಿದ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ವೈ ಶಿವರಾಮಯ್ಯ ಮಾತನಾಡಿ ಇಂದಿನ ಶೈಕ್ಷಣಿಕ ಜೀವನದಲ್ಲಿ ಅದೆಷ್ಟೋ ಮಕ್ಕಳು ನಡೆಯುವ ಅಭ್ಯಾಸವನ್ನೇ ಮರೆತು…

Read More