Author: UllalaVani

Kannada News From Coastal Karnataka

ಉಡುಪಿ, ಮಾ. 28  ; ವಿರುದ್ಧ ದಿಕ್ಕಿನಿಂದ ಬಂದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಣಿಪಾಲದ ಈಶ್ವರನಗರದ ಬಳಿ ತಡರಾತ್ರಿ ನಡೆದಿದೆ. ಅಪಘಾತದ ಬಳಿಕ ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದು, ನಂತರ ಪೊಲೀಸರು ಮಂಚಿ ಕುಮೇರಿ ಬಳಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಮೂಲದ ವಿನೀಶ್ ಮತ್ತು ವೀರಪ್ಪ ಎಂಬುವವರು ಈಶ್ವರನಗರದ ರೆಸ್ಟೋರೆಂಟ್‌ವೊಂದರಲ್ಲಿ ಕೆಲಸ ಮುಗಿಸಿ ಹಿಂತಿರುಗುತ್ತಿದ್ದರು. ಅವರು ರಸ್ತೆಯ ಡಿವೈಡರ್ ದಾಟಿ ನಡೆದುಕೊಂಡು ಹೋಗುತ್ತಿದ್ದಾಗ ಪೆಟ್ರೋಲ್ ಬಂಕ್ ಕಡೆಯಿಂದ ಈಶ್ವರನಗರದ ಜನನಿ ಲಾಡ್ಜ್ ಕಡೆಗೆ ಅತೀ ವೇಗವಾಗಿ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ವೀರಪ್ಪ ಅವರಿಗೆ ಢಿಕ್ಕಿ ಹೊಡೆದಿದೆ.ಢಿಕ್ಕಿಯ ರಭಸಕ್ಕೆ ವೀರಪ್ಪ ಅವರ ತಲೆ, ಕಾಲು ಮತ್ತು ಸೊಂಟದ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತನಿಖೆಯ ವೇಳೆ ಅಪಘಾತ ಎಸಗಿದ ಕಾರು ಮಂಚಿ ಕುಮೇರಿ ಬಳಿ ಪತ್ತೆಯಾಗಿದ್ದು, ಪೊಲೀಸರು ಅದನ್ನು…

Read More

ಕುತ್ತಾರು ; ಹೊಸ ಬಾವಿ ಕೊರೆಯುವ ಕಾಮಗಾರಿ ನಡೆಸುತ್ತಿದ್ದ ವೇಳೆ ಕ್ರೇನ್‌ನ ಕೊಕ್ಕೆಯಿಂದ ಬೇರ್ಪಟ್ಟ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ ಮೂವತ್ತು ಅಡಿ ಎತ್ತರದಿಂದ ತಲೆಯ ಮೇಲೆ ಬಿದ್ದ ಪರಿಣಾಮ ವಲಸೆ ಕಾರ್ಮಿಕನೋರ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಕುತ್ತಾರು ಪದವಿನ ಸಲಾತ್ ನಗರದಲ್ಲಿ ನಡೆದಿದೆ. 30ರ ಹರೆಯದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಮಲ್ಲಾಪುರ ನಿವಾಸಿ ಶಿವಕುಮಾರ ಜಿ.ಕೆ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಉಳ್ಳಾಲ ತಾಲೂಕಿನ ಕುತ್ತಾರುವಿನ ಸಲಾತ್ ನಗರದ ಖಾಲಿ ಸೈಟೊಂದರಲ್ಲಿ ಹೊಸ ಬಾವಿ ಅಗೆಯುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಒಟ್ಟು ಆರು ಜನ ಕೂಲಿ ಕಾರ್ಮಿಕರಲ್ಲಿ,ಶಿವಕುಮಾರ್ ಸೇರಿ ಮೂವರು ಕಾರ್ಮಿಕರು ಮೂವತ್ತು ಅಡಿ ಆಳ ಕೊರೆಯಲಾದ ಬಾವಿಯೊಳಗಡೆ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕ್ರೇನ್ ಮೂಲಕ ಕಬ್ಬಿಣದ ಬಕೆಟಲ್ಲಿ ಮಣ್ಣನ್ನು ಮೇಲಕ್ಕೆತ್ತುತ್ತಿದ್ದ ಸಂದರ್ಭ ಕ್ರೇನಿನ ಕೊಕ್ಕೆಯಿಂದ ಬೇರ್ಪಟ್ಟ ಮಣ್ಣು ತುಂಬಿದ ಕಬ್ಬಿಣದ ಬಕೆಟ್ ನೇರವಾಗಿ ಕಾರ್ಮಿಕ ಶಿವ ಕುಮಾರ್ ಅವರ ತಲೆ ಮೇಲೆ ಬಿದ್ದಿದೆ.ಗಂಭೀರ ಗಾಯಗೊಂಡಿದ್ದ ಶಿವಕುಮಾರನನ್ನು ಮೇಲಕ್ಕೆತ್ತಿ ದೇರಳಕಟ್ಟೆಯ…

Read More

ಕುಂಪಲ: ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಶಿಬಿರವು ಕುಂಪಲ ಸರಕಾರಿ ಶಾಲೆಯಲ್ಲಿ ಆರಂಭಗೊಂಡಿತು. ಶಿಬಿರವನ್ನು ಮಂಗಳೂರು ರೋಟರಿ ಕ್ಲಬ್‌ನ ಸುಜೀರ್ ಪ್ರಸಾದ್ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕುಂಪಲ ರೋಟರಿ ಸಮುದಾಯ ದಳದ ಮನವಿಗೆ ಸ್ಪಂದಿಸಿ ಶಾಲೆಗೆ ಬಣ್ಣ (ಪೇಂಟ್) ನೀಡಲಾಗಿದ್ದು, ಅದರ ಕಾಮಗಾರಿಗಳನ್ನು ವಿದ್ಯಾರ್ಥಿಗಳು ಕೈಗೊಳ್ಳುತ್ತಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು. ಈ ಶಿಬಿರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ ಅವರು, ಮುಂದಿನ ದಿನಗಳಲ್ಲಿಯೂ ಸೇವಾ ಕಾರ್ಯಗಳಿಗೆ ತಮ್ಮ ಸಹಕಾರ ನಿರಂತರವಾಗಿರಲಿದೆ ಎಂದು ಹೇಳಿದರು. ಟ್ರಸ್ಟ್‌ನ ಸ್ಥಾಪಕಾಧ್ಯಕ್ಷರಾದ ನಾರಾಯಣ ಕುಂಪಲ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ತಮ್ಮ ಕಾಲೇಜಿಗೆ ಉತ್ತಮ ಹೆಸರು ತಂದುಕೊಡಬಹುದು ಎಂದು ಹೇಳಿದರು. ಜಲ ಸಂರಕ್ಷಣೆ, ವನಮಹೋತ್ಸವ ಹಾಗೂ ಪರಿಸರ ಸಂರಕ್ಷಣೆ ಕಾರ್ಯಗಳ ಮೂಲಕ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷರು ಹಾಗೂ ಮಾಜಿ ಸೈನಿಕರಾದ ಸುಧಾಕರ ಕುಂಪಲ, ರೋಟರಿ ಕ್ಲಬ್…

Read More

ಕಾರ್ಕಳ, ಮಾ. 28: ಕೋಳಿ ವ್ಯವಹಾರದ ಹಣಕ್ಕೆ ಸಂಬಂಧಿಸಿದ ವಿವಾದವೊಂದು ವಿಕೋಪಕ್ಕೆ ತಿರುಗಿ ಪರಸ್ಪರ ಹಲ್ಲೆ ನಡೆದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜೆಕಾರು ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬೈರಂಪಳ್ಳಿ ಹರಿಕಂಡಿಗೆಯ ಪ್ರತಾಪ್ ಪೂಜಾರಿ (32), ಕಡ್ತಲ ಗ್ರಾಮದ ಸಿರಿಬೈಲು ನಿವಾಸಿ ದಿಲೀಪ್ ಶೆಟ್ಟಿ (28), ಮುತ್ತುಪಾಡಿಯ ಸುದರ್ಶನ್ ಶೆಟ್ಟಿ (36) ಮತ್ತು ವರಂಗ ಗ್ರಾಮದ ಮೂಡುಕುದೂರು ನಿವಾಸಿ ಆಕಾಶ್ (21) ಎಂದು ಗುರುತಿಸಲಾಗಿದೆ.ಮಾರ್ಚ್ 26 ರಂದು ರಾತ್ರಿ ಸುಮಾರು 8 ಗಂಟೆಗೆ ಅಂದಾರು ಗ್ರಾಮದ ಮುತ್ತುಪಾಡಿ ಎಂಬಲ್ಲಿ ಈ ಘಟನೆ ನಡೆದಿದೆ. ಹರೀಶ್, ಸುಧೀರ್, ದುರ್ಗಾ, ಗುರುದೀಶ್ ಮತ್ತು ಪ್ರತಾಪ್ ಸೇರಿದಂತೆ ಸುಮಾರು 15 ಜನರ ತಂಡವು ಕಾರು ಮತ್ತು ಬೈಕ್‌ಗಳಲ್ಲಿ ಬಂದು ಸುದರ್ಶನ್ ಶೆಟ್ಟಿ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಈ ಜಗಳವನ್ನು ಬಿಡಿಸಲು ಪದ್ಮಾ ಮತ್ತು ಆಕಾಶ್ ಎಂಬುವವರು ಪ್ರಯತ್ನಿಸಿದಾಗ, ಹರೀಶ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ…

Read More

ಮಂಗಳೂರು, ಮಾ. 27 : ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಇತ್ತೀಚೆಗೆ ನಿಧನರಾದ ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ರವೀಶ್ ಪಡುಮಲೆಯವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ. ಮಾರ್ಚ್ 28 ರಂದು ಮಂಗಳಗಂಗೋತ್ರಿ ಸಭಾಂಗಣದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿವಿ ಕುಲಪತಿ ಪ್ರೊ. ಪಿ. ಎಲ್. ಧರ್ಮ ತಿಳಿಸಿದ್ದಾರೆ. ಹರೇಕಳ ಹಾಜಬ್ಬಪದ್ಮಶ್ರೀ ಪುರಸ್ಕೃತರಾದ ಹಾಜಬ್ಬ ಅವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದವರು. ಕಿತ್ತಳೆ ಹಣ್ಣು ಮಾರಿ ಬಂದ ಹಣದಲ್ಲಿ ತಮ್ಮ ಗ್ರಾಮವಾದ ಹರೇಕಳ-ನ್ಯೂಪಡ್ಪುವಿನಲ್ಲಿ ಶಾಲೆ ನಿರ್ಮಿಸಿ, ಗ್ರಾಮೀಣ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಇವರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ.ಸೂರಿಕುಮೇರು ಗೋವಿಂದ ಭಟ್ಯಕ್ಷಗಾನದ ತೆಂಕುತಿಟ್ಟು ಶೈಲಿಯ ಹಿರಿಯ ಕಲಾವಿದರಾದ ಸೂರಿಕುಮೇರು ಗೋವಿಂದ ಭಟ್ ಅವರಿಗೆ ಮರಣೋತ್ತರವಾಗಿ ಈ ಗೌರವ…

Read More

ತೊಕ್ಕೊಟ್ಟು; ತೊಕ್ಕೊಟ್ಟುವಿನಲ್ಲಿ ಆರೀಫ್ ಹತ್ಯೆ ನಡೆಸಿದ ಹಂತಕರ ಇನೋವಾ ಕಾರು ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿಯಲ್ಲಿ ಪತ್ತೆಯಾಗಿತ್ತು. ಮೆಲ್ನೋಟಕ್ಕೆ ಹಂತಕರು ಬೆಂಗಳೂರು ಕಡೆ ತೆರಳಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ನಸುಕಿನ 4.30 ಸುಮಾರಿಗೆ ಕೃತ್ಯ ಎಸಗಿದ ತಂಡ ಬಳಿಕ ಎಸ್ಕೇಪ್ ಆಗಿದೆ. ಹಲವು ತಂಡಗಳ ಮೂಲಕ ಆರೋಪಿಗಳ ಪತ್ತೆಗೆ ಬೆನ್ನು ಬಿದ್ದಿರುವ ಮಂಗಳೂರು ಪೊಲೀಸರು ಆರೋಪಿಗಳ ಸುಳಿವು ಲಭ್ಯವಾಗಿರುವುದಾಗಿಯೂ ಪೊಲೀಸ್ ಕಮೀಷನರ್ ತಿಳಿಸಿದ್ದಾರೆ. ಬೌನ್ಸರ್ ಆಗಿಯೂ ತೆರಳುತ್ತಿದ್ದ ಆರೀಫ್ಬೌನ್ಸರ್ ಆಗಿ ಸೇವೆ ಸಲ್ಲಿಸುತ್ತಿದ್ದ ಆರೀಫ್ ದೃಢಕಾಯದ, ಬಲಿಷ್ಠ ಶರೀರ ಹೊಂದಿದ್ದ ಯುವಕರಲ್ಲಿ ಒಬ್ಬನಾಗಿದ್ದ. ನಗರದಲ್ಲಿ ನಡೆಯುತ್ತಿದ್ದ ಅನೇಕ ಸಮಾರಂಭಗಳಲ್ಲಿ ಅವನು ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದನು. ವಿಶೇಷವಾಗಿ ಮಂಗಳೂರು ದಸರಾ, ಹುಲಿ ವೇಷದಂತಹ ಜನಸಂದಣಿ ಹೆಚ್ಚಿರುವ ಕಾರ್ಯಕ್ರಮಗಳಲ್ಲಿ ಅವನ ಹಾಜರಾತಿ ಗಮನಾರ್ಹವಾಗಿತ್ತು.

Read More

ಇಂದು ಬೆಳ್ಳಂಬೆಳಗ್ಗೆ ತೊಕ್ಕೊಟ್ಟು ಫ್ಲೈಓವರ್‌ ಮೇಲೆ ನಡೆದ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿಯಲ್ಲಿ ಪತ್ತೆಯಾಗಿದೆ. ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ವಿಟ್ಲ ಠಾಣಾ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಕಾರನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪತ್ತೆಯಾದ ಕಾರಿನ ಆಧಾರದ ಮೇಲೆ ಹಂತಕರ ಪತ್ತೆಗಾಗಿ ಬಲೆ ಬೀಸಿದ್ದಾರೆ. ವಿಟ್ಲ ಪೊಲೀಸರು ವಶಪಡಿಸಿಕೊಂಡ ಕಾರುನ್ನು ಹೆಚ್ಚಿನ ತನಿಖೆಗಾಗಿ ಮಂಗಳೂರು ಪೊಲೀಸರಿಗೆ ಹಸ್ತಾಂತರ.

Read More

ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್ ಅಡ್ಡಗಟ್ಟಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕಡಿದು ಹತ್ಯೆ ನಡೆಸಿರುವ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ. ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ (40) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು 4 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ಫ್ಲೈಓವರ್ ಮೇಲೆಯೇ ಕಾಯುತ್ತ ಕುಳಿತಿದ್ದು, ಆರಿಫ್ ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಅಡ್ಡಗಟ್ಟಿ, ಬಳಿಕ ತಲೆ ಭಾಗಕ್ಕೆ ಗಂಭೀರವಾಗಿ ಕಡಿದು ಕೊಲೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ನಂತರ ದೀರ್ಘಕಾಲ ಯಾವುದೇ ಪ್ರಕರಣಗಳಿರಲಿಲ್ಲ. 2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಇವರ ಮೇಲೆ ಕೊಲೆಗೆ ಯತ್ನ ನಡೆದಿದ್ದು, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಫಾಲ್ ಹಾಗೂ ತಂಡವನ್ನು ಪೊಲೀಸರು ಬಂಧಿಸಿದ್ದರು.ಪ್ರಸ್ತುತ ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Read More

ಮಂಗಳೂರು, ಮಾ. 26 : ನಗರದ ಪಾಲ್ದನೆ ಸಮೀಪದ ನೆಕ್ಕರೆ ಹಾಗೂ ಆಸುಪಾಸಿನಲ್ಲಿ ಕಳೆದ ಕೆಲವು ದಿನಗಳಿಂದ ಓಡಾಡುತ್ತಿದ್ದ ಬೃಹತ್ ಗಾತ್ರದ ಚಿರತೆಯನ್ನು ಕೆಲರಾಯ್ ಕ್ರಾಸ್ ನೆಕ್ಕರೆ ಪದವು ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನು ಇರಿಸಿ ಸೆರೆ ಹಿಡಿದಿದ್ದಾರೆ. ಚಿರತೆಯ ಇರುವಿಕೆ ಬಗ್ಗೆ ಸ್ಥಳೀಯರು ಸ್ಥಳೀಯ ಮಾಜಿ ಕಾರ್ಪೊರೇಟರ್ ಹಾಗೂ ಮಾಜಿ ಮೇಯರ್ ಭಾಸ್ಕರ್ ಕೆ. ಅವರಿಗೆ ದೂರು ನೀಡಿದ್ದು, ಅವರು ಸಕಾಲದಲ್ಲಿ ಸ್ಪಂದಿಸಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿ ಕಾರ್ಯಾಚರಣೆ ನಡೆಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ವೈಖರಿಯ ಬಗ್ಗೆ ಊರಿನ ಜನರು ಹರ್ಷ ವ್ಯಕ್ತ ಪಡಿಸಿದ್ದಾರೆ.

Read More

ಮಂಗಳೂರು, ಮಾ. 26 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಕರೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದರು, ನಮ್ಮ ಜಿಲ್ಲೆಯ 14ರಿಂದ 15 ವರ್ಷದೊಳಗಿನ ಎಲ್ಲಾ ಕಿಶೋರಿಯರು ಸ್ವಯಂಪ್ರೇರಿತರಾಗಿ ಈ ಲಸಿಕೆಯನ್ನು ಪಡೆದುಕೊಳ್ಳುವ ಮೂಲಕ ‘ಆರೋಗ್ಯವಂತ ಭಾರತ – ಆರೋಗ್ಯವಂತ ದಕ್ಷಿಣ ಕನ್ನಡ’ ನಿರ್ಮಾಣಕ್ಕೆ ಸಹಕರಿಸಬೇಕು. ವಿಶೇಷವಾಗಿ ಹೆಣ್ಣುಮಕ್ಕಳ ತಾಯಂದಿರಲ್ಲಿ ವಿನಂತಿಸಿರುವ ಅವರು, ಶಾಲಾ ಪರೀಕ್ಷೆಗಳು ಮುಗಿದ ತಕ್ಷಣ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ತಮ್ಮ ಮಕ್ಕಳಿಗೆ ಈ ಹೆಚ್.ಪಿ.ವಿ. ಲಸಿಕೆಯನ್ನು ಕೊಡಿಸುವಂತೆ ಕೋರಿದ್ದಾರೆ. ದ.ಕ. ಜಿಲ್ಲೆಯಲ್ಲಿ 22,473 ಕಿಶೋರಿಯರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದ್ದು, ಈಗಾಗಲೇ ರಾಜ್ಯಕ್ಕೆ 2.54 ಲಕ್ಷ ಡೋಸ್ ಎಚ್‌ಪಿವಿ ಲಸಿಕೆ ಉಚಿತವಾಗಿ ಸರಬರಾಜಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಈ ಲಸಿಕೆಗೆ…

Read More