ಎಂಸಿಸಿ ಬ್ಯಾಂಕ್ ವತಿಯಿಂದ 2026 ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ಮುಂದಿನ ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗಳನ್ನು ಚರ್ಚಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಉತ್ತೇಜಿಸುವುದು ಈ ಸಂವಾದದ ಮುಖ್ಯ ಉದ್ದೇಶವಾಗಿತ್ತು. ಈ ಸಂವಾದದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗೋವಾ ಬೀನೌಲಿಂನ ಕ್ಯಾಟೆಕೆಟಿಕ್ಸ್ ಆಯೋಗದ ಕಾರ್ಯದರ್ಶಿ ವಂದನೀಯ ಫಾ| ವಿಜಯ ಮಚಾದೊ, ಗೋವಾ ಅರ್ಬನ್ ಸಹಕಾರ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಶ್ರೀ ಗೋಪಾಲಕೃಷ್ಣ ವೈ. ನಾಯಕ್, IIM Kozhikode ನ ವಿಸಿಟಿಂಗ್ ಪ್ರೊಫೆಸರ್ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಸಿಜೆ ಲಾಯ್ನಲ್ ಅರಾನ್ಹಾ, ದೈಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಮಿಲಾಗ್ರಿಸ್ ಕಾಲೇಜು…
Author: UllalaVani
ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರು ಬರೆದಿರುವ ‘ವಿಂಚ್ಣಾರ್ ಕಾಣಿಯೊ’ ಪುಸ್ತಕದ ಲೋಕಾರ್ಪಣೆ ಸಮಾರಂಭವು 2026ರ ಮೇ 10ರಂದು ಸಂಜೆ 5:00 ಗಂಟೆಗೆ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಮತ್ತು ಕೊಂಕಣಿ ಸಲಹಾ ಸಮಿತಿ, ಸಾಹಿತ್ಯ ಅಕಾಡೆಮಿ, ಹೊಸ ದೆಹಲಿಯ ಸಂಚಾಲಕರಾದ ಶ್ರೀ ಮೆಲ್ವಿನ್ ರೊಡ್ರಿಗಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃತಿಯು ‘ಮೈಕಲ್ ಡಿಸೋಜಾ – ವಿಷನ್ ಕೊಂಕಣಿ’ ಸಂಸ್ಥೆಯಡಿಯಲ್ಲಿ ಲೂರ್ಡ್ಸ್ ಪ್ರಕಾಶನದಿಂದ ಪ್ರಕಟಗೊಂಡಿದೆ. ವಲ್ಲಿ ವಗ್ಗ ಎಂಬುದು ವಲೇರಿಯನ್ ಡಿಸೋಜಾ ಅವರ ಕಾವ್ಯನಾಮವಾಗಿದ್ದು, ಇವರು ಕೊಂಕಣಿ ಸಾಹಿತ್ಯ ಲೋಕದ ಚಿರಪರಿಚಿತ ಬರಹಗಾರರಾಗಿದ್ದಾರೆ. ಇವರ ಸಾಹಿತ್ಯ ಪಯಣವು 1964 ರಲ್ಲಿ ‘ರಾಕ್ಣೊ’ ಪತ್ರಿಕೆಯಲ್ಲಿ ಪ್ರಕಟವಾದ ಮೊದಲ ಕಥೆಯೊಂದಿಗೆ ಪ್ರಾರಂಭವಾಯಿತು. ಕಳೆದ ಹಲವಾರು ದಶಕಗಳಲ್ಲಿ ಅವರು ಸುಮಾರು 150 ಕೊಂಕಣಿ ಕಥೆಗಳು ಮತ್ತು 250 ಕವಿತೆಗಳನ್ನು ರಚಿಸಿದ್ದಾರೆ. ಈಗ ಬಿಡುಗಡೆಯಾಗುತ್ತಿರುವ…
ಕೊಣಾಜೆ: ಕನಕದಾಸರ ಕೀರ್ತನೆಗಳನ್ನು ವಿವಿಧ ಅಧ್ಯಯನ ಶಿಸ್ತುಗಳ ಮೂಲಕ ನೋಡುವ ಅಗತ್ಯವಿದೆ. ಸಮಾಜಶಾಸ್ತ್ರ, ವಿಜ್ಞಾನ, ಇತಿಹಾಸ, ಆಯುರ್ವೇದ ಮೊದಲಾದ ವಿವಿಧ ಅಧ್ಯಯನ ಶಾಖೆಗಳ ಮೂಲಕ ಗ್ರಹಿಸಲು ಸಾಕಷ್ಟು ಅವಕಾಶವಿದೆ. ಕನಕ ಕೇವಲ ಕವಿ ಮಾತ್ರ ಅಲ್ಲ. 60 ಕ್ಕೂ ಹೆಚ್ಚು ಕೆರೆಗಳನ್ನು ಕಟ್ಟಿಸಿದ ಬಗೆಗೆ ಶಾಸನಾಧಾರಗಳಿವೆ. ಕನಕದಾಸರ ಕಾವ್ಯೇತರ ಕಾರ್ಯಗಳ ಬಗೆಗೆ ಹೊಸಶೋಧಗಳು ನಡೆಯಬೇಕಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ಸಹ ನಿರ್ದೇಶಕ ಡಾ.ಅನಿಲಕುಮಾರ ಬೊಮ್ಮಾಘಟ್ಟ ತಿಳಿಸಿದರು.ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಪೀಠ ಮತ್ತು ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ. ಬಿ.ಎ. ವಿವೇಕ ರೈ ವಿಚಾರ ವೇದಿಕೆಯಲ್ಲಿ ಬುಧವಾರ ನಡೆದ ‘ಕನಕ ಸ್ಮೃತಿ’ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಕನಕ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಲ್ ಧರ್ಮ ಮಾತನಾಡಿ, ಇಂದಿನ ಆಧುನಿಕತೆಯಲ್ಲಿ ಕಾಲಘಟ್ಟದಲ್ಲಿ ಕನಕದಾಸರಂತಹ ಮಹಾತ್ಮರ ಚಿಂತನೆ, ಮೌಲ್ಯಗಳನ್ನು ಅರ್ಥಮಾಡಿಕೊಳ್ಳುವಲ್ಲಿ ನಾವು ಎಡವುತ್ತಿದ್ದೇವೆ. ಸಮಾಜದಲ್ಲಿ ಕಟ್ಟಡಗಳೊಂದಿಗೆ ಜಾತಿ ಸಂಘಟನೆಗಳೂ ಗಟ್ಟಿಗೊಳ್ಳುತ್ತಿವೆ. ಹೊಸ ಜಾತಿ ಸಮೀಕರಣ ನಡೆಯುತ್ತಿರುವ ಈ ಕಾಲದಲ್ಲಿ ಕನಕರ…
ಉಳ್ಳಾಲ : ಮುಕ್ಕಚೇರಿ ನಿವಾಸಿ ‘ನಜಾತ ಮುಹಮ್ಮದ್ ಹಾಜಿ’ ಯವರು ಅಲ್ಪಕಾಲದ ಅಸೌಖ್ಯದಿಂದ ನಗರದ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಮುಖ ವ್ಯಾಪಾರಸ್ಥರು ಮತ್ತು ಧಾರ್ಮಿಕ ಸಂಸ್ಥೆಗಳ ಮುಂಚೂಣಿ ನಾಯಕರೂ ಆಗಿದ್ದ ಅವರು ಇಬ್ಬರು ಪುತ್ರರು, ಐದು ಮಂದಿ ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ. ಸಂತಾಪ: ಕಾಂಗ್ರೆಸ್ ರಾಜ್ಯ ಸಮಿತಿ ಸಂಯೋಜಕ ಫಾರೂಕ್ ಉಳ್ಳಾಲ್,ಉಳ್ಳಾಲ ದರ್ಗಾ ಮಾಜೀ ಅಧ್ಯಕ್ಷ ಅಬ್ದುಲ್ ರಶೀದ್, ಮೇಲಂಗಡಿ ಹೊಸ ಪಳ್ಳಿ ಜುಮಾ ಮಸೀದಿ ಅಧ್ಯಕ್ಷ ಮುಸ್ತಫಾ ಅಬ್ದುಲ್ಲಾ,ಮಾಜಿ ನಗರ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮುಕ್ಕಚೇರಿ, ಕೌನ್ಸಿಲರ್ ಗಳಾದ ಅಶ್ರಫ್, ಖಲೀಲ್, ಜಬ್ಬಾರ್ ಸಂತಾಪ ಸೂಚಿಸಿದ್ದಾರೆ.
ಮಂಗಳೂರು: ಕೇಂದ್ರ ಸರ್ಕಾರದ ಎಸ್‌ಐಆರ್ ಮ್ಯಾಪಿಂಗ್ ಪ್ರಕ್ರಿಯೆಯು ಮೇ 11ರಂದು ಅಂತ್ಯಗೊಳ್ಳಲಿದ್ದು, ಮತದಾರರು ತಮ್ಮ ಹೆಸರು ಚುನಾವಣಾ ಪಟ್ಟಿಯಲ್ಲಿ ಮ್ಯಾಪಿಂಗ್ ಆಗಿರುವ ಬಗ್ಗೆ ತಮ್ಮ ವಾಸ್ತವ್ಯ ವ್ಯಾಪ್ತಿಯ ಬೂತ್ ಲೆವೆಲ್ ಅಧಿಕಾರಿ (ಬಿಎಲ್‌ಒ)ರನ್ನು ಸಂಪರ್ಕಿಸಿ ಖಚಿತಪಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಮನವಿ ಮಾಡಿದ್ದಾರೆ. ಮ್ಯಾಪಿಂಗ್ ಆಗದಿದ್ದಲ್ಲಿ ತಕ್ಷಣ ಅಗತ್ಯ ಕ್ರಮ ಕೈಗೊಂಡು ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು. ಅಲ್ಲದೆ, ಈ ಕುರಿತು ಶುಕ್ರವಾರ ಜುಮಾ ನಮಾಝ್ ಬಳಿಕ ಪ್ರತಿ ಜಮಾಅತ್‌ನ ಮಸೀದಿಗಳಲ್ಲಿ ಮಾಹಿತಿ ನೀಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚೆನ್ನೈ, ಮೇ. 09 : ತಮಿಳುನಾಡು ರಾಜಕೀಯದಲ್ಲಿ ನಡೆದ ತೀವ್ರ ರಾಜಕೀಯ ಚರ್ಚೆ ಮತ್ತು ಸಂಖ್ಯಾ ಸಮೀಕರಣಗಳ ಬಳಿಕ ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ ರಚನೆಗೆ ದಾರಿ ಸುಗಮವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆಗೆ ಬಹುಮತಕ್ಕೆ ಅಗತ್ಯವಿದ್ದ 118 ಸ್ಥಾನಗಳ ಸಂಖ್ಯೆಯನ್ನು ತಲುಪಲು ಇನ್ನೂ ಕೆಲ ಶಾಸಕರ ಬೆಂಬಲ ಬೇಕಾಗಿತ್ತು. ಇದೀಗ ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲ ಘೋಷಿಸಿರುವುದರಿಂದ ಸರ್ಕಾರ ರಚನೆಯ ಬಿಕ್ಕಟ್ಟು ಅಂತ್ಯಗೊಂಡಂತಾಗಿದೆ. ಟಿವಿಕೆಗೆ ಮೊದಲೇ ಕಾಂಗ್ರೆಸ್ ಬೆಂಬಲ ನೀಡಿತ್ತು. ಇದೀಗ ಸಿಪಿಐ, ಸಿಪಿಐ(ಎಂ) ಮತ್ತು ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷಗಳೂ ವಿಜಯ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ಸೂಚಿಸಿರುವುದರಿಂದ ಟಿವಿಕೆ ಬಹುಮತದ ಮ್ಯಾಜಿಕ್ ನಂಬರ್ ದಾಟಿದೆ.234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ 108 ಶಾಸಕರನ್ನು ಹೊಂದಿದೆ. ಕಾಂಗ್ರೆಸ್ ತನ್ನ 5 ಶಾಸಕರ ಬೆಂಬಲ ನೀಡಿದ್ದು, ತಲಾ ಇಬ್ಬರು ಶಾಸಕರಿರುವ ಸಿಪಿಐ ಹಾಗೂ ಸಿಪಿಐ(ಎಂ)…
ಮಂಗಳೂರು, ಮೇ. 09: ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್ ಮಂಗಳೂರಿನ ಬಹುವರ್ಷದ ಬೇಡಿಕೆ. ಸದ್ಯ ಬ್ರಿಡ್ಜ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆ ಮೂಲಕ ತಣ್ಣೀರುಬಾವಿ ಬೀಚ್‌ಗೆ ತೆರಳಲು ದಶಕಗಳಿಂದ ಇದ್ದ ಸಂಚಾರ ಸಂಕಷ್ಟಕ್ಕೆ ಶೀಘ್ರದಲ್ಲೇ ಪರಿಹಾರ ಸಿಗಲಿದೆ. 64 ಕೋಟಿ ರೂ ವೆಚ್ಚದಲ್ಲಿ 285 ಮೀಟರ್ ಉದ್ದದ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. 30-35 ನಿಮಿಷ ಬೇಕಾಗುವ ಪ್ರಯಾಣದ ಸಮಯ ಈ ಸೇತುವೆ ಮೂಲಕ ಕೇವಲ 10 ನಿಮಿಷಕ್ಕೆ ಕಡಿತಗೊಳ್ಳಲಿದೆ.ತಣ್ಣೀರುಬಾವಿ ಬೀಚ್ ಮಂಗಳೂರು ಸಿಟಿಗೆ ಹೊಂದಿಕೊಂಡಿರುವ ಬೀಚ್ ಆಗಿದೆ. ಮಂಗಳೂರು ಸಿಟಿಯ ಒಂದು ತುದಿಯಿಂದ ಸುಮಾರು ಒಂದೂವರೆ ಕಿ.ಮೀ ದೂರದಲ್ಲಿರುವ ಈ ಬೀಚ್‌ಗೆ ವಾಹನದಲ್ಲಿ ಹೋಗಬೇಕು ಅಂದರೆ 15 ರಿಂದ 20 ಕಿ.ಮೀ ಸುತ್ತಿಕೊಂಡು ಹೋಗಬೇಕಿತ್ತು. ಆದರೆ ಫೆರಿಯಲ್ಲಿ ಹೋಗೋದಾದರೆ ಕೆಲವೇ ಮೀಟರ್ ಕ್ರಮಿಸಿದರೆ ಸಾಕು.ಇನ್ನು ತಣ್ಣೀರುಬಾವಿ ಸುತ್ತಾಮುತ್ತಾ 4 ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದು, ಅವರು ಮಂಗಳೂರಿಗೆ…
ಕಡಬ: ಕಡಬ ಪ್ರದೇಶದಲ್ಲಿ ನಡೆದ ದುರ್ಘಟನೆ ಮನಸ್ಸನ್ನು ಮಿಡಿಯಿಸುವಂತದ್ದು. ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಇಡೀ ಊರನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಬೇಸಿಗೆ ರಜೆಯ ಖುಷಿ, ನಗು, ಆಟ ಕ್ಷಣಾರ್ಧದಲ್ಲಿ ಶೋಕವಾಗಿ ಮಾರ್ಪಟ್ಟಿದೆ. ಮೃತ ವಿದ್ಯಾರ್ಥಿನಿಯರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ(15) ಹಾಗೂ ಸುನೀತಾ(21) ಎಂದು ಗುರುತಿಸಲಾಗಿದೆ.ಈ ಘಟನೆ ಮತ್ತೊಮ್ಮೆ ಜೀವನದ ಅನಿಶ್ಚಿತತೆಯನ್ನು ನೆನಪಿಸುತ್ತದೆ. ಮನುಷ್ಯ ಬದುಕಿರುವಾಗ ಜಾತಿ, ಧರ್ಮ, ಹುದ್ದೆ, ಅಹಂಕಾರ ಎಂದು ವಿಭಜನೆ ಮಾಡುತ್ತಾನೆ. ಆದರೆ ಸಾವಿನ ಮುಂದೆ ಎಲ್ಲರೂ ಒಂದೇ. ಸಾವಿಗೆ ಜಾತಿ ಇಲ್ಲ, ಧರ್ಮ ಇಲ್ಲ. ಮನುಷ್ಯನ ಉಸಿರು ಇರುವವರೆಗೆ ಮಾತ್ರ ಈ ಭೇದಗಳು. ಜೀವನ ಅಂದರೆ ಹೋರಾಟ, ಹೊಣೆಗಾರಿಕೆ ಮತ್ತು ಪರಸ್ಪರ ಮಾನವೀಯತೆಯ ಪ್ರಯಾಣ. ಒಂದು ಕ್ಷಣದ ಅಜಾಗರೂಕತೆ ಇಡೀ ಕುಟುಂಬದ ಬದುಕನ್ನೇ ಕತ್ತಲೆಗೆ ತಳ್ಳಬಹುದು. ಆದ್ದರಿಂದ ನದಿ, ಕೆರೆ, ಸಮುದ್ರಗಳ ಬಳಿ ಎಚ್ಚರಿಕೆ ಅತ್ಯಗತ್ಯ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೊರಕಲಿ.
ನವದೆಹಲಿ, ಮೇ. 09 ;ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು, ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ ಪ್ರಸ್ತುತ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರ ಅವಧಿ ಮೇ 30 ಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಜನರಲ್ ಅನಿಲ್ ಚೌಹಾಣ್ ಅವರ ಸ್ಥಾನವನ್ನು ರಾಜಾ ಸುಬ್ರಮಣಿ ವಹಿಸಿಕೊಳ್ಳಲಿದ್ದಾರೆ. ಲೆಫ್ಟಿನೆಂಟ್ ಜನರಲ್ ಸುಬ್ರಮಣಿ ಅವರು ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಮಿಲಿಟರಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಜುಲೈ 31 ರಂದು ಅವರು ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇನೆಯಿಂದ ನಿವೃತ್ತರಾಗಿದ್ದರು.ಕಳೆದ ವರ್ಷ ಸೆಪ್ಟೆಂಬರ್ 1 ರಂದು ಸುಬ್ರಮಣಿ ಅವರು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಅದಕ್ಕೂ ಮೊದಲು, ಜುಲೈ 2024 ರಿಂದ ಜುಲೈ 2025 ರವರೆಗೆ ಭೂಸೇನೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.…
ಬಂಟ್ವಾಳ, ಮೇ. 08 ; ಇಲ್ಲಿನ ಪಚ್ಚಿನಡ್ಕ ಸಮೀಪದ ಗೋರೆಮಾರ್ ನಿವಾಸಿ ಪ್ರಕಾಶ್ ಎಂಬುವವರ ಮನೆಯ ಮುಂಭಾಗದ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು, ಚಿನ್ನಾಭರಣ, ನಗದು ಹಾಗೂ ಬೆಳ್ಳಿ ವಿಗ್ರಹವನ್ನು ದೋಚಿದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ವರದಿಯಾಗಿದೆ. ಮನೆಯ ಕಪಾಟಿನ ಲಾಕರ್‌ನಲ್ಲಿದ್ದ ಸುಮಾರು 16 ಗ್ರಾಂ ತೂಕದ ಮೂರು ಜೋಡಿ ಚಿನ್ನದ ಓಲೆಗಳು ಮತ್ತು ಸುಮಾರು 18 ಗ್ರಾಂ ತೂಕದ ಮೂರು ಚಿನ್ನದ ಉಂಗುರಗಳನ್ನು ಕಳ್ಳರು ದೋಚಿದ್ದಾರೆ. ಇವುಗಳ ಒಟ್ಟು ಮೌಲ್ಯ ಸುಮಾರು 4.13 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇದರೊಂದಿಗೆ 65,000 ರೂ. ನಗದು ಹಣವನ್ನೂ ಕಳ್ಳರು ಕದ್ದಿರುವುದಾಗಿ ದೂರು ದಾಖಲಿಸಲಾಗಿದೆ.ಜೊತೆಗೆ ಮನೆಯ ದೇವರ ಕೋಣೆಯಲ್ಲಿದ್ದ ಸುಮಾರು 20,000 ರೂ. ಮೌಲ್ಯದ ಕೃಷ್ಣನ ಬೆಳ್ಳಿ ವಿಗ್ರಹ ಹಾಗೂ ಕಾಣಿಕೆ ಡಬ್ಬಿಯಲ್ಲಿದ್ದ ಸುಮಾರು 5,000 ರೂ. ಹಣವನ್ನು ಕಳ್ಳರು ದೋಚಿದ್ದಾರೆ ಎಂದು ಆರೋಪಿಸಲಾಗಿದೆ.ಮನೆಯ ಮಾಲೀಕ ಪ್ರಕಾಶ್ ಕೇರಳದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ತಿಂಗಳಿಗೊಮ್ಮೆ ಊರಿಗೆ…

