UN NETWORKS ಸುರತ್ಕಲ್: ನಿನ್ನೆ ಸುರತ್ಕಲ್ ನ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಕೊಲೆಗೀಡಾಗಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಅವರ ಮೃತ ದೇಹವನ್ನು ಇಂದು ಬೆಳಿಗ್ಗೆ ಪೊಲೀಸರು ಗೌಪ್ಯವಾಗಿ ಕಾಟಿಪಳ್ಳಕ್ಕೆ ಸಾಗಿಸಿದ್ದಾರೆ. ಇದೀಗ ದೀಪಕ್ ಅವರ ಮನೆ ಎದುರು ಮೃತ ದೇಹ ಹೊತ್ತ ಅಂಬ್ಯುಲೆನ್ಸ್ ತಲುಪಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಮೃತನ ಸಂಬಂಧಿಕರು ಮೃತ ದೇಹವನ್ನು ಅಂಬ್ಯುಲೆನ್ಸ್ ನಿಂದ ಕೆಳಗಿಳಿಸಲು ನಿರಾಕರಿಸಿದ್ದಾರೆ.ಈ ನಡುವೆ ನಿನ್ನೆ ರಾತ್ರಿ ನಗರದ ಕೆಲವು ಕಡೆ ಅಹಿತಕರ ಘಟನೆಗಳು ನಡೆದ ಹಿನ್ನಲೆಯಲ್ಲಿ ಪೊಲೀಸರು ಕರ್ನಾಟಕ ಪೊಲೀಸ್ ಆಕ್ಟ್ ಕಲಂ 35 ರ ಅನ್ವಯ ನಿರ್ಬಂಧಕಾಜ್ಞೆಯನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಿದ್ದರು. ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆಯೇ ಪೊಲೀಸರು ಮೃತ ದೇಹವನ್ನು ಕಾಟಿಪಳ್ಳಕ್ಕೆ ಸಾಗಿಸಿದ್ದಾರೆ.
Author: UllalaVani
UN NETWORKS ಮಂಗಳೂರು : ಸಮುದ್ರದ ಆಳಕ್ಕಿಳಿದು ಅಲ್ಲಿಯ ಪ್ರಾಕೃತಿ ವಿಸ್ಮಯಗಳನ್ನು ಕಣ್ತುಂಬಿಕೊಳ್ಳುವ ಕನಸು ಹೊತ್ತ ಸಾಹಸಿ ಗಳಿಗೆ ಒಂದು ಸಂತಸದ ಸುದ್ದಿ.ಸ್ಕೂಬಾ ಡೈವಿಂಗ್ ನ ರೋಮಾಂಚಕ ಅನುಭವ ಪಡೆಯಲು ಉತ್ತರ ಕನ್ನಡ ಜಿಲ್ಲೆಯ ನೆತ್ರಾಣಿ ಅಥವಾ ಉಡುಪಿಯ ಕಾಪು ಗೆ ಹೋಗಬೇಕಾಗಿಲ್ಲ. ಸ್ಕೂಬಾ ಡೈವಿಂಗ್ ನ ಸಾಹಸಿ ಅನುಭವ ಮಂಗಳೂರಿನಲ್ಲಿ ದೊರೆಯಲಿದೆ. ಸ್ಕೂಬಾ ಡೈವಿಂಗ್ ಸಾಹಸ ಜಲ ಕ್ರೀಡೆ ಮಂಗಳೂರಿನ ಉಳ್ಳಾಲ ಸಮುದ್ರ ತೀರದಲ್ಲಿ ಆರಂಭಗೊಳ್ಳಲಿದೆ. ಈ ಮೂಲಕ ಇನ್ನು ಮುಂದೆ ಸಾಹಸಿಗರು ಉಳ್ಳಾಲದ ಅರಬ್ಬಿ ಸಮುದ್ರದಾಳದ ಬೆರಗುಗಳಿಗೆ ಸಾಕ್ಷಿಯಾಗಲಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪಣತೊಟ್ಟಿರುವ ಜಿಲ್ಲಾಡಳಿತ ಸ್ಕೂಬಾ ಡೈವಿಂಗ್ ಜಲ ಸಾಹಸ ಕ್ರೀಡೆ ಆರಂಭಿಸಲು ಯೋಜನೆ ರೂಪಿಸಿದೆ. ಕಳೆದ ಆನೇಕ ತಿಂಗಳುಗಳಿಂದ ಮಂಗಳೂರಿನಲ್ಲಿ ಈ ಸ್ಕೂಬಾ ಡೈವಿಂಗ್ ಸಾಹಸ ಜಲಕ್ರೀಡೆಗೆ ಸೂಕ್ತ ಜಾಗಕ್ಕಾಗಿ ಹುಡುಕಾಡ ನಡೆಯುತ್ತಿತ್ತು.ಅಂತಿಮವಾಗಿ ಉಳ್ಳಾಲದ ಸ್ಥಳ ಸ್ಕೂಬಾ ಡೈವಿಂಗ್ ಜಲ ಸಾಹಸ ಕ್ರೀಡೆ ಗೆ ಆಯ್ಕೆಯಾಗಿದೆ. ಸ್ಕೂಬಾ ಡೈವಿಂಗ್ ನಡೆಯುವ ಉಳ್ಳಾಲ ಪ್ರದೇಶದಲ್ಲಿ ಹವಳದ…
UN NETWORKS ಮಂಗಳೂರು: ಸುರತ್ಕಲ್ ನಲ್ಲಿ ಯುವಕನೋರ್ವನ ಮೇಲೆ ತಲವಾರ್ ನಿಂದ ದಾಳಿ ನಡೆಸಿದ ಘಟನೆ ನಡೆದಿದೆ, ದ್ವಿಚಕ್ರ ವಾಹನದಲ್ಲಿ ಸುರತ್ಕಲ್ ಕಾಟಿಪಳ್ಳದಿಂದ ಮಂಗಳೂರಿಗೆ ಬರುತ್ತಿದ್ದ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ನಿಂದ ದಾಳಿ ನಡೆಸಿದೆ. ತಲವಾರ್ ದಾಳಿಯಿಂದ ಗಾಯಗೊಂಡ ಯುವಕನನ್ನು ಬಂದರ್ ನ ಮಹಮ್ಮದ್ ಮುಬಶ್ಶಿರ್ ಎಂದು ಗುರುತಿಸಲಾಗಿದೆ. ಮಹಮ್ಮದ್ ಮುಬಶ್ಶಿರ್ ಸುರತ್ಕಲ್ ನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮುಬಶ್ಶಿರ್ ಅವರ ತಲೆ ಪೆಟ್ಟಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
UN NETWORKS ಮಂಗಳೂರು: ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ಹಾಡು ಹಗಲೇ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತನ ಹತ್ಯೆ ಪ್ರಕರಣ ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆ ನಡೆಸಿ ಕಾರಿನಲ್ಲಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳನ್ನ ಸುರತ್ಕಲ್ ಹಾಗೂ ಮುಲ್ಕಿ ಠಾಣೆಯ ಪೊಲೀಸರ ತಂಡ ಬೆನ್ನಟ್ಟಿದೆ. ಮುಲ್ಕಿ ಮೂಡಬಿದಿರೆ ಮಾರ್ಗವಾಗಿ ಅತೀ ವೇಗವಾಗಿ ಸಾಗುತ್ತಿದ್ದ ದುಷ್ಕರ್ಮಿಗಳ ಸ್ವಿಪ್ಟ್ ಕಾರನ್ನ ಪೊಲೀಸರ ಕಂಡ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದೆ. ಒಂದು ಹಂತದಲ್ಲಿ ಪರಾರಿಯಾಗಲು ದುಷ್ಕರ್ಮಿಗಳು ಯತ್ನಿಸಿದ್ದರು ಆದರೆ ಪೊಲೀಸರ ತಂಡ ಜೀವದ ಹಂಗು ತೊರೆದು ಕಾರನ್ನು ಚೇಸ್ ಮಾಡಿದೆ. ದುಷ್ಕರ್ಮಿಗಳನ್ನು ತಡೆಯಲು ಎಷ್ಟೇ ಪ್ರಯತ್ನ ಪಟ್ಟರು ದುಷ್ಕರ್ಮಿಗಳು ಕಾರನ್ನು ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮುಲ್ಕಿ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶೀತಲ್ ಅಲಗುರು ದುಷ್ಕರ್ಮಿಗಳ ಕಾರಿನ ಮೇಲೆ ಗುಂಡುಹಾರಿಸಿದ್ದಾರೆ. ಈ ಸಂದರ್ಭದಲ್ಲಿ ಕಾರನ್ನು ನಿಲ್ಲಿಸಿ ಪರಾರಿಯಾಗಲು ಯತ್ನಿಸಿದ ನಾಲ್ವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಟಿಪಳ್ಳದ ಇರ್ಶಾದ್, ಕಿನ್ನಿಗೋಳಿ ನೌಷಾದ್, ಕಾಟಿಪಳ್ಳ ನವಾಜ್ ಯಾನೆ…
UN NETWORKS ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳ ಎಂಬಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದಾರೆ. ಮೃತ ಪಟ್ಟ ಯುವಕನನ್ನು ಕೃಷ್ಣಾಪುರದ ಗಣೇಶ್ ಪುರ ನಿವಾಸಿ ದೀಪಕ್ (32) ಎಂದು ಗುರುತಿಸಲಾಗಿದೆ. ಡೊಕೊಮೊ ಮೊಬೈಲ್ ಕಂಪನಿಯಲ್ಲಿ ಕರೆನ್ಸಿ ಡಿಸ್ಟ್ರಿಬ್ಯೂಟರ್ ಆಗಿದ್ದ ದೀಪಕ್ ಸ್ಥಳೀಯ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಎಂದು ಹೇಳಲಾಗಿದೆ. ಕಾಟಿಪಳ್ಳದಲ್ಲಿ ಬೈಕಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ಕಾರಿನಲ್ಲಿ ಬಂದ 4 ಮಂದಿ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಯುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ ಮುಸ್ಲಿಮರು ಕಲ್ಲೆಸೆದು ದುಷ್ಕರ್ಮಿಗಳನ್ನು ಓಡಿಸಿದ್ದಾರೆ. ಅಷ್ಟರಲ್ಲಿ ತೀವ್ರ ಗಾಯಗೊಂಡ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.ಮಜೀದ್ ಎಂಬವರ ಮೊಬೈಲ್ ಶಾಪ್ ನಲ್ಲಿ ದೀಪಕ್ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದ್ದು, ಕಲೆಕ್ಷನ್ ಹಣವನ್ನು ಅಂಗಡಿಗೆ ಕೊಟ್ಟು ಮನೆಗೆ ವಾಪಾಸಾಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬೈಕನ್ನು ಅಡ್ಡಗಟ್ಟಿ ಕಾಟಿಪಳ್ಳದ ಮೂಡಾಯಿಕೋಡಿ ಎಂಬಲ್ಲಿ ಹತ್ಯೆ…
UN NETWORKS ತಲಪಾಡಿ: ತಲಪಾಡಿ ಕೆ.ಸಿ.ರೋಡ್‍ನ ವಿದ್ಯಾನಗರದ ಫಲಾಹ್ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ಬುಧವಾರ 03-01-2018 ರಂದು ಫಲಾಹ್ ಮೈದಾನದಲ್ಲಿ ಫಲಾಹ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಹಾಜಿ ಯು.ಬಿ. ಮೊಹಮ್ಮದ್, ಕಾರ್ಯದರ್ಶಿ ಟಿ.ಎಂ.ಬಶೀರ್, ಕೋಶಾಧಿಕಾರಿ ಇಸ್ಮಾಯಿಲ್ ನಾಗತೋಟ, ಹಾಗೂ ಮಾಜಿ ಕಾರ್ಯದರ್ಶಿ ಎನ್.ಅರಬಿ ಕುಂಞ ಪಾರಿವಾಳಗಳನ್ನು ಬಾನಿಗೆ ಹಾರಿಸುವ ಮೂಲಕ ಉದ್ಘಾಟಿಸಿದರು. ಇಸ್ಮಾಯಿಲ್ ನಾಗತೋಟ ಪ್ರಾಸ್ತವಿಕವಾಗಿ ಮಾತನಾಡಿದರು. ಸಭೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೇನ್, ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ಆಯಿಶಾ ಸಬೀನಾ ಕೈಸಿರಾನ್, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶ್ರೀಮತಿ ವಿದ್ಯಾ ಡಿ ಸೋಜ ಉಪಸ್ಥಿತರಿದ್ದರು. ಫಲಾಹ್ ಅನುದಾನಿತ ಕನ್ನಡ ಪ್ರೌಡಶಾಲೆಯ ಮುಖ್ಯ ಶಿಕ್ಷಕ ಮಹಮ್ಮದ್ ರಫೀಕ್ ವಂದಿಸಿದರು. ಶಿಕ್ಷಕ ರಮೇಶ್ ಕಾರ್ಯಕ್ರಮ ನಿರೂಪಿಸಿದರು.
UN NETWORKS ಕುತ್ತಾರು: ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಬಡಾವಣೆಯ 1ನೇ ಮತ್ತು 2ನೇ ಕಾಂಕ್ರೀಟೀಕರಣ ರಸ್ತೆಯ ಉದ್ಘಾಟನೆಯನ್ನು ಆಹಾರ ಸಚಿವ ಯು.ಟಿ.ಖಾದರ್ ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಈ ರಸ್ತೆಯು ಬಹಳಷ್ಟು ವರ್ಷದಿಂದ ಹದಗೆಟ್ಟಿದ್ದು,ಊರಿನ ಪ್ರಮುಖರು ಕಳೆದ ಚುನಾವಣೆ ಸಂದರ್ಭದಲ್ಲಿ ರಸ್ತೆ ಅಬಿವೃದ್ಧಿ ಪಡಿಸಲು ಬೇಡಿಕೆಯನ್ನಿಟ್ಟಿದ್ದರು,ಆ ನಿಟ್ಟಿನಲ್ಲಿ ನನ್ನ ವಿಶೇಷ ನಿಧಿಯಿಂದ 20 ಲಕ್ಷ ಅನುಧಾನದಲ್ಲಿ ಉತ್ತಮ ಕಾಂಕ್ರೀಟೀಕರಣ ರಸ್ತೆ ಮಾಡಿದ್ದೇನೆ ಎಂದರು. ಇದೇ ಸಂದರ್ಭದಲ್ಲಿ ಆಹಾರ ಸಚಿವ ಯು.ಟಿ.ಖಾದರ್,ಉಳ್ಳಾಲ ನಗರ ಸಭೆ ಸದಸ್ಯೆ ಕುಮಾರಿ ಭಾರತಿ.ಎಂ, ಸಾಮಾಜಿಕ ಕಾರ್ಯಕರ್ತ ಸತೀಶ್ ಕುತ್ತಾರ್ ಅವರನ್ನು ಸನ್ಮಾನಿಸಲಾಯಿತು. ಉಳ್ಳಾಲ ನಗರ ಸಭೆ ಅಧ್ಯಕ್ಷ ಹುಸೈನ್ ಕುಂಞ ಮೋನು,ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ,ಗುರು ಸ್ವಾಮಿ ಈಶ್ವರ್ ಬಡಾಜೆ,ಮಾಜಿ ತಾಲೂಕು ಪಂಚಾಯತ್ ಸದಸ್ಯ ಮೊಹಮ್ಮದ್ ಮುಸ್ತಫ,ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಇಕ್ಬಾಲ್ ಸಾಮಾನಿಗೆ,ಸಲೀಮ್ ಮೆಗಾ,ಸೋಮೇಶ್ವರ ಪಂಚಾಯತ್ ಸದಸ್ಯ ಪುರುಷೋತ್ತಮ ಪಿಲಾರ್ ಹಾಗೂ…
UN NETWORKS ಕೊಣಾಜೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ(ರಿ) ಮಂಗಳೂರು ಇದರ ವತಿಯಿಂದ ಗ್ರಾಮೀಣ ಅಭಿವೃದ್ಧಿಯಲ್ಲಿ ವಿಶೇಷ ಸಾಧನೆಗೈದ ಕೊಣಾಜೆ ವಿಜಯ ಗ್ರಾಮಾಭಿವೃದ್ಧಿ ಸಮಿತಿಗೆ ಸತತ ಎರಡನೇ ಬಾರಿ ಗ್ರಾಮಾಭಿವೃದ್ಧಿ ಪುರಸ್ಕಾರ ಲಭಿಸಿದೆ. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಮಂಗಳೂರಿನ ವಿಜಯ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಪುರಸಾರ್ಕವನ್ನುನೀಡಲಾಯಿತು. ಗ್ರಾಮೀಣ ಅಭಿವೃದ್ಧಿಗೆ ಪೂರಕವಾಗಿ ಗಿಡ ನೆಡುವ ಕಾರ್ಯಕ್ರಮ, ಔಷಧೀಯ ಸಸ್ಯಗಳ ಬಗ್ಗೆ ಮಾಹಿತಿ ಕಾರ್ಯಗಾರ, ಜಲ ಸಂರಕ್ಷಣೆಗೆ ಇಂಗು ಗುಂಡಿ ನಿರ್ಮಾಣ, ಕೊಳವೆ ಬಾವಿಗೆ ನೀರು ಇಂಗಿಸುವ ಕಾರ್ಯಕ್ರಮ, ಕೆರೆ ಅಭಿವೃದ್ಧಿ, ಕಾಲೇಜು ವಿದ್ಯಾರ್ಥಿಗಳಿಗೆ ಭತ್ತದ ಕೃಷಿ ಬಗ್ಗೆ ಮಾಹಿತಿ ಕಾರ್ಯಗಾರ, ಪ್ರೌಢಶಾಲಾ ಮಕ್ಕಳಿಗೆ ತೋಟಗಾರಿಕೆ ವಿಷಯದ ಬಗ್ಗೆ ಮಾಹಿತಿ ಕಾರ್ಯಗಾರ, ಸರಕಾರಿ ಪ್ರೌಢಶಾಲೆಗಳಲ್ಲಿ ಕೃಷಿಕ ಸಂಘಗಳ ನಿರ್ಮಾಣ, ಡಿಜಿಟಲ್ ಬ್ಯಾಂಕಿಂಗ್ ಕಾರ್ಯಗಾರ, ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ಮೊದಲಾದ ಕಾರ್ಯಕ್ರಮಗಳನ್ನು ಕೊಣಾಜೆ ವಿಜಯ ಗ್ರಾಮಾಭಿವೃದ್ಧಿ ಸಮಿತಿ ವತಿಯಿಂದ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ…
UN NETWORKS ತಲಪಾಡಿ: ಎಲ್ಲಾ ಸಮುದಾಯದವರನ್ನು ಒಟ್ಟುಗೂಡಿಸಿ, ಅವರ ಕಷ್ಟಗಳಿಗೆ ಸ್ಪಂಧಿಸುವ ಉದ್ದೇಶವನ್ನು ಪಕ್ಷ ಹೊಂದಿದೆ. ಇದನ್ನು ಮುಂದಿಟ್ಟುಕೊಂಡು ಕಾರ್ಯಕರ್ತರು ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯಾಚರಿಸಬೇಕಿದೆ ಎಂದು ಮಂಜೇಶ್ವರ ಶಾಸಕ ಪಿ.ಬಿ ಅಬ್ದುಲ ರಝಾಕ್ ಹೇಳಿದ್ದಾರೆ. ಅವರು ತಲಪಾಡಿಯಲ್ಲಿ ಮುಸ್ಲಿಂ ಲೀಗ್ ಪಕ್ಷದ ಕಚೇರಿಯ ಉದ್ಘಾಟನಾ ಸಮಾರಂಭ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮುದಾಯಗಳ ನಡುವೆ ಬಿಕ್ಕಟ್ಟನ್ನು ಸೃಷ್ಟಿಸುವ ಕೆಲಸವನ್ನು ಲೀಗ್ ಪಕ್ಷ ಮಾಡುತ್ತಿಲ್ಲ. ಇದರಿಂದಾಗಿ ಕೇರಳದಲ್ಲಿ ಅಸ್ತಿತ್ವವವನ್ನು ಸ್ಥಾಪಿಸಿರುವ ಪಕ್ಷ, ಅಧಿಕಾರವನ್ನು ಸ್ಥಾಪಿಸಿದೆ. ಪ್ರತಿ ಗ್ರಾ.ಪಂಗಳಲ್ಲಿ ಅಧಿಕಾರದ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ ನಿರಂತರವಾಗಿ ಸೌಹಾರ್ದಯುತವಾಗಿ ತೊಡಗಿಸಿಕೊಂಡಿರುವುದರಿಂದ ಎಲ್ಲಾ ರೀತಿಯಲ್ಲೂ ಬೆಂಬಲ ದೊರೆಯುತ್ತಿದೆ. ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚಾಗಿ ಲೀಗ್ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿ ಂ ಲೀಗ್ ಅಧ್ಯಕ್ಷ ಸಿದ್ದೀಖ್ ಎ.ಕೆ ಬಂಟ್ವಾಳ್ ಮಾತನಾಡಿ ಕರ್ನಾಟಕ ಮತ್ತು ಜಿಲ್ಲೆಗೆ ಲೀಗ್ ಪಕ್ಷ ಹೊಸತಲ್ಲ. ರಾಜ್ಯದಲ್ಲಿ ಓರ್ವ ಶಾಸಕನಿದ್ದು, ಹಲವೆಡೆ…
UN NETWORKS ಉಳ್ಳಾಲ: ನಾಟೆಕಲ್‍ನ ಫಾತಿಮಾ ಕಾಂಪ್ಲೆಕ್ಸ್‍ನಲ್ಲಿ ನೂತನವಾಗಿ ಆರಂಭಗೊಂಡ ಎಕ್ಟ್ರೀಂ ಫಿಟ್‍ನೆಸ್ ಜಿಮ್ ಸೋಮವಾರ ಉಳ್ಳಾಲದ ಸೈಯ್ಯಿದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಯುವಕರಿಗೆ ಆಲಸ್ಯ ಜಾಸ್ತಿಯಾಗಿದೆ. ವ್ಯಾಯಾಮ ನಡೆಸದೆ ಅನಾರೋಗ್ಯಕ್ಕೊಳಗಾಗುವವರ ಸಂಖ್ಯೆಯೇ ಹೆಚ್ಚಿದೆ. ನಮಾಝ್ ಸಮಯದಲ್ಲೂ ಯುವಕರು ಆಲಸ್ಯ ನಡೆಸುವುದು ಕಾಣುತ್ತಿದೆ. ಇಂತಹ ಆಲಸ್ಯ ಮನೋಭಾವನೆಯಿಂದ ವ್ಯಾಯಾಮ ಶಾಲೆಗಳು ಮುಚ್ಚಿಹೋಗುತ್ತಿವೆ. ದುಬಾರಿ ಬೆಲೆಯ ಸಾಮಗ್ರಿಗಳ ಜತೆಗೆ ಜಿಮ್ ಅನ್ನು ಸ್ಥಾಪಿಸಿರುವ ಪಾಲುದಾರರಾದ ಶಬೀರ್ ಮತ್ತು ರಾಮಕೃಷ್ಣ ಅವರು ಯುವಕರನ್ನು ಉತ್ತಮ ತರಬೇತಿಯನ್ನು ನೀಡುವಂತಾಗಲಿ ಎಂದರು. ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ ಜಿಮ್ ಹೆಸರನ್ನು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸುವಂತೆ ಮಾಡಬೇಕಿದೆ. ಅದಕ್ಕಾಗಿ ಯುವಕರು ದುಶ್ಚಟಗಳಲ್ಲಿ ಭಾಗವಹಿಸದೆ ತರಬೇತಿಯನ್ನು ಪಡೆದು ಸ್ಪರ್ಧೆಗಳಲ್ಲಿ ಭಾಗವಹಿಸುವುದರ ಮೂಲಕ ಜಿಮ್ ಹೆಸರನ್ನು ಶಾಶ್ವತವಾಗಿ ಉಳಿಸುವಂತಾಗಬೇಕು ಎಂದರು. ಉಮರ್ ಮೌಲವಿ ಅಲೇಕಳ ಇವರು ದುಆ ನೆರವೇರಿಸಿದರು. ಕಾರ್ಯಕ್ರಮದಲ್ಲಿ…

