ನರಿಂಗಾನ, ಮೇ. 05 : ನರಿಂಗಾನ ಗ್ರಾಮದ 19 ವರ್ಷದ ಯುವತಿಯೊಬ್ಬಳು ತನ್ನ ಮನೆಯಿಂದ ಮೇ 4 ರ ಸೋಮವಾರ ಬೆಳಗಿನ ಜಾವದಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಕಾಣೆಯಾದ ಹುಡುಗಿಯನ್ನು ಇಬ್ರಾಹಿಂ ಎಂ ಅವರ ಮಗಳು ರಾಭಿಯತುಲ್ ಅಧಭಿಯ ಎಂದು ಗುರುತಿಸಲಾಗಿದೆ. ಆಕೆಯ ತಂದೆ ನೀಡಿದ ದೂರಿನ ಪ್ರಕಾರ, ಮೇ 3 ರ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಕುಟುಂಬವು ಊಟದ ನಂತರ ಮಲಗಲು ಹೋಗಿದ್ದಾಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೋಮವಾರ ಬೆಳಗಿನ ಜಾವ 2:30 ಕ್ಕೆ ಇಬ್ರಾಹಿಂ ಮಂಗಳೂರು ಡಾಕ್‌ಗೆ ಕೆಲಸಕ್ಕೆ ಹೋಗಲು ಎದ್ದಾಗ, ತನ್ನ ಮಗಳು ತನ್ನ ಕೋಣೆಯಲ್ಲಿ ಇಲ್ಲದಿರುವುದು ಮತ್ತು ಅಡುಗೆಮನೆಯ ಹಿಂಬಾಗಿಲು ತೆರೆದಿರುವುದು ಕಂಡುಬಂದಿದೆ. ಸ್ಥಳೀಯ ಎಲ್ಲಾ ಪ್ರದೇಶಗಳನ್ನು ಹುಡುಕಿದರೂ ಮತ್ತು ಸಂಬಂಧಿಕರೊಂದಿಗೆ ವಿಚಾರಿಸಿದರೂ, ಆಕೆಯ ಸ್ಥಳ ಇನ್ನೂ ತಿಳಿದಿಲ್ಲ.ಕಾಣೆಯಾದ ಯುವತಿಯ ವಿವರಣೆ: ವಯಸ್ಸು: 19 ವರ್ಷಗಳುಎತ್ತರ: 4.6 ಅಡಿಗೋಧಿ…
Author: UllalaVani
ಮಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯ ಉಪಚುನಾವಣೆಯ ಗೆಲುವು ಕೇವಲ ಎರಡು ಕ್ಷೇತ್ರಗಳ ಜಯವಲ್ಲ, ಇದು 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ಸೂಚನೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಣ್ಣಿಸಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಜನರು ನೀಡಿರುವ ಆಶೀರ್ವಾದ. ಈ ಫಲಿತಾಂಶವು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಜನತೆ ನೀಡಿದ ತಕ್ಕ ಉತ್ತರ ಎಂದು ಅವರು ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ರಾಜ್ಯದ ಪ್ರತೀ ಹಳ್ಳಿಹಳ್ಳಿಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ, ರಾಜ್ಯದ ಅಭಿವೃದ್ಧಿಗಳನ್ನು ಮುಂದಿಟ್ಟು ಆಮೂಲಕ ಪಕ್ಷವನ್ನು ಬಲಪಡಿಸಲು ವಿಶೇಷ ಅಭಿಯಾನ ಕೈಗೊಳ್ಳಲಿದೆ. ಯುವಕರಲ್ಲಿ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಎಂದ ಅವರು, 2028ರ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ…
ಉಳ್ಳಾಲ, ಮೇ-04:ಸೋಮೇಶ್ವರ ಪುರಸಭಾ ವ್ಯಾಪ್ತಿಯ ಆಸ್ತಿ ಮಾಲೀಕರು ಹಾಗೂ ಅನುಭೋಗದಾರರಿಗೆ ಮಹತ್ವದ ಮಾಹಿತಿಯೊಂದನ್ನು ಪುರಸಭೆ ಪ್ರಕಟಿಸಿದೆ. ಸರಕಾರದ ಆದೇಶದಂತೆ 2026-27ನೇ ಸಾಲಿನ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಮೇ ತಿಂಗಳೊಳಗೆ ಪಾವತಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಈ ರಿಯಾಯಿತಿ 2026ರ ಮೇ 30ರವರೆಗೆ ಮಾತ್ರ ಅನ್ವಯವಾಗುತ್ತದೆ. ಜೂನ್ ತಿಂಗಳಲ್ಲಿ ತೆರಿಗೆ ಪಾವತಿಸಿದರೂ ಯಾವುದೇ ದಂಡ ವಿಧಿಸಲಾಗುವುದಿಲ್ಲ. ಆದರೆ ಜುಲೈ ತಿಂಗಳಿಂದ ಪ್ರತಿ ತಿಂಗಳಿಗೆ ಶೇ.2ರಷ್ಟು ದಂಡ ವಿಧಿಸಲಾಗುವುದು ಎಂದು ಪುರಸಭೆ ಎಚ್ಚರಿಕೆ ನೀಡಿದೆ. ಆಸ್ತಿ ತೆರಿಗೆ ಬಾಕಿ ಇರುವವರು ಕೂಡಲೇ ಪಾವತಿಸಬೇಕೆಂದು ಕೋರಲಾಗಿದ್ದು, 2026-27ನೇ ಸಾಲಿಗೆ ಉದ್ಯಮ ಪರವಾನಿಗೆಯನ್ನು ನವೀಕರಿಸುವುದು ಹಾಗೂ ನೀರಿನ ಶುಲ್ಕವನ್ನು ಪಾವತಿಸುವಂತೆ ಪುರಸಭೆ ಸೂಚಿಸಿದೆ. ಪುರಸಭೆಯ ಪ್ರಕಟಣೆಯಂತೆ, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸುವಂತೆ ಮನವಿ ಮಾಡಲಾಗಿದೆ.
ಉಳ್ಳಾಲ: ಮಾತು ಬಾರದ ಪ್ರಾಣಿ ಪಕ್ಷಿಗಳಿಗೂ ಸಹ ಉಳಿಯಲು ಒಂದು ಸೂರು ಇರುತ್ತದೆ.ಅದೇ ರೀತಿ ಮಾನವರು ಕೂಡಾ ವ್ಯವಸ್ಥಿತ ಜೀವನ ಸಾಗಿಸಲು ಮನೆಯು ಅತ್ಯಾವಶ್ಯಕವಾಗಿದೆ.ಪತಿ ಮತ್ತು ಪುತ್ರನನ್ನ ಕಳಕೊಂಡು ಸಂಕಷ್ಟದಲ್ಲಿದ್ದ ವೃದ್ಧೆ ವೀರಮ್ಮ ಅವರಿಗೆ ಸುಸಜ್ಜಿತ ಮನೆ ನಿರ್ಮಿಸಿ ಕೊಟ್ಟು ಸಂಘ ಶತಾಬ್ಧಿಯನ್ನು ಅರ್ಥಪೂರ್ಣವಾಗಿ ಸಂಭ್ರಮಿಸಿದ ಕುಂಪಲದ ರಾಷ್ಟ್ರೀಯ ಸೇವಾ ಭಾರತಿ ಕೇಸರಿ ಶಾಖೆಯ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆಯೆಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ಧಿಯ ಪ್ರಯುಕ್ತ ಸಂಘ ಪ್ರೇರಿತ ಸಂಸ್ಥೆಯಾದ ಕುಂಪಲದ ರಾಷ್ಟ್ರೀಯ ಸೇವಾ ಭಾರತಿ ಕೇಸರಿ ಶಾಖೆಯ ಮುಂದಾಳುತ್ವದಲ್ಲಿ ಕುಂಪಲ ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ,ಕೇಸರಿ ಮಿತ್ರ ವೃಂದ ,ಕೇಸರಿ ಮಾತೃ ಮಂಡಳಿಯ ಸಹಯೋಗ ಹಾಗೂ ಸಮಾಜದ ದಾನಿಗಳ ಸಹಕಾರದಿಂದ ಪತಿ ಮತ್ತು ಮಗನನ್ನ ಕಳಕೊಂಡು ವಿಧವೆ ಸೊಸೆ ಹಾಗೂ ಮೂರು ಮೊಮ್ಮಕ್ಕಳೊಂದಿಗೆ ವಾಸವಿರುವ ಕುಂಪಲ ಬಗಂಬಿಲದ ಅಮೃತನಗರ ನಿವಾಸಿ ವೃದ್ಧೆ ವೀರಮ್ಮ ಅವರಿಗೆ ನಿರ್ಮಿಸಿ…
ಮಂಗಳಗಂಗೋತ್ರಿ : ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಪೀಠ ಮತ್ತು ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ‘ಕನಕ ಸ್ಮೃತಿ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಕನಕ ಪುರಸ್ಕಾರ ಪ್ರದಾನ ಸಮಾರಂಭವು ಮೇ 06, ಬುಧವಾರ, ಅಪರಾಹ್ನ 2.30 ಗಂಟೆಗೆ ಮಂಗಳಗಂಗೋತ್ರಿಯ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ. ಬಿ.ಎ. ವಿವೇಕ ರೈ ವಿಚಾರ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಲ್ ಧರ್ಮ ಇವರು ವಹಿಸಲಿದ್ದಾರೆ, ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ಸಹ ನಿರ್ದೇಶಕರಾದ ಡಾ. ಬಿ.ಎಸ್. ಅನಿಲಕುಮಾರ ಬೊಮ್ಮಾಘಟ್ಟ ಇವರು ವಿಶೇಷ ಉಪನ್ಯಾಸ ನೀಡಲಿರುವರು. ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ನಾಗಪ್ಪ ಗೌಡ .ಆರ್, ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕರಾದ ಡಾ ಧನಂಜಯ ಕುಂಬ್ಳೆ ಉಪಸ್ಥಿತರಿರುವರು. ಈ ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಕನಕ ಕೀರ್ತನ ಗಂಗೋತ್ರಿ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ 16 ಅಭ್ಯರ್ಥಿಗಳಿಗೆ ಮತ್ತು ಆರು ತಂಡಗಳಿಗೆ ‘ಕನಕ ಪುರಸ್ಕಾರ ಪ್ರದಾನ ಮತ್ತು ಕನಕ ಕೀರ್ತನ ಪ್ರಸ್ತುತಿ’ ನಡೆಯಲಿದೆ ಎಂದು ಕನಕದಾಸ ಸಂಶೋಧನ ಕೇಂದ್ರದ ಪ್ರಕಟಣೆ ತಿಳಿಸಿದೆ.
ಇರಾ : ಇರಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಾಗಿರುವ ದಿನೇಶ್ ಕಕ್ಕೆಮಜಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಮತ್ತು ಹ್ಯೂಮನಿಟಿ ಫೌಂಡೇಶನ್ ಮಂಗಳೂರು ಅಧ್ಯಕ್ಷರಾದ ನಾಸೀರ್ ಅಹ್ಮದ್ ಸಾಮಾನಿ ಅವರು ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾ ನಿಧಿ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ಅವರು ಟ್ರಸ್ಟ್‌ನ ವಿವಿಧ ಕಾರ್ಯಕ್ರಮಗಳು, ಕಾರ್ಯಚಟುವಟಿಕೆಗಳು ಹಾಗೂ ದಾಖಲೆ ಪತ್ರಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಟ್ರಸ್ಟ್‌ನೊಂದಿಗೆ ಕೈಜೋಡಿಸಿ ಅದರ ಬೆಳವಣಿಗೆಗೆ ಸಹಕರಿಸುವುದಾಗಿ ತಿಳಿಸಿದರು. ತಮ್ಮ ಸಂಸ್ಥೆಯು ಟ್ರಸ್ಟ್ ಅನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಹಾಯ ಮಾಡಲಿದೆ ಎಂದರು. ಈ ಸಂದರ್ಭದಲ್ಲಿ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷರಾದ ಯಾದವ ಅಸ್ಸೈಗೋಳಿ ಅವರು ಅತಿಥಿಗಳನ್ನು ಶಾಲು ಹೊದಿಸಿ ಸನ್ಮಾನಿಸಿದರು. ಜೊತೆಗೆ ‘ಸಂವಿಧಾನ ಅರಿವು’ ಎಂಬ ಪುಸ್ತಕ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ಬೆಂಗಳೂರು, ಮೇ. 04 : ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಗೆಲುವು ಒಂದು ಕಡೆ ನರೇಂದ್ರ ಮೋದಿಜೀ ಅವರ ನಾಯಕತ್ವಕ್ಕೆ ದೊಡ್ಡ ಶಕ್ತಿಯನ್ನು ತುಂಬಿದಂತಾಗಿದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್‍ಜೀ ಅವರ ಮೊದಲ ಚುನಾವಣೆ ಇದಾಗಿದೆ. ಬಹುದೊಡ್ಡ ಸಂದೇಶವನ್ನು ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಅಮಿತ್ ಶಾ ಜೀ ಅವರು ಚುನಾವಣಾ ಚಾಣಕ್ಯ ಎಂದು ಪ್ರತಿಯೊಬ್ಬರು ಮಾತನಾಡುತ್ತಿದ್ದಾರೆ. ಅಮಿತ್ ಶಾ ಜೀ ಅವರ ತಂತ್ರಗಾರಿಕೆಯೂ ಈ ಗೆಲುವಿನ ಹಿಂದಿದೆ ಎಂದರು.ಪಶ್ಚಿಮ ಬಂಗಾಲದ ಗೆಲುವಿಗಾಗಿ ಅಲ್ಲಿನ ಕಾರ್ಯಕರ್ತರಿಗೆ ನಾವು ದೊಡ್ಡ ಸಲಾಂ ಹೇಳಬೇಕಿದೆ. ಅಲ್ಲಿ ಹಲವು ದಶಕಗಳಿಂದ ನಮ್ಮ ಕಾರ್ಯಕರ್ತರ ಮೇಲೆ ನಿರಂತರ ದಬ್ಬಾಳಿಕೆ ಆಗುತ್ತಿತ್ತು. ಇದೆಲ್ಲದಕ್ಕೂ ಇತಿಶ್ರೀ ಹಾಕುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಿದ್ದಾರೆ ಎಂದರಲ್ಲದೇ 3 ರಾಜ್ಯಗಳ ಕಾರ್ಯಕರ್ತರಿಗೆ ವಂದನೆ, ಅಭಿನಂದನೆ ತಿಳಿಸುವುದಾಗಿ ಹೇಳಿದರು.ಎರಡೂ ಕ್ಷೇತ್ರಗಳಲ್ಲಿ…
ಮಂಗಳೂರು, ಮೇ 4: ಕಿಂಗ್‌ಸ್ಟಾರ್ ಸೇವಾಸಮಿತಿ (ರಿ.), ಉಳಿಯ-ಹೊಯ್ಗೆ ಪೆರ್ಮನ್ನೂರು ವ್ಯಾಪ್ತಿಯ ಸಮಾಜಸೇವಾ ಸಂಘಟನೆ, ತನ್ನ ನೂತನ ಕಛೇರಿಯ ಉದ್ಘಾಟನೆಯನ್ನು ಮೇ 9, 2026ರಂದು ಶನಿವಾರ ಬೆಳಿಗ್ಗೆ 8:30ಕ್ಕೆ ಉಳಿಯ ಹೊಯ್ಗೆ ಇರುವ ಕಿಂಗ್‌ಸ್ಟಾರ್ ರಿವರ್ ವ್ಯೂವ್‌ನಲ್ಲಿ ಆಯೋಜಿಸಿದೆ. ಈ ಉದ್ಘಾಟನಾ ಸಮಾರಂಭವನ್ನು ಸಂತ ಸೆಬಾಸ್ಟಿಯನ್ ಚರ್ಚ್, ಪೆರ್ಮನ್ನೂರು ಧರ್ಮಗುರು ರೆವ್. ಫಾ. ಸಿಪ್ರಿಯನ್ ಪಿಂಟೊ ಅವರು ನೆರವೇರಿಸಲಿದ್ದು, ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ವ್ಯವಸ್ಥಾಪನಾ ಅಧ್ಯಕ್ಷರಾದ ರಾಜೇಶ್ ಉಳಿಯ ಹಾಗೂ ಉಳ್ಳಾಲ ದರ್ಗಾದ ಪರಿಚಾರಕರಾದ ಸಯ್ಯದ್ ಸದಕತುಲ್ಲಾ ತಂಜಳ್ ಅವರು ಉಪಸ್ಥಿತರಿರುವರು. ಮೇ 10, 2026ರಂದು ಭಾನುವಾರ ಸಂಜೆ 7:00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ವಿಧಾನಸಭೆಯ ಅಧ್ಯಕ್ಷರಾದ ಯು.ಟಿ. ಖಾದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷರಾದ ಡಾ. ಯು.ಟಿ. ಇಫ್ತಿಕರ್ ಅಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಳ್ಳಾಲ ಪೋಲೀಸ್ ಠಾಣೆಯ ನಿರೀಕ್ಷಕರಾದ ವಿರೂಪಾಕ್ಷ ಸ್ವಾಮಿ,…
ಬೆಂಗಳೂರು, ಮೇ. 04: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದ್ದು, ಪಕ್ಷದ ಮುಖ್ಯಸ್ಥ ನಟ ದಳಪತಿ ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಮದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಅಲೆ ಇರಬಹುದು. ಇನ್ನೂ ಟಿವಿಕೆ ಹೊಸ ಪಕ್ಷ ವಿಜಯ್ ಅಲೆಯಿಂದ ಮುನ್ನಡೆ ಸಾಧಿಸಿರಬಹುದು ಎಂದ ಅವರು ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಿದರು.”ಪಶ್ಚಿಮ ಬಂಗಾಳದಲ್ಲಿ ನಮ್ಮದೇನು ಇರಲಿಲ್ಲ. ಅಲ್ಲಿ ಬಿಜೆಪಿ ಮುನ್ನಡೆಗೆ ಆಡಳಿತ ವಿರೋಧಿ ಅಲೆ ಇರಬಹುದು. ಅಸ್ಸಾಂನ ಸೋಲನ್ನು ಒಪ್ಪುತ್ತೇವೆ. ಇನ್ನೂ ಕೇರಳದಲ್ಲಿ ನಮ್ಮ ನಿರೀಕ್ಷೆ ಮೀರಿ ಮುನ್ನಡೆ ಗಳಿಸಿದ್ದೇವೆ” ಎಂದು ಹೇಳಿದರು.
ಮಂಗಳೂರು, ಮೇ. 04 : ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ. ವಿಶೇಷವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬಂದಿದ್ದ ರಾಜಕೀಯ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಪುದುಚೇರಿಯಲ್ಲಿ ಎನ್.ಡಿ.ಎ. ಮೈತ್ರಿ ಆಡಳಿತ ಸ್ಥಾಪನೆಗೆ ಮುನ್ನಡೆಯುತ್ತಿದೆ. ಕೇರಳದಲ್ಲಿಯೂ ಭಾರತೀಯ ಜನತಾ ಪಕ್ಷ ತನ್ನ ಮತಶೇರ್ ಅನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದು, ಅಲ್ಲಿನ ಕಮ್ಯುನಿಸ್ಟ್ ಸರ್ಕಾರದ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗಿದೆ.ಈ ಫಲಿತಾಂಶಗಳನ್ನು ಅವಲೋಕಿಸಿದಾಗ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಜನಪ್ರಿಯತೆ ದೇಶದಾದ್ಯಂತ ಸುನಾಮಿಯಂತೆ ವ್ಯಕ್ತವಾಗಿರುವುದು ಗೋಚರಿಸುತ್ತದೆ. ಜನತೆಯ ಮನೋಭಾವ ಬಿಜೆಪಿ ಪರವಾಗಿ ರೂಪುಗೊಂಡಿರುವುದು ಈ ಚುನಾವಣಾ ಫಲಿತಾಂಶಗಳ ಮೂಲಕ ಸ್ಪಷ್ಟವಾಗಿದೆ.ಈ ಬಾರಿ ಫಲಿತಾಂಶಗಳು ಬಹುತೇಕ ಎಲ್ಲಾ ಎಕ್ಸಿಟ್ ಪೋಲ್‌ಗಳ ಅಂದಾಜುಗಳನ್ನು ಮೀರಿರುವುದು ಗಮನಾರ್ಹವಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಮತ ನೀಡಿದ ಎಲ್ಲಾ ಮತದಾರರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

