ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಜಗತ್ತಿನಲ್ಲಿ ಸೌಂದರ್ಯ ಆರಾಧಕರ ಸಂಖ್ಯೆಯೇ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಬಡ ಕುಟುಂಬದಲ್ಲಿರುವ ಸೀಳುತುಟಿ ಹೊಂದಿರುವ ಮಕ್ಕಳ ಚಿಕಿತ್ಸೆಯಲ್ಲಿ ಅಂತಾರಾಷ್ಟ್ರೀಯ ಫೌಂಡೇಶನ್ ಹಾಗೂ ನಿಟ್ಟೆ ಆಸ್ಪತ್ರೆ ಜಂಟಿಯಾಗಿ ಕಾರ್ಯಾಚರಿಸಿ ಸೌಂದರ್ಯದ ಜತೆಗೆ ಅವರನ್ನು ಸಮಾಜವನ್ನು ಧೈರ್ಯವಾಗಿ ಎದುರಿಸುವಂತೆ ರೂಪಿಸುತ್ತಿದೆ ಎಂದು ಅಂತಾರಾಷ್ಟ್ರೀಯ ಮಕ್ಕಳ ಸೀಳುತುಟಿ ಫೌಂಡೇಷನ್ನಿನ ಸ್ಥಾಪಕ ಡಾ. ಹರ್ಮನ್ ಸೇಲರ್ ಅಭಿಪ್ರಾಯಪಟ್ಟರು. ಅವರು ಸೆಂಟರ್ ಫಾರ್ ಅಡ್ವಾನ್ಸ್ಡ್ ಡೆಂಟೊಫೇಷಿಯಲ್ ಆಂಡ್ ಸ್ಟೊಮಾಟೋಗ್ನಾಥಿಕ್ ಸೈನ್ಸಸ್ ಹಾಗೂ ಎ.ಬಿ ಶೆಟ್ಟಿ ದಂತ ಮಹಾವಿದ್ಯಾಲಯ ವಿಜ್ಞಾನ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ` ಸರ್ಜಿಕಲ್ ಮೆನೇಜ್ ಮೆಂಟ್ ಕಾಂಪ್ಲೆಕ್ಸ್ ಕ್ರೇನಿಯೋಫೇಷಿಯಲ್ ಅನಾಮಲೀಸ್ ಮತ್ತು ಪ್ರೀಸರ್ಜಿಕಲ್ ನಾಸಲ್ವೀಯೊಲಾರ್ ಮೋಲ್ಡಿಂಗ್ ಕುರಿತ ನಿರಂತರ ಕಲಿಕಾ ಶಿಕ್ಷಣ ಕಾರ್ಯಗಾರಕ್ಕೆ ಸೋಮವಾರ ದೇರಳಕಟ್ಟೆ ಎ.ಬಿ.ಶೆಟ್ಟಿ ಕಾಲೇಜಿನ ವಿಂಶತಿ ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು. ಸೀಳುತುಟಿ ಹೊಂದಿರುವ ಮಕ್ಕಳು ತಮ್ಮನ್ನು ಪ್ರೀತಿಸುವವರೇ ಇಲ್ಲವೆಂದು ಖಿನ್ನತೆಗೆ ಜಾರಿದ ಹಲವು ಉದಾಹರಣೆಗಳಿವೆ. ಇದರಿಂದ ಸಮಾಜದಲ್ಲಿ ಎಲ್ಲರಂತೆ ಬಾಳಲು ಹಿಂದೇಟು ಹಾಕುವ ಪರಿಸ್ಥಿತಿಯಿತ್ತು. ಇದನ್ನೆಲ್ಲಾ…
Author: UllalaVani
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಣಾಜೆ: ರಾಜ್ಯದ ಕಲೆಯಾಗಿರುವ ಯಕ್ಷಗಾನಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾನಮಾನ ನೀಡುತ್ತಿದ್ದು, ಇದರ ಜತೆಗೆ ಯಕ್ಷಗಾನದ ಕುರಿತ ನೂತನ ಪದವಿ ಕೋರ್ಸನ್ನು ಸ್ಥಾಪಿಸಿ ಹೆಚ್ಚಿನ ಕಲಾವಿದರನ್ನು ಸೃಷ್ಟಿಸಬೇಕಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿಪ್ರಾಯಪಟ್ಟರು. ಅವರು ಮಂಗಳೂರು ವಿಶ್ವವಿದ್ಯಾಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ಸೋಮವಾರ ಯಕ್ಷಗಾನ ಕ್ಷೇತ್ರದ ದಿಗ್ಗಜರೆನಿಸಿಕೊಂಡ ಹಿರಿಯ ಭಾಗವತರಾದ ಬಲಿಪ ನಾರಾಯಣ ಭಾಗವತ, ತಾಳಮದ್ದಳೆ ಅರ್ಥದಾರಿ, ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ, ಬಡಗುತಿಟ್ಟಿನ ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ ಹಾಗೂ ಯಕ್ಷಗಾನ ಹಿಮ್ಮೇಳ ತಜ್ಞ ಗೋಪಾಲಕೃಷ್ಣ ಕುರುಪ್ ಅವರಿಗೆ ಯಕ್ಷಮಂಗಳ ಪ್ರಶಸ್ತಿ ಮತ್ತು ಡಾ.ವಸಂತ ಭಾರದ್ವಾಜ ಅವರ `ಯಕ್ಷಗಾನ ಕವಿ ಕಾವ್ಯ ವಿಹಾರ’ ಕೃತಿಗೆ ಯಕ್ಷಮಂಗಳ ಕೃತಿ ಪ್ರಶಸ್ತಿಯನ್ನು ಪ್ರಧಾನ ಮಾಡಿ ಮಾತನಾಡಿದರು. ಸರಕಾರಗಳಿಂದ ನಿರೀಕ್ಷಿತ ಅಭಿವೃದ್ಧಿ ಕಲಾ ಕ್ಷೇತ್ರಕ್ಕೆ ಸಿಗುತ್ತಿಲ್ಲ. ಕ್ರೀಡಾ ಕ್ಷೇತ್ರವೂ ಅದೇ ರೀತಿಯಲ್ಲಿ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತೊಕ್ಕೊಟ್ಟು: ಅತ್ಯಾಧುನಿಕ ತಂತ್ರಜ್ಞಾನವಿರುವ ಇಂದಿನ ಕಾಲಘಟ್ಟದಲ್ಲಿ ಮನುಷ್ಯರ ನಡುವೆ ಪ್ರೀತಿ ವಿಶ್ವಾಸ ಕಡಿಮೆಯಾಗುತ್ತಿರುವುದು ದುರಂತ. ಸಾಮಾಜಿಕ ಜಾಲತಾಣಗಳಲ್ಲಿಬರುವ ವಿಚಾರಗಳು ಕ್ಷಣ ಮಾತ್ರದಲ್ಲೇ ವೈರಲ್‍ಗಳಾಗುವ ಮೂಲಕ ಅನೇಕ ಸಮಸ್ಯೆ ಸೃಷ್ಟಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರಸ್ಪರರಲ್ಲಿ ವಿಶ್ವಾಸ ಮೂಡಿಸಬೇಕಾದ ಕೆಲಸ ನಡೆಯಬೇಕಾಗಿರುವುದು ಅಗತ್ಯವಾಗಿದೆ ಎಂದು ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಯು.ಟಿ ಖಾದರ್ ಅಭಿಪ್ರಾಯಪಟ್ಟರು. ಅವರು ಇಂದು ತೊಕ್ಕೊಟ್ಟು ಒಳಪೇಟೆಯಲ್ಲಿರುವ ಅಂಬೇಡ್ಕರ್ ಮೈದಾನದಲ್ಲಿ ಉಳ್ಳಾಲ ಜಮಾಅತೆ ಇಸ್ಲಾಮಿ ಹಿಂದ್ ಮೂರು ದಿನಗಳ ಕಾಲ ಆಯೋಜಿಸಿರುವ ಸಾರ್ವಜನಿಕ ಕುರಾನ್ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಸಾರ್ವಜನಿಕವಾಗಿ ಧರ್ಮಗ್ರಂಥಗಳ ನೈಜ ವಿಚಾರಗಳನ್ನು ತಿಳಿಸಲು ಪ್ರಯತ್ನಿಸಿರುವುದು ನಿಜಕ್ಕೂ ಉತ್ತಮ ಕಾರ್ಯ ಜಮಾಅತೆ ಇಸ್ಲಾಮಿ ಹಿಂದ್ ಈ ನಿಟ್ಟಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮವು ಶ್ಲಾಘನೀಯ ಎಂದರು. “ಮಾನವ ಜೀವನದ ವಾಸ್ತವಿಕತೆ”ಎಂಬ ವಿಷಯದಲ್ಲಿ ಕುರಾನ್ ಪ್ರವಚನ ನೀಡಿದ ತೊಕ್ಕೊಟ್ಟು ಮಸ್ಜಿದುಲ್ ಹುದಾದ ಖತೀಬರಾದ ಮಹಮ್ಮದ್ ಕುಂಞ ಮಾನವರ ಬದುಕಿಗೆ ಕೊನೆ ಇದೆ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ಕುರ್ನಾಡು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಾರ್ಷಿಕ ವಿಷು ಜಾತ್ರಾಮಹೋತ್ಸವ ಸಂದರ್ಭದಲ್ಲಿ ಸಾವಿನ ದವಡೆಯಿಂದ ಪಾರಾಗಿ ಬಂದ ಮುಡಿಪು ನಿವಾಸಿ ವೀರ ಯೋಧ ಸಂತೋಷ್ ಅವರಿಗೆ ಕುರ್ನಾಡು ಫ್ರೆಂಡ್ಸ್ ಸರ್ಕಲ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂತೋಷ್ ಅವರ ತಾಯಿ ವಿಮಲಾ ಹಾಗೂ ಕುರ್ನಾಡು ಫೆಂಡ್ಸ್ ಸರ್ಕಲ್‍ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಮಾಡೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಶಬರಿ ಫ್ರೆಂಡ್ಸ್ ಮಾಡೂರು ಇದರ ಜಂಟಿ ಸಹಯೋಗದೊಂದಿಗೆ ಯೆನೆಪೋಯ ವಿಶ್ವವಿದ್ಯಾನಿಲಯ ಇದರ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಮತ್ತು ದೇರಳಕಟ್ಟೆ ಯೇನೆಪೋಯ ದಂತ ವೈದ್ಯಕೀಯ ಕಾಲೇಜು ಇದರ ಸಮುದಾಯ ದಂತ ವೈದ್ಯಕೀಯ ವಿಭಾಗದ ವೈದ್ಯರ ತಂಡದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮಾಡೂರು ಕೊರಗಜ್ಜನ ಕಟ್ಟೆಯ ಬಳಿಯ ಮಾತೃಶ್ರೀ ಕಾಂಪ್ಲೆಕ್ಸ್‍ನಲ್ಲಿ ಭಾನುವಾರದಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯೆನೆಪೋಯ ಆಸ್ಪತ್ರೆಯ ಹೃದಯ ತಜ್ಞ ಡಾ. ರಾಹುಲ್ ಇತ್ತೀಚಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಮನುಷ್ಯನನ್ನು ಹೆಚ್ಚಾಗಿ ಬಾಧಿಸುತ್ತಿದ್ದು, ಆರೋಗ್ಯದ ಬಗ್ಗೆ ಎಲ್ಲರೂ ಗಮನಹರಿಸಬೇಕು. ಹೃದಯಕ್ಕೆ ಸಂಬಂಧಿಸಿ ಯಾವುದೇ ಸಣ್ಣ ಕಾಯಿಲೆ ಬಂದರೂ ಅದನ್ನು ನಿರ್ಲಕ್ಷಿಸದೇ ತಕ್ಷಣ ವೈದ್ಯರನ್ನು ಕಾಣಬೇಕು. ಈ ನಿಟ್ಟಿನಲ್ಲಿ ಸ್ಥಳಿಯರಿಗೆ ತಮ್ಮ ಆರೋಗ್ಯದ ಬಗ್ಗೆ ಉಚಿತವಾಗಿ ತಪಾಸಣೆ ನಡೆಸಲು ಇಂತಹ ಶಿಬಿರಗಳು ಉಪಯುಕ್ತವಾಗಿದ್ದು ಇಂತಹ ಕಾರ್ಯಕ್ರಮಗಳನ್ನು ನಡೆಸಿದ ಶಬರಿ ಫ್ರೆಂಡ್ಸ್ ಕಾರ್ಯ ಶ್ಲಾಘನೀಯ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಯುವ ಸಮುದಾಯಕ್ಕೆ ಎಸ್‍ಎಸ್‍ಎಫ್ , ಹಿರಿ ವಯಸ್ಸಿನಲ್ಲಿ ಎಸ್ ವೈಎಸ್ ಜತೆಗಿನ ಸಂಬಂಧದಿಂದ ಎಲ್ಲರೂ ಧಾರ್ಮಿಕ ಸ್ಪರ್ಶದಿಂದ ಬಾಳಲು ಸಾಧ್ಯ. ಈ ಮೂಲಕ ಪ್ರವಾದಿಯವರ ಆದರ್ಶಗಳನ್ನು ಪಾಲಿಸುವಂತಾಗಬೇಕಿದೆ ಎಂದು ಎಸ್ ವೈ ಎಸ್ ರಾಜ್ಯ ಮುಖಂಡ ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್ ಹೇಳಿದರು. ಅವರು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್ ವೈಎಸ್ ) ಇದರ ಸೆಂಟರ್ ಸಮ್ಮೇಳನದ ಪ್ರಯುಕ್ತ ಕೆ.ಸಿ.ನಗರದ ಜಂಕ್ಷನ್ನಿನಲ್ಲಿ ಭಾನುವಾರ ಜರಗಿದ ಎಸ್ ವೈ ಎಸ್ ಕೆ.ಸಿ ರೋಡ್ ಸೆಂಟರ್ ಮಹಾಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಪ್ರಭಾಷಣಕಾರ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಅಲ್ ಕಾಮಿಲ್ ಸಖಾಫಿ ಮಾತನಾಡಿ ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಕಾರ್ಯಗಳಲ್ಲಿ ಕೆ.ಸಿ.ರೋಡಿನ ಎಸ್ ವೈ ಎಸ್ ಸೆಂಟರ್ ತೊಡಗಿಸಿಕೊಳ್ಳುವ ಮೂಲಕ ಜನರ ಸಂಕಷ್ಟಗಳಿಗೆ ಸಾಂತ್ವನ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವುದು ಶ್ಲಾಘನೀಯ ಎಂದರು. ಸೆಯ್ಯಿದ್ ಸಿ.ಟಿ.ಎಂ ಸಲೀಂ ಅಸ್ಸಖಾಫ್ ತಂಙಳ್ ದುಆ ನೆರವೇರಿಸಿದರು. ಉಮ್ಮರ್ ಮಾಸ್ಟರ್ ಕಾರ್ಯಕ್ರಮದ ಅಧ್ಯಕ್ಷತೆ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಇರಾ: ಬೈಕ್ ಅಪಘಾತ್ಕೀಡಾಗಿ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇರಾ ಸಮೀಪದ ಮೂಳೂರು ಎಂಬಲ್ಲಿ ಮೊನ್ನೆ ತಡರಾತ್ರಿ ವೇಳೆ ಸಂಭವಿಸಿದ್ದು, ಘಟನೆಯಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೆಲ್ಕಾರ್ ಮೊಗರ್ನಾಡು ನಿವಾಸಿ ವೆಲೇರಿಯನ್ ಡಿಸೋಜ ಎಂಬವರ ಪುತ್ರ ವಿನೋದ್ ವಿಲ್ಸನ್ ಡಿಸೋಜ (23) ಮೃತ ಯುವಕ. ಮೂಳೂರಿನಲ್ಲಿರುವ ಗೆಳೆಯ ರೆಯಾನ್ ಎಂಬಾತನ ಮನೆಗೆ ವಿನೋದ್ ಸೇರಿದಂತೆ ಏಳು ಮಂದಿ ಮೂರು ಬೈಕುಗಳಲ್ಲಿ ಬಂದಿದ್ದರು. ಅಲ್ಲಿಂದ ತಡರಾತ್ರಿ ವೇಳೆ ವಾಪಸ್ಸಾಗುವ ಸಂದರ್ಭ ವಿನೋದ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಮನೆಯೊಂದರ ಆವರಣ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿನೋದ್ ತೀವ್ರ ತರದ ಗಾಯವಾಗಿ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ. ಇನ್ನಿಬ್ಬರು ಸವಾರರಾದ ಪ್ರಕಾಶ್ ಮತ್ತು ಕೀರ್ತಿ ಕಿರಣ್ ಅಲ್ಬುಕರ್ಕ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಸ್ಕತ್ ನಲ್ಲಿ ಉದ್ಯೋಗದಲ್ಲಿದ್ದ ವಿನೋ 15 ದಿನಗಳ ಹಿಂದಷ್ಟೇ ಊರಿಗೆ ಮರಳಿದ್ದ. ಇವರು ತಂದೆ , ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ. ಈ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು : ಜಮ್ಮು ಕಾಶ್ಮೀರ ಸೇರಿದಂತೆ ಭಾರತದ ಗಡಿ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಮ್ಮ ಸೈನಿಕರ ನಡುವಿನ ಹೋರಾಟ ದಿನಂಪ್ರತಿ ನಡೆಯುತ್ತದೆ. ಅದೆಷ್ಟೋ ಸೈನಿಕರು ತಮ್ಮ ತಾಯ್ನಾಡಿಗಾಗಿ ಭಯೋತ್ಪಾದಕರೊಂದಿಗೆ ಕಾದಾಡಿ ಹುತಾತ್ಮರಾದರೆ, ಕೆಲವರು ಗಾಯಗೊಂಡು ಹುಟ್ಟೂರಿಗೆ ಹಿಂತಿರುಗುತ್ತಾರೆ. ಅಂತಹ ಒಬ್ಬ ಯೋಧ ಭಯೋತ್ಪಾದಕರೊಂದಿಗೆ ಹೋರಾಡಿ ನಾಲ್ಕು ಬಾರಿ ಸಾವಿನ ದವಡೆಯಿಂದ ಪಾರಾಗಿದ್ದು, ನಾಲ್ಕನೇಯ ಹೋರಾಟದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಐದೂವರೆ ತಿಂಗಳ ಚಿಕಿತ್ಸೆಯ ಬಳಿಕ ಸಾವಿನಿಂದ ಪಾರಾಗಿ ಇದೀಗ ತನ್ನ ಹುಟ್ಟೂರಿಗೆ ಮರಳಿದ್ದಾರೆ. ಬಂಟ್ವಾಳ ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು ನಿವಾಸಿಯಾಗಿರುವ ಸಂತೋಷ್ ಕುಲಾಲ್ ಅವರೇ ಭಯೋತ್ಪಾದಕರೊಂದಿಗೆ ಹೋರಾಡಿ ಸಾವಿನ ದವಡೆಯಿಂದ ಪಾರಾಗಿ ಬಂದ ಯೋದರಾಗಿದ್ದು, ಅ.12ರಂದು ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ಪಾಂಪೆÇೀರ್‍ನಲ್ಲಿ ಭಯೋತ್ಪಾದಕರೊಡನೆ ಹೋರಾಡಿ ಗುಂಡಿನೇಟಿನಿಂದ ಸಾವು ಬದುಕಿನ ನಡುವಿನ ಹೋರಾಟದಲ್ಲಿ ಸಾವನ್ನು ಜಯಿಸಿ ಬಂದವರಾಗಿದ್ದು, ಐದೂವರೆ ತಿಂಗಳ ಚಿಕಿತ್ಸೆಯ ಬಳಿಕ ಎಪ್ರಿಲ್‍ನಲ್ಲಿ ತನ್ನ ಹುಟ್ಟೂರಾದ ಮುಡಿಪುವಿಗೆ ಆಗಮಿಸಿದ್ದಾರೆ. ಬಂಟ್ವಾಳ ತಾಲೂಕಿನ ರಾಮಣ್ಣ ಸಾಲಿಯಾನ್…
ಉಳ್ಳಾಲ್ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಸಮಾಜದಲ್ಲಿ ಹಿಂದುಳಿದವರ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು, ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಬೃಹತ್ ಸಂಸ್ಥೆಯಾಗಿ ಬೆಳೆಯುವ ಮೂಲಕ ಸೆಂಟ್ರಲ್ ಕಮಿಟಿ ಉಳ್ಳಾಲಕ್ಕೆ ಆಶ್ರಯವಾಗಿರಲಿ ಎಂದು ಸೈಯ್ಯದ್ ಮದನಿ ದರ್ಗಾ ಮತ್ತು ಸಮೂಹ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ರಶೀದ್ ಅಭಿಪ್ರಾಯಪಟ್ಟರು. ಅವರು ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಮತ್ತು ಫಿದಾಗೈಸ್ ಹಾಗೂ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ಆಶ್ರಯದಲ್ಲಿ ಉಳ್ಳಾಲ ಮಾಸ್ತಿಕಟ್ಟೆಯ ಉಳ್ಳಾಲ ಸೆಂಟ್ರಲ್ ಕಮಿಟಿ ಕಚೇರಿಯಲ್ಲಿ ಭಾನುವಾರ ಜರಗಿದ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರಕ್ಕೆ ಗಿಡವೊಂದಕ್ಕೆ ನೀರು ಹಾಯಿಸುವ ಮೂಲಕ ಚಾಲನೆ ನೀಡಿದರು. ದುಶ್ಚಟಗಳು, ಮಧ್ಯವ್ಯಸನಿಗಳಿಂದ ಶಾಂತಿ, ಸೌಹಾರ್ದಯುತ ಉಳ್ಳಾಲದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತಿದೆ. ಇಂತಹ ಯುವಸಮುದಾಯಕ್ಕೆ ಉತ್ತಮ ಮಾರ್ಗದರ್ಶನದ ಅಗತ್ಯತೆ ಇದ್ದು, ಈ ನಿಟ್ಟಿನಲ್ಲಿ ಸೆಂಟ್ರಲ್ ಕಮಿಟಿ ಉತ್ತಮವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಕ್ಕೆ ಮಾದರಿಯಾಗಿದೆ. ಸಂಸ್ಥೆ, ಸಂಘಟನೆಗಳು ಹುಟ್ಟಿ ಸಾಯುತ್ತಲೇ ಇದೆ. ಈ ನಡುವೆ ಐದು ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ಉಳ್ಳಾಲ ಸೆಂಟ್ರಲ್ ಕಮಿಟಿ ತೊಡಗಿಸಿಕೊಂಡು ಯಶಸ್ವಿಯಾಗಿದೆ ಎಂದರು.…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ನರಿಂಗಾನ: ಮೋರ್ಲ ರೇವತಿ.ಎಸ್ ಆಳ್ವ ಮತ್ತು ಮಕ್ಕಳು , ಲಕ್ಷ್ಮೀ.ಎನ್ ಆಳ್ವ ಮತ್ತು ಮಕ್ಕಳು ಹಾಗೂ ಪ್ರಭಾಕರ್ ಶೆಟ್ಟಿ ಸಹೋದರರು ಸೇವಾರೂಪದಲ್ಲಿ ಇತ್ತೀಚೆಗೆ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟವನ್ನು ಆಯೋಜಿಸಿದ್ದರು. ಭಾಗವತರುಗಳಾದ ಗೋಪಾಲಕೃಷ್ಣ ಮಯ್ಯ, ಹಿರಿಯ ಕಲಾವಿದ ಕೃಷ್ಣ ಮೂಲ್ಯ, ಶ್ರೀಕುಮಾರ್ ಪಡ್ರೆ ಹಾಗೂ ಸ್ಥಳೀಯ ಹಿರಿಯರಾದ ವೆಂಕಪ್ಪ ಶೆಟ್ಟಿ ಮೋರ್ಲ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಬಿಜೆಪಿ ರಾಜ್ಯಕಾರ್ಯಕಾರಿಣಿ ಸಮಿತಿ ಸದಸ್ಯ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಹಾಸ್ ಉಳ್ಳಾಲ್, ರವೀಂದ್ರ ಶೆಟ್ಟಿ ದೊಡ್ಡಮನೆ ಮುಖ್ಯ ಅತಿಥಿಗಳಾಗಿ ದ್ದರು. ರೊಟರ್ಯಾಕ್ಟ್ ವಿಕ್ರಂ ದತ್ತ , ಡಾ. ಮೋಹನ್‍ದಾಸ್ ಪೈ, ವಿಶ್ವನಾಥ ಶೆಟ್ಟಿ ಮೋರ್ಲ, ಚಂದ್ರಹಾಸ್ ಶೆಟ್ಟಿ ಮೋರ್ಲ, ಶಿವರಾಂ ಶೆಟ್ಟಿ ಸಾಂತ್ಯಗುತ್ತು, ಪ್ರಭಾಕರ್ ಶೆಟ್ಟಿ ಕಿನ್ಯಗುತ್ತು, ರೇವತಿ.ಎಸ್ ಆಳ್ವ, ಲಕ್ಷ್ಮೀ.ಎನ್ ಆಳ್ವ, ಗೀತೇಶ್ ಆಳ್ವ, ಗಿರೀಶ್ ಆಳ್ವ, ಸುಧಾಕರ್ ಆಳ್ವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾಧರ್ ಶೆಟ್ಟಿ ಪೊಸಕುರಲ್ ಕಾರ್ಯಕ್ರಮ ನಿರೂಪಿಸಿದರು.…

