Author: UllalaVani

Kannada News From Coastal Karnataka

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಬೋರ್‍ವೆಲ್ ಕೆಲಸ ನಿರ್ವಹಿಸುವ ಸಂದರ್ಭ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ಸರಕಾರ ಪರಿಹಾರ ಒದಗಿಸಬೇಕಿದ್ದು, ಜಿಲ್ಲಾಡಳಿತವೂ ಹೆಚ್ಚಿನ ಮುತುವರ್ಜಿ ವಹಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಿದೆ ಎಂದು ತುಳುನಾಡು ರಕ್ಷಣಾ ವೇದಿಕೆಯ ಕೇಂದ್ರೀಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಆಗ್ರಹಿಸಿದ್ದಾರೆ. ಗುರುವಾರ ತಡರಾತ್ರಿ ಕೋಟೆಕಾರು ಬೀರಿ ಸಮೀಪ ಬೋರ್‍ವೆಲ್ ನ ಮೋಟರಿನ ದುರಸ್ತಿ ಕಾರ್ಯದಲ್ಲಿದ್ದ ಸಂದರ್ಭ ಕೊಣಾಜೆ ಅಡ್ಕರೆಪಡ್ಪು ನಿವಾಸಿ ಉಸ್ಮಾನ್ ಎಂಬವರು ವಿದ್ಯುತ್ ಶಾಕ್ ತಗಲಿ ಮೃತಪಟ್ಟಿದ್ದರು. ಘಟನೆಯನ್ನು ತೀವ್ರವಾಗಿ ಖಂಡಿಸಿರುವ ತುಳುನಾಡು ರಕ್ಷಣಾ ವೇದಿಕೆ, ಕಾಮಗಾರಿ ವೇಳೆ ನಿರ್ಲಕ್ಷ್ಯ ವಹಿಸಿರುವ ಗುತ್ತಿಗೆದಾರನ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಿದೆ. ಕೋಟೆಕಾರು ಪಟ್ಟಣ ಪಂಚಾಯಿತಿಯ ಕಾಮಗಾರಿ ನಡೆಸುತ್ತಿದ್ದುದರಿಂದ , ಸಂಬಂಧಿಸಿದ ಪಂಚಾಯಿತಿ ಕೂಡಾ ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕಿದೆ ಯಾವುದೇ ಕಾಮಗಾರಿ ವೇಳೆ ಕಾರ್ಮಿಕನ ಸುರಕ್ಷತೆ ಅತ್ಯಾವಶ್ಯಕ . ಆದರೆ ಪ್ರಸ್ತುತ ಘಟನೆಯಲ್ಲಿ ಅದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಈ ಕೂಡಲೇ…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಕಂದಕ ನಿವಾಸಿ ಅರಾಫತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ ತಲಪಾಡಿ ಟೋಲ್ ಗೇಟ್ ಸಿಬ್ಬಂದಿಯನ್ನು ಕೂಡಲೇ ಪೊಲೀಸರು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅಸೈಗೋಳಿ ತಿಳಿಸಿದ್ದಾರೆ. ಶುಕ್ರವಾರ ಉಳ್ಳಾಲದ ಸರೋಜ್ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ಚಿಕಿತ್ಸೆ ಪಡೆಯುತ್ತಿರುವ ಅರಾಫತ್ ಜತೆಗೆ ಮಾತುಕತೆ ನಡೆಸಿ ಘಟನೆಯನ್ನು ಖಂಡಿಸಿದರು. ಗೂಂಡಾಗಳಂತೆ ವರ್ತಿಸುತ್ತಿರುವ ಟೋಲ್‍ಗೇಟ್ ಸಿಬ್ಬಂದಿಯನ್ನು ಶೀಘ್ರವೇ ಪೊಲೀಸರು ಬಂಧಿಸಬೇಕಿದೆ. ಗೂಂಡಾ ಹಿನ್ನಲೆಯುಳ್ಳ ಸಿಬ್ಬಂದಿಯನ್ನು ಕಂಪೆನಿ ಶೀಘ್ರವೇ ಕೆಲಸದಿಂದ ವಜಾ ಮಾಡಬೇಕು. ಇಲ್ಲದಿದ್ದರೆ ಜಾತಿ, ಮತ, ರಾಜಕೀಯ ಮರೆತು ಉಗ್ರ ಹೋರಾಟ ಮಾಡುವುದು ಅನಿವಾರ್ಯವಾದೀತು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಉಳ್ಳಾಲ ನಗರಸಭೆ ಅದ್ಯಕ್ಷ ಹುಸೈನ್ ಕುಂಞ ಮೋನು, ಕಾಂಗ್ರೆಸ್ ವಕ್ತಾರ ಫಾರೂಕ್ ಉಳ್ಳಾಲ್, ಮಂಗಳೂರು ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಯು.ಬಿ.ಸಲೀಮ್, ತಲಪಾಡಿ ಹಿತರಕ್ಷಣಾ ಸಮಿತಿ ಉಪಾಧ್ಯಕ್ಷ ಖಾದರ್ ತಲಪಾಡಿ, ಅಬ್ಬಾಸ್…

Read More

ಉಳ್ಳಾಲ ನ್ಯೂಸ್ ನೆಟ್ ವರ್ಕ್ ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2016ನೆ ಸಾಲಿನ ಪ. ಗೋ. ಪ್ರಶಸ್ತಿ ಪ್ರದಾನ ಸಮಾರಂಭ ಇಂದು ಪೂರ್ವಾಹ್ನ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ಗ್ರಾಮೀಣ ವರದಿಗಾರಿಕೆಗಾಗಿ `ಕನ್ನಡ ಪ್ರಭ’ ಪತ್ರಿಕೆಯ ವರದಿಗಾರ ಸಂದೀಪ್ ವಾಗ್ಲೆಯವರಿಗೆ ಪ್ರಶಸ್ತಿಯನ್ನು ಅತಿಥಿಗಳು ಇಂದು ಪ್ರದಾನ ಮಾಡಿದರು. ಇದೇ ವೇಳೆ ವಾಗ್ಲೆಯವರು ತನಗೆ ದೊರೆತ ಪ್ರಶಸ್ತಿಯ ಮೊತ್ತವನ್ನು ಮಂಜನಾಡಿ ಸಮೀಪದ ಮೊಂಟೆಪದವಿನ ಬಡ ಕೊರಗ ಕುಟುಂಬದ ರೂಪಾ ಎಂಬ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕಾಗಿ ನೀಡಿ ಮಾದರಿಯಾದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಹರಿಕೃಷ್ಣ ಬಂಟ್ವಾಳ್, ದ.ಕ. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಮತ್ತಿತರರು ಉಪಸ್ಥಿತರಿದ್ದರು.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಪೆರ್ಮನ್ನೂರು: ಸಂತ ಸೆಬೆಸ್ಟಿಯನ್ ಧರ್ಮಕೇಂದ್ರ ಪೆರ್ಮನ್ನೂರಿನಲ್ಲಿ ಪವಿತ್ರ ಗುರುವಾರವನ್ನು ಎಪ್ರಿಲ್ 13 ರಂದು ಆಚರಿಸಲಾಯಿತು.ಪ್ರಭುಯೇಸುವಿನ ಕಷ್ಟ,ಮರಣ ಶಿಲುಬೆ ಹಾಊ ಪುನರುಸ್ಥಾನವನ್ನು ಧ್ಯಾನಿಸುವ ವಾರವೇ ಪವಿತ್ರವಾರ. ಈ ವಾರದಲ್ಲಿರುವ ಪ್ರಮುಖ ದಿನಗಳಲ್ಲಿ ಮೊದಲನೆಯ ಆಚರಣೆಯೇ ಪವಿತ್ರ ಗುರುವಾರ ಪೆರ್ಮನ್ನೂರು ಕೇಂದ್ರದ ಧರ್ಮಗುರುಗಳಾದ ಅತಿ ನಂದನೀಯ ಫಾದರ್ ಜೆ.ಬಿ ಸಲ್ಡಾನ್ಹಾರವರು ದಿವ್ಯ ಬಲಿಪೂಜೆಯನ್ನು ಅರ್ಪಿಸಿದರು . ಸಹಾಯಕ ಧರ್ಮಗುರುಗಳಾದ ನಂದನೀಯ ಫಾದರ್ ಪ್ರವೀಣ್ ಜೋಯ್ ಸಲ್ಡಾನ್ಹಾರವರು ಪ್ರಭು ಕ್ರಿಸ್ತರ ಆದರ್ಶದಂತೆ ನಾವು ನಮ್ಮ ಸಹೋದರ ಸಹೋದರಿಯರ ಸೆಲೆಯನ್ನು ಮಾಡಬೇಕು ಎಂಬ ಪ್ರಭೋದನೆಯನ್ನು ನೀಡಿದರು ಸೇನೆಯ ಹಾಗೂ ದೀನತೆಯ ಸಂಕೇತವಾಗಿ ಯೇಸುವಿನ ಆದರ್ಶದಂತೆ ವಂ|ಫಾ|ಜೆ.ಬಿ.ಸಲ್ಡಾನ್ಹಾರವರು 12 ಮಂದಿಯ ಪಾದಗಳನ್ನು ತೊಳೆದರು.ವಂ|ಫಾ|ನಿಲೇಶ್ ಕ್ರಾಸ್ತಾ,ವಂ|ಫಾ| ಎಡ್ವಿನ್ ಮಸ್ಕರೇನ್ಹಸ್,ಉಪಯೋಜಕ ರವಿ ರಿಚ್ಚರ್ಡ್ ಫೆರ್ನಾಂಡಿಸ್,ಧರ್ಮಭಗಿನಿಯರು ಹಾಗೂ 2000 ಮಂದಿ ಈ ಪವಿತ್ರ ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡರು. ಈ ದಿನದ ವಿಶೇಷತೆ ಎಂದರೆ ಪ್ರಭು ಕ್ರಿಸ್ತರು ಶಿಲುಬೆಯಲ್ಲಿ ಸಾಯಲು ಹೋಗುವ ಹಿಂದಿನ ದಿನ ತಮ್ಮ 12 ಶಿಷ್ಯರ ಜೊತೆ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಪೆರ್ಮನ್ನೂರು: ತೊಕ್ಕೊಟ್ಟು ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಚರ್ಚ್‍ನಲ್ಲಿ ಶುಭ ಶುಕ್ರವಾರ ಶೃದ್ಧೆ ಭಕ್ತಿಯಿಂದ ನಡೆಯಿತು. ರೇ. ಫಾ| ಅಜಿತ್ ಮಿನೇಜಸ್ ಮತ್ತು ರೆ| ಫಾ| ಜೆ.ಬಿ. ಸಲ್ದಾನ ಉಪಸ್ಥಿತರಿದ್ದರು. ಫೋಟೋ ಸ್ಟಾರ್ ಸ್ಟುಡಿಯೋ ಉಳ್ಳಾಲ

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಕರ್ನಾಟಕ ರಾಜ್ಯ ಎಸ್‍ವೈಎಸ್ ಇದರ ಸೆಂಟರ್ ಸಮ್ಮೇಳನದ ಪ್ರಯುಕ್ತ ಎಸ್‍ವೈಎಸ್ ಕೆ.ಸಿ ರೋಡ್ ಸೆಂಟರ್ ಮಹಾ ಸಮ್ಮೇಳನ ಎ.16ರಂದು ಸಂಜೆ 5ಗಂಟೆಗೆ ಕೆ.ಸಿ ನಗರ ಜಂಕ್ಷನ್‍ನಲ್ಲಿ ನಡೆಯಲಿದೆ. ಸಯ್ಯದ್ ಸಿ.ಟಿ.ಎಂ ಸಲೀಂ ಅಸ್ಸಖಾಫ್ ತಂಙಳ್ ದುಅ ನೇತೃತ್ವವಹಿಸಲಿದ್ದು, ಸೆಂಟರ್ ಅಧ್ಯಕ್ಷ ಎನ್.ಎಸ್ ಉಮರ್ ಮಾಸ್ಟರ್ ಅಧ್ಯಕ್ಷತೆಯಲ್ಲಿ ಕೆ.ಪಿ ಹುಸೈನ್ ಸಅದಿ ಕೆ.ಸಿ ರೋಡ್ ಉದ್ಘಾಟಿಸಲ್ಲಿದ್ದಾರೆ. ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಅಲ್-ಕಾಮಿಲ್ ಮತ್ತು ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ಉಪಚುನಾವಣೆಯಲ್ಲಿ ಬಿಜೆಪಿಯು ಇಲ್ಲಸಲ್ಲದ ಅಪಪ್ರಚಾರ ಮಾಡಿದರೂ ಸಿದ್ದರಾಮಯ್ಯರವರ ಅಭಿವೃದ್ದಿ ಪರ ಆಡಳಿತದ ಫಲವಾಗಿ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿದ್ದು ಇದು ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಚಂದ್ರಹಾಸ್ ಕರ್ಕೇರ ಅವರು ಹೇಳಿದರು. ಅವರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿಯಾದ ಹಿನ್ನೆಲೆಯಲ್ಲಿ ಮುಡಿಪುವಿನಲ್ಲಿ ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷಕ್ಕೇ ಯಾವುತ್ತೂ ಕಾರ್ಯಕರ್ತರೇ ಶಕ್ತಿಯಾಗಿದ್ದಾರೆ. ಶ್ರೀನಿವಾಸ್ ಪ್ರಸಾದ್ ಅವರು ಅಧಿಕಾರದ ದಾಹದಿಂದ ಬಿಜೆಪಿಗೆ ಸೇರ್ಪಡೆಗೊಂಡರೂ ಅಲ್ಲಿಯ ಕಾರ್ಯಕರ್ತರು ಕಾಂಗ್ರೆಸ್‍ನ ಕೈಯನ್ನು ಬಿಡದೆ ಮತ್ತಷ್ಟು ಶಕ್ತಿ ತುಂಬಿದ್ದಾರೆ ಎಂದು ಹೇಳಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಗಟ್ಟಿ ಮಾತನಾಡಿ, ರಾಜ್ಯ ಮುಖ್ಯಮಂತ್ರಿಯವರ ಅನ್ನಭಾಗ್ಯ, ಕ್ಷೀರ ಭಾಗ್ಯ ಮುಂತಾದ ಜನಪರವಾದ ಆಡಳಿತಕ್ಕೆ ಜನರು ಇಂದು ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಬೆಂಬಲಿಸಿದ್ದಾರೆ. ಮುಂದೆ ನಡೆಯುವ ರಾಜ್ಯದ ಚುನಾವಣೆಯಲ್ಲೂ ರಾಜ್ಯದೆಲ್ಲೆಡೆ ಇದೇ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಹಲವು ದೇಶಗಳನ್ನು ಸುತ್ತಿ ದೇಶಕ್ಕೆ ಸಂವಿಧಾನವನ್ನು ರಚಿಸಿದ ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರನ್ನು ನೆನಪಿಸುವ ಕಾರ್ಯ ಮಹತ್ತರವಾದುದು, ಈ ಮೂಲಕ ಎಲ್ಲರೂ ಒಂದೇ ಅನ್ನುವ ಭಾವನೆ ಮೂಡಬೇಕಿದೆ ಎಂದು ಮಾಜಿ ಶಾಸಕ ಜಯರಾಮ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಯಿಂದ ತೊಕ್ಕೊಟ್ಟು ಕಾಪಿಕಾಡಿನ ಗಾಂಧಿನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ಶತಾಬ್ದಿ ವರ್ಷಾಚರಣೆ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರಿಗೆ ಸೀರೆ ಮತ್ತು ಮಕ್ಕಳಿಗೆ ಪುಸ್ತಕ ವಿತರಿಸಿ ಮಾತನಾಡಿದರು. ದೇಶದಲ್ಲಿ ಇಸ್ಲಾಂ ಧರ್ಮ ವ್ಯಾಪಿಸಿದ ನಂತರ ಹಿಂದು ಧರ್ಮದ ತತ್ವ, ಸಿದ್ಧಾಂತಗಳು ಹುಟ್ಟಿಕೊಂಡಿತ್ತು. ಆದರೆ ಅದರಲ್ಲಿ ನಿರ್ದಿಷ್ಟ ಸಮುದಾಯದವರು ಸಮಾಜದ ಮುಖ್ಯವಾಹಿನಿಯಲ್ಲಿ ಬಹಳ ಹಿಂದೆ ಬಿದ್ದಿದ್ದರು. ಆದರೆ ಸದ್ಯ ಶಿಕ್ಷಣ ಪಡೆದು ಶಿಕ್ಷಿತರಾದಂತೆ ಹಿಂದುಳಿದವರೆನ್ನುವ ಬೇಧವವನ್ನು ಇಟ್ಟುಕೊಳ್ಳದೆ ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಅಧ್ಯಕ್ಷ…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ವೃದ್ಧರೋರ್ವರ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸುವುದನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ , ಅದೇ ಸಿಬ್ಬಂದಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗುರುವಾರ ತಲಪಾಡಿ ಟೋಲ್ ಗೇಟಿನಲ್ಲಿ ನಡೆದಿದೆ. ಕಂದಕ ನಿವಾಸಿ ಹಾಜಿ ರೆಸಿಡೆನ್ಸಿಯ ಮಹಮ್ಮದ್ ಸಾಲಿ ಎಂಬವರ ಪುತ್ರ ಅಬ್ದುಲ್ ಹಮೀದ್ ಸರಾಫತ್ (25) ಹಲ್ಲೆಗೊಳಗಾದವರು. ಕೆಲಸದ ನಿಮಿತ್ತ ಮಂಗಳೂರಿನಿಂದ ಕಾಸರಗೋಡಿಗೆ ಕಾರಿನಲ್ಲಿ ತೆರಳುವ ಸಂದರ್ಭ ಘಟನೆ ನಡೆದಿದೆ. ಮಧ್ಯಾಹ್ನ 2.30 ರ ವೇಳೆ ತಲಪಾಡಿ ಟೋಲ್ ಗೇಟ್ ತಲುಪುತ್ತಿದ್ದಂತೆ ಅಲ್ಲಿ ವಾಹನ ಚಾಲಕ ವೃದ್ಧರೋರ್ವರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು. ಇದನ್ನು ಪ್ರಶ್ನಿಸಿ ಅವರದ್ದು ತಪ್ಪಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ, ಕಾನೂನು ಕೈಗೆತ್ತಿಕೊಂಡು ಹಲ್ಲೆ ನಡೆಸುವುದು ಸರಿಯಲ್ಲ ಎಂದು ತಿಳಿಸಿದ್ದರು. ಇದೇ ವೇಳೆ ಟೋಲ್‍ಗೇಟಿನ ಸುಮಾರು 20 ರಷ್ಟು ಸಿಬ್ಬಂದಿ ಸುತ್ತುವರಿದು ಕೆನ್ನೆಗೆ, ಬೆನ್ನಿಗೆ, ಎದೆಗೆ ಹೊಡೆದು ಕಾಲಿನಿಂದ ತುಳಿದು ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕಾಗಮಿಸಿದ ಅಪರಿಚಿತರೊಬ್ಬರು…

Read More

ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಬೀರಿ: ಬೋರ್‍ವೆಲ್ ಪೈಪ್ ಹಿಂತೆಗೆಯುವ ಕಾಮಗಾರಿ ವೇಳೆ ಹೈಟೆನ್ಶನ್ ತಂತಿ ತಗಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಟೆಕಾರು ಬೀರಿ ಎಂಬಲ್ಲಿ ಗುರುವಾರ ತಡರಾತ್ರಿ ವೇಳೆ ಸಂಭವಿಸಿದ್ದು, ಘಟನೆಯಲ್ಲಿ ಇನ್ನೋರ್ವ ಯುವಕ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಕೊಣಾಜೆ ಅಡ್ಕರೆಪಡ್ಪು ನಿವಾಸಿ ಹಸೈನಾರ್ ಎಂಬವರ ಪುತ್ರ ಉಸ್ಮಾನ್ (20) ಮೃತ ಯುವಕ. ಕೊಣಾಜೆ ತಿಬ್ಲೆಪದವಿನ ಶರೀಫ್ (25) ಗಾಯಗೊಂಡವರು. ಖಲೀಲ್ ಎಂಬವರು ಗುತ್ತಿಗೆ ಪಡೆದುಕೊಂಡಿದ್ದ ಕೋಟೆಕಾರು ಬೀರಿ ಸಮೀಪ ಬೋರ್ ವೆಲ್ ಪೈಪ್ ಹಿಂತೆಗೆಯುವ ಕಾಮಗಾರಿಯಲ್ಲಿ 6 ಮಂದಿ ಕಾರ್ಮಿಕರು ನಿರತರಾಗಿದ್ದರು. ಸುಮಾರು ನಾಲ್ಕು ಪೈಪುಗಳನ್ನು ಮೇಲಕ್ಕೆತ್ತಿದ್ದ ಉಸ್ಮಾನ್ ಮತ್ತಯ ಶರೀಫ್, ಐದನೇ ಪೈಪನ್ನು ಮೇಲಕ್ಕೆತ್ತುವ ಸಂದರ್ಭ ಪೈಪ್ ಮೇಲಿದ್ದ ಹೈಟೆನ್ಶನ್ ತಂತಿಗೆ ತಗಲಿದೆ. ಪರಿಣಾಮ ಶರೀಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಶರೀಫ್ ಎಂಬವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಪಡೆದು ಅವರು ಅಲ್ಲಿಂದ ತೆರಳಿದ್ದಾರೆ. ಮೃತ ಉಸ್ಮಾನ್ ಹೆತ್ತವರಿಗೆ ಓರ್ವನೇ ಪುತ್ರನಾಗಿದ್ದ. 9 ನೇ ತರಗತಿ ಮುಗಿಸಿದ…

Read More