ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕಟೀಲು: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ 10ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಕಾವ್ಯ ಎಂಬ ಬಾಲಕಿಯ ಅನುಮಾನಾಸ್ಪದ ಸಾವಿಗೆ ನ್ಯಾಯ ಒದಗಿಸಿ ಕೊಡುವಂತೆ ಮಡ್ಯಾರ್ ಫ್ರೆಂಡ್ಸ್ ಮಡ್ಯಾರ್ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಇಂದು ನಡೆಯಿತು. ಬಾಲಕಿಯ ಸಾವಿಗೆ ಕಾರಣಕರ್ತರಾದವರನ್ನ ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.ಒಂದು ವೇಳೆ ಈ ತನಿಖೆಯಲ್ಲಿ ಸೂಕ್ತ ನ್ಯಾಯ ದೊರಕದಿದ್ದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರೇ ಆ ಪಾಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ದೇವರಲ್ಲಿ ಸಾಮೂಹಿಕವಾಗಿ ಪ್ರಾರ್ಥಿಸಲಾಯಿತು.ಒಂದು ವೇಳೆ ಪ್ರಕರಣವನ್ನ ಮುಚ್ಚಿಹಾಕಲು ಪ್ರಯತ್ನಿಸಿದರೆ ನಾವು ಯಾವುದೇ ತರಹದ ಪ್ರತಿಭಟನೆಗೆ ಸಿದ್ದ ಹಾಗೂ ಈ ವಿಷಯದಲ್ಲಿ ಯಾವುದೇ ಸಂಘಟನೆ ಪ್ರತಿಭಟನೆ ಹಮ್ಮಿಕೊಂಡರೆ ನಮ್ಮ ಬೆಂಬಲ ಯಾವಾಗಲೂ ಅವರಿಗೆ ಇದೆ ಎಂದು ತಿಳಿಸಿದರು. ಸಂಪತ್ ಮಡ್ಯಾರ್ ಪ್ರ.ಕಾರ್ಯದರ್ಶಿ ಯುವ ಕಾಂಗ್ರೆಸ್ ಮಂಗಳೂರು ವಿಧಾನ ಸಭಾ. ಚಂದ್ರಹಾಸ್ ರೈ ಪಿಲಾರ್ ಕಾರ್ಯದ್ಯಕ್ಷರು ಕ.ರ.ವೇ ದ.ಕ ಜಿಲ್ಲೆ…
Author: UllalaVani
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ : ಸಮಾಜದ ಎಲ್ಲಾ ಕ್ಷೇತ್ರದಲ್ಲೂ ಬ್ರಾಹ್ಮಣ ಸಮಾಜ ಪ್ರಥಮ ಸ್ಥಾನದಲ್ಲಿದ್ದು, ನಮ್ಮಲ್ಲಿ ಒಗ್ಗಟ್ಟಿನ ಕೊರತೆಯಿಂದ ನಾವು ಕೆಲವೊಂದು ಸ್ಥಾನಮಾನವನ್ನು ಪಡೆದುಕೊಳ್ಳುವಲ್ಲಿ ವಿಫಲರಾಗುತ್ತಿದ್ದು, ಈ ನಿಟ್ಟನಲ್ಲಿ ಬ್ರಾಹ್ಮಣ ಸಮಾಜದವರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿದರೆ ಸಮಾಜದ ಅಭಿವೃದ್ಧಿ ಸಾದ್ಯ ಎಂದು ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ವೆಂಕಟರಮಣ ಅಸ್ರಣ್ಣ ಅಭಿಪ್ರಾಯಪಟ್ಟರು. ಅವರು ಕೊಲ್ಯ ಶ್ರೀ ನಾಗಬ್ರಹ್ಮಸ್ಥಾನದ ಸೌಭಾಗ್ಯ ಸಭಾ ಭವನದಲ್ಲಿ ಹದಿನಾಲ್ಕು ಗ್ರಾಮಗಳ ಬ್ರಾಹ್ಮಣ ಸಮುದಾಯದ ಒಕ್ಕೂಟವಾದ ಬ್ರಾಹ್ಮಣ ಪರಿಷತ್ ಕೋಟೆಕಾರು ಭಾನುವಾರ ಏರ್ಪಡಿಸಿದ್ದ ಸ್ನೇಹ ಸಮ್ಮಿಲನ ಹಾಗೂ ವಾರ್ಷಿಕ ಮಹಾಸಭೆಯಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಂಘಟನೆಗೆ ಅದರದ್ದೇ ಆದ ಶಕ್ತಿ ಇದೆ. ನಾವು ಹಿರಿಯರ ಮಾರ್ಗದರ್ಶನದಲ್ಲಿ ಸಮಾಜದಲ್ಲಿ ಬಲಯುತರಾಗುವ ಅವಶ್ಯಕತೆಯಿದೆ. ನಮ್ಮ ಪೂರ್ವಿಕರು ಕಲಿಸಿದ ವಿದ್ಯೆಯನ್ನು ಇಂದಿನ ಪೀಳಿಗೆ ಮರೆಯುತ್ತಿರುವುದು ಖೇದನೀಯ. ವೇದಾಭ್ಯಾಸ, ದೇವರ ಬಗ್ಗೆ ಜ್ಞಾನ ಹೆಚ್ಚಿಸುವ ಕಾರ್ಯ ಆಗಬೇಕಾಗಿದ್ದು ಹಿರಿಯರನ್ನು, ತಂದೆ ತಾಯಿಯನ್ನು ಗೌರವಿಸುವುದರೊಮದಿಗೆ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕಾಸರಗೋಡು : ತಿರುವನಂತಪುರಲ್ಲಿ ಆರ್ ಎಸ್ ಎಸ್ ಕಾರ್ಯಕರ್ತ ರಾಜೇಶ್ (34) ನ ಕೊಲೆಯನ್ನು ಪ್ರತಿಭಟಿಸಿ ಬಿಜೆಪಿ ಕರೆ ನೀಡಿದ ಹರತಾಳ ಕಾಸರಗೋಡು ಜಿಲ್ಲೆಯಲ್ಲಿ ಭಾಗಶ: ವಾಗಿತ್ತು. ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಆದರೆ ಖಾಸಗಿ ವಾಹನಗಳು ಎಂದಿನಂತೆ ಸಂಚರಿಸಿದವು. ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಆದಿತ್ಯವಾರವಾದುದರಿಂದ ಸಾಮಾನ್ಯವಾಗಿ ಅಂಗಡಿ ಮುಂಗಟ್ಟುಗಳಿಗೆ ರಜೆಯಾದುದರಿಂದ ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗಲಿಲ್ಲ. ಬೀದಿ ವ್ಯಾಪಾರ ಎಂದಿನಂತೆ ಕಂಡು ಬರುತ್ತಿತ್ತು . ನಗರದಲ್ಲಿ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ನಗರ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ಬಲವಂತವಾಗಿ ತಡೆದರು. ಅಗತ್ಯ ಸೇವೆಗಳಿಗೆ ಸಂಚಾರಕ್ಕೆ ವಿನಾಯಿತಿ ಎಂದು ಪ್ರಕಟಿಸಿದ್ದರೂ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಿಲ್ಲ . ತೆರೆದ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದರು. ಪೊಲೀಸರ ಸಮಯಪ್ರಜ್ಞೆ ಮತ್ತು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡುದರಿಂದ ಕೆಲ ಸಮಯದ ಬಳಿಕ ವಾಹನ ಸಂಚಾರ ಕ್ಕೆ ಅನುವು ಮಾಡಿಕೊಡಲಾಯಿತು . ದಿಡೀರ್ ಹರತಾಳದಿಂದ ಸಂಕಷ್ಟಕ್ಕೆ ಸಿಲುಕಿದ ಜನಸಾಮಾನ್ಯರು ದಿಡೀರ್…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಗ್ರಾಮೀಣ ಪ್ರದೇಶದಲ್ಲಿ ಕೃಷಿ ಸಂಸ್ಕೃತಿ ಅವನತಿಯತ್ತ ಸಾಗುತ್ತಿರುವ ಈ ಕಾಲಘಟ್ಟದಲ್ಲಿ ಶಿಕ್ಷಣ ಸಂಸ್ಥೆಗಳು ಕೃಷಿ ಕಾರ್ಯಕ್ಕೆ ಆನೆಬಲ ನೀಡುವ ಕಾರ್ಯ ಪ್ರಾರಂಭಗೊಂಡಿದೆ. ಹಿಂದೆ ಕೆಸರುಗದ್ದೆಯಲ್ಲಿ ಪಾಲ್ಗೊಳ್ಳುತ್ತಿದ್ದ ವಿದ್ಯಾರ್ಥಿಗಳು ಇಂದು ಕೈಯಲ್ಲಿ ನೇಜಿ ಹಿಡಿದು ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸೋಮೇಶ್ವರದ ಗ್ರಾಮದ ಪಿಲಾರ್ ಪ್ರದೇಶದ ಕೃಷಿಕರಿಗೆ ಇದೀಗ ಕುಂಪಲದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ. ಕುಂಪಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ಕಳೆದ ಎರಡು ವಾರಗಳಿಂದ ಗದ್ದೆಗಿಳಿದಿದ್ದಾರೆ. ಕೈಯಲ್ಲಿ ನೇಜಿ ಹಿಡಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಡಿಲು ಬಿದ್ದ ಗದ್ದೆಯೆಡೆಗೆ ಪ್ರತೀ ಶನಿವಾರ ತೆರಳಿ ಕೃಷಿ ಪಾಠ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ಥಳೀಯ ಹಿರಿಯ ಕೃಷಿಕರ ಮಾರ್ಗದರ್ಶನ ಶಾಲಾ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ್ ಮತ್ತು ಕೇಸರಿ ಮಿತ್ರವೃಂದದ ಸ್ಥಾಪಕಾಧ್ಯಕ್ಷ ನಾರಾಯಣ ಬಿ. ಕುಂಪಲ ನೇತೃತ್ವದಲ್ಲಿ ಕಳೆದ ಶನಿವಾರ ದೇವೇಶ್ ಸರಳಾಯ ಅವರ ಗದ್ದೆಯ ನಾಟಿ ಕಾರ್ಯ ಮುಗಿಸಿದರೆ. ಶನಿವಾರ ಪಿಲಾರ್‍ನ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲಿ ಪರಿಸರ ಸಂರಕ್ಷಿಸುವ ಕಾರ್ಯ ಆಗಬೇಕಾಗಿದ್ದು ಈ ನಿಟ್ಟಿನಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯ ಪರಿಸರ ಸಂರಕ್ಷಣೆ ಸೇರಿದಂತೆ ಗಿಡ ನೆಡುವ ಕಾರ್ಯಕ್ಕೆ ಸಂಪೂರ್ಣ ಬೆಂಬಲ ನೀಡಲಿದ್ದು, ನಿಟ್ಟೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಗಿಡ ನೆಡುವ ಕಾರ್ಯಕ್ರಮ ಮತ್ತು ಸಂರಕ್ಷಣೆಯನ್ನು ಕೇವಲ ಸಾಂಕೇತಿಕ ಕಾರ್ಯಕ್ರಮವಾಗಿಸದೆ ದೈನಂದಿನ ಚಟುವಟಿಕೆಯಾಗಿ ಮುಂದುವರೆಸಿಕೊಂಡು ಹೋಗಬೇಕು ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಅಭಿಪ್ರಾಯಪಟ್ಟರು. ಅವರು ನಿಟ್ಟೆ ವಿಶ್ವವಿದ್ಯಾನಿಲಯದ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ ಇದರ ಎನ್‍ಎಸ್‍ಎಸ್ ಘಟಕದ ಆಶ್ರಯದಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ಷೇಮ ಹರ್ಬಲ್ ಗಾರ್ಡನ್ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ನಿಟ್ಟೆ ವಿಶ್ವವಿದ್ಯಾನಿಲಯ ಕ್ಯಾಂಪಸ್ ಹಸಿರು ಕ್ಯಾಂಪಸ್ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದು, ಕೇವಲ ನಿಟ್ಟೆ ವಿವಿ ಮಾತ್ರವಲ್ಲದೇ ಪರಿಸರದ ಎಲ್ಲಾ ಕಡೆ ಹಸಿರುಮಯ ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಅವರನ್ನು ಸನ್ಮಾನಿಸಲಾಯಿತು.…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಕಿನ್ಯಾ ಕೇಶವ ಶಿಶುಮಂದಿರ ಇದರ ಮಾತೃಮಂಡಳಿಯ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯು ಆ. 4ರಂದು ಶುಕ್ರವಾರ ತಲಪಾಡಿ ದೇವಿಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವೇದಮೂರ್ತಿ ಟಿ. ಬಾಲಕೃಷ್ಣ ಭಟ್ ಪಂಜಾಳ ಇವರ ನೇತೃತ್ವದಲ್ಲಿ ನಡೆಯಲಿರುವುದು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾರದಾ ಸಮೂಹ ವಿದ್ಯಾಸಂಸ್ಥೆಯ ಸಂಚಾಲಕ ಹಾಗೂ ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಧ್ಯಕ್ಷ ಪ್ರೊ| ಎಂ. ಬಿ. ಪುರಾಣಿಕ್, ಸುನಂದ ಎಂ. ಬಿ. ಪುರಾಣಿಕ್, ಭಾಜಪ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಪ್ರಕೋಷ್ಠ ಸಹ ಸಂಚಾಲಕ ಎ. ಬದ್ರಿನಾಥ್ ಕಾಮತ್ ಕದ್ರಿ ಮಂಗಳೂರು, ಮೀನಾಕ್ಷಿ ಮತ್ತು ಸಂಕಪ್ಪ ಶೇಖ ಮುಳಿಯಗುತ್ತು ಬಡಕಬೈಲು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಲ್ಯ : ಆಟಿ ತಿಂಗಳ ವಿಶೇಷತೆ ಬಗ್ಗೆ ಕೇವಲ ಮಹಿಳಾ ಮಂಡಲಗಳಿಗೆ ಸೀಮಿತವಾಗದೆ ಇಂದಿನ ಯುವ ಪೀಳಿಗೆಗೆ ಹಿಂದಿನ ಕಾಲದ ಕಷ್ಟಕರ ಜೀವನ ಸೇರಿದಂತೆ ನಮ್ಮ ಸಂಸ್ಕ್ರತಿ, ಆಚಾರ ವಿಚಾರಗಳನ್ನು ತಿಳಿ ಹೇಳುವ ಕಾರ್ಯ ಆಗಬೇಕಾಗಿದ್ದು, ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಹೆಚ್ಚು ತೊಡಗಿಸಿಕೊಳ್ಳುವ ಕಾರ್ಯ ಆಗಬೇಕು ಎಂದು ಸೋಮೇಶ್ವರ ಪರಿಜ್ಞಾನ ಪದವಿಪುರ್ವ ಕಾಲೇಜಿನ ಉಪನ್ಯಾಸಕಿ ಅಶ್ವಿನಿ ಯತೀಶ್ ಕುಮಾರ್ ಅಭಿಪ್ರಾಯಪಟ್ಟರು. ಅವರು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಶ್ರೀ ನಾರಾಯಣ ಗುರು ಮಹಿಳಾ ಸಂಘ ಮತ್ತು ಬಿಲ್ಲವ ಸೇವಾ ಸಮಾಜ ಹಾಗೂ ಯುವ ವಾಹಿನಿ ಘಟಕ ಇದರ ಆಶ್ರಯದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಆಟಿ ತಿಂಗಳಲ್ಲಿ ಆನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸುತ್ತಿದ್ದರು. ಈ ಸಂದರ್ಭದಲ್ಲಿ ಬರುವ ರೋಗ ರುಜಿನಗಳನ್ನು ತಡೆಯುವ ನಿಟ್ಟಿನಲ್ಲಿ ವಿವಿಧ ಬಗೆಯ ಪೃಕೃತಿಯಲ್ಲಿ ಸುಗುವ ಆಹಾರ ಪದಾರ್ಥಗಳನ್ನು ಬಳಸುತ್ತಿದ್ದರು,…
ಸೋಮೇಶ್ವರ:ನಾಗರ ಪಂಚಮಿ ಹಬ್ಬದ ಪ್ರಯುಕ್ತ ಇತಿಹಾಸ ಪ್ರಸಿದ್ಧ ಸೋಮೇಶ್ವರದ ಶ್ರೀ ಸೋಮನಾಥ ದೇವಸ್ಥಾನದ ನಾಗ ಬನದಲ್ಲಿ ಶ್ರದ್ಧಾ ಭಕ್ತಿಯಿಂದ ಶ್ರೀ ನಾಗರ ದೇವರನ್ನು ಆರಾಧಿಸಲಾಯಿತು. ಮುಂಜಾನೆಯಿಂದ ನಾಗನ ಕಲ್ಲಿಗೆ ಪಂಚಾಮೃತ ಅಭಿಷೇಕ, ನಾಗತಂಬಿಲ ಹಾಗೂ ವಿಶೇಷ ಪೂಜೆ ನಡೆಯಿತು.
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕುತ್ತಾರು: ಶ್ರೀ ರಾಜರಾಜೇಶ್ವರಿ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನೂರಾರು ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.

