ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮುಡಿಪು: ನಾರ್ಯಗುತ್ತು ಜಯರಾಮ ಕೊಂಡೆ(75) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಹರೇಕಳ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಸುಮಾರು 35 ವರ್ಷಗಳ ಕಾಲ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ಇವರು ಕಣಂತೂರು ಶ್ರೀ ತೋಡಕುಕ್ಕಿನಾರ್ ದೈವಸ್ಥಾನದ ಆಡಳಿತ ಮೊಕ್ತೇಸರರಾದ ನಾರ್ಯಗುತ್ತು ಯಜಮಾನ್ ಎಂ.ತಿಮ್ಮಪ್ಪ ಕೊಂಡೆ ಅವರ ಕಿರಿಯ ಸಹೋದರರಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ನಾರ್ಯಗುತ್ತು ಕುಟುಂಬಿಕರ ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಂ,ಕೃಷ್ಣ ರೈ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
Author: UllalaVani
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕಿನ್ಯ: ಗ್ರಾಮ ಪಂಚಾಯತ್ 2017ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಉಕ್ಕುಡ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಾಲಿನಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. 2,500ರಷ್ಟು ಜನಸಂಖ್ಯೆ ಇರುವ ಈ ಗ್ರಾಮದಲ್ಲಿ ಕೇವಲ 12 ಸದಸ್ಯರಿಂದ ಅಭಿವೃದ್ಧಿ ಕಾರ್ಯಮಾಡಲು ಸಾದ್ಯವಿಲ್ಲ,ಗ್ರಾಮದ ಅಭಿವೃದ್ಧಿಗೆ ಸರ್ವ ಗ್ರಾಮಸ್ಥರ ಸಹಾಯ ಸಹಕಾರ ಬೇಕೆಂದು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು ಅಭಿಪ್ರಾಯ ಪಟ್ಟರು. ಮೆಸ್ಕಾಂ ಅಧಿಕಾರಿಗಳು ಗ್ರಾಮಸ್ಥರ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂದು ಸಾರ್ವಜನಿಕರು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು, ಹಾಗೂ ಕಿನ್ಯಾ ಗ್ರಾಮವು ಕ್ರೀಡೆಯಲ್ಲಿ ಹೆಸರುವಾಸಿಯಾಗಿದ್ದು ಈ ನಿಟ್ಟಿನಲ್ಲಿ ಉತ್ತಮ ಕ್ರೀಡಾಂಗಣ ಬೇಕೆಂದು ಗ್ರಾಮಸ್ಥರು ತಿಳಿಸಿದರು. ಜಿಲ್ಲಾ ಪಂಚಾಯತ್ ಸದಸ್ಯೆ ರಶೀದಾ ಬಾನು,ನೋಡೆಲ್ ಅಧಿಕಾರಿಯಾಗಿ ಮಂಗಳೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲಾ ಸಿ.ಕೆ, ಕಿನ್ಯಾ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿರಾಜ್ ಕಿನ್ಯಾ, ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ಸುರೇಖಾ, ಕಿನ್ಯಾ ಗ್ರಾಮ ಕರಣಿಕ ಎನ್.ಜಿ. ಪ್ರಸಾದ್, ಆಹಾರ ನಿರೀಕ್ಷಕರು ರಾಜಶ್ರೀ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಟಿಪ್ಪರ್ ಲಾರಿ ಹಿಂಬದಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ರಾ.ಹೆ.66 ರ ಸಂಕೊಳಿಗೆ ಎಂಬಲ್ಲಿ ಸಂಭವಿಸಿದೆ. ಕೇರಳದಿಂದ ಮಂಗಳೂರು ಕಡೆ ತೆರಳುತ್ತಿದ್ದ ಕಾರು ಎದುರಿನಲ್ಲಿ ಸಮುದ್ರ ತೀರಕ್ಕೆ ಕಲ್ಲು ಹಾಕುವ ಕಾಮಾಗಾರಿ ನಿರತ ಲಾರಿ ಉಚ್ಚಿಲ ಸಮೀಪ ತಿರುಗುತ್ತಿದ್ದಂತೆ ಹಿಂಬದಿಯಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗೊಂಡಿದ್ದು, ಅವರನ್ನು ತೊಕ್ಕೊಟ್ಟು ನೇತಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ : ಜೀವನದಲ್ಲಿ ಆತ್ಮವಿಶ್ವಾಸ ಬೆಳೆಸಿಕೊಂಡಾಗ ಮಾತ್ರ ಎಲ್ಲಾ ಕ್ಷೇತ್ರದಲ್ಲಿ ಮುಂದೆ ಬರಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಆತ್ಮವಿಶ್ವಾಸದೊಂದಿಗೆ ಶಿಕ್ಷಣ ಮುಂದುವರೆಸಿದರೆ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಉಳ್ಳಾಲ ಶ್ರೀ ಚೀರುಂಭ ಭಗವತೀ ತೀಯಾ ಸಮಾಜ ಸೇವಾ ಸಂಘ ಉಳ್ಳಾಲ ಇದರ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ ಅಭಿಪ್ರಾಯಪಟ್ಟರು. ಅವರು ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ತೀಯಾ ಸಮಾಜ ಸೇವಾ ಸಂಘ ಉಳ್ಳಾಲ ಇದರ ಆಶ್ರಯದಲ್ಲಿ ಶೈಕ್ಷಣಿಕ ಪ್ರೋತ್ಸಹದ ಅಂಗವಾಗಿ 400 ವಿದ್ಯಾರ್ಥಿಗಳಿಗೆ 3.5 ಲಕ್ಷ ರೂ. ವಿದ್ಯಾರ್ಥಿ ಸಹಾಯಧನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ ಸಮಯ. ಈ ಸಂದರ್ಭದಲ್ಲಿ ಯುವ ಸಮುದಾಯ ತಮ್ಮ ತಂದೆ ತಾಯಿ, ನೆರೆಕರೆಯವರು ಮತ್ತು ಸ್ನೇಹಿತರ ನಡವಳಿಕೆಯಿಂದ ಪ್ರೇರಿತರಾಗುತ್ತಾರೆ. ಹೆತ್ತವರು ಇಂತಹ ಸಂದರ್ಭದಲ್ಲಿ ಮಕ್ಕಳು ದಾರಿ ತಪ್ಪದಂತೆ ಮುತವರ್ಜಿ ವಹಿಸಿ ಕೊಳ್ಳಬೇಕು. ಉತ್ತಮ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ. ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿಯ ಸಾರಥ್ಯದಲ್ಲಿ ಜಿಲ್ಲೆಯ 10 ಆಸ್ಪತ್ರೆಗಳಲ್ಲಿ ರಕ್ತ ಶೇಖರಣಾ ಅಭಿಯಾನದ ಪ್ರಯುಕ್ತ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ಕೆ.ಎಂ.ಸಿ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭವು ತಾಜುಲ್ ಉಲಮಾ ಸುನ್ನೀ ಸೆಂಟರ್ ದೇರಳಕಟ್ಟೆಯಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಆಹ್ಮದ್ ಸಖಾಫಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಸ್ಸೆಸ್ಸೆಫ್ ದ.ಕ.ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಎಸ್.ವೈ.ಎಸ್ ದೇರಳಕಟ್ಟೆ ಸೆಂಟರ್ ಅಧ್ಯಕ್ಷ ಏಷ್ಯನ್ ಬಾವಾ ಹಾಜಿ,ಎಸ್ಸೆಸ್ಸೆಫ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಫದ್ಮುಂಜ,ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ , ಎಸ್ಸೆಸ್ಸೆಫ್ ರಾಜ್ಯ ಮುಂಖಂಡ ಅಲ್ತಾಪ್ ಕುಂಪಲ, ಎಸ್ಸೆಸ್ಸೆಫ್ ಬ್ಲಡ್ ಬ್ಯಾಂಕ್ ನ ಕರೀಂ ಕದ್ಕಾರ್,ಯೂಸುಫ್ ರಝ್ವಿ ದೇರಳಕಟ್ಟೆ,ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಶರೀಫ್ ಮುಡಿಪು,ಕಾರ್ಯದರ್ಶಿ ಸಯ್ಯದ್ ಖುಬೈಬ್ ತಂಙಳ್, ಸದಸ್ಯರಾದ ತೌಸೀಫ್ ಸ ಅದಿ ಹರೇಕಳ, ಹಮೀದ್ ನಾಟೆಕಲ್ ಮೊದಲಾದವರು ಉಪಸ್ಥಿತರಿದ್ದರು. ಡಿವಿಷನ್…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಣಾಜೆ: ವಿದೇಶಿ ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿವಿಯ ಕ್ಯಾಂಪಸ್‍ನಲ್ಲಿ ಅತ್ಯಾಧುನಿಕ ಸೌಲಭ್ಯಗಳಿರುವ ಹಾಸ್ಟೆಲ್ ನಿರ್ಮಾಣವಾಗುತ್ತಿದ್ದು ಅದರಲ್ಲಿ ಸ್ಟುಡಿಯೋ ಅಪಾರ್ಟ್‍ಮೆಂಟ್ ಮಾದರಿಯಲ್ಲಿ ಅಡುಗೆ ಕೋಣೆ ಸೇರಿದಂತೆ ಸುಸಜ್ಜಿತ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಮಂಗಳೂರು ವಿವಿಯ ಕುಲಪತಿ ಪ್ರೊ.ಕೆ. ಭೈರಪ್ಪ ಹೇಳಿದರು. ಮಂಗಳೂರು ವಿವಿಯ ಯಕ್ಷಗಾನ ಕಲಾಕೇಂದ್ರದಲ್ಲಿ ಶನಿವಾರ ನಡೆದ ಮಂಗಳೂರು ವಿವಿಯಲ್ಲಿ ವ್ಯಾಸಂಗಗೈಯುತ್ತಿರುವ ಅಂತರಾಷ್ಟ್ರೀಯ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಮಂಗಳೂರು ವಿವಿಗೆ ಈಗಾಗಲೇ ಐಸಿಸಿಆರ್ 100ವಿದ್ಯಾರ್ಥಿಗಳನ್ನುಕೊಟ್ಟಿದ್ದು ನೇರವಾಗಿ 40ಆರ್ಜಿಗಳು ಬಂದಿದ್ದು 30ವಿದ್ಯಾರ್ಥಿಗಳು ಈಗಾಗಲೇ ಪ್ರವೇಶ ಪಡೆದಿದ್ದಾರೆ. ಕೆಲವು ವಿದ್ಯಾರ್ಥಿಗಳು ವೀಸಾಕ್ಕೆ ಕಾಯುತ್ತಿದ್ದಾರೆ. ಹಲವು ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳುಳ್ಳ ಖಾಸಗಿ ವಸತಿ ಸಂಕೀರ್ಣದಲ್ಲೂ ವ್ಯವಸ್ಥೆ ಮಾಡಲಾಗಿದೆ. ಕಳೆದ ಸಾಲಿನಲ್ಲಿ ವಿವಿಧ ದೇಶಗಳ 220ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದು ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಸುಮಾರು 500ರಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆಯುವ ಗುರಿ ಹೊಂದಲಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ಐಸಿಸಿಆರ್ ಬೆಂಗಳೂರಿನ ಪ್ರಾದೇಶಿಕ ನಿರ್ದೇಶಕ ವೇಣುಗೋಪಾಲ್ ಮಾತನಾಡಿ ಪದವಿ ಎಂಬುದು…
ಉಳ್ಳಾಲ್‍ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಆಸನಗಳಿಂದ ಜೀವನಕ್ರಮ ಸರಳವಾಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಯೋಗ ವಿಜ್ಞಾನದ ಪ್ರಾಧ್ಯಾಪಕರಾದ ಡಾ.ಅಜಿತೇಶ್ ಎನ್.ಹೆಚ್ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟು ಒಳಪೇಟೆಯ ಆಮಂತ್ರಣ ಸಭಾಂಗಣದಲ್ಲಿ ಭಾನುವಾರ ಆರೋಗ್ಯ ಯೋಗ ಕೇಂದ್ರದ ವತಿಯಿಂದ ಆರಂಭಗೊಂಡ ಯೋಗಾಸನ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ದಿನ ಸೇವಿಸುವ ತಿಂಡಿ, ತಿನಿಸುಗಳಿಂದ, ಜೀವನಕ್ರಮದಿಂದಾಗಿ ಆರೋಗ್ಯ ಕ್ರಮಗಳು ಹಾಳಾಗುತ್ತಿವೆ. ರಕ್ತದೊತ್ತಡ , ಮಧುಮೇಹ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಜನ ಆರೋಗ್ಯವನ್ನು ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಇಂತಹ ಸಂದರ್ಭ ತೊಕ್ಕೊಟ್ಟು ಸುತ್ತಮುತ್ತಲ ಜನರ ಆರೋಗ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿ ಹಾಗೂ ಉತ್ತಮ ಆರೋಗ್ಯವನ್ನು ಪಡೆಯಬೇಕು ಅನ್ನುವ ದೃಷ್ಟಿಯಿಂದ ಆರೋಗ್ಯ ಯೋಗ್ಯ ಕೇಂದ್ರದ ಮೂಲಕ ಯೋಗ ತರಬೇತಿ ಕೇಂದ್ರದ ಸ್ಥಾಪನೆ ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಕೆ.ಟಿ.ಸುವರ್ಣ ಮಾತನಾಡಿ ಯೋಗಗುರು ಯುವತಿ ಶ್ರಮದಿಂದ ತರಬೇತಿ ಕೇಂದ್ರದ ಉದ್ಘಾಟನೆಯಾಗಿದೆ. ಯೋಗವಿಲ್ಲದ ಜೀವನಕ್ರಮ ಹಿಂದಿನ ಕಾಲದಲ್ಲಿ ಇರಲಿಲ್ಲ. ಇದೀಗ ಪ್ರಧಾನಿ ಮೋದಿಯವರು ಖುದ್ದು ಯೋಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದಾರಿ ತೋರಿಸುವ ಸಂಸ್ಥೆಯ ಕಾರ್ಯವೈಖರಿ ವಿಶಿಷ್ಟವಾಗಿದ್ದು, ಈ ಮೂಲಕ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಯತ್ನಕ್ಕೆ ಕೈಹಾಕಿರುವ ಸಂಸ್ಥೆ ಇತರೆ ಶಿಕ್ಷಣ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಮಂಗಳೂರು ಸ್ಟಾರ್ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಸಲೀಂ ಮಲಾರ್ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟು ಹಳೇಕೋಟೆಯಲ್ಲಿರುವ ಮಂಗಳೂರು ಇನ್ಸ್ಟಿ ಟ್ಯೂಟ್ ಆಫ್ ಟೆಕ್ನಲಾಜಿಕಲ್ ಸೈನ್ಸ್ (ಎಂಐಟಿಎಸ್ ) ಇದರ ಘಟಿಕೋತ್ಸವ ಹಾಗೂ ಫ್ರೆಶರ್ಸ್ ದಿನಾಚರಣೆಯಲ್ಲಿ , ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ಮಾತನಾಡಿದರು. ಪದವಿ ಪಡೆದ ವಿದ್ಯಾರ್ಥಿಗಳು ಕೆಲಸಕ್ಕೆ ಸೇರಿಕೊಂಡ ನಂತರ ಶ್ರಮ ವಹಿಸಿ ಬದ್ಧತೆಯಿಂದ ದುಡಿದಾಗ ಕಲಿತ ಕಾಲೇಜಿನ ಹೆಸರನ್ನು ಉಳಿಸುವುದರ ಜತೆಗೆ ಜೀವನದಲ್ಲಿಯೂ ಯಶಸ್ಸು ಗಳಿಸಲು ಸಾಧ್ಯ. ಶಿಸ್ತಿನಿಂದ ಕೂಡಿ ಕೆಲಸದಲ್ಲಿ ಪಾಲ್ಗೊಳ್ಳಿ ಎಂದು ಸಲಹೆ ನೀಡಿದ ಅವರು ಕಾಲೇಜು ಸಾಗುತ್ತಿರುವ ಹಾದಿಗೆ ಮುಂದೆ ವಿಟಿಯು ಮಾನ್ಯತೆಯೂ ದೊರೆಯಲಿದೆ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಳೆಕೋಟೆ ಸೈಯ್ಯಿದ್ ಮದನಿ ಉರ್ದು…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಕೊಲ್ಯ:ಮೂರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಕೊಂಡಿದ್ದ ಮಗನ ಸಾವಿನಿಂದ ಮನನೊಂದ ತಂದೆ ಅದೇ ಜಾಗದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಕೊಂಡಿರುವ ಮನಕಲಕುವ ಘಟನೆ ಮಂಗಳೂರಿನ ಹೊರವಲಯದ ಕೋಟೆಕಾರ್ ಕೊಲ್ಯ ರೈಲ್ವೇ ಟ್ರಾಕ್ ನಲ್ಲಿ ಗುರುವಾರ ನಡೆದಿದೆ. ಲೋಕಯ್ಯ ಪೂಜಾರಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಕೊಂಡವರು. ಮೂರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ರೈಲಿಗೆ ತಲೆಕೊಟ್ಟು ಪುತ್ರ ನಿಶಾನ್ ಎಂಬವರು ಆತಹತ್ಯೆ ಮಾಡಿಕೊಂಡಿದ್ದರು ಪುತ್ರ ವಿಯೋಗದಿಂದ ಬಳಲುತ್ತಿದ್ದ ತಂದೆ ಇದೀಗ ಮೂರು ತಿಂಗಳ ನಂತರ ಅದೇ ಅದೇ ಸ್ಥಳದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ :ಉಳ್ಳಾಲ ದರ್ಗಾ ಆಡಳಿತ ಸಮಿತಿ ಸದಸ್ಯ, ಮೇಲಂಗಡಿ ಮುಹಿಯುದ್ದೀನ್ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ಬಾವ ಫಕೀರ್ ಸಾಹೇಬ್(85) ಬುಧವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಮೂವತ್ತು ವರ್ಷಗಳಿಗಿಂತಲೂ ಸುಧೀರ್ಘ ಅವಧಿಯಲ್ಲಿ ಮೇಲಂಗಡಿ ಮಸೀದಿ ಅಧ್ಯಕ್ಷರಾಗಿ, 60 ವರ್ಷಗಳಿಂತಲೂ ಅಧಿಕ ಕಾಲ ದರ್ಗಾ ಸಮಿತಿ ಹಾಗೂ ಚಾರಿಟೇಬಲ್ ಟ್ರಸ್ಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ದರ್ಗಾ ಅಧೀನದಲ್ಲಿ ಶಾಲಾ-ಕಾಲೇಜು ಆರಂಭಕ್ಕೆ ಸತತ ಪರಿಶ್ರಮ ವಹಿಸಿದ್ದರು. ಅವರ ನಿಧನಕ್ಕೆ ಮೇಲಂಗಡಿ ಮಸೀದಿ ಅಧ್ಯಕ್ಷ ಫಾರೂಕ್ ಉಳ್ಳಾಲ್ ಸಂತಾಪ ಸೂಚಿಸಿದ್ದಾರೆ.

