Author: UllalaVani

Kannada News From Coastal Karnataka

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲಾ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರ ಸಂಘದ ಉಳ್ಳಾಲ ತಾಲೂಕು ಘಟಕದ ನೂತನ ಸಮಿತಿಯನ್ನು ಇತ್ತೀಚೆಗೆ ಕುತ್ತಾರ್‌ನ ಖಾಸಗಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು. ಜಿಲ್ಲಾ ಕಾರ್ಯದರ್ಶಿ ಕೆ.ಕೆ. ನಾಸೀರ್ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷರಾಗಿ ಮಂಗಳೂರು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ನಿಸಾರ್ ಟಿ.ಎಸ್. ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಕೈಲಾಸ್ ಬಾಬು ಹಾಗೂ ಶಂಶುದ್ದೀನ್ ಹರೇಕಳ, ಪ್ರಧಾನ ಕಾರ್ಯದರ್ಶಿಯಾಗಿ ಅಹ್ಮದ್ ಶಹೀರ್, ಜಂಟಿ ಕಾರ್ಯದರ್ಶಿಯಾಗಿ ಎಲ್ರಿನ್ ಹಾಗೂ ಕೋಶಾಧಿಕಾರಿಯಾಗಿ ಹನೀಫ್ ಶೈನ್ ಆಯ್ಕೆಯಾದರು. ಇದಲ್ಲದೆ, 11 ಮಂದಿ ಸದಸ್ಯರನ್ನು ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಯಿತು.

Read More

ಉಳ್ಳಾಲ, ಜುಲೈ 30: ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಬಾಳೆಪುಣಿ ಗ್ರಾಮ ಪಂಚಾಯತ್ ಕಾನೂನುಬದ್ಧ ಕ್ರಮಕ್ಕೆ ಮುಂದಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈರಂಗಳ ಗ್ರಾಮದ ಮುಕ್ಕಚಿ ಮುಖಿ ರಸ್ತೆಯಲ್ಲಿರುವ ಮುಡಿಪು ಅರಫಾ ಎಂಟರ್‌ಪ್ರೈಸಸ್‌ಗೆ ಸಂಸ್ಥೆಗೆ ಪಂಚಾಯತ್ ವತಿಯಿಂದ ರೂ.10,000 ದಂಡನಾ ನೋಟಿಸ್ ಜಾರಿಗೊಳಿಸಲಾಗಿದೆ. ಪಂಚಾಯತ್‌ಗೆ ಬಂದ ಸಾರ್ವಜನಿಕ ದೂರುಗಳ ಪ್ರಕಾರ, ಸಂಸ್ಥೆಯ ಸಿಬ್ಬಂದಿ ರಸ್ತೆ ಬದಿ ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯವನ್ನು ಹಲವು ದಿನಗಳಿಂದ ಸುಟ್ಟು ಪರಿಸರ ಮಾಲಿನ್ಯ ಉಂಟುಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದಲ್ಲದೆ, ಪರಿಸರ ಮತ್ತು ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ. ಕರ್ನಾಟಕ ಪಂಚಾಯತ್ ರಾಜ್ (ಶಾಸನ ತಿದ್ದುಪಡಿ ನಿಯಮಾವಳಿ) ಅಧಿಸೂಚನೆ-2020ರ ಪ್ರಕಾರ, ಬಯಲು ಪ್ರದೇಶ ಅಥವಾ ರಸ್ತೆ ಬದಿಯಲ್ಲಿ ಕಸ ಎಸೆಯುವುದು ಹಾಗೂ ಸುಡುವುದು ದಂಡನೀಯ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ರೂ.10,000 ದಂಡ ವಿಧಿಸಿ, ನೋಟಿಸ್ ಸ್ವೀಕರಿಸಿದ ಏಳು ದಿನಗಳೊಳಗೆ…

Read More

ಕಾಂಗ್ರೆಸ್ ಪಕ್ಷದ “ಸಂಘಟನಾ ಸೃಜನ್ ಅಭಿಯಾನ್” ಅಡಿಯಲ್ಲಿ ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗೊoಡಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ಅವರ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಐಸಿಸಿ ವೀಕ್ಷಕರಾದ ಕೆ. ಜಯಂತ್ ಹಾಗೂ ಇತರರು ಜಿಲ್ಲೆಯಾದ್ಯಂತ ಕಾರ್ಯಕರ್ತರು, ಮುಖಂಡರು ಮತ್ತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿ ಕಾರ್ಯಕರ್ತರಲ್ಲಿ ವಿಭಿನ್ನ ರೀತಿಯ ಉತ್ಸಾಹ ಕಂಡುಬರುತ್ತಿದೆ. ಹಲವು ಕಾರ್ಯಕರ್ತರ ಅಭಿಪ್ರಾಯದಂತೆ, ಜಿಲ್ಲಾ ಅಧ್ಯಕ್ಷರ ಆಯ್ಕೆ ಕುರಿತು ತಮ್ಮ ಅಭಿಪ್ರಾಯವನ್ನು ನೇರವಾಗಿ ವ್ಯಕ್ತಪಡಿಸಲು ಅವಕಾಶ ದೊರೆತಿರುವುದು ಇದೇ ಮೊದಲ ಬಾರಿಯ ಅನುಭವವಾಗಿದೆ. ಆದ್ದರಿಂದ ಈ ಪ್ರಕ್ರಿಯೆ ಕೇವಲ ಔಪಚಾರಿಕತೆಯಾಗದೆ, ಕಾರ್ಯಕರ್ತರ ಧ್ವನಿಗೆ ನಿಜವಾದ ಮೌಲ್ಯ ಸಿಗಬೇಕು ಎಂಬ ನಿರೀಕ್ಷೆ ಸಾರ್ವಜನಿಕರದ್ದಾಗಿದೆ. ದಕ್ಷಿಣ ಕನ್ನಡ ಕಾಂಗ್ರೆಸ್‌ನಲ್ಲಿ ಕಳೆದ ಕೆಲವು ವರ್ಷಗಳಿಂದ ಸಂಘಟನೆಗಿAತ ರಾಜಕೀಯ ಹೊಂದಾಣಿಕೆಗಳಿಗೆ ಹೆಚ್ಚಿನ ಆದ್ಯತೆ ದೊರೆತಿದೆ ಎಂಬ ಟೀಕೆ ಪಕ್ಷದೊಳಗೇ ಕೇಳಿಬರುತ್ತಿದೆ. ಹಲವು ಚುನಾಯಿತ ಪ್ರತಿನಿಧಿಗಳು ತಮ್ಮ ತಮ್ಮ…

Read More

ಮಂಗಳೂರು, ಜು. 29: ಯುವಜನರಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಯುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಕೋಟೆಕಾರ್ ಬೀರಿ ಹಾಗೂ ಕೊಣಾಜೆಯ ಬಂಟ್ಸ್ ಭವನದ ಸಮೀಪ ದಿಢೀರ್ ಡ್ರಗ್ ಪರೀಕ್ಷೆ ನಡೆಸಿದರು. ಈ ಕಾರ್ಯಾಚರಣೆಯನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರ ಮೇಲ್ವಿಚಾರಣೆಯಲ್ಲಿ ದಕ್ಷಿಣ ಹಾಗೂ ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರು (ಎಸಿಪಿ) ಸಮನ್ವಯಗೊಳಿಸಿದರು. ಸಂಜೆ 4.30ರಿಂದ 6.00 ಗಂಟೆಯವರೆಗೆ ನಡೆದ ಈ ಕಾರ್ಯಾಚರಣೆಯಲ್ಲಿ, ಖಾಸಗಿ ಹಾಗೂ ಕಾಲೇಜು ಬಸ್‌ಗಳನ್ನು ತಡೆದು ವಿದ್ಯಾರ್ಥಿಗಳನ್ನು ಮಲ್ಟಿ ಡ್ರಗ್ ಟೆಸ್ಟಿಂಗ್ ಕಿಟ್‌ಗಳ ಮೂಲಕ ಪರೀಕ್ಷಿಸಲಾಯಿತು.ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕೋಟೆಕಾರ್ ಬೀರಿಯಲ್ಲಿ ಎಸ್‌ಡಿಎಂ ಕಾಲೇಜು, ನಿಟ್ಟೆ ಕೆ.ಎಸ್. ಹೆಗ್ಡೆ, ಸೇಂಟ್ ಅಲೋಶಿಯಸ್ ಕಾಲೇಜು, ಪಿ.ಎ. ಕಾಲೇಜು, ಬ್ಯಾರೀಸ್ ಇನ್‌ಸ್ಟಿಟ್ಯೂಟ್, ಟಿಪ್ಪು ಸುಲ್ತಾನ್ ಕಾಲೇಜು ಹಾಗೂ ಕೆನರಾ ಕಾಲೇಜಿನ 72 ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ ನಡೆಸಲಾಯಿತು. ಈ ಪೈಕಿ 71 ವಿದ್ಯಾರ್ಥಿಗಳ ವರದಿ ನೆಗೆಟಿವ್ ಬಂದಿದ್ದು, ಒಬ್ಬ ವಿದ್ಯಾರ್ಥಿ ಡ್ರಗ್…

Read More

ಮುಂಬೈ, ಜು. 29 : ವೈಭವ್ ಡ್ರೆಸ್ಸಿಂಗ್ ರೂಮ್‌ನಲ್ಲಿ ಸಮಯ ಕಳೆಯಬಹುದು, ಹಿರಿಯರಿಗೆ ಪಾನೀಯಗಳನ್ನು ನೀಡಬಹುದು ಅಥವಾ ಹೊರಗೆ ಕುಳಿತುಕೊಳ್ಳಬಹುದು ಎಂದು ಭಾರತ ತಂಡದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ತಾವು ವೈಭವ್ ಸೂರ್ಯವಂಶಿ ಕುರಿತು ಆಡಿದ್ದ ಮಾತುಗಳಿಗೆ ಸ್ಪಷ್ಟನೆ ನೀಡಿದ್ದಾರೆ. ತಂಡದಲ್ಲಿ ಸ್ಥಾನ ಸಿಗದಿದ್ದರೆ ವೈಭವ್ ‘ಹಿರಿಯ ಆಟಗಾರರಿಗೆ ಡ್ರಿಂಕ್ಸ್ ನೀಡಲಿ’ ಎಂದು ಅಶ್ವಿನ್ ಹೇಳಿದ್ದರು. ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಈ ಬಗ್ಗೆ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಸ್ಪಷ್ಟನೆ ನೀಡಿದ ಅವರು, “ನಾನು ಹೇಳಿದ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ವೈಭವ್ ಡ್ರೆಸ್ಸಿಂಗ್ ರೂಮ್‌ನಲ್ಲಿ ಸಮಯ ಕಳೆಯಬಹುದು, ಹಿರಿಯರಿಗೆ ಪಾನೀಯಗಳನ್ನು ನೀಡಬಹುದು ಅಥವಾ ಹೊರಗೆ ಕುಳಿತುಕೊಳ್ಳಬಹುದು ಎಂದು ನಾನು ಹೇಳಿದ್ದೆ. ಇದರ ಹೊರತಾಗಿ ಆತನನ್ನು ಕೀಳಾಗಿ ಕಾಣಲು ಖಂಡಿತ ಅಲ್ಲ” ಎಂದಿದ್ದಾರೆ.”ಒಬ್ಬ 15 ವರ್ಷದ ಯುವ ಆಟಗಾರ ಅಂತರರಾಷ್ಟ್ರೀಯ ಪಂದ್ಯಗಳನ್ನು ಹೊರಗಿನಿಂದ ಸೂಕ್ಷ್ಮವಾಗಿ ಗಮನಿಸುವುದರಿಂದ ಸಿಗುವ ಅನುಭವ ಅಪಾರ. ಇದು ಆತನ ಕ್ರಿಕೆಟ್ ಬದುಕಿನ…

Read More

ಬ್ರಹ್ಮಾವರ, ಜು. 29 : ಸರ್ಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಕುಮಟಾದ ನಾಡಾ ಮಸ್ಕೇರಿಯ ಶ್ರೀ ಗಣೇಶ್ ರೈಸ್ ಇಂಡಸ್ಟ್ರೀಸ್ ಮಾಲೀಕ ನಾಗರಾಜ ನಾಯ್ಕ್ ಅವರು ಅಕ್ಕಿಯನ್ನು ಲಾರಿಗೆ ತುಂಬಿಸಿದ್ದರು. ಲಾರಿ ಮಾಲೀಕ ಗಿರೀಶ್ ನಾಯ್ಕ್ ಅವರ ಸೂಚನೆಯಂತೆ ಚಾಲಕ ಕೆ. ನರಸಿಂಹ ಈ ಸರ್ಕಾರಿ ಅಕ್ಕಿಯನ್ನು ಕೇರಳದ ಕಾಸರಗೋಡಿನ ಶಾಜಿ ಟ್ರೇಡಿಂಗ್ ಕಂಪನಿಗೆ ಅಕ್ರಮವಾಗಿ ಸಾಗಿಸುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬ್ರಹ್ಮಾವರ ಆಹಾರ ನಿರೀಕ್ಷಕ ವಸಂತ್ ಕುಮಾರ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಹಾಗೂ ಸಿಬ್ಬಂದಿಯ ಸಹಕಾರದೊಂದಿಗೆ ಮಣೂರು ಗ್ರಾಮದ ಮಹಾಲಕ್ಷ್ಮಿ ಹೋಟೆಲ್ ಮುಂಭಾಗದಲ್ಲಿ ದಾಳಿ ನಡೆಸಲಾಯಿತು.ಕಾರ್ಯಾಚರಣೆಯಲ್ಲಿ ಲಾರಿಯನ್ನು ತಡೆದು ಪರಿಶೀಲಿಸಿದ ವೇಳೆ 320 ಪ್ಲಾಸ್ಟಿಕ್ ಚೀಲಗಳಲ್ಲಿ ಸಂಗ್ರಹಿಸಲಾಗಿದ್ದ 160 ಕ್ವಿಂಟಲ್ ಅನ್ನಭಾಗ್ಯ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿಯಾದ ಅಕ್ಕಿಯ ಮೌಲ್ಯ 3.84 ಲಕ್ಷ…

Read More

ಮಂಗಳೂರು (ಜು. 27): ನಗರದ ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆಯ ಭಾಗವಾಗಿ, ಇಲ್ಲಿನ ‘ವಿಶ್ವಾಸ್ ವೀನಸ್ ಅಪಾರ್ಟ್‌ಮೆಂಟ್’ನಲ್ಲಿ ನೂತನವಾಗಿ ಅಳವಡಿಸಲಾದ ಮಲಿನ ನೀರು ಶುದ್ಧೀಕರಣ ಘಟಕ (Sewage Treatment Plant – STP) ಭಾನುವಾರ ಅಧಿಕೃತವಾಗಿ ಲೋಕಾರ್ಪಣೆಗೊಂಡಿತು. ​ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ಮಂಜಯ್ಯ ಶೆಟ್ಟಿ ಅವರು ನೂತನ ಘಟಕವನ್ನು ಉದ್ಘಾಟಿಸಿ ಶುಭಹಾರೈಸಿದರು. ಅಪಾರ್ಟ್‌ಮೆಂಟ್ ಸೊಸೈಟಿಯ ಅಧ್ಯಕ್ಷ ಶ್ರೀ ಫಕೀರಬ್ಬ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಬೊಳಾರ್ ವಾರ್ಡ್ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀ ಪ್ರಸಾದ್ ಬೊಳಾರ್ ಮುಖ್ಯ ಅತಿಥಿಯಾಗಿ ಹಾಗೂ ಮಾಜಿ ಕಾರ್ಪೊರೇಟರ್ ಶ್ರೀಮತಿ ಭಾನುಮತಿ ಗೌರವಾನ್ವಿತ ಅತಿಥಿಯಾಗಿ ಉಪಸ್ಥಿತರಿದ್ದರು.ಪರಿಸರ ಜಾಗೃತಿಗೆ ಮಾದರಿ ಹೆಜ್ಜೆ:ಕಾರ್ಯಕ್ರಮದ ಸಂಚಾಲಕಿ ಹಾಗೂ ಸೊಸೈಟಿ ಕಾರ್ಯದರ್ಶಿ ಡಾ. ವೈಶಾಲಿ ರೈ ಪ್ರಾಸ್ತಾವಿಕವಾಗಿ ಮಾತನಾಡಿ, “ತ್ಯಾಜ್ಯ ನೀರಿನ ವೈಜ್ಞಾನಿಕ ಸಂಸ್ಕರಣೆ ಹಾಗೂ ಮರುಬಳಕೆ ಇಂದಿನ ಅಗತ್ಯವಾಗಿದೆ. ನಿಸರ್ಗದ ಮೇಲಿನ ಒತ್ತಡ ಕಡಿಮೆ ಮಾಡಲು ಈ ಯೋಜನೆ ಪೂರಕ” ಎಂದರು.​ನಂತರ ಮಾತನಾಡಿದ ಮಾಜಿ ಕಾರ್ಪೊರೇಟರ್…

Read More

ಮಂಗಳೂರು, ಜು. 27 : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಸೂರಲ್ಪಾಡಿ ಸಮೀಪ ನಿರ್ಮಾಣ ಹಂತದಲ್ಲಿರುವ ಟೋಲ್ ಪ್ಲಾಜಾ ಬಳಿ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, 35 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರ್ಕಳದಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಈ ಬಸ್, ಸೂರಲ್ಪಾಡಿ ಬಳಿ ಏಕಾಏಕಿ ಎಡಭಾಗಕ್ಕೆ ತಿರುಗಿದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬಸ್ ಅನ್ನು ಬಲಭಾಗಕ್ಕೆ ತಿರುಗಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಸಿಮೆಂಟ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಬಸ್ ಚಾಲಕ ಹಾಗೂ ಒಬ್ಬರು ಅಥವಾ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ…

Read More

ಕಾಸರಗೋಡು, ಜು.27: ರಾಮಕ್ಷತ್ರಿಯ ಸಮಾಜದ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ದಾಖಲೆಗಳನ್ನು ಒಳಗೊಂಡಿರುವ ಸಂಪಾದಿತ ಕೃತಿ ಬಿನ್ನವತ್ತಳೆಯನ್ನು ಪುನರ್‌ಮುದ್ರಿಸಲು ಹಾಗೂ ‘ರಾಮಕ್ಷತ್ರಿಯ ಕುಟುಂಬ ದೇವಸ್ಥಾನ, ಕುಲದೇವರು ಮತ್ತು ಸಂಘಟನೆಗಳ ವಿಳಾಸ ಡೈರೆಕ್ಟರಿ–2026’ ಪ್ರಕಟಿಸಲು ಸುಮಾರು ₹10 ಲಕ್ಷ ವೆಚ್ಚದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಶಿವರಾಮ ಕಾಸರಗೋಡು ತಿಳಿಸಿದ್ದಾರೆ. 1997ರ ನವೆಂಬರ್ 9ರಂದು ಶಿವರಾಮ ಕಾಸರಗೋಡು ಅವರ ಸಂಪಾದಕತ್ವದಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ‘ಬಿನ್ನವತ್ತಳೆ’ ಕೃತಿಯಲ್ಲಿ ಸರ್ಕಾರದ ದಾಖಲೆಗಳು, ಸಂಶೋಧನಾ ಲೇಖನಗಳು, ರಾಮಕ್ಷತ್ರಿಯ ಸಮುದಾಯದ ಜನಾಂಗೀಯ ಅಧ್ಯಯನ, ಸಾಹಿತ್ಯ ಹಾಗೂ 1997ರವರೆಗೆ ಪ್ರಕಟಗೊಂಡ ವಿವಿಧ ಕೃತಿಗಳ ಆಯ್ದ ಬರಹಗಳನ್ನು ಸಂಗ್ರಹಿಸಲಾಗಿದೆ. ಇದೀಗ ಈ ಕೃತಿಯನ್ನು ಪರಿಷ್ಕೃತ ರೂಪದಲ್ಲಿ ಪುನರ್‌ಮುದ್ರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಮಕ್ಷತ್ರಿಯ ಕುಟುಂಬ ದೇವಸ್ಥಾನ, ಕುಲದೇವರು ಮತ್ತು ಸಂಘಟನೆಗಳ ವಿಳಾಸ ಡೈರೆಕ್ಟರಿ–2026 ನಾಲ್ಕನೇ ಆವೃತ್ತಿಯಾಗಿ ಪ್ರಕಟವಾಗಲಿದೆ. ಈ ಡೈರೆಕ್ಟರಿಯ ಮೊದಲ ಮೂರು ಆವೃತ್ತಿಗಳು 1997, 1998 ಹಾಗೂ 2004ರಲ್ಲಿ ಪ್ರಕಟಗೊಂಡಿದ್ದವು. ಪ್ರಕಟಣಾ ವೆಚ್ಚಕ್ಕಾಗಿ ದುಬೈ,…

Read More

ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವಿದೆಯೇ? ಅಥವಾ ಜನರು ತಮ್ಮ ಸಮಸ್ಯೆಗಳನ್ನು ಹೊತ್ತುಕೊಂಡೇ ಕಚೇರಿಗಳ ಸುತ್ತ ಸುತ್ತಬೇಕೇ? ಉಳ್ಳಾಲ ತಾಲೂಕು—ಸಚಿವ ಯು.ಟಿ. ಖಾದರ್ ಅವರ ಕ್ಷೇತ್ರ. ಆದರೆ ಇದೇ ಕ್ಷೇತ್ರದಲ್ಲಿ ಕಂದಾಯ ಆಡಳಿತ ವ್ಯವಸ್ಥೆ ಜನಸಾಮಾನ್ಯರ ಕಣ್ಣೆದುರೇ ಕುಸಿಯುತ್ತಿರುವ ಆರೋಪ ಕೇಳಿಬರುತ್ತಿದೆ. ಗ್ರಾಮಕ್ಕೆ ಒಬ್ಬ ಗ್ರಾಮ ಆಡಳಿತಾಧಿಕಾರಿ (VAO) ಇರಬೇಕಾದ ಸಂದರ್ಭದಲ್ಲಿ, ಮೂರು ಗ್ರಾಮಗಳಿಗೆ ಒಬ್ಬ VAO ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಉಳ್ಳಾಲ ತಾಲೂಕಿನ ಅಂಬ್ಲಮೊಗ್ರು, ಬಾಳೆಪುಣಿ, ಬೆಳ್ಮ, ಬೋಳಿಯಾರು, ಚೆಳೂರು, ಹರೇಕಳ, ಇರಾ, ಕೈರಂಗಳ, ಕಿನ್ಯಾ, ಕೊಣಾಜೆ, ಕೋಟೆಕಾರು, ಕುರ್ನಾಡು, ಮಂಜನಾಡಿ, ಮುನ್ನೂರು, ನಾರಿಂಗಾನ, ಪಾವೂರು, ಪೆರ್ಮನ್ನೂರು, ಪಜೀರು, ಸಜಿಪನಡು, ಸಜಿಪಪಾಡು, ಸೋಮೇಶ್ವರ, ತಲಪಾಡಿ ಮತ್ತು ಉಳ್ಳಾಲ ಸೇರಿದಂತೆ 23 ಗ್ರಾಮಗಳ ಜನರು ಕಂದಾಯ ಇಲಾಖೆಯ ಸೇವೆಗಳಿಗಾಗಿ ಅವಲಂಬಿತರಾಗಿದ್ದಾರೆ. ಆದರೆ ಜನರ ಸಮಸ್ಯೆಗಳನ್ನು ಬಗೆಹರಿಸಬೇಕಾದ ಗ್ರಾಮ ಆಡಳಿತ ವ್ಯವಸ್ಥೆಯೇ ಸಿಬ್ಬಂದಿ ಕೊರತೆಯಿಂದ ದುರ್ಬಲಗೊಂಡರೆ, ಜನರು ತಮ್ಮ ಹಕ್ಕಿನ ಸೇವೆಗಳನ್ನು ಪಡೆಯಲು ಯಾರನ್ನು ಸಂಪರ್ಕಿಸಬೇಕು ಎಂಬ ಪ್ರಶ್ನೆ ಎದುರಾಗುತ್ತದೆ. SIR ಸಂಬಂಧಿತ ಕೆಲಸಗಳು,…

Read More