Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ತೊಕ್ಕೊಟ್ಟು ಜಂಕ್ಷನಿನಲ್ಲಿರುವ ಆರ್.ಇ.ಬಿ.ಕಾಂಪ್ಲೆಕ್ಸ್ ಸಮೀಪದ ಕಾಂಪೌಂಡಿನಲ್ಲಿದ್ದ ಟಯರ್ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಗುರುವಾರ ಸಂಜೆ ಸಂಭವಿಸಿದೆ. ತೊಕ್ಕೊಟ್ಟು ಜಂಕ್ಷನಿನಲ್ಲಿರುವ ಅಬ್ದುಲ್ ರೆಹಮಾನ್ ಎಂಬವರಿಗೆ ಸೇರಿದ ಟಯರ್ ಅಂಗಡಿಯಲ್ಲಿ ದುರಂತ ಸಂಭವಿಸಿದೆ. ಘಟನೆಯಿಂದಾಗಿ ಇಡೀ ಜಂಕ್ಷನ್‍ನಲ್ಲಿ ಹೊಗೆ ತುಂಬಿ ಕತ್ತಲ ವಾತಾವರಣ ನಿರ್ಮಾಣವಾಗಿತ್ತು. ಸಂಜೆ ಸುಮಾರಿಗೆ ಆಕಸ್ಮತಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿಯ ಜ್ವಾಲೆ ಎತ್ತರಕ್ಕೆ ಉರಿದು ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಿಸಿತ್ತು. ಈ ವೇಳೆ ಅಂಗಡಿಯೊಳಗಿದ್ದ ಟಯರ್, ಟಯರ್ ರಿಸೋಲ್ವಿಂಗ್ ಯಂತ್ರ ಬೆಂಕಿಗೆ ಆಹುತಿಯಾಗಿದ್ದು ಲಕ್ಷಾಂತರ ರೂ.ನಷ್ಟ ಸಂಭವಿಸಿರಬಹುದೆಂದು ಆಂದಾಜಿಸಲಾಗಿದೆ. ಅಂಗಡಿಯೊಳಗೆ ಯಾರು ಇಲ್ಲದೇ ಇರುವುದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಮೀಪದಲ್ಲೇ ಡಿಸೇಲ್ ಜನರೇಟರ್, ವಾಣಿಜ್ಯ ಕಟ್ಟಡ, ಗೂಡಂಗಡಿಗಳಿದೆ. ಆದರೆ ಅಗ್ನಿಶಾಮಕ ದಳದ ಸಕಾಲಿಕ ಆಗಮನದಿಂದ ನಡೆಯುತ್ತಿದ್ದ ದೊಡ್ಡ ದುರಂತ ತಪ್ಪಿದೆ. ಅಗ್ನಿಶಾಮಕ ದಳದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಿಂದಾಗಿ ನೂರಕ್ಕೂ ಅಧಿಕ ಕೂತೂಹಲಿಗರು ಸ್ಥಳದಲ್ಲಿ ಜಮಾಯಿಸಿದ್ದಾರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಸಮಯ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಪಿಕಪ್ ವಾಹನದ ಟಯರ್ ಕಳಚಿದ ಪರಿಣಾಮ ಅರ್ಧತಾಸು ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಮಂಗಳವಾರ ಸಂಜೆ ನಡೆಯಿತು. ಮಂಗಳೂರಿನಿಂದ ತಲಪಾಡಿ ಕಡೆಗೆ ಇಂಟರ್‍ಲಾಕ್ ಹೇರಿಕೊಂಡು ಸಾಗುತ್ತಿದ್ದ ಪಿಕಪ್ ವಾಹನದ ಟಯರ್ ತೊಕ್ಕೊಟ್ಟು ಜಂಕ್ಷನ್‍ನಲ್ಲಿನ ರಾ.ಹೆ.ಯಲ್ಲಿ ಕಳಚಿತು. ಪರಿಣಾಮ ಪಿಕಪ್ ವಾಹನ ರಸ್ತೆಯಲ್ಲೇ ಉಳಿದು , ಫ್ಲೈಓವರ್ ಕಾಮಗಾರಿ ಹಿನ್ನೆಲೆಯಲ್ಲಿ ರಾ.ಹೆ.ಯಲ್ಲಿ ರಸ್ತೆ ಕಿರಿದಾಗಿದ್ದು, ಅಧಿಕ ವಾಹನ ಸಂಚಾರವಿರುವ ಪ್ರದೇಶದಲ್ಲಿ ಆಗಾಗ ಸಂಚಾರಕ್ಕೆ ಅಡ್ಡಿಯುಂಟಾಗುತ್ತಿತ್ತು. ಮಂಗಳವಾರ ಸಂಜೆ ವೇಳೆ ಪಿಕಪ್ ವಾಹನದ ಕೆಟ್ಟು ನಿಂತ ಪರಿಣಾಮದಿಂದ ಒಂದು ತಾಸು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ ಎರಡು ಕಿ.ಮೀ ದೂರವನ್ನು ತಲುಪಲು ವಾಹನ ಸವಾರರಿಗೆ ಅರ್ಧ ತಾಸು ಬೇಕಾಯಿತು. ಬಳಿಕ ಉಳ್ಳಾಲ ಪೊಲೀಸರು ಕ್ರೇನ್ ಮೂಲಕ ಪಿಕಪ್ ವಾಹನವನ್ನು ಮೇಲಕ್ಕೆತ್ತುವ ಮೂಲಕ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಶಾಂತಿಸಭೆಯಲ್ಲಿ ಕೇವಲ ಮುಖಂಡರುಗಳು ಮಾತ್ರ ವಿಚಾರಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಇದರಿಂದ ಗಲಭೆ ನಿಯಂತ್ರಿಸಲು ಅಸಾಧ್ಯ . ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಶಾಂತಿ ಸಂದೇಶವನ್ನು ತಲುಪಿಸುವ ನಿಟ್ಟಿನಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು , ಮುಖಂಡರುಗಳ ಹಾಗೂ ಸಾರ್ವಜನಿಕರ ನೇತೃತ್ವದಲ್ಲಿ ಮೇ. 5 ರಂದು ಉಳ್ಳಾಲದ ಅಬ್ಬಕ್ಕ ವೃತ್ತದಿಂದ ಮಧ್ಯಾಹ್ನ 3.00 ಗಂಟೆಗೆ ಉಳ್ಳಾಲದಾದ್ಯಂತ ಶಾಂತಿಗಾಗಿ ಪಾದಯಾತ್ರೆ ನಡೆಯಲಿದೆ ಎಂದು ಉಳ್ಳಾಲದಲ್ಲಿ ತಾತ್ಕಾಲಿಕವಾಗಿ ನಿಯುಕ್ತಿಗೊಂಡ ಠಾಣಾಧಿಕಾರಿ ಶಿವಪ್ರಕಾಶ್ ಹೇಳಿದ್ದಾರೆ. ಅವರು ತಿಂಗಳ ಅವಧಿಯಲ್ಲಿ ನಡೆಯುತ್ತಿರುವ ಕೊಲೆ , ಕೊಲೆಯತ್ನ ಹಾಗೂ ಮತೀಯ ಗಲಭೆಗೆ ಪ್ರಚೋದಿಸುವ ಘಟನೆಗಳನ್ನು ಹತ್ತಿಕ್ಕುವ ಸಲುವಾಗಿ ವಿವಿಧ ಮುಖಂಡರುಗಳ ಸಮ್ಮುಖದಲ್ಲಿ ಮಂಗಳವಾರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಳ್ಳಲಾದ ಶಾಂತಿಸಭೆಯ ನೇತೃತ್ವ ವಹಿಸಿ ಮಾತನಾಡಿದರು. ಉಳ್ಳಾಲದಲ್ಲಿ ಪ್ರಕ್ಷುಬ್ಧ ವಾತಾವರಣ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಅಭಿಪ್ರಾಯದಂತೆ ಶಾಂತಿ ಸಂದೇಶವನ್ನು ಪರಿಣಾಮಕಾರಿಯಾಗಿ ಜನತೆಗೆ ತಲುಪಿಸಲು ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಉಳ್ಳಾಲದ ಕೋಡಿ, ಕೋಟೆಪುರ, ತೊಕ್ಕೊಟ್ಟು, ಮೊಗವೀರಪಟ್ನ ಪ್ರದೇಶದಲ್ಲಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಅಬ್ಬಕ್ಕ ಉತ್ಸವಕ್ಕೆ ಸರಕಾರ ಬಜೆಟ್‍ನಲ್ಲಿ ಅನುದಾನಕ್ಕೆ ಅವಕಾಶ ಕಲ್ಪಿಸಿದ್ದು ಈ ಉತ್ಸವವನ್ನು ಸೌಹಾರ್ಧ, ಸಾಮರಸ್ಯದ ಉತ್ಸವವವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕ ೃತಿ ಇಲಾಖೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಮೇ 7ಹಾಗೂ 8ರಂದು ತೊಕ್ಕೊಟ್ಟಿನ ಖಾಸಗಿ ಸಭಾಂಗಣದಲ್ಲಿ ನಡೆಯಲಿರುವ ಅಬ್ಬಕ್ಕ ಉತ್ಸವ ಪ್ರಯುಕ್ತ ಪೆರ್ಮನ್ನೂರಿನ ಸಂತ ಸೆಬಾಸ್ಟಿಯನ್ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಣಿ ಅಬ್ಬಕ್ಕ ಕ್ರೀಡೋತ್ಸವ ಮತ್ತು ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು. ಅಂತಾರಾಷ್ಟಿ ್ರೀಯ ವೈಟ್‍ಲಿಫ್ಟರ್‍ಶ್ಯಾಮಲಾ ಶೆಟ್ಟಿ ರಾಣಿ ಅಬ್ಬಕ್ಕ ಶಕ್ತಿ ಟ್ರೋಫಿ-2016 ಉದ್ಘಾಟಿಸಿದರು. ರಾಣಿ ಅಬ್ಬಕ್ಕ ಕಲಾವೈಭವ 2016ಕ್ಕೆ ಶಿಕ್ಷಣ ಸಿರಿ ಪ್ರಶಸ್ತಿ ಪುರಸ್ಕ ೃತ ನಿವೃತ್ತ ಶಿಕ್ಷಕಿ ಸಾವಿತ್ರಿ ಎಸ್. ರಾವ್ ಚಾಲನೆ ನೀಡಿದರು. ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಕಾರಣರಾಗುವ ಎಲ್ಲಾ ಆರೋಪಿಗಳಿಗೆ ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಲು ಪೆÇಲೀಸ್ ಇಲಾಖೆಗೆ ಮನವಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದರು. ಅವರು ಉಳ್ಳಾಲದ ಅಹಿತಕರ ಘಟನೆಗೆ ಸಂಬಂ„ಸಿದಂತೆ ತಲವಾರು ಹಲ್ಲೆಯಿಂದ ಮೃತಪಟ್ಟ ಚೆಂಬುಗುಡ್ಡೆಯ ಸಫ್ವಾನ್ ಮನೆಗೆ ಮತ್ತು ಹಲ್ಲೆಗೊಳಗಾದ ಧನರಾಜ್ ಮನೆಗೆ ಭೇಟಿ ನೀಡಿ ಮಾತನಾಡಿದರು. ಉಳ್ಳಾಲ ಕೋಮು ಸಾಮರಸ್ಯವನ್ನು ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸಂಬಂ„ ಪಟ್ಟ ಅ„ಕಾರಿಗಳಿಗೆ ಸೂಚಿಸಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಕೊಡದೆ ಶಾಂತಿ ಕಾಪಾಡಬೇಕು ಮತ್ತು ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಇಲಾಖೆಗೆ ಮಾಹಿತಿ ನೀಡುವ ಕಾರ್ಯ ಮಾಡಬೇಕು ಎಂದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ದ.ಕ. ಜಿಲ್ಲೆಯ ಅಜ್ಮೀರ್ ಎಂದು ಖ್ಯಾತಿ ಪಡೆದಿರುವ ಉಳ್ಳಾಲ ದರ್ಗಾ ಅಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಎರಡು ಪಂಗಡಗಳ ನಡುವೆ ವಾಗ್ದಾಳಿ ನಡೆದು  ತಾರಕಕ್ಕೇರಿ ದರ್ಗಾ ಕಚೇರಿಗೆ ವಕ್ಫ್‍ಬೋರ್ಡ್ ಬೀಗ ಜಡಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಘಟನೆಯ ವಿವರ: ಉಳ್ಳಾಲ ದರ್ಗಾ ಸಮಿತಿಯ ನೂತನ ಸದಸ್ಯರ ಸಭೆಯನ್ನು ಮಂಗಳವಾರ ಕರೆಯಲಾಗಿತ್ತು. ಮಂಗಳವಾರ ಒಂದು ಪಂಗಡದ ಸದಸ್ಯರು ಹಾಜರಾದರೆ, ಉಳ್ಳಾಲ ಖಾಝಿ, ಮಾಜಿ ಅಧ್ಯಕ್ಷ ಹಂಝ ಸೇರಿದಂತೆ ಹಲವು ಮಂದಿ ಗೈರುಹಾಜರಾಗಿದ್ದರು. ಇದರಿಂದ ಬೇಸತ್ತ ಸಭೆ ಸೇರಿದ ಸದಸ್ಯರು ಅಬ್ದುಲ್ ರಶೀದ್‍ರವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದರು. ಬಳಿಕ ಅದೇ ದಿನ ಸಂಜೆ ಉಳ್ಳಾಲ ಖಾಝಿಯವರ ನೇತೃತ್ವದಲ್ಲಿ ಸಭೆ ಸೇರಿದ ಉಳಿದ ಸದಸ್ಯರು ಬುಖಾರಿಯವರನ್ನು ಅಧ್ಯಕ್ಷರನ್ನಾಗಿ ಆರಿಸಿದ್ದರು. ಆದರೆ ಅಬ್ದುಲ್ ರಶೀದ್‍ರವರು ಅಧ್ಯಕ್ಷರ ಕುರ್ಚಿ ಬಿಟ್ಟು ಕೊಡಲು ನಿರಾಕರಿಸಿದ್ದು, ನನಗೆ ಸ್ಪಷ್ಟ ಬಹುಮತವಿದ್ದು, ಬಹುಮತದಿಂದ ಆಯ್ಕೆಯಾಗಿದ್ದೇನೆ ಎಂದಿದ್ದರು. ಇದೇ ವಿಚಾರದಲ್ಲಿ ಎರಡು ಪಂಗಡಗಳ ನಡುವೆ ಜಟಾಪಟಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಬೈಕಿನಲ್ಲಿ ಹೋಗುತ್ತಿದ್ದ ಯುವಕನಿಗೆ ಆರು ಜನ ದುಷ್ಕರ್ಮಿಗಳ ತಂಡ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ತೊಕ್ಕೊಟ್ಟು ಟಿ.ಸಿ.ರೋಡ್ ಮಸೀದಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಟಿ.ಸಿ.ರೋಡ್ ನಿವಾಸಿ ಧನರಾಜ್ (20) ಕೊಲೆ ಯತ್ನಕ್ಕೀಡಾದವರು. ಖಾಸಗಿ ಚಿಟ್ ಫಂಡಿನ ಹಣ ಸಂಗ್ರಹಿಸುವ ಕೆಲಸ ನಿರ್ವಹಿಸುತ್ತಿರುವ ಇವರು ತನ್ನ ಮನೆಯಿಂದ ತೊಕ್ಕೊಟ್ಟು ಕಡೆಗೆ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದ ಸಂದರ್ಭ ಟಿ.ಸಿ.ರೋಡ್ ಸಮೀಪದ ಮಸೀದಿ ಬಳಿ 6 ಮಂದಿ ಅಪರಿಚಿತ ದುಷ್ಕರ್ಮಿಗಳ ತಂಡ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿತ್ತು. ಪವಾಡಸದೃಶವಾಗಿ ಧನರಾಜ್ ಅವರು ಬ್ಯಾಗ್ ಧರಿಸಿದ್ದರಿಂದಾಗಿ ದುಷ್ಕರ್ಮಿಗಳು ಬೀಸಿದ ತಲವಾರು ಏಟು ಮೊದಲು ಬ್ಯಾಗಿಗೆ ತಗಲಿ ಬಳಿಕ ಬೆನ್ನಿಗೆ ತಾಗಿತ್ತು. ಇದರಿಂದ ಧನರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ಮೇಲೆ ದಾಳಿ: ಎ.12 ರಂದು ಅಮಾಯಕ ಮೊಗವೀರ ಮೀನುಗಾರ ರಾಜು ಕೋಟ್ಯಾನ್ ಅವರ ಹತ್ಯೆ ನಡೆದಿತ್ತು. ಘಟನೆ ಸಂಬಂಧಿಸಿ ಉಳ್ಳಾಲದಲ್ಲಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೋಟೆಕಾರು: ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಹಾಗೂ ಅತೀ ಶ್ರೀಮಂತ ಗ್ರಾಮ ಪಂಚಾಯತ್ ಎಂದೇ ಪ್ರಸಿದ್ಧಿಯನ್ನು ಪಡೆದು ಇದೀಗ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿದ ಕೋಟೆಕಾರು ಪಟ್ಟಣ ಪಂಚಾಯತ್‍ನ ಚೊಚ್ಚಲ ಚುನಾವಣೆಯಲ್ಲಿ ಬಿಜೆಪಿಯು 9 ಸ್ಥಾನಗಳನ್ನು ಪಡೆದು ಜಯಭೇರಿ ಸಾಧಿಸಿ ಅಧಿಕಾರಕ್ಕೇರಿದರೆ ಅವಿರೋಧ ಆಯ್ಕೆಗೊಂಡ ಒಂದು ಸ್ಥಾನ ಸೇರಿದಂತೆ 4 ಸ್ಥಾನವನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಇಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಗಳು ಜಯಶಾಲಿಯಾಗಿದ್ದು ಸಿಪಿಐಎಂ ಮತ್ತು ಎಸ್‍ಡಿಪಿಐ ತಲಾ ಒಂದು ಸ್ಥಾನವನ್ನು ಪಡೆದುಕೊಂಡಿದ್ದು ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಮುಖಭಂಗವಾಗಿದೆ. ಅಭ್ಯರ್ಥಿಗಳು ಪಡೆದ ಮತಗಳ ವಿವರ 1ನೇ ವಾರ್ಡ್ : ಭಾರತೀ ರಾಘವ (ಬಿಜೆಪಿ) (ಗೆಲುವು ) : 442 ಶರ್ಮಿಳಾ (ಪಕ್ಷೇತರ,ನಾಗರಿಕ ಸಮಿತಿ) : 232 ಗೆಲುವಿನ ಅಂತರ : 210 2ನೇ ವಾರ್ಡ್ : ಜಯಶ್ರೀ ಪ್ರಫುಲ್ಲದಾಸ್ (ಪಕ್ಷೇತರ, ಬಿಜೆಪಿ ಬಂಡಾಯ)(ಗೆಲುವು): 314 ಮಮತಾ ಮೋಹನ್ (ಬಿಜೆಪಿ) : 268 ಗೆಲುವಿನ ಅಂತರ :…

Read More

ಕಲ್ಲಾಪು: ಮೂವರು ಯುವಕರ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿದ ಕೆಲವು ಗಂಟೆಗಳ ಮಧ್ಯೆ ಬಸ್ಸಿನಿಂದ ಇಳಿದು ಕಲ್ಲಾಪು ಪಟ್ಲದ ಮನೆಗೆ ತೆರಳುತ್ತಿದ್ದ ಬಾಳೆಹಣ್ಣು ವ್ಯಾಪಾರಿಗೆ ಎರಡು ಬೈಕುಗಳಲ್ಲಿ ಬಂದ ಐದು ಮಂದಿಯ ತಂಡ ತಲವಾರಿನಿಂದ ದಾಳಿ ನಡೆಸಿರುವ ಘಟನೆ ಮಂಗಳವಾರ ಸಂಜೆ ಕಲ್ಲಾಪು ಪಟ್ಲ ಎಂಬಲ್ಲಿ ಸಂಭವಿಸಿದೆ. ಕಲ್ಲಾಪು ಪಟ್ಲ ನಿವಾಸಿ ಸಫ್ವಾನ್ (22) ದಾಳಿಗೆ ಒಳಗಾದವರು. ಮಂಗಳೂರಿನ ಕೇಂದ್ರ ಮಾರುಕಟ್ಟೆಯಲ್ಲಿ ತಂದೆ ಜತೆಗೆ ಬಾಳೆಹಣ್ಣು ವ್ಯಾಪಾರ ನಡೆಸುತ್ತಿರುವ ಸಫ್ವಾನ್ ಮಧ್ಯಾಹ್ನ ಕೆಲಸ ಮುಗಿಸಿ ಮನೆ ಕಡೆಗೆ ಹಿಂತಿರುಗುತ್ತಿದ್ದರು. ಕಲ್ಲಾಪು ಬಳಿ ಬಸ್ಸಿನಿಂದ ಇಳಿದು ಒಳಮಾರ್ಗವಾಗಿ ನಡೆದುಕೊಂಡು ಹೋಗುವ ಸಂದರ್ಭ ಎದುರಿನಿಂದ ಎರಡು ಬೈಕುಗಳಲ್ಲಿ ಬಂದ ಐವರು ಮಂದಿ ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಯಕ್ತಿಕ ದ್ವೇಷವೋ ಅಥವಾ ಪ್ರತೀಕಾರದ ಹಿನ್ನೆಲೆಯಲ್ಲಿ ದಾಳಿ ನಡೆದಿರುವ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಸೋಮವಾರ ನಸುಕಿನ ಜಾವ ಮಂಗಳೂರಿನ…

Read More

ಉಳ್ಳಾಲ: ಮತ್ತೆ ಉಳ್ಳಾಲದಲ್ಲಿ ಅಟ್ಟಹಾಸ ಮೆರೆದಿರುವ ದುಷ್ಕರ್ಮಿಗಳು ಸೋಮವಾರ ತಡರಾತ್ರಿ ವೇಳೆ ಕ್ಯಾಟರಿಂಗ್ ಕೆಲಸ ಮುಗಿಸಿ ಮನೆಗೆ ಬೈಕಿನಲ್ಲಿ ಹಿಂತಿರುಗುತ್ತಿದ್ದ ಮೂರು ಮಂದಿಯ ಮೇಲೆ ತಲವಾರು ದಾಳಿ ನಡೆಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ಇಬ್ಬರು ಅಲ್ಪಸ್ವಲ್ಪ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದ್ದು, ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿಲಾರು ನಿವಾಸಿ ಸಫ್ವಾನ್ (20) ಗಂಭೀರವಾಗಿ ಗಾಯಗೊಂಡವರು. ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರ ಜತೆಗಿದ್ದ ಅದೇ ಊರಿನವರೇ ಆದ ನಿಝಾಮ್(19), ಸಲೀಂ(24) ಸ್ವಲ್ಪ ಗಾಯಗೊಂಡು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ವಿವರ: ಮದಕ ಸಮೀಪ ಮದುವೆ ಸಮಾರಂಭದಲ್ಲಿ ಕ್ಯಾಟರಿಂಗ್ ಕೆಲಸದಲ್ಲಿ ಪಾಲ್ಗೊಂಡಿದ್ದ ಸಫ್ವಾನ್, ನಿಝಾಮ್ ಮತ್ತು ಸಲೀಂ ಅವರು ಕ್ಯಾಟರಿಂಗ್ ವಾಹನವನ್ನು ತೊಕ್ಕೊಟ್ಟು ಟಿ.ಸಿ.ರೋಡಿನಲ್ಲಿ ನಿಲ್ಲಿಸಲು ತಡರಾತ್ರಿ ವೇಳೆ ಆಗಮಿಸಿದ್ದರು. ಅಲ್ಲಿ ವಾಹನ ನಿಲ್ಲಿಸಿ ಬೈಕಿನಲ್ಲಿ ಮೂರು ಮಂದಿಯೂ ಜತೆಯಾಗಿ ತೆರಳುವ ತೊಕ್ಕೊಟ್ಟು ಒಳಪೇಟೆಯ ಓವರ್ ಬ್ರಿಡ್ಜ್ ಸಮೀಪ ಅಡಗಿಕುಳಿತ ಸುಮಾರು ಐದು ಮಂದಿ ದುಷ್ಕರ್ಮಿಗಳ…

Read More