ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಹಲವು ದೇಶಗಳನ್ನು ಸುತ್ತಿ ದೇಶಕ್ಕೆ ಸಂವಿಧಾನವನ್ನು ರಚಿಸಿದ ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರನ್ನು ನೆನಪಿಸುವ ಕಾರ್ಯ ಮಹತ್ತರವಾದುದು, ಈ ಮೂಲಕ ಎಲ್ಲರೂ ಒಂದೇ ಅನ್ನುವ ಭಾವನೆ ಮೂಡಬೇಕಿದೆ ಎಂದು ಮಾಜಿ ಶಾಸಕ ಜಯರಾಮ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಯಿಂದ ತೊಕ್ಕೊಟ್ಟು ಕಾಪಿಕಾಡಿನ ಗಾಂಧಿನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ಶತಾಬ್ದಿ ವರ್ಷಾಚರಣೆ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಹಿಳೆಯರಿಗೆ ಸೀರೆ ಮತ್ತು ಮಕ್ಕಳಿಗೆ ಪುಸ್ತಕ ವಿತರಿಸಿ ಮಾತನಾಡಿದರು. ದೇಶದಲ್ಲಿ ಇಸ್ಲಾಂ ಧರ್ಮ ವ್ಯಾಪಿಸಿದ ನಂತರ ಹಿಂದು ಧರ್ಮದ ತತ್ವ, ಸಿದ್ಧಾಂತಗಳು ಹುಟ್ಟಿಕೊಂಡಿತ್ತು. ಆದರೆ ಅದರಲ್ಲಿ ನಿರ್ದಿಷ್ಟ ಸಮುದಾಯದವರು ಸಮಾಜದ ಮುಖ್ಯವಾಹಿನಿಯಲ್ಲಿ ಬಹಳ ಹಿಂದೆ ಬಿದ್ದಿದ್ದರು. ಆದರೆ ಸದ್ಯ ಶಿಕ್ಷಣ ಪಡೆದು ಶಿಕ್ಷಿತರಾದಂತೆ ಹಿಂದುಳಿದವರೆನ್ನುವ ಬೇಧವವನ್ನು ಇಟ್ಟುಕೊಳ್ಳದೆ ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಅಧ್ಯಕ್ಷ…
Author: UllalaVani
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ವೃದ್ಧರೋರ್ವರ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸುವುದನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ , ಅದೇ ಸಿಬ್ಬಂದಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗುರುವಾರ ತಲಪಾಡಿ ಟೋಲ್ ಗೇಟಿನಲ್ಲಿ ನಡೆದಿದೆ. ಕಂದಕ ನಿವಾಸಿ ಹಾಜಿ ರೆಸಿಡೆನ್ಸಿಯ ಮಹಮ್ಮದ್ ಸಾಲಿ ಎಂಬವರ ಪುತ್ರ ಅಬ್ದುಲ್ ಹಮೀದ್ ಸರಾಫತ್ (25) ಹಲ್ಲೆಗೊಳಗಾದವರು. ಕೆಲಸದ ನಿಮಿತ್ತ ಮಂಗಳೂರಿನಿಂದ ಕಾಸರಗೋಡಿಗೆ ಕಾರಿನಲ್ಲಿ ತೆರಳುವ ಸಂದರ್ಭ ಘಟನೆ ನಡೆದಿದೆ. ಮಧ್ಯಾಹ್ನ 2.30 ರ ವೇಳೆ ತಲಪಾಡಿ ಟೋಲ್ ಗೇಟ್ ತಲುಪುತ್ತಿದ್ದಂತೆ ಅಲ್ಲಿ ವಾಹನ ಚಾಲಕ ವೃದ್ಧರೋರ್ವರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು. ಇದನ್ನು ಪ್ರಶ್ನಿಸಿ ಅವರದ್ದು ತಪ್ಪಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ, ಕಾನೂನು ಕೈಗೆತ್ತಿಕೊಂಡು ಹಲ್ಲೆ ನಡೆಸುವುದು ಸರಿಯಲ್ಲ ಎಂದು ತಿಳಿಸಿದ್ದರು. ಇದೇ ವೇಳೆ ಟೋಲ್‍ಗೇಟಿನ ಸುಮಾರು 20 ರಷ್ಟು ಸಿಬ್ಬಂದಿ ಸುತ್ತುವರಿದು ಕೆನ್ನೆಗೆ, ಬೆನ್ನಿಗೆ, ಎದೆಗೆ ಹೊಡೆದು ಕಾಲಿನಿಂದ ತುಳಿದು ಹಲ್ಲೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕಾಗಮಿಸಿದ ಅಪರಿಚಿತರೊಬ್ಬರು…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಬೀರಿ: ಬೋರ್‍ವೆಲ್ ಪೈಪ್ ಹಿಂತೆಗೆಯುವ ಕಾಮಗಾರಿ ವೇಳೆ ಹೈಟೆನ್ಶನ್ ತಂತಿ ತಗಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಟೆಕಾರು ಬೀರಿ ಎಂಬಲ್ಲಿ ಗುರುವಾರ ತಡರಾತ್ರಿ ವೇಳೆ ಸಂಭವಿಸಿದ್ದು, ಘಟನೆಯಲ್ಲಿ ಇನ್ನೋರ್ವ ಯುವಕ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಕೊಣಾಜೆ ಅಡ್ಕರೆಪಡ್ಪು ನಿವಾಸಿ ಹಸೈನಾರ್ ಎಂಬವರ ಪುತ್ರ ಉಸ್ಮಾನ್ (20) ಮೃತ ಯುವಕ. ಕೊಣಾಜೆ ತಿಬ್ಲೆಪದವಿನ ಶರೀಫ್ (25) ಗಾಯಗೊಂಡವರು. ಖಲೀಲ್ ಎಂಬವರು ಗುತ್ತಿಗೆ ಪಡೆದುಕೊಂಡಿದ್ದ ಕೋಟೆಕಾರು ಬೀರಿ ಸಮೀಪ ಬೋರ್ ವೆಲ್ ಪೈಪ್ ಹಿಂತೆಗೆಯುವ ಕಾಮಗಾರಿಯಲ್ಲಿ 6 ಮಂದಿ ಕಾರ್ಮಿಕರು ನಿರತರಾಗಿದ್ದರು. ಸುಮಾರು ನಾಲ್ಕು ಪೈಪುಗಳನ್ನು ಮೇಲಕ್ಕೆತ್ತಿದ್ದ ಉಸ್ಮಾನ್ ಮತ್ತಯ ಶರೀಫ್, ಐದನೇ ಪೈಪನ್ನು ಮೇಲಕ್ಕೆತ್ತುವ ಸಂದರ್ಭ ಪೈಪ್ ಮೇಲಿದ್ದ ಹೈಟೆನ್ಶನ್ ತಂತಿಗೆ ತಗಲಿದೆ. ಪರಿಣಾಮ ಶರೀಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಶರೀಫ್ ಎಂಬವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಪಡೆದು ಅವರು ಅಲ್ಲಿಂದ ತೆರಳಿದ್ದಾರೆ. ಮೃತ ಉಸ್ಮಾನ್ ಹೆತ್ತವರಿಗೆ ಓರ್ವನೇ ಪುತ್ರನಾಗಿದ್ದ. 9 ನೇ ತರಗತಿ ಮುಗಿಸಿದ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಮಾಡೂರು: ಮಾಡೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಶಬರಿ ಫ್ರೆಂಡ್ಸ್ ಮಾಡೂರು ಇದರ ಜಂಟಿ ಸಹಯೋಗದೊಂದಿಗೆ ಯೆನೆಪೋಯ ವಿಶ್ವವಿದ್ಯಾನಿಲಯ ಇದರ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಮತ್ತು ದೇರಳಕಟ್ಟೆ ಯೇನೆಪೋಯ ದಂತ ವೈದ್ಯಕೀಯ ಕಾಲೇಜು ಇದರ ಸಮುದಾಯ ದಂತ ವೈದ್ಯಕೀಯ ವಿಭಾಗದ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಎ.16ರ ಭಾನುವಾರದಂದು ಮಾಡೂರು ಕೊರಗಜ್ಜನ ಕಟ್ಟೆಯ ಬಳಿಯ ಮಾತೃಶ್ರೀ ಕಾಂಪ್ಲೆಕ್ಸ್ ನಲ್ಲಿ ಬೆಳಿಗ್ಗೆ 9.30ರಿಂದ ಮಧ್ಯಾಹ್ನದಿಂದ 12.30ರ ತನಕ ನಡೆಯಲಿದೆ. ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಕ್ಕಳ ತಪಾಸಣೆ, ರಕ್ತದ ಗುಂಪಿನ ವರ್ಗೀಕರಣ ತಪಾಸಣೆ, ಸಕ್ಕರೆ ಕಾಯಿಲೆ, ಗಂಟು,ಎಲುಬು,ಮೂಗು, ಕಿವಿ,ಚರ್ಮಗಳಿಗೆ ಸಂಬಂಧಿಸಿದ ತಪಾಸಣೆ, ಉಚಿತ ದಮತ ತಪಾಸಣೆ ಮತ್ತು ಸಲಹೆ, ಹಲ್ಲುಗಳ ಶುಚಿಕರಣ, ಉಚಿತ ಸೀಳುತುಟಿ ತಪಾಸಣೆ ಮತ್ತು ಚಿಕಿತ್ಸೆ ನಡೆಯಲಿದ್ದು ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ಹಸಿರು ಕಾರ್ಡ್ ಹಾಗೂ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ತೊಕ್ಕೊಟ್ಟು: ಗುಂಡ್ಲುಪೇಟೆ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ ಹಿನ್ನೆಲೆಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟುವಿನಲ್ಲಿ ವಿಜಯೋತ್ಸವ ಆಚರಿಸಲಾಯಿತು. ಈ ವೇಳೆ ಕ್ಷೇತ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ, ಹಿಂದುಳಿದ ವರ್ಗಗಳ ಮುಖಂಡ ಸದಾಶಿವ ಉಳ್ಳಾಲ್, ನಗರಸಭೆ ಅಧ್ಯಕ್ಷ ಹುಸೈನ್ ಕುಂಞÂಮೋನು, ಯುವಕಾಂಗ್ರೆಸ್ ಅಧ್ಯಕ್ಷ ನಝರ್ ಷಾ ಪಟ್ಟೋರಿ, ಕ್ಷೇತ್ರ ಕಾರ್ಯದರ್ಶಿ ರೆಹಮಾನ್ ಕೋಡಿಜಾಲ್, ಕೊಣಾಜೆ ಪಂ. ಅಧ್ಯಕ್ಷ ಶೌಕತ್ ಅಲಿ, ತಾ.ಪಂ ಮಾಜಿ ಸದಸ್ಯ ಮುಸ್ತಾಫ ಹರೇಕಳ, ನಗರಸಭೆ ಸದಸ್ಯರಾದ ಮುಸ್ತಾಫ ಅಬ್ದುಲ್ಲಾ, ಬಾಝಿಲ್ ಡಿಸೋಜಾ, ಯು.ಎ.ಇಸ್ಮಾಯಿಲ್, ಸುಹಾಸಿನಿ ಬಬ್ಬುಕಟ್ಟೆ, ತಾ.ಪಂ ಸದಸ್ಯೆ ಸುರೇಖಾ ಚಂದ್ರಹಾಸ್, ಸುರೇಶ್ ಭಟ್ನಗರ, ವಿಲ್ಮಾ ಆಲ್ಫ್ರೆಡ್ ಡಿಸೋಜಾ, ಕಬೀರ್ ಉಳ್ಳಾಲ, ದೀಪಕ್ ಉಳ್ಳಾಲ್, ನಾಸೀರ್ ಟಿ.ಎಸ್ ಮೊದಲಾದವರು ಉಪಸ್ಥಿತರಿದ್ದರು.
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ : ಮಿಹ್ರಾಜ್ ಜುಮಾ ಮಸೀದಿ ಮತ್ತು ಅಲ್ ಅಮೀನ್ ಸ್ವಲಾತ್ ಕಮಿಟಿ ಮಾರ್ಗತಲೆ ಇದರ ಜಂಟಿ ಆಶ್ರಯದಲ್ಲಿ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಇವರ ದುವಾ ಆಶೀರ್ವಾದದೊಂದಿಗೆ 2 ದಿನಗಳ ಧಾರ್ಮಿಕ ಪ್ರವಚನ ಮತ್ತು ಸ್ವಲಾತ್ ವಾರ್ಷಿಕ, ಬೃಹತ್ ಮುಂಜಿ (ಸುನ್ನತ್) ಕಾರ್ಯಕ್ರಮ ಮತ್ತು ಸನ್ಮಾನ ಸಮಾರಂಭ ಎಪ್ರಿಲ್ 16 ರಿಂದ 18 ರ ವರೆಗೆ ಮಾರ್ಗತಲೆ ಮಸೀದಿ ವಠಾರದಲ್ಲಿ ನಡೆಯಲಿದೆ. 16-04 ರವಿವಾರ ಬೆಳಿಗ್ಗೆ 9 ಗಂಟೆಗೆ ಉಚಿತ ಮುಂಜಿ ಕಾರ್ಯಕ್ರಮದ ನಡೆಯಲಿದೆ. ಇಶಾ ನಮಾಝಿನ ಬಳಿಕ ಅಲ್ಹಾಜ್ ಎಂ.ಪಿ ಹಸನ್ ಮುಅಲ್ಲಿಂ ಅವರಿಂದ ಪ್ರವಾದಿ ಪ್ರೇಮ ಎಂಬ ವಿಷಯದ ಕುರಿತು ಮತ ಪ್ರಭಾಷನ ನಡೆಯಲಿದೆ.17-04 ಸೋಮವಾರ ಇಶಾ ನಮಾಝಿನ ಬಳಿಕ ಟಿ.ಎಂ ಮುಹಿಯದ್ದೀನ್ ಕಾಮಿಲ್ ಸಖಾಫಿ ಅವರಿಂದ ಮತ ಪ್ರಭಾಷನ ನಡೆಯಲಿದೆ. 18-04 ಮಂಗಳವಾರ ಇಶಾ ನಮಾಝಿನ ಬಳಿಕ ಅಸ್ಸಯ್ಯದ್ ಶಿಹಾಬುದ್ದೀನ್ ಸಖಾಫಿ ಅಲ್ ಹೈದ್ರೋಸಿ, ಕಿಲ್ಲೂರ್ ತಂಙಳ್ ರವರ ನೇತೃತ್ವದಲ್ಲಿ ಬ್ರಹತ್…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಸಮಾಜ ಹಣ ಮತ್ತು ಅಧಿಕಾರದ ಹಿಂದೆ ಬಿದ್ದಿರುವುದರಿಂದ ಮಾನವೀಯತೆಗೆ ಬೆಲೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಮಾಜಕ್ಕೆ ಬಹಳಷ್ಟು ತೊಂದರೆಗಳಿದ್ದು, ಅದನ್ನು ಹೋಗಲಾಡಿಸುವ ಪ್ರಯತ್ನ ಯುವ ಸಮುದಾಯದಿಂದ ಆಗಬೇಕಿದೆ ಎಂದು ಕರ್ನಾಟಕ ರಾಜ್ಯದ ನಿವೃತ್ತ ಲೋಕಾಯುಕ್ತ ಡಾ. ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ. ಅವರು ದೇರಳಕಟ್ಟೆ ನಿಟ್ಟೆ ವೈದ್ಯಕೀಯ ವಿಶ್ವವಿದ್ಯಾನಿಯದ ಕ್ಷೇಮ ಆಡಿಟೋರಿಯಂನಲ್ಲಿ ಬುಧವಾರ ನಡೆದ ವಾಕ್ ಮತ್ತು ಶ್ರವಣ ವಿಭಾಗದ ವಿದ್ಯಾರ್ಥಿಗಳ 7ನೇ ವರ್ಷದ ಘಟಿಕೋತ್ಸವದಲ್ಲಿ ಪದವಿ ಪ್ರಧಾನವನ್ನು ಮಾಡಿ ಮಾತನಾಡಿದರು. ಲೋಕಾಯುಕ್ತನಾಗಿ ಕರ್ತವ್ಯ ನಿರ್ವಹಿಸಿದ ಸಂದರ್ಭ ಸಮಾಜದಲ್ಲಿ ಮೌಲ್ಯಗಳ ಕುಸಿತ ಹಾಗೂ ಮಾನವೀಯತೆಯ ಕೊರತೆ ಇರುವುದನ್ನು ಮನಗಂಡಿದ್ದೇನೆ. ಈ ನಿಟ್ಟಿನಲ್ಲಿ ಬದ್ಧತೆಯ ಸಮಾಜ ನಿರ್ಮಾಣ ಆಗಬೇಕಿದೆ. ಅದಕ್ಕಾಗಿ ಯುವ ಸಮುದಾಯ ಮಾನವೀಯತೆಯನ್ನು ಪ್ರತಿಪಾದಿಸುವುದರ ಮೂಲಕ ಕರ್ತವ್ಯಗಳಲ್ಲಿ ಪಾಲ್ಗೊಳ್ಳಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನಿಟ್ಟೆ ವಿ.ವಿ ಉಪಕುಲಾಧಿಪತಿ ಡಾ. ಶಾಂತಾರಾಮ ಶೆಟ್ಟಿ ಮಾತನಾಡಿ ಸಮಾಜದಲ್ಲಿ ಶೇ.1.83 ರಷ್ಟು ಮಂದಿ ಅಂಗವೈಕಲ್ಯತೆ ಜತೆಗೆ ಬಾಳುತ್ತಿದ್ದಾರೆ. ಅದರಲ್ಲಿಯೂ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಕಲಿಕೆ ಮತ್ತು ಮಾರ್ಕುಗಳ ಧ್ಯಾನದಲ್ಲೇ ಹೆತ್ತವರು ಮಕ್ಕಳನ್ನು ಒತ್ತಡಕ್ಕೆ ಹೇರುವ ಸಂದರ್ಭ, ಅವರಲ್ಲಿರುವ ಪ್ರತಿಭೆಗಳಿಗೆ ಪ್ರೋತ್ಸಾಹಿಸಿ ಅದನ್ನು ಬೆಳೆಸಲು ಚಿಗುರು ಶಿಬಿರ ಸಹಕಾರಿಯಾಗಿದೆ ಎಂದು ಕುಂಪಲ ಕೇಸರಿ ಸೇವಾ ಟ್ರಸ್ಟಿನ ಸ್ಥಾಪಕಾಧ್ಯಕ್ಷ ನಾರಾಯಣ ಕುಂಪಲ ಅಭಿಪ್ರಾಯಪಟ್ಟರು. ಅವರು ಚಿತ್ತಾರ ಪ್ರತಿಷ್ಠಾನ ಪಿಲಾರು ದಾರಂದಬಾಗಿಲು ಹಾಗೂ ಕುಂಪಲದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ 13 ನೇ ವರ್ಷದ ಚಿಗುರು ಶಾಲಾ ಮಕ್ಕಳಿಗಾಗಿ ಬೇಸಿಗೆ ಶಿಬಿರಕ್ಕೆ ಗುರುವಾರ ಉದ್ಘಾಟಿಸಿ ಮಾತನಾಡಿದರು. ಶಿಬಿರದಿಂದ ಪ್ರತಿಭೆಗಳಿಗೆ ಹೊಸ ದಿಕ್ಕು ನೀಡುವ ಪ್ರಯತ್ನ ಆಗಿದೆ. ಓದು, ಮಾರ್ಕುಗಳಿಗೆ ಮಾತ್ರ ಸೀಮಿತವಾಗಿರುವ ವಿದ್ಯಾರ್ಥಿಗಳಿಗೆ ಪ್ರತಿಭೆಯನ್ನು ಹೊರಹೊಮ್ಮಲು ಇದೊಂದು ಉತ್ತಮ ಅವಕಾಶವಾಗಿದ್ದು, ಪ್ರೇರಣಾದಾಯಿಯಾಗಿ ಬೆಳೆಯುವ ಸಲುವಾಗಿ ಮಕ್ಕಳು ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವ ಅಗತ್ಯತೆ ಇದೆ ಎಂದರು. ಮಂಗಳೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ನವೀನ್ .ಎನ್ ಕೊಣಾಜೆ , ಚಲನಚಿತ್ರ ನಟ ಹಾಗೂ ಖ್ಯಾತ ಮಿಮಿಕ್ರಿ ಕಲಾವಿದ ವಿಸ್ಮಯ ವಿನಾಯಕ್,…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಕಾಸರಗೋಡು, ದಕ್ಷಿಣ ಕನ್ನಡ ಸೇರಿದಂತೆ ಕೊಡಗು ಜಿಲ್ಲೆಗಳ ಹಲವಾರು ಪ್ರಧಾನ ದೇವಸ್ಥಾನಗಳ ಪ್ರಧಾನ ತಂತ್ರಿವರ್ಯರಾದ ಬ್ರಹ್ಮಶ್ರೀ ನೀಲೇಶ್ವರ ಕೀಕಾಂಗೋಟ್ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು (ಹಿರಿಯ) (73) ಎ.11ರಂದು ಮಂಗಳವಾರ ನಿಧನ ಹೊಂದಿದರು. ಉಚ್ಚಿಲ ಕೋಟೆ ಶ್ರೀ ಮಹಾವಿಷ್ಣು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಆಗಿದ್ದ ಪದ್ಮನಾಭ ತಂತ್ರಿವರ್ಯರು ಕಳೆದ 53 ವರ್ಷಗಳಿಂದ ಪರಂಪರಾಗತವಾದ ತಂತ್ರಸ್ಥಾನವನ್ನು ನಡೆಸಿಕೊಂಡು ಬರುವ ಮೂಲಕ ಪ್ರಸಿದ್ಧಿಯನ್ನು ಪಡೆದಿದ್ದರು. ಸುಮಾರು 900 ವರ್ಷಗಳ ಹಿಂದೆ ಉಚ್ಚಿಲದಿಂದ ನೀಲೇಶ್ವರಕ್ಕೆ ಸ್ಥಳಾಂತರಗೊಂಡಿದ್ದ ಇವರ ಹಿರಿಯರಿಂದ ನೀಲೇಶ್ವರ ತಂತ್ರಿವರ್ಯರು ಎನ್ನುವ ಹೆಸರು ಬಂದಿದ್ದು, ಬಳಿಕ ಉಚ್ಚಿಲದಲ್ಲಿ ನೆಲೆ ನಿಂತು ಕೇರಳ ಆಗಮ ಶಾಸ್ತ್ರಕ್ಕನುಸಾರವಾಗಿ, ತಂತ್ರಸ್ಥಾನವನ್ನು ಕ್ಷೇತ್ರ ಆಚಾರ ನಿಯಮಗಳನ್ನು ಪಾಲಿಸಿಕೊಂಡು ಬಂದ ಹಿನ್ನಲೆಯಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಕೊಡಗು, ಜಿಲ್ಲೆಗಳ ಹಲವಾರು ಪ್ರಧಾನ ದೇವಸ್ಥಾನಗಳ ಬ್ರಹ್ಮಕಲಶೋತ್ಸವ, ಪ್ರತಿಷ್ಠಾ ಕಾರ್ಯ ಮತ್ತು ಉತ್ಸವಗಳನ್ನು ನಡೆಸಿಕೊಂಡು ಬರುವ ಮೂಲಕ ಪ್ರಸಿದ್ಧಿಯನ್ನು ಪಡೆದಿದ್ದರು. ವೈಧಿಕದೊಂದಿಗೆ ವಿಶ್ವ ಹಿಂದೂ ಪರಿಷತ್ನ ಉಳ್ಳಾಲ ವಲಯ…
ಉಳ್ಳಾಲ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಪರಿಶಿಷ್ಟ ಸಮುದಾಯದವರು ಸ್ವಾವಲಂಬಿಯಾಗಿ ಬದುಕಲು ಮತ್ತು ತಮ್ಮ ಹಕ್ಕುಗಳನ್ನು ಪಡೆಯುವ ಸಲುವಾಗಿ ಬಿಜೆಪಿ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಸಮಾಜದಲ್ಲಿ ಹಿಂದುಳಿದವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಇದಾಗಿದೆ ಎಂದು ಮಾಜಿ ಶಾಸಕ ಜಯರಾಮ ಶೆಟ್ಟಿ ಹೇಳಿದರು. ಅವರು ಪಂಡಿತ್ ದೀನ್ ದಯಾಳ್ ಉಪಾಧ್ಯಯರ ಜನ್ಮಶತಾಬ್ಧಿ ವರ್ಷಾಚರಣೆ ಪ್ರಯುಕ್ತ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಮಹಿಳಾ ಮೋರ್ಚಾ ಮತ್ತು ಮುನ್ನೂರು ಗ್ರಾಮ ಸಮಿತಿಯ ಜಂಟಿ ಆಶ್ರಯದಲ್ಲಿ ಮುನ್ನೂರು ಗ್ರಾಮದ ಮಾಯಿಲ ಎಂಬವರ ಮನೆ ಎದುರುಗಡೆ ಬುಧವಾರ ಹಮ್ಮಿಕೊಂಡಿದ್ದ ಪರಿಶಿಷ್ಠ ಜಾತಿ ಪಂಗಡದ ಕುಟುಂಬಗಳಿಗೆ ಸರಕಾರಿ ಸವಲತ್ತುಗಳ ಬಗ್ಗೆ ಮಾಹಿತಿ ಮತ್ತು ಬಿಸು ಆಚರಣೆ, ಸ್ವಚ್ಛತಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮಾಜದಲ್ಲಿ ಶಿಕ್ಷಣ ಪಡೆದವರು ಹಿಂದುಳಿಯಲು ಸಾಧ್ಯವಿಲ್ಲ. ಹಿಂದುಳಿದವರು ಅನ್ನುವ ಪ್ರಮೇಯವೇ ಸಮಾಜದಲ್ಲಿ ಇರದಂತೆ, ಎಲ್ಲರೂ ಹಿಂದು ಸಮುದಾಯದವರಾಗಿ ಬಾಳುವಂತ ವಾತಾವರಣ ನಿರ್ಮಾನ ಆಗಬೇಕಿದೆ. ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಅರಿವಿನ ಜತೆಗೆ ಅವರ…

