ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ತುಳುನಾಡ ರಕ್ಷಣಾ ವೇದಿಕೆ ಇದರ ಮಂಗಳೂರು ವಿಧಾನಸಭಾ ಕ್ಷೇತ್ರದ ಕಚೇರಿ ಉದ್ಘಾಟನಾ ಸಮಾರಂಭ ಹಾಗೂ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅಸಂಘಟಿತ ಕಾರ್ಮಿಕರಿಗೆ ವಿಮಾ ಕಾರ್ಡು ವಿತರಣಾ ಕಾರ್ಯಕ್ರಮ ಹಾಗೂ ಅಪಘಾತ ಜೀವರಕ್ಷಕ ಯೋಜನೆಯ ಮಾಹಿತಿ ಶಿಬಿರ ಮಾ.17ರ ಸಂಜೆ 4.00ಕ್ಕೆ ದೇರಳಕಟ್ಟೆಯಲ್ಲಿ ನಡೆಯಲಿದೆ ಎಂದು ತು.ರ.ವೇ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಹೇಳಿದ್ದಾರೆ. ತೊಕ್ಕೊಟ್ಟು ಖಾಸಗಿ ಹೊಟೇಲಿನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು. ಸಾರ್ವಜನಿಕ ಜೀವನದಲ್ಲಿ ಬೇಧ ಭಾವ ರಹಿತರಾಗಿ ಸಮಾಜದಲ್ಲಿ ಸಾಮರಸ್ಯ ತರಲು ತು.ರ.ವೇ ಶ್ರಮಿಸುತ್ತಾ ಬಂದಿದೆ. ಪತ್ರಕರ್ತರ ಹಲ್ಲೆ ಖಂಡಿಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಹೋರಾಟ, ಮೆಡಿಕ್ಲೈಮ್ ಕಂಪೆನಿಗೆ ಮುತ್ತಿಗೆ, ಮುಡಿಪು ಇನ್ಫೋಸಿಸ್ ವಠಾರದಲ್ಲಿ ಕೊಳವೆ ಬಾವಿ ವಿರೋಧಿಸಿ ಹೋರಾಟ, ಕಲ್ಲಾಪುವಿನಿಂದ ತಲಪಾಡಿವರೆಗೆ ಹೆದ್ದಾರಿ ಪ್ರಾಧಿಕಾರ 60 ಮೀ. ಹೆಚ್ಚುವರಿ ಅಗಲೀಕರಣದ ವಿರುದ್ಧ ಹೋರಾಟ, ಹೆದ್ದಾರಿ ವಶಪಡಿಸಿಕೊಂಡ ಜಾಗದ ಮಾರುಕಟ್ಟೆ ದರ ಹೆಚ್ಚಳ, ಜೆಪ್ಪು…
Author: UllalaVani
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಬೆಂಗಳೂರು: ರಾಜ್ಯ ವಿಧಾನಮಂಡಲ ಸಭೆಯಲ್ಲಿ ಬುಧವಾರ ನಡೆದ 2017-18ರ ಬಜೆಟಿನಲ್ಲಿ 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನಾಗಿ ಮಾಡುವ ಘೋಷಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ರಾಜ್ಯದ ಹೊಸ ತಾಲೂಕುಗಳ ವಿವರವನ್ನು ಇಲ್ಲಿ ನೀಡಲಾಗಿದೆ. ದಕ್ಷಿಣ ಕನ್ನಡ- ಮೂಡಬಿದರೆ, ಕಡಬ ಉಡುಪಿ-ಬ್ರಹ್ಮಾವರ, ಕಾಪು, ಬೈಂದೂರು ಕೊಪ್ಪಳ-ಕುಕನೂರು, ಕನಕಗಿರಿ, ಕಾರಟಗಿ ಬಾಗಲಕೋಟೆ-ಗುಳೇದ ಗುಡ್ಡ, ರಬಕವಿ, ಬನಹಟ್ಟಿ, ಬೆಳಗಾವಿ-ನಿಪ್ಪಾಣಿ, ಮೂಡಲಗಿ, ಕಾಗವಾಡ ಚಾಮರಾಜನಗರ-ಹನೂರು ದಾವಣಗೆರೆ-ನ್ಯಾಮತಿ ಬೀದರ್-ಚಿಟಗುಪ್ಪ, ಹುಲಸೂರು, ಕಮಲಾನಗರ ಬಳ್ಳಾರಿ-ಕುರುಗೋಡು, ಕೊಟ್ಟೂರು, ಕಂಪ್ಲಿ ಧಾರವಾಡ-ಅಣ್ಣಿಗೇರಿ, ಅಳ್ನಾವರ, ಹುಬ್ಬಳ್ಳಿ ನಗರ ಗದಗ-ಗಜೇಂದ್ರಗಡ, ಲಕ್ಷ್ಮೇಶ್ವರ ಕಲಬುರಗಿ-ಕಾಳಗಿ, ಕಮಲಾಪುರ, ಯಡ್ರಾಮಿ, ಶಹಾಭಾದ್ ಯಾದಗಿರಿ-ಹುಣಸಗಿ, ವಡಗೆರ, ಗುರುಮಿಟ್ಕಲ್ ರಾಯಚೂರು – ಮಸ್ಕಿ, ಸಿರಾವರ ಬೆಂಗಳೂರು ನಗರ -ಯಲಹಂಕ ವಿಜಯಪುರ-ಬಬಲೇಶ್ವರ, ನಿಡಗುಂದಿ, ತಿಕೋಟ, ದೇವರಹಿಪ್ಪರಗಿ, ತಾಳಿಕೋಟೆ, ಚಡಚಣ, ಕೋಲ್ಹಾರ ಹಾವೇರಿ-ರಟ್ಟಿಹಳ್ಳಿ ಮೈಸೂರು-ಸರಗೂರು ಚಿಕ್ಕಮಗಳೂರು-ಅಜ್ಜಂಪುರ ಉತ್ತರ ಕನ್ನಡ-ದಾಂಡೇಲಿ ಕೋಲಾರ – ಕೆಜಿಎಫ್ ತಾಲೂಕು ಕೇಂದ್ರಗಳನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಮಲ್ಪೆ ಮತ್ತು ಮಂಗಳೂರು ಮೀನುಗಾರಿಕೆ ಬಂದರುಗಳಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ದೋಣಿಗಳ ಸುರಕ್ಷಿತ ಇಳಿದಾಣಕ್ಕಾಗಿ 75 ಮೀ. ಉದ್ದದವರೆಗೆ ಜಟ್ಟಿ ವಿಸ್ತರಣೆ ಇದು ಈ ಸಾಲಿನ ಬಜೆಟಿನ ಮುಖ್ಯಾಂಶಗಳು ಮೀನುಗಾರರ ಸಹಕಾರ ಸಂಘಗಳಿಗೆ ತಮ್ಮ ಸ್ವಂತ ನಿವೇಶನದಲ್ಲಿ ಕನಿಷ್ಠ 500 ಚದರಡಿಯ ಮೀನು ಸಂಗ್ರಹಣೆ ಹಾಗೂ ಮಾರುಕಟ್ಟೆ ಕಟ್ಟಡ ನಿರ್ಮಿಸಲು ಶೇ. 75 ರಷ್ಟು ಸಹಾಯಧನ ಹಾಗೂ ಘಟಕ ವೆಚ್ಚ 10 ಲಕ್ಷ ರೂ.; ಪ್ರಸಕ್ತ ಸಾಲಿನಲ್ಲಿ 20 ಕಟ್ಟಡಗಳ ನಿರ್ಮಾಣ, “ಮತ್ಸ್ಯ ಕೃಷಿ ಆಶಾ ಕಿರಣ” ಯೋಜನೆಯಡಿ ಪ್ರಮುಖ ಕೆರೆಗಳ 2,500 ಹೆಕ್ಟೆರ್ ಪ್ರದೇಶದಲ್ಲಿ ಹೆಕ್ಟೆರ್‍ಗೆ 4,000 ಬಲಿತ ಮೀನುಮರಿ ಹಾಗೂ 2 ಟನ್ ಕೃತಕ ಆಹಾರ ಖರೀದಿಗೆ ಘಟಕ ವೆಚ್ಚದ ಶೇ.50ರಷ್ಟು ಹಾಗೂ ಗರಿಷ್ಟ 27,000 ರೂ. ನೀಡಲು ಕ್ರಮ – 6.75 ಕೋಟಿ ರೂ. ಇನ್ನು ಕೃಷಿಕರಿಗೆ ಅವರ ಜಮೀನುಗಳಲ್ಲಿ ಕೊಳ ನಿರ್ಮಿಸಿ ಸಾಂದ್ರೀಕೃತ ಮೀನು ಕೃಷಿ ಕೈಗೊಳ್ಳಲು…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ನಿಟ್ಟೆ ವಿಶ್ವವಿದ್ಯಾನಿಯದಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವ ನಿಟ್ಟಿನಲ್ಲಿ ಉತ್ತಮ ಮೂಲಭೂತ ಸೌಕರ್ಯವನ್ನು ಒದಗಿಸಲಾಗುತ್ತಿದೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಪ್ರೊ. ಶಾಂತಾರಾಮ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ನಿಟ್ಟೆ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ವೈದ್ಯಕೀಯ ಮತ್ತು ದಂತ ಕಾಲೇಜುಗಳ ದಕ್ಷಿಣ ಭಾರತ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟ `7ನೇ ನಿಟ್ಟೆ ಎಕೊಲೇಡ್ಸ್ 2017’ಕ್ಕೆ ಚಾಲನೆ ನೀಡಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಉತ್ತಮ ಮೈದಾನ ನಿರ್ಮಾಣ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ಕೆಲಸ ಸಂಸ್ಥೆಯ ವತಿಯಿಂದ ನಡೆದಿದೆ. ನಿಟ್ಟೆ ಎಕೋಲೆಡ್ಸ್‍ಂತಹ ಕ್ರೀಡಾಕೂಟದಲ್ಲಿ ವೈದ್ಯಕೀಯ ಕ್ಷೇತ್ರದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳವುದರ ಮೂಲಕ ಶಿಕ್ಷಣದೊಂದಿಗೆ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇಮದ ಡೀನ್ ಡಾ| ಸತೀಶ್ ಕುಮಾರ್ ಭಂಡಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೇಜರ್…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: `ಹೇ ಬೋಳಿಮಕ್ಳಾ ನಗ್ತಾ ಇದ್ದೀರಾ?’ ಹೀಗೆಂದು ಕಿರಿಕ್ ಪಾರ್ಟಿ ಚಿತ್ರದ ನಟ ರಕ್ಷಿತ್ ಶೆಟ್ಟಿ ಕೇಳ್ತಾ ಇದ್ದಾಗ ಅಲ್ಲಿ ಸೇರಿದ್ದ ವಿದ್ಯಾರ್ಥಿಗಳೆಲ್ಲ ಎದ್ದೂಬಿದ್ದು ನಗಲಾರಂಭಿಸಿದರು. ಅಷ್ಟಕ್ಕೂ ಅವರು ಈ ರೀತಿ ಕಿರಿಕ್ ಮಾಡಲು ಕಾರಣವೂ ಇದೆ. ಹಾಗಾದರೆ ಈ ಸ್ಟೋರಿ ಓದಿ. ನಿಟ್ಟೆ ಸಂವಹನ ಕಾಲೇಜು ದೇರಳಕಟ್ಟೆಯ ಪಾನೀರು ಕ್ಯಾಂಪಸ್ಸಿನಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರಮಟ್ಟದ ವಿಚಾರಸಂಕಿರಣ ಮತ್ತು ಬೀಕಾನ್ಸ್ -2ಕೆ17 ಮೀಡಿಯಾ ಉತ್ಸವದ ಪ್ರಯುಕ್ತ ವಿದ್ಯಾರ್ಥಿಗಳ ಜತೆಗೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭ ವಿದ್ಯಾರ್ಥಿನಿಯೋರ್ವಳು, `ಏನಾದ್ರೂ ಡೈಲಾಗ್ ಹೇಳಿ ಸರ್’ ಎಂದಾಗ ರಕ್ಷಿತ್ ಅವರು ಒಮ್ಮಿಂದೊಮ್ಮೆಲೆ, `ಹೇ ಬೋಳಿಮಕ್ಳಾ ನಗ್ತಾ ಇದ್ದೀರಾ?’ ಎಂದು ಕೇಳಿದರು. ನಗೆಗಡಲಿನಲ್ಲಿ ಸಂವಾದವನ್ನು ಮುಂದುವರಿಸಿದ ನಟ ರಕ್ಷಿತ್ ಶೆಟ್ಟಿಗೆ ವಿದ್ಯಾರ್ಥಿಗಳು ಹಲವು ಪ್ರಶ್ನೆಗಳನ್ನು ಮುಂದಿಟ್ಟರು. ಪುತ್ತೂರಿನ ಚಿತ್ರಮಂದಿರದಲ್ಲಿ ಕಿರಿಕ್ ಪಾರ್ಟಿ ಚಿತ್ರ ಪ್ರದರ್ಶನವಾಗದೆ, ಊರಿನ ಜನರಿಗೆ ಚಿತ್ರ ವೀಕ್ಷಿಸಲು ಸಾಧ್ಯವಾಗಿಲ್ಲ, ಕನ್ನಡ ಚಿತ್ರಗಳು ಉಳಿದ ರಾಜ್ಯಗಳಲ್ಲಿ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿಯ ಮೇಲೆ ಕುಳಿತಿದ್ದ ಅಪರಿಚಿತ ವ್ಯಕ್ತಿಯೊಬ್ಬನಿಗೆ ರೈಲು ಬಡಿದು ಮೃತಪಟ್ಟ ಘಟನೆ ತೊಕ್ಕೊಟ್ಟು ಒಳಪೇಟೆಯ ರೈಲ್ವೇ ಹಳಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಈತ ಕುಡಿದ ಮತ್ತಿನಲ್ಲಿ ತೂರಾಡುತ್ತಾ ರೈಲ್ವೇ ಹಳಿಯ ಮೇಲೆ ಕುಳಿತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ವೇಳೆ ಮಂಗಳೂರಿನಿಂದ ತಿರುವನಂತಪುರಂ ಕಡೆಗೆ ಸಾಗುತ್ತಿದ್ದ ರೈಲು ಅಪರಿಚಿತ ವ್ಯಕ್ತಿಗೆ ಡಿಕ್ಕಿಯಾಗಿದೆ. ಈ ನಡುವೆ ಹಳಿಯ ಮೇಲೆ ವ್ಯಕ್ತಿಯೊಬ್ಬ ಕುಳಿತಿರುವುದನ್ನು ಗಮನಿಸಿದ ಚಾಲಕ ರೈಲಿನ ವೇಗ ಕಡಿತಗೊಳಿಸಿದ್ದು, ಆದರೆ ಅದಾಗಲೇ ರೈಲು ವ್ಯಕ್ತಿಗೆ ಢಿಕ್ಕಿಯಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಮಧ್ಯೆ ರೈಲು ಕೂಡ ಅನತಿ ದೂರ ಸಾಗಿ ನಿಂತಿದ್ದು, ಸುಮಾರು ಅರ್ಧ ಘಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಮೃತವ್ಯಕ್ತಿ ಯಾರೆಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಆದರೆ ರೈಲು ನಿಲ್ಲಿಸಿ ಕುಡುಕನ ಪ್ರಾಣ ಉಳಿಸಲು ಯತ್ನಿಸಿದ ಚಾಲಕನ ಸಮಯಪ್ರಜ್ಞೆ ವಿಶೇಷವಾಗಿತ್ತು. ಉಳ್ಳಾಲ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೆ.ಸಿ.ರೋಡು: ಮಂಗಳೂರಿನ ಕುರಿತು ಹೊರಗಿನ ಜನತೆಗೆ ವಾತಾವರಣ ಸ್ಪಷ್ಟವಾಗಿಲ್ಲ, ಈ ನಿಟ್ಟಿನಲ್ಲಿ ಇಲ್ಲಿನ ಜನರಲ್ಲಿ ಮಾನಸಿಕ ಹಾಗೂ ಭೌತಿಕ ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಚರ್ಚ್, ಮಸೀದಿ, ದೇವಸ್ಥಾನಗಳ ಸ್ಥಾಪನೆಯ ಬದಲು ಗ್ರಂಥಾಲಯಗಳ ಸ್ಥಾಪನೆಯಾಗಬೇಕಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ ಹಾಗೂ ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಹೇಳಿದ್ದಾರೆ. ಅವರು ಯುನೈಟೆಡ್ ಸೋಶಿಯಲ್ ವೆಲ್ಫೇರ್ ಆಗ9ನೈಝೇಶನ್ ಇದರ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಕೆ.ಸಿ.ರೋಡು ಜಂಕ್ಷನ್ನಿನಲ್ಲಿ ಭಾನುವಾರ ಚಾಲನೆ ನೀಡಿ ಮಾತನಾಡಿದರು. ಪುಸ್ತಕದಿಂದ ಮಾತ್ರ ಜ್ಞಾನ ವೃದ್ಧಿಸಲು ಸಾಧ್ಯ. ಧವರ್i ದೇವಾಲಯಗಳ ಬದಲು ಅಲ್ಲಲ್ಲಿ ಗ್ರಂಥಾಲಯಗಳ ಸ್ಥಾಪನೆಯಿಂದ ಮಕ್ಕಳು ಪುಸ್ತಕಗಳನ್ನು ಓದುವ ಮೂಲಕ ಜ್ಞಾನವನ್ನು ವೃದ್ಧಿಸುವುದರ ಜತೆಗೆ ಸಮಾಜಕ್ಕೆ ಪೂರಕವಾಗಿರುವ ವಾತಾವರಣದಲ್ಲಿ ಬೆಳೆದು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯ ಎಂದ ಅವರು ಜನರಲ್ಲಿ ರಾಜಕೀಯ ಆಸಕ್ತಿಗಳು ಇರಬೇಕು. ಆದರೆ ರಾಜಕೀಯಪ್ರೇರಿತ ಚಟುಟವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ತಮ್ಮ ಹಕ್ಕುಗಳನ್ನು ಪಡೆಯುವ ಜ್ಞಾನ ನಾಗರೀಕರಲ್ಲಿ ಇಲ್ಲವಾಗಿದೆ. ಸರಕಾರಿ ಪಾರದರ್ಶಕತೆಯನ್ನು ಚರ್ಚಿಸುವ ಮೂಲಕ ವೈಚಾರಿಕತೆಯ…
ತೊಕ್ಕೊಟ್ಟು :ಸೌಹಾರ್ದತೆ ಉಳಿಸುವಲ್ಲಿ ಕ್ರೀಡೆ ಒಂದು ಭಾಗವಾಗಿದ್ದು, ಈ ನಿಟ್ಟಿನಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ ಬೇಕಿದೆ. ಇದರಿಂದ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಲು ಸಾಧ್ಯ ಎಂದು ಅಂತಾರಾಷ್ಟ್ರೀಯ ವೈಟ್ ಲಿಫ್ಟರ್ ಗೀತಾ ಬೈ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟು ಮಂಗಳೂರು ವನ್ ಶಾಲೆ ಕ್ರೀಡಾಂಗಣದಲ್ಲಿ ಜರಗಿದ ಡಿ ವೈ ಎಫ್ ಐ ನ ಉಳ್ಳಾಲ ವಲಯ ಮಟ್ಟದ ಸಾಂಗತ್ಯ-2017 ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಹದಾಢ್ರ್ಯ ಪಟು ಭಾಸ್ಕರ ತೊಕ್ಕೊಟ್ಟು, ಕುಸ್ತಿಪಟು ಪ್ರಜ್ಞಾ ಕಬೆಕೋಡಿ ಮುಖ್ಯ ಅತಿಥಿಗಳಾಗಿದ್ದರು. ಡಿವೈಎಫ್‍ಐ ಜಿಲ್ಲಾಧ್ಯಕ್ಷ ದಯಾನಂದ ಶೆಟ್ಟಿ, ಸಿಪಿಎಂ ಉಳ್ಳಾಲ ವಲಯ ಕಾರ್ಯದರ್ಶಿ ಕೃಷ್ಣಪ್ಪ ಸಾಲ್ಯಾನ್, ಉದ್ಯಮಿ ರಮೇಶ್ ಮೆಂಡನ್, ಡಿವೈಎಫ್‍ಐ ಉಳ್ಳಾಲ ವಲಯ ಅಧ್ಯಕ್ಷ ಅಶೋಕ್ ಶೆಟ್ಟಿ ಚೆಂಬುಗುಡ್ಡೆ, ಎಸ್ ಎಫ್ ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್, ಕಾರ್ಯದರ್ಶಿ ಜೀವನರಾಜ್ ಕುತ್ತಾರ್ ಉಪಸ್ಥಿತರಿದ್ದರು. ಹಂಝ ಕಿನ್ಯಾ ನಿರೂಪಿಸಿದರು. ಸುನಿಲ್ ತೇವುಲ ವಂದಿಸಿದರು.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಉತ್ತರ ಪ್ರದೇಶದಲ್ಲಿ ಸರಕಾರ ರಚಿಸುವ ನರೇಂದ್ರ ಮೋದಿಯವರ ಕನಸು ನನಸಾಗಿದ್ದು, ಮುಂದಿನ ಕರ್ನಾಟಕದ ಚುನಾವಣೆಯಲ್ಲಿ ಇದೇ ಮಾದರಿಯ ಪಲಿತಾಂಶ ಬರಲಿದೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಅಭಿಪ್ರಾಯಪಟ್ಟರು. ಉತ್ತರ ಪ್ರದೇಶ ಮತ್ತು ಉತ್ತರಕಾಂಡದಲ್ಲಿ ಬಿಜೆಪಿಯ ಅಭೂತಪೂರ್ವ ಗೆಲವಿಗೆ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಏರ್ಪಡಿಸಿದ್ದ ವಿಜಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತನಾಡಿ ಕಾಂಗ್ರೆಸ್‍ನ ಅಪವಿತ್ರ ಮೈತ್ರಿಯನ್ನು ಜನರು ಒಪ್ಪಿಕೊಂಡಿಲ್ಲ. ಉತ್ತರ ಪ್ರದೇಶದ ಮಾದರಿಯಲ್ಲಿ ಮುಂದಿನ ವರ್ಷದ ಕರ್ನಾಟಕದ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ಬೆಂಬಲಿಸಲಿದ್ದು, ಯಡಿಯೂರಪ್ಪ ನೇತೃತ್ವದ ಸರಕಾರ ಅಧಿಕಾರಕ್ಕೆ ಬರಲಿದೆ ಎಂದರು. ಹಿರಿಯ ಮುಖಂಡರಾದ ಸೀತರಾಮ ಬಂಗೇರ, ಸೀತಾರಾಮ ಶೆಟ್ಟಿ ನೆತ್ತಿಲ ಬಾಳಿಕೆ, ದಕ್ಷಿಣ ರೈಲ್ವೇ ಸಲಹಾ ಸಮಿತಿ ಸದಸ್ಯ ಚಂದ್ರಹಾಸ ಅಡ್ಯಂತಾಯ, ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ, ಬಿಜೆಪಿ ಕ್ಷೇತ್ರ ಮಾಜಿ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ಮುಖಂಡರಾದ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಮುಡಿಪು: ಮುಡಿಪು ಜಂಕ್ಷನ್ ಪ್ರದೇಶದಲ್ಲಿ ಮದ್ಯರಾತ್ರಿಯ ವೇಳೆ ವಾಹನ ವ್ಯವಸ್ಥೆ ಇಲ್ಲದೆ ಬಸ್ ನಿಲ್ಧಾಣದ ಸಮೀಪವೇ ಭಯದಿಂದ ನಿಂತಿದ್ದ ಮಹಿಳೆಯನ್ನು ಕಂಡ ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ದೇವರಾಜ್ ಮಹಿಳೆಗೆ ಆಸರೆಯಾಗಿ ನಿಂತು ಸುರಕ್ಷಿತವಾಗಿ ಪೊಲೀಸ್ ವಾಹನದಲ್ಲಿ ಅವರ ಮನೆಗೆ ತಲುಪಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪೊಲೀಸ್ ಸಿಬ್ಬಂದಿಯ ಪ್ರಾಮಾಣಿಕತೆಯೊಂದಿಗೆ ಮನೆಗೆ ಸುರಕ್ಷಿತವಾಗಿ ತಲುಪಿದ ಬಳಿಕ ಪೊಲೀಸರ ಸೇವೆಯ ಕುರಿತು ಪೊಲೀಸ್ ಇಲಾಖೆಗೆ ಪತ್ರ ಬರೆದು ದನ್ಯವಾದವನ್ನು ಸಲ್ಲಿಸಿದ್ದರು. ಪೊಲೀಸ್ ಸಿಬ್ಬಂದಿ ದೇವರಾಜ್ ಅವರ ಕಾರ್ಯವು ಪೊಲೀಸ್ ಆಯುಕ್ತರ ಮೆಚ್ಚುಗೆಗೂ ಪಾತ್ರವಾಗಿದ್ದು ಅವರು ದೇವರಾಜ್ ಅವರಿಗೆ ಹತ್ತು ಸಾವಿರ ರೂ ನಗದು ಬಹುಮಾನದೊಂದಿಗೆ ಪ್ರಶಂಶನಾ ಪತ್ರವನ್ನು ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಎಸಿಪಿ ಶೃತಿ, ಕೊಣಾಜೆ ಠಾಣಾ ಇನ್‍ಸ್ಪೆಕ್ಟರ್ ಅಶೋಕ್ ಜೊತೆಗಿದ್ದರು.

