Author: UllalaVani

Kannada News From Coastal Karnataka

ಬಂಟ್ವಾಳ: ತುಂಬೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಬಂಟ್ವಾಳ ತಾಲೂಕು ಪಂಚಾಯತ್‌ನ ಮಾಜಿ ಸದಸ್ಯರಾಗಿ ಜನಪ್ರಿಯರಾಗಿದ್ದ ಸೋಮಪ್ಪ ಕೋಟ್ಯಾನ್ ತುಂಬೆ ಅವರು ನಿಧನ ಹೊಂದಿದ್ದಾರೆ. ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ ಸೋಮಪ್ಪ ಹುಟ್ಟು ಹೋರಾಟಗಾರರಾಗಿ, ಬಿಜೆಪಿ ಜಿಲ್ಲಾ ಮಂಡಲದ ವಿವಿಧ ಜವಾಬ್ದಾರಿಯನನು ನಿಭಾಯಿಸಿದವರು. ಅನೇಕ ಸಂಘಸAಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಇವರು ಕಳೆದ 25 ವರ್ಷಗಳಿಂದ ತುಂಬೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ಕೋಶಾಧಿಕಾರಿಯಾಗಿ, ಬಿಲ್ಲವ ಸಮಾಜದ ಗುರಿಕಾರರಾಗಿ ಯುವ ಸಮುದಾಯದ ಮಾರ್ಗದರ್ಶಕರಾಗಿದ್ದರು. ಅಲ್ಪಕಾಲದ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಎರಡು ಗಂದು, ಒಂದು ಹೆಣ್ಣು ಮಕ್ಕಳ ಸಹಿತ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.

Read More

ಉಳ್ಳಾಲ;ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೆಟ್ ಪ್ರದಾನ ರಾಜಭವನದಲ್ಲಿ ನಡೆಯಿತು. ಬೆಂಗಳೂರು ವಿ.ವಿಯ ಕುಲಾದಿಪತಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ವಿ.ವಿ ಉಪಕುಲಪತಿ ಡಾ| ಜಯಕರ ಎಸ್.ಎಂ ಕುಲಸಚಿವೆ ಕೆ.ಟಿ ಶಾಂತಾಳಾ ಮತ್ತಿತರರು ಉಪಸ್ಥಿತರಿದ್ದರು. ಬಿಎ, ಎಲ್.ಎಲ್.ಬಿ ಪದವೀಧರರಾಗಿರುವ ಅವರು ಉಳ್ಳಾಲದ ಮಾಜಿ ಶಾಸಕ ದಿ| ಯು.ಟಿ.ಫರೀದ್ ಅವರ ಪುತ್ರ. ಎನ್.ಎಸ್.ಯು.ಐ ಯುವ ಕಾಂಗ್ರೆಸ್ ಹಾಗೂ ಸೇವಾದಳಗಳ ಮೂಲಕ ಸಾರ್ವಜನಿಕರ ಜೀವನ ಪ್ರವೇಶಿಸಿದ ಖಾದರ್ ಅವರು ಮಂಗಳೂರು ವಿಧಾನ ಸಭಾ ಕ್ಷೇತ್ರವನ್ನು ಸತತ ಐದು ಬಾರಿ ಶಾಸಕರಾಗಿ ಪ್ರತಿನಿಧಿಸಿದ್ದಾರೆ. ರಾಜ್ಯ ಸರಕಾರದಲ್ಲಿ ಆರೋಗ್ಯ, ಆಹಾರ, ವಸತಿ ಹಾಗೂ ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಉಪ ನಾಯಕರಾಗಿದ್ದ ಅವರು 2023ರಿಂದ ಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Read More

ಮಂಗಳೂರು, ನ. 28; ಪಣಂಬೂರು ಬೀಚ್‌ನಲ್ಲಿ ವರದಿಯಾಗಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನವೆಂಬರ್ 24 ರಂದು ಕಳುವಾಗಿದ್ದ 3.33 ಲಕ್ಷ ರೂ. ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ನವೆಂಬರ್ 24 ರಂದು, ಸ್ವಾತಿ ನಂದಿಪಲ್ಲಿ (24) ತನ್ನ ಸ್ನೇಹಿತ ರೋಹಿತ್ ವೆಮ್ಮಲೆಟ್ಟಿ ಜೊತೆ ಪಣಂಬೂರು ಬೀಚ್‌ಗೆ ಭೇಟಿ ನೀಡಿದ್ದರು. ಈಜಲು ಸಮುದ್ರಕ್ಕೆ ಇಳಿಯುವ ಮೊದಲು, ಅವರು ತಮ್ಮ ವಸ್ತುಗಳನ್ನು ಕಪ್ಪು ಚೀಲದಲ್ಲಿ ಹಾಕಿ ಸಮುದ್ರ ದಡದಲ್ಲಿ ಇರಿಸಿ, ನೀರಿನಲ್ಲಿ ಈಜಾಡಲು ಸಮುದ್ರಕ್ಕೆ ಇಳಿದಿದ್ದು, ನಂತರ ಬೆಳಿಗ್ಗೆ 11.50 ರ ಸುಮಾರಿಗೆ ಅವರು ಹಿಂತಿರುಗಿದಾಗ ಬ್ಯಾಗ್ ಕಾಣೆಯಾಗಿತ್ತುಆ ಚೀಲದಲ್ಲಿ ಆಕೆಯ 12 ಗ್ರಾಂ ತೂಕದ ಚಿನ್ನದ ಸರ, 2 ಗ್ರಾಂ ಚಿನ್ನದ ಪೆಂಡೆಂಟ್, ತಲಾ 2 ಗ್ರಾಂ ತೂಕದ ಎರಡು ಚಿನ್ನದ ಉಂಗುರಗಳು, 4 ಗ್ರಾಂ ತೂಕದ ಒಂದು ಜೋಡಿ ಚಿನ್ನದ ಕಿವಿಯೋಲೆಗಳು, ಆಕೆಯ ಒಂದು ಮೊಬೈಲ್ ಫೋನ್…

Read More

ಉಳ್ಳಾಲ ವಲಯ ಬಿಲ್ಲವರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ, ಗುರು–ಗಾಂಧಿ ಸಂವಾದದ 100ನೇ ವರ್ಷದ ಅಂಗವಾಗಿ ‘ಶತಮಾನದ ಮಹಾಪ್ರಸ್ಥಾನ – ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ’ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಗುರುವಾರ ಬಿಲ್ಲವ ಸೇವಾ ಸಮಾಜ (ರಿ.) ಕೊಲ್ಯ–ಸೋಮೇಶ್ವರ ಸಭಾಂಗಣದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಉಳ್ಳಾಲ ವಲಯ ಬಿಲ್ಲವರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಕೆ.ಟಿ. ಸುವರ್ಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶತಮಾನೋತ್ಸವದ ಆಮಂತ್ರಣ ಪತ್ರಿಕೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಶ್ರೀ ಸತೀಶ್ ಕುಂಪಲ, ಗುರು–ಗಾಂಧಿ ಸಂವಾದ ಶತಮಾನೋತ್ಸವ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ರಕ್ಷಿತ್ ಶಿವರಾಂ, ಶ್ರೀ ನಾಗಬ್ರಹ್ಮ ದೇವಸ್ಥಾನದ ಆಡಳಿತ ಮೊಕೇಸರ ಶ್ರೀ ಭಾಸ್ಕರ ಐತಾಳ್, ಬಂಟರ ಸಂಘ (ರಿ.) ಉಳ್ಳಾಲ ವಲಯದ ಅಧ್ಯಕ್ಷ ಶ್ರೀ ರವೀಂದ್ರ ರೈ ಕಲ್ಲಿಮಾರ್ ಸೇರಿದಂತೆ ಹಲವು ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಶುಭ ಹಾರೈಸಿದರು. ಮೊಗವೀರ, ತೀಯ, ಗಾಣಿಗ,…

Read More

ಬಂಟ್ವಾಳ, ನ. 27 : ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ನಡೆದಿದೆ. ಮನೆಯಲ್ಲಿ ಸರೋಜಿನಿ ಎನ್ನುವ ಮಹಿಳೆಯನ್ನು ನಿಲ್ಲಿಸಿ ಮನೆಮಂದಿ ಪಾಣೆಮಂಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಮಧ್ಯಾಹ್ನ 2-3 ರ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಆಗಮಿಸಿ ದೀಚು (ದೀಕ್ಷಿತ್) ಅವರು ಮನೆಯ ವಿದ್ಯುತ್ ವಯರ್ ಹಾಗೂ ಲೈಟ್ ದುರಸ್ತಿ ಮಾಡಲು ತಿಳಿಸಿದ್ದಾರೆಂದು ಹೇಳಿದನು. ಸತ್ಯವೆಂದು ನಂಬಿದ ಸರೋಜಿನಿ ಆತನನ್ನು ಒಳಗೆ ಬಿಟ್ಟಿದ್ದರು.ಆತ ದುರಸ್ತಿಯ ನಾಟಕ ಮಾಡಿ ಮಲಗುವ ಕೋಣೆಯ ಮಂಚದ ಕೆಳಭಾಗದಲ್ಲಿ ಬ್ಯಾಗ್‌ನಲ್ಲಿದ್ದ ಚಿನ್ನ ಹಾಗೂ ನಗದನ್ನು ಕಳವು ಮಾಡಿದ್ದಾನೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಳ್ಳಾಲ: ಪಕ್ಷ, ಧರ್ಮ, ರಾಜಕೀಯರಹಿತವಾಗಿ ಆಚರಿಸುವ ಕಾರ್ಯಕ್ರಮ ಕೊಣಾಜೆಯ ಮಣ್ಣಿನಲ್ಲಿ ನಡೆಯಲಿದೆ. ರಾಜ್ಯಮಟ್ಟದ ಸಮಿತಿಯ ನಿರ್ದೇಶನದಂತೆ ತಳಮಟ್ಟದಲ್ಲಿ ತನ್ನ ಕ್ಷೇತ್ರದ ಜನತೆ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಮಹಾನ್‌ ಚೇತನರ ಕಾರ್ಯಕ್ರಮಗಳನ್ನು ಯಶಸ್ಸುಗೊಳಿಸಿರಿ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದರು. ಡಿ.3 ರಂದು ಕೊಣಾಜೆ ಮೈದಾನದಲ್ಲಿ ಶಿವಗಿರಿ ಮಠ, ವರ್ಕಳ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಮುಖ್ಯಮಂತ್ರಿಯವರ ಉಪಸ್ಥಿತಿಯಲ್ಲಿ ಜರಗಲಿರುವ ಶತಮಾನ ಮಹಾಪ್ರಸ್ಥಾನ ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವ ಕುರಿತು ಡಿಸಿಸಿ ಸದಸ್ಯೆ ದೇವಕಿ ಆರ್‌ ಉಳ್ಳಾಲ್‌ ಇವರ ಬಂಡಿಕೊಟ್ಯದಲ್ಲಿರುವ ಸ್ವರ್ಣ ಕುಂಭ ಮನೆಯಲ್ಲಿ ಜರಗಿದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯಮಟ್ಟದಲ್ಲಿ ಬಿ.ಕೆ.ಹರಿಪ್ರಸಾದ್‌, ಪಿ.ವಿ.ಮೋಹನ್‌ ರಂತಹ ಮುಖಂಡರು ಅಹರ್ನಿಶಿ ದುಡಿದು ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ. ತಳಮಟ್ಟದಲ್ಲಿ ವಿಧಾನಸಭಾ ಕ್ಷೇತ್ರದ ಜನತೆಯೂ ಭಾಗವಹಿಸಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿಸಿಕೊಳ್ಳುವ ಮೂಲಕ ಐತಿಹಾಸಿಕ ಕಾರ್ಯಕ್ರಮದ ಭಾಗವಾಗಿರಿ. ಅತ್ಯಂತ ಯಶಸ್ವಿ ಉತ್ಸವದ ಕಾರ್ಯಕ್ರಮವಾಗಿ ಪರಿವರ್ತಿಸುವ ಜವಾಬ್ದಾರಿಯಾಗಿದೆ. ಬೆಳಿಗ್ಗೆ ೧೦ ಕ್ಕೆ ಎಲ್ಲರೂ…

Read More

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಕಾರ್ಯಕ್ರಮವು ಬ್ರಹ್ಮಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ವಿಜ್ರಂಭಣೆಯಿಂದ ಶ್ರದ್ಧಾಭಕ್ತಿಯೊಂದಿಗೆ ಜರಗಿತು. ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಷಷ್ಠಿ ಮಹೋತ್ಸವ, ಪಲ್ಲಕ್ಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ದೈವಗಳ ಭಂಡಾರ ತೆಗೆಯುವುದು, ರಂಗಪೂಜೆ, ವೈದಿಕ ಮಂತ್ರಾಕ್ಷತೆ, ಶ್ರೀ ಕ್ಷೇತ್ರದ ದೈವಗಳಿಗೆ ನೇಮೋತ್ಸವ ನಡೆಯಿತು. ದೇವಸ್ಥಾನಕ್ಕೆ ಬೆಂಗಳೂರಿನ ಉದ್ಯಮಿ ನಾಗೇಶ್ ರಾವ್ ಅತ್ತಾಳ ಇವರಿಂದ ಹೂವಿನ ಅಲಂಕಾರ ಸೇವೆಯನ್ನು ಮಾಡಿಸಿದರು. ಇವರಿಗೆ ವ್ಯವಸ್ಥಾಪನ ಸಮಿತಿಯಿಂದ ಶಾಲು ಪ್ರಸಾದ ನೀಡಿದರು. ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ದೇವರ ಸೇವೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದೇವಸ್ಥಾನದ ಬಳಿಯಲ್ಲಿಯೇ ಹಣ್ಣುಕಾಯಿ ಅಂಗಡಿ ಹಾಗೂ ಹರಕೆಯ ಬೆಳ್ಳಿ ಆಭರಣಗಳ ಅಂಗಡಿಯು ತೆರೆದು ಭಕ್ತಾದಿಗಳಿಗೆ ಅನುಕೂಲ ಕಲ್ಪಿಸಲಾಗಿತ್ತು. ವರ್ಷಂಪ್ರತಿ ಶ್ರೀ ಕ್ಷೇತ್ರದಲ್ಲಿ ಗೊನೆ ಮುಹೂರ್ತದಿಂದ ಹಿಡಿದು ಷಷ್ಠಿ ಮಹೋತ್ಸವದ ತನಕ ಶ್ರೀ ದೇವರ ಸನ್ನಿಧಿಯಲ್ಲಿ ಶ್ರದ್ಧಾಭಕ್ತಿಯ…

Read More

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ ರವರು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ ರವರ ಮನೆಗೆ ಬೇಟಿ ನೀಡಿ ಜಾಗತಿಕ ಬಿಲ್ಲವರ ಕ್ರೀಡೋತ್ಸವಕ್ಕೆ ಸಹಕಾರ ನೀಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಂಸದರಾದ ಕ್ಯಾಪ್ಟನ್ ಬೃಜೇಶ್ ಚೌಟ ರವರಿಗೆ ಶಾಲು, ಪುಷ್ಪಗುಚ್ಛ ಮತ್ತು ದಾಮೋದರ ಆರ್.ಸುವರ್ಣ ರವರ ಜೀವನಾಧರಿತ ಶತಮಾನದ ಶಕಪುರುಷ ಪುಸ್ತಕ ನೀಡಿ ಯೂನಿಯನ್ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ ರವರು ಗೌರವಿಸಿದರು. ಡಿಸೆಂಬರ್ ೨೧ ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಯುವ ದಾಮೋದರ ಆರ್.ಸುವರ್ಣ ಟ್ರಸ್ಟ್ ನ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಮತ್ತು ಜನವರಿ ೧೮ ರಂದು ಯೂನಿಯನ್ ವತಿಯಿಂದ ಮಂಗಳೂರಿನಲ್ಲಿ ನಡೆಯುವ ಜಾಗತಿಕ ಬಿಲ್ಲವರ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಲಾಯಿತು. ಮತ್ತು ಕ್ರೀಡೋತ್ಸವಕ್ಕೆ ಸಿ.ಆರ್.ಎಸ್. ನಿಧಿ ಯಿಂದ ಆರ್ಥಿಕ ಸಹಕಾರ ನೀಡಲು ಮನವಿ ನೀಡಲಾಯಿತು. ಈ ಸಂದರ್ಭ ಬಿಲ್ಲವರ ಮಹಿಳಾ ಸಂಘದ…

Read More

ತಮಿಳುನಾಡು, ನವೆಂಬರ್ 27: ಹಣ ಕಂಡರೆ ಹೆಣ ಕೂಡ ಬಾಯಿ ಬಿಡುತ್ತೆ. ಹೀಗಾಗಿ ಕೆಲವರು ಮೈ ದಂಡಿಸಿ ದುಡಿಯದೇ ಕಳ್ಳತನದ (theft) ಹಾದಿ ಹಿಡಿಯುತ್ತಾರೆ. ಆದರೆ ಇಲ್ಲೊಬ್ಬ ಕಳ್ಳನು ಮಾಡಿದ ಕೆಲಸ ನೋಡಿದ್ರೆ ನೀವು ಶಾಕ್ ಆಗ್ತೀರಾ. ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ (Tirunelveli District of Tamil Nadu) ವಿಚಿತ್ರ ಘಟನೆಯೊಂದು ನಡೆದಿದೆ. ಪಲಯಪೆಟ್ಟೈ ಪ್ರದೇಶದ ಮನೆಯೊಂದಕ್ಕೆ ನುಗ್ಗಿದ ಕಳ್ಳನು ಕದಿಯಲು ಏನು ಸಿಗದ ಕಾರಣ ನಿರಾಸೆಗೊಂಡಿದ್ದಾನೆ. ಕೊನೆಗೆ ಮನೆಮಾಲೀಕರಿಗೆ ಪತ್ರ ಬರೆದಿಟ್ಟು ಹೋಗಿದ್ದು, ಈ ಪತ್ರವು ವೈರಲ್ ಆಗಿದೆ. ಮನೆಗೆ ನುಗ್ಗಿದ ಕಳ್ಳನು ಹಣ, ಆಭರಣದ ಹುಡುಕಾಟದಲ್ಲಿದ್ದಾಗ ಹುಂಡಿಯಲ್ಲಿದ್ದ 2,000 ರೂ ಮಾತ್ರ ಸಿಕ್ಕಿದೆ. ಇದರಿಂದ ಹತಾಶೆಗೊಂದು ಮನೆಮಾಲೀಕರಿಗೆ ಪತ್ರ ಬರೆಯಲು ನಿರ್ಧರಿಸಿದ್ದಾನೆ. ಈ ಮನೆಯಲ್ಲಿ ಒಂದು ರೂಪಾಯಿ ಕೂಡ ಇಲ್ಲ, ಮುಂದಿನ ಬಾರಿ ಯಾರಾದರೂ ಕದಿಯಲು ಬಂದಾಗ, ಅವರು ಮೋಸ ಹೋಗದಂತೆ ಹಣವನ್ನು ಇಟ್ಟುಕೊಳ್ಳಿ ಎಂದು ಸಲಹೆ ನೀಡಿದ್ದಾನೆ. ಈ ಮನೆಯ ಭದ್ರತಾ ವ್ಯವಸ್ಥೆಯನ್ನು ಟೀಕಿಸಿದ್ದು, ಒಂದೇ ಒಂದು ರೂಪಾಯಿ…

Read More

ಇಳಿ ವಯಸ್ಸಿನಲ್ಲೂ ಬತ್ತದ ಜೀವನೋತ್ಸಾಹ. ಮಾತಿನಲ್ಲಿ ತೂಕ ಹಾಗೂ ಜೀವನದ ಅನುಭವವನ್ನು ಹೇಳುತ್ತ ತಮ್ಮ ದುಡಿಮೆಯಲ್ಲಿ ಖುಷಿ ಕಾಣುತ್ತಿರುವ ಹಿರಿ ಜೀವವಿದು . 72ರ ಇಳಿ ವಯಸ್ಸಿನಲ್ಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿರುವ ಇದು ಗೋವಿಂದಣ್ಣನ ಬದುಕಿನ ಕಥೆ. ಇವರ ಕಾಯಕ ಮಾತ್ರವಲ್ಲ, ಇವರ ಪ್ರತಿಯೊಂದು ಮಾತು ಕೂಡ ಎಲ್ಲರಿಗೂ ಸ್ಫೂರ್ತಿ ನೀಡುವಂತಿದೆ. ಶ್ರಮಜೀವಿಯ ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರು ಇದನ್ನು ಮೆಚ್ಚಿಕೊಂಡಿದ್ದಾರೆ. Uppukari786 ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಹಿರಿಯ ವ್ಯಕ್ತಿಯೊಬ್ಬರು ಲಾರಿ ಓಡಿಸುತ್ತಾ ತಮ್ಮ ಬದುಕಿನ ಕೆಲ ವಿಚಾರಗಳನ್ನು ಹೇಳುವುದನ್ನು ನೋಡಬಹುದು. ಜಾತಿ ಭೇದ ಮಾಡಬಾರದು, ನನಗೆ ಎಲ್ಲರೂ ಬೇಕು ಎನ್ನುತ್ತಾ, ತಮ್ಮ ಬದುಕಿನ ಒಂದೊಂದೇ ವಿಚಾರವನ್ನು ಬಿಚ್ಚಿಟ್ಟಿದ್ದಾರೆ. ಎರಡು ವರ್ಷ ಬಾಡಿಗೆ ಮನೆಯಲ್ಲಿದ್ರೂ ಬಾಡಿಗೆ ಕೊಡಲಿಲ್ಲ, ದಿನಸಿ ಸಾಲ ತರ್ತಿದ್ದೆ. ಆದರೂ ಹಣ ಕೊಡು ಅಂತ ಯಾರು ಕೇಳಿಲ್ಲ. ನಾನು ಸುಮ್ಮನೆ ಕೂರುವುದಿಲ್ಲ. ಲಾರಿ ಓಡಿಸುವುದಲ್ಲದೇ, ಗದ್ದೆ ಉಳುಮೆ, ಭತ್ತ ಕಟಾವು ಹೀಗೆ ಕೃಷಿ…

Read More