ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಕ್ಷೇತ್ರ ಬಿಜೆಪಿ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತಿರಂಗಾ ರ್ಯಾಲಿ ನಡೆಯಿತು
Author: UllalaVani
ಉಳ್ಳಾಲ್ ನ್ಯೂಸ್ ನೆಟ್‍ವರ್ಕ್ ಉಳ್ಳಾಲ: ಸ್ವತಂತ್ರ ಭಾರತದ ಪ್ರಥಮ ಗೃಹ ಸಚಿವರಾಗಿ ಸರ್ದಾರ್ ವಲ್ಲಭಬಾಯಿ ಪಟೇಲ್ ದಿಟ್ಟ ನಿಲುವು ತೆಗೆದುಕೊಂಡ ಹಿನ್ನಲೆಯಲ್ಲಿ ನಮ್ಮ ದೇಶ ಇಷ್ಟು ಉಳಿದಿದ್ದು, ನೆಹರೂ ಮಾತು ಕೇಳುತ್ತಿದ್ದರೆ ಭಾರತ ಇನ್ನಷ್ಟು ಛಿದ್ರವಾಗಿ ಹೋಗುತ್ತಿತ್ತು ಎಂದು ವಿಶ್ವಹಿಂದೂ ಪರಿಷತ್‍ನ ವಿಭಾಗ ಸಹ ಕಾರ್ಯದರ್ಶಿ ಪ್ರಕಾಶ್ ಮಲ್ಪೆ ಅಭಿಪ್ರಾಯಪಟ್ಟರು. ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡದ ಆಶ್ರಯದಲ್ಲಿ ಬೃಹತ್ ಪಂಜಿನ ಮೆರವಣಿಗೆಯ ಸಮಾರೋಪ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಬಾರತದ ಪ್ರಥಮ ಪ್ರಧಾನ ಮಂತ್ರಿಯಾಗುವ ನಿಟ್ಟಿನಲ್ಲಿ ನೆಹರೂರವರು ದೇಶದ ವಿಭಜನೆಗೆ ಮೂಲ ಕಾರಣರಾದರು. ಸ್ವತಂತ್ರ ಭಾರತದ ಪೂರ್ವದಲ್ಲಿ ಭಗವಾಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆದಿತ್ತು. ಆದರೆ ಮುಸ್ಲಿಂರ ಓಲೈಕೆಗಾಗಿ ಧರ್ಮಕ್ಕೊಂದು ಬಣ್ಣ ನೀಡಿ ರಾಷ್ಟ್ರ ಧ್ವಜವನ್ನು ತುಂಡು ಮಾಡಲಾಯಿತು. ರಘುಪತಿ ರಾಘವ ಹಾಡಿನಲ್ಲಿ ಅಲ್ಲಾನನ್ನು ಸೇರಿಸಲಾಯಿತು. ಯಾವ ಹಾಡು ಸ್ವತಂತ್ರಯದ ರಣಕಹಳೆಗೆ ಸ್ಪೂರ್ತಿಯಾಗಿತ್ತೋ ಅಂತಹ ವಂದೇ ಮಾತರಂ ಹಾಡನ್ನು ಹಾಡಬಾರದು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಹರೇಕಳ: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿದ ಹಾಜಬ್ಬರ ಶಾಲೆ ಮುಚ್ಚಿಸುವುದಕ್ಕೆ ಸರ್ಕಾರ ಸಿದ್ಧತೆ ನಡೆಸಿದ್ದು, ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಹೆಸರಿನಲ್ಲಿ ಹರೇಕಳದ ಸರ್ಕಾರಿ ಶಾಲೆ ಮುಚ್ಚಿಸಲು ಸರ್ಕಾರ ಹೊರಟಿದೆ ಎಂದು ಎಸ್ ಎಫ್ ಐ ಜಿಲ್ಲಾಧ್ಯಕ್ಷ ನಿತಿನ್ ಕುತ್ತಾರ್ ಆರೋಪಿಸಿದ್ದಾರೆ. ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಆದೇಶ ವಿರೋಧಿಸಿ ಹರೇಕಳದ ಹಿರಿಯ ಪ್ರಾಥಮಿಕ ಶಾಲೆಯಲ್ಕಿ ಎಸ್ ಎಫ್ ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ನಡೆಸಿದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಶಾಲೆಗೆ ಐತಿಹಾಸಿಕ ಹಿನ್ನಲೆಯಿದ್ದು, ಕಿತ್ತಳೆ ಹಣ್ಣಿನ ವ್ಯಾಪಾರಿಯಾಗಿದ್ದ ಹರೇಕಳ ಹಾಜಬ್ಬರು ನ್ಯೂ ಪಡ್ಪು ಸರ್ಕಾರಿ ಶಾಲೆಯನ್ನು ಸ್ಥಾಪಿಸಿದ್ದರು. ಖಾಸಗಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸದೇ ಎಲ್ಲರಿಗೂ ಉಚಿತ ಶಿಕ್ಷಣ ಸಿಗಲಿ ಎಂಬ ಉದ್ದೇಶದಿಂದ ಈ ಶಾಲೆ ಆರಂಭಿಸಿದ್ದರು. ಆದರೆ ಸರ್ಕಾರ ಶಿಕ್ಷಕಿಯನ್ನು ವರ್ಗಾಯಿಸುವ ಮೂಲಕ ಶಾಲೆಯನ್ನು ಮುಚ್ಚಲು ಹೊರಟಿದೆ. ಆದ್ದರಿಂದ ಹಾಜಬ್ಬರಿಗಿರುವ ಕಾಳಜಿ…
ಉಳ್ಳಾಲ್ ನ್ಯೂಸ್ನೆಟ್ ವರ್ಕ್ ಅಡ್ಕ: ಕಾರು, ಬಸ್ಸು ಮತ್ತು ಬೈಕ್ ಮಧ್ಯೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಮಾಡೂರು ಕೊಂಡಾಣದ ಸಾಯಿಧಾಮ ಬಡಾವಣೆಯ ನಿವಾಸಿ ನವೀನ್(51) ಮೃತ ದುರ್ದೈವಿ. ಮಂಗಳೂರು ಕಡೆಯಿಂದ ಕೇರಳದ ಕಡೆಗೆ ಅತೀ ವೇಗವಾಗಿ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಾಜಕಕ್ಕೆ ಹೊಡೆದು ಪಲ್ಟಿಯಾಗಿ ರಸ್ತೆಯ ಇನ್ನೊಂದು ಬದಿಯಲ್ಲಿಚಲಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಈ ವೇಳೆ ತಲಪಾಡಿಯಿಂದ ಸ್ಟೇಟ್‍ಬ್ಯಾಂಕಿಗೆ ತೆರಳುತ್ತಿದ್ದ ಬಸ್ಸಿನ ಚಕ್ರದಡಿಗೆ ಬೈಕ್ ಬಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನವೀನ್ ಮಂಗಳೂರಿನಲ್ಲಿ ಈಜು ತರಬೇತುದಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಚಾಲಕ ಸಹಿತÀ ಮೂರು ಮಂದಿ ಇದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ನಿವೇಶನ ರಹಿತರ ಸಮಸ್ಯೆ, ಕೊಳವೆ ಬಾವಿ ಸಮಸ್ಯೆ, ಕಳವು ಪ್ರಕರಣಗಳ ತಡೆಗಟ್ಟುವಿಕೆಗೆ ಕುರಿತ ಚರ್ಚೆ ಹಾಗೂ ಕ್ರಮ ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಗುರುವಾರ ಜರಗಿದ ಸೋಮೇಶ್ವರ ಪಂಚಾಯಿತಿನ 2015-16 ನೇ ಸಾಲಿನ ಗ್ರಾಮಸಭೆಯಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್ ಉಚ್ಚಿಲ್ ಅಧ್ಯಕ್ಷತೆ ವಹಿಸಿದ್ದರು. ಅಕ್ಷರ ದಾಸೋಹÀ ಸಹಾಯಕ ನಿರ್ದೇಶಕ ಜೆ. ಯಶೋಧರ್ ನೋಡೆಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ನಿವೇಶನ ರಹಿತರ 3,500 ಅರ್ಜಿಗಳು ಪಂಚಾಯಿತಿನಲ್ಲಿದೆ. ಆದರೆ ಈವರೆಗೆ ಯಾವುದೇ ನಿವೇಶನ ದೊರೆತಿಲ್ಲ. ಸರಕಾರಿ ಜಾಗ ಗುರುತಿಸುವಿಕೆ ಆಗಿ ಸರ್ವೇ ಕಾರ್ಯ ನಡೆದರೂ ಫಲಾನುಭವಿಗಳಿಗೆ ದೊರೆತಿಲ್ಲ. ಹಲವು ಮನೆಗಳಿಗೆ ವಿತರಿಸುವ ನೀರಿನ ಕೊಳವೆಬಾವಿ ಸಮೀಪವೇ ಮತ್ತೊಂದು ಕೊಳವೆ ಬಾವಿಯನ್ನು ಕೊರೆಯಲಾಗಿದೆ. ಈ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅನುಮತಿ ನೀಡಿರುವುದು ತಪ್ಪು. ಅಲ್ಲದೆ ಕೊಳವೆ ಬಾವಿ ಕುರಿತ ಮಾಹಿತಿ ದೊರೆತಿಲ್ಲ ಅನ್ನುವ ಆರೋಪ ಗ್ರಾಮಸ್ಥರೋರ್ವರಿಂದ ಕೇಳಿಬಂತು. ಕಳವು ಪ್ರಕರಣಗಳು ಹೆಚ್ಚುತ್ತಿವೆ, ಈ ಬಗ್ಗೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಹಳೆ ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ನೇತ್ರಾವತಿಯ ನೂತನ ಸೇತುವೆಯನ್ನು ಲೋಡ್ ಟೆಸ್ಟಿಂಗ್‍ಗಾಗಿ ವಾಹನ ಸಂಚಾರಕ್ಕೆ ಸ್ಥಗಿತಗೊಳಿಸಲಾಗುವುದು ಎಂದು ಹೆದ್ದಾರಿ ಕಾಮಗಾರಿ ವಹಿಸಿರುವ ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ. ಹೆದ್ದಾರಿಯ ಹಳೆ ಸೇತುವೆಯಲ್ಲಿ ಮುಂದಿನ ಐದು ದಿನಗಳ ಕಾಲ ದ್ವಿಮುಖ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಐದು ದಿನಗಳೊಳಗಾಗಿ ನೂತನ ಸೇತುವೆಯ ಲೋಡ್ ಟೆಸ್ಟಿಂಗ್ ಕಾರ್ಯವನ್ನು ಮುಗಿಸಲಾಗುವುದು ಬಳಿಕ ವಾಹನ ಸಂಚಾರಕ್ಕೆ ತೆರವುಗೊಳಿಸಲಾಗುವುದು. ಈ ಸಂದರ್ಭದಲ್ಲಿ ವಾಹನಗಳು ಅಡ್ಡಾದಿಡ್ಡಿ ಚಲಿಸದೆ 30 ಕಿ.ಮೀ. ವೇಗ ಮಿತಿಯಲ್ಲಿ ಚಲಿಸಿದರೆ ಹೆದ್ದಾರಿಯಲ್ಲಿ ಸುಗಮ ಸಂಚಾರ ನಡೆಸಬಹುದು ಎಂದು ಹೆದ್ದಾರಿ ನಿರ್ಮಾಣದ ಕಾರ್ಯ ನಡೆಸುತ್ತಿರುವ ಸಂಸ್ಥೆಯ ಮುಖ್ಯಸ್ಥರಾದ ದಿನಕರ್ ತಿಳಿಸಿದ್ದಾರೆ.
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕುಂಪಲ: ಕುಂಪಲ ಕೇಸರಿ ಮಿತ್ರವೃಂದ ಮತ್ತು ಕೇಸರಿ ಮಾತೃ ಮಂಡಳಿಯ ವತಿಯಿಂದ ಆಟಿ ಸಮ್ಮನ ಮತ್ತು ಆಟಿದ ವನಸ್ ತೆನಸ್ ಕಾರ್ಯಕ್ರಮ ಜು. 24ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಕೇಸರಿ ಸಭಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉಮೇಶ್ ಗಾಂಬೀರ್ ಬಲ್ಯ ಬಾಳಿಕೆ ಕೃಷಿಕೆರೆ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಬು ಶ್ರೀ ಶಾಸ್ತ ಕಿನ್ಯಾ ವಹಿಸಲಿದ್ದು , ಹೊಸದಿಗಂತ ಪತ್ರಿಕೆಯ ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ತುಳು ಮದಿಪು ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ಕರ್ನಾಟಕ ರಾಜ್ಯ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಮಹಾ ಮಂಡಲದ ಉಪಾಧ್ಯಕ್ಷ ಮಯೂರ್ ಉಳ್ಳಾಲ್, ಮಂಗಳೂರು ರೋಟರಿ ಕ್ಲಬ್ ಅಧ್ಯಕ್ಷ ವೆಂಕಟೇಶ್ ಪೈ, ಕೇಸರಿ ಮಾತೃಮಂಡಳಿ ಗೌರವ ಸಲಹೆಗಾರರಾದ ಜಯಲಕ್ಷ್ಮೀ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಬೋಳಿಯಾರ್: ಬಲಿಷ್ಠ ರಾಷ್ಟ್ರವನ್ನು ಕಟ್ಟುವ ಜನರ ಕನಸ್ಸನ್ನು ಮೋದಿ ನೇತೃತ್ವದ ಕೇಂದ್ರ ಸರಕಾರ ನನಸು ಮಾಡುತ್ತಿದ್ದು, ದೇಶದ ಅಭಿವೃದ್ಧಿಯ ಜೊತೆಗೆ ಅಂತರಾಷ್ಟ್ರೀಯ ಸಂಬಂಧಗಳನ್ನು ಬೆಳೆಸುವ ಮೂಲಕ ದೇಶದ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸುತ್ತಿದ್ದಾರೆ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ಹೇಳಿದರು. ಅವರು ಬೋಳಿಯಾರ್‍ನಲ್ಲಿ ಭಾನುವಾರ ನಡೆದ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಿಕಾಸ ಪರ್ವ ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಲ್ಲಿಕಾರ್ಜುನ ಖರ್ಗೆಯವರು ಸಭೆಯೊಂದರಲ್ಲಿ ಮೂಢನಂಬಿಕೆಯ ಹೆಸರಿನಲ್ಲಿ ನರಬಲಿ ನಡೆಯುತ್ತಿದೆ ಎಂದು ಹೇಳಿದ್ದರು. ಕಾಂಗ್ರೆಸ್ ಸರಕಾರ ನರಬಲಿಯ ಮೂಲಕ ರಾಜ್ಯವನ್ನು ಹದಗೆಡಿಸುತ್ತಿದೆ. ಜಪಾನ್‍ಗೆ ಭಗವದ್ಗೀತೆಯ ಚಿಂತನೆ ಹಾಗೂ ಅರಬ್ ರಾಷ್ಟ್ರದಲ್ಲಿ ದೇವಸ್ಥಾನ ಕಟ್ಟುವ ಮೂಲಕ ವಿದೇಶಗಳಲ್ಲಿ ದೇಶದ ಸಂಸ್ಕøತಿ ಹಾಗೂ ಸಂಬಂಧವನ್ನು ಬೆಸೆಯುವಂತೆ ಮಾಡಿದ್ದಾರೆ. ಆದ್ದರಿಂದ ಪಕ್ಷದ ಸಾಧನೆಯಿಂದ ದೇಶ ಬೆಳೆಯಬೇಕು ಎನ್ನುವುದೇ ಬಿಜೆಪಿಯ ಗುರಿ ಎಂದರು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ ಮಂಗಳೂರು ವಿಧಾನಸಭಾ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಜಿಲ್ಲೆಯ ಸಂಸ್ಕøತಿಯನ್ನು ಉಳಿಸಲು ಹಾಗೂ ಬೆಳೆಸಲು ಆಟಿದ ಗಮ್ಮತ್ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ವಿದೇಶಿಯರು ತುಳುನಾಡಿನ ಕಲೆಯನ್ನು ಮೆಚ್ಚಿ ಅದರ ಕುರಿತು ಅಧ್ಯಯನ ನಡೆಸುವುದರಿಂದ ಕಲೆಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯ ಇದೆ ಎಂದು ಜಿಲ್ಲಾ ಪಂಚಾಯತ್‍ನ ಉಪ ಕಾರ್ಯದರ್ಶಿ ಎನ. ಆರ್. ಉಮೇಶ್ ಅಭಿಪ್ರಾಯಪಟ್ಟರು. ಅವರು ಕುಂಪಲ ಶ್ರೀ ಬಾಲಕೃಷ್ಣ ಮಂದಿರ, ಶ್ರೀ ಬಾಲಕೃಷ್ಣ ಮಹಿಳಾ ಸೇವಾ ಸಮಿತಿ ಇದರ ಆಶ್ರಯದಲ್ಲಿ ನಡೆದ ಗ್ರಾಮೀಣ ಕ್ರೀಡೋತ್ಸವ ಮತ್ತು `ಆಟಿದ ಗಮ್ಮತ್ ‘ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವಂತಹ ಸಂಸ್ಕøತಿ ಬೇರೆಲ್ಲೂ ಇಲ್ಲ. ಆದರೆ ಸದ್ಯ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಸಂಸ್ಕøತಿ ಉಳಿದಿದೆ. ಇದನ್ನು ಎಲ್ಲಾ ಭಾಗದ ಮಕ್ಕಳಿಗೆ ತಿಳಿಸುವ ಪ್ರಯತ್ನ ಮಾಡುವುದರಿಂದ ಕಲೆಗಳನ್ನು ನಡೆಸಿಕೊಂಡು ಹೋಗುವ ಚಿಂತನೆ ಎಲ್ಲರೂ ಮಾಡಬೇಕಿದೆ. ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮಗಳು ಶಾಂತಿಯನ್ನು ಕಾಪಾಡುವುದರಿಂದ ಎಲ್ಲೆಡೆ ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದರು. ಕಿಂಡಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮಂಗಳೂರು: ಬಹು ನಿರೀಕ್ಷೆಯ ‘ದಬಕ್ ದಬಾ ಐಸಾ’ ಸಿನಿಮಾವು ಆಗಸ್ಟ್ 5ರಂದು ತೆರೆ ಕಾಣಲಿದ್ದು, ಕೆಲವು ಸಮಯದಿಂದ ಮಂಕು ಬಡಿದಂತಿರುವ ಕೋಸ್ಟಲ್‍ವುಡ್‍ನಲ್ಲಿ ಮತ್ತೆ ಹೊಸ ಸಂಚಲನ ಮೂಡಿಸಲಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಕಕಾಲಕ್ಕೆ ಬಿಡುಗಡೆಯಾಗಲಿರುವ ಈ ಸಿನಿಮಾವು ಮತ್ತೊಂದು ಹೊಸ ದಾಖಲೆಯತ್ತ ತುಳು ಚಿತ್ರರಂಗವನ್ನು ಕೊಂಡೊಯ್ಯಲು ಸಮರ್ಥವಿರುವ ಚಿತ್ರವಾಗಿದೆ. ಜಯಕಿರಣ ಫಿಲಂಸ್‍ನಡಿಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವು ತನ್ನ ಹಿರಿಯ ಸೋದರ ಚಾಲಿಪೆÇೀಲಿಲು ಅನ್ನು ಹಿಂದಿಕ್ಕುವ ರೀತಿಯಲ್ಲಿ ಮೂಡಿ ಬಂದಿದೆ. ಪ್ರಕಾಶ್ ಪಾಂಡೇಶ್ವರ ಅವರ ಚೊಚ್ಚಲ ನಿರ್ದೇಶನವಿರುವ ‘ದಬಕ್ ದಬ ಐಸಾ’ವು ಸಂಪೂರ್ಣ ಹಾಸ್ಯಮಯ ಹಾಗೂ ಉತ್ತಮ ಸಾಮಾಜಿಕ ಸಂದೇಶವಿರುವ ಚಿತ್ರವಾಗಿದ್ದು, ಕುಟುಂಬ ಸಮೇತ ವೀಕ್ಷಿಸುವಂಥ ಸಿನಿಮಾ ಆಗಿದೆ. ತುಳು ಚಿತ್ರರಂಗದಲ್ಲೇ 511 ದಿನಗಳ ಪ್ರದರ್ಶನ ಕಾಣುವ ಮೂಲಕ ಒಂದು ಅದ್ಭುತ ದಾಖಲೆ ಬರೆದಿರುವ ‘ಚಾಲಿಪೆÇೀಲಿಲು’ ತಂಡದ ಹೆಚ್ಚಿನೆಲ್ಲ ಕಲಾವಿದರು ಈ ಚಿತ್ರದಲ್ಲೂ ಇದ್ದಾರೆ. ಉತ್ಪಲ್ ನಾಯನಾರ್ ಅವರ ಕೆಮರಾ ಕೈಚಳಕ ‘ದಬಕ್ ದಬಾ…

