ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ : ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಧೈರ್ಯತುಂಬುವ ದೃಷ್ಟಿಯಿಂದ ರಾಜ್ಯದ ಹತ್ತು ಕೇಂದ್ರಗಳಲ್ಲಿ ನಡೆಯುತ್ತಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಕಾನ್ಫಿಡೆನ್ಸ್ ಟೆಸ್ಟ್ ಹಝ್ರತ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಉಳ್ಳಾಲದಲ್ಲಿ ನಡೆಯಿತು. ಕೊಠಡಿ ಮೇಲ್ವಿಚಾರಕರಾಗಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಮುಸ್ತಫಾ ಮಾಸ್ಟರ್ ಉಳ್ಳಾಲ, ಜಿ. ಎ. ಇಬ್ರಾಹಿಂ ಅಜ್ಜಿನಡ್ಕ, ಅನ್ಸಾರ್ ಮಾಸ್ಟರ್ ಫಜೀರು, ಶಿಯಾಬುದ್ಧೀನ್ ತಲಪಾಡಿ ಹಾಗೂ ಹಮೀದ್ ತಲಪಾಡಿ ಉಪಸ್ಥಿತರಿದ್ದರು.
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ : ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ರಾಜ್ಯವ್ಯಾಪ್ತಿ ನಡೆಯುತ್ತಿರುವ ಭಯೋತ್ಪಾದನೆ ವಿರುದ್ಧ ಜಿಹಾದ್ ಜನಾಂದೋಲನದ ಪ್ರಯುಕ್ತ ಬೈಕ್ ರ್ಯಾಲಿಯು ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಅಬ್ಬಾಸ್ ಉಸ್ತಾದ್ ಮಂಜನಾಡಿರವರ ನೇತೃತ್ವದಲ್ಲಿ ಅಲ್-ಮದೀನಾ ಮಂಜನಾಡಿಯಿಂದ ದೇರಳಕಟ್ಟೆ ಜಂಕ್ಷನ್ ತನಕ ನಡೆಯಿತು. ಕಾರ್ಯಕ್ರಮದಲ್ಲಿ ಇಸ್ಮಾಯಿಲ್ ಹಾದಿ ತಂಙಳ್ ಉಜಿರೆ ದುಅ: ನೆರವೇರಿಸಿದರು. ಕೇಂದ್ರ ಮುಶಾವರ ಸದಸ್ಯರಾದ ಡಾ| ಹುಸೈನ್ ಸಖಾಫಿ ಚುಲ್ಲಿಕೋಡ್ ಭಯೋತ್ಪಾದನೆ ವಿರುದ್ಧ ಜಿಹಾದ್ ಎಂಬ ವಿಷಯದಲ್ಲಿ ಸಂದೇಶ ಭಾಷಣಗೈದರು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಎನ್. ಎಸ್. ಕರೀಂ ಧ್ವಜ ಹಸ್ತಾಂತರಿಸಿ ಉದ್ಘಾಟನೆಗೈದರು. ಕಾರ್ಯಕ್ರಮದಲ್ಲಿ ಅಶ್ರಫ್ ಸಖಾಫಿ ಕಿನ್ಯ, ಜಿಲ್ಲಾ ಕೋಶಾಧಿಕಾರಿ ಅಲ್ತಾಫ್ ಕುಂಪಲ, ಡಿವಿಷನ್ ಕೋಶಾಧಿಕಾರಿ ಫಾರೂಕ್ ಸಖಾಫಿ ಮದನಿನಗರ, ಮುನೀರ್ ಸಖಾಫಿ ಉಳ್ಳಾಲ, ಇಬ್ರಾಹಿಂ ಅಹ್ಸನಿ ಮಂಜನಾಡಿ, ಸೈಯದ್ ಖುಬೈಬ್ ತಂಙಳ್ ಉಳ್ಳಾಲ ಉಪಸ್ಥಿತರಿದ್ದರು. ಡಿವಿಷನ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿ, ವಂದಿಸಿದರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಎಂಐಎಯು ವಿಕಿರಣ ತಂತ್ರಜ್ಞಾನದ ಕುರಿತೂ ಡಿಪೆÇ್ಲಮಾ ಶಿಕ್ಷಣವನ್ನು ಆರಂಭಿಸಲು ಮತ್ತು ರೇಡಿಯೊಐಸೊಟೋಪ್ ಅಪ್ಲಿಕೇಶನ್ ಮತ್ತು ವಿಕಿರಣ ತಂತ್ರಜ್ಞಾನ ಕೇಂದ್ರದಲ್ಲಿ ಲಭ್ಯವಿರುವ ಸೌಕರ್ಯಗಳನ್ನು ಬಳಸಿಕೊಂಡು ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸಂಶೋಧನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಆಸಕ್ತಿಹೊಂದಿದೆ. ಮುಂದಿನ ದಿನಗಳಲ್ಲಿ ಪ್ರತಿಷ್ಠಿತ ರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸೇರಿಕೊಂಡು ಅವುಗಳ ಸಹಯೋಗದೊಂದಿಗೆ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮಂಗಳೂರು ವಿಶ್ವವಿದ್ಯಾಲಯ ಯೋಜನೆ ರೂಪಿಸುತ್ತಿದೆ. ನೂತನ ಕೋರ್ಸನ್ನು ಆರಂಭಿಸಲು ಸಿದ್ಧತೆಗಳು ನಡೆಯುತ್ತಿದ್ದು ಮುಂಬೈಯ ಬಾಬಾ ಪರಮಾಣು ಸಂಶೋಧನಾ ಕೇಂದ್ರದ ಅನುಮತಿ ದೊರೆತ ತಕ್ಷಣ ಆರಂಭಿಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಕೆ. ಬೈರಪ್ಪ ಹೇಳಿದ್ದಾರೆ. ಅವರು ವೈದ್ಯಕೀಯ ಭೌತಶಾಸ್ತ್ರ ವಿಭಾಗದ ಎಂಎಸ್ಸಿ ವಿದ್ಯಾರ್ಥಿಗಳಿಗೆ ತರಬೇತಿ ಪಡೆಯಲು ಮತ್ತು ಇಂಟರ್ನ್‍ಶಿಪ್‍ಗೆ ಸೇರಿಸಿಕೊಳ್ಳುವ ಸಲುವಾಗಿ ಮಂಗಳೂರು ವಿಶ್ವವಿದ್ಯಾಲಯವು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಓಂಕೋಲೊಜಿಯೊಂದಿಗೆ ಪರಸ್ಪರ ಹೊಂದಾಣಿಕೆಯ ಒಪ್ಪಂದದ ವೇಳೆ ಭಾಗವಹಿಸಿ ಮಾತನಾಡಿದರು. ಮಂಗಳೂರು ವಿಶ್ವವಿದ್ಯಾಲಯದ ನೋಂದಣಾಧಿಕಾರಿ ಪೆÇ್ರ. ಟಿ.ಡಿ ಕೆಂಪರಾಜು ಮತ್ತು ಎಂಐಎಯ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಸರಣಿ ಅಪಘಾತ ನಡೆದು ಬಸ್ಸಿಗೆ ನಿಂತ ಮಹಿಳೆಗ ರಿಕ್ಷಾ ಗುದ್ದಿ ಅವರು ಪವಾಡಸದೃಶವಾಗಿ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ನಡೆದಿದೆ. ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಕಿರಿದಾದ ರಸ್ತೆಯಲ್ಲಿ ವಾಹನಗಳು ತೆರಳಬೇಕಿದೆ. ಇಲ್ಲಿ ರಿಕ್ಷಾ, ಟಾಟ ಮ್ಯಾಜಿಕ್ ಮತ್ತು ಸರಕು ಸಾಗಾಟದಲಾರಿ ಜತೆಗೆ ಚಲಿಸಿದ ಪರಿಣಾಮ ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದು,ರಿಕ್ಷಾ ರಸ್ತೆಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಗೆ ತಾಗಿ ಮಹಿಳೆ ರಸ್ತೆಗೆಸೆಯಲ್ಪಟ್ಟು ಪವಾಡಸದೃಶವಾಗಿ ಪಾರಾಗಿದ್ದಾರೆ. ಘಟನೆಯಿಂದ ರಸ್ತೆಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಅಪ್ರಾಪ್ತೆಯನ್ನು ಯುವಕನೋರ್ವ ಅಪಹರಣಗೈದಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದಲ್ಲಿ ನಡೆದಿದೆ. ಅಪಹರಣಕ್ಕೆ ಒಳಗಾಗಿರುವ ಬಾಲಕಿ (16) ವಯಸ್ಸಿನವಳಾಗಿದ್ದು, ಕೊಲ್ಯದ ಖಾಸಗಿ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯಾಗಿದ್ದಾಳೆ. ಫೆ 20 ರಂದು ಶಾಲೆಗೆಂದು ತೆರಳಿದ ವಿದ್ಯಾರ್ಥಿನಿ ಬಳಿಕ ವಾಪಸ್ಸಾಗಿರಲಿಲ್ಲ. ಈ ಬಗ್ಗೆ ಮನೆಮಂದಿ ಸಂಶಯಗೊಂಡು ಸ್ಥಳೀಯವಾಗಿ ವಿಚಾರಿಸಿದಾಗ ನೆರೆಮನೆಯ ಯುವಕನೋರ್ವನು ನಾಪತ್ತೆಯಾಗಿರುವ ವಿಚಾರ ಗೊತ್ತಾಗಿದೆ. ಬಳಿಕ ಈತನೇ ವಿದ್ಯಾರ್ಥಿನಿಯನ್ನು ಅಪಹರಿಸಿರುವ ವಿಚಾರ ಬೆಳಕಿಗೆ ಬಂದಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ. ಅಪಹರಣಕಾರ ಬಜರಂಗದಳ ಕಾರ್ಯಕರ್ತ. ವಿದ್ಯಾರ್ಥಿನಿಯನ್ನು ಅಪಹರಿಸಿದ ಯುವಕ ಕುಂಪಲ ಮೂರುಕಟ್ಟೆ ನಿವಾಸಿ ಶಶಿ (21)ಎಂಬವನಾಗಿದ್ದಾನೆ. ಈತ ಕುಂಪಲ ಭಾಗದಲ್ಲಿ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದಾನೆ. ವಿದ್ಯಾರ್ಥಿನಿ ಶಾಲೆಗೆ ತೆರಳುವ ಸಂದರ್ಭದಲ್ಲಿ ಆಕೆಯ ಪರಿಚಯ ಬೆಳೆಸಿಕೊಂಡಿದ್ದ ಈತ ಅದನ್ನೇ ದುರುಪಯೋಗಪಡಿಸಿಕೊಂಡು ಅಪಹರಣಗೈದಿರುವ ಶಂಕೆ ಹೆತ್ತವರು ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಶಶಿ ಸ್ನೇಹಿತರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ
ಅಂಬ್ಲಮೊಗರು : ಬಿಜೆಪಿ ಮತ್ತು ಕಾಂಗ್ರೆಸ್ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ತಾವೆಷ್ಟು ಸ್ಥಾನ ಗಳಿಸಿದ್ದೇವೆ ಎನ್ನುವ ಚಿಂತನೆಯಲ್ಲಿ ಮಗ್ನವಾಗಿದೆ. ಆದರೆ ಸಿಪಿಐಎಂ ಮತ್ತು ಅದರ ಸಹ ಸಂಘಟನೆಗಳು ಗ್ರಾಮೀಣ ಪ್ರದೇಶದ ಕಾರ್ಮಿಕರ ಪರ ಹೋರಾಟ ನಡೆಸುವ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದು, ಇದೇ ಇತರ ರಾಜಕೀಯ ಪಕ್ಷಗಳಿಗೆ ಮತ್ತು ಸಿಪಿಐಎಂ ಮತ್ತು ಅದರ ಸಹ ಸಂಘಟನೆಗಳಿಗಿರುವ ವ್ಯತ್ಯಾಸ ಎಂದು ಕೋಟೆಕಾರಿನ ಸರ್ಕಲ್ ಬೀಡಿ ಲೇಬರ್ ಯೂನಿಯನ್‍ನ ಕಾರ್ಯದರ್ಶಿ ಜಯಂತ್ ಉಳ್ಳಾಲ್ ಅಭಿಪ್ರಾಯಪಟ್ಟರು. ಅಂಬ್ಲಮೊಗರು ಪಂಚಾಯತ್ ವ್ಯಾಪ್ತಿಯಲ್ಲಿ ಬೀಡಿ ಕೈಗಾರಿಕೆ ಮುಚ್ಚಲ್ಪಟ್ಟರೆ ಅದಕ್ಕೆ ಬದಲಿ ಉದ್ಯೋಗ ನೀಡುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ನಡೆದ ಸ್ಥಳೀಯ ಸಂಸ್ಥೆಯಲ್ಲಿ ಬೀಡಿ ಕಾರ್ಮಿಕರ ಹೆಸರು ನೋಂದಾವಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಮಿಕರ ವಿವರದ ಅರ್ಜಿಗಳನ್ನು ಅಂಬ್ಲಮೊಗರು ಪಂಚಾಯತ್ ಅಧ್ಯಕ್ಷರಿಗೆ ಹಸ್ತಾಂತರಿಸಿ ಮಾತನಾಡಿದರು. ರಾಜ್ಯ ಮತ್ತು ಕೇಂದ್ರ ಸರಕಾರ ಆರೋಗ್ಯಕ್ಕೆ ಹಾನಿಕರ ಎನ್ನುವ ನಿಟ್ಟಿನಲ್ಲಿ ಬೀಡಿ ಕೈಗಾರಿಕೆಗಳನ್ನು ಬಂದ್ ಮಾಡುವ ಚಿಂತನೆ ನಡೆಸುತ್ತಿದೆ. ಇಂದು ರೈತರು ಆತ್ಮಹತ್ಯೆ ನಡೆಸುತ್ತಿದ್ದು, ಇದೇ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: : ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಾಲು ನೀಡುವುದರ ಬದಲು ಗೇರುಹಣ್ಣಿನ ರಸ (ಜ್ಯೂಸ್) ವನ್ನು ನೀಡಿ . ಇದರಿಂದ ಗೇರುಹಣ್ಣಿಗೆ ಜಿಲ್ಲೆಯಲ್ಲೂ ಅಧಿಕ ಬೇಡಿಕೆ ದೊರೆಯುವುದಲ್ಲದೆ ಹಾಳಾಗುವ ಹಣ್ಣುಗಳ ಸದುಪಯೋಗವನ್ನು ಮಾಡಬಹುದು. ಸರಕಾರದ ಜತೆಗೆ ಚರ್ಚಿಸಿ ಇಂತಹ ಯೋಜನೆಯನ್ನು ಚಾಲನೆಗೆ ತರಲು ಪ್ರಯತ್ನಿಸಲಾಗುವುದು ಎಂದು ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕೃಷಿ ವಿಸ್ತರಣಾ ನಿರ್ದೇಶಕ ಡಾ. ಟಿ.ಎಚ್. ಗೌಡ ಅಭಿಪ್ರಾಯಪಟ್ಟರು. ಉಳ್ಳಾಲ ಕಾಪಿಕಾಡಿನ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಡೆದ ಗೇರು ಕೃಷಿ ಮೇಳ-2016, ಗೇರು ಕೃಷಿ ತರಬೇತಿ ಹಾಗೂ ಗೇರು ಬೆಳೆ ಕ್ಷೇತ್ರೋತ್ಸವ ಉದ್ಘಾಟಿಸಿ ಮಾತನಾಡಿದರು. ಬಯಲು ಸೀಮೆ ಜನರಿಗೆ ನೀರು ಕೊಟ್ಟು ಉತ್ತಮ ಗೇರು ಬೆಳೆಗೆ ಪ್ರೋತ್ಸಾಹಿಸುವ ಕೆಲಸ ಸರಕಾರದಿಂದ ಆಗಿದೆ. ಆದರೆ ಕರಾವಳಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಬಬ್ಬುಕಟ್ಟೆ : ಕಾರೊಂದು ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ನಡೆದು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆ ಎಂಬಲ್ಲಿ ನಡೆದಿದೆ. ಸ್ಕೂಟರ್ ಸವಾರ ಕಾಪಿಕಾಡ್ ನಿವಾಸಿ ರಾಬಿನ್ (25)ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇರಳಕಟ್ಟೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಪಿಪ್ಟ್ ಕಾರು ಎದುರಿನಿಂದ ಬರುತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದು ನಂತರ ಬದಿಯಲ್ಲಿ ಬರುತ್ತಿದ್ದ ಇನ್ನೊಂದು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಸ್ಕೂಟರ್ ಸವಾರ ರಾಬಿನ್ ಅವರ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣವೇ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಗೆ ಕಾರು ಚಾಲಕನ ಅತೀ ವೇಗದ ಚಾಲನೆಯೇ ಕಾರಣವಾಗಿದೆ. ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕಾರಿನಲ್ಲಿ ಬಂದ ತಂಡವೊಂದು ಆಟವಾಡಿ ಮನೆಗೆ ವಾಪಸ್ಸಾಗುತ್ತಿದ್ದ ವಿದ್ಯಾರ್ಥಿಗೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ದೇರಳಕಟ್ಟೆ-ಅಡ್ಕರೆ ತಿರುವು ರಸ್ತೆಯಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ. ಅಡ್ಕರೆಪಡ್ಪು ನಿವಾಸಿ ಇಬ್ರಾಹಿಂ(18) ಹಲ್ಲೆಗೊಳಗಾದ ವಿದ್ಯಾರ್ಥಿ. ದೇರಳಕಟ್ಟೆಯ ಗ್ರೀನ್ ವ್ಯೂ ಟ್ಯಟೋರಿಯಲ್ ನ ವಿದ್ಯಾರ್ಥಿಯಾಗಿರುವ ಇಬ್ರಾಹಿಂ ದೇರಳಕಟ್ಟೆಯ ಗ್ರೌಂಡಿನಲ್ಲಿ ಕ್ರಿಕೆಟ್ ಆಟವಾಡಿ ಮನೆಗೆ ವಾಪಸ್ಸಾಗಲೆಂದು ಅಡ್ಕರೆ ತಿರುವು ಬಳಿ ನಿಂತಿದ್ದಾಗ ಕಾರಿನಲ್ಲ ಬಂದ ನಾಲ್ವರ ತಂಡ ಮಾರಕಾಸ್ತ್ರಗಳಿಂದ ಇಬ್ರಾಹಿಂ ಕಾಲು ಮತ್ತು ಸೊಂಟದ ಭಾಗಕ್ಕೆ ಗಂಭೀರವಾಗಿ ಹಲ್ಲೆ ನಡೆಸಿದೆ. ಇದೇ ಸಂದರ್ಭ ಇಬ್ರಾಹಿಂ ಜತೆಗೆ ಆಟವಾಡಿದ್ದ ಇಬ್ಬರು ಬಾಲಕರಿಗೂ , ಒಂದು ವಾರದ ಒಳಗೆ ನಿಮ್ಮನ್ನು ಮುಗಿಸದೇ ಬಿಡುವುದಿಲ್ಲ’ ಎಂದು ತಂಡ ಜೀವಬೆದರಿಕೆಯೊಡ್ಡಿದೆ ಎನ್ನಲಾಗಿದೆ. ಕಾರಿನಲ್ಲಿ ತಲವಾರು, ದೊಣ್ಣೆ ಸಹಿತ ಮಾರಕಾಸ್ತ್ರಗಳಿದ್ದು, ದುಷ್ಕøತ್ಯ ನಡೆಸಲೆಂದೇ ತಂಡ ಹೊಂಚು ಹಾಕಿ ಬಂದಿತ್ತೆನ್ನಲಾಗಿದೆ. ತಂಡ ಬಂದಿದ್ದ ಕಾರಿನ ನೋಂದಣಿ ಸಂಖ್ಯೆ ಕೆ.ಎ.19 ಎಂಬಿ 9403 ಎಂಬುದಾಗಿದ್ದು,…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಯೊಂದಿಗೆ ದೈಹಿಕ ಆರೋಗ್ಯವನ್ನು ಕಾಪಾಡುವಲ್ಲಿ ಕ್ರೀಡಾಕೂಟಗಳು ಸಹಕಾರಿ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ ಸಹ ಕುಲಾ„ಪತಿ ವಿಶಾಲ್ ಹೆಗ್ಡೆ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯ ಕ್ಷೇಮ ಆಡಿಟೋರಿಯಂನಲ್ಲಿ ನಿಟ್ಟೆ ವಿಶ್ವದ್ಯಾನಿಲಯ ಮತ್ತು ನಿಟ್ಟೆ ಎಜ್ಯಕೇಶನ್ ಟ್ರಸ್ಟ್‍ಗೆ ಒಳಪಟ್ಟ ಅ„ೀನ ಕಾಲೇಜುಗಳ `4ನೇ ನಿಟ್ಟೆ ಕ್ರೀಡೋತ್ಸವ’ಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ರಿಡೋತ್ಸವವನ್ನು ನಿಟ್ಟೆ ಗುಲಾಬಿ ಶೆಟ್ಟಿ ಸ್ಮಾರಕ ಫಾರ್ಮಸ್ಯುಟಿಕಲ್ ಸೈನ್ಸಸ್ ಕಾಲೇಜು ಆಯೋಜಿಸಿತ್ತು. ಶೈಕ್ಷಣಿಕವಾಗಿ ವಿದ್ಯಾರ್ಥಿಗಳು ಒತ್ತಡದಲ್ಲಿರುವುದು ಸಹಜ ಆದರೆ ಕ್ರೀಡಾಕೂಟಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಎಲ್ಲರು ಒಟ್ಟಿಗೆ ಸೇರಿ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ನಿಟ್ಟೆ ಕ್ರೀಡೋತ್ಸವ ವಿದ್ಯಾರ್ಥಿಗಳಲ್ಲಿ ಹೊಸ ಹುರುಪನ್ನು ನೀಡಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಸಚಿವ ಡಾ| ಎಂ.ಎಸ್. ಮೂಡಿತ್ತಾಯ ವಹಿಸಿದ್ದರು. ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಡೀನ್ ಡಾ| ಸತೀಶ್ ಭಂಡಾರಿ, ಎ.ಬಿ.ಶೆಟ್ಟಿ ಮೆಮೋರಿಯಲ್ ದಂತ ವಿe್ಞÁನ ಮಹಾವಿದ್ಯಾಲಯದ ಡೀನ್…

