ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ:ವೈದ್ಯಕೀಯ ಸೇವೆಯನ್ನು ಯಾವುದೇ ಕಾರಣಕ್ಕೂ ವಾಣಿಜ್ಯ ದೃಷ್ಟಿಯಿಂದ ನೋಡಬಾರದು. ಯಾಕೆಂದರೆ ಜನರು ವೈದ್ಯರನ್ನು ದೇವರಂತೆ ಭಾವಿಸಿದ್ದು ಆ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಆದರೆ ಪ್ರಸ್ತುತ ದಿನಗಳಲ್ಲಿ ದೇಶವ್ಯಾಪಿ ಬಹತೇಕ ವೈದ್ಯರು ನಗರಪ್ರದೇಶದಲ್ಲಿಯೇ ಸೇವೆ ಸಲ್ಲಿಸಲು ಉತ್ಸುಕರಾಗುತ್ತಿರುವುದರಿಂದ ಗ್ರಾಮೀಣ ಭಾಗದ ಜನತೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಹಿಂದೆ ಬೀಳುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ಜೆ.ಆರ್. ಲೋಬೋ ಅಭಿಪ್ರಾಯಪಟ್ಟರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ವಿದ್ಯಾರ್ಥಿಗಳ ಜ್ಞಾನವರ್ಧನೆ ಹಾಗೂ ಇತ್ತೀಚಿನ ವೈದ್ಯಕೀಯ ಬೆಳವಣಿಗೆಯ ಕುರಿತಂತೆ ಮಾಹಿತಿ ನೀಡುವ ಸಲುವಾಗಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ರಾಷ್ಟ್ರೀಯ ಹೋಮಿಯೋಪಥಿ ಸಮ್ಮೇಳನವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಎಲ್ಲ ಸೇವೆಗಳಿಗಿಂತಲೂ ವೈದ್ಯಕೀಯ ಸೇವೆ ಮಿಗಿಲು. ವೈದ್ಯರುಗಳಿಗೆ ಸಮಾಜದಲ್ಲಿ ಮಹತ್ತರ ಜವಬ್ದಾರಿ ಇದೆ. ವೈದ್ಯರುಗಳ ಸೇವೆ ಗ್ರಾಮೀಣ ಭಾಗಕ್ಕೂ ಲಭ್ಯವಾಗಬೇಕೆಂಬ ನೆಲೆಯಲ್ಲಿ ರಾಜ್ಯ ಸರಕಾರ ಯುವವೈದ್ಯರ ಸೇವೆ ಗ್ರಾಮೀಣ…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಂಬಿಕಾರೋಡ್: ನೇತ್ರಾವತಿ ನದಿ ತಿರುವಿನ ಎತ್ತಿನಹೊಳೆ ಯೋಜನೆ ಹಿಂದೆ ಗುಪ್ತ ಕಾರ್ಯಸೂಚಿ ಅಡಗಿದ್ದು, ಜಿಲ್ಲೆಯ ಜನ ಸರಿಯಾಗಿ ಯೋಚಿಸದೆ ವಿರೋಧಿಸದಿದ್ದಲ್ಲಿ ಭವಿಷ್ಯದಲ್ಲಿ ಅನಾಹುತಗಳಿಗೆ ಸಿಲುಕುವುದರಲ್ಲಿ ಸಂಶಯವಿಲ್ಲ ಎಂದು ಸುರತ್ಕಲ್ ಎನ್‍ಐಟಿಕೆಯ ನಿವೃತ್ತ ಪ್ರೊ. ಎಸ್.ಜಿ.ಮಯ್ಯ ಎಚ್ಚರಿಕೆ ನೀಡಿದ್ದಾರೆ. ಅವರು ದಕ್ಷಿಣ ವಲಯ ಮಂಗಳೂರು ಧರ್ಮಪ್ರಾಂತ್ಯ , ದಕ್ಷಿಣ ವಲಯ ಕೆಥೋಲಿಕ್ ಸಭಾ, ತೊಕ್ಕೊಟ್ಟು ವಾಸುಕೀ ಸೇವಾ ಸಂಘ , ತುಳುನಾಡು ರಕ್ಷಣಾ ವೇದಿಕೆ, ತೊಕ್ಕೊಟ್ಟು ವಿದ್ಯಾಗಣಪತಿ ರಾಮ ಸೇವಾ ಸಮಿತಿ ವತಿಯಿಂದ ಗುರುವಾರ ಕಾಪಿಕಾಡಿನ ಅಂಬಿಕಾರೋಡಿನಲ್ಲಿರುವ ಗಟ್ಟಿ ಸಮಾಜಭವನದಲ್ಲಿ ನಡೆದ ನೇತ್ರಾವತಿ ನದಿ ತಿರುವು ವಿರೋಧಿಸಿ ಸಮಾನ ಮನಸ್ಕರ ಚಿಂತನ-ಮಂತನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಎತ್ತಿನಹೊಳೆ ಯೋಜನೆ ಕೆಲ ಜನಪ್ರತಿನಿಧಿಗಳು ಉದ್ದೇಶಪೂರ್ವಕವಾಗಿ ಮಾಡುತ್ತಿರುವ ತಪ್ಪಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ದೇವನಹಳ್ಳಿ ಕೈಗಾರಿಕಾ ವಲಯ ಸೇರಿದಂತೆ ರಾಜ್ಯದ ವಿವಿದೆಡೆ ನೇತ್ರಾವತಿ ನೀರು ಕೊಡುವ ಭರವಸೆ ನೀಡಿದ್ದಾರೆ. ಆದರೆ ಕೊಡುವಂತಹ 24 ಟಿಎಂಸಿ ನೀರು ಕೈಗಾರಿಕಾ ವಲಯಗಳಿಗೂ ಪೂರೈಕೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುನ್ನೂರು: ಸಿಲಿಂಡರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಮನೆಮಾಲೀಕ ಪವಾಡಸದೃಶವಾಗಿ ಪಾರಾದ ಘಟನೆ ಸುಭಾಷನಗರದ ಪಲ್ಕೆ ಎಂಬಲ್ಲಿ ಗುರುವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಮುನ್ನೂರು ಪಂಚಾಯಿತಿ ವ್ಯಾಪ್ತಿಯ ಸುಭಾಷನಗರದ ಪಲ್ಕೆ ನಿವಾಸಿ ಮಹಮ್ಮದ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಪತ್ನಿ ಆಯೇಷಾ ಬೀಬಿ ಮತ್ತು ಒಂಭತ್ತು ತಿಂಗಳ ಮಗು ಫಾತಿಮತ್ ಮುಫೀರಾ ಮದುವೆ ಸಮಾರಂಭಕ್ಕೆ ತೆರಳಿದ್ದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ. ಘಟನೆ ವಿವರ: ಮಹಮ್ಮದ್ ಅವರ ನೂತನ ಮನೆಯ ಕೆಲಸ ನಡೆಯುತ್ತಿದ್ದು, ಅಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಚಹಾ ಇಡಲೆಂದು ಮಹಮ್ಮದ್ ಗ್ಯಾಸ್ ಸ್ಟವ್ ಅನ್ನು ಉರಿಸಿ ಹೊರ ನಡೆದಿದ್ದರು. ಸ್ವಲ್ಪ ಹೊತ್ತಿನಲ್ಲೇ ಸ್ಟವ್ ನ ರೆಗ್ಯುಲೇಟರ್ ಮತ್ತು ಪೈಪಿನಲ್ಲಿ ಬೆಂಕಿ ಉಂಟಾಗಿ, ಮನೆಯ ಸೋಫಾ, ಫ್ರಿಡ್ಜ್ ಹಾಗೂ ಇನ್ನಿತರ ಸಾಮಗ್ರಿಗಳು ಹೊತ್ತಿ ಉರಿದಿವೆ. ಕೂಡಲೇ ನೀರೆರಚಿ ಬೆಂಕಿಯನ್ನು ನಂದಿಸುವ ಯತ್ನ ಮಾಡಿದ್ದರಿಂದಾಗಿ ಮನೆ ಸುಟ್ಟು ಹೋಗುವುದು ತಪ್ಪಿದಂತಾಗಿದೆ. ಘಟನೆಯಿಂದಾಗಿ ರೂ.20,000 ನಷ್ಟ ಸಂಭವಿಸಿದೆ. 20 ದಿನಗಳ ಹಿಂದೆ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಬೀಡಿ ಉತ್ಪಾದನೆಯ ಪ್ರಕ್ರಿಯೆಯಲ್ಲಿ ತೊಡಗಿರುವ ಕಾರ್ಮಿಕರಿಗೆ ಬೆಲೆ ಏರಿಕೆಗೆ ಅನುಸಾರವಾಗಿ 1983 ರಿಂದ ಜಾರಿಯಲ್ಲಿರುವ ತುಟ್ಟಿಭತ್ಯೆ ಕಾನೂನನ್ನು 2015-16 ಆರ್ಥಿಕ ವರ್ಷದಲ್ಲಿ ಕಂಪೆನಿ ನೀಡದೆ ಉಲ್ಲಂಘಿಸಿರುವುದರಿಂದ ಅನ್ಯಾಯಕ್ಕೊಳಗಾದ ಬೀಡಿ ಕಾರ್ಮಿಕರ ಪರವಾಗಿ ಕೋಟೆಕಾರು ಸರ್ಕಲ್ ಬೀಡಿ ಲೇಬರ್ ಯೂನಿಯನ್ ವತಿಯಿಂದ ಗುರುವಾರ ಉಳ್ಳಾಲದಲ್ಲಿ ಪ್ರತಿಭಟನೆ ನಡೆಯಿತು. ಕಾರ್ಮಿಕರಿಗೆ 2015 ಎ.1 ರಿಂದ ಸಾವಿರ ಬೀಡಿಗೆ, ಉತ್ಪಾದನೆಯ ಮೇಲೆ ಸಿಗಬೇಕಾಗಿದ್ದ ರೂ.12.75 ತುಟ್ಟಿ ಭತ್ಯೆ ಹಣ ಹಾಗೂ ಅದಕ್ಕೆ ಹೊಂದಿಕೊಂಡು ಸಿಗಬೇಕಾಗಿರುವ ರೂ. 3.37 ಬೋನಸ್, ಭವಿಷ್ಯನಿಧಿ ಹಣದಲ್ಲಿ ವಂಚನೆಯಾಗಿದೆ. ಬೆಲೆ ಏರಿಕೆಯಿಂದ ತತ್ತರಿಸುವ ಸಮಯದಲ್ಲಿ ಕಾರ್ಮಿಕರು ಇಂತಹ ವಂಚನೆಯಿಂದ ಅನ್ಯಾಯಕ್ಕೊಳಗಾಗಿದ್ದಾರೆ. ತುಟ್ಟಿ ಭತ್ಯೆ ಕಾಯ್ದೆಯನ್ನು ಸರಕಾರ ರದ್ದುಗೊಳಿಸದ ಹಿನ್ನೆಲೆಯಲ್ಲಿ ಸರಕಾರದ ಆದೇಶವನ್ನು ಕಂಪೆನಿ ಉಲ್ಲಂಘಿಸಿದಂತಾಗಿದೆ. ಈ ಕ್ರಮವನ್ನು ಹಿಂದಕ್ಕೆ ಪಡೆದು ಕೊಡಬೇಕಾದ ತುಟ್ಟಿ ಭತ್ಯೆಯನ್ನು ಕೂಡಲೇ ವಿತರಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಕಂಪೆನಿ ವಿತರಿಸುತ್ತಿರುವ ನಕರಿ ಎಲೆಯಿಂದಾಗಿ ಕಾರ್ಮಿಕರಿಗೆ ಬೀಡಿ ಕಟ್ಟಲು ಅಸಾಧ್ಯವಾಗುತ್ತಿದೆ.…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುನ್ನೂರು: ಕಟ್ಟಡ ಮತ್ತು ಇತರೆ ನಿರ್ದಿಷ್ಟ ಕಾರ್ಮಿಕರ ಸಂಘ ಸಿಐಟಿಯು ಇದರ ಸಂಘಟನೆ ಮತ್ತು ಮಾಹಿತಿ ಕಾರ್ಯಕ್ರಮವು ಮುನ್ನೂರು ಯುವಕ ಮಂಡಲದ ಎಮ್.ವೈ.ಎಮ್. ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜನಾರ್ಧನ್ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಕೋಶಾಧಿಕಾರಿಯಾಗಿ ಯೋಗೀಶ್ ಜಪ್ಪಿನಮೊಗರು ಇವರು ಕಾರ್ಮಿಕರಿಗೆ ಮಂಡಳಿಯಲ್ಲಿ ಸಿಗುವ ಸವಲತ್ತುಗಳನ್ನು ಪಡೆಯುವ ಬಗ್ಗೆ ಮಂಡಳಿಗೆ ನೊಂದಾವಣಿಗೊಳಿಸುವ ಬಗ್ಗೆ ಕಟ್ಟಡ ಕಾರ್ಮಿಕರಿಗೆ ಮಾಹಿತಿಯನ್ನು ನೀಡಿದ್ದರು. ಜಿಲ್ಲಾ ಸಿ.ಐ.ಟಿ.ಯು ಜೊತೆ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಸಂಘಟನೆಯ ಬಗ್ಗೆ ತರಬೇತಿ ಮಾಡಿದ್ದರು. ಉಳ್ಳಾಲ ವಲಯ ಕಾರ್ಯದರ್ಶಿ ಕೃಷ್ಣಪ್ಪ ಸಾಲಿಯಾನ್ ಕಾರ್ಮಿಕರಿಗೆ ಸಿಗುವ ಸವಲತ್ತುಗಳ ವಿಳಂಭ ಧೋರಣೆಯ ಬಗ್ಗೆ ಕಾರ್ಮಿಕರಿಗೆ ಮಾಹಿತಿ ನೀಡಿ ಮಂಡಳಿಯಲ್ಲಿ 12 ಬಗೆಯ ಸವಲತ್ತುಗಳು ಇವೆ. ಆದರೆ ಅರ್ಜಿ ಹಾಕಿ ವರ್ಷ ಕಳೆದರೂ ಸವಲತ್ತು ಕಾರ್ಮಿಕರ ಕೈಗೆ ಸಿಗುತ್ತಿಲ್ಲ. ಸಿಐಟಿಯು ಹೋರಾಟದ ಫಲವಾಗಿ ಕಟ್ಟಡ ಕಾರ್ಮಿಕರ ಮಂಡಳಿ ರಚನೆಯಾಗಿದೆ. ಕಾನೂನು ಸವಲತ್ತುಗಳನ್ನು ಜಾರಿಗೊಳಿಸಲು ಸಾಧ್ಯವಾಗಿದೆ. ಆದರೆ ಈಗ ಕಾರ್ಮಿಕ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಲ್ಯ: ದ.ಕ.ಜಿಲ್ಲೆಗೆ ಮಾರಕವಾಗಿರುವ ಎತ್ತಿನಹೊಳೆ ಯೋಜನೆಯನ್ನು ಕೈ ಬಿಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಕೊಲ್ಯ ಸೋಮೇಶ್ವರ ಬಿಲ್ಲವ ಸಂಘ ಸಭೆಯಲ್ಲಿ ನಿರ್ಣಯಿಸಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ವಿರುದ್ಧದ ಹೋರಾಟದಲ್ಲಿ ಸರ್ವ ಸದಸ್ಯರು ಭಾಗವಹಿಸುವಂತೆ ನಿರ್ಣಯ ಕೈಗೊಳ್ಳಲಾಯಿತು. ತುಳುನಾಡಿನ ಪ್ರಕೃತಿದತ್ತವಾದ ನೇತ್ರಾವತಿ ನದಿಯನ್ನು ನುಂಗಿ, ಜಲಮೂಲವನ್ನು ನಾಶಮಾಡಿ ಮುಂದಿನ ದಿನಗಳಲ್ಲಿ ತೀವ್ರ ಜಲಕ್ಷಾಮ ತಂದೊಡ್ಡುವ ಗೊತ್ತು ಗುರಿಯಿಲ್ಲದ ಎತ್ತಿನ ಹೊಳೆ ಯೋಜನೆಯನ್ನು ಕೈ ಬಿಡಬೇಕು . ಜಿಲ್ಲೆಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸರ್ವಸದಸ್ಯರು ಹೋರಾಟದಲ್ಲಿ ಭಾಗವಹಿಸಬೇಕು , ಈ ಅವೈಜ್ಞಾನಿಕ ಯೋಜನೆಯನ್ನು ತಕ್ಷಣ ನಿಲ್ಲಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಹಾಗೂ ಮಂಗಳೂರು ದಸರಾ ಕಾರ್ಯಕ್ರಮದಲ್ಲಿ ಎಲ್ಲಾ ಸದಸ್ಯರು ಸ್ವಯಂ ಸೇವಕರಾಗಿ ಭಾಗವಹಿಸಲು ನಿರ್ಧರಿಸಲಾಯಿತು. ಟೈಲರ್ಸ್ ಅಸೋಸಿಯೇಷನ್ ಬೆಂಬಲ: ನೇತ್ರಾವತಿ ಉಳಿಸಿ ಹೋರಾಟಕ್ಕೆ ಉಳ್ಳಾಲ ವಲಯದ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿದೆ ಎಂದು ಅಧ್ಯಕ್ಷ ಬಿ.ನಾರಾಯಣ ಕುಂಪಲ ಹೇಳಿದ್ದಾರೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ : ದೇರಳಕಟ್ಟೆ ಜಂಕ್ಷನ್ ಹಾಗೂ ಕೆ.ಎಸ್.ಹೆಗ್ಡೆ ಆಸ್ಪತ್ರೆ ಮುಂಭಾಗದಲ್ಲಿ ಜನದಟ್ಟಣೆ ಇದ್ದು ಈ ರಸ್ತೆಯ ಮೂಲಕ ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು ಆ ಹಿನ್ನೆಲೆಯಲ್ಲಿ ಸರಕಾರ ಬಸ್ ನಿಲುಗಡೆಗೆ ದೇರಳಕಟ್ಟೆ ಜಂಕ್ಷನ್ ಹಾಗೂ ಕೆ.ಎಸ್.ಹೆಗ್ಡೆ ಆಸ್ಪತ್ರೆ ಮುಂಭಾಗದಲ್ಲಿ ಸುಸಜ್ಜಿತವಾದ ವ್ಯವಸ್ಥೆ ಮಾಡಿದ್ದರೂ ಬಸ್ ಚಾಲಕರು ನಿರಂತರವಾಗಿ ಅವೈಜ್ಞಾನಿಕವಾಗಿ ಬಸ್ ನಿಲುಗಡೆಗೊಳಿಸುವುದರಿಂದ ಅಪಘಾತಗಳು ಹೆಚ್ಚುತ್ತಿದ್ದು ಅಂತಹ ಕ್ರಮವನ್ನು ತುಳುನಾಡ ರಕ್ಷಣಾ ವೇದಿಕೆ ಖಂಡಿಸಿದ್ದು, ಸರಕಾರ ವ್ಯಸವ್ಥೆಗೊಳಿಸಿದ ಬಸ್ ನಿಲುಗಡೆಯ ಸ್ಥಳದಲ್ಲಿಯೇ ನಿಲುಗಡೆಗೊಳಿಸಬೇಕು ಎಂದು ಒತ್ತಾಯಿಸಿದ್ದು, ಆ ಬಗ್ಗೆ ಪೆÇಲೀಸ್ ಇಲಾಖೆ ಶೀಘ್ರದಲ್ಲಿ ಸೂಕ್ತ ಕ್ರಮಕೈಗೊಳ್ಳದಿದ್ದರೆ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ತುಳುನಾಡು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಡಾ. ಹಾಜಿ ಕೆ. ಎ. ಮುನೀರ್ ಬಾವಾ ತಿಳಿಸಿದ್ದಾರೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಕಾರಿನಲ್ಲಿ ರೊಮ್ಯಾನ್ಸ್ ನಡೆಸುತ್ತಿದ್ದ ಜೋಡಿಯನ್ನು ಉಳ್ಳಾಲ ಪೊಲೀಸರು ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಿದ ಪ್ರಸಂಗ ಸೋಮೇಶ್ವರ ಸಮುದ್ರ ತೀರದ ನಿರ್ಜನ ಪ್ರದೇಶದಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಸಾಂಧರ್ಬಿಕ ಚಿತ್ರ ಬೆಳಿಗ್ಗೆ 10ಗಂಟೆಗೆ ಸುಮಾರಿಗೆ ಬಂದಿದ್ದ ಕಾರು ಬಹಳ ಹೊತ್ತಾದರೂ ಕದಲದೇ ಇರುವುದನ್ನು ಗಮನಿಸಿದ ಸ್ಥಳಿಯರೋರ್ವರಿಗೆ ಕಾರಿನಲ್ಲಿ ಜೋಡಿಯೊಂದು ಪ್ರಣಯದಾಟದಲ್ಲಿ ಇರುವುದು ಕಂಡುಬಂದಿದೆ. ಮುಂಜಾಗ್ರತಾ ಕ್ರಮವಾಗಿ ಮುಂದೆ ಸ್ಥಳದಲ್ಲಿ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ ಸ್ಥಳೀಯರೊಬ್ಬರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜೋಡಿಯನ್ನು ವಿಚಾರಣೆಗೆ ತೆಗೆದುಕೊಂಡು ಇಬ್ಬರೂ ನೆರೆಹೊರೆಯವರಾಗಿದ್ದು, ಪ್ರೇಮಿಗಳೆಂದು ತಿಳಿಸಿದ್ದಾರೆ. ಬಳಿಕ ಇಬ್ಬರಿಗೂ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆನ್ನಲಾಗಿದೆ. ಸ್ಥಳೀಯರ ಪ್ರಕಾರ ಯುವಕ ಕ್ರಿಶ್ಚಿಯಾನ್ ಸಮುದಾಯಕ್ಕೆ ಸೇರಿದವನಾಗಿದ್ದು, ಯುವತಿ ಉತ್ತರಕರ್ನಾಟಕ ಮೂಲದವರೆಂದು ತಿಳಿದುಬಂದಿದೆ. ಸೋಮೇಶ್ವರ ಕಡಲ ತೀರದಲ್ಲಿ ಇಂತಹ ಅನೈತಿಕ ವ್ಯವಹಾರಗಳು ಸರ್ವೇಸಾಮಾನ್ಯವಾಗಿದ್ದು, ಧಾರ್ಮಿಕ ಕ್ಷೇತ್ರ ಹತ್ತಿರದಲ್ಲೇ ಇರುವ ಕಾರಣ ಇಲ್ಲಿಗೆ ದಿನದಲ್ಲಿ ನೂರಾರು ಭಕ್ತಾಧಿಗಳು ಬರುತ್ತಿರುತ್ತಾರೆ ಆದ್ದರಿಂದ ಈ ರೀತಿಯ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಬೆಳ್ತಂಗಡಿ :ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಬಂದ್ ಗೆ ಕರೆ ನೀಡಲಾಗಿತ್ತು. ಹಲವಾರು ಸಂಘಟನೆಗಳ ನೇತೃತ್ವದಲ್ಲಿ ಸ್ವಯಂಪ್ರೇರಿತವಾಗಿ ಬಂದ್ ಆಚರಿಸುವಂತೆ ನೀಡಿದ್ದ ಕರೆಗೆ ವ್ಯಾಪಾಕ ಬೆಂಬಲ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕೊಕ್ಕಡ, ಗೇರುಕಟ್ಟೆ ಮೊದಲಾದ ಕಡೆಗಳಲ್ಲಿ ರಸ್ತೆ ತಡೆ ಮಾಡಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಶಾಂತಿಯುತವಾಗಿ ಬಂದ್ ಆಚರಿಸಲಾಗುತ್ತಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ಕೆಎಸ್‍ಆರ್‍ಟಿಸಿಯವರು ಬಸ್ ಸ್ಥಗಿತಗೊಳಿಸಿರುವ ಹಿನ್ನಲೆಯಲ್ಲಿ ಧರ್ಮಸ್ಥಳದಿಂದ ತೆರಳುವ ಯಾತ್ರಾರ್ಥಿಗಳಿಗೆ ತೀವ್ರ ಅಡಚಣೆ ಉಂಟಾಗಿದೆ. ಧರ್ಮಸ್ಥಳಕ್ಕೆ ಬರುವ ವಾಹನಗಳಿಗೆ ತಡೆ ಒಡ್ಡಲಾಗಿದ್ದು ಯಾತ್ರಾರ್ಥಿಗಳು ಪರದಾಡುವಂತಾಗಿದೆ. ಬಂದ್ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು ಪರೀಕ್ಷೆಯನ್ನು ಮುಂದೂಡಲಾಗಿದೆ. ವಕೀಲರ ಸಂಘ ಬಂದ್‍ಗೆ ಬೆಂಬಲ ನೀಡಿರೋ ಹಿನ್ನಲೆಯಲ್ಲಿ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಲಿದ್ದಾರೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಉಳ್ಳಾಲ ಕಡೆಗೆ ವಿಹಾರಕ್ಕೆ ತೆರಳಿದ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಬೆನ್ನಟ್ಟಿದ ಮೊಗವೀರಪಟ್ನ ನಿವಾಸಿ ಐವರು ನೈತಿಕ ಪೊಲೀಸರ ತಂಡ ಕೊಣಾಜೆಯ ವಿ.ವಿ ಕ್ಯಾಂಪಸ್ಸಿನಲ್ಲಿ ವಿದ್ಯಾರ್ಥಿಯೋರ್ವನಿಗೆ ಥಳಿಸುವ ಸಂದರ್ಭ ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ನಿನ್ನೆ ಸಂಜೆ ವೇಳೆ ಸಂಭವಿಸಿದೆ. ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ವಿಭಾಗವೊಂದರ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಬಳ್ಳಾರಿ ಮೂಲದ ರಮೇಶ, ಪುತ್ತೂರು ನಿವಾಸಿ ಶಫೀವುಲ್ಲಾ ಸೇರಿದಂತೆ ಇಬ್ಬರು ಹಿಂದು ಹಾಗೂ ಒಬ್ಬಳು ಮುಸ್ಲಿಂ ವಿದ್ಯಾರ್ಥಿನಿಯರು ಜತೆಯಾಗಿ ಉಳ್ಳಾಲ ಕಡೆಗೆ ವಿಹಾರಕ್ಕೆಂದು ತೆರಳಿದ್ದರು. ಸೋಮೇಶ್ವರ ದೇವಸ್ಥಾನ, ಉಳ್ಳಾಲ ದರ್ಗಾ ಮತ್ತು ಮೊಗವೀರಪಟ್ನ ಬೀಚಿಗೆ ವಿದ್ಯಾರ್ಥಿಗಳು ವಿಹಾರಕ್ಕೆ ತೆರಳಿದ್ದರು. ಅಲ್ಲಿ ಎಲ್ಲರೂ ಜತೆಯಾಗಿ ನೀರಿನಾಟ ಆಡುತ್ತಾ ಸೆಲ್ಫೀ ಕ್ಲಿಕ್ಕಿಸುವಲ್ಲಿ ನಿರತರಾಗಿದ್ದರು. ಇದು ಸ್ಥಳೀಯ ಯುವಕರ ಗಮನಕ್ಕೆ ಬಂದಿದ್ದು, ಅಲ್ಲದೆ ತಂಡದಲ್ಲಿ ಮುಸ್ಲಿಂ ಯುವಕರು ಇರುವ ಬಗ್ಗೆ ಗೊತ್ತಾಗಿದೆ. ಮತ್ತೆ ವಿದ್ಯಾರ್ಥಿಗಳನ್ನು ಫಾಲೋ ಮಾಡಲು ತಂಡ ಶುರುಹಚ್ಚಿತ್ತು. ಇದರಿಂದ ಗಾಬರಿಗೊಂಡಿದ್ದ…

