Author: UllalaVani

Kannada News From Coastal Karnataka

ಮಂಗಳೂರು; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಾದ ರೂಪಶ್ರೀ ವರ್ಕಾಡಿ, ಮಾಸ್ಟರ್ ಅತೀಶ್ ಎಸ್ ಶೆಟ್ಟಿ, ಡಾ. ಪ್ರದೀಪ್ ಕೆಂಚನೂರು, ಶಿವಧ್ವಜ ಶೆಟ್ಟಿ, ನಿರ್ಮಾಪಕ ಪ್ರಶಾಂತ್ ರೈಯವರನ್ನು ರೋಹನ್ ಕಾರ್ಪೊರೇಷನ್‌ನ ನಿರ್ದೇಶಕ ಡಿಯೋನ್ ಮೊಂತೆರೊ ಅವರ ಅಧ್ಯಕ್ಷತೆಯಲ್ಲಿ ಬಿಜೈಯ ರೋಹನ್ ಸಿಟಿಯಲ್ಲಿ ಅಭಿನಂದಿಸಿ ಗೌರವಿಸಿದ್ದಾರೆ. ಗೌರವ ಸ್ವೀಕರಿಸಿ ಮಾತನಾಡಿದ ‘ಮಿಥ್ಯಾ’ ಚಿತ್ರಕ್ಕಾಗಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದ ರೂಪಶ್ರೀ ವರ್ಕಾಡಿ ಅವರು ಸಂತಸವನ್ನು ವ್ಯಕ್ತಪಡಿಸಿದ್ರು. ಬಳಿಕ `ಮಿಥ್ಯಾ’ ಚಿತ್ರಕ್ಕಾಗಿ ಅತ್ಯುತ್ತಮ ಬಾಲ ಕಲಾವಿದ ಪ್ರಶಸ್ತಿ ಪಡೆದ ಮಾಸ್ಟರ್ ಅತೀಶ್ ಎಸ್. ಶೆಟ್ಟಿ: ಚಲನಚಿತ್ರ ಕುರಿತ ಅತ್ಯುತ್ತಮ ಪುಸ್ತಕಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಡಾ. ಪ್ರದೀಪ್ ಕೆಂಚನೂರು; ಹಾಗೂ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ತುಳು ಚಿತ್ರವೆಂದು ಗುರುತಿಸ ಲ್ಪಟ್ಟ ‘ಇಂಬು’ ಚಿತ್ರದ ನಿರ್ದೇಶಕ ಶಿವಧ್ವಜ ಶೆಟ್ಟಿ ಮತ್ತು ನಿರ್ಮಾಪಕ ಪ್ರಶಾಂತ್ ರೈ ಅವರು ಮಾತನಾಡಿ, ರೋಹನ್ ಕಾರ್ಪೋರೇಷನ್‌ಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ರೋಹನ್ ಕಾರ್ಪೊರೇಷನ್‌ನ…

Read More

ಬಂಟ್ವಾಳ, ಜು. 27 : ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡಿದ್ದು, ಸಮೀಪದ ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನವನ್ನು ಕಳವು ಮಾಡಿದ್ದಾರೆ. ಗ್ರಾಮದಲ್ಲಿನ ನಡೆದ ಸರಣಿ ಕಳ್ಳತನ ಘಟನೆಯು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿವೆ. ಇಡ್ಕಿದು ಗ್ರಾಮದ ನಿವಾಸಿ ಹಾಗೂ ನಿವೃತ್ತ ವೈದ್ಯರಾದ ಕೆ. ಸೂರ್ಯನಾರಾಯಣ (79) ಅವರು ಮನೆಯಲ್ಲಿ ಮಲಗಿದ್ದ ವೇಳೆ, ತಡರಾತ್ರಿ ಅಪರಿಚಿತರು ಮನೆಯೊಳಗೆ ನುಗ್ಗಿದ್ದಾರೆ ಎನ್ನಲಾಗಿದೆ.ಶಬ್ದ ಕೇಳಿ ಎಚ್ಚರಗೊಂಡ ಸೂರ್ಯನಾರಾಯಣ ಅವರು ಮನೆಯೊಳಗೆ ಇಬ್ಬರು ಕಳ್ಳರು ಮನೆಗೆ ಪ್ರವೇಶಿಸಿರುವುದನ್ನು ಗಮನಿಸಿದ್ದಾರೆ. ಆರೋಪಿಗಳು ಅವರ ಹೊಟ್ಟೆಗೆ ಬಲವಾಗಿ ಹೊಡೆದು, ಅವರ ಕುತ್ತಿಗೆಯಲ್ಲಿದ್ದ ಸುಮಾರು 20 ಗ್ರಾಂ ತೂಕದ, ಅಂದಾಜು 2.60 ರೂ. ಲಕ್ಷ ಮೌಲ್ಯದ ಚಿನ್ನದ ಸರವನ್ನು ಕಸಿದುಕೊಂಡು ಮನೆಯ ಹಿಂಬಾಗಿಲಿನ ಮೂಲಕ ಪರಾರಿಯಾಗಿದ್ದಾರೆ. ಮನೆಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಗೋಡೆಯಲ್ಲಿ ಬಿಟ್ಟಿದ್ದ ತೆರೆಯ ಮೂಲಕ ಕಳ್ಳರು ಮನೆಯೊಳಗೆ ಪ್ರವೇಶಿಸಿದ್ದಿರಬಹುದು ಎಂದು ಶಂಕಿಸಲಾಗಿದೆ. ಈ ವೇಳೆ…

Read More

ಬೆಂಗಳೂರು, ಜು.27: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅಮೆರಿಕದ ಇಲಿನಾಯ್ಸ್ ರಾಜ್ಯದ ನೇಪರ್ವಿಲ್ಲೆಯ ಯೆಲ್ಲೋ ಬಾಕ್ಸ್ ಸಭಾಂಗಣದಲ್ಲಿ ಶನಿವಾರ ನಡೆದ ಅಮೆರಿಕನ್ ಮಲ್ಟಿ ಎಥಿಕ್ ಕಮಿಷನ್ (AMEC)ಯ 15ನೇ ವಾರ್ಷಿಕ ಕಾಂಗ್ರೆಷನಲ್ ಗ್ಲೋಬಲ್ ಚಾಂಪಿಯನ್ಸ್ ಗಾಲಾ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಗ್ಲೋಬಲ್ ಸಿಟಿಝನ್ ಲೀಡರ್‌ಶಿಪ್ ಪ್ರಶಸ್ತಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಸಚಿವ ಯು.ಟಿ.ಖಾದರ್ ಈ ಪ್ರಶಸ್ತಿಯು ನನಗೆ ಅತ್ಯಂತ ಸಂತೋಷ ಹಾಗೂ ಗೌರವದ ಸಂಗತಿಯಾಗಿದೆ. ಈ ಮಾನ್ಯತೆ, ಗೌರವವು ನನ್ನ ಮೇಲಿನ ವಿಶ್ವಾಸ ಮತ್ತು ಜನಸೇವೆಯ ದಾರಿಯಲ್ಲಿ ಕೈಗೊಂಡ ಪ್ರಯತ್ನಗಳಿಗೆ ದೊರೆತ ಪ್ರೋತ್ಸಾಹವಾಗಿದೆ. ಈ ಗೌರವವನ್ನು ತಾನು ಕರ್ನಾಟಕ ರಾಜ್ಯದ ಜನತೆಗೆ ಸಮರ್ಪಿಸುವೆ ಎಂದಿದ್ದಾರೆ. ಸಾರ್ವಜನಿಕ ಸೇವೆಯಲ್ಲಿ ಹಲವು ದಶಕಗಳಿಂದ ಸಲ್ಲಿಸಿರುವ ಸೇವೆ, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿನ ನಾಯಕತ್ವ ಸಮಗ್ರ ಆಡಳಿತ ಹಾಗೂ ಸಮುದಾಯ-ಕೇಂದ್ರಿತ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಯು.ಟಿ. ಖಾದರ್‌ರನ್ನು AMEC ಗ್ಲೋಬಲ್ ಸಿಟಿಝನ್ ಲೀಡರ್‌ಶಿಪ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.ಈ ಸಂದರ್ಭ AMEC ಸಂಸ್ಥಾಪಕ ಅಧ್ಯಕ್ಷ…

Read More

ಬಂಟ್ವಾಳ, ಜು. 27: ಚಲಿಸುತ್ತಿದ್ದ ಕಂಟೇನರ್ ಲಾರಿಯ ಹಿಂಬದಿ ಚಕ್ರ ಕಳಚಿದ ಕಾರಣ ಪಾದಚಾರಿಯೊಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ಜಂಕ್ಷನ್ ಬಳಿ ನಡೆದಿದೆ. ಹೊರರಾಜ್ಯ ನೋಂದಣಿ ಹೊಂದಿರುವ ಕಂಟೇನರ್ ಲಾರಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಹಿಂಬದಿಯ ಚಕ್ರ ಕಳಚಿ ಬಿದ್ದಿದೆ ಎಂದು ಆರೋಪಿಸಲಾಗಿದೆ. ಚಕ್ರ ಬೇರ್ಪಟ್ಟು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರೆಸಿಲ್ಲ ಎಂಬ ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಅವರಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ

Read More

ಉಳ್ಳಾಲ: ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ (ಕೆಕೆಪಿಎಲ್) ಚೊಚ್ಚಲ ಆವೃತ್ತಿಯ ಆಟಗಾರರ ಹರಾಜಿನಲ್ಲಿ ತೊಕ್ಕೊಟ್ಟು ಕಾಪಿಕಾಡು ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿಯ ಪ್ರತಿಭೆ, ಗೋಪಿನಾಥ್ ಕಾಪಿಕಾಡ್ ಅವರ ಪುತ್ರ ಸಾಯಿ ಪ್ರಸಾದ್ ಗರಿಷ್ಠ ಮೊತ್ತಕ್ಕೆ ಬಿಕರಿಯಾಗುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಕಾಪಿಕಾಡಿನ ಗರಡಿಯಲ್ಲಿ ಪಳಗಿದ ಸಾಯಿ ಪ್ರಸಾದ್ ಅವರನ್ನು ಉತ್ತರ ಕನ್ನಡ ಸ್ಟಾಲಿಯನ್ಸ್ ತಂಡ ₹3.60 ಲಕ್ಷಕ್ಕೆ ಖರೀದಿಸಿದ್ದು, ಲೀಗ್‌ನ ಚೊಚ್ಚಲ ಆವೃತ್ತಿಯಲ್ಲಿ ಆಟಗಾರನೊಬ್ಬ ಪಡೆದ ಅತ್ಯಧಿಕ ಮೊತ್ತ ಎಂಬ ದಾಖಲೆಯೂ ಅವರ ಹೆಸರಿಗೆ ಸೇರಿದೆ.ನಗರದ ಕೋರಮಂಗಲ ಕ್ಲಬ್‌ನಲ್ಲಿ ನಡೆದ ಹರಾಜಿನಲ್ಲಿ ಎಂಟು ಫ್ರಾಂಚೈಸಿಗಳು ಭಾಗವಹಿಸಿದ್ದವು. ಸಾಯಿ ಪ್ರಸಾದ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಬಹುತೇಕ ಎಲ್ಲಾ ಫ್ರಾಂಚೈಸಿಗಳು ಪೈಪೋಟಿ ನಡೆಸಿದರೂ, ಅಂತಿಮವಾಗಿ ಉತ್ತರ ಕನ್ನಡ ಸ್ಟಾಲಿಯನ್ಸ್ ತಂಡವೇ ಗರಿಷ್ಠ ಮೊತ್ತ ನೀಡಿ ತನ್ನ ತೆಕ್ಕೆಗೆ ಸೇರಿಸಿಕೊಂಡಿತು.ಇದೇ ಹರಾಜಿನಲ್ಲಿ ಗಗನ್ ಗೌಡ ₹3.20 ಲಕ್ಷಕ್ಕೆ ಹೊಯ್ಸಳ ಎಂಪೈರ್ ತಂಡಕ್ಕೆ ಬಿಕರಿಯಾಗುವ ಮೂಲಕ ಎರಡನೇ ಅತಿ ಹೆಚ್ಚು ಮೊತ್ತ ಪಡೆದ ಆಟಗಾರರಾದರು. ಸುಶೀಲ್…

Read More

ಕಾಸರಗೋಡು, ಜು. 25 : ಕಾಸರಗೋಡು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳ ಆರೋಪಿಯೋರ್ವನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚೆಂಗಳ ಸಮೀಪದ ಫೋರ್ಥ್ ಮೈಲ್ ನಿವಾಸಿ ಮೊಹಮ್ಮದ್ ಅಬೂಬಕ್ಕರ್ ಎಂದು ಗುರುತಿಸಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಿಸಿದ ಅನೇಕ ಪ್ರಕರಣಗಳು ದಾಖಲಾಗಿವೆ.ವಿದ್ಯಾನಗರ, ಮೆಲ್ಪರಂಬ ಹಾಗೂ ಅಡೂರು ಪೊಲೀಸ್ ಠಾಣೆಗಳಲ್ಲಿ ಆರೋಪಿಯ ವಿರುದ್ಧ ಮಾದಕ ದ್ರವ್ಯ ಮತ್ತು ಎನ್‌ಡಿಪಿಎಸ್ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ನವದೆಹಲಿ, ಜು. 25 : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಿಜಯೋತ್ಸವ ಆಚರಿಸಿದೆ. ‘ವಿದ್ಯಾರ್ಥಿಗಳ ಶಕ್ತಿ ಚಿರಾಯುವಾಗಲಿ’ ಎಂದು ಸಿಜೆಪಿ ಪೋಸ್ಟ್ ಶೇರ್ ಮಾಡಿದೆ. ಸಿಜೆಪಿಯ ಸದಸ್ಯರು, ನೀಟ್-ಯುಜಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಹಲವು ದಿನಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಜೂನ್‌ನಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ.ಕೊನೆಗೂ ಸಿಜೆಪಿ ಹಾಗೂ ಪ್ರತಿಭಟನಾಕಾರರ ಬೇಡಿಕೆಗೆ ಮಣಿದಿರುವ ಕೇಂದ್ರ ಸರ್ಕಾರ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಪಡೆದಿದೆ. ಈ ಮೂಲಕ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಬೇಡಿಕೆ ಈಡೇರಿದಂತಾಗಿದೆ.

Read More

ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ ಕಾರಣ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಆರಂಭವಾದ ಅಭಿಯಾನದಲ್ಲಿ ಪ್ರಧಾನ್ ಅವರ ರಾಜೀನಾಮೆ ಪ್ರಮುಖ ಆಗ್ರಹವಾಗಿತ್ತು. ರಾಜೀನಾಮೆ ನೀಡದ ಹೊರತು ಯಾವುದೇ ಮಾತುಕತೆಗೆ ಸಿದ್ದವಿಲ್ಲ ಎಂದು ಹೇಳಿತ್ತು. ವಿಪಕ್ಷಗಳೂ ಪ್ರಧಾನ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದವು.

Read More

ಮಂಗಳೂರು, ಜು. 25 : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರನ್ನಿಟ್ಟು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಹಿತ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟವು ದೇಶದ ಉದ್ದಗಲಕ್ಕೂ ವ್ಯಾಪಿಸಿದೆ. ಈ ಹೋರಾಟವು 56 ಇಂಚಿನ ಪ್ರಧಾನಿಯ ಎದೆಯಲ್ಲೂ ನಡುಕ ಹುಟ್ಟಿಸಿದೆ ಎಂದು ಡಿವೈಎಫ್‌ಐ ದ.ಕ.ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ರವರು ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಹಗರಣದ ರುವಾರಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಹಾಗೂ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಆಹೋರಾತ್ರಿ ಹೋರಾಟವನ್ನು ಬೆಂಬಲಿಸಿ ನಗರದಲ್ಲಿಂದು ಎಸ್‌ಎಫ್‌ಐ – ಡಿವೈಎಫ್‌ಐ ಜಂಟಿ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.ಈ ವೇಳೆ ಮಾತನಾಡಿದ ಸಂತೋಷ್ ಬಜಾಲ್ ಅವರು, “ಎನ್‌ಟಿಎ ಪ್ರಾರಂಭವಾದ ಈವರೆಗೆ 89 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಇದೊಂದು ಅಸಮರ್ಥ ಸಂಸ್ಥೆಯಾಗಿದ್ದು ಇದನ್ನು ಕೂಡಲೇ ಕೇಂದ್ರ ಸರ್ಕಾರ ರದ್ದುಗೊಳಿಸಬೇಕೆಂದು ಆಗ್ರಹಿಸಿದರು. ವಿದ್ಯಾರ್ಥಿಗಳ ಮೇಲೆ ದೆಹಲಿ ಪೋಲಿಸರು ಹಾಗೂ ಬಿಜೆಪಿಯ ಗೂಂಡಾಗಳು…

Read More

ಉಳ್ಳಾಲ, ಜು.24: ರಸ್ತೆ ದುರವಸ್ಥೆಯಿಂದಾಗಿ ಆಂಬ್ಯುಲೆನ್ಸ್ ಗ್ರಾಮದೊಳಗೆ ತಲುಪಲು ಸಾಧ್ಯವಾಗದೆ ಅರ್ಧದಲ್ಲೇ ನಿಲ್ಲಬೇಕಾದ ಪರಿಣಾಮ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರನ್ನು ಆಟೋದಲ್ಲಿ ಆಸ್ಪತ್ರೆಗೆ ಸಾಗಿಸಿದ ಘಟನೆ ಪಾವೂರು ಗ್ರಾಮದಲ್ಲಿ ನಡೆದಿದೆ. ಪಾವೂರು ಗ್ರಾಮದ ಇನೋಳಿ ಕಲ್ಲಾಜೆ ನಿವಾಸಿ ಸುಮಾರು 85 ವರ್ಷದ ಯಮುನಾ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಕರೆಸಲಾಗಿತ್ತು. ಆದರೆ ಗ್ರಾಮದ ರಸ್ತೆ ಸಂಪೂರ್ಣ ಹದಗೆಟ್ಟಿದ್ದರಿಂದ ಆಂಬ್ಯುಲೆನ್ಸ್ ಮುಂದೆ ಸಾಗಲು ಸಾಧ್ಯವಾಗದೆ ಮಧ್ಯದಲ್ಲೇ ನಿಲ್ಲಬೇಕಾಯಿತು. ಬಳಿಕ ಸ್ಥಳೀಯರು ಆಟೋ ರಿಕ್ಷಾ ವ್ಯವಸ್ಥೆ ಮಾಡಿ, ಹರಸಾಹಸಪಟ್ಟು ವೃದ್ಧೆಯನ್ನು ಆಟೋದಲ್ಲಿ ಆಂಬ್ಯುಲೆನ್ಸ್ ನಿಂತಿದ್ದ ಸ್ಥಳದವರೆಗೆ ಕೊಂಡೊಯ್ದು, ಅಲ್ಲಿಂದ ಆಸ್ಪತ್ರೆಗೆ ರವಾನಿಸಿದರು. ಸ್ಥಳೀಯರ ಪ್ರಕಾರ, ರಸ್ತೆಗೆ ಕೆಲ ದಿನಗಳ ಹಿಂದೆ ಮಣ್ಣು ಹಾಕಲಾಗಿದ್ದು, ಮಳೆಯ ಪರಿಣಾಮ ರಸ್ತೆ ಮತ್ತಷ್ಟು ಕೆಸರಿನಿಂದ ಕೂಡಿದ್ದು ವಾಹನ ಸಂಚಾರ ಮಾತ್ರವಲ್ಲದೆ ಕಾಲ್ನಡಿಗೆಯೂ ದುಸ್ತರವಾಗಿದೆ. ಈ ಕುರಿತು ಕಳೆದ ತಿಂಗಳೇ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ದೂರು ನೀಡಲಾಗಿತ್ತು.…

Read More