ಉಳ್ಳಾಲ ತಾಲೂಕಿನ ಕುಂಪಲ ಮೂರುಕಟ್ಟೆಯ ನಿವಾಸಿ ದಯಾನಂದ (60) ಅವರ ಸಾವಿಗೆ ಕಾರಣವಾದ ಶ್ವಾನ ಸಾವನ್ನಪ್ಪಿದೆ. ಕುಂಪಲ ಬೈಪಾಸ್ ಸಮೀಪ ದಯಾನಂದ ಅವರ ಮೃತದೇಹ ರಕ್ತದ ಮಡುವಿನಲ್ಲಿ ಮನೆ ಅಂಗಳದಲ್ಲಿ ಪತ್ತೆಯಾಗಿತ್ತು. ಸ್ಥಳೀಯ ಚಿಕನ್ ಅಂಗಡಿ ಬದಿಯಲ್ಲಿ ಗಾಯವಾಗಿ ಕಣ್ಣೊಂದು ಹೊರಬಿದ್ದು ಮನೆ ಅಂಗಳಕ್ಕೆ ಓಡಿ ಅಲ್ಲೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿತ್ತು. ಬಳಿಕ ಹಲವಾರು ಅನುಮಾನಗಳು ಹುಟ್ಟಿಕೊಂಡವು. ಸ್ಥಳೀಯರೊಬ್ಬರು ನೋಡಿದ ಪ್ರಕಾರ ಮೃತದೇಹದ ಮೇಲೆ ನಾಯಿ ಕುಳಿತ್ತಿತ್ತು ಎಂದಿದ್ದರು. ಬಳಿಕ ಸ್ಥಳಕ್ಕೆ ಉಳ್ಳಾಲ ಪೊಲೀಸರು, ಇದರ ಜೊತೆಗೆ ಫಾರೆನ್ಸಿಕ್ ತಂಡವೂ ಆಗಮಿಸಿ, ಪರಿಶೀಲನೆ ನಡೆಸಿತ್ತು. ತದನಂತರ ನಾಯಿಯೇ ದಯಾನಂದ ಅವರನ್ನು ಕೊಂದಿದೆ ಎಂಬುವುದು ದೃಡಪಟ್ಟಿತ್ತು. ಇದೀಗ ಒರ್ವನನ್ನು ಕಚ್ಚಿ ಸಾಯಿಸಿದ ಶ್ವಾನವೂ ಸಾವನ್ನಪ್ಪಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ದಯವಿಟ್ಟು ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವಂತೆ ಸಾರ್ವಜನಿಕರು ವಿನಂತಿಸಿಕೊAಡಿದ್ದಾರೆ.
Author: UllalaVani
ಮಂಗಳೂರು, ನ. 15: ಸಿಎನ್‌ಜಿ ಟ್ಯಾಂಕರ್‌ನಲ್ಲಿ ಸೋರಿಕೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಸುರತ್ಕಲ್ ಜಂಕ್ಷನ್ ಬಳಿಯ ಹರ್ಷಾ ಶೋರೂಂ ಸಮೀಪ ಶುಕ್ರವಾರ ರಾತ್ರಿ ಸಂಭವಿಸಿದೆ. ಬೈಕಂಪಾಡಿಯ ಗೇಲ್ ಪಂಪ್‌ನಿಂದ ಸಿಎನ್‌ಜಿ ತುಂಬಿಸಿಕೊಂಡು ಸುರತ್ಕಲ್ ಕಡೆಗೆ ಸಾಗುತ್ತಿದ್ದ ಟ್ಯಾಂಕರ್‌ನಲ್ಲಿ ಸೋರಿಕೆ ಆರಂಭವಾಗಿದೆ ಎಂದು ವರದಿಯಾಗಿದೆ. ಕೂಡಲೇ ಚಾಲಕ ರಾಷ್ಟ್ರೀಯ ಹೆದ್ದಾರಿಯ ಬದಿಗೆ ವಾಹನವನ್ನು ನಿಲ್ಲಿಸಿ, ಉಂಟಾದ ಅಪಾಯದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ, ರಾಷ್ಟ್ರೀಯ ಹೆದ್ದಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಯಿತು.ಸಿಎನ್‌ಜಿ ಅಡುಗೆ ಅನಿಲದಷ್ಟು ಅಪಾಯಕಾರಿಯಲ್ಲದಿದ್ದರೂ, ಇದು ನೈಸರ್ಗಿಕ ಅನಿಲದ ಭಾಗವಾಗಿದೆ. ಒಂದು ವೇಳೆ ದೊಡ್ಡ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದರೆ ಸಿಲಿಂಡರ್ ಸ್ಫೋಟಗೊಳ್ಳುವ ಸಾಧ್ಯತೆ ಇರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಪಾಯಕ್ಕೆ ಅವಕಾಶ ನೀಡದೆ ತಕ್ಷಣವೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಯಿತು.
ಬಿ.ಸಿ.ರೋಡ್;ಬಿ.ಸಿ.ರೋಡಿನ ಸರ್ಕಲ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಪೀಣ್ಯ ನಿವಾಸಿಗಳಾದ (64), ರಮ್ಯ (23) ಹಾಗೂ ನಂಜಮ್ಮ (75) ಸಾವನ್ನಪ್ಪಿದವರಾಗಿದ್ದಾರೆ. ಉಳಿದಂತೆ ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ಸುಬ್ರಹ್ಮಣ್ಯ ಹಾಗೂ ಕಿರಣ್ ಅವರು ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಬೆಂಗಳೂರಿನಿAದ ಇನ್ನೋವಾ ಕಾರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದವರು ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಸುಮಾರು 4.40ರ ಸಮಯದಲ್ಲಿ ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಬಿ.ಸಿ.ರೋಡಿನ ಎನ್.ಜಿ ಸರ್ಕಲ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊAಡಿದ್ದು, ಒರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಳಿದಂತೆ ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಅವೈಜ್ಷಾನಿಕ ಮಾದರಿಯ ಸರ್ಕಲ್ ಅಪಘಾತಕ್ಕೆ ಕಾರಣ ಎಂಬ ಆರೋಪಗಳು ಸಾರ್ವಜನಿಕರ ವಲಯಗಳಲ್ಲಿ…
ಉಳ್ಳಾಲ ತಾಲೂಕಿನ ಕುಂಪಲ ಮೂರುಕಟ್ಟೆಯಲ್ಲಿ ನಾಯಿ ಕಚ್ಚಿದ ಪರಿಣಾಮ ದಯಾನಂದ (60) ಅವರ ದಾರುಣ ಸಾವು ನಡೆದಿರುವುದು ಕೇವಲ ಒಂದು ಅಪಘಾತವಲ್ಲ—ಈದುರಂತವು ಸ್ಥಳೀಯ ಆಡಳಿತದ ಗಂಭೀರ ನಿರ್ಲಕ್ಷ್ಯದ ಕಳಂಕವನ್ನು ಹೊತ್ತು ಬಂದಿದೆ. ಸದ್ಯಕ್ಕೆ ಪೋಲೀಸರು ಯು.ಡಿ.ಆರ್ (ಅಸಹಜ ಸಾವು ಪ್ರಕರಣ) ದಾಖಲಿಸಿದ್ದು, ಇಂದು ಸಂಜೆ ಪೋಸ್ಟ್ ಮಾರ್ಟಮ್ ವರದಿ ಉಳ್ಳಾಲ ಪೋಲಿಸ್ ಠಾಣೆಗೆ ತಲುಪಲಿದೆ ಎಂದು ಉಳ್ಳಾಲ ಪೋಲೀಸರು ಉಳ್ಳಾಲವಾಣಿಗೆ ತಿಳಿಸಿದ್ದಾರೆ. ಆದರೆ ಇದು ಕೇವಲ ವೈದ್ಯಕೀಯ ವರದಿ ವಿಷಯವಲ್ಲ; ಇದು ಕಾನೂನು, ಆಡಳಿತ ಮತ್ತು ಮಾನವ ಜೀವದ ಮೌಲ್ಯಗಳ ಪ್ರಶ್ನೆ. ಆಡಳಿತದ ನಿರ್ಲಕ್ಷ್ಯ – ಈಗ ಕಾನೂನು ಕ್ರಮದ ಸಾಧ್ಯತೆ ಈ ಘಟನೆ ನಾಯಿ ಕಚ್ಚುವಿಕೆಯಿಂದ ಸಂಭವಿಸಿದ್ದಾಗಿ ದೃಢಪಟ್ಟರೆ, BNS ಸೆಕ್ಷನ್ 105 (ಸಾರ್ವಜನಿಕ ಸುರಕ್ಷತೆಯಲ್ಲಿ ಆಡಳಿತದ ನಿರ್ಲಕ್ಷ್ಯ) ಮತ್ತು 106 (ಅಪಾಯ ತಿಳಿದಿದ್ದರೂ ಕ್ರಮ ಕೈಗೊಳ್ಳದ ಹೊಣೆಗಾರಿಕೆ)ರಂತೆ ಆಡಳಿತಾಧಿಕಾರಿಗಳ ವಿರುದ್ಧ ಕೇಸ್ ದಾಖಲಿಸುವ ಅವಕಾಶವಿದೆ. ಪ್ರಮುಖವಾಗಿ, BNS 105 ಅನ್ವಯಿಸಲು ಕಾರಣವೇನೆಂದರೆ ಉಳ್ಳಾಲವಾಣಿ ಈಗಾಗಲೇ 2025ರ ಅಕ್ಟೋಬರ್ 27ರಂದು“ಉಳ್ಳಾಲದಲ್ಲಿ…
ಉಳ್ಳಾಲ.ನ.14: ಉಳ್ಳಾಲ ತಾಲೂಕಿನಲ್ಲಿ ಬೀದಿ ನಾಯಿಗಳ ಹಾವಳಿ ಜೋರಾಗಿದೆ, ತುರ್ತು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆಯ ಗಂಟೆಯಾಗಿ ಉಳ್ಳಾಲವಾಣಿ ಮಾಧ್ಯಮ 2025ರ ಅಕ್ಟೋಬರ್ 27ರಂದು ಸುದ್ದಿಯನ್ನು ಪ್ರಕಟಿಸಿತ್ತು. ಆದರೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಲೇ ಇಲ್ಲ. ಇದರ ಪರಿಣಾಮವಾಗಿ ಇಂದು ಒಂದು ಅಮಾಯಕ ಜೀವ ಬಲಿಯಾಗಿದೆ. ಉಳ್ಳಾಲ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಸಾರ್ವಜನಿಕರು, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ವಿದ್ಯಾರ್ಥಿಗಳು ಭಯಭೀತರಾಗಿ ಓಡಾಡುವ ಪರಿಸ್ಥಿತಿ ಉಂಟಾಗಿದೆ ಎಂದು ವರದಿ ಬಿತ್ತರಿಸಿದ ಸಂದರ್ಭವೇ ಜಿಲ್ಲಾಡಳಿತ ಎಚೆತ್ತುಕೊಂಡು ಬೀದಿ ನಾಯಿ ಹಾವಳಿಯನ್ನು ತಡೆಗಟ್ಟುವಲ್ಲಿ ಸರಿಯಾದ ಕ್ರಮವನ್ನು ಕೈಗೊಂಡಿದ್ದರೆ ಇಂದು ಅಮಾಯಕ ಜೀವ ಬಲಿಯಾಗುತ್ತಿರಲ್ಲಿಲ್ಲ. ಇಲ್ಲಿ ಅಧಿಕಾರಿಗಳ ತಾತ್ಸರ, ನಿರ್ಲಕ್ಷö್ಯತನ ಎದ್ದು ಕಾಣುತ್ತಿದೆ. ಇವರುಗಳ ಉದಾಸೀನತೆಗೆ ಇಂದುಬೀದಿ ನಾಯಿಯ ದಾಳಿಗೆ ಕುಂಪಲ ಮೂರುಕಟ್ಟೆ ನಿವಾಸಿ ದಿ| ರಾಮ ಗಟ್ಟಿ ಎಂಬವರ ಪುತ್ರ ದಯಾನಂದ (60) ಮೃತಪಟ್ಟಿದ್ದಾರೆ. ಇವರ ಸಾವಿನ ಜವಾಬ್ದಾರಿಯನ್ನು ನೇರವಾಗಿ ಸ್ಥಳೀಯ ಜಿಲ್ಲಾಡಳಿತ ಹೊರಬೇಕಾಗಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ…
ಕುತ್ತಾರು;ತುಳುನಾಡಿನ ಕಾರಣೀಕ ಕ್ಷೇತ್ರಗಳಲ್ಲಿ ಒಂದಾದ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊರಗಜ್ಜನ ಕ್ಷೇತ್ರಕ್ಕೆ ಬರಬೇಕು ಎಂದು ಅಂದುಕೊAಡಿದ್ದೆ. ಆದರೆ ಇಂದು ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದೆ ಎಂದರು. ಇದೇ ಸಂದರ್ಭ ಬಿಹಾರ ಫಲಿತಾಂಶದ ಬಗ್ಗೆ ಮಾತನಾಡಿ, ಬಿಹಾರದ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿದ ಮತಗಳಿಂದ ಭಾರತೀಯ ಜನತಾ ಪಾರ್ಟಿ ಜಯಶಾಲಿಯಾಗಿದೆ. ಬಿಹಾರದ ಜನ ತಮ್ಮ ಅಮೂಲ್ಯವಾದ ಮತಗಳಿಂದ ಆಶೀರ್ವಾದ ಮಾಡಿದ್ದಾರೆ. ಇದರಿಂದ ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಅವರು, ಪ್ರಪಂಚದಾದ್ಯAತ ಬಿತ್ತರಿಸುತ್ತಿದ್ದ ಸುಳ್ಳಿಗೆ ದೊಡ್ಡಮಟ್ಟದ ಸೋಲಾಗಿದೆ ಎಂದು ಟಾಂಗ್ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ಮಹಿಳಾ ಮೋರ್ಛಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಪೂಜಾ ಪೈ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಜಿ.ಪಂ ಮಾಜಿ ಸದಸ್ಯೆ ಧನಲಕ್ಷಿö್ಮÃ…
ಉಳ್ಳಾಲ,ನ.14: ರಾಜ್ಯದಲ್ಲಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಹಾಗಾಗಿ ರಾಜ್ಯ ಸರಕಾರ ಹಲವಾರು ಪೋತ್ಸಾಹ ನೀಡುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅದಕ್ಕೆ ಪೂರಕವಾದ ಕಾರ್ಯಕ್ರಮಗಳಲ್ಲಿ ಈ ಮಕ್ಕಳ ದಿನಾಚರಣೆಯೂ ಒಂದಾಗಿದೆ ಎಂದು ಉಳ್ಳಾಲ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಫೀಕ್ ಅಂಬ್ಲಮೊಗರು ಹೇಳಿದರು. ಇವರು ಉಳ್ಳಾಲ ತಾಲೂಕಿನ ಅಂಬ್ಲಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಮ್ಮುಖದಲ್ಲಿ ನಡೆದ ಪೋಷಕ ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಎಲ್‌ಕೆಜಿ, ಯುಕೆಜಿ ಸರಕಾರದಿಂದ ಅನುದಾನ ಬಿಡುಗಡೆಯಾದ ನಂತರ ಮಕ್ಕಳನ್ನು ಶಾಲೆಗೆ ಎಡ್ಮಿನೇಷನ್ ಮಾಡಿಕೊಳ್ಳುತ್ತದೆ. ಗ್ರಾಮಸ್ಥರ ಸಹಕಾರ ಅಂಬ್ಲಮೊಗರು ಶಾಲೆಗೆ ಸಂಪೂರ್ಣವಾಗಿದೆ. ಇದರ ಅರ್ಥವೆನೆಂದರೆ ಅಂಬ್ಲಮೊಗರು ಶಾಲೆ ಹಾಗೂ ಗ್ರಾಮದ ಹೆಸರು ಉನ್ನತ ಮಟ್ಟಕ್ಕೇರಿದೆ ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭ ಮಾತನಾಡಿದ ಕ್ಷೇತ್ರದ ಶಿಕ್ಷಣಾಧಿಕಾರಿಗಳು ಈಶ್ವರ್ ಅವರು, ಮಕ್ಕಳ ದಿನಾಚರಣೆ ಮಕ್ಕಳ ಹಬ್ಬ. ನಿಮಗಾಗಿ ಕಾರ್ಯಕ್ರಮವನ್ನು ಹಬ್ಬವನ್ನಾಗಿ…
ಮಂಗಳೂರು: ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್ ಅವರು, “ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ. ಪ್ರತಿಯೊಂದು ತುಳು ಸಿನಿಮಾಕ್ಕೂ ಬೆಂಬಲ ನೀಡಬೇಕಾದ್ದು ನಮ್ಮೆಲ್ಲರ ಕರ್ತವ್ಯ. ತುಳುವರು ಸಿನಿಮಾ ನೋಡುವ ಮೂಲಕ ಚಿತ್ರತಂಡವನ್ನು ಪ್ರೋತ್ಸಾಹಿಸಬೇಕು” ಎಂದರು.ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತಾಡಿ, “ತುಳು ಸಿನಿಮಾಗಳಿಗೆ ಇಂದು ನಿರ್ದಿಷ್ಟ ಥಿಯೇಟರ್ ಗಳಿವೆ. ಹೀಗಾಗಿ ಸಿನಿಮಾಕ್ಕೆ ಬಂಡವಾಳ ಹಾಕಿದ ನಿರ್ಮಾಪಕರು ಗೆಲ್ಲಬೇಕಾದರೆ ತುಳುವರು ಥಿಯೇಟರ್ ಗಳಿಗೆ ಹೋಗಿ ಸಿನಿಮಾ ನೋಡಬೇಕು. ಜೈ ಸಿನಿಮಾ ಜನರ ನಿರೀಕ್ಷೆ ಹೆಚ್ಚಿಸಿದ್ದು ಸಿನಿಮಾ ಗೆಲ್ಲಲಿ“ ಎಂದು ಶುಭ ಹಾರೈಸಿದರು.ವೇದಿಕೆಯಲ್ಲಿ ನಟ ನಿರ್ದೇಶಕ ರೂಪೇಶ್ ಶೆಟ್ಟಿ, ಬಿಗ್ ಸಿನೆಮಾಸ್ ನ ಬಾಲಕೃಷ್ಣ ಶೆಟ್ಟಿ, ಭೋಜರಾಜ್ ವಾಮಂಜೂರ್,…
ಕುಂಪಲ : ಪ್ರಾಣಿ ದಾಳಿಯಿಂದ ಕುಂಪಲ ಮೂರುಕಟ್ಟೆ ನಿವಾಸಿ ದಿ| ರಾಮ ಗಟ್ಟಿ ಎಂಬವರ ಪುತ್ರ ದಯಾನಂದ (60) ಮೃತಪಟ್ಟಿರುವುದಾಗಿ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಫಾರೆನ್ಸಿಕ್ ವೈದ್ಯರು ಇದು ಪ್ರಾಣಿ ದಾಳಿಯಿಂದಾದ ಸಾವೇ ಎಂಬುದನ್ನು ದೃಢಪಡಿಸಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇಂದು ಬೆಳಗಿನ ಜಾವ ಕುಂಪಲ ಬೈಪಾಸ್ ಪ್ರದೇಶದ ಮನೆಯೊಂದರ ಅಂಗಳದಲ್ಲಿ ರಕ್ತದ ಮಡುವಿನಲ್ಲಿ ದಯಾನಂದ ಮೃತದೇಹಪತ್ತೆಯಾಗಿತ್ತು. ಸ್ಥಳದಲ್ಲಿ ರಕ್ತದ ಗುರುತುಗಳು ಕಂಡುಬಂದಿದ್ದು, ಸುಮಾರು ಬೆಳಿಗ್ಗೆ 3 ಗಂಟೆಯ ವೇಳೆ ಅವರು ಅಲ್ಲಿ ನಡೆದು ಹೋಗುತ್ತಿರುವುದನ್ನು ಸ್ಥಳೀಯರು ನೋಡಿದ್ದಾಗಿ ತಿಳಿಸಿದ್ದಾರೆ. ಫಾರೆನ್ಸಿಕ್ ತಂಡ ಹತ್ತಿರ ಕಂಡುಬಂದ ಗಾಯಗಳಿಂದ ಪ್ರಾಥಮಿಕವಾಗಿ ಪ್ರಾಣಿ ದಾಳಿ ಶಂಕೆ ವ್ಯಕ್ತವಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಫಾರೆನ್ಸಿಕ್ ವೈದ್ಯರು ಇದು ಪ್ರಾಣಿ ದಾಳಿಯಿಂದಾದ ಸಾವೇ ಎಂಬುದನ್ನು ದೃಢಪಡಿಸಿದ್ದಾರೆ. ಇದೇ ವೇಳೆ, ರಕ್ತ ಬಾಯಿಗೆ ತಗುಲಿರುವಂತೆ ಕಾಣುತ್ತಿದ್ದ ನಾಯಿಯೊಂದು ಅಲೆದಾಡಿರುವುದನ್ನು ಕೆಲವರು ಗಮನಿಸಿದ್ದಾಗಿ ತಿಳಿದುಬಂದಿದೆ. ನಾಯಿಯನ್ನು ಪ್ರಾಣಿ ದಯಾ ಸಂಘದ…
ಕೊಣಾಜೆ: ಶಿವಗಿರಿ ಮಠ ವರ್ಕಳ ಮತ್ತು ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಆಶ್ರಯದಲ್ಲಿ ಶತಮಾನ ಮಹಾ ಪ್ರಸ್ಥಾನ ಶ್ರೀ ನಾರಾಯಣ ಗುರು – ಗಾಂಧೀಜಿ ಸಂವಾದ ಶತಮಾನೋತ್ಸವ ಕಾರ್ಯಕ್ರಮವು ಡಿಸೆಂಬರ್ ನಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರು ಭಾಗವಹಿಸಲಿದ್ದು, ಇದರ ಪೂರ್ವಭಾವಿ ಸಭೆಯು ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ಬುಧವಾರದಂದು ಅಸೈಗೋಳಿಯ ಬಂಟರಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯು.ಟಿ.ಖಾದರ್ ಅವರು ಬ್ರಹ್ಮಶ್ರೀ ನಾರಾಯಣಗುರು ಹಾಗೂ ಗಾಂಧೀಜಿಯ ಸಂವಾದದ ಶತಮಾನೋತ್ಸವ ರಾಜ್ಯ ಮಟ್ಟದ ಐತಿಹಾಸಿಕ ಕಾರ್ಯಕ್ರಮವು ಡಿ.3ರಂದು ಕೊಣಾಜೆಯಲ್ಲಿ ನಡೆಯಲಿದ್ದು ಎಲ್ಲಾ ವರ್ಗದ ಜನರು ಭಾಗವಹಿಸಲಿದ್ದು, ಬಂಧುತ್ವದ ಸಹೋದರತೆ, ಸೌಹಾರ್ದತೆಯ ಕಾರ್ಯಕ್ರಮವಾಗಲಿದೆ ಎಂದರು. ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾದಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರು ಮೂರು ಬಾರಿ ಶಿವಗಿರಿಗೆ ಬಂದಿದ್ದರು. ಗಾಂಧೀಜಿಯವರ ಸ್ವಾತಂತ್ರ್ಯದ ಹೋರಾಟದೊಂದಿಗೆ ಸಮಾಜದಲ್ಲಿದ್ದ ಅಸ್ಪೃಶ್ಯತೆಯನ್ನು ದೂರಗೊಳಿಸಲು ಪ್ರೇರಣೆಯಾದವರು ಬ್ರಹ್ಮಶ್ರೀ ನಾರಾಯಣಗುರುಗಳು. ಇದೀಗ ಅವರ ಸಮ್ಮಿಳನವು ಶತಮಾನೋತ್ಸವವನ್ನು ಆಚರಿಸುತ್ತಿದ್ದು,…

