ದಕ್ಷಿಣ ಕನ್ನಡ ಜಿಲ್ಲೆಯ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಪ್ರಮುಖ ಆಶ್ರಯವಾಗಿರುವ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಇಂದು ಕೇವಲ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಪ್ರತಿದಿನ ಸಾವಿರಾರು ರೋಗಿಗಳು ಚಿಕಿತ್ಸೆಗಾಗಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಮಾತನಾಡುವಾಗ ವೈದ್ಯರ ಕೊರತೆ, ಹಾಸಿಗೆಗಳ ಕೊರತೆ ಅಥವಾ ಮೂಲಸೌಕರ್ಯದ ಸಮಸ್ಯೆಗಳ ಕುರಿತು ಚರ್ಚೆ ನಡೆಯುತ್ತದೆ. ಆದರೆ ವೆನ್ಲಾಕ್ ಆಸ್ಪತ್ರೆಯ ಇಂದಿನ ಪರಿಸ್ಥಿತಿ ಆರೋಗ್ಯ ಸೇವೆಯ ಮತ್ತೊಂದು ಗಂಭೀರ ಸಮಸ್ಯೆಯನ್ನು ಬೆಳಕಿಗೆ ತರುತ್ತಿದೆ — ರೋಗಿಗಳ ಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಸಿಬ್ಬಂದಿ ಮತ್ತು ತಾಂತ್ರಿಕ ಸೌಲಭ್ಯಗಳ ಕೊರತೆ. ದ.ಕ ಜಿಲ್ಲೆಯ ಬಡ ರೋಗಿಗಳಿಗೆ ಐಸಿಓ ಇಲ್ಲದೆ ಮೃತ ಪಡುವ ಘಟನೆಗಳು ಸಂಭವಿಸಬಹುದು ಸಾರ್ವಜನಿಕ ಅಭಿಪ್ರಾಯವಾಗಿದೆ ಆಸ್ಪತ್ರೆಗಳಲ್ಲಿ ಸೇವಾ ಗುಣಮಟ್ಟವನ್ನು ಖಚಿತಪಡಿಸಲು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳು (IPHS) ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊಂದಿವೆ. ತೀವ್ರ ನಿಗಾ ಘಟಕ (ICU) ಮತ್ತು…
Author: UllalaVani
ತಲಪಾಡಿ, ಜೂ.13: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿನಯ್ ನಾಯ್ಕ್ ಅವರ ಮಾತೃಶ್ರೀ ಸರ್ವಾಣಿ ಟಿ. ನಾಯ್ಕ್ (94) ಅವರು ತಮ್ಮ ಸ್ವಗೃಹದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು, ಒಬ್ಬ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ತಲಪಾಡಿಯಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದ್ದು, ಮಧ್ಯಾಹ್ನ ಸುಮಾರು 12 ಗಂಟೆಗೆ ನಿವಾಸದ ಸಮೀಪ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಮೃತರ ನಿಧನಕ್ಕೆ ಬಂಧುಗಳು, ಸ್ನೇಹಿತರು ಹಾಗೂ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮುನ್ನೂರು, ಜೂನ್ 12: ಹಲವು ದಿನಗಳಿಂದ ಸಾರ್ವಜನಿಕರ ಹಾಗೂ ಶಾಲಾ ಆಡಳಿತ ಮಂಡಳಿಯ ಆತಂಕಕ್ಕೆ ಕಾರಣವಾಗಿದ್ದ ಕುತ್ತಾರು ಪದವು ಪ್ರದೇಶದ ಕೊಳಚೆ ನೀರಿನ ಸಮಸ್ಯೆಯ ಬಗ್ಗೆ ಕೊನೆಗೂ ಮುನ್ನೂರು ಗ್ರಾಮ ಪಂಚಾಯತ್ ಎಚ್ಚೆತ್ತುಕೊಂಡಿದೆ. ಸಾರ್ವಜನಿಕ ಮಳೆನೀರು ಚರಂಡಿಗೆ ಕೊಳಚೆ ನೀರು ಹರಿಯುತ್ತಿರುವ ಕುರಿತು ಬಂದ ದೂರುಗಳ ಆಧಾರದ ಮೇಲೆ ಪಂಚಾಯತ್ ಸಭೆ ಕರೆಯುವ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮುನ್ನೂರು ಮುಖ್ಯೋಪಾಧ್ಯಾಯಿನಿ ಹಾಗೂ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರು ಸಲ್ಲಿಸಿದ ದೂರು ಅರ್ಜಿಗಳ ಹಿನ್ನೆಲೆಯಲ್ಲಿ ಪಂಚಾಯತ್ ಈ ಕ್ರಮ ಕೈಗೊಂಡಿದೆ. ಶಾಲೆಯ ಹಿಂಭಾಗದಲ್ಲಿರುವ ಸಾರ್ವಜನಿಕ ಚರಂಡಿಗೆ ಸುತ್ತಮುತ್ತಲಿನ ಕೆಲವು ಅಪಾರ್ಟ್‌ಮೆಂಟ್ ಹಾಗೂ ಕಟ್ಟಡಗಳಿಂದ ಕೊಳಚೆ ನೀರು ಹರಿಯುತ್ತಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಶಾಲಾ ಪರಿಸರದಲ್ಲಿ ದುರ್ವಾಸನೆ, ಅಸ್ವಚ್ಛತೆ ಹಾಗೂ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದರು. ವಿಶೇಷವಾಗಿ ಮಳೆಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ಗಂಭೀರವಾಗುವ…
ಬೆಂಗಳೂರು, ಜೂ.12: ಪ್ರಕೃತಿ ಸಂರಕ್ಷಣೆ, ಯುವಜನತೆ ಹಾಗೂ ದೇಶದ ಆರ್ಥಿಕತೆಯಲ್ಲಿ ಕೃಷಿಯ ಮಹತ್ವವನ್ನು ಜನರಿಗೆ ಮನವರಿಕೆ ಮಾಡುವ ಉದ್ದೇಶದಿಂದ ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ ಕಾರ್ಯಕ್ರಮವು ಜೂನ್ 14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು, ರೈತರು ಹಾಗೂ ಕೃಷಿ ಕ್ಷೇತ್ರದ ತಜ್ಞರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಈ ವಿಶೇಷ ಕಾರ್ಯಕ್ರಮವು ಕೃಷಿಯ ಮಹತ್ವ, ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯ ಕುರಿತು ಜಾಗೃತಿ ಮೂಡಿಸುವ ಗುರಿ ಹೊಂದಿದೆ. ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದ ವಿವಿಧ ಸಾಧಕರು, ತಜ್ಞರು ಹಾಗೂ ಯುವಜನರು ಭಾಗವಹಿಸಿ ತಮ್ಮ ಅನುಭವ ಮತ್ತು ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಿಸುವ ಜೊತೆಗೆ ರೈತ ಸಮುದಾಯದ ಕೊಡುಗೆಯನ್ನು ಗೌರವಿಸುವ ನಿಟ್ಟಿನಲ್ಲಿ ಈ ವಾಕಥಾನ್ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ರೈತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಕೊಣಾಜೆ, ಜೂ.12: ಗುಣಮಟ್ಟದ ಹಾಗೂ ಆಧುನಿಕ ವಿನ್ಯಾಸದ ಪೀಠೋಪಕರಣಗಳ ಕೇಂದ್ರವಾಗಿರುವ ಸುಹಾ ಫರ್ನಿಚರ್ಸ್‌ನ ನೂತನ ಶೋರೂಮ್ ಉದ್ಘಾಟನಾ ಸಮಾರಂಭವು ಜೂನ್ 14ರಂದು ಬೆಳಿಗ್ಗೆ 10 ಗಂಟೆಗೆ ಕಂಬಳಪದವಿನ ಎಂಪೈರ್ ಸ್ಕ್ವೇರ್‌ನಲ್ಲಿ ನಡೆಯಲಿದೆ. ಮನೆ, ಕಚೇರಿ ಹಾಗೂ ಇತರೆ ವಿವಿಧ ಅಗತ್ಯಗಳಿಗೆ ಹೊಂದುವಂತಹ ಆಕರ್ಷಕ, ಆರಾಮದಾಯಕ ಮತ್ತು ನವೀನ ವಿನ್ಯಾಸದ ಪೀಠೋಪಕರಣಗಳನ್ನು ಗ್ರಾಹಕರಿಗೆ ಒದಗಿಸುವ ಉದ್ದೇಶದಿಂದ ಈ ನೂತನ ಶೋರೂಮ್ ಆರಂಭಗೊಳ್ಳುತ್ತಿದೆ. “Your Furniture Paradise” ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಾರಂಭಗೊಳ್ಳುತ್ತಿರುವ ಸುಹಾ ಫರ್ನಿಚರ್ಸ್, ಗುಣಮಟ್ಟ, ನವೀನತೆ ಹಾಗೂ ಗ್ರಾಹಕ ಸ್ನೇಹಿ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಲಿದ್ದು, ಪ್ರದೇಶದ ಜನತೆಗೆ ಅತ್ಯುತ್ತಮ ಪೀಠೋಪಕರಣಗಳ ಖರೀದಿ ಅನುಭವವನ್ನು ನೀಡುವ ಗುರಿ ಹೊಂದಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಮುಂಬಯಿ (ಬಂಟ್ವಾಳ), ಜೂ.12: ಕರ್ನಾಟಕ ಕರಾವಳಿಯ ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಪ್ರೊ. ಕೆ. ಬಾಲಕೃಷ್ಣ ಗಟ್ಟಿ (83) ಅವರು ಇಂದು ನಿಧನರಾದರು. ಕಾಸರಗೋಡು ಮೂಲದವರಾದ ಅವರು ಬಂಟ್ವಾಳ ಎಸ್‌ವಿಎಸ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಹಾಗೂ ಬಳಿಕ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ನಂತರ ಮಂಗಳೂರಿನಲ್ಲಿ ನೆಲೆಸಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಬಂಟ್ವಾಳದಲ್ಲಿ ದೀರ್ಘಕಾಲ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು ಎಪ್ಪತ್ತರ ದಶಕದಲ್ಲಿ ‘ಬುಲೆಟ್ ಮೇಸ್ಟ್ರು’ ಎಂದೇ ಜನಪ್ರಿಯರಾಗಿದ್ದರು. ಉತ್ತಮ ವಾಗ್ಮಿಯಾಗಿದ್ದ ಅವರು ಎಡಪಂಥೀಯ ಚಿಂತನೆಗಳಿಂದ ಪ್ರೇರಿತರಾಗಿದ್ದರು. ಪತ್ರಿಕಾರಂಗದಲ್ಲಿಯೂ ವಿಶಿಷ್ಟ ಛಾಪು ಮೂಡಿಸಿದ್ದ ಅವರು ಪ್ರಜಾವಾಣಿ ಹಾಗೂ ಡೆಕ್ಕನ್ ಹೆರಾಲ್ಡ್ ಪತ್ರಿಕೆಗಳ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ನೇತ್ರಾವತಿ ವಾರ್ತೆ ದೈನಿಕವನ್ನು ಆರಂಭಿಸಿ ಅನೇಕ ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡಿದ್ದರು. ಜನವಾಹಿನಿ ದೈನಿಕದ ಸಂಪಾದಕರಾಗಿ ಸೇವೆ ಸಲ್ಲಿಸಿದ ಅವರು ತಮ್ಮ ಸರಳ, ನಿಷ್ಠುರ ಮತ್ತು ವಸ್ತುನಿಷ್ಠ ಬರವಣಿಗೆಯ ಮೂಲಕ ಪತ್ರಿಕಾರಂಗದಲ್ಲಿ ವಿಶಿಷ್ಟ ಗುರುತನ್ನು ಸಂಪಾದಿಸಿದ್ದರು.…
ಕುಂಪಲ, ಜೂನ್ 12: ಕುಂಪಲ ಶ್ರೀ ಬಾಲಕೃಷ್ಣ ಮಂದಿರ ಸಂಚಾಲಿತ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿಯ ಮಹಾಸಭೆಯು ಮಂದಿರದ ಅಧ್ಯಕ್ಷರಾದ ಸತೀಶ್ ಕುಂಪಲ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ 29ನೇ ವರ್ಷದ ಕುಂಪಲಾಷ್ಟಮಿ ಉತ್ಸವದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉತ್ಸವದ ಅಧ್ಯಕ್ಷರಾಗಿ ಸೂರಜ್ ಸಾಗರ್ ಕುಂಪಲ, ಪ್ರಧಾನ ಸಂಚಾಲಕರಾಗಿ ಜಯ ಪೂಜಾರಿ ಲಕ್ಷ್ಮಿಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಸತ್ಯಪ್ರಸಾದ್ ಬಗಂಬಿಲ ಹಾಗೂ ಶೋಭಾಯಾತ್ರೆ ಸಂಚಾಲಕರಾಗಿ ಮನೋಹರ್ ಗಟ್ಟಿ ಕುಂಪಲ ಅವರು ಆಯ್ಕೆಯಾದರು. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಸಮಿತಿಯ ಸದಸ್ಯರು ಹಾಗೂ ಭಕ್ತರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, 29ನೇ ವರ್ಷದ ಕುಂಪಲಾಷ್ಟಮಿ ಉತ್ಸವವು ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಲೆಂದು ಶುಭ ಹಾರೈಸಿದರು.
ಕುಂಪಲ: ಕುಂಪಲ ಶ್ರೀ ಬಾಲಕೃಷ್ಣ ಮಂದಿರ ಸಂಚಾಲಿತ ಶ್ರೀ ಬಾಲಕೃಷ್ಣ ಮಹಿಳಾ ಸೇವಾ ಸಮಿತಿಯ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಮಿತಿಯ ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಜಯಚಂದ್ರ ಆಯ್ಕೆಯಾಗಿದ್ದು, ಪ್ರಧಾನ ಸಂಚಾಲಕಿಯಾಗಿ ಸುನಿತಾ ರಾಜ್, ಪ್ರಧಾನ ಕಾರ್ಯದರ್ಶಿಯಾಗಿ ಶುಭ ಹೆಚ್. ಶೆಟ್ಟಿ ಹಾಗೂ ಕೋಶಾಧಿಕಾರಿಯಾಗಿ ಸುಜಾತ ಡಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ದೇವಸ್ಥಾನದ ಆಡಳಿತ ಮಂಡಳಿ, ಸದಸ್ಯರು ಹಾಗೂ ಭಕ್ತಾದಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಸಮಿತಿಯ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದ್ದಾರೆ.
ಹನುಮಾನ್ ನಗರ ಕುಂಪಲದ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ವತಿಯಿಂದ 2025-26ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವ್ಯಾಯಾಮ ಶಾಲೆಯ ಸದಸ್ಯರ ಮಕ್ಕಳಿಗೆ ಗೌರವ ಅಭಿನಂದನಾ ಕಾರ್ಯಕ್ರಮವನ್ನು ಇತ್ತೀಚೆಗೆ ವ್ಯಾಯಾಮ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವ್ಯಾಯಾಮ ಶಾಲೆಯ ಸದಸ್ಯರಾದ ದಿವಂಗತ ರೋಹಿತಾಕ್ಷ ಅವರ ಪುತ್ರಿ ಸಹನ, ಮೋಹನ್ ನಾಯಕ್ ಅವರ ಪುತ್ರಿ ದೀಪ್ತಿ ಎಂ. ಹಾಗೂ ಯಶ್ವಂತ್ ಹನುಮಾನ್ ನಗರ ಅವರ ಪುತ್ರಿ ತನ್ವಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ವ್ಯಾಯಾಮ ಶಾಲೆಯ ಗೌರವಾಧ್ಯಕ್ಷ ಉಮೇಶ್ ಕುಜುಮಗದ್ದೆ ಕಾರ್ಯಕ್ರಮದ ನೇತೃತ್ವ ವಹಿಸಿ, ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವ್ಯಾಯಾಮ ಶಾಲೆಯ ಅಧ್ಯಕ್ಷ ಅಶ್ವಥ್, ಕಾರ್ಯದರ್ಶಿ ಭವಿತ್ ಕುಲಾಲ್ ಹಾಗೂ ಶಾಲೆಯ ಸದಸ್ಯರು ಮತ್ತು ಸ್ತ್ರೀಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂದು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಹುದ್ದೆ ವಹಿಸಿಕೊಂಡ ಬಳಿಕ ವಿಜಯ್ ಅವರ ಇದು ಮೊದಲ ಕರ್ನಾಟಕ ಪ್ರವಾಸವಾಗಿದ್ದು, ಮಧ್ಯಾಹ್ನ 3 ಗಂಟೆಗೆ ಕೊಲ್ಲೂರಿಗೆ ಆಗಮಿಸುವ ನಿರೀಕ್ಷೆಯಿದೆ. ವಿಜಯ್ ಅವರ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅರ್ಚಕ ವೃಂದ ಹಾಗೂ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಿದೆ. ಸರ್ಕಾರದ ಪ್ರೋಟೋಕಾಲ್ ಪ್ರಕಾರ ಸಿಎಂ ವಿಜಯ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಗೌರವಪೂರ್ವಕವಾಗಿ ದೇವಳದೊಳಗೆ ಕರೆದುಕೊಂಡು ಹೋಗಲಾಗುತ್ತದೆ ಎಂದು ದೇವಸ್ಥಾನದ ಅರ್ಚಕ ನಿತ್ಯಾನಂದ ಅಡಿಗ ತಿಳಿಸಿದ್ದಾರೆ.ತಮಿಳುನಾಡಿನಿಂದ ಅನೇಕ ಗಣ್ಯರು ಹಾಗೂ ಕಲಾವಿದರು ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡುವುದು ಸಾಮಾನ್ಯ. ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಸೇರಿದಂತೆ ಹಲವು ಗಣ್ಯರು ಈ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಈ ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲದೆ, ಎಂ. ಕೆ. ಸ್ಟಾಲಿನ್ ಅವರ ಕುಟುಂಬ ಸದಸ್ಯರು ಸಹ ದೇವಿಯ ದರ್ಶನ…

