Author: UllalaVani

Kannada News From Coastal Karnataka

ಮೂಡುಬಿದಿರೆ; ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆರೋಪಗಳ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಇನ್ಸ್ಪೆಕ್ಟರ್ ವಿರುದ್ಧ ನೀಡಲಾಗಿದೆ ಎಂದು ಹೇಳಲಾಗಿರುವ ದೂರಿನ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಎಸಿಪಿ ಉತ್ತರ ವಲಯಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಈವರೆಗೆ ಯಾವುದೇ ಮಹಿಳೆಯು ಇನ್ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಕುರಿತು ಲಿಖಿತ ದೂರು ನೀಡಿಲ್ಲ ಎಂದು ಕಮಿಷನರ್ ಸ್ಪಷ್ಟಪಡಿಸಿದ್ದಾರೆ. ಸುಮತಿ ನಾಯಕ್ ಮತ್ತು ಅವರ ಸಹೋದರಿಯ ನಡುವೆ ನಡೆಯುತ್ತಿರುವ ಕುಟುಂಬ ವಿವಾದದ ಪ್ರಕರಣದಲ್ಲಿ, ಇನ್ಸ್ಪೆಕ್ಟರ್ ಅವರು ಎದುರುಪಕ್ಷಕ್ಕೆ ಅನುಕೂಲ ಮಾಡಿದ್ದಾರೆ ಎಂಬ ಆರೋಪ ಮಾತ್ರ ಕೇಳಿಬಂದಿದ್ದು, ಈ ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿದೆ. ಈ ಪ್ರಕರಣದ ಸಂಬAಧ ಅಪ್ರಾಪ್ತ ಮಗುವನ್ನು ತಾಯಿಯ ವಶಕ್ಕೆ ಒಪ್ಪಿಸುವ ಕ್ರಮವನ್ನು ಇನ್ಸ್ಪೆಕ್ಟರ್ ಕೈಗೊಂಡಿದ್ದು, ಅದು ಕಾನೂನುಬದ್ಧ ಕ್ರಮವಾಗಿರುವುದರಿಂದ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ತಕ್ಷಣದ ಆಧಾರಗಳಿಲ್ಲ ಎಂದು…

Read More

ಕಾರವಾರ,ಮಾ. 16 : ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ವರ್ಷದ ಬಾಲಕಿಯನ್ನು ವ್ಯಕ್ತಿಯೋರ್ವ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರಬಾ ನಗರದಲ್ಲಿ ನಡೆದಿದೆ. ಭುವಿ (2) ಬಾವಿಗೆ ಬಿದ್ದು ಅದೃಷ್ಟವಶಾತ್ ಬದುಕುಳಿದ ಬಾಲಕಿಯಾಗಿದ್ದಾಳೆ. ಮನೆಯಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದ್ದಾರೆ. ಬಾವಿಯ ಹತ್ತಿರ ಹೋದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಆತಂಕದೊಂದಿಗೆ ಬಾವಿಯೊಳಗೆ ಇಣುಕಿ ನೋಡಿದಾಗ, ಮಗು ನೀರಿಗೆ ಇಳಿಸಲಾಗಿದ್ದ ಪಂಪ್ ಪೈಪ್‌ನ್ನು ಗಟ್ಟಿಯಾಗಿ ಹಿಡಿದುಕೊಂಡು ಅಳುತ್ತಿರುವುದು ಕಂಡುಬಂದಿದೆ.ಈ ಸುದ್ದಿ ತಿಳಿಯುತ್ತಿದ್ದಂತೆಯೇ ಹತ್ತಿರದಲ್ಲೇ ವಾಸವಿರುವ ಪಯಾಜ್‌ ಚೌಟಿ ಎಂಬವರು ತಕ್ಷಣ ಸ್ಥಳಕ್ಕೆ ಧಾವಿಸಿ ಬಾವಿಗೆ ಹಗ್ಗದ ಸಹಾಯದಿಂದ ಇಳಿದು ರಕ್ಷಣೆ ಮಾಡಿದ್ದಾರೆ.

Read More

ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ. ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿವೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಮೂವರು ಮಹಿಳೆಯರು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಎರಡು ವರ್ಷಗಳ ಹಿಂದೆ ಮಹಿಳೆಯೋರ್ವರ ಪತಿಯನ್ನು ಒಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು. ನಿನ್ನ ಪತಿಯನ್ನು ಬಿಡುಗಡೆ ಮಾಡಬೇಕಾದರೆ ನೀನು ಲೈಂಗಿಕವಾಗಿ ಸಹಕರಿಸಬೇಕು ಎಂದು ಇನ್ಸ್‌ಪೆಕ್ಟರ್ ಪೀಡಿಸಿದ್ದರು. ಜೊತೆಗೆ 25 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಪತಿಯ ವಿರುದ್ಧ ‘ರೌಡಿ ಶೀಟ್’ ತೆರೆಯುವುದಾಗಿ ಬೆದರಿಕೆ ಹಾಕಿದ್ದರು ಎಂದು ಓರ್ವ ಮಹಿಳೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಇನ್ಸ್‌ಪೆಕ್ಟರ್ ರಾತ್ರಿ ವೇಳೆ ಕಾಂಪೌಂಡ್ ಗೋಡೆ ಜಿಗಿದು ಮನೆಗೆ ನುಗ್ಗುತ್ತಿದ್ದರು, ಕೈ ಹಿಡಿದು ಎಳೆದಾಡುತ್ತಿದ್ದರು ಮತ್ತು ಬಲವಂತವಾಗಿ ಡ್ಯಾನ್ಸ್ ಮಾಡುವಂತೆ ಪೀಡಿಸುತ್ತಿದ್ದರು. ಈ ಹಿಂದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿದ್ದಾಗಲೂ ಅವರು ಇದೇ ರೀತಿ ವರ್ತಿಸಿದ್ದರು. ಪಾಸ್‌ಪೋರ್ಟ್ ಪರಿಶೀಲನೆ ಮತ್ತು ಇತರ…

Read More

ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರು ಸೈಯದ್ ಮದನಿ ವಿದ್ಯಾಸಂಸ್ಥೆಗಳ ಮುಖ್ಯ ಶಿಕ್ಷಕರಾದ ಕೆ ಎಂ ಕೆ ಮಂಜುನಾಡಿಯವರು ಕಳೆದ 35 ವರ್ಷಗಳಿಂದ ಶಿಕ್ಷಕರ ಸಂಘಟನೆ ಸಮೇತ ತಾಲೂಕು ಜಿಲ್ಲೆ ರಾಜ್ಯದ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದು, ಇವರ ಸಂಘಟನಾ ಚಾತುರ್ಯವನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು ಇವರು ಸಂಘಟನಾ ಸ್ಪೂರ್ತಿ 2026 ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಮಹಾಸಮ್ಮೇಳನ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ವಿಧಾನ ಸಭಾಧ್ಯಕ್ಷರಾದ ಡಾಕ್ಟರ್ ಯು ಟಿ ಖಾದರ್ ಫರೀದ್ ಹಾಜಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಶಾಸಕರುಗಳು ಹಾಗೂ ರಾಜ್ಯದ ವಿವಿಧ ಶಿಕ್ಷಣ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

Read More

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನ ಮುಂದೂಡಿದ್ದಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದ ಯು.ಟಿ.ಖಾದರ್ ಅವರನ್ನು ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ಮನವೊಲಿಸಿದ್ದಾರೆ. ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ.  ಜೊತೆಗೆ ಸಮರ್ಪಕ ಉತ್ತರ ಕೊಡದ 3-4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಉತ್ತರ ಒದಗಿಸದ ಪಿಡಬ್ಲ್ಯುಡಿ, ಪಶುಸಂಗೋಪನೆ, ಸಾರಿಗೆ, ಐಟಿ-ಬಿಟಿ, ಡಿಪಿಎಆರ್ ಮತ್ತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ನೀಡಲು ಸಿಎಂಗೆ ಸ್ಪೀಕರ್​​ ತಿಳಿಸಿರುವ ಹಿನ್ನೆಲೆ, ಹಿರಿಯ ಐಎಎಸ್ ಅಧಿಕಾರಿಗಳೂ ಆದ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ ಬಿಸಿ ಮುಟ್ಟಿದೆ. ಮತ್ತೊಂದೆಡೆ ಸಿಎಂ ಸೂಚನೆ ಹಿನ್ನೆಲೆ ಮಧ್ಯಾಹ್ನ ಸಿಎಸ್‌ ಶಾಲಿನಿ ರಜನೀಶ್​​ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ. ಅಂತಿಮವಾಗಿ ಸ್ವೀಕರ್​ ಸಂಧಾನ ಯಶಸ್ವಿ ಹಿನ್ನೆಲೆ ವಿಧಾನಸಭೆ ಕಲಾಪ ಪುನಾರಂಭವಾಗಿದೆ. ಸಭೆಯಲ್ಲಿ ಲಿಖಿತ ರೂಪದ…

Read More

ಮಂಗಳೂರಿನಿoದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಗ್ಯಾಸ್ ಟ್ಯಾಂಕರ್‌ವೊAದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಟಪಾಡಿ ಬಳಿ ನಡೆದಿದೆ. ಟ್ಯಾಂಕರ್‌ನಿ0ದ ಅನಿಲ ಸೋರಿಕೆಯಾಗುತ್ತಿದೆ ಎಂಬ ವರದಿಯಾದ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಕೆಲ ಮೂಲಗಳ ಪ್ರಕಾರ ಮಂಗಳೂರಿನಿAದ ಅನಿಲ ಸೋರಿಕೆಯಾಗುತ್ತಿರುವುದು ತಿಳಿದುಬಂದಿದ್ದು, ಈ ಹಿನ್ನಲೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು, ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ತಜ್ಞರ ತಂಡವು ಟ್ಯಾಂಕರ್ ಅನ್ನು ಸುರಕ್ಷಿತವಾಗಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಸಾರ್ವಜನಿಕರು ಈ ಮಾರ್ಗದಲ್ಲಿ ಸಂಚರಿಸುವಾಗ ಪರ್ಯಾಯ ರಸ್ತೆ ಬಳಸುವಂತೆ ಸೂಚಿಸಲಾಗಿದೆ.

Read More

ನವದೆಹಲಿ, ಮಾ. 16;  13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ (31)ಅವರಿಗೆ ಕುಟುಂಬಸ್ಥರು ಭಾವನಾತ್ಮಕ ವಿದಾಯ ಹೇಳಿದ್ದಾರೆ. ಏಮ್ಸ್‌ ಆಸ್ಪತ್ರೆಯಲ್ಲಿ ಮಲಗಿದ್ದ ಅವರ ಬೆಡ್‌ ಸುತ್ತ ನಿಂತ ಕುಟುಂಬಸ್ಥರು ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼಎಂದು ಮನವಿ ಮಾಡಿಕೊಂಡಿದ್ದಾರೆ. ರಾಣಾ ಅವರ ಕುಟುಂಬವು ಅವರೊಂದಿಗೆ ತಮ್ಮ ಕೊನೆಯ ಕ್ಷಣಗಳನ್ನು ಕಳೆಯುತ್ತಿರುವ 22 ಸೆಕೆಂಡ್‌ಗಳ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ವೀಡಿಯೋದಲ್ಲಿ ರಾಣಾ ಅವರ ತಾಯಿ ಪಕ್ಕದಲ್ಲಿ ಭಾವುಕರಾಗಿ ಕುಳಿತಿದ್ದರು. ಬ್ರಹ್ಮ ಕುಮಾರಿ ಸಹೋದರಿಯೊಬ್ಬರು ಅವರ ಹಣೆಯ ಮೇಲೆ ತಿಲಕ ಹಚ್ಚಿ, ಎಲ್ಲರನ್ನೂ ಕ್ಷಮಿಸಿ, ಈಗ ಹೊರಡುವ ಸಮಯ ಎಂದು ತಲೆಯನ್ನು ಸವರುತ್ತಾ ಹೇಳಿರುವುದು ಸೆರೆಯಾಗಿದೆಕುಟುಂಬಸ್ಥರ ಅಂತಿಮ ವಿದಾಯದ ಬಳಿಕ ವೈದ್ಯರು ಕ್ರಮೇಣ ಅವರ ಜೀವರಕ್ಷಕ ಸಾಧನಗಳನ್ನು ಹಿಂತೆಗೆದುಕೊಂಡಿದ್ದಾರೆ. ಮಾ. 11 ರಂದು 2013ರಿಂದ ಕೋಮಾದಲ್ಲಿದ್ದ ರಾಣಾ ಅವರ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ಒಪ್ಪಿಗೆ ಸೂಚಿಸಿತ್ತು. ಇದು ದೇಶದಲ್ಲಿ ಮೊದಲನೆಯ ದಯಾಮರಣ ಪ್ರಕರಣವಾಗಿದೆ.2013 ರಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದ ನಂತರ ರಾಣಾ ಅವರ ಮೆದುಳಿಗೆ ಹಾನಿಯಾಗಿತ್ತು.…

Read More

ಕೊಣಾಜೆ ;ಬೋಳಿಯಾರು ಮಾಗಂಧಡಿಯಲ್ಲಿ ವಾಸವಿದ್ದ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ಮಲ್ಲಾಪುರದ ಮೂಲದ ಶೋಭಾ ಹನುಮಂತಪ್ಪ ಭಜಂತ್ರಿ (33) ಎಂಬವರು ನಾಪತ್ತೆಯಾಗಿದ್ದಾರೆ. ಮಾ.7ರoದು ಬೆಳಗ್ಗೆ ಮಕ್ಕಳನ್ನು ಬೋಳಿಯಾರು ಶಾಲೆಗೆ ಕರೆದುಕೊಂಡು ಹೋದವರು, ಅಲ್ಲಿಂದ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಮಹಿಳೆ 5.5ಅಡಿ ಎತ್ತರ, ಸಾಧಾರಣ ಶರೀರ, ದುಂಡು ಮುಖ, ಎಣ್ಣೆ ಕಪ್ಪು ಮೈ ಬಣ್ಣ, ಮೆಳ್ಳೆಗಣ್ಣು ಇದೆ. ಕನ್ನಡ, ಹಿಂದಿ ಭಾಷೆಯನ್ನು ಬಲ್ಲವರಾಗಿದ್ದಾರೆ. ಈ ಚಹರೆಯ ಮಹಿಳೆ ಪತ್ತೆಯಾದರೆ ಕೊಣಾಜೆ ಠಾಣೆಯನ್ನು ಸಂಪರ್ಕಿಸಬೇಕಾಗಿ ಪೊಲೀಸರು ತಿಳಿಸಿದ್ದಾರೆ.

Read More

ಮಂಗಳೂರು, ಮಾ,16: ಮಂಗಳೂರು ತಾಲ್ಲೂಕಿನ ಮಿನಿ ವಿಧಾನಸೌಧದ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೊಂದಾವಣೆ ಕಚೇರಿಯಲ್ಲಿ ಕಳೆದ ಹದಿನೈದು ದಿನಗಳಿಂದ ಗಂಭೀರ ಸಮಸ್ಯೆ ಉಂಟಾಗಿದೆ. ಹಿರಿಯ ಉಪ ನೊಂದಣಾಧಿಕಾರಿ ಶಶಿಧರ್ ಅವರು ರಜೆ ಮೇಲೆ ಇರುವುದರಿಂದ ಕಚೇರಿಯ ಕೆಲಸಗಳು ವಿಳಂಬವಾಗುತ್ತಿವೆ. ಇದರಿಂದ ಸಾರ್ವಜನಿಕರು, ವಿಶೇಷವಾಗಿ ವೃದ್ಧರು ಹಾಗೂ ಮಹಿಳೆಯರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಸಾಮಾನ್ಯವಾಗಿ ಈ ಕಚೇರಿಯಲ್ಲಿ ಇಬ್ಬರು ಉಪ ನೊಂದಣಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಾರೆ. ಆದರೆ ಈಗ ಕವಿತಾ ಎಂಬ ಅಧಿಕಾರಿಯೊಬ್ಬರೇ ಕೆಲಸ ನಿರ್ವಹಿಸುತ್ತಿದ್ದು, ಎಲ್ಲಾ ಜವಾಬ್ದಾರಿಗಳು ಒಬ್ಬರ ಮೇಲೇ ಬಿದ್ದಿವೆ. ಪ್ರತಿದಿನ ನೂರಾರು ಜನರು ದಸ್ತಾವೇಜುಗಳ ನೋಂದಣಿಗಾಗಿ ಕಚೇರಿಗೆ ಬರುತ್ತಿದ್ದಾರೆ. ಆದರೆ ಸಿಬ್ಬಂದಿ ಕೊರತೆಯಿಂದ ದಿನಕ್ಕೆ ನೂರು ಕೆಲಸ ಆಗಬೇಕಾದಲ್ಲಿ ಈಗ ಇಪ್ಪತ್ತು ನೋಂದಣಿಯೂ ಸರಿಯಾಗಿ ಆಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇದರ ಪರಿಣಾಮವಾಗಿ ಜನರು ದಿನಗಟ್ಟಲೆ ಕಚೇರಿಗೆ ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಸಮಸ್ಯೆಯಿಂದ ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ವಿಧಾನಸಭಾಧ್ಯಕ್ಷ ಯು.ಟಿ.…

Read More

ಉಳ್ಳಾಲ ತಾಲ್ಲೂಕಿನ ಇರಾ ಗ್ರಾಮದ ಬಾಳೆಪುಣಿ ಎಸ್ ಎಸ್ ಎಫ್ ಶಾಖಾ ವತಿಯಿಂದ ಬದ್ರಿಯಾ ಜುಮಾ ಮಸೀದಿಯಲ್ಲಿ ಅಸರ್ ನಮಾಝ್ ಬಳಿಕ ಮಾಸಿಕ ಬುರ್ಧಾ ಮಜ್ಲಿಸ್ ಶೈಖುನಾ ಅಲಿ ಫೈಝಿ ಬಾಳೆಪುಣಿ ಉಸ್ತಾದ್ ಅವರ ನೇತೃತ್ವದಲ್ಲಿ ನಡೆಯಿತು. ಬಳಿಕ ಮಸೀದಿ ವಠಾರದಲ್ಲಿ ಬೃಹತ್ ಇಫ್ತಾರ್ ಕೂಟವನ್ನು ಆಯೋಜಿಸಿದರು, ಊರಿನ ಹಿರಿಯರು,ಕಿರಿಯರು ಮತ್ತು ಸಂಘಟಣೆಯ ಕಾರ್ಯಕರ್ತರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.

Read More