ಕಾರ್ಕಳ : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಲೋಕಸಭಾ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಯವರು ದೇಶವ್ಯಾಪಿ ನಡೆಸುತ್ತಿರುವ “ಸ್ಟಾಪ್ ವೋಟ್ ಚೋರಿ” ಅಭಿಯಾನಕ್ಕೆ ಬೆಂಬಲವಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಸಹಿ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾನ ದೇಶದ ಪ್ರಜೆಗಳ ಹಕ್ಕು ಆದರೆ ಮತಗಳ್ಳತನದ ಮೂಲಕ ಬಿಜೆಪಿ ‘ಶದ ಜನತೆಗೆ ಅತೀ ದೊಡ್ಡ ದ್ರೋಹವೆಸಗಿದೆ. ಇದರ ವಿರುದ್ದ ನಾವೆಲ್ಲರೂ ಒಂದಾಗಿ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಮಾತನಾಡಿ, ಬಿಜೆಪಿ ಅಧಿಕಾರಕ್ಕಾಗಿ ಜನರ ಹಕ್ಕನ್ನು ಕಸಿಯುವ ದೇಶ ದ್ರೋಹದ ಕೆಲಸ ಮಾಡಿದೆ ಇದರ ವಿರುದ್ದ ಪ್ರತಿಯೊಬ್ಬ ಪ್ರಜೆಯೂ ಧ್ವನಿ ಎತ್ತಬೇಕು. ಬೂತ್ ಮಟ್ಟದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಎಲ್ಲರೂ ಸಹಕಾರ ನೀಡಬೇಕು. ಅತೀ ಹೆಚ್ಚು ಸಹಿ ಸಂಗ್ರಹ ಮಾಡಿದ ವಾರ್ಡ್ ಸಮಿತಿಗೆ ಪ್ರೋತ್ಸಾಹ…
Author: UllalaVani
ಮಂಗಳೂರು, ಅ. 25: ಜನವರಿ 18ರಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಮಂಗಳೂರಿನ ನೆಹರೂ ಮೈದಾನದಲ್ಲಿ ಜಾಗತಿಕ ಬಿಲ್ಲವರ ಪ್ರಥಮ ಕ್ರೀಡೋತ್ಸವ ನಡೆಯಲಿದೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಯೂನಿಯನ್‌ನ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಈ ಬಗ್ಗೆ ಈಗಾಗಲೇ ಬಿಲ್ಲವ ಸಂಘಗಳ ಪ್ರತಿನಿಧಿಗಳ, ಸಮಾಜ ಮುಖಂಡರ ಸಭೆ ನಡೆದಿದೆ. ಕ್ರೀಡೋತ್ಸವದ ಲೋಗೋ ಬಿಡುಗಡೆಯನ್ನು ಈಗಾಗಲೇ ನಟ ಡಾ.ಶಿವರಾಜ್ ಕುಮಾರ್ ಬೆಂಗಳೂರಿನಲ್ಲಿ ನಡೆಸಿದ್ದಾರೆ. ಕ್ರೀಡೋತ್ಸವದಲ್ಲಿ ಸಮಾಜದ ಪುರುಷರಿಗೆ ಕಬಡ್ಡಿ ಮತ್ತು ವಾಲಿಬಾಲ್, ಮಹಿಳೆಯರಿಗೆ ಕಬಡ್ಡಿ ಮತ್ತು ತ್ರೋಬಾಲ್ ಪಂದ್ಯಾಟ ನಡೆಯಲಿದೆ. ಭಾಗವಹಿಸುವ ತಂಡಗಳು ಹೆಸರನ್ನು ಅ.27ರಿಂದ ನವೆಂಬರ್ 30ರೊಳಗೆ ಆನ್‌ಲೈನ್‌ನಲ್ಲಿ ನಿಯಮ, ನಿಬಂಧನೆಗೆ ಅನುಸಾರವಾಗಿ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ 9242783800ನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು. ಪುರುಷಕರ ಕಬಡ್ಡಿಯಲ್ಲಿ ಮೊದಲು ನೋಂದಾಯಿಸಿದ 24, ವಾಲಿಬಾಲ್‌ನಲ್ಲಿ 16, ಮಹಿಳೆಯರ ಕಬಡ್ಡಿ ಹಾಗೂ ತ್ರೋಬಾಲ್‌ನಲ್ಲಿ ತಲಾ 16 ತಂಡಗಳಿಗೆ ಭಾಗವಹಿಸಲು ಅವಕಾಶವಿದೆ. ವಿಜೇತ ತಂಡಗಳಿಗೆ ಪುರುಷರ ಕಬಡ್ಡಿಯಲ್ಲಿ ಟ್ರೋಫಿಯೊಂದಿಗೆ ಪ್ರಥಮ 2 ಲಕ್ಷ…
ಮಂಗಳೂರು, ಅ.25: ಸಿಎಂ ಸಿದ್ದರಾಮಯ್ಯ ಅವರು ಅ.27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. ಸಂಜೆ 4:25ಕ್ಕೆ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ‘ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ – 2025’ ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜಿಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾತ್ರಿ 7:25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ. ಉಸ್ತುವಾರಿ ಸಚಿವರ ಪ್ರವಾಸದ ವಿವರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅ.27ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 9:55 – ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ. 10:30 – ಕುಂಜತ್ತಬೈಲ್ ಮೂಡ ಲೇಔಟ್ ಸ್ಥಳ ಪರಿಶೀಲನೆ, 11:45ಕ್ಕೆ ಉರ್ವಾ ಮಾರುಕಟ್ಟೆ ಕಟ್ಟಡ ಕಾಮಗಾರಿ ಪರಿಶೀಲನೆ, ಮಧ್ಯಾಹ್ನ 12:45ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ,…
ಮಂಗಳೂರು,ಅ.25:ಮಹಾಕಾಳಿಪಡ್ಡು ರೈಲ್ವೆ ಕೆಳ ಸೇತುವೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದನ್ನು ಖಂಡಿಸಿ ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಅಬ್ದುಲ್ ಸಲೀಂ ನೇತೃತ್ವದಲ್ಲಿ ಕಾಂಗ್ರೆಸ್‌ನಿAದ ಶನಿವಾರ ರೈಲ್ವೇ ಕೆಳಸೇತುವೆ ಚಲೋ ಪ್ರತಿಭಟನೆ ನಡೆಸಲಾಯಿತು. ಸೇತುವೆ ಕಾಮಗಾರಿ ನಡೆಯುವ ಸ್ಥಳಕ್ಕೆ ತೆರಳಿದ ಪ್ರತಿಭಟನಾಕಾರರು ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸ್ಮಾರ್ಟ್ ಸಿಟಿಯ ಮ್ಯಾನೇಜರ್ ಅರುಣ್ ಪ್ರಭಾರನ್ನು ಒತ್ತಾಯಿಸಿದರು. ಈ ಸಂದರ್ಭ ಮುಂದಿನ 30 ದಿನಗಳ ಒಳಗಡೆ ಕಾಮಗಾರಿಯನ್ನು ಮುಗಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಿವುದಾಗಿ ಅರುಣ್ ಪ್ರಭಾರವರು ಪ್ರತಿಭಟನಾಕಾರರಿಗೆ ನಿಯೋಗಕ್ಕೆ ಭರವಸೆ ನೀಡಿದರು. ಕಾಮಗಾರಿ ಅಮೆಗತಿಯಲ್ಲಿ ನಡೆಯುತ್ತಿದ್ದು, ಮಳೆಯ ಕಾರಣದಿಂದ ಕಾಮಗಾರಿ ಕುಂಠಿತಗೊAಡಿದೆ ಎಂದು ಹೇಳುವ ಉತ್ತರ ಸಮಂಜಸವಲ್ಲ ಕೂಡಲೇ ಕಾಮಗಾರಿ ಮುಗಿಸಬೇಕು.ಇಲ್ಲದೇ ಇದ್ದಲ್ಲಿ ಪಂಪ್‌ವೆಲ್ ಮತ್ತು ಕಂಕನಾಡಿಯಲ್ಲಿ ಉದ್ದೇಶಿಸಿರುವ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕು. ಯಾವುದೇ ಕಾರಣಕ್ಕೂ ಮಹಾಕಾಳಿಪಡ್ಡು ರೈಲ್ವೆ ಅಹಾ ಬ್ರಿಡ್ಜ್ನ ಸಮಸ್ಯೆ ಪರಿಹಾರವಾಗದೇ ಪಂಪವೆಲ್ ಮತ್ತು ಕಂಕನಾಡಿ ಕಾಮಗಾರಿಗಳನ್ನು ಮುಂದುರಿಸಬಾರದೆAದು ಐವನ್ ಡಿಸೋಜಾ ಇವರು ಪೋಲಿಸ್ ಕಮಿಷನರ್ ಮತ್ತು…
ಕೊಚ್ಚಿ, ಅ.25: ಕೇರಳ ರಾಜ್ಯ ಸರ್ಕಾರ ಮುಸ್ಲಿಂ ಬಾಲಕಿಯರು ಶಾಲೆಗೆ ಹಿಜಾಬ್ ಧರಿಸಿ ಬರಲು ಅನುಮತಿಸದಿರುವುದು ಅವರ ಖಾಸಗಿತನ ಮತ್ತು ಘನತೆಯ ಸ್ಪಷ್ಟ ಉಲ್ಲಂಘನೆ ಎಂದು ಹೈಕೋರ್ಟ್ನಲ್ಲಿ ವಾದ ಮಂಡಿಸಿದೆ. ಜತೆಗೆ ಈ ಅನುಮತಿ ನಿರಾಕರಣೆಯು ಆಕೆಗೆ ಜಾತ್ಯತೀತ ಶಿಕ್ಷಣವನ್ನು ನಿರಾಕರಿಸಿದಂತೆ ಎಂದು ಅಭಿಪ್ರಾಯಪಟ್ಟಿದೆ. ಮನೆಯಲ್ಲಿ ಮತ್ತು ಮನೆಯ ಹೊರಗೆ ಹಿಜಾಬ್ ಧರಿಸಲು ಅನುಮತಿ ಇರುವಾಗ ಅದನ್ನು ಶಾಲೆಯ ಗೇಟಿನಲ್ಲಿ ತಡೆಯಲಾಗದು ಎಂದು ಸ್ಪಷ್ಟಪಡಿಸಿದೆ. ಪಳ್ಳುರುತ್ತಿ ಎಂಬಲ್ಲಿ ಚರ್ಚ್ ಒಡೆತನದ ಸೈಂಟ್ ರೀಟಾ ಪಬ್ಲಿಕ್ ಸ್ಕೂಲ್ ಸಲ್ಲಿಸಿದ ಅರ್ಜಿಗೆ ಪ್ರತಿಯಾಗಿ ಸರ್ಕಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಮುಸ್ಲಿಂ ಬಾಲಕಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಶಾಲೆಯ ಆಡಳಿತ ಮಂಡಳಿ ಅರ್ಜಿ ಸಲ್ಲಿಸಿತ್ತು. ಸಂಸ್ಥೆ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿ ಶಿಕ್ಷಣ ಇಲಾಖೆ ನೋಟಿಸ್ ನೀಡಿರುವುದನ್ನು ಕೂಡಾ ಸಂಸ್ಥೆ ಪ್ರಶ್ನಿಸಿದೆ. ಶುಕ್ರವಾರ ಈ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಂಡ ಸಂದರ್ಭದಲ್ಲಿ…
ಕಾನಾ ಪ್ರದೇಶದ ಬಳಿ ಗುರುವಾರ ರಾತ್ರಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಮೂವರು ದುಷ್ಕರ್ಮಿಗಳು ಮತ್ತು ಅವರಿಗೆ ಆಶ್ರಯ ನೀಡಿದ ವ್ಯಕ್ತಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ರಾತ್ರಿ 10:30 ರ ಸುಮಾರಿಗೆ ಸ್ಥಳೀಯ ಬಾರ್ ಬಳಿ ಕ್ಷುಲ್ಲಕ ವಿವಾದಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಜಾಮ್ ಎಂಬ ಇಬ್ಬರು ಯುವಕರ ಮೇಲೆ ಕ ಹಲ್ಲೆ ನಡೆಸಿದ ಒಂದು ದಿನದ ನಂತರ ಈ ಬಂಧಿಸಲಾಗಿದೆ.ಸುರತ್ಕಲ್‌ನ ಕಾನಾ ನಿವಾಸಿ ಸುಶಾಂತ್ ಅಲಿಯಾಸ್ ಕಡವಿ( 29)ಕೆವಿ ಅಲೆಕ್ಸ್,( 27) ಸುರತ್ಕಲ್ ಮೂಲದ ನಿತಿನ್ (26) ಮತ್ತು ಅರುಣ್ ಶೆಟ್ಟಿ (56) ಆರೋಪಿಗಳಿಗೆ ಆ ಬಂಧಿತ ಆರೋಪಿಗಳು.ಅರುಣ್ ಶೆಟ್ಟಿ ಜೊತೆ ಆಶ್ರಯ ನೀಡಿದ್ದ ಇಬ್ಬರು ಪ್ರಮುಖ ಶಂಕಿತರಾದ ಗುರುರಾಜ್ ಆಚಾರಿ ಮತ್ತು ಅರುಣ್ ಶೆಟ್ಟಿ ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಈ ದಾಳಿಯನ್ನು ಹಿಂದಿನ ಕ್ರಿಮಿನಲ್ ದಾಖಲೆಗಳನ್ನು ಹೊಂದಿರುವ ವ್ಯಕ್ತಿಗಳು ನಡೆಸಿದ್ದಾರೆ.”ಗುರುರಾಜ್ ಆಚಾರಿ,…
ಬೆಳ್ತಂಗಡಿ , ಅ.25; ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದು ಅಟೋ ರಿಕ್ಷಾ ಹಾಗೂ ಗೋ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಮಧ್ಯಾಹ್ನ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ ಆಟೋ ರಿಕ್ಷಾವನ್ನು ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ (27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.ಪರಿಶೀಲನೆ ವೇಳೆ ಆಟೋ ರಿಕ್ಷಾದೊಳಗೆ 85 ಕೆ.ಜಿ ಗೋಮಾಂಸ ಪತ್ತೆಯಾಗಿದ್ದು, ಆಟೋದ ಮೌಲ್ಯ 2,50,000 ಲಕ್ಷ ರೂ. ಮತ್ತು ಗೋಮಾಂಸ ವಶಪಡಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು, ಅ.25: ಅ. 27 ರಿಂದ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು ಮತ್ತು ತಿರುವನಂತಪುರ ನಡುವೆ ಹೊಸ ವಿಮಾನ ಸೇವೆಯನ್ನು ಆರಂಭಿಸುತ್ತಿದೆ. ವಾರದಲ್ಲಿ ಮೂರು ದಿನ ಲಭ್ಯವಿರುವ ಈ ಸೇವೆಯು ಎರಡು ಕರಾವಳಿ ನಗರಗಳ ನಡುವಿನ ಸಂಪರ್ಕವನ್ನು ಸುಲಭಗೊಳಿಸಲಿದೆ. ಪ್ರಸ್ತುತ ರೈಲಿನಲ್ಲಿ ಸುಮಾರು 9 ಗಂಟೆಗಳಿರುವ ಪ್ರಯಾಣದ ಸಮಯವು ಈ ವಿಮಾನದಿಂದಾಗಿ ಕೇವಲ 80 ನಿಮಿಷಗಳಿಗೆ ಇಳಿಯಲಿದೆ. ಈ ಮೂಲಕ ವ್ಯಾಪಾರ, ಪ್ರವಾಸೋದ್ಯಮ ಮತ್ತು ವೈಯಕ್ತಿಕ ಪ್ರಯಾಣಕ್ಕೆ ದೊಡ್ಡ ಉತ್ತೇಜನ ಸಿಗುವ ನಿರೀಕ್ಷೆಯಿದೆ. ಪ್ರಸ್ತುತ, ಈ ಎರಡು ನಗರಗಳ ನಡುವೆ ವೇಗದ ಸಾರಿಗೆ ಸಂಪರ್ಕಕ್ಕಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಲಭ್ಯವಿದ್ದು, 620 ಕಿ.ಮೀ. ದೂರವನ್ನು ಕ್ರಮಿಸಲು ಸುಮಾರು 8 ಗಂಟೆ 40 ನಿಮಿಷಗಳನ್ನು ತೆಗೆದುಕೊಳ್ಳುತ್ತಿದೆ.ಆದರೆ, ಹೊಸ ವಿಮಾನ ಸೇವೆಯಿಂದಾಗಿ ಪ್ರಯಾಣಿಕರು 7 ಗಂಟೆಗೂ ಅಧಿಕ ಸಮಯವನ್ನು ಉಳಿಸಬಹುದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಈ ಹೊಸ ಮಾರ್ಗದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದು, “ಪ್ರಕೃತಿ, ಸಂಸ್ಕೃತಿ ಮತ್ತು ಪ್ರಶಾಂತತೆ ಮೇಳೈಸುವ…
ಬೆಂಗಳೂರು, ಅಕ್ಟೋಬರ್ 24: ಆಂಧ್ರ ಪ್ರದೇಶದ ಕರ್ನೂಲ್ ಸಮೀಪ ಅಗ್ನಿ ದುರಂತದಿಂದ ಖಾಸಗಿ ಬಸ್ ಸುಟ್ಟು ಕರಕಲಾಗಿದ್ದು, ಘಟನೆಯಲ್ಲಿ ಬೆಂಗಳೂರಲ್ಲಿ ನೆಲೆಸಿದ್ದ ಕುಟುಂಬ ಸೇರಿ 20 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಂದು (ಅ.24)ರ ಬೆಳಗಿನ ಜಾವ ಸಂಭವಿಸಿರೋ ಅನಾಹುತದಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ಗೊಳ್ಳ ರಮೇಶ್ ಕುಟುಂಬ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ. ಆಂಧ್ರದ ನೆಲ್ಲೂರು ಮೂಲದವರಾಗಿದ್ದ ರಮೇಶ್, ಪತ್ನಿ ಅನುಷಾ, ಮಕ್ಕಳಾದ ಶಶಾಂಕ್ ಮತ್ತು ಮನ್ವಿತಾ ಜೊತೆ ಇದೇ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಹೊತ್ತಿ ಉರಿದಾಗ ಹೊರಬರಲಾಗದೆ ನಾಲ್ವರೂ ದುರ್ಮರಣ ಹೊಂದಿದ್ದಾರೆ. ಘಟನೆಯಲ್ಲಿ ಬೆಂಗಳೂರಿನ ಖಾಸಗಿ ಕಂಪೆನಿಯ ಸಾಫ್ಟ್‌ವೇರ್ ಎಂಜಿನಿಯರ್ ಕೂಡ ಸಾವನ್ನಪ್ಪಿದ್ದಾರೆ. ಮೇಘನಾಥ್(24) ಮೃತರಾಗಿದ್ದು, ದೀಪಾವಳಿ ಹಬ್ಬಕ್ಕೆಂದು ಊರಿಗೆ ಬಂದಿದ್ದ ಮೇಘನಾಥ್ ಮರಳಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಮೇಘನಾಥ್ ಸುಶೀಲಾ ಮತ್ತು ಭಾಸ್ಕರಾಚಾರಿ ದಂಪತಿಯ ಏಕೈಕ ಪುತ್ರನಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇರುವ ಒಬ್ಬನೇ ಒಬ್ಬ ಮಗನನ್ನು ಕಳೆದುಕೊಂಡು ಹೆತ್ತವರು ಕಂಗಾಲಾಗಿದ್ದಾರೆ. 41 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಮೊದಲು ಬೈಕ್ ಗೆ…
ಬೆಂಗಳೂರು, ಅಕ್ಟೋಬರ್ 24: ಮದ್ಯಪಾನ ಮಾಡಿ ಶಾಲಾ ಬಸ್ಗಳನ್ನು ಚಾಲನೆ ಮಾಡುವ ಚಾಲಕರಿಗೆ ಬೆಂಗಳೂರು ಸಂಚಾರ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಇಂದು (ಅ.24) ಬೆಳಗ್ಗೆ 7 ಗಂಟೆಯಿಂದ 9.30ರವರೆಗೆ ಬೆಂಗಳೂರಿನ ವಿವಿಧೆಡೆ ಶಾಲಾ ಬಸ್ ಚಾಲಕರ ತಪಾಸಣೆ ಮಾಡಲಾಗಿದ್ದು, ಒಟ್ಟು 5,881 ಡ್ರೈವರ್ಗಳನ್ನು ಪರೀಕ್ಷಿಸಲಾಗಿದೆ. ಆ ಪೈಕಿ 36 ಮಂದಿ ಮದ್ಯ ಸೇವಿಸಿ ಬಸ್ ಚಾಲನೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಪಾನಮತ್ತ ಚಾಲಕರ ವಿರುದ್ಧ ಕೇಸ್ ದಾಕಲಿಸಲಾಗಿದ್ದು, ಡಿಎಲ್ ರದ್ದುಪಡಿಸುವಂತೆ RTOಗೆ ಸಂಚಾರಿ ಪೊಲೀಸರು ಪತ್ರ ಬರೆದಿದ್ದಾರೆ.ಶಾಲಾ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಸಂಬಂಧ ಪಶ್ಚಿಮ ವಿಭಾಗದ ಸಂಚಾರ ಡಿಸಿಪಿ ಅನೂಪ್ ಶೆಟ್ಟಿ ಪ್ರತಿಕ್ರಿಯಿಸಿದ್ದು, ಸಂಚಾರ ವಿಭಾಗ ಜಂಟಿ ಪೊಲೀಸ್ ಆಯುಕ್ತರ ಸೂಚನೆಯಂತೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಶಾಲಾ ವಾಹನ ಚಾಲಕರಿಗೆ ಡ್ರಂಕ್ ಆ್ಯಂಡ್ ಡ್ರೈವ್ ಟೆಸ್ಟ್ ಮಾಡಲಾಗಿದ್ದು, ಈ ವೇಳೆ ಹಲವರು ಕುಡಿದು ವಾಹನ ಚಾಲನೆ ಮಾಡುತ್ತಿರುವುದು ಪತ್ತೆಯಾಗಿದೆ. ಅಂತಹವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಕಳೆದ ಕೆಲ ವರ್ಷಗಳ ಅಂಕಿ…

