UN NETWORKS

ಮಂಗಳೂರು : ಸಂತ ಜೋಸೆಫರ ಶಾಲೆ ಬಜಾಲ್ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ತ್ಯಾಗಂ ಹರೇಕಳ ಇವರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಅಂಶಗಳಾದ ಆತ್ಮವಿಶ್ವಾಸ, ಶಿಸ್ತು, ಧೈರ್ಯ, ಸಮಯಪ್ರಜ್ಞೆ, ತಾಳ್ಮೆ, ಸಕರಾತ್ಮಕ ಚಿಂತನೆ ಮುಂತಾದ ಗುಣಗಳು ಬೆಳೆಯುತ್ತದೆ. ಈ ಗುಣಗಳನ್ನು ವಿದ್ಯಾರ್ಥಿಗಳು ತನ್ನ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಮಾನಸಿಕ ಒತ್ತಡ, ಜೀವನದಲ್ಲಿ ಜಿಗುಪ್ಸೆ ಇಂತಹ ಮಾರಕ ರೋಗಗಳಿಂದ ಹೊರಬರಲು ಸಾಧ್ಯವೆಂದು ಹೇಳಿದರು.

ಮುಖ್ಯ ಅತಿಥಿಯಾಗಿ ರೋಟರಿ ಕ್ಲಬ್ ಮಂಗಳೂರು ದಕ್ಷಿಣ ಇದರ ಅಧ್ಯಕ್ಷರಾದ ರೊಟೇರಿಯನ್ ಸೂರ್ಯಕಾಂತ್ ಅವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಬಹು ಪ್ರಾಮುಖ್ಯ. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಕೂಡ ಯಾವುದಾದರೊಂದು ಕ್ರೀಡೆಗಳಲ್ಲಿ ಭಾಗವಹಿಸುವುದು ಅಷ್ಟೇ ಮುಖ್ಯವೆಂದರು.ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪಕರಾದ ಸಿಸ್ಟರ್ ಆಗ್ನೇಸ್‍ಕ್ಲೇರ್ ವಹಿಸಿ ಶುಭವನ್ನು ಹಾರೈಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಹಳ ಶಿಸ್ತು ಬದ್ಧವಾಗಿ ಪಥ ಸಂಚಲನವನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ಸುದೀಪ್ ಕುಮಾರ್ ಜೈನ್ ಸಂಘಟಿಸಿದ್ದರು.
ಸಂತ ಜೊಸೆಫರ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಅಲ್ವಿನಾ ಸರ್ವರನ್ನು ಸ್ವಾಗತಿಸಿದರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲಿನೆಟ್ ಧನ್ಯವಾದವಿತ್ತರು. ವಿದ್ಯಾರ್ಥಿನಿ ಕೃತಿ ನಿರೂಪಣೆಗೈದರು.