
ಉಳ್ಳಾಲ: ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾಗಿ ಇಫ್ತಿಕಾರ್ ಉಳ್ಳಾಲ್ ಅವರು ಆಯ್ಕೆಯಾಗಿದ್ದಾರೆ.
ಅವರು ಕಳೆದ ಏಳು ವರ್ಷಗಳ ಕಾಲ ಉಳ್ಳಾಲ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದು, ತಮ್ಮ ಶ್ರದ್ದಾ ಮತ್ತು ಪರಿಶ್ರಮದಿಂದ ಸಂಘಟನೆಯನ್ನು ಬಲಪಡಿಸಿದ್ದಾರೆ. ಈಗ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಅವರ ನಿರಂತರ ಪರಿಶ್ರಮ ಮತ್ತು ಸಂಘಟನಾ ನಿಷ್ಠೆಗೆ ಪ್ರತಿಫಲವಾಗಿದೆ. ಈ ಮಹತ್ವದ ಘಟ್ಟದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಉಳ್ಳಾಲ ತಾಲೂಕು ಘಟಕದಿಂದ ಅವರಿಗೆ ಹೃತ್ಪೂರ್ವಕ ಅಭಿನಂದನೆಯನ್ನು ಸಲ್ಲಿಸಿದೆ.