

ವೈಜ್ಞಾನಿಕ ಸಂಶೋಧನೆಗಾಗಿ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು, ದೇಶದಲ್ಲಿ ಮಕ್ಕಳಿಗೆ ನೀಡುವ ಉನ್ನತ ಪ್ರಶಸ್ತಿಯಾದ ಪ್ರಧಾನ ಮಂತ್ರಿ ಬಾಲ ಪುರಷ್ಕಾರವನ್ನು ರಾಷ್ಟ್ರಪತಿಗಳಿಂದ ಸ್ವೀಕರಿಸಿ, ದೇಶದ ಪ್ರಧಾನಿ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರಳಾಗಿರುವ ಸಿಂಧೂರ ನಮ್ಮ ಊರಿನ ಕೀರ್ತಿಯನ್ನು ಹೆಚ್ಚಿಸುವ ಸಾಧನೆಗೈದಿದ್ದಾರೆ. ಉಳ್ಳಾಲ ಬಿ.ಜೆ.ಪಿ. ಯ ಹಿರಿಯ ನಾಯಕರಾದ ಬಾಬು ಬಂಗೇರ ರವರ ಮೊಮ್ಮಗಳು ಆಗಿರುವ ಸಿಂಧೂರಳ ಸಾಧನೆಗೆ ಪಕ್ಷವು ಹರ್ಷ ವ್ಯಕ್ತಪಡಿಸುತ್ತದೆ. ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿ ಆದ ಬಳಿಕ ನೈಜ ಪ್ರತಿಭೆಗಳನ್ನು, ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಪ್ರಾಮಾಣಿಕವಾಗಿ ನಡೆಯುತ್ತಿದೆ ಎಂದು ಬಿ.ಜೆ.ಪಿ. ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಕುವತ್ತಬೈಲ್ ರವರು ಅಭಿನಂದನೆ ಮಾಡಿ ಮಾತನಾಡಿದರು.
ಈ ಸಂಧರ್ಭದಲ್ಲಿ ಬಿ.ಜೆ.ಪಿ. ಜಿಲ್ಲಾ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಡಲದ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು, ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು, ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯೆ ಶ್ರೀಮತಿ ಧನಲಕ್ಷ್ಮೀ ಗಟ್ಟಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರೀಶ್ ಅಂಬ್ಲಮೊಗರು, ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯದರ್ಶಿ ಸಂಪತ್ ಕುಕ್ಯಾನ್, ಮಂಡಲ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶೇಖರ್ ಕನೀರ್ ತೋಟ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದೀಕ್ಷಿತ್ ಉಳ್ಳಾಲಬೈಲ್, ಪದಾಧಿಕಾರಿಗಳಾದ ಸೂರಜ್ ಸಾಗರ್, ಶಿವಾನಂದ, ಮನ್ವಿತ್ ಕಾಪಿಕಾಡ್, ನಗರಸಭಾ ಸದಸ್ಯರಾದ ರೇಷ್ಮಾ ಜಗದೀಶ್,ನಮಿತಾ ಗಟ್ಟಿ, ಸೋಮೇಶ್ವರ ಪುರಸಭೆ ಸದಸ್ಯೆ ಸಪ್ನಾ ಶೆಟ್ಟಿ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.
