ಕೊಣಾಜೆ: ಪಿ.ಎ ಪ್ರಥಮ ದರ್ಜೆ ಕಾಲೇಜು ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಒಡಂಬಡಿಕೆಯ ಅನ್ವಯ ಮಾರ್ಚ್ 15 ರಂದು ಬೆಳಗ್ಗೆ 10.30ಕ್ಕೆ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ವಿಶ್ವ ಗ್ರಾಹಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅಬ್ದುಲ್ಲಾ ಇಬ್ರಾಹಿಂ ,ಮ್ಯಾನೇಜಿಂಗ್ ಟ್ರಸ್ಟೀ (ಪಿ.ಎ.ಇ.ಟಿ) ಇವರ ಶುಭಹಾರೈಕೆಯೊಂದಿಗೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ,ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿ ,ದಕ್ಷಿಣ ಕನ್ನಡ ಡಾ.ಜಿ.ಸಂತೋಷ್ ಕುಮಾರ್ ಭಾಗವಹಿಸಲಿದ್ದು ,ಪಿ.ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ, ಡಾ.ಸರ್ಫ್ರಾಜ್ ಜೆ.ಹಾಶಿಂ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವಾನ್ವಿತ ಅತಿಥಿಗಳಾಗಿ ,ಅಡ್ವಕೇಟ್ ಕೆ .ಪೃಥ್ವಿರಾಜ್ ರೈ ,ಮಾಜಿ ಅಧ್ಯಕ್ಷರು ,ವಕೀಲರ ಸಂಘ ಮಂಗಳೂರು , .ಕಾರ್ಯಕ್ರಮದ ಅತಿಥಿಗಳಾಗಿ ಪ್ರೊಫೆಸರ್ ಗಣಪತಿ ಗೌಡ .ಎಸ್ ಪ್ರಾಂಶುಪಾಲರು ,ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಡಾ.ಜಯವಂತ ನಾಯಕ್ ಪ್ರಾಧ್ಯಾಪಕರು ಅರ್ಥಶಾಸ್ತ್ರವಿಭಾಗ , ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು,ಡಾ.ಅಬೂಬಕ್ಕರ್ ಸಿದ್ಧಿಕ್ ,ಒಡಂಬಡಿಕೆಯ ಸಂಚಾಲಕರು ,ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು,ಶ್ರೀ ಶರಫುದ್ದೀನ್ ಪಿ.ಕೆ (ಎ .ಜಿ .ಎಮ್ ಕ್ಯಾಂಪಸ್ ಪಿ.ಎ.ಇ.ಟಿ ), ಪಿ.ಎ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಹಾರಗಳ ಮುಖ್ಯಸ್ಥರಾದ ಡಾ.ಸಯ್ಯದ್ ಅಮೀನ್ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ.