ಉಳ್ಳಾಲ : ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಡಿ. 4 ರಂದು ಜ್ಯೋತಿ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಸಂಘಪರಿವಾರ ಮತ್ತು ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನಾ ಜಾಥಾ ನಡೆಯಲಿದ್ದು, ಮಂಗಳೂರು ವಿಧಾನಸಭಾ ಕ್ಷೇತ್ರದಿಂದಲೂ 2500 ಮಂದಿಯನ್ನು ನಿರೀಕ್ಷಿಸಲಾಗಿದೆ. ದೈವಸ್ಥಾನ, ದೇವಸ್ಥಾನ ಹಾಗೂ ಮಂದಿರಗಳಿಂದ ಸರ್ವ ಹಿಂದೂ ಬಾಂಧವರು ಭಾಗವಹಿಸುವಂತೆ ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಕರೆ ನೀಡಿದ್ದಾರೆ.
ತೊಕ್ಕೊಟ್ಟು ಸೇವಾಸೌಧದಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ವ್ಯಾಪಕ ಹಲ್ಲೆ ದಾಳಿಗಳಾಗುತ್ತಿವೆ. ಬೇರೆಡೆ ಅಲ್ಪಸಂಖ್ಯಾತರ ಮೇಲೆ ದಾಳಿಗಾಗಳಾಗುವಾಗ ಮಾತನಾಡಬೇಕಾದ ಸಂಸ್ಥೆಗಳು ಮೌನವಾಗಿದೆ. ಇದನ್ನು ಖಂಡಿಸಿ ಇಸ್ಕಾನ್ ಸಂಸ್ಥೆಯ ಸನ್ಯಾಸಿ ಚಿನ್ಮಯೀ ಕೃಷ್ಣದಾಸ್ ಪ್ರಭು ಕೇಸರಿ ಪತಾಕೆ ಹಿಡಿದು ಪ್ರತಿಭಟಿಸಿದಾಗ, ಅವರ ಮೇಲೆಯೂ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಹಿಂದೂ ನಾಯಕರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ.




ಬಾಂಗ್ಲಾದಲ್ಲಿ ನಡೆಯುತ್ತಿರುವ ವ್ಯಾಪಕ ಅನಾಚಾರದ ವಿರುದ್ದ, ಅಲ್ಪಸಂಖ್ಯಾತ ಹಿಂದುಗಳ ಮತ್ತು ಹಿಂದೂ ಶ್ರದ್ದಾ ಕೇಂದ್ರಗಳ ರಕ್ಷಣೆಗೆ ಬೃಹತ್ ಜನಾಂದೋಲನ ಕಾರ್ಯಕ್ರಮ ಹಿಂದು ಹಿತರಕ್ಷಣಾ ಸಮಿತಿ ಮಂಗಳೂರು ಇದರ ವತಿಯಿಂದ ಬೃಹತ್ ಪ್ರತಿಭಟನಾ ಜಾಥಾ ಮತ್ತು ಸಭೆಯು ಡಿ. 4 ರಂದು ಜ್ಯೋತಿ ಬಳಿಯ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ಬಳಿಯಿಂದ ಬೆ. 10 ಗಂಟೆಗೆ ಬೃಹತ್ ಮೆರವಣಿಗೆ ಮೂಲಕ ಹಾದುಹೋಗಿ ಮಿನಿ ವಿಧಾನಸೌಧದ ಬಳಿ ಪ್ರತಿಭಟನಾ ಸಭೆ ನಡೆಯಲಿದೆ.


ಸುದ್ಧಿಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಜಿಲ್ಲಾ ವಕ್ತಾರರಾದ ಮೋಹನ್ ರಾಜ್ ಕೆ.ಆರ್, ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು, ಕಾರ್ಯದರ್ಶಿ ಜೀವನ್ ಕುಮಾರ್ ತೊಕ್ಕೊಟ್ಟು, ಯುವಮೋರ್ಚಾ ಮಂಡಲ ಅಧ್ಯಕ್ಷ ಮುರಳಿ ಕೊಣಾಜೆ ಉಪಸ್ಥಿತರಿದ್ದರು.