



ತಂತ್ರಜ್ಞಾನದ ಬಳಕೆಯಿಂದ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಹನ ಸುಲಭವಾಗಿದ್ದರೂ,ಯಾವುದೇ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದೇ ನಾನಾ ರೀತಿಯ ಒತ್ತಡಗಳಿಗೆ ಒಳಗಾಗಿ ದುಶ್ಚಟಗಳಿಗೆ ದಾಸರಾಗುವುದು ಖೇದಕರ. ಈ ನಿಟ್ಟಿನಲ್ಲಿ ಮಕ್ಕಳು ಯಾವುದಾದರೊಂದು ಕ್ರೀಡೆಯಲ್ಲಿ ಪ್ರತೀ ದಿನ ತನ್ನನ್ನು ತೊಡಗಿಸಿ ಕೊಳ್ಳುವುದರಿಂದ ಒತ್ತಡಗಳಿಂದ ದೂರವಿರಲು ಸಾಧ್ಯ ಎಂದು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ ಅಭಿಪ್ರಾಯ ಪಟ್ಟರು
ಇವರು ಮುಡಿಪು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ ಮತ್ತು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ
ಭಾರತೀ ಕ್ರೀಡೋತ್ಸವ 2024ನ್ನು ಉದ್ಘಾಟಿಸಿ ಮಾತನಾಡಿದರು
ಕ್ರೀಡಾಜ್ಯೋತಿಯನ್ನು ಹಸ್ತಾಂತರ ಮಾಡಿ ಮಾತನಾಡಿದ ಮಂಚಿ, ಕುಕ್ಕಾಜೆ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಿನೋದ ಕುಮಾರಿ ಬಿ ಇವರು ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಆಗುತ್ತದೆ. ಉತ್ತಮ ಕ್ರೀಡಾ0ಗಣ ಇರುವ ಈ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹೆಚ್ಚಿನ ಕ್ರೀಡೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಉತ್ತಮ ಕ್ರೀಡಾಪಟುವಾಗಿ ಮೂಡಿಬರಬೇಕು ಎಂದರು.
ಸಭಾ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಸುಬ್ರಹ್ಮಣ್ಯ ಭಟ್ ವಹಿಸಿ, ಪಂದ್ಯಾಟದ ವಿಜೇತರಿಗೆ ಬಹುಮಾನ ವಿತರಿಸಿದರು
ವೇದಿಕೆಯಲ್ಲಿ ಶ್ರೀ ಭಾರತೀ ಅನುದಾನಿತ ಶಾಲೆ ಮುಡಿಪು ಇದರ ಮುಖ್ಯ ಶಿಕ್ಷಕರು ರಾಮಕೃಷ್ಣ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸಿರಾಜ್ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರು ಶ್ರೀಮತಿ ಮಂಜುಳಾ, ಶ್ರೀ ಭಾರತೀ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಮುಡಿಪು ಇದರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಕುಂತಲಾ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಭಾರತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಮುಡಿಪು ಮುಖ್ಯೋಪಾಧ್ಯಾಯರಾದ ಶ್ರೀಮತಿ ಶ್ವೇತಾ ಆರ್ ಬಲ್ಲಾಳ್ ಸರ್ವರನ್ನು ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ವಿದ್ಯಾ ಕೆ ಎಸ್ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಶ್ರೀಮತಿ ರೇಷ್ಮಾ ಕೆ ವಂದಿಸಿದರು.