ಉಳ್ಳಾಲ: ಫೆಂಗಲ್ ಚಂಡಮಾರುತದ ಅಬ್ಬರ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಾದ್ಯಂತ ಡಿ. 3ರಂದು ನಾಳೆ
ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.


ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜ ಗಳವರೆಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.




ಫೆಂಗಲ್ ಚಂಡಮಾರುತ ದ ಹಿನ್ನಲೆ ಉಳ್ಳಾಲದಲ್ಲೂ ಗುಡುಗು ಸಹಿತ ಭಾರೀ ಮಳೆಯಾಗಿದ್ದು ಮಾಧ್ಯಾಹ್ನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ರಾಷ್ಟ್ರೀಯ ಹೆದ್ದಾರಿಯ ತುಂಬಾ ನೀರು ತುಂಬಿ ವಾಹನ ಸವಾರರು ತತ್ತರಿಸುವಂತಾಗಿದೆ.