



ಉಳ್ಳಾಲ: ದೆಹಲಿ ಚುನಾವಣೆಯಲ್ಲಿ ಬಿ.ಜೆ.ಪಿ. ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮಂಗಳೂರು ಮಂಡಲ ಬಿ.ಜೆ.ಪಿ. ವತಿಯಿಂದ
ತೊಕ್ಕೊಟ್ಟು ಜಂಕ್ಷನ್ ಬಳಿ ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಂಡಲ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ, ಹೇಮಂತ್ ಶೆಟ್ಟಿ, ಕಾರ್ಯದರ್ಶಿ ಗಳಾದ ಜೀವನ್ ಕುಮಾರ್ ತೊಕ್ಕೊಟ್ಟು, ಮನೋಜ್ ಕಟ್ಟೆಮನೆ, ಕಾರ್ಯಾಲಯ ಕಾರ್ಯದರ್ಶಿ ದಯಾನಂದ ಕೋಣಾಜೆ, ಮಹಿಳಾ ಮೋರ್ಚಾದ ಅಧ್ಯಕ್ಷರಾದ ಮಾಧವಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಸುಮಲತಾ, ರೈತ ಮೋರ್ಚಾದ ಅಧ್ಯಕ್ಷರಾದ ಪದ್ಮನಾಭ ಗಟ್ಟಿ, ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದೀಕ್ಷಿತ್ ಕಾಪಿಕಾಡ್, ಉಳ್ಳಾಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ, ಮುನ್ನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸತೀಶ್ ಪೂಜಾರಿ, ಕೋಟೆಕಾರ್ ಮಹಾಶಕ್ತಿ ಕೇಂದ್ರದ ಪ್ರಮುಖರಾದ ಪ್ರವೀಣ್ ಶೆಟ್ಟಿ, ಬೂತ್ ಅಧ್ಯಕ್ಷರಾದ ದೀಕ್ಷಿತ್ ನಿಸರ್ಗ ಕುಂಪಲ ಮತ್ತಿತರರು ಉಪಸ್ಥಿತರಿದ್ದರು.